Tag: DC

  • ದೇಶದಲ್ಲಿ ಪ್ರತಿ ಗಂಟೆಗೆ 2,403 ಮಕ್ಕಳ ಜನನ, ಜನಸಂಖ್ಯಾ ಸ್ಫೋಟದ ಬಗ್ಗೆ ಜಾಗೃತಿ ಅಗತ್ಯ: ಹಾವೇರಿ ಡಿಸಿ

    ದೇಶದಲ್ಲಿ ಪ್ರತಿ ಗಂಟೆಗೆ 2,403 ಮಕ್ಕಳ ಜನನ, ಜನಸಂಖ್ಯಾ ಸ್ಫೋಟದ ಬಗ್ಗೆ ಜಾಗೃತಿ ಅಗತ್ಯ: ಹಾವೇರಿ ಡಿಸಿ

    ಹಾವೇರಿ: ಜನಸಂಖ್ಯಾ ಸ್ಫೋಟದಿಂದ ಉಂಟಾಗುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ಹೇಳಿದರು.

    ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಪೂರ್ವಭಾವಿಯಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಚಾರ ವಾಹನಕ್ಕೆ ಚಾಲನೆ ನೀಡಿ, ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ಮಾತನಾಡಿದರು.

    ದೇಶದಲ್ಲಿ ಪ್ರತಿ ನಿಮಿಷಕ್ಕೆ ಸರಾಸರಿ 40, ಪ್ರತಿ ಗಂಟೆಗೆ 2,403, ಪ್ರತಿ ದಿನಕ್ಕೆ 57,685 ಹಾಗೂ ಪ್ರತಿ ತಿಂಗಳು 13,84,457 ಮಕ್ಕಳ ಜನನವಾಗುತ್ತದೆ. ಜನಸಂಖ್ಯಾ ಸ್ಫೋಟದಿಂದ ಆಹಾರ, ನೀರು, ಬಟ್ಟೆ, ವಸತಿ ಹಾಗೂ ಖಜನಿಗಳ ಕೊರತೆ ಉಂಟಾಗುವುದರ ಜೊತೆಗೆ ಶಿಕ್ಷಣ, ಆರೋಗ್ಯ ಸೇವೆಗಳು ಇತರೆ ಸಂಪನ್ಮೂಲಗಳ ಕೊರತೆಯು ಉಂಟಾಗುತ್ತದೆ. ವಾಯು, ಜಲ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುವುದರ ಜೊತೆಗೆ ಸಾಮಾಜಿಕ ಅಸಮಾನತೆ ತಲೆದೊರುತ್ತದೆ ಎಂದರು.

    ಜನಸಂಖ್ಯಾ ಹತೋಟಿಗೆ ಮುಂಜಾಗ್ರತಾ ಕ್ರಮವಾಗಿ ಯುವಕರಿಗೆ 21 ವರ್ಷ ಹಾಗೂ ಯುವತಿಯರಿಗೆ 18 ವರ್ಷದ ನಂತರ ಮದುವೆ ಮಾಡಬೇಕು. ವಿವಾಹದ ನಂತರ ದಂಪತಿ ಕುಟುಂಬ ಕಲ್ಯಾಣದ ವಿಧಾನಗಳನ್ನು ಅನುನಸರಿಸಿಕೊಂಡು ಚಿಕ್ಕ ಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಇತರರು ಉಪಸ್ಥಿತರಿದ್ದರು.

  • ಕೊಡಗಿನಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ಮುಂದುವರಿಕೆ ಸುಳಿವು ನೀಡಿದ ಡಿಸಿ

    ಕೊಡಗಿನಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ಮುಂದುವರಿಕೆ ಸುಳಿವು ನೀಡಿದ ಡಿಸಿ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ ದಿನದಿಂದ ದಿನಕ್ಕೆ ಕಣ್ಣಾಮುಚ್ಚಾಲೆ ಆಟ ಮುಂದುವರಿದಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗುವವರೆಗೂ ಜಿಲ್ಲೆಯನ್ನು ಅನ್‍ಲಾಕ್ ಮಾಡುವುದು ಬೇಡ ಎಂದು ಕೊಡಗಿನ ಇಬ್ಬರು ಶಾಸಕರು ಹೇಳಿದ ಬೆನ್ನಲ್ಲೇ ಇದೀಗ ಮತ್ತೆ ಒಂದು ವಾರ ಲಾಕ್‍ಡೌನ್ ಮುಂದುವರಿಯುವ ಸಾಧ್ಯತೆ ಇದೆ ಎಂದು ಕೊಡಗಿನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸುಳಿವು ನೀಡಿದ್ದಾರೆ.

    ಮಡಿಕೇರಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಒಂದು ವಾರದ ಪಾಸಿಟಿವ್ ರೇಟ್ ನೋಡಿದರೆ ಶೇ.6.5 ಇದೆ. ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಟೆಸ್ಟಿಂಗ್ ಪ್ರಮಾಣ ಹೆಚ್ಚು ಮಾಡಿರುವುದರಿಂದ ಸೋಂಕಿತರ ಪ್ರಮಾಣದಲ್ಲಿ ಏರುಪೇರು ಅಗುತ್ತಿದೆ. ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಆಂತರಿಕವಾಗಿ ಚರ್ಚಿಸಿರುವಂತೆ ಲಾಕ್‍ಡೌನ್ ಮುಂದುವರಿಸುತ್ತೇವೆ ಎಂದು ಸುಳಿವು ನೀಡಿದ್ದಾರೆ. ಇದನ್ನೂ ಓದಿ : ಜೋಕಾಲಿ ತಂದ ಆಪತ್ತು- ಎರಡು ಎಳೆಯ ಜೀವಗಳಿಗೆ ಕುತ್ತು

    ಮೂಲಗಳ ಪ್ರಕಾರ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ಮುಂದುವರಿಯುವ ಸಾಧ್ಯತೆ ಇದ್ದು, ವಾರದ ಮೂರು ದಿನಗಳಾದ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಗ್ಗೆ 6 ರಿಂದ 4 ಗಂಟೆಯ ವರೆಗೆ ಕಾಲಾವಕಾಶ ವಿಸ್ತರಣೆ ಅಗುವ ಸಾಧ್ಯತೆ ಇದೆ. ಇಂದು ಸಂಜೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯುವ ಅನ್‍ಲಾಕ್ ಸಭೆಯ ಬಳಿಕ ಕೊಡಗು ಜಿಲ್ಲೆಗೆ ಲಾಕ್‍ಡೌನ್ ಮುಂದುವರಿಯುತ್ತಾ ಅಥವಾ ಅನ್‍ಲಾಕ್ ಮಾಡುತ್ತಾರಾ..? ಎಂಬ ನಿರ್ಧಾರ ಹೊರಬರಲಿದೆ.

  • ದಕ್ಷಿಣ ಕನ್ನಡದಲ್ಲಿ ಮತ್ತಷ್ಟು ಅನ್‍ಲಾಕ್- ವೀಕೆಂಡ್ ಕರ್ಫ್ಯೂ ಮುಂದುವರಿಕೆ

    ದಕ್ಷಿಣ ಕನ್ನಡದಲ್ಲಿ ಮತ್ತಷ್ಟು ಅನ್‍ಲಾಕ್- ವೀಕೆಂಡ್ ಕರ್ಫ್ಯೂ ಮುಂದುವರಿಕೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಮತ್ತಷ್ಟು ಅನ್‍ಲಾಕ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯಾದ್ಯಂತ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಿದ್ದು, ಬಸ್ ಸಂಚಾರ ಸೇರಿ ಎಲ್ಲ ಚಟುವಟಿಕೆಗಳಿಗೆ ಸಂಜೆ 5ರವರೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

    ಅನ್‍ಲಾಕ್ ಇದ್ದರೂ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಎಂದಿನಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಬಾರಿಯ ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿದೆ ಅವಕಾಶ ಇದ್ದು, ಹಾಲು, ತರಕಾರಿ, ಮೀನು, ಮಾಂಸ ಮತ್ತು ದಿನಸಿ ಖರೀದಿಗಷ್ಟೇ ವಾರಾಂತ್ಯ ಅವಕಾಶವಿದೆ.

