Tag: davangere

  • ನಾಳೆ ಸುದೀಪ್ ಎಲ್ಲೆಲ್ಲಿ ಸಿಗ್ತಾರೆ? ಪ್ರಚಾರದ ರೂಟ್ ಮ್ಯಾಪ್ ರಿಲೀಸ್

    ನಾಳೆ ಸುದೀಪ್ ಎಲ್ಲೆಲ್ಲಿ ಸಿಗ್ತಾರೆ? ಪ್ರಚಾರದ ರೂಟ್ ಮ್ಯಾಪ್ ರಿಲೀಸ್

    ಳೆದ ವಾರವಷ್ಟೇ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರಕ್ಕಾಗಿ ಶಿಗ್ಗಾಂವಿಗೆ ತೆರಳಿದ್ದ ನಟ ಕಿಚ್ಚ ಸುದೀಪ್ (Sudeep) ನಾಳೆ ಹಲವು ಊರುಗಳಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಬೊಮ್ಮಾಯಿ ಮಾಮ ಸೂಚಿಸಿದ ಊರುಗಳಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದಿದ್ದ ಕಿಚ್ಚ ಕೊಟ್ಟ ಮಾತಿನಂತೆ ನಾಳೆಯಿಂದ ಭರ್ಜರಿ ಪ್ರಚಾರ (campaign) ಮಾಡಲಿದ್ದಾರೆ. ಕಿಚ್ಚನಿಗಾಗಿಯೇ ಹೆಲಿಕಾಪ್ಟರ್ ಸಿದ್ಧಗೊಂಡಿದೆ.

    ನಾಳೆ ಸುದೀಪ್ ಯಾವೆಲ್ಲ ಊರಿಗೆ ಹೋಗಬೇಕು ಮತ್ತು ಯಾರ ಪರವಾಗಿ ಪ್ರಚಾರ ಮಾಡಬೇಕು ಎನ್ನುವುದರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಬೆಂಗಳೂರಿನಿಂದ ಹೊರಡುವ ಕಿಚ್ಚ, ನಾಳೆಯೇ ಐದು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು (Molakalmuru) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ.

    ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು (Jagaluru) ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ. ಇದನ್ನೂ ಓದಿ:ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಜಗಳೂರು ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

  • ಆನೆ ದಾಳಿಗೆ ಯುವತಿ ಸಾವು- ತಾಯಿಗೆ ಗಂಭೀರ ಗಾಯ

    ಆನೆ ದಾಳಿಗೆ ಯುವತಿ ಸಾವು- ತಾಯಿಗೆ ಗಂಭೀರ ಗಾಯ

    ದಾವಣಗೆರೆ: ಆನೆ ದಾಳಿಗೆ (Elephant Attack) ಯುವತಿಯೋರ್ವಳು ಮೃತಪಟ್ಟ ದುರ್ಘಟನೆ ಚನ್ನಗಿರಿಯ (Channagiri) ಸೋಮ್ಲಾಪುರ (Somlapura) ಗ್ರಾಮದಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಯುವತಿಯ ತಾಯಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ.

    ಗ್ರಾಮದ ಕವನ (17) ಮೃತ ಯುವತಿ ಎಂದು ತಿಳಿದುಬಂದಿದೆ. ಮುಂಜಾನೆ ತಾಯಿ ಮಂಜುಳಾ (42) ಅವರ ಜೊತೆಯಲ್ಲಿ ಯುವತಿ ಜಮೀನಿಗೆ ತೆರಳಿದ್ದಳು. ಜಮೀನಿನಲ್ಲಿ ಅವರೆಕಾಯಿ ಬಿಡಿಸುವ ವೇಳೆ ತಾಯಿ ಹಾಗೂ ಮಗಳ ಮೇಲೆ ಆನೆ ದಾಳಿ ನಡೆಸಿದೆ. ಇದನ್ನೂ ಓದಿ: ಮನೆಮುಂದೆ ನಿಲ್ಲಿಸಿದ್ದ ಕಾರನ್ನು ಹೆದ್ದಾರಿಗೆ ತಳ್ಳಿಕೊಂಡು ಬಂದ ಕಾಡಾನೆ

    ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕವನಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆದಿದೆ. ಆದರೆ ಯುವತಿ ದಾರಿ ಮಧ್ಯದಲ್ಲೇ ಸಾವನ್ನಪ್ಪಿದ್ದಾಳೆ. ಗಾಯಗೊಂಡಿರುವ ಮಂಜುಳಾ ಅವರಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ಇದನ್ನೂ ಓದಿ: ತೈವಾನ್ ಸುತ್ತ ಮತ್ತೆ ಮಿಲಿಟರಿ ತಾಲೀಮು ಪ್ರಾರಂಭಿಸಿದ ಚೀನಾ

  • ಹಾಸ್ಟೆಲ್‌ನಲ್ಲೇ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

    ಹಾಸ್ಟೆಲ್‌ನಲ್ಲೇ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

    ದಾವಣಗೆರೆ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು (PUC Student) ಹಾಸ್ಟೆಲಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.

    ವರ್ಷಿತಾ (18) ಮೃತ ವಿದ್ಯಾರ್ಥಿನಿ. ವರ್ಷಿತಾ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಾನವ ಹಕ್ಕುಗಳನ್ನು ಬಳಸಿ ನಮ್ಮಲ್ಲಿ ಇರಲು ಸಾಧ್ಯವಿಲ್ಲ: ಅಕ್ರಮ ವಲಸಿಗರ ನಿಯಂತ್ರಣಕ್ಕೆ ಮುಂದಾದ ಬ್ರಿಟನ್

