ದಾವೋಸ್: ಮುಂದಿನ 10-20 ವರ್ಷಗಳ ಕಾಲ ವಿಶ್ವದಲ್ಲೇ ಭಾರತ (India) ಅತ್ಯಂತ ವೇಗವಾದ ಆರ್ಥಿಕ ಪ್ರಗತಿ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮುವುದು ಖಚಿತ ಎಂದು ಫೈನಾನ್ಷಿಯಲ್ ಟೈಮ್ಸ್‌ನ ಮುಖ್ಯ ಅರ್ಥಶಾಸ್ತ್ರ ನಿರೂಪಕ ಮಾರ್ಟಿನ್ ವುಲ್ಫ್ (Martin Wolf) ಭವಿಷ್ಯ ನುಡಿದಿದ್ದಾರೆ.
#WorldEconomicForum | Over next 10-20 years, it is overwhelmingly certain that India will be the fastest growing economy, says Martin Wolf, Chief economics commentator at the Financial Times pic.twitter.com/JTsBpEpgQQ
ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ(World Economic Forum) ಅಧಿವೇಶನವೊಂದರಲ್ಲಿ ಮಾತನಾಡಿದ ಅವರು, 70ರ ದಶಕದಿಂದ ನಾನು ಭಾರತದ ಆರ್ಥಿಕತೆಯನ್ನು ಗಮನಿಸುತ್ತಾ ಬಂದಿದ್ದೇನೆ. ಮುಂದಿನ 10-20 ವರ್ಷಗಳಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ಇದರಲ್ಲಿ ಯಾವುದೇ ಸಂಶಯವೇ ಇಲ್ಲ ಎಂದು ಎಂದು ಹೇಳಿದರು. ಇದನ್ನೂ ಓದಿ: ಇಂಗ್ಲಿಷ್ ಪದವೀಧರೆ ಈಗ ಚಾಯ್‌ವಾಲಿ – ಯುವತಿ ಭವಿಷ್ಯದ ಕನಸಿಗೆ ಜನರ ಮೆಚ್ಚುಗೆ
ಇಲ್ಲಿಯವರೆಗೆ ಭಾರತದಲ್ಲಿ ಯಾರು ಉದ್ಯಮ ಹೊಂದಿಲ್ಲವೋ ಅವರು ಭಾರತವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಈ ಬಾರಿಯ ಶೃಂಗಸಭೆಯಲ್ಲಿ ಕರ್ನಾಟಕ ಅತೀ ಹೆಚ್ಚು ಆಕರ್ಷಣೆಯಾಗಿತ್ತು. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ದಾವೋಸ್ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರತಿ ಬಾರಿಯೂ ದಾವೋಸ್ ಆರ್ಥಿಕ ಶೃಂಗಸಭೆ ಜನವರಿಯಲ್ಲಿ ನಡೆಯುತ್ತದೆ. ಆದರೆ ಎರಡು ವರ್ಷಗಳಿಂದ ಕೋವಿಡ್-19 ಕಾರಣ ನಡೆದಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಹಿಂದೆ ನಮ್ಮ ರಾಜ್ಯದಿಂದ ದೇವೇಗೌಡರು, ಎಸ್‍ಎಂ ಕೃಷ್ಣ, ಯಡಿಯೂರಪ್ಪ ಭಾಗವಹಿಸಿದ್ದರು ಎಂದರು. ಇದನ್ನೂ ಓದಿ: ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ
ಈ ಬಾರಿಯ ಶೃಂಗಸಭೆ ಕುತೂಹಲ ಹುಟ್ಟಿಸಿತ್ತು. ಕೋವಿಡ್ ಬಳಿಕ ಆರ್ಥಿಕ ಹಿಂಜರಿತ ಇತ್ತು. ಆರ್ಥಿಕ ಹಿಂಜರಿತ, ಪರಿಸರದಲ್ಲಿನ ಬದಲಾವಣೆ ಬಗ್ಗೆ ಚರ್ಚಿಸಲಾಯಿತು. ದಾವೋಸ್ ಶೃಂಗ ಸಭೆಯಲ್ಲಿ ಭಾರತದಲ್ಲಿ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವಹಿಸಿದ್ದರು. ನವೀಕರಿಸಬಹುದಾದ ಇಂಧನಗಳ ಮೇಲೆ ಉದ್ಯಮಿಗಳಿಗೆ ಹೂಡಿಕೆಗೆ ಹೆಚ್ಚು ಆಸಕ್ತಿ ನೀಡಿಲಾಗಿತ್ತು. ಅತೀ ಹೆಚ್ಚು ಆಕರ್ಷಣೆ ಆಗಿದ್ದು ಕರ್ನಾಟಕ. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.