    ವೀಕೆಂಡ್ ವೇಳೆ ಅಗತ್ಯ ವಸ್ತು ಹೊರತುಪಡಿಸಿ ಯಾವುದೇ ಅಂಗಡಿ ತೆರೆಯಲು ಹಾಗೂ ಬಸ್ ಸಂಚಾರಕ್ಕೂ ಅವಕಾಶ ಇಲ್ಲ. ಈ ಹೊಸ ಆದೇಶ ಜುಲೈ 5ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

  • ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷ ಪ್ರವೇಶಾತಿ ಇಲ್ಲ: ಯಾದಗಿರಿ ಡಿಸಿ

    ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷ ಪ್ರವೇಶಾತಿ ಇಲ್ಲ: ಯಾದಗಿರಿ ಡಿಸಿ

    ಯಾದಗಿರಿ: 18 ವರ್ಷ ಮೇಲ್ಪಟ್ಟ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯಲೇಬೇಕು. ಇಲ್ಲವಾದರೆ ಮುಂದಿನ ವರ್ಷಕ್ಕೆ ಪ್ರವೇಶಾತಿ ನೀಡಬೇಡಿ ಎಂದು ಕಾಲೇಜುಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ.ಆರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಈ ಬಗ್ಗೆ ಜಿಲ್ಲಾಡಳಿತ ಭವನದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ 21,342 ವಿದ್ಯಾರ್ಥಿಗಳು, 1,153 ಬೋಧಕ, 505 ಬೋಧಕೇತರ ಸಿಬ್ಬಂದಿ ಇದ್ದು, ಪ್ರತಿ ಕಾಲೇಜಿನಲ್ಲಿ ಶೇಕಡಾ ನೂರರಷ್ಟು ಲಸಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗೆ ವಾಟ್ಸಪ್ ಸೇರಿದಂತೆ ಇನ್ನಿತರ ವಿಧಾನದಿಂದ ಸಂಪರ್ಕಿಸಿ ಲಸಿಕೆ ಪಡೆಯಲು ತಿಳಿಸಿಬೇಕು ಎಂದು ಕಾಲೇಜು ಆಡಳಿತ ಮಂಡಳಿಗಳಿಗೆ ಡಿಸಿ ತಿಳಿಸಿದ್ದಾರೆ.

    ಮುಂದಿನ ಮೂರು ದಿನದೊಳಗೆ ಲಸಿಕಾರಣದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಲು ನೆರವಾಗಬೇಕು. ಈ ಹಿಂದೆ ಶಿಕ್ಷಣ ಇಲಾಖೆಯವರು ಹಲವಾರು ಬಾರಿ ನಮಗೆ ನೆರವಾಗಿದ್ದು, ಅದೇ ರೀತಿಯಾಗಿ ಲಸಿಕಕಾರಣದಲ್ಲಿಯೂ ಸಹ ಸಹಕರಿಸಬೇಕು. ಹಳ್ಳಿಯ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಸಾರಿಗೆ ವ್ಯವಸ್ಥೆಯನ್ನು ಸಹ ಆಯಾ ತಾಲೂಕು ತಹಶೀಲ್ದಾರ್ ಮೂಲಕ ಜಿಲ್ಲಾಡಳಿತದ ವತಿಯಿಂದ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ.ಆರ್ ಇದೇ ವೇಳೆ ಭರವಸೆ ನೀಡಿದರು.

  • ಕೊನೆಗೂ ಎಚ್ಚೆತ್ತ ದ.ಕ ಜಿಲ್ಲಾಡಳಿತ- ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಕೊನೆಗೂ ಎಚ್ಚೆತ್ತ ದ.ಕ ಜಿಲ್ಲಾಡಳಿತ- ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಮಂಗಳೂರು: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ.

    ಗಡಿಯಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಯು.ಟಿ.ಖಾದರ್

    ಗಡಿ ದಾಟಿ ಬರುವ ಕೇರಳದವರು ಆರ್ ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನೆಗೆಟಿವ್ ರಿಪೋರ್ಟ್ ತರದವರಿಗೆ ಗಡಿಯಲ್ಲೇ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಮೆಡಿಕಲ್ ಅಗತ್ಯಕ್ಕೆ ಮಂಗಳೂರಿಗೆ ಬರೋರು ಆಸ್ಪತ್ರೆಗಳಲ್ಲಿ ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

  • ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಡಿ.ರೂಪ ಮತ್ತೆ ಅಸಮಾಧಾನ

    ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಡಿ.ರೂಪ ಮತ್ತೆ ಅಸಮಾಧಾನ

    ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಕಾರ್ಯವೈಖರಿಯ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ಇದೀಗ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೂಪ ಸಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಮೈಸೂರಿನಲ್ಲಿ ಡಿಸಿಯಾಗಿದ್ದ ಸಮಯದಲ್ಲಿ ಮಾಡಿದ ಕೆಲಸದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

    ಕೊರೊನಾದಿಂದ ರಾಜ್ಯದ, ಜಿಲ್ಲೆಯ ಜನರು ಸಂಕಷ್ಟದಲ್ಲಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿದ್ದ ಅಂದಿನ ಮೈಸೂರು ಡಿಸಿ ರೋಹಿಣಿ ಸಿಂಧೂರಿಯ ಪೂಲ್ ವಿವಾದ ರಾಜ್ಯ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಈ ಮೂಲಕ ರೋಹಿಣಿ ಸರ್ಕಾರದ ಹಾಗೂ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿ ಡಿಸಿ ಅವಧಿ ಮುಗಿಯುವುದಕ್ಕೆ ಮೊದಲೇ ಮೈಸೂರಿನಿಂದ ವರ್ಗಾವಣೆ ಆದರು. ಈ ಮಧ್ಯೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ರೋಹಿಣಿ ಸಿಂಧೂರಿ ಕಾರ್ಯವೈಖರಿ ಹಾಗೂ ಭೂಗಳ್ಳರ ವಿರುದ್ಧ ಸಮರ ಸಾರಿದ ದಾಟಿಯ ಬಗ್ಗೆ ಅಸಮಾಧಾನ ವ್ಯಕ್ತಡಿಸಿ ಸಾಮಾಜಿಕ ಜಾಲಾತಾಣದಲ್ಲಿ ನಿತ್ಯ ಬರೆದು ಪೋಸ್ಟ್ ಮಾಡುವ ಮೂಲಕ ರೋಹಿಣಿ ಸಿಂಧೂರಿಯ ಪೂಲ್ ವಿವಾದಕ್ಕೆ ಮರು ಜೀವ ಕೊಡುತ್ತಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ಸ್ವಿಮ್ಮಿಂಗ್ ಪೂಲ್ ವಿವಾದ – ಟ್ವಿಟ್ಟರ್‌ನಲ್ಲಿ ತಿವಿದ ಐಜಿಪಿ ರೂಪಾ

    ಪೋಸ್ಟ್ ನಲ್ಲಿ ಏನಿದೆ?:
    ಮೈಸೂರಿನ ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಹತ್ತು ತಿಂಗಳ ಅವಧಿಯಲ್ಲಿ ಒಂದು ಇಂಚು ಭೂಮಿಯನ್ನು ಕೂಡ ಭೂ ಮಾಫಿಯದಿಂದ ಪಡೆದುಕೊಳ್ಳಲಿಲ್ಲ. ಒತ್ತುವರಿ ಮಾಡಿದ್ದ ಭೂಗಳ್ಳರ ವಿರುದ್ಧ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಿಲ್ಲ. ಮೈಸೂರಿನಲ್ಲಿ ಆಗಿದ್ದಂತಹ ಭೂ ಮಾಫಿಯದ ವಿಚಾರದಲ್ಲಿ ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಏನೂ ಮಾಡಲಿಲ್ಲ. ರೋಹಿಣಿ ಸಿಂಧೂರಿ ತೋಳ ಬಂತು ತೋಳ ಕಥೆ ಹೇಳಿಕೊಂಡು ಕಾಲ ಕಳೆದ್ರೆ ವಿನಃ ತೋಳ ಹಿಡಿಯುವ ಕೆಲಸ ಆಗಲೇ ಇಲ್ಲ. ಸ್ವಿಮ್ಮಿಂಗ್ ಪೂಲ್ ವಿಚಾರ ಸಣ್ಣದಾಗಿದ್ರು ಅದನ್ನು ಮಾಡಲು ಅನುಮತಿ ಪಡೆದಿಲ್ಲಾ ಅನ್ನೋದು ರೀಜನಲ್ ಕಮೀಷನರ್ ವರದಿಯಲ್ಲಿ ಬಹಿರಂಗವಾಗಿದೆ. ಅಕ್ರಮ ಯಾರೇ ಮಾಡಿದರು ಅಕ್ರಮನೇ ಭೂಮಾಫಿಯಾ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇನ್ನು ಕ್ರಮ ಆಗಿಲ್ಲ ಆಗಬೇಕು ಎಂದು ಒತ್ತಾಯಿಸಿದ್ದಾರೆ.