    ಹರಿಹರ ಪಟ್ಟಣದ ಅಂಬೇಡ್ಕರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವರ್ಷಿತಾ ಮೂಲತಃ ಮಾಯಕೊಂಡ ಹೋಬಳಿಯ ಬಸಾಪುರ ಗ್ರಾಮದ ಯುವತಿ. ಪೋಷಕರು ಬಡತನದಲ್ಲಿ ಇದ್ದು ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದರು. ಹಾಗಾಗಿ ವರ್ಷಿತಾ ಹಾಸ್ಟೆಲಿನಲ್ಲಿ ಇದ್ದುಕೊಂಡೇ ಓದುತ್ತಿದ್ದಳು. ಸದ್ಯ ಹರಿಹರದ ಪಟ್ಟಣದ ಅಂಬೇಡ್ಕರ್ ಕಾಲೇಜಿನಲ್ಲಿ ಪಿಯುಸಿ ಓದುತ್ತಾ, ಸ್ನೇಹಿತೆಯರೊಂದಿಗೆ ಸರ್ಕಾರಿ ಮೆಟ್ರಿಕ್ ನಂತರದ ಹಾಸ್ಟೆಲಿನಲ್ಲಿ (Government Hostel) ಉಳಿದುಕೊಂಡಿದ್ದಳು. ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಮಂಗಳವಾರ ಬೆಳಗ್ಗೆ ಸ್ನೇಹಿತೆಯರ ಜೊತೆ ಪರೀಕ್ಷೆಗೆಂದು ಓದಿಕೊಳ್ಳುತ್ತಿದ್ದಳು. ನಂತರ ಅಂಗಡಿಯಿಂದ ಅಗತ್ಯ ಸಾಮಗ್ರಿಗಳನ್ನ ಖರೀದಿಸಿ ಮತ್ತೆ ಹಾಸ್ಟೆಲ್‌ಗೆ ವಾಪಸ್ಸಾಗಿದ್ದಳು. ನಂತರ ತನಗೆ ಪಾನಿಪುರಿ ತರುವಂತೆ ಸ್ನೇಹಿತೆಯರಿಗೆ ಹೇಳಿ ಹಾಸ್ಟೆಲ್‌ನ ರೂಮ್‌ಗೆ ಹೋಗಿದ್ದಾಳೆ. ಪಾನಿಪುರಿ ತಂದು ಸ್ನೇಹಿತೆಯರು ಆಕೆಯನ್ನ ಕೂಗಿದ್ದಾರೆ. ರೂಮ್ ಬಾಗಿಲು ಬಡಿದಿದ್ದಾರೆ. ಎಷ್ಟು ಕೂಗಿದರೂ ಬಾಗಿಲು ತೆರೆಯದೇ ಇದ್ದಾಗ ಕಿಟಿಕಿಯಲ್ಲಿ ನೋಡಿದ್ದಾರೆ. ಈ ವೇಳೆ ವರ್ಷಿತಾ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದನ್ನು ನೋಡಿ ಶಾಕ್ ಆಗಿದ್ದಾರೆ. ಬಳಿಕ ವಾರ್ಡನ್‌ಗೆ ವಿಷಯ ತಿಳಿಸಿದ್ದಾರೆ.

    ವರ್ಷಿತಾ ಪ್ರತಿಭಾನ್ವಿತ ವಿದ್ಯಾರ್ಥಿನಿ, ಆದ್ರೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅನ್ನೋದು ಅಸ್ಪಷ್ಟವಾಗಿದೆ. ಸದ್ಯಕ್ಕೆ ಅದೇ ಕಾಲೇಜಿನಲ್ಲಿ ಯುವಕನೊಬ್ಬ ಈಕೆಯನ್ನ ಪ್ರೀತಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಹರಿಹರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಈ ನಡುವೆ ಪೋಷಕರು ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ನನ್ನ ಮಗಳಿಗೆ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

  • ಪಿಸ್ತೂಲಿನಿಂದ ಆಕಸ್ಮಿಕ ಹಾರಿದ ಗುಂಡು: ಆಸ್ಪತ್ರೆಯಲ್ಲಿ ನಟ ರವಿರಾಜ್

    ಪಿಸ್ತೂಲಿನಿಂದ ಆಕಸ್ಮಿಕ ಹಾರಿದ ಗುಂಡು: ಆಸ್ಪತ್ರೆಯಲ್ಲಿ ನಟ ರವಿರಾಜ್

    ನಸಿನ ರಾಣಿ ಮಾಲಾಶ್ರೀ ನಾಯಕಿಯಾಗಿ ನಟಿಸಿರುವ ‘ರಾಜಾ ಕೆಂಪು ರೋಜ’ (Raja Kempu Roja) ಸಿನಿಮಾದ ನಟಿಸಿರುವ ರವಿರಾಜ್ ಗೆ ಗುಂಡು ತಗುಲಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಮನೆಯಲ್ಲಿದ್ದ ಪಿಸ್ತೂಲ್ (Pistol) ಅನ್ನು ನವೀಕರಣಕ್ಕಾಗಿ ಸ್ವಚ್ಚಗೊಳಿಸುತ್ತಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಿಡಿದ ಗುಂಡಿನಿಂದ (Gundu) ರವಿರಾಜ್ (Raviraj) ಅವರಿಗೆ ತಲೆಗೆ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ದಾವಣಗೆರೆ (Davangere) ಮೂಲದ ರವಿರಾಜ್ ಚಿನ್ನದ ವ್ಯಾಪಾರಿ ಕೂಡ ಆಗಿದ್ದಾರೆ. ಹಾಗಾಗಿ ಪರವಾಣಿಗೆ ಸಹಿತ ಪಿಸ್ತೂಲ್ ಹೊಂದಿದ್ದಾರೆ. ಎಂಸಿಸಿ ಬಿ ಬ್ಲಾಕ್ ನಿವಾಸಿ ಆಗಿರುವ ಅವರು ಬುಧವಾರ ಸಂಜೆ ಪಿಸ್ತೂಲಿನ ಲೈಸೆನ್ಸ್ ನವೀಕರಣಕ್ಕೆ ಹೋಗಬೇಕಿತ್ತು. ಹಾಗಾಗಿ ಅದನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಟ್ರಿಗರ್ ಒತ್ತಿದ ಪರಿಣಾಮ ಗುಂಡು ಸಿಡಿದಿದೆ. ಹಣೆಯ ಭಾಗಕ್ಕೆ ಗುಂಡು ಹೊಕ್ಕಿದೆ. ಕೂಡಲೇ ಅವರನ್ನು ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ: ‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

    ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಎಲ್. ಸುಬ್ಬರಾವ್ ನೇತೃತ್ವದ ತಂಡವು ತುರ್ತು ಚಿಕಿತ್ಸೆ ನಡೆಸಿ, ಯಶಸ್ಸಿಯಾಗಿ ಗುಂಡು ಹೊರತಗೆಯಲಾಗಿದೆ. ತಲೆಬುರುಡೆಯ ಮೂಳೆಯಲ್ಲಿ ಗುಂಡು ಹೊಕ್ಕಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ರವಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿನಿಮಾ ರಂಗದಲ್ಲಿ ರವಿರಾಜ್ ಎಂದೇ ಗುರುತಿಸಿಕೊಂಡಿದ್ದ ಅವರು ದಾವಣಗೆರೆ ಜನತೆಗೆ ಮಂಜುನಾಥ ರೇವಣ್ಕರ್ (Manjunath Revankar) ಎಂದು ಪರಿಚಿತರು.

    ಸಿನಿಮಾ ರಂಗದಲ್ಲಿ ನಟರಾಗಿ, ನಾಯಕ ನಟರಾಗಿ ನಂತರ ಒಂದು ಸಿನಿಮಾವನ್ನೂ ನಿರ್ಮಾಣ ಮಾಡಿದ್ದಾರೆ. ಆನಂತರ ಸಿನಿಮಾ ರಂಗದಿಂದ ದೂರವಾಗಿ ತಮ್ಮ ವೃತ್ತಿಯಲ್ಲೇ ಮುಂದುವರೆದಿದ್ದರು. ಸಿನಿಮಾ ರಂಗದಿಂದ ದೂರವಾಗಿದ್ದರೂ, ಸಿನಿಮಾಗಳಿಂದ ಅವರು ದೂರವಾಗಿರಲಿಲ್ಲ. ಆಗಾಗ್ಗೆ ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತಿದ್ದರು.

  • ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

    ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ

    ದಾವಣಗೆರೆ: ಕೇಂದ್ರದ ಬಜೆಟ್ (Union Budget 2023) ರಾಜ್ಯದಲ್ಲಿ ಮುಂದೆ ಬರುವ ಸರ್ಕಾರದ ತೀರ್ಮಾನ ಮಾಡುತ್ತದೆ. ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ. ಈಗ ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಪ್ರಾರಂಭವಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್. ರಾಜ್ಯದಲ್ಲಿ ಚುನಾವಣೆ ಕೆಲವೇ ತಿಂಗಳು ಇದೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಜಾರಿ ಆಗಬೇಕಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್‌ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ

    ಭದ್ರಾ (Upper Bhadra Project), ಮಹಾದಾಯಿ (Mahadayi), ಕೃಷ್ಣ ಏನೇ ಘೋಷಣೆ ಮಾಡಿದ್ರೂ ಮೊದಲೇ ಮಾಡಬೇಕಿತ್ತು. ಇಂದಿನ ಕಾರ್ಯಕ್ರಮ ಜಾರಿಗೆ ತರಲು ಮುಂದಿನ ಸರ್ಕಾರ ಬರಬೇಕು. ಕೇಂದ್ರದ ಘೋಷಣೆ, ಘೋಷಣೆ ಆಗಿಯೇ ಉಳಿಯತ್ತೆ. ಕೇಂದ್ರದ ಹಣ ಬಿಡುಗಡೆ ಆಗುವುದರ ಒಳಗೆ ಚುನಾವಣಾ ನೀತಿ ಸಂಹಿತೆ ಬರತ್ತೆ. ಜನರನ್ನು ತಾತ್ಕಾಲಿಕವಾಗಿ ಮೆಚ್ಚಿಸಲು ಘೋಷಣೆ ಇಡಬಹುದು ಎಂದು ತಿಳಿಸಿದರು.

    ಮನೆ ಬಿದ್ದಾಗ 5 ಲಕ್ಷ, ಕೋವಿಡ್ (Corona Virus) ನಲ್ಲಿ ಸಾವನ್ನಪ್ಪಿದಾಗ 1 ಲಕ್ಷ, ಕೋವಿಡ್ ವಾರಿಯರ್ಸ್ ಗೆ 30 ಲಕ್ಷ ಕೊಡ್ತಿವಿ ಅಂದಿದ್ರು, ಎಲ್ಲಿ ಕೊಟ್ಟರು. ಕೇಂದ್ರ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಇರತ್ತೆ. ರೈಲ್ವೆ ಯೋಜನೆ 20-30 ವರ್ಷಗಳ ಹಿಂದೆ ಘೋಷಣೆ ಆಗಿರುವುದು ಇನ್ನೂ ಆಮೆ ಗತಿಯಲ್ಲಿ ನಡೆಯುತ್ತಿದೆ. ಕೇಂದ್ರ ಕಾರ್ಯಕ್ರಮ ಘೋಷಣೆ ಆಗಿದೆ ಉಳಿದಿದೆ. ತಕ್ಷಣ ಬೆಳಗ್ಗೆ ಜನರಿಗೆ ಅನುಕೂಲ ಆಗಲ್ಲ ಎಂದು ಹೇಳಿದರು.

    ಬಿಜೆಪಿ (BJP) ತಿರಸ್ಕಾರ ಮಾಡಿದ್ರೆ ಕರ್ನಾಟಕಕ್ಕೆ ಏನ್ ಕೊಡ್ತಾರೆ ಅನ್ನೋದು ಗೊತ್ತಿಲ್ಲ. ಚುನಾವಣೆ ಆದ್ಮೇಲೆ ಜನ ಮರೆತು ಹೋಗುತ್ತಾರೆ. ಕೇಂದ್ರದ ಬಜೆಟ್ ಮೇಲೆ ನನಗೆ ನಂಬಿಕೆ ಇಲ್ಲ, ಹೆಚ್ಚಿನ ಮಹತ್ವ ಕೊಡಲ್ಲ. ರಾಷ್ಟ್ರೀಯ ಯೋಜನೆಗೆ ನಾವು ಅರ್ಜಿ ಕೊಟ್ಟಿದ್ದೆವು. ಕೇಂದ್ರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ನುಡಿದರು.