ಉದ್ಯಮಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಯಿತು. ಮಣ್ಣಿನ ಕುರಿತ ಒಂದು ಸಮಾಲೋಚನೆಯಲ್ಲೂ ನಾನು ಭಾಗವಹಿಸಿದ್ದೆ. ಹಲವು ಕಂಪೆನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿವೆ. ಜ್ಯುಬಿಲೆಂಟ್ ಇಂಡಿಯಾ ಗ್ರೂಪ್ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನಿರ್ಧಾರಿದೆ. ದೇವನಹಳ್ಳಿ ಬಳಿ ಇವರು 10 ಎಕರೆ ಜಮೀನು ಖರೀದಿಸಿದ್ದಾರೆ. ಹಿಟಾಚಿ ಎನರ್ಜಿ ಸಂಸ್ಥೆಯೂ ಹೂಡಿಕೆಗೆ ಮುಂದಾಗಿದೆ. ಇವರು 2 ಸಾವಿರ ಇಂಜಿನಿಯರ್‌ಗಳನ್ನು ಈ ವರ್ಷ ನೇಮಕ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ
ಸೀಮೆನ್ಸ್ ಹೆಲ್ದೀನಿಯರ್ಸ್ ಗ್ರೂಪ್‍ನವರು ಆರೋಗ್ಯ ಕ್ಷೇತ್ರದಲ್ಲಿ 1,600 ಕೋಟಿ ಬಂಡವಾಳ ಹೂಡುತ್ತಿದೆ. ಅನ್ ಇನ್ಬೇವ್ ಸಂಸ್ಥೆಯು ನಾನ್ ಆಲ್ಕೋಹಾಲಿಕ್ ಪಾನೀಯ ಉತ್ಪಾದನೆಗೆ ಮುಂದೆ ಬಂದಿದ್ದಾರೆ. ನೆಸ್ಲೆ ಸಂಸ್ಥೆಯವರ ಉದ್ಯಮ ಈಗಾಗಲೇ ನಂಜನಗೂಡಿನಲ್ಲಿದೆ. ಹೆಚ್ಚುವರಿಯಾಗಿ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನೆಸ್ಲೆ ಮುಂದಾಗಿದೆ. ದಸ್ಸಾಲ್ಸ್ ಸಿಸ್ಟಮ್ಸ್‍ನವರು 300 ಕೋಟಿ ರೂ. ಹೂಡಿಕೆಗೆ ಉತ್ಸುಕತೆ ತೋರಿದ್ದಾರೆ. ಮಿತ್ತಲ್ ಸಂಸ್ಥೆಯವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಹೇಳಿದರು.
ಭಾರತಿ ಎಂಟರ್ ಪ್ರೈಸಸ್ ಮೆಗಾ ಡಾಟಾ ಸೆಂಟರ್ ತೆರೆಯಲು ಮುಂದಾಗಿದೆ. ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಕ್, ಐಬಿಎಂ, ಐಕಿಯ ಸ್ಟೋರ್ಸ್, ಆಕ್ಸಿಸ್ ಬ್ಯಾಂಕ್‍ಗಳು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡುವುದರ ಬಗ್ಗೆ ಚರ್ಚಿಸಲಾಗಿದೆ. ದಾವೋಸ್ ಆರ್ಥಿಕ ಶೃಂಗ ಸಭೆಯಲ್ಲಿ ರಾಜ್ಯಕ್ಕೆ ಒಟ್ಟು 59,350 ಕೋಟಿ ರೂಗಳ ಬಂಡವಾಳ ಹೂಡಿಕೆ ಆಕರ್ಷಿಸಲು ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನವೆಂಬರ್‍ನಲ್ಲಿ ಎರಡು ಸಮ್ಮೇಳನಗಳು ನಡೆಯಲಿವೆ. ವಿಶ್ವ ಬಂಡವಾಳ ಹೂಡಿಕೆ ಸಮ್ಮೇಳನ ಮತ್ತು ಬೆಂಗಳೂರು ಟೆಕ್ ಸಮ್ಮಿಟ್‍ಗಳು ನಡೆಯಲಿವೆ. ಈ ಸಮ್ಮೇಳನದಲ್ಲಿ ಹಲವಾರು ಜಾಗತಿಕ ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದರು.
ಇದೇ ವೇಳೆ ಲಕ್ಷ್ಮಿ ಮಿತ್ತಲ್ ಜೊತೆ ಆಪರೇಷನ್ ಕಮಲದ ಮಾತುಕತೆ ವಿಚಾರವಾಗಿ ಮಾತನಾಡಿದ ಅವರು, ಲಕ್ಷ್ಮಿ ಮಿತ್ತಲ್ ಅವರ ಜೊತೆ ಹೂಡಿಕೆ ಬಗ್ಗೆ ಮಾತಾಡಿದ್ದೇವೆ. ಆ ಮಾತುಕತೆ ಬಳಿಕ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇವೆ. ಉದ್ಯಮಿಗಳು ಸಹಜವಾಗಿ ರಾಜ್ಯಗಳ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳುತ್ತಾರೆ. ಎಲ್ಲ ಉದ್ಯಮಿಗಳೂ ರಾಜಕೀಯ ಪರಿಸ್ಥಿತಿ ಕೇಳಿದರು ಎಂದು ಹೇಳಿದರು.
