ಚಿಕ್ಕಬಳ್ಳಾಪುರ: ಇಲ್ಲಿನ ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿದಿನ ಕೆಲಸ ಕಾರ್ಯಗಳಿಗೆ ಆ ಜಿಲ್ಲೆಯ ಜನ ಅಲ್ಲಿಗೆ ಭೇಟಿ ನೀಡ್ತಾರೆ. ಮತ್ತೊಂದೆಡೆ ಅಲ್ಲಿಯ ಅಧಿಕಾರಿ ಸಿಬ್ಬಂದಿ, ಅಲ್ಲೆ ಕರ್ತವ್ಯ ಮಾಡ್ತಾರೆ. ಇಂಥದರಲ್ಲಿ ಆ ಭವನಕ್ಕೂ ನಾಯಿಗಳಿಗೂ ಅದೇನ್ ನಂಟೊ ಗೊತ್ತಿಲ್ಲ, ಹಿಂಡು ಹಿಂಡು ನಾಯಿಗಳು ಆ ಜಿಲ್ಲಾಡಳಿತ ಭವನವನ್ನೇ ತಮ್ಮ ಆಶ್ರಯ ತಾಣಗಳನ್ನಾಗಿ ಮಾಡಿಕೊಂಡಿವೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಒಂದಲ್ಲ ಎರಡಲ್ಲ 18ಕ್ಕೂ ಹೆಚ್ಚು ನಾಯಿಗಳು ಇವೆ. ಒಂದೊಂದು ನಾಯಿಗಳು ಒಂದೊಂದು ಕಚೇರಿಯನ್ನು ಹಂಚಿಕೊಂಡಂತೆ ಕಂಡು ಬಂದಿದೆ. ಆ ಕಚೇರಿ ಹತ್ತಿರ ಹೊದ್ರೆ, ಅಲ್ಲೊಂದು ಬೌ ಎನ್ನುತ್ತೆ, ಈ ಕಡೆ ಕಚೇರಿಗೆ ಬಂದ್ರೆ ಇಲ್ಲೊಂದು ಬೌ ಬೌ ಎನ್ನುತ್ತೆ, ಇಲ್ಲಿರುವ ನಾಯಿಗಳು ಕೆಲವು ಸಿಬ್ಬಂದಿಗಳಿಗೆ ಅಭ್ಯಾಸವಾಗಿದ್ರೆ. ಕಚೇರಿಗೆ ಬರೊ ಸಾರ್ವಜನಿಕರನ್ನ ಕಂಡ್ರೆ ಬೌ ಬೌ ಮಾಡ್ತಿವೆ.
ಸ್ವತಃ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಯಿಗಳಿಂದ ಎಚ್ಚರಿಕೆಯಿಂದ ಇರುವಂತೆ ಡಿಸಿ ಪಿ.ಎನ್ ರವೀಂದ್ರ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ದಿನದಿಂದ ದಿನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಾಯಿಗಳ ಸಂತತಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅಪಾಯ ಆಗುವ ಮುನ್ನ ಎಚ್ಚರ ವಹಿಸಬೇಕಿದೆ.
ಇದು ಮಂಡಲದ ಹಾವಾಗಿದ್ದು ವಿಷಕಾರಿ ಅಲ್ಲ. ಈ ಹಾವು ಕಚ್ಚಿದರೆ ಜನರು ಸಾಯುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿಗೆ ಹಾವಿನ ಜಾತಿಯ ಬಗ್ಗೆ ರಾಜು ಅರಿವು ಮೂಡಿಸಿದರು.
ಸುಮಾರು ಎರಡು ಅಡಿಯ ಉದ್ದದ ಹಾವು ಇದಾಗಿದ್ದು, ಇದು ಮನೆಯ ಗೋಡೆ ಹಾಗೂ ಸಂದಿಗೊಂದಿಗಳಲ್ಲಿ ಸಂಚರಿಸುತ್ತದೆ. ಅಡಗಿರುವ ಇಲಿಯನ್ನು ಬೇಟೆಯಾಡುತ್ತದೆ. ಆಹಾರ ಅರಸುತ್ತಾ ಡಿಸಿ ಕಚೇರಿಗೆ ಬಂದಿರಬಹುದು ಎಂದು ರಾಜು ಹೇಳಿದರು.
ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ನಡೆಸಿದ್ದು, ಯಶಸ್ವಿಯಾಗಿ ಮುಂದುವರಿದಿದೆ.