    ಕರ್ನಾಟಕ ಬರಪೀಡಿತ ಎಂದು ಘೋಷಣೆಗೆ ಪ್ರತಿಕ್ರಿಯೆ ನೀಡಿದ ಹೆಚ್‍ಡಿಕೆ, ಈಗಲಾದರೂ ಕರ್ನಾಟಕ ಬರಪೀಡಿತ ಅನ್ನೋದು ಗೊತ್ತಾಗಿರೋದು ಖುಷಿ ವಿಚಾರ. ಕರ್ನಾಟಕ ಬರಪೀಡಿತ ಅಂತ ಘೋಷಣೆ ಮಾಡಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಾಸಕರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಾಗಿ ಬಂದು 1 ಲಕ್ಷ ರೂ. ಲಪಟಾಯಿಸಿದ ಕಳ್ಳರು

    ಶಾಸಕರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಾಗಿ ಬಂದು 1 ಲಕ್ಷ ರೂ. ಲಪಟಾಯಿಸಿದ ಕಳ್ಳರು

    ದಾವಣಗೆರೆ: ಜಗಳೂರು ಶಾಸಕ ಎಸ್.ವಿ ರಾಮಚಂದ್ರಪ್ಪ (S.V Ramachandra) ಅವರ ಹುಟ್ಟುಹಬ್ಬದ (Birthday) ಕಾರ್ಯಕ್ರಮದಲ್ಲಿ ಅವರ ಆಪ್ತ ಸಹಾಯಕನ ಹಾಗೂ ಕಾರ್ಯಕರ್ತನ ಜೇಬಿನಲ್ಲಿದ್ದ ಒಂದು ಲಕ್ಷ (1 Laks) ರೂಪಾಯಿಗಳನ್ನು ಖತರ್ನಾಕ್ ಕಳ್ಳರು ಲಪಟಾಯಿಸಿದ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.

    ಎಸ್.ವಿ ರಾಮಚಂದ್ರಪ್ಪ ಕಳೆದ ಜ.16 ರಂದು ಹುಟ್ಟು ಹಬ್ಬದ ಹಿನ್ನೆಲೆ ಜಗಳೂರಿನಲ್ಲಿ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ವೇದಿಕೆ ಮೇಲೆ ಶಾಸಕರಿಗೆ ಶುಭಾಶಯಗಳನ್ನು ತಿಳಿಸುವ ನೆಪದಲ್ಲಿ ಬಂದ ಕಳ್ಳರು ಶಾಸಕರ ಆಪ್ತ ಸಹಾಯಕ ಸಂತೋಷ್ ಮತ್ತು ಪಟ್ಟಣ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ಅವರ ಪತಿ ಓಬಳೇಶ್ ಜೇಬಿಗೆ ಕತ್ತರಿ ಹಾಕಿ ಇಬ್ಬರಿಂದ 1 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ. ಇದನ್ನೂ ಓದಿ: ಉದ್ಯೋಗಕ್ಕೆಂದು ತೆರಳಿದ್ದ ಯುವತಿ ನಾಪತ್ತೆ

    ಬಿಳಿ ಬಟ್ಟೆ ಹಾಕಿಕೊಂಡು ಪಕ್ಕಾ ಕಾರ್ಯಕರ್ತರಂತೆ ಬಂದಿದ್ದ ಕಳ್ಳರು ಶಾಸಕರಿಗೆ ಶುಭ ಕೋರಿ ಫೋಟೋ ತೆಗೆಸುವ ನೆಪದಲ್ಲಿ ಕಳ್ಳರು ವೇದಿಕೆ ಏರಿದ್ದಾರೆ. ಮೊದಲು ಇಬ್ಬರ ಜೇಬಿನಲ್ಲಿ ಹಣ ಇರುವುದನ್ನು ಖಾತ್ರಿ ಪಡಿಸಿಕೊಂಡ ಕಳ್ಳರು, ನಂತರ ಬೇಕೆಂದು ಕ್ರೌಡ್ ಕ್ರಿಯೇಟ್ ಮಾಡಿ ಸಂತೋಷ್ ಜೇಬಿನಿಂದ 50 ಸಾವಿರ ರೂ. ಮತ್ತು ಓಬಳೇಶ್ ಜೇಬಿನಿಂದ 50 ಸಾವಿರ ರೂ. ಎಗರಿಸಿದ್ದಾರೆ. ಜೇಬಿನಿಂದ ಹಣ ಲಪಟಾಯಿಸಿ ಒಬ್ಬನ ಕೈಯಿಂದ ಮತ್ತೊಬ್ಬನಿಗೆ ನೀಡಿದ್ದಾರೆ. ಕಳ್ಳರ ಖತರ್ನಾಕ್ ಕಳ್ಳತನ ವೇದಿಕೆಗೆ ಹಾಕಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ಬಳಿಕ ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮೂರು ರಾಜ್ಯಗಳ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 79ರ ವೃದ್ಧನನ್ನು ನಗ್ನಗೊಳಿಸಿ ಫೋಟೋ ಕ್ಲಿಕ್ಕಿಸಿಕೊಂಡ್ಲು – ಹನಿಟ್ರ್ಯಾಪ್‍ಗೆ ಯತ್ನಿಸಿದ ಖತರ್ನಾಕ್ ಆಂಟಿ ಅರೆಸ್ಟ್

    79ರ ವೃದ್ಧನನ್ನು ನಗ್ನಗೊಳಿಸಿ ಫೋಟೋ ಕ್ಲಿಕ್ಕಿಸಿಕೊಂಡ್ಲು – ಹನಿಟ್ರ್ಯಾಪ್‍ಗೆ ಯತ್ನಿಸಿದ ಖತರ್ನಾಕ್ ಆಂಟಿ ಅರೆಸ್ಟ್

