Tag: DC

  • ಸಿಇಟಿ ಪರೀಕ್ಷೆ – ಬಳ್ಳಾರಿಯಲ್ಲಿ 6 ಜನ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

    ಸಿಇಟಿ ಪರೀಕ್ಷೆ – ಬಳ್ಳಾರಿಯಲ್ಲಿ 6 ಜನ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

    ಬಳ್ಳಾರಿ: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಸಿಇಟಿ ಪರೀಕ್ಷೆ ಇಂದಿನಿಂದ ಎರಡು ನಗಳ ಕಾಲ ನಡೆಯುತ್ತಿದ್ದು, ಗಣಿ ನಾಡು ಬಳ್ಳಾರಿಯಲ್ಲಿ ಅಗತ್ಯ ಸಿದ್ಧತೆಗಳೊಂದಿಗೆ ಪರೀಕ್ಷೆ ಆರಂಭವಾಗಿವೆ.

    ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದ್ದು, ಕೊರೊನಾ ವೈರಸ್ ದೃಢಪಟ್ಟಂತಹ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ಪರೀಕ್ಷೆ ಬರೆಯಲು ಬಳ್ಳಾರಿಯ ಡೆಂಟಲ್ ಕಾಲೇಜ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಿದೆ.

    ಬಳ್ಳಾರಿ, ಸಿರಗುಪ್ಲ ಹಾಗೂ ಹಡಗಲಿಯ ತಲಾ ಇಬ್ಬರು ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಸೇರಿದಂತೆ 6 ಜನ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಸಲು ಜಿಲ್ಲಾಡಳಿತವು ವ್ಯವಸ್ಥೆ ಮಾಡಿದೆ. ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಅತ್ಯಂತ ಸುರಕ್ಷಿತವಾಗಿ ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

  • ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ: ಶಾಸಕರಿಗೆ ಕೋಟ ಟಾಂಗ್

    ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ: ಶಾಸಕರಿಗೆ ಕೋಟ ಟಾಂಗ್

    ಬೆಂಗಳೂರು/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿದ ವಿಚಾರ ಸಂಬಂಧ ಶಾಸಕ ಯು.ಟಿ ಖಾದರ್ ಹೇಳಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟಾಂಗ್ ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮೂಲಕ ಶಾಸಕರಿಗೆ ತಿರುಗೇಟು ನೀಡಿರುವ ಕೋಟ, ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ಬರೆದುಕೊಂಡಿದ್ದಾರೆ.

    ಇನ್ನೊಂದು ಟ್ವೀಟ್ ಮಾಡಿ, ಕೊರೊನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರ ಜಿಲ್ಲಾಡಳಿತ ಕೋರಿದೆ. ದುರಾದೃಷ್ಟಕ್ಕೆ, ಶವಸಂಸ್ಕಾರದ ಹೆಸರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ವಿಪಕ್ಷದ ಜನಪ್ರತಿನಿಧಿಗಳಿಗೆ ಶೋಭೆಯಲ್ಲ ಎಂದು ಖಾದರ್ ಗೆ ಟ್ಯಾಗ್ ಮಾಡಿ ಕಿಡಿಕಾರಿದ್ದಾರೆ.

    ಖಾದರ್ ಏನು ಹೇಳಿದ್ದರು?
    ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ಖಾದರ್ ಟ್ವೀಟ್ ಮಾಡಿದ್ದರು.

    ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ,ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ #ನ್ಯಾಯ ಎಲ್ಲಿದೆ? ಇದೇ ವೇಳೆ ತಮ್ಮ ಆಕ್ರೋಶ ಹೊರಹಾಕಿದ್ದರು.

    ಡಿಸಿ ವರ್ಗಾವಣೆ ಯಾಕೆ?
    ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ರಾಮ್ ಸೇನಾ ಅಭಿಮಾನಿ ಬಳಗ ಅನ್ನೋ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಕಿಡಿಗೇಡಿಯೋರ್ವ ”ಮೊದಲು ಇವಳನ್ನು ಕಡಿದು ಕೊಲ್ಲಬೇಕು”(ಫಸ್ಟ್ ಮೊಲೆನ್ ಕರ್ತ್ ಕೆರೋಡು)ಎಂದು ತುಳುಭಾಷೆಯಲ್ಲಿ ಮೆಸೇಜ್ ಹಾಕಿದ್ದನು. ಈ ಮೆಸೇಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾಧಿಕಾರಿಯನ್ನು ವರ್ಗಾಯಿಸಲಾಗಿದೆ.

  • ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‍ಗೆ ಕೊಲೆ ಬೆದರಿಕೆ

    ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‍ಗೆ ಕೊಲೆ ಬೆದರಿಕೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.

    ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು.