ನಂತರ ಯಾರೇ ಹೂಡಿಕೆಗೆ ಮುಂದಾದರೂ ಇಲ್ಲಿನ ಕಾನೂನು ಪಾಲಿಸಿ ಅವಕಾಶ ಕೊಡುತ್ತೇವೆ. ಲುಲು ಸಂಸ್ಥೆ ಜೊತೆ ಹೂಡಿಕೆ ಮಾಡಿಕೊಳ್ಳಬಾರದು ಅಂತ ಏನಿಲ್ಲ. ರಾಜಾಜಿನಗರದಲ್ಲಿರುವ ಲುಲು ಮಾರ್ಕೆಟ್ ಹಿಂದಿನ ಸರ್ಕಾರವಿದ್ದಾಗ ಬಂತು. ಅದು ಕಾನೂನು ಬದ್ಧವಾಗಿದೆಯಾ ಇಲ್ಲವೋ ಮಾಹಿತಿ ತರಿಸಿಕೊಳ್ಳುತ್ತೇನೆ. ದಾವೋಸ್ ಒಪ್ಪಂದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಬರ್ನ್: ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.
ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಅಕ್ರಮ: ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ!
ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ಮೆ.ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.
ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕ ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದ ನವೆಂಬರ್‍ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.
I am blessed to be born & educated in Karnataka. Blessed that I represent my state & lead it. We have a rich culture & heritage. God has endowed Karnataka with nature’s bounty. We are blessed with rich bio-diversity, having 10 Agro-climatic zones & 300 days of sunshine. #Davos22pic.twitter.com/ThRp4aOCtq
ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್:
ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ರೆನ್ಯೂ ಪವರ್ ಪ್ರೈ.ಲಿ:
ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.
ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳು:
ಸೀಮೆನ್ಸ್ ಸಂಸ್ಥೆ:
ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.
ದಸ್ಸಾಲ್ಸ್ ಸಿಸ್ಟಮ್ಸ್:
ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು. ಇದನ್ನೂ ಓದಿ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್
ನೆಸ್ಟ್ಲೆ ಸಂಸ್ಥೆ:
ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.
ಮೆಗಾ ಡಾಟಾ ಸೆಂಟರ್:
ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರಿನಲ್ಲಿ ಐಕಿಯ ಸ್ಟೋರ್:
ಇಂಗ್ಕಾ ಗ್ರೂಪ್ (ಐಕಿಯ) ಸಿ.ಇ.ಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಜೂನ್‍ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.
ಆಕ್ಸಿಸ್ ಬ್ಯಾಂಕ್:
ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಯಿತು.
ನೋಕಿಯಾ ಸಂಸ್ಥೆ:
ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಯಿತು.
ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್‍ನಲ್ಲಿ ಹೀರೋ ಮೋಟೋಕಾರ್ಪ್, ಎಬಿಇನ್‍ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್, ಜಾನ್ಸನ್ ಕಂಟ್ರೋಲ್ಸ್‍ನ ಸಿಇಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್, ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚೆ ನಡೆಸಲಾಯಿತು. ಈ ವೇಳೆ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು.
ಬರ್ನ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.
ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನ್‌ನ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದ ಚೇತರಿಸಿಕೊಳ್ಳುವವರೆಗೂ ಹೋರಾಡಲಿದೆ. ಇದು ಮಾತುಕತೆಯ ಮೊದಲ ಹೆಜ್ಜೆಯಾಗಬಹುದು ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಇಂದಿಗೆ 3 ತಿಂಗಳು – ಪುಟ್ಟ ರಾಷ್ಟ್ರ ವಶಕ್ಕೆ ತಿಣುಕಾಟ
ಇದಕ್ಕೂ ಮೊದಲು ರಷ್ಯಾದೊಂದಿಗೆ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಿ ಯುದ್ಧವನ್ನು ನಿಲ್ಲಿಸುವ ಬಗ್ಗೆ ಚರ್ಚಿಸಲು ಝೆಲೆನ್ಸ್ಕಿ ಮುಂದಾಗಿದ್ದರು. ಆದರೆ ರಷ್ಯಾ ಅಧ್ಯಕ್ಷ ಇದಾವುದಕ್ಕೂ ಬಗ್ಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಿಂದ ಉಕ್ರೇನ್ ಅಧ್ಯಕ್ಷ ನೇರ ಮಾತುಕತೆ ನಡೆಸಲು ಸಿದ್ದರಿದ್ದಾರೆ ಎಂದಿದ್ದಾರೆ.