    ದಾವಣಗೆರೆ: ಕಷ್ಟ ಎಂದು ಹೇಳಿಕೊಂಡು ಬಂದ ಮಹಿಳೆಯೊಬ್ಬಳಿಗೆ ಸಾಲ ನೀಡಿದ್ದ ವೃದ್ದ, ಮತ್ತೆ ಮರಳಿ ಸಾಲ ವಾಪಸ್ ಕೇಳಿದಾಗ ಆತನಿಗೆ ಮತ್ತು ಬರಿಸಿ ನಗ್ನ ಮಾಡಿ ತನ್ನ ಜೊತೆ ಮಲಗಿದ ರೀತಿ ಫೋಟೋ ತೆಗೆಸಿಕೊಂಡು ಹನಿಟ್ರ್ಯಾಪ್‍ಗೆ (Honeytrap) ಯತ್ನಿಸಿ, 15 ಲಕ್ಷಕ್ಕೆ ಬೇಡಿಕೆ ಇಟ್ಟ ಆಂಟಿಯನ್ನು ಪೊಲೀಸರ ಬಂಧಿಸಿದ್ದಾರೆ.

    ದಾವಣಗೆರೆ (Davangere) ನಗರದ ಶಿವಕುಮಾರ ಸ್ವಾಮಿ ಬಡಾವಣೆ ನಿವಾಸಿ 79 ವರ್ಷದ ಚಿದಾನಂದಪ್ಪ ಹನಿಟ್ರ್ಯಾಪ್‍ಗೆ ಒಳಗಾಗಿ ನರಳಾಡಿದ ವೃದ್ಧ ಎಂದು ತಿಳಿದು ಬಂದಿದೆ. ಶಿವಕುಮಾರ ಸ್ವಾಮೀ ಬಡಾವಣೆಗೆ ಹೊಂದಿಕೊಂಡ ಸರಸ್ವತಿ ನಗರದ ನಿವಾಸಿ 32 ವರ್ಷದ ಯಶೋಧ ಜೊತೆಗೆ ವೃದ್ಧ ಚಿದಾನಂದಪ್ಪರ ಪರಿಚಯವಾಗಿದೆ. ಹೀಗೆ ಪರಿಚಯವಾಗಿ ಇಬ್ಬರ ನಡುವೆ ಸ್ನೇಹವಾಗಿದೆ. ನಂತರ ಯಶೋಧ, ಚಿದಾನಂದಪ್ಪ ಅವರನ್ನು ಮನೆಗೆ ಆಹ್ವಾನಿಸಿ ಆಗಾಗ ಟೀ, ಕಾಫಿ ಜ್ಯೂಸ್ ಕೊಡುತ್ತಿದ್ದಳು. ಹೀಗೆ ಯಶೋಧ ಚಿದಾನಂದಪ್ಪ ಅವರ ಬಳಿ ಆಗಾಗ ನೆಪಗಳನ್ನು ಹೇಳಿ ಐದು, ಹತ್ತು ಅಂತ ಬರೋಬ್ಬರಿ 86 ಸಾವಿರ ರೂಪಾಯಿ ಸಾಲ ಪಡೆದಿದ್ದಾಳೆ. ಕೆಲಸದಿಂದ ನಿವೃತ್ತಿರಾಗಿದ್ದ ವೃದ್ಧ ನಂತರ ತಾನು ಮಹಿಳೆಗೆ ನೀಡಿದ್ದ ಹಣ ನೀಡುವಂತೆ ಮರು ಕೇಳಿದ್ದಾನೆ. ಆಗ ಈಗ ಅಂತಾ ಹೇಳಿ ಆ ಮಹಿಳೆ ಹಣ ವಾಪಸ್ ಕೊಟ್ಟಿರಲಿಲ್ಲ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಆರಾಧನೆಗೆ ಅನುಮತಿ ಕೋರಿ ಅರ್ಜಿ – ನ.14ಕ್ಕೆ ವಿಚಾರಣೆ ಮುಂದೂಡಿಕೆ

    POLICE JEEP

    ಹೀಗೆ ಒಂದು ದಿನ ವಾಕಿಂಗ್ ಮುಗಿಸಿ ಹೋಗುತ್ತಿದ್ದಾಗ ಯಶೋಧ ಚಿದಾನಂದಪ್ಪನನ್ನು ಅಕ್ಕರೆಯಿಂದ ಕರೆದಿದ್ದಾಳೆ. ಜ್ಯೂಸ್ ಕೊಟ್ಟಿದ್ದಾಳೆ. ಕುಡಿದ ಕೆಲ ಹೊತ್ತಿನಲ್ಲಿಯೇ ವೃದ್ಧ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾರೆ. ಎಚ್ಚರವಾದ ಬಳಿಕ ಚಿದಾನಂದಪ್ಪ ಮೈ ಮೇಲೆ ಬಟ್ಟೆ ಇರಲಿಲ್ಲ. ಭಯಗೊಂಡ ಚಿದಾನಂದಪ್ಪ ಬಟ್ಟೆ ಹಾಕಿಕೊಂಡು ಮನೆಗೆ ಬಂದಿದ್ದಾರೆ. ಈ ಘಟನೆ ನಡೆದು ಎರಡು ದಿನಕ್ಕೆ ಹಣಕ್ಕಾಗಿ ಮತ್ತೆ ಚಿದಾನಂದಪ್ಪ ಫೋನ್ ಮಾಡಿದ್ದಾರೆ. ಆಗ ನೀ ನನ್ನ ಜೊತೆ ಮಲಗಿರುವೆ. ನನ್ನ ಬಳಿ ವೀಡಿಯೋ ಇದೆ. 15 ಲಕ್ಷ ಕೊಡು. ಇಲ್ಲ ನಿನ್ನ ಹೆಂಡತಿ ಮಕ್ಕಳಿಗೆ ತೋರಿಸುವೆ ಎಂದಿದ್ದಾಳೆ. ಹೆದರಿ ಈ ವಿಚಾರ ಪರಿಚಯದವರ ಬಳಿ ಚಿದಾನಂದಪ್ಪ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡಿದರೆ ದೊಡ್ಡವನಾಗಲ್ಲ: ಜಾರಕಿಹೊಳಿ ಕಿವಿ ಹಿಂಡಿದ ಯಡಿಯೂರಪ್ಪ