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಎದುರೇ ಠಿಕಾಣಿ ಹೂಡಿರುವ ರೈತರು ರಾತ್ರಿಯಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದರೆ, ವಿಜಯಪುರ ರೈತರು ಕರಾಳ ದೀಪಾವಳಿ ಆಚರಿಸುತ್ತಿದ್ದಾರೆ. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರೈತ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಇದನ್ನೂ ಓದಿ: ಇಂದು ಬೆಳಗ್ಗೆ 10:30ಕ್ಕೆ ದರ್ಶನ್ ಜಾಮೀನು ಭವಿಷ್ಯ ಪ್ರಕಟ
ನಗರದ ಗಾಂಧಿಚೌಕ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ ಅಹ್ಮದ್ ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಯೇ ಅಡುಗೆ, ಊಟ ಮಾಡಿ ಅಲ್ಲಿಯೇ ಮಲಗಿ ಅಹೋರಾತ್ರಿ ಅನಿರ್ದಿಷ್ಟ ಹೋರಾಟ ಪ್ರಾರಂಭಿಸಿದ್ದಾರೆ.
ರಾಜ್ಯ ಸರ್ಕಾರ ಕೇವಲ ಯಾವುದೋ ಒಂದು ಆದೇಶ ಪ್ರತಿ ತೋರಿಸಿ ನಮ್ಮನ್ನ ಯಾಮಾರಿಸಲು ಸಾಧ್ಯವಿಲ್ಲ. ಎಲ್ಲಿಯವರೆಗೂ ರೈತರ ಪಹಣಿಯಲ್ಲಿರುವ ವಕ್ಫ್ ಬೋರ್ಡ್ ಹೆಸರು ತೆಗೆದು ಹಾಕುವುದಿಲ್ಲವೋ ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರ ಈ ಹೋರಾಟಕ್ಕೆ ಜಗ್ಗದಿದ್ದರೆ ಶವಸಂಸ್ಕಾರ, ತಿಥಿ ಕಾರ್ಯಕ್ರಮ, ಕತ್ತೆ ಚಳವಳಿ ಸೇರಿದಂತೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಅನ್ನದಾತರ ಪಾಲಿಗೆ ಈ ಬಾರಿ ರಾಜ್ಯ ಸರ್ಕಾರ ಕರಾಳ ದೀಪಾವಳಿಯನ್ನು ಉಡುಗೊರೆಯಾಗಿ ನೀಡಿದೆ. ಇನ್ನೂ ಸ್ಥಳಕ್ಕೆ ಇಂದು (ಅ.30) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡುವಂತೆ ರೈತರು ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ. ಇದು ಅನ್ನದಾತರ ಹೋರಾಟ. ಇದಕ್ಕೆ ಯಾರೇ ಬೆಂಬಲ ನೀಡಿದರು ನಾವು ಸ್ವಾಗತ ಮಾಡುತ್ತೇವೆ ಎಂದು ರೈತರು ಹೇಳಿದ್ದಾರೆ.
ಈ ಹೋರಾಟವನ್ನು ಕೈಬಿಡಲು ರಾತ್ರೋರಾತ್ರಿ ಎಡಿಸಿ ಸೋಮಲಿಂಗ ಗೆಣ್ಣೂರ ಬಂದು ರೈತರಿಗೆ ಇಂಡಿ ಎಸಿ ಆದೇಶದ ಕಾಪಿ ತೋರಿಸಿ ಹೋರಾಟ ಕೈ ಬಿಡಲು ಮನವಿ ಮಾಡಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಸೇರಿದಂತೆ ಪೊಲೀಸ್ ಸಿಬ್ಬಂದಿ ರೈತರಿಗೆ ಹೋರಾಟ ಕೈಬಿಡಲು ಒತ್ತಾಯಿಸಿದರು. ಆದರೆ ರೈತರು ಇದ್ಯಾವುದಕ್ಕೂ ಒಪ್ಪಲಿಲ್ಲ. ಡಿಸಿ ಕಚೇರಿ ಎದುರು ಸ್ಥಳ ಖಾಲಿ ಮಾಡಿ ನಿಮಗೆ ಬೇರೆ ಜಾಗ ಕೊಡುತ್ತೇವೆ ಅಲ್ಲಿ ಹೋರಾಟ ಮುಂದುವರೆಸಿ ಎಂದು ತಿಳಿಸಿದರು. ಪೊಲೀಸ್ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟು, ರೈತರು ಇಂದು (ಬುಧವಾರ) ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 30-10-2024
ಶಿವಮೊಗ್ಗ: ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಕಚೇರಿ (DC Office) ಮೇಲೆ ಆಜಾನ್ (Azan) ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಜಯನಗರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಠಾಣಾ ಜಾಮೀನಿನ ಮೇಲೆ ವಾಪಸ್ ಕಳುಹಿಸಿದ್ದಾರೆ.