  • ಕೋಲಾರದ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಒತ್ತು ಕೊಡಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

    ಕೋಲಾರದ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಒತ್ತು ಕೊಡಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

    ಕೋಲಾರ: ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ಹೆಚ್ಚು ಅಪಘಾತ ಸಂಭವಿಸುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‍ಎಚ್‍ಎಐ) ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕೋಲಾರದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಡಾ.ಸೆಲ್ವಮಣಿ ಅವರು, ವಾಹನ ಸವಾರರ ಜೀವ ಮುಖ್ಯ. ಹೆದ್ದಾರಿಯಲ್ಲಿ ವಾಹನಗಳ ವೇಗ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಿ ಮತ್ತು ರಸ್ತೆ ಉಬ್ಬು ನಿರ್ಮಿಸಿ. ಜೊತೆಗೆ ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಚನಾ ಫಲಕಗಳನ್ನು ಅಳವಡಿಸಿ. ಹೆದ್ದಾರಿಯಲ್ಲಿ ಹೆಚ್ಚು ಅಪಘಾತ ಸಂಭವಿಸುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ದೂರುಗಳನ್ನು ಆಧರಿಸಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ. ಆ ಸ್ಥಳಗಳಲ್ಲಿ ಅಪಘಾತ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಿ. ರಸ್ತೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಿ. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:ನಾಡಿನತ್ತ ಹೆಜ್ಜೆ ಹಾಕುತ್ತಿರುವ ಜಿಂಕೆ, ಕೃಷ್ಣಮೃಗಗಳು – ನಾಯಿ ದಾಳಿಗೆ ಸಾವು

    ಅಪಘಾತಗಳಿಂದ ಹೆಚ್ಚು ಸಾವು ನೋವು ಸಂಭವಿಸುತ್ತಿವೆ. ಹಳ್ಳಿಯ ಜನರು ಜಾನುವಾರು ಹಿಡಿದುಕೊಂಡು ಹೆದ್ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗುತ್ತಾರೆ. ಅಂತಹ ಕಡೆ ಕೆಳ ಸೇತುವೆ (ಅಂಡರ್ ಪಾಸ್) ನಿರ್ಮಾಣ ಮಾಡಿ. ಹೆದ್ದಾರಿಯಿಂದ ಹಳ್ಳಿಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಜಾಗಗಳಲ್ಲಿ ಸಿಗ್ನಲ್ ಅಳವಡಿಸಿ. ಜಿಲ್ಲಾ ಕೇಂದ್ರದ ಹೊರವಲಯದ ಕೊಂಡರಾಜನಹಳ್ಳಿ ಬೈಪಾಸ್ ರಸ್ತೆಯಲ್ಲಿ ಹಾಗೂ ನಗರದ ಹಲವೆಡೆ ವ್ಯಾಪಾರಿಗಳು ಸರ್ವಿಸ್ ರಸ್ತೆ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ಇಟ್ಟಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಮತ್ತು ಜನರ ಓಡಾಟಕ್ಕೆ ಸಮಸ್ಯೆಯಾಗಿ ಅಪಘಾತ ಸಂಭವಿಸುತ್ತಿವೆ. ಶೀಘ್ರವೇ ಆ ಅಂಗಡಿಗಳನ್ನು ತೆರವು ಮಾಡಿ ಎಂದು ಆದೇಶಿಸಿದರು.