ಕಳೆದ ವಾರ ಝೆಲೆನ್ಸ್ಕಿ ರಾಜತಾಂತ್ರಿಕತೆ ಇಲ್ಲದೇ ಯುದ್ಧವನ್ನು ನಿಲ್ಲಿಸುವುದು ಅಸಾಧ್ಯ ಎಂದು ತಿಳಿಸಿದ್ದರು. ಉಕ್ರೇನ್‌ನ 2ನೇ ಮುಖ್ಯ ನಗರವಾದ ಖಾರ್ಕೀವ್‌ನಲ್ಲಿ ನಮ್ಮ ಪಡೆ ರಷ್ಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದೆ. ಆದರೆ ಡಾನ್ಬಾಸ್ ನಗರದಲ್ಲಿ ರಕ್ತಸಿಕ್ತ ಪರಿಸ್ಥಿತಿ ಉಂಟಾಗಿದೆ. ಅಲ್ಲಿ ನಮ್ಮ ಹಲವು ನಾಗರಿಕರನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್
ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿ 3 ತಿಂಗಳು ಕಳೆದಿದೆ. ಜಗತ್ತಿನ 2ನೇ ಅತೀ ದೊಡ್ಡ ರಾಷ್ಟ್ರ ಪುಟ್ಟ ಉಕ್ರೇನ್ ಅನ್ನು ಇನ್ನೂ ಕೂಡಾ ಸಂಪೂರ್ಣವಾಗಿ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ದಾಳಿ ನಡೆಸಿ ಅಪಾರ ಸಾವು-ನೋವು ಮಾಡಿದೆ ಬಿಟ್ಟರೆ, ಸಣ್ಣ ಪುಟ್ಟ ಗೆಲುವು ಸಾಧಿಸಿದೆ.
ಬರ್ನ್: ಸ್ವಿಟ್ಜರ್ಲೆಂಡಿನ ದಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕಾನಮಿ ಫೋರಂ ಸಮಾವೇಶದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಪರೇಷನ್ ಕಮಲದ ಬಗ್ಗೆ ಮಾತನಾಡಿರುವುದು ಕೇಳಿಬಂದಿದೆ.
ಲಕ್ಷ್ಮೀ ಮಿತ್ತಲ್: ರಾಜ್ಯದಲ್ಲಿ ನಿಮ್ಮ ಶಾಸಕರ ಸಂಖ್ಯೆ ಎಷ್ಟು? ಸಿಎಂ: 119 ಶಾಸಕರು ಇದ್ದಾರೆ
ಮಿತ್ತಲ್: ವಿಧಾನಸಭೆಯ ಸ್ಥಾನಗಳೆಷ್ಟು? ಸಿಎಂ: 224
ಮಿತ್ತಲ್: ಹಾಗಿದ್ರೆ ಉಳಿದ 2-3 ಸೀಟ್‌ಗಳ ಚಿಂತೆ ಇಲ್ಲ ನಿಮಗೆ ಸಿಎಂ: ಅಷ್ಟಕ್ಕೂ ನಾವು ಗೆದ್ದಿದ್ದು 104 ಸೀಟ್‌ಗಳು. 17 ಜನ ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾದರು. ಈ ಪೈಕಿ 15 ಜನ ಚುನಾವಣೆಯಲ್ಲಿ ಮರು ಆಯ್ಕೆ ಆಗಿದ್ದಾರೆ. ಹೀಗಾಗಿ ನಾವು 119 ಇದ್ದೇವೆ.
ಮಿತ್ತಲ್: ಈಗ ನೀವು ಸ್ಟೇಬಲ್ ಇದೀರಾ ತಾನೇ? ಸಿಎಂ: ಹೌದು, ನಾವು ಸ್ಟೇಬಲ್ ಇದ್ದೇವೆ.
ಬರ್ನ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಇಂದು ಸ್ವಿಟ್ಜರ್ಲೆಂಡಿನ ದಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಲುಲು ಗ್ರೂಪ್ ಇಂಟರ್ ನ್ಯಾಷನಲ್‍ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.
ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಲೋಕ ಕಲ್ಯಾಣ, ವಿಶ್ವಶಾಂತಿಗಾಗಿ ಅಹಿಂಸಾ ಮಾರ್ಗ ಅನುಸರಿಸಿ: ಗೆಹ್ಲೋಟ್
ವಿಶ್ವದ ಪ್ರಮುಖ ಸಂಸ್ಥೆಗಳೊಂದಿಗೆ ಸಿಎಂ ಚರ್ಚೆ
ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ, ದಸ್ಸಾಲ್ಸ್ ಸಿಸ್ಟಮ್ಸ್, ನೆಸ್ಟ್ಲೆ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು.
ಜ್ಯೂಬಿಲಿಯಂಟ್ ಗ್ರೂಪ್
ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್‍ಎಂಸಿಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸುವಂತೆ ತಿಳಿಸಿದ ಮುಖ್ಯ ಮಂತ್ರಿಗಳು, ಧಾರವಾಡದಲ್ಲಿ ಎಫ್‍ಎಂಸಿಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್‍ನ್ನು ಸಹ ಪರಿಗಣಿಸಬಹುದಾಗಿದೆ ಎಂದರು. ಇದನ್ನೂ ಓದಿ: ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್
ಜ್ಯೂಬಿಲಿಯಂಟ್ ಫುಡ್ ವಕ್ರ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ 9,000 ಜನರು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.