    ಚಿದಾನಂದಪ್ಪ 7 ರಿಂದ 8 ಲಕ್ಷಕ್ಕೆ ಮಾತನಾಡಿ ಡೀಲ್ ಮುಗಿಸಲು ಮುಂದಾಗಿದ್ದಾರೆ. ಆದರೆ ಯಶೋಧ ಮಾತ್ರ 15 ಲಕ್ಷ ಬೇಕೆ, ಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಇದೇ ವೇಳೆ ಚಿದಾನಂದಪ್ಪರ ವಾಟ್ಸಪ್‍ಗೆ ಒಂದು ನಗ್ನವಾದ ಫೋಟೋ ಅವಳ ಮುಖ ಕಾಣದ ಹಾಗೆ ಮಾಡಿ ಕಳುಹಿಸಿದ್ದಾಳೆ. ಪರಿಸ್ಥಿತಿ ಕೈ ಬಿಡುವ ಲಕ್ಷಣವಿತ್ತು. ಈ ವಿಚಾರ ಚಿದಾನಂದಪ್ಪ ತನ್ನ ಪುತ್ರನಿಗೆ ಹೇಳಿದ್ದಾರೆ. ಆಗ ಈ ವಿಚಾರ ಪೊಲೀಸರ ಗಮನಕ್ಕೆ ಬಂದಿದೆ. ಕೆಟಿಜೆನಗರ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ಯಶೋಧಳನ್ನ ಬಂಧಿಸಿದ್ದಾರೆ. ಅಜ್ಜನಿಗೆ ಹನಿಟ್ರ್ಯಾಪ್ ಮಾಡಿ 15 ಲಕ್ಷ ವಸೂಲಿಗೆ ಮುಂದಾದ ಯಶೋಧ ಈಗ ಪೊಲೀಸರ ಅತಿಥಿಯಾಗಿದ್ದಾಳೆ.

    Live Tv
    [brid partner=56869869 player=32851 video=960834 autoplay=true]

  • ಚಂದ್ರಶೇಖರ್ ಸಾವಿನ ಪ್ರಕರಣ- ಇಂದು ಹೊರಬೀಳುತ್ತಾ ಪೋಸ್ಟ್‌ ಮಾರ್ಟಂ ರಿಪೋರ್ಟ್?

    ಚಂದ್ರಶೇಖರ್ ಸಾವಿನ ಪ್ರಕರಣ- ಇಂದು ಹೊರಬೀಳುತ್ತಾ ಪೋಸ್ಟ್‌ ಮಾರ್ಟಂ ರಿಪೋರ್ಟ್?

    ದಾವಣಗೆರೆ: ಶಾಸಕ ರೇಣುಕಾಚಾರ್ಯ (Renukacharya) ಸಹೋದರನ ಪುತ್ರನ ಸಾವು ನಾನಾ ಅನುಮಾನಗಳನ್ನು ಹುಟ್ಟಿಹಾಕಿವೆ. ಅದರಲ್ಲಿ ಆತನ ಸಾವು ಆತ್ಮಹತ್ಯೆಯೋ, ಕೊಲೆಯೋ, ಇಲ್ಲ ಆಕ್ಸಿಡೆಂಟ್ ಎನ್ನುವ ಪ್ರಶ್ನೆಗಳೇ ಹೆಚ್ಚು, ಆದರೆ ರೇಣುಕಾಚಾರ್ಯ ಸೇರಿದಂತೆ ಅವರ ಕುಟುಂಬಸ್ಥರು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಆರೋಪ ಮಾಡಿದ್ದಾರೆ. ಏನೇ ಆಗಲಿ ವರದಿ ಬಂದ ನಂತರ ಸತ್ಯಾಸತ್ಯತೆ ತಿಳಿಯಲಿದ್ದು. ಇಂದು ವರದಿ ಬರುವ ಸಾಧ್ಯತೆ ಇದ್ದು, ಏನಾದ್ರು ಅಪಘಾತ ಬಂತು ಎಂದರೆ ಹೆಚ್ಚಿನ ತನಿಖೆಗೆ ಒತ್ತಾಯಿಸುವ ಸಾಧ್ಯತೆ ಹೆಚ್ಚಿದೆ.

    ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು (Chandrashekhar) ಸಾವಿನ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಚಂದ್ರು ಸಾವಿಗೆ ನಿಖರವಾದ ಕಾರಣ ಇಂದು ಹೊರಬೀಳುವ ಸಾಧ್ಯತೆ ಇದೆ. ಈಗಾಗ್ಲೇ ಇದು ಕೊಲೆಯಲ್ಲ, ಅಪಘಾತದಿಂದ ಉಂಟಾದ ಸಾವು ಎಂಬುದು ಪೊಲೀಸ್ ಹಾಗೂ ಎಫ್‍ಎಸ್‍ಎಲ್ (FSL) ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗುತ್ತಿದೆ. ಆದರೆ ರೇಣುಕಾಚಾರ್ಯ ಕುಟುಂಬಸ್ಥರು ಮಾತ್ರ ಇದೊಂದು ಪೂರ್ವನಿಯೋಜಿತ ಕೊಲೆ ಅಂತ ಆರೋಪ ಮಾಡಿರೋದೇ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರೋದು. ಇಂದು ಚಂದ್ರು ಪೋಸ್ಟ್‍ಮಾರ್ಟ್‍ಂ ವರದಿ ಹಾಗೂ ಎಫ್‍ಎಸ್‍ಎಲ್ ರಿಪೋರ್ಟ್ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ. ಇದನ್ನೂ ಓದಿ: ಚಂದ್ರು ದೇಹದಲ್ಲಿ ಒಳ ಉಡುಪು ಇರಲಿಲ್ಲ – ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದ್ರಾ ಯುವ ನಾಯಕ?