    ಕಾಮಗಾರಿ ಪೂರ್ಣಗೊಳಿಸಿ:
    ಜಿಲ್ಲಾಡಳಿತ ಭವನದ ಮುಂದೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಮೇಲ್ಸೇತುವೆ ಹಾಗೂ ಹೆದ್ದಾರಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಅಗತ್ಯವಿರುವ ಕಡೆ ಸರ್ವಿಸ್ ರಸ್ತೆ ನಿರ್ಮಾಣ ಮಾಡಬೇಕು. ಜಿಲ್ಲೆಯಾದ್ಯಂತ ಅತಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ. ಆ ಸ್ಥಳಗಳಲ್ಲಿ ನಿಧಾನವಾಗಿ ಚಲಿಸುವಂತೆ ವಾಹನ ಸವಾರರಿಗೆ ಮಾಹಿತಿ ನೀಡಲು ಸೂಚನಾ ಫಲಕ ಹಾಕಬೇಕು. ಮಡೇರಹಳ್ಳಿಯು ಹೆಚ್ಚು ಅಪಘಾತ ಸಂಭವಿಸುವ ಸ್ಥಳವಾಗಿದ್ದು, ಅಲ್ಲಿ ವೈಜ್ಞಾನಿಕವಾಗಿ ರಸ್ತೆ ಉಬ್ಬು ನಿರ್ಮಿಸಿ. ಅರಾಭಿಕೊತ್ತನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಅಂಡರ್‍ಪಾಸ್‍ನಲ್ಲಿ ಮಳೆ ನೀರು ನಿಲ್ಲುತ್ತಿರುವ ಬಗ್ಗೆ ದೂರು ಬಂದಿದೆ. ವಿದ್ಯುತ್ ದೀಪ ಅಳವಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮಳೆ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಅಪಘಾತ ಪ್ರಕರಣಗಳ ಗಾಯಾಳುಗಳ ಚಿಕಿತ್ಸೆಗೆ ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

    ವಾಹನ ಜಪ್ತಿ ಮಾಡಿ:
    ಸರಕು ಸಾಗಣೆ ವಾಹನಗಳಲ್ಲಿ ನಿಯಮಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಸರಕು ಸಾಗಣೆ ವಾಹನಗಳ ಚಾಲಕರು ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಪ್ರಯಾಣಿಕರನ್ನು ಕರೆದೊಯ್ಯುವ ಸರಕು ಸಾಗಣೆ ವಾಹನಗಳನ್ನು ಜಪ್ತಿ ಮಾಡಿ ಎಂದು ಪೊಲೀಸರಿಗೆ ಸೂಚಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು, ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್,ಆರ್‍ಟಿಒ ಸಿಬ್ಬಂದಿ ಹಾಜರಿದ್ದರು.

  • ಒಂದೇ ತನಿಖೆಗೆ ಎರಡು ರೀತಿ ತನಿಖಾ ವರದಿ ಬರೆದ ಮೈಸೂರು ಪ್ರಾದೇಶಿಕ ಆಯುಕ್ತ

    ಒಂದೇ ತನಿಖೆಗೆ ಎರಡು ರೀತಿ ತನಿಖಾ ವರದಿ ಬರೆದ ಮೈಸೂರು ಪ್ರಾದೇಶಿಕ ಆಯುಕ್ತ

    – ಆಯುಕ್ತರ ತನಿಖೆ ಬಗ್ಗೆಯೆ ಈಗ ಅನುಮಾನ

    ಮೈಸೂರು: ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿ ಅಧಿಕೃತ ಸರ್ಕಾರಿ ನಿವಾಸದ ಆವರಣದಲ್ಲಿ ನಿರ್ಮಿಸಿದ್ದ ಈಜುಕೊಳ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ವಿವಾದದ ತನಿಖೆಗೆ ಸರ್ಕಾರ ಆದೇಶಿಸಿತ್ತು. ಈಗ ತನಿಖಾ ವರದಿ ಬಂದಿದೆ. ಆದರೆ ಈ ತನಿಖಾ ವರದಿಯೂ ವಿವಾದಕ್ಕೆ ಒಳಗಾಗಿದೆ.