    ರಾಮ್ ಸೇನಾ ಅಭಿಮಾನಿ ಬಳಗ ಅನ್ನೋ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಕಿಡಿಗೇಡಿಯೋರ್ವ “ಮೊದಲು ಇವಳನ್ನು ಕಡಿದು ಕೊಲ್ಲಬೇಕು”(ಫಸ್ಟ್ ಮೊಲೆನ್ ಕರ್ತ್ ಕೆರೋಡು)ಎಂದು ತುಳುಭಾಷೆಯಲ್ಲಿ ಮೆಸೇಜ್ ಹಾಕಿದ್ದಾನೆ. ಈ ಮೆಸೇಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

    ಜಿಲ್ಲಾಧಿಕಾರಿಗಳಿಗೇ ಹಿಂದೂ ಸಂಘಟನೆಯ ಕಾರ್ಯಕರ್ತರು ಕೊಲೆ ಬೆದರಿಕೆಯೊಡ್ಡುವ ಹಂತಕ್ಕೆ ತಲುಪಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು. ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

  • ಕೊಡಗಿನಲ್ಲಿ ಶೇ.82ರಷ್ಟು ಸೋಂಕಿತರಿಗೆ ರೋಗ ಲಕ್ಷಣಗಳೇ ಇಲ್ಲ: ಡಿಸಿ

    ಕೊಡಗಿನಲ್ಲಿ ಶೇ.82ರಷ್ಟು ಸೋಂಕಿತರಿಗೆ ರೋಗ ಲಕ್ಷಣಗಳೇ ಇಲ್ಲ: ಡಿಸಿ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವೇಗವಾಗಿ ಹೆಚ್ಚುತ್ತಿರುವ ಕೊರೊನಾ ಪೀಡಿತರಲ್ಲಿ ಶೇ.82ರಷ್ಟು ಸೋಂಕಿತರಿಗೆ ರೋಗ ಲಕ್ಷಣಗಳೇ ಇಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ಲಕ್ಷಣಗಳು ಕಡಿಮೆ ಇರುವುದರಿಂದ ಹರಡುತ್ತಿರುವ ಸೋಂಕಿನಿಂದ ಅಪಾಯ ಜಾಸ್ತಿ ಇದೆ. ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ವ್ಯಾಪಕವಾಗಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ.82ರಷ್ಟು ಜನರಿಗೆ ಸೋಂಕಿನ ಲಕ್ಷಣಗಳಿಲ್ಲ. ಇಂತಹವರಿಗೆ ಅವರ ಮನೆಯಲ್ಲೇ ಉಳಿದುಕೊಳ್ಳಲು ವ್ಯವಸ್ಥೆ ಇದ್ದು, ಮನೆಯವರು ಒಪ್ಪಿದರೆ, ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

    ಒಂದು ವೇಳೆ ಮನೆಯಲ್ಲಿ ಅಂತಹ ವ್ಯವಸ್ಥೆ ಇರದೆ, ಮನೆಯವರು ಒಪ್ಪದಿದ್ದರೆ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ರೋಗ ಲಕ್ಷಣಗಳಿದ್ದರೆ ಅಂತಹವರಿಗೆ ಕೊವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾಯ್ ತಿಳಿಸಿದರು.

  • ಕಾರಿನ ಜೊತೆ ಹುಡುಗರು ಎಸ್ಕೇಪ್- ಎದ್ದು ಬಿದ್ದು ಓಡಿದ ಮ್ಯಾನೇಜರ್

    ಕಾರಿನ ಜೊತೆ ಹುಡುಗರು ಎಸ್ಕೇಪ್- ಎದ್ದು ಬಿದ್ದು ಓಡಿದ ಮ್ಯಾನೇಜರ್

    ಉಡುಪಿ: ರಾಜ್ಯಾದ್ಯಂತ ಕೊರೊನಾ ಲಾಕ್ ಡೌನ್ ತೆರವಾಗುತ್ತಿದ್ದಂತೆ ಜನ ಓಡಾಟ ಆರಂಭಿಸಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಮರೆಯುತ್ತಿದ್ದಾರೆ. ಉಡುಪಿ ಡಿಸಿ ಜಿ. ಜಗದೀಶ್ ಸಿಡಿ ದಾಳಿಗೆ ಮಾಲ್ ಮ್ಯಾನೇಜರ್, ಯುವಕರ ಬೆವರಿಳಿದಿದೆ.