    ಈಗಾಗಲೇ ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆ (Honnalli Police Station) ಯಲ್ಲಿ 302 ಹಾಗೂ 201 ಕೇಸ್ ಕೂಡ ದಾಖಲಾಗಿದೆ. ಚಂದ್ರುವಿನ ಕೊಲೆಯಾಗಿದೆ, ಅಲ್ಲದೆ ಆತನನ್ನು ಕೊಲೆ ಮಾಡಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ ಎಫ್‍ಎಸ್‍ಎಲ್ ಅಧಿಕಾರಿಗಳ ಎರಡು ತಂಡ ಅಪಘಾತ ನಡೆದ ಹೊನ್ನಾಳಿ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆ ಬಳಿ ಪರಿಶೀಲನೆ ಮಾಡಿ ಎವಿಡೆನ್ಸ್ ಕಲೆಕ್ಟ್ ಮಾಡಿದ್ದಾರೆ. ಪೊಲೀಸರು ಕೂಡ ಟೆಕ್ನಿಕಲ್ ಎವಿಡೆನ್ಸ್ ಕೂಡ ಕಲೆಕ್ಟ್ ಮಾಡಿಲಾಗಿದ್ದು, ಇದೊಂದು ಅಪಘಾತ, ಓವರ್ ಸ್ಪೀಡ್‍ನಲ್ಲಿ ಬಂದ ಹಿನ್ನೆಲೆ ಚಾನಲ್ ನಲ್ಲಿ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

    ಶಾಸಕ ರೇಣುಕಾಚಾರ್ಯ ಮಾತ್ರ ಇದೊಂದು ಪ್ರೀ ಪ್ಲಾನ್ ಮರ್ಡರ್ ಎಂದು ಆರೋಪ ಮಾಡುತ್ತಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಇದನ್ನು ಅಪಘಾತ ಎಂದು ಪರಿಗಣಿಸಿದ್ದು, ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತನಿಖೆ ನಡೆಸುವವರು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು. ಅದನ್ನು ಬಿಟ್ಟು ತನಿಖೆ ಪ್ರಗತಿಯಲ್ಲಿ ಇರುವಾಗ ಮಾಧ್ಯಮಗಳ ಮುಂದೆ ಇದೊಂದು ಅಪಘಾತ ಆಗಿರಬಹುದು ಎಂದು ಹೇಳಿದ್ದಾರೆ. ಇದರಿಂದ ಆರೋಪಿಗಳನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಅಪಘಾತ ಎಂದು ಬಂದರೆ, ಉನ್ನತ ತನಿಖೆಗೆ ಒತ್ತಾಯಿಸುವ ಎಲ್ಲಾ ಸಿದ್ಧತೆಯನ್ನು ರೇಣುಕಾಚಾರ್ಯ ಕುಟುಂಭಸ್ಥರು ಹಾಗೂ ಅವರ ಆಪ್ತರು ಮಾಡಿಕೊಂಡಿದ್ದಾರೆ.

    ಒಟ್ಟಾರೆಯಾಗಿ ಚಂದ್ರು ಸಾವಿಗೆ ಕಾರಣ ಏನು ಎಂಬುದು ಪೋಸ್ಟ್ ಮಾರ್ಟಂ ವರದಿ ಬಂದ ನಂತರ ಗೊತ್ತಾಗಲಿದೆ. ಇಂದು ಸಂಜೆಯೊಳಗೆ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈ ಸೇರೋ ಸಾಧ್ಯತೆ ಇದೆ. ಅ ವರದಿಯ ಮೇಲೆ ರೇಣುಕಾಚಾರ್ಯರ ನಡೆ ತೀರ್ಮಾನಗೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಮಗ ಗೌರಿಗದ್ದೆಗೆ ಹೋಗಿದ್ದು ನನಗೆ ಗೊತ್ತಿರಲಿಲ್ಲ: ಮೃತ ಚಂದ್ರಶೇಖರ್ ತಾಯಿ

    ಮಗ ಗೌರಿಗದ್ದೆಗೆ ಹೋಗಿದ್ದು ನನಗೆ ಗೊತ್ತಿರಲಿಲ್ಲ: ಮೃತ ಚಂದ್ರಶೇಖರ್ ತಾಯಿ

    ದಾವಣಗೆರೆ: ನನ್ನ ಮಗ ಗೌರಿ ಗದ್ದೆ ಹೋಗಿದ್ದು ನನಗೆ ಗೊತ್ತಿರಲಿಲ್ಲ. ಆತನನ್ನು ನಾನು ನಿನ್ನೆ ಶವವಾಗಿ ನೋಡಿದ್ದೇನೆ ಎಂದು ಮೃತ ಚಂದ್ರಶೇಖರ್ (Chandrashekhar) ತಾಯಿ ಅನಿತಾ ಕಣ್ಣೀರಾಕಿದ್ದಾರೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಮಗನಿಗೆ ಏನು ಮಾಡಿದ್ರೋ ಗೊತ್ತಿಲ್ಲ. ಜೀವಂತವಾಗಿ ಮಗನ ಮುಖವನ್ನ ನಾನು ಮತ್ತು ನನ್ನ ಪತಿ ಸಹ ನೋಡಲಿಲ್ಲ. ಕೊನೆಗೆ ಏನಾಯಿತು ಗೊತ್ತಾಗಲಿಲ್ಲ. ರಾಜಕೀಯವಾಗಿ ಬೆಳೆಯುತ್ತಿದ್ದ ಸಾವಿಗೆ ನ್ಯಾಯ ಬೇಕು ಎಂದು ರೋಧಿಸಿದ್ದಾರೆ. ಇದನ್ನೂ ಓದಿ: ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    ಕಳೆದ ಭಾನುವಾರದಿಂದ ಶಾಸಕ ರೇಣುಕಾಚಾರ್ಯ (MP Renukacharya) ತಮ್ಮನ ಮಗ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಆ ಬಳಿಕದಿಂದ ಎಲ್ಲಾ ಕಡೆ ಚಂದ್ರುಗಾಗಿ ಹುಡುಕಾಟ ನಡೆಸಲಾಯಿತು. ಐದು ದಿನದ ಹಿಂದೆ ನಾಪತ್ತೆಯಾಗಿದ್ದ ಚಂದ್ರಶೇಖರ್ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ಮಧ್ಯಾಹ್ನದವರೆಗೂ ಚಂದ್ರು ಅವರನ್ನು ಅಪಹರಣ ಮಾಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಹೊನ್ನಾಳಿ ಮತ್ತು ನ್ಯಾಮತಿ ಮಾರ್ಗಮಧ್ಯೆ ಬರುವ ಸೊರಟೂರಿನ ತುಂಗಭದ್ರಾ ನದಿಯ ಕಾಲುವೆಯಲ್ಲಿ ಕಾರೊಂದು ಇದೆ ಎಂಬ ಸುದ್ದಿ ಇಡೀ ಪ್ರಕರಣಕ್ಕೆ ಟ್ವಿಸ್ಟ್ ನೀಡಿತು. ಇದನ್ನೂ ಓದಿ: ನನ್ನ ಮಗನಿಗೆ ಮಚ್ಚಿನಿಂದ ತಲೆ, ಬೆನ್ನಿಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ: ರೇಣುಕಾಚಾರ್ಯ