ಆಜಾನ್ ಕೂಗಿದ್ದ ಯುವಕನನ್ನು ರಾಗಿಗುಡ್ಡದ ನಿವಾಸಿ ಮೌಸಿನ್ (27) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಪಿಎಫ್‍ಐ ಸದಸ್ಯನಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದ.
ಘಟನೆಯೇನು? : ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೌಸಿನ್ ಶಿವಮೊಗ್ಗದ ಜಿಲ್ಲಾಧಿಕಾರಿಯ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಈ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಯುವಕನಿಗೆ ಬೈದು ಬುದ್ಧಿ ಹೇಳಿದ್ದರು. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ
ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೌಸಿನ್‍ನನ್ನು ಜಯನಗರ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಸಿಆರ್‌ಪಿಸಿ 107 ಅಡಿ ಪ್ರಕರಣ ದಾಖಲಾಸಿದ್ದಾರೆ. ಅದಾದ ಬಳಿಕ ಠಾಣಾ ಜಾಮೀನಿನ ಮೇಲೆ ಮೌಸಿನ್‍ನನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾಕ್ – ತಾಯಿ, ಇಬ್ಬರು ಮಕ್ಕಳು ಸಾವು
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಯುವಕನೊಬ್ಬ ಆಜಾನ್ ಕೂಗಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ (KS Eshwarappa) ಅವಹೇಳನ ಆರೋಪ ಹಿನ್ನೆಲೆಯಲ್ಲಿ ಶುಕ್ರವಾರ ಯುವಕನೊಬ್ಬ ಆಜಾನ್ (Azan) ಕೂಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕ ಆಜಾನ್ ಕೂಗುತ್ತಿದ್ದ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.
ಶಿವಮೊಗ್ಗದ (Shivamogga) ಜಿಲ್ಲಾಧಿಕಾರಿ ಕಚೇರಿ (DC Office) ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿ, ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮುಸ್ಲಿಂ ಯುವಕನೊಬ್ಬ ಉದ್ದಟತನ ಪ್ರದರ್ಶಿಸಿದ್ದಾನೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಯುವಕನೊಬ್ಬ ಆಜಾನ್ ಕೂಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಶಿವಾಜಿ ಪ್ರತಿಮೆಯ ಕಾಂಗ್ರೆಸ್, ಬಿಜೆಪಿ ಕ್ರೆಡಿಟ್ ವಾರ್‌ಗೆ MES ಎಂಟ್ರಿ – ಕ್ಷೀರಾಭಿಷೇಕಕ್ಕೆ ನಿರ್ಧಾರ
ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಪೊಲೀಸರ ತಾಕೀತು ನಡೆಸಿದ್ದಾರೆ. ಈ ವೇಳೆ ಮತ್ತೋರ್ವ ಯುವಕ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾನೆ. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ? ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ ಅಲ್ಲಾಹ ಬಗ್ಗೆ ಮಾತನಾಡಿದ್ದು ಎಂದು ಕಿಡಿಕಾರಿದ್ದಾನೆ.
ಬೆಳಗಾವಿ: ವಿಶ್ವ ಮಹಿಳಾ ದಿನದಂದೇ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ (Suicide Attempt) ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ (DC Office) ನಡೆದಿದೆ.