    ಕಾರಣ ಒಂದೇ ದಿನದಲ್ಲಿ ಈ ತನಿಖಾ ವರದಿಯ ಅಂಶಗಳು ಬದಲಾಗಿವೆ. ಒಂದೇ ದಿನದಲ್ಲಿ ಎರಡು ರೀತಿಯ ತನಿಖಾ ರಿಪೋರ್ಟ್ ಅನ್ನು ಮೈಸೂರು ಪ್ರಾದೇಶಿಕ ಆಯುಕ್ತರು ಬರೆದಿದ್ದಾರೆ. ಈಜುಕೊಳದ ತನಿಖೆಯ ಜವಾಬ್ದಾರಿ ಹೊತ್ತಿದ್ದ ಪ್ರಾದೇಶಿಕ ಆಯುಕ್ತರು, ಈಜುಕೊಳ ನಿರ್ಮಾಣದ ತನಿಖೆ ವಿಚಾರದಲ್ಲಿ ಒಂದೇ ದಿನದಲ್ಲಿ ಎರಡು ತನಿಖಾ ವರದಿ ಬರೆದಿರೋದು ಈಗ ಬೆಳಕಿಗೆ ಬಂದಿದೆ. ಮೊದಲ ವರದಿಯಲ್ಲಿ ಒಟ್ಟು 6 ನ್ಯೂನತೆ ನಮೂದು ಮಾಡಲಾಗಿತ್ತು. ಸರ್ಕಾರಕ್ಕೆ ಸಲ್ಲಿಕೆಯಾದ ಎರಡನೇ ವರದಿಯಲ್ಲಿ ಕೇವಲ ಎರಡೇ ನ್ಯೂನತೆ ನಮೂದಾಗಿರೋದು ಅಚ್ಚರಿಗೆ ಕಾರಣವಾಗಿದೆ. ಮೊದಲ ವರದಿಯಲ್ಲಿ ಪ್ರಮುಖವಾಗಿ ಈಜುಕೊಳದ ನಿರ್ಮಾಣಕ್ಕೆ ತಯಾರಾಗಿದ್ದ 32 ಲಕ್ಷ ರೂ ಅಂದಾಜುಪಟ್ಟಿಗೆ ಲೋಕೋಪಯೋಗಿ ಇಲಾಖೆ ಅನುಮೋದನೆ ಪಡೆದಿಲ್ಲ ಹಾಗೂ ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳಿಲ್ಲ ಎಂದು ನಮೂದು ಮಾಡಲಾಗಿತ್ತು. ಆದರೆ, ಎರಡನೇ ತನಿಖಾ ವರದಿಯಲ್ಲಿ ಪ್ರಮುಖವಾದ ಈ ಎರಡು ಅಂಶ ದಿಢೀರ್ ಎಂದು ಕೈ ಬಿಟ್ಟಿದ್ದಾರೆ. ಇದನ್ನೂ ಓದಿ: ನಿಯಮಗಳನ್ನು ಗಾಳಿಗೆ ತೂರಿ ಈಜುಕೊಳ ನಿರ್ಮಿಸಿದ್ರು ರೋಹಿಣಿ ಸಿಂಧೂರಿ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

    ಪ್ರಾದೇಶಿಕ ಆಯುಕ್ತರು ಕೊಟ್ಟ ಮೊದಲ ವರದಿಯಲ್ಲಿ ಈಜುಕೊಳ ನಿರ್ಮಾಣದಲ್ಲಿ ಆಗಿರೋ ಆರ್ಥಿಕ ವಿಚಾರ ಗೌಪ್ಯವಾಗಿರೋದೆ ಪ್ರಮುಖ ಲೋಪ ಎಂದು ಪರೋಕ್ಷವಾಗಿ ನಮೂದಾಗಿತ್ತು. ಆದರೆ ಇದೇ ಅಂಶವನ್ನೇ ಕೈಬಿಟ್ಟು ದಿಢೀರ್ ಎರಡನೇ ಎಡಿಟೆಡ್ ವರದಿ ಕೊಡಲಾಗಿದೆ. ಹಾಗಾದರೆ ಪ್ರಾದೇಶಿಕ ಆಯುಕ್ತರು ಸರ್ಕಾರವನ್ನೇ ಯಾಮಾರಿಸಿದ್ರು ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಬಗ್ಗೆಯೆ ಅನುಮಾನಗಳು ಸೃಷ್ಟಿಯಾಗಿದೆ.