    ಕಾಲುವೆ ಮೇಲ್ಭಾಗದಲ್ಲಿ ಕಾರೊಂದರ ಬಿಡಿಭಾಗಳು ಪತ್ತೆ ಆಗಿದ್ದವು. ನುರಿತ ಈಜುಪಟುಗಳು ಮತ್ತು ಅಗ್ನಿಶಾಮಕ ಪಡೆ ಸಿಬ್ಬಂದಿ ಕಾರ್ಯಾರಚಣೆ ನಡೆಸಿ, ಕಾರನ್ನು ಮೇಲಕ್ಕೆ ಎತ್ತಿದರು. ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಾಸಕ ರೇಣುಕಾಚಾರ್ಯ ಸೇರಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಚಂದ್ರು ನಿನ್ನ ಸಾವಿಗೆ ನಾನೇ ಕಾರಣ. ಚಂದ್ರು ನನ್ನನ್ನು ಕರ್ಕೋಳೋ ಎಂದು ರೇಣುಕಾಚಾರ್ಯ ಗೋಳಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಶವ ಅಂತ ಹೇಳ್ಬೇಡಿ ಚಂದ್ರು ಅಂತ ಕರೆಯಿರಿ- ಗೋಳಾಡಿದ ರೇಣುಕಾಚಾರ್ಯ

    ಶವ ಅಂತ ಹೇಳ್ಬೇಡಿ ಚಂದ್ರು ಅಂತ ಕರೆಯಿರಿ- ಗೋಳಾಡಿದ ರೇಣುಕಾಚಾರ್ಯ

    ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ಸಹೋದರನ ಪುತ್ರ ಚಂದ್ರಶೇಖರ್ (Chandrashekhar) ಶವವಾಗಿ ಪತ್ತೆಯಾಗಿದ್ದು, ಮಗನ ಶವ ನೋಡುತ್ತಿದ್ದಂತೆಯೇ ಶಾಸಕರು ಗೋಳಾಡಿದ್ದಾರೆ.

    ಭಾವನಾತ್ಮಕವಾಗಿ ಮಾತನಾಡುತ್ತಾ ನಿನ್ನ ಸಾವಿಗೆ ನಾನೇ ಕಾರಣ. ಚಂದ್ರು.. ಚಂದ್ರು.. ಎಂದು ಕಾರನ್ನು ಬಡಿದು ಕಣ್ಣೀರು ಹಾಕಿದ್ದಾರೆ.

    ಯಾರು ಶವ ಅಂತ ಅನ್ನಬೇಡಿ, ಚಂದ್ರು ಅಂತ ಕರೀರಿ. ಚಂದ್ರು ನನ್ನ ಕರ್ಕೊಳೋ, ನೀನಿಲ್ಲದ ಜೀವ ಹೇಗೆ ಇರ್ಲೋ ಎಂದು ಗೋಳಾಡಿದ್ದಾರೆ. ನಮ್ಮ ಮನೆಯ ದೀಪ ಹಚ್ಚುತ್ತಿದ್ದೆ ನೀನು. ಅಲ್ಲದೆ ನನ್ನ ಶವಕ್ಕೆ ನೀನು ಬೆಂಕಿ ಇಡಬೇಕಿತ್ತು ಎಂದು ಹೇಳುತ್ತಾ ತಮ್ಮ ಮಗನನ್ನು ಅಪ್ಪಿಕೊಂಡು ರೇಣುಕಾಚಾರ್ಯ ಕಣ್ಣೀರಾಗಿದ್ದು, ನೆರೆದವರ ಕಣ್ಣಲ್ಲೂ ನೀರು ತರಿಸುವಂತಿತ್ತು.

    ಚಂದ್ರಶೇಖರ್‌ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಸಿಕ್ಕಿದೆ. ಹೊನ್ನಾಳಿ (Honnalli) ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆ (Canal) ಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲೇ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರು ಪತ್ತೆಯಾದ ವಿಚಾರ ತಿಳಿದು ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ.

    ಸ್ಥಳೀಯ ನಿವಾಸಿಗಳು ಕಾಲುವೆಯಲ್ಲಿ ಕಾರು ಬಿದ್ದಿದೆ ಎಂಬ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕ್ರೇನ್‌ (Crane) ಮೂಲಕ ಕಾರನ್ನು ಮೇಲಕ್ಕೆ ಎತ್ತಿದ್ದಾರೆ. ಇದನ್ನೂ ಓದಿ: 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ

    ಕಾರಿನ ಏರ್‌ ಬ್ಯಾಗ್‌ ತೆರೆದಿದ್ದು, ಹಿಂಭಾಗದಲ್ಲಿ ಶವ ಪತ್ತೆಯಾಗಿದೆ. ಮುಂಭಾಗದ ಗಾಜು ಒಡೆದಿದ್ದರೆ ಹಿಂಭಾಗದಲ್ಲಿ ಕಾರು ನಜ್ಜುಗುಜ್ಜಾಗಿದೆ. ಹೀಗಾಗಿ ಇದು ಅಪಘಾತವೇ ಅಥವಾ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದ್ಯಾ ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕಿದೆ.

    Live Tv
    [brid partner=56869869 player=32851 video=960834 autoplay=true]