ಬೆಳಗಾವಿಯ (Belagavi) ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailahongala) ಜನತಾ ಫ್ಲ್ಯಾಟ್ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಮಕ್ಕಳಾದ ಸೃಷ್ಟಿ (14), ಸಾಕ್ಷಿ (8), ಸಾನ್ವಿ (3) ಅವರಿಗೂ ಫಿನಾಯಿಲ್ (Phenyl) ಕುಡಿಸಿದ್ದಾರೆ. ಇದನ್ನೂ ಓದಿ: ಧ್ವನಿಯಿಂದ ಎದುರಿಸಿದ ಟೀಕೆ ಬಗ್ಗೆ ಬಾಯ್ಬಿಟ್ಟ ರಾಣಿ ಮುಖರ್ಜಿ
ಕಳೆದ ಹಲವು ವರ್ಷಗಳಿಂದ ಪತಿ ಅದೃಶ್ಯಪ್ಪ ಹಂಪಣ್ಣವರ ಜೊತೆಗೆ ಬೆಳಗಾವಿಯ ಅನಗೋಳದ ಬಾಡಿಗೆ ಮನೆಯಲ್ಲಿ ಸರಸ್ವತಿ ವಾಸವಿದ್ದರು. ಅನಗೋಳದ ಸಲೂನ್ ಶಾಪ್‌ನಲ್ಲಿ ಅದೃಶ್ಯಪ್ಪ ಹಂಪಣ್ಣವರ ಕೆಲಸ ಮಾಡುತ್ತಿದ್ದರು. ಕೈತುಂಬ ಸಾಲ ಮಾಡಿ 15 ದಿನಗಳ ಹಿಂದೆಯೇ ಪತ್ನಿ ಹಾಗೂ ತನ್ನ ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಅದೃಶ್ಯಪ್ಪ ಹೋಗಿದ್ದರು. ಇದನ್ನೂ ಓದಿ: ಬಿಜೆಪಿಯಿಂದ ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ: ಬಿಎಸ್‌ವೈ
ತುತ್ತು ಅನ್ನಕ್ಕೂ ಗತಿಯಿಲ್ಲದೇ ಸರಸ್ವತಿ ತನ್ನ ಮಕ್ಕಳ ಜೊತೆಗೆ ಜಿಲ್ಲಾಧಿಕಾರಿ ಭೇಟಿಗಾಗಿ ಡಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಮಹಿಳೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ವಿಚಾರಿಸಿದ್ದಾರೆ. ಆಗ ಜ್ಯೂಸ್ ಎಂದು ನನ್ನ ತಾಯಿ ಏನೋ ಕುಡಿಸಿದ್ದಾಳೆಂದು ಸಿಬ್ಬಂದಿ ಎದುರು ಹಿರಿಯ ಪುತ್ರಿ ಸೃಷ್ಟಿ ಹೇಳಿದ್ದಾಳೆ. ಬಳಿಕ ಸರಸ್ವತಿ ಹಾಗೂ ಮೂವರು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ತಕ್ಷಣ ಅಲರ್ಟ್ ಆದ ಡಿಸಿ ಕಚೇರಿ ಸಿಬ್ಬಂದಿಗಳು ಡಿಸಿ ಕಚೇರಿ ಬಳಿಯ ಪೊಲೀಸರ ನೆರವು ಪಡೆದು ಜಿಲ್ಲಾಸ್ಪತ್ರೆಗೆ ಅಸ್ವಸ್ಥರನ್ನು ಶಿಫ್ಟ್ ಮಾಡಿದ್ದಾರೆ. ಸದ್ಯ ಸರಸ್ವತಿ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಮುಂದುವರೆಸಲಾಗಿದೆ. ಇದನ್ನೂ ಓದಿ: ನಡುಬೀದಿಯಲ್ಲಿಯೇ ಹೊಡೆದಾಡಿಕೊಂಡ ಯುವತಿಯರು!
ರೈತರಿಗೆ 5,500 ರೂ. ದರ ನಿಗದಿ ಸೇರಿದಂತೆ ಇತರ ಬೇಡಿಕೆ ಈಡೇರಿಸುವಂತೆ ನಿನ್ನೆ ಡಿಸಿಗೆ ರೈತರು ಮನವಿ ಮಾಡಿದ್ದರು. ಆದರೆ ಡಿಸಿ ನಿತೇಶ್ ಪಾಟೀಲ್ ನಡೆಸಿದ ಸಂಧಾನ ವಿಫಲ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಸ್ಥಳಕ್ಕೆ ಸಕ್ಕರೆ ಸಚಿವರು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ:ಬೆಂಗಳೂರಿನಲ್ಲಿ ಧಾರಾಕಾರ ಮಳೆ – ಇಂದು, ನಾಳೆ ಯೆಲ್ಲೋ ಅಲರ್ಟ್
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶಹೊರಹಾಕಿದ್ದಾರೆ.