ಹಿಟಾಚಿ ಎನರ್ಜಿ:
ಹಿಟಾಚಿ ಎನರ್ಜಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ನಡೆದ ಮಾತುಕತೆಯ ಸಂದರ್ಭದಲ್ಲಿ ಇವಿ ಚಾರ್ಜಿಂಗ್‍ಗಾಗಿ ಮೂಲಸೌಕರ್ಯ ಘಟಕ ಸ್ಥಾಪನೆಗೆ ಯೋಜಿಸುತ್ತಿರುವುದಾಗಿ ತಿಳಿಸಿದೆ. ಬೆಂಗಳೂರಿನಲ್ಲಿ ಪ್ರತಿಭೆಯ ಲಭ್ಯತೆ ಇರುವುದರಿಂದ ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ. ದೊಡ್ಡಬಳ್ಳಾಪುರದಲ್ಲಿ ಇಂಧನ ಗುಣಮಟ್ಟ ಉಪಕರಣ ಘಟಕವನ್ನು ಉದ್ಘಾಟಿಸುತ್ತಿದ್ದಾರೆ. ಸಾವಿರ ಇಂಜಿನಿಯರ್‌ಗಳನ್ನು ಹೊಂದಿರುವ ಎಂಜಿನಿಯರಿಂಗ್ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಹಿಟಾಚಿ ಸಂಸ್ಥೆಯ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿದೆ.
ಸೀಮೆನ್ಸ್:
ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಗ್ನಾಸ್ಟಿಕ್ಸ್ ಮೇಲೆ ಕೇಂದ್ರೀಕೃತವಾದ ಆರ್ ಅಂಡ್ ಡಿ ಆರೋಗ್ಯ ಯೋಜನೆ. ಸ್ಥಳೀಯ ಮಾರುಕಟ್ಟೆಗಳಿಗೆ ಮಾರಾಟ ಮಾಡಲು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಸೆಪ್ಟೆಂಬರ್ 2022ರಲ್ಲಿ ಶಂಕುಸ್ಥಾಪನೆಗೆ ಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯ ಮಂತ್ರಿಗಳನ್ನು ಸಂಸ್ಥೆ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸೀಮನ್ಸ್ ಸಂಸ್ಥೆ 2,500 ಎಂಜಿನಿಯರ್‌ಗಳನ್ನು ಹೊಂದಿದೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ
ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.
ದಸ್ಸಾಲ್ಸ್ ಸಿಸ್ಟಮ್ಸ್:
ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ, ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ, ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು.
ನೆಸ್ಟ್ಲೆ ಸಂಸ್ಥೆ:
ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದೆ.
ಈ ಸಂದರ್ಭದಲ್ಲಿ ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
ಬರ್ನ್: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಈ ವೇಳೆ ಬೊಮ್ಮಾಯಿ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿದರು.
ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ನೀಲಿ ಬಣ್ಣದ ಸೂಟ್ ಧರಿಸಿ ಮಿಂಚಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸಿಎಂಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್
ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಸಿಎಂ ಜೊತೆ 8 ಜನರ ತಂಡ ದಾವೋಸ್‌ಗೆ ತೆರಳಿದ್ದು, ಸಿಎಂ ಆದ ಬಳಿಕ ಬೊಮ್ಮಾಯಿಯವರಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ.
ಬೆಂಗಳೂರು: ಸ್ವಿಟ್ಜರ್ಲೆಂಡಿನ ದಾವೋಸ್‍ನಲ್ಲಿ ಇಂದಿನಿಂದ ಆರಂಭವಾಗಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ನೇತೃತ್ವದ ನಿಯೋಗ ಇಂದು ರಾಜ್ಯದಿಂದ ಹೊರಟಿದೆ.
ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾರತವನ್ನೂ ಪ್ರತಿನಿಧಿಸಲಿರುವ ಸಿಎಂ ಬೊಮ್ಮಾಯಿಗೆ ಐಟಿಬಿಟಿ ಸಚಿವ ಡಾ.ಅಶ್ವಥ್ ನಾರಾಯಣ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಸಾತ್ ಕೊಟ್ಟಿದ್ದಾರೆ. ಬೊಮ್ಮಾಯಿಯವರಿಗೆ ಸಿಎಂ ಆದ ಬಳಿಕ ಮೊದಲ ವಿದೇಶ ಪ್ರವಾಸ ಇದಾಗಿದೆ. ಇಂದು ಬೆಳಗ್ಗೆ 8:30ಕ್ಕೆ ತಮ್ಮ ಆರ್.ಟಿ.ನಗರದ ನಿವಾಸದಿಂದ ಪ್ಯಾಂಟ್, ಶರ್ಟ್ ಧರಿಸಿ ಸಾಮಾನ್ಯ ಉಡುಪಿನಲ್ಲೇ ದಾವೋಸ್‍ಗೆ ತೆರಳಿದರು. ಸಿಎಂ ಜೊತೆಗೆ ಅದ್ಧೂರಿ ಸೂಟ್ ಧರಿಸಿದ ಮುರುಗೇಶ್ ನಿರಾಣಿ ಹೊರಟರು. ಇಂದು ಸಿಎಂ ಜೊತೆಗೆ ಒಟ್ಟು 8 ಜನರ ತಂಡ ದಾವೋಸ್‍ಗೆ ಪ್ರಯಾಣಿಸಿದೆ. ಸಿಎಂ ಅವರೊಂದಿಗೆ ಧರ್ಮಪತ್ನಿ ಚೆನ್ನಮ್ಮ, ಮುರುಗೇಶ್ ನಿರಾಣಿ ಮತ್ತು ನಿರಾಣಿಯವರ ಪತ್ನಿ, ನಿರಾಣಿ ಪಿಎ ಶರಣಬಸಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಅವರ ಪಿಎ, ಸಿಎಂ ಒಎಸ್‍ಡಿ ರೋಹನ್ ಬಿರಾದಾರ್ ದಾವೋಸ್‍ಗೆ ತೆರಳಿದರು. ಇದನ್ನೂ ಓದಿ: ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಗೆ ಕ್ರಮವಹಿಸಿ: ಸಿಎಂಗೆ ಬಿಎಸ್‌ವೈ ಮನವಿ
ದಾವೋಸ್‍ಗೆ ಹೋಗುವ ಮುನ್ನ ಆರ್‍ಟಿ ನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದೆ. ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ. ನಾಳೆ ಮತ್ತು ನಾಡಿದ್ದು ದಾವೋಸ್ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇವೆ. ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್‍ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಬಸವರಾಜ ಬೊಮ್ಮಾಯಿಯವರು ಎರಡನೇ ಬಾರಿಗೆ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ದಾವೋಸ್ ಪ್ರವಾಸ ಕೈಗೊಂಡಿದ್ದರು. ಸಿಎಂ ಆದ ಬಳಿಕ ಈಗ ಎರಡನೇ ಬಾರಿಗೆ ದಾವೋಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.
ದಾವೋಸ್ ರೂಟ್ ಮ್ಯಾಪ್ ಹೀಗಿದೆ:
ಬೆಂಗಳೂರಿಂದ ಇಂದು ಬೆಳಗ್ಗೆ 10:35ರ ವಿಮಾನದ ಮೂಲಕ ದುಬೈಗೆ ಪ್ರಯಾಣ. ಇಂದು ಮಧ್ಯಾಹ್ನ 12:45 ಕ್ಕೆ ದುಬೈಗೆ ತಲುಪಲಿರುವ ಸಿಎಂ. ದುಬೈನಿಂದ ಮಧ್ಯಾಹ್ನ 3:35ಕ್ಕೆ ಸ್ವಿಟ್ಜರ್ಲೆಂಡ್‍ನ ಜ್ಯೂರಿಚ್‍ಗೆ ಪ್ರಯಾಣ. ರಾತ್ರಿ 8:20 ರಿಂದ ಜ್ಯೂರಿಚ್‍ನಿಂದ ದಾವೋಸ್ ರಸ್ತೆ ಮಾರ್ಗದ ಮೂಲಕ ಪ್ರಯಾಣ. ರಾತ್ರಿ 12ಕ್ಕೆ ದಾವೋಸ್ ತಲುಪಲಿರುವ ಸಿಎಂ ನೇತೃತ್ವದ ನಿಯೋಗ. ನಾಳೆಯಿಂದ ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗಿ. ಎರಡು ದಿನಗಳ ಕಾಲ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ. ಎರಡು ವೇದಿಕೆಗಳಲ್ಲಿ ಭಾರತ ಪ್ರತಿನಿಧಿಸಿ ಭಾಷಣ ಮಾಡಲಿರುವ ಸಿಎಂ. ಮೇ 25ರ ಬೆಳಗ್ಗೆ 11 ಗಂಟೆಗೆ ದಾವೋಸ್‍ನಿಂದ ತಾಯ್ನಾಡಿಗೆ ಪ್ರಯಾಣ. ಮೇ 26ರ ಬೆಳಗ್ಗೆ 9ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಸಿಎಂ ನಿಯೋಗ.
ಕೀವ್: ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ – ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಉಕ್ರೇನ್‍ಗೆ ಭೇಟಿ ನೀಡುತ್ತಿರುವ ಪೋರ್ಚುಗೀಸ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಸಂಪೂರ್ಣ ಮಿಲಿಟರಿ ವಿಜಯಕ್ಕಿಂತ ರಾಜತಾಂತ್ರಿಕ ಪ್ರಗತಿಯಿಂದ ಮಾತ್ರ ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಹೇಳಿದ್ದಾರೆ.