  • ದಕ್ಷಿಣ ಕನ್ನಡದಲ್ಲಿ ಜು.5ರವರೆಗೆ ಲಾಕ್‍ಡೌನ್ ವಿಸ್ತರಣೆ- ಡಿಸಿ ಆದೇಶ

    ದಕ್ಷಿಣ ಕನ್ನಡದಲ್ಲಿ ಜು.5ರವರೆಗೆ ಲಾಕ್‍ಡೌನ್ ವಿಸ್ತರಣೆ- ಡಿಸಿ ಆದೇಶ

    – ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರವರೆಗೂ ಲಾಕ್‍ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

    ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಅನ್‍ಲಾಕ್ 1.0 ಭಾಗವಾಗಿ ಅಗತ್ಯವಸ್ತುಗಳ ಖರೀದಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ. ಜೊತೆಗೆ ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ: 16 ಜಿಲ್ಲೆಗಳಲ್ಲಿ ಸಂಜೆ 5ರವರೆಗೆ ಅನ್‍ಲಾಕ್- ನಿಯಮಗಳೇನು?

    ಈ ಸಮಯದಲ್ಲಿ ಮಾತ್ರ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು. ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ. ಖಾಸಗಿ ಹಾಗೂ ಕೆಎಸ್‍ಆರ್ ಟಿಸಿ ಬಸ್‍ಗಳು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟ ಮಾಡುವಂತಿಲ್ಲ. ಅಲ್ಲದೆ ಹೊರ ಜಿಲ್ಲೆಗಳಿಂದಲೂ ಕೆಎಸ್‍ಆರ್ ಟಿಸಿ ಬಸ್‍ಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

    ಜುಲೈ 5 ರವರೆಗೂ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ನೈಟ್ ಕಪ್ರ್ಯೂ ಜಾರಿ ಇರುತ್ತದೆ, ಯಾವುದೇ ವಾಹನ ಓಡಾಟಕ್ಕೂ ಅನುಮತಿ ಇಲ್ಲ. ಅಲ್ಲದೆ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕಪ್ರ್ಯೂ ಜಾರಿ ಇದ್ದು, ಈ ವೇಳೆ ಯಾರೂ ಮನೆಯಿಂದ ಹೊರ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

  • ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ – ಯಾದಗಿರಿ ಜಿಲ್ಲಾಡಳಿತಕ್ಕೆ ಬಿಎಸ್‍ವೈ ಸೂಚನೆ

    ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ – ಯಾದಗಿರಿ ಜಿಲ್ಲಾಡಳಿತಕ್ಕೆ ಬಿಎಸ್‍ವೈ ಸೂಚನೆ

    – ಜಿಲ್ಲಾಡಳಿತ ಹಿರಿಯ ಅಧಿಕಾರಿಗಳ ಜೊತೆಗೆ ಸಿಎಂ ವೀಡಿಯೋ ಸಂವಾದ

    ಯಾದಗಿರಿ: ಮಹಾರಾಷ್ಟ್ರದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜೊತೆಗೆ ಸಿಎಂ ಯಡಿಯೂರಪ್ಪನವರು ವೀಡಿಯೋ ಸಂವಾದ ಮೂಲಕ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಡಾ.ರಾಗಾಪ್ರಿಯರೊಂದಿಗೆ ವೀಡಿಯೋ ಸಂವಾದ ನಡೆಸಿದ ಯಡಿಯೂರಪ್ಪನವರು, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ದರಾಗಬೇಕು, ಸಹಾಯವಾಣಿ ಕೇಂದ್ರ, ಕಾಳಜಿ ಕೇಂದ್ರ ಆರಂಭ ಜೊತೆಗೆ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ರೀತಿಯ ಸಿದ್ಧತೆಯಲ್ಲಿ ತೊಡಗಿಕೊಳ್ಳಿ ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಅನ್‍ಲಾಕ್ ಬೆನ್ನಲ್ಲೇ ಮತ್ತೆ ಮಹಾನಗರಗಳತ್ತ ಯಾದಗಿರಿ ಜನರ ಮಹಾ ವಲಸೆ

    ವೀಡಿಯೋ ಸಂವಾದದ ವೇಳೆ ಡಿಸಿ ರಾಗಪ್ರಿಯ ಜಿಲ್ಲಾಡಳಿತ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಾದದ ವ್ಯವಸ್ಥೆ ಮಾಡಲಾಗಿತ್ತು. ಸಂವಾದದಲ್ಲಿ ಸಿಎಸ್ ಪಿ ವೇದಮೂರ್ತಿ, ಜಿ.ಪಂ ಸಿಇಓ ಶಿಲ್ಲಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.