ಬೆಳಗಾವಿ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನಿಲಜಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ
ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದರೆ ಇದ್ಯಾವುದನ್ನು ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದಲ್ಲದೇ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲವಾಗಿತ್ತು. ಇದರಿಂದಾಗಿ ಏಣಗಿ ಗ್ರಾಮಸ್ಥರು ಅಬ್ದುಲ್ ಖಾದರ್ ಮಿಶ್ರಿಕೋಟಿ (65) ಮೃತದೇಹವನ್ನು ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೃತರ ಸಂಬಂಧಿ ಇಬ್ರಾಹಿಂ ನೇತೃತ್ವದಲ್ಲಿ ಗ್ರಾಮಸ್ಥರಿಂದ ಈ ಪ್ರತಿಭಟನೆ ನಡೆದಿದ್ದು, ಸ್ಮಶಾನಕ್ಕೆ ಹಾದಿ ಕೊಡದ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ, ಮುಸ್ಲಿಂ ಎರಡೂ ಸಮುದಾಯದ ಸ್ಮಶಾನಗಳಿಗೆ ತೆರಳಲು ಹಾದಿ ಇಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಬೆಳಗಾವಿ ಡಿಸಿ ಕಚೇರಿಗೆ ಮೃತದೇಹ ತಂದು ಪ್ರತಿಭಟನೆ ಮಾಡುತ್ತಿದ್ದೇವೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಇಲ್ಲೇ ಸಮಾಧಿ ಮಾಡುತ್ತೇವೆ ಎಂದು ಸಂಬಂಧಿಕರು, ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಬೆಳಗಾವಿ ಡಿಸಿ ಕಚೇರಿ ಎದುರು ಮೃತದೇಹವಿಟ್ಟು ಗ್ರಾಮಸ್ಥರ ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಂದ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದ್ದಾರೆ. ಆದರೂ ಇದಕ್ಕೆ ಕರಗದೇ ಸ್ಮಶಾನಕ್ಕೆ ದಾರಿ ಮಾಡಿಕೊಡುವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಮಾರ್ಕೆಟ್ ಠಾಣೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಸಿಸಿಬಿ ಸಿಪಿಐ ನಿಂಗನಗೌಡ ಪಾಟೀಲ್ ಇದ್ದರು. ಇದನ್ನೂ ಓದಿ: ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಕೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳ ಕಳಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದ ಎಡಿಸಿ ಭರವಸೆ ನೀಡಿದ್ದಾರೆ. ಜೆಸಿಬಿ ದಾರಿ ಹೋಗುವಷ್ಟು ರಸ್ತೆ ಮಾಡಿಸಿ ಕೊಡಿ ತೆರಳುತ್ತೇವೆ ಎಂದ ಗ್ರಾಮಸ್ಥರು ತಿಳಿಸಿದರು. ಆ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು. ಇದನ್ನೂ ಓದಿ: ಜುಲೈ 1ರಿಂದ ಕಬ್ಬನ್ ಪಾರ್ಕ್‍ನಲ್ಲಿ ನಾಯಿಗಳಿಗೆ ನಿಷೇಧ
ಬೆಳಗಾವಿ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಮರುಪರಿಷ್ಕರಣಾ ಸಮಿತಿಯನ್ನು ವಜಾ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಡಿಸಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ನಗರದ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ಮಾಡಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸರ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರರು ಧಿಕ್ಕಾರ ಕೂಗಿದರು. ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ರೋಹಿತ್ ಚಕ್ರತೀರ್ಥ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್
ಈ ಕುರಿತು ಮಾತನಾಡಿದ ಕನ್ನಡ ಸಂಘಟನೆ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ಹಿಂದಿನ ವರ್ಷದ ಪಠ್ಯವನ್ನೇ ಮಕ್ಕಳಿಗೆ ವಿತರಿಸಬೇಕು. ಪ್ರೋ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಪಠ್ಯಪುಸ್ತಕ ತರಾತುರಿಯಲ್ಲಿ ಮರು ಪರಿಷ್ಕರಣೆ ಮಾಡಲಾಗುತ್ತಿದೆ. ಭಾಷಾ ಪಠ್ಯ ಮತ್ತು ಸಮಾಜ ವಿಜ್ಞಾನ ಪಠ್ಯಗಳಲ್ಲಿ ಖಂಡನಾರ್ಹ ಬದಲಾವಣೆ ಮಾಡಿರುವ ಆರೋಪ ಕೇಳಿಬಂದಿದೆ ಎಂದರು. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್
ಮರು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲು ಸರ್ಕಾರ ಹೊರಟಿದೆ. ಇದರಿಂದ ಲಕ್ಷಾಂತರ ಮಕ್ಕಳ ಭವಿಷ್ಯ, ಶಿಕ್ಷಣ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಸರ್ಕಾರ ಮೊಂಡುತನಕ್ಕೆ ಬಿದ್ದರೆ ತಕ್ಕ ಪಾಠ ಕಲಿಸುತ್ತೇವೆ. ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಮಾಡದೇ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪರಿಷ್ಕರಣಾ ಸಮಿತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.