ಯುದ್ಧವು ರಕ್ತಮಯವಾಗಿರುತ್ತದೆ, ಹೋರಾಟ ಇರುತ್ತದೆ. ಆದರೆ ರಾಜತಾಂತ್ರಿಕತೆಯ ಮೂಲಕ ಮಾತ್ರ ಯುದ್ಧವನ್ನು ಕೊನೆಗೊಳಿಸಬಹುದು. ಉಕ್ರೇನ್ ಮತ್ತು ರಷ್ಯಾ ನಡುವಿನ ಚರ್ಚೆಗಳು ನಿರ್ಣಾಯಕವಾಗಿ ನಡೆಯುತ್ತವೆ. ಅದು ಯಾವ ಸ್ವರೂಪದಲ್ಲಿ ನನಗೆ ಗೊತ್ತಿಲ್ಲ. ಆದರೆ ಫಲಿತಾಂಶವು ಉಕ್ರೇನ್‍ಗೆ “ನ್ಯಾಯಯುತ” ಎಂದು ಝೆಲೆನ್ಸ್ಕಿ ಭರವಸೆ ನೀಡಿದರು. ಇದನ್ನೂ ಓದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಬಿಜೆಪಿಯಿಂದ ಸ್ಪರ್ಧಿಸಿದ ಗಂಡ-ಹೆಂಡತಿ ಜಯಭೇರಿ
ಫಿನ್‍ಲ್ಯಾಂಡ್ ನ್ಯಾಟೋ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದಂತೆ ರಷ್ಯಾ ನೈಸರ್ಗಿಕ ಅನಿಲ ಸರಬರಾಜನ್ನು ನಿಷೇಧಿಸಿದೆ. ಜೊತೆಗೆ 963 ಅಮೆರಿಕವನ್ನು ರಷ್ಯಾ ಪ್ರವೇಶಿಸದಂತೆ ನಿಷೇಧಿಸಿದೆ. ಈ ಯುದ್ಧದಿಂದಾಗಿ 64 ಲಕ್ಷ ಉಕ್ರೇನಿಯನ್ನರು ದೇಶದಿಂದ ಪಲಾಯನ ಮಾಡಿದ್ದಾರೆ. ಹಾಗಾಗಿ ಈ ಯುದ್ಧವನ್ನು ಬಗೆಹರಿಸಲು ರಾಜತಾಂತ್ರಿಕತೆಯೊಂದೆ ಪರಿಹಾರ ಎಂದು ರಷ್ಯಾ ಅಧ್ಯಕ್ಷ ವೊಲೋಡಿಮಿರ್ ಝಲೆನ್ಸ್ಕಿ ಹೇಳಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಈಗಾಗಲೇ ಮಾರಿಯುಪೋಲ್ ಉಕ್ಕಿನ ಸ್ಥಾವರದಿಂದ ಸುಮಾರು 2,500 ಉಕ್ರೇನಿಯನ್ ಸೈನಿಕರನ್ನು ಸೆರೆಹಿಡಿಯಲಾಗಿದೆ. 20,000 ಕ್ಕೂ ಹೆಚ್ಚು ಉಕ್ರೇನಿಯನ್ ಪ್ರಜೆಗಳು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ.
ಸುಮಾರು ಎರಡೂವರೆ ವರ್ಷಗಳ ನಂತರ, ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ದಾವೋಸ್ ಮತ್ತೊಮ್ಮೆ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯನ್ನು ಆಯೋಜಿಸಲು ಸಿದ್ಧವಾಗಿದೆ. ಭಾರತ ಸೇರಿದಂತೆ ಹಲವಾರು ಜಾಗತಿಕ ನಾಯಕರು ಉಕ್ರೇನ್ ಕುರಿತು ಚರ್ಚಿಸುವ ನಿರೀಕ್ಷೆಯಿದೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಪತ್ನಿ ಹಾಗೂ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ 8 ಮಂದಿ ಜೊತೆ ಇಂದು ದಾವೋಸ್‍ಗೆ ತೆರಳಿದ್ದಾರೆ.
ಹೌದು. ದಾವೋಸ್ ನಲ್ಲಿ ವಿಶ್ವ ಆರ್ಥಿಕ ಶೃಂಗ ಸಭೆ ಇದೆ. ಈ ಶೃಂಗಸಭೆಯಲ್ಲಿ ಸಿಎಂ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ ದಾವೋಸ್ ಪ್ರವಾಸಕ್ಕೆ ತೆರಳಿದ್ದಾರೆ. ಈ ಮೂಲಕ ಬೊಮ್ಮಾಯಿ ಅವರು ಎರಡನೇ ಬಾರಿಗೆ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ದಾವೋಸ್‍ಗೆ ತೆರಳಿದ್ದರು. ಸಿಎಂ ಆದ ಬಳಿಕ ಇದೀಗ ಎರಡನೇ ಬಾರಿಗೆ ದಾವೋಸ್ ಗೆ ಪ್ರಯಾಣ ಮಾಡಿದ್ದಾರೆ.
ಈಗಾಗಲೇ ಬೆಂಗಳೂರಿನಿಂದ ವಿಮಾನದ ಮೂಲಕ ಪ್ರಯಾಣ ಬೆಳೆಸಿರುವ ಸಿಎಂ, ಇಂದು ಮಧ್ಯಾಹ್ನ 12.45 ಕ್ಕೆ ದುಬೈಗೆ ತಲುಪಲಿದ್ದಾರೆ. ದುಬೈನಿಂದ ಮಧ್ಯಾಹ್ನ 3.35 ಕ್ಕೆ ಸ್ವಿಟ್ಜರ್ಲೆಂಡ್ ನ ಜ್ಯೂರಿಚ್ ಗೆ ಹೋಗಿ ರಾತ್ರಿ 8.20 ರಿಂದ ಜ್ಯೂರಿಚ್ ನಿಂದ ದಾವೋಸ್ ರಸ್ತೆ ಮಾರ್ಗದ ಮೂಲಕ ಪ್ರಯಾಣ ಮಾಡಲಿದ್ದಾರೆ. ರಾತ್ರಿ 12ಕ್ಕೆ ಸಿಎಂ ನೇತೃತ್ವದ ನಿಯೋಗ ದಾವೋಸ್ ತಲುಪಲಿದೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂನ ಹಿನ್ನೀರಿನಲ್ಲಿ ಬೆಳೆದ ಬೆಳೆ ನೀರು ಪಾಲು – ರೈತ ಕಣ್ಣೀರು
ದಾವೋಸ್‍ಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಇವತ್ತು ದಾವೋಸ್ ಗೆ ಹೋಗುತ್ತಿದ್ದೇವೆ. ನಾಳೆಯಿಂದ ಸೆಷನ್ ಆರಂಭವಾಗಲಿದೆ. ನಾಳೆ, ನಾಡಿದ್ದು ಎರಡು ಸೆಷನ್ ಗಳಲ್ಲಿ ಭಾಗವಹಿಸುತ್ತೇವೆ. ವಿಶ್ವದ ಪ್ರಖ್ಯಾತ ಕೈಗಾರಿಕೋದ್ಯಮದ ಉದ್ಯಮಿಗಳ ಭೇಟಿ ಮಾಡುತ್ತೇವೆ. ಅಲ್ಲಿನ ಕಾರ್ಯಕ್ರಮಗಳನ್ನು ಮಾಧ್ಯಮಗಳಿಗೆ ನಿರಂತರವಾಗಿ ತಲುಪಿಸುತ್ತೇವೆ. ಕೆಲವು ರಾಷ್ಟ್ರೀಯ ಮಾಧ್ಯಮಗಳೂ ಬಂದಿರುತ್ತವೆ ಎಂದರು.
ಭಾರತಕ್ಕೆ ಎಫ್‍ಡಿಐ ಬಹಳಷ್ಟು ಬಂದಿದೆ. ಅದರಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ. ಕಳೆದ ನಾಲ್ಕು ಆರ್ಥಿಕ ತ್ರೈಮಾಸಿಕಗಳಲ್ಲಿ ರಾಜ್ಯಕ್ಕೆ ಹೆಚ್ಚು ಎಫ್‍ಡಿಐ ಹರಿದು ಬಂದಿದೆ. ಹೀಗಾಗಿ ನಮಗೆ ಉತ್ಸಾಹ ಇದೆ. ಇನ್ನೂ ಹಲವು ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ನವೆಂಬರ್ ನಲ್ಲಿ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಇದೆ. ಈ ಬಾರಿ ಕೈಗಾರಿಕೆಗಳ ಸ್ಥಾಪನೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ತೇವೆ. ಅನೇಕ ಒಡಂಬಡಿಕೆಗಳಿಗೆ ಒಪ್ಪಂದ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
ಇದೇ ವೇಳೆ ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲೂ ಇಳಿಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರದಿಂದ ನಿನ್ನೆ ರಾತ್ರಿ ದರ ಇಳಿಕೆ ಆಗಿದೆ. ರಾಜ್ಯದಲ್ಲೂ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.
ಸಿಎಂ ಜೊತೆ ಧರ್ಮಪತ್ನಿ ಚೆನ್ನಮ್ಮ, ಮುರುಗೇಶ್ ನಿರಾಣಿ ಮತ್ತು ನಿರಾಣಿ ಪತ್ನಿ, ನಿರಾಣಿ ಪಿಎ ಶರಣಬಸಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಅವರ ಪಿಎ, ಸಿಎಂ ಒಎಸ್‍ಡಿ ರೋಹನ್ ಬಿರಾದಾರ್ ಹೀಗೆ ಒಟ್ಟು ಮಂದಿ ದಾವೋಸ್‍ಗೆ ಪ್ರಯಾಣ ಬೆಳೆಸಿದ್ದಾರೆ.