    ಉಡುಪಿ ಜಿಲ್ಲೆಯಲ್ಲೂ ಗಡಿ ಸಿಲ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ಈ ನಡುವೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ನಗರದ ಆಯಕಟ್ಟಿನ ಸ್ಥಳಗಳಿಗೆ ದಾಳಿ ಮಾಡಿದರು. ಸರ್ವಿಸ್ ಬಸ್ ನಿಲ್ದಾಣಕ್ಕೆ ಜಿಲ್ಲಾಧಿಕಾರಿಗಳು ಎಂಟರ್ ಆಗುತ್ತಿದ್ದಂತೆ ಯುವಕರ ಗುಂಪೊಂದು ಎಸ್ಕೇಪಾಗಿದೆ. ಡಿಸಿ ಮತ್ತು ಅಧಿಕಾರಿಗಳನ್ನು ಕಂಡು ಕ್ಷಣದಲ್ಲಿ ಯುವಕರು ಕಣ್ಮರೆಯಾಗಿದ್ದಾರೆ. ಪಲಾಯನಗೈದ ದೃಶ್ಯ ಮೊಬೈಲ್, ಕ್ಯಾಮೆರಾಗಳಲ್ಲೂ ಸೆರೆಯಾಗಿದೆ. ಮಾಸ್ಕ್ ಧರಿಸದೆ ಇರುವುದು ಮಾತ್ರವಲ್ಲ ಗಾಂಜಾ ಸೇವನೆಯಂತಹ ಕಾನೂನುಬಾಹಿರ ಕೃತ್ಯದಲ್ಲಿ ಯುವಕರ ತಂಡ ತೊಡಗಿತ್ತು ಎಂದು ಸಂಶಯಿಸಲಾಗಿದೆ.

    ಎಸ್ಕೇಪಾದ ಯುವಕರ ತಂಡವನ್ನು ಪತ್ತೆ ಮಾಡುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಅನಿರೀಕ್ಷಿತ ದಾಳಿಯಿಂದ ಕಾರು ಚಾಲಕರು, ಅಂಗಡಿ- ಹೋಟೆಲ್ ಮಾಲಕರು, ಸಾರ್ವಜನಿಕರು ದಂಗಾದರು. ಸೂಕ್ತ ನಿಯಮ ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹಿರಿಯ ನಾಗರೀಕರಿಗೆ ಡಿಸಿ ಸಲಹೆ ನೀಡಿದರು.

    ಮಾಲ್ ಒಂದಕ್ಕೆ ದಾಳಿ ನಡೆಸಿದ ವೇಳೆ ಅಲ್ಲಿನ ಮ್ಯಾನೇಜರ್ ಗಾಬರಿಯಿಂದ ಎದ್ದು ಬಿದ್ದು ಓಡಿದ ದೃಶ್ಯ ಕಂಡುಬಂತು. ಡಿಸಿ ಬಂದ್ರೂ.. ಡಿಸಿ ಬಂದ್ರು ಅಂತ ಗ್ರಾಹಕರು ಹಾಗೂ ಸಿಬಂದಿಯನ್ನು ಎಚ್ಚರಿಸುವ ದೃಶ್ಯ ಕೂಡ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಡಿಸಿ ನಗರಭಾಗದಲ್ಲಿ ದಾಳಿ ನಡೆಸಿ ಜನಜಾಗೃತಿ ಮೂಡಿಸಿದರು.

    ಬಟ್ಟೆಯಂಗಡಿ, ಮೆಡಿಕಲ್, ಮೊಬೈಲ್ ಶಾಪ್ ಹೀಗೆ ಬೇರೆ ಬೇರೆ ವ್ಯಾಪಾರ ಕೇಂದ್ರಗಳಿಗೆ ನಗರಸಭೆ ಅಧಿಕಾರಿಗಳು ಭೇಟಿಕೊಟ್ಟು ಜಾಗೃತಿ ಮೂಡಿಸಿದರು. ಮಾಧ್ಯಮಗಳ ಜೊತೆ ಮಾತಾಡಿದ ಡಿಸಿ, ಆರೋಗ್ಯ ಜನರ ಕೈಯ್ಯಲ್ಲಿದೆ. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸ್ ಬಳಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

  • ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ

    ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ

    ಬಳ್ಳಾರಿ: ತಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ಹೌದು. ಎಸ್.ಎಸ್ ನಕುಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಒಬ್ಬರಲ್ಲಿ ಕರೋನಾ ಸೋಂಕು ಇರುವುದು ದೃಢವಾಗಿದೆ. ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ.

    ಡಿಸಿಯವರ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ. ಮಂಗಳವಾರದಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇರಲಿದ್ದು, ಮನೆಯಿಂದಲೇ ಕೆಲಸ ಮಾಡೋದಾಗಿ ಡಿಸಿ ನಕುಲ್ ಮಾಹಿತಿ ನೀಡಿದ್ದಾರೆ.

    ಜೊತೆಗೆ ಮನೆಯಲ್ಲಿ ಎಲ್ಲರೂ ಆರಾಮಾಗಿ ಇದ್ದಾರೆ. ವಿನಾಕಾರಣ ಗೊಂದಲ ಮಾಡಬೇಡಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

  • ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಲಾಕ್‍ಡೌನ್ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

    ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಲಾಕ್‍ಡೌನ್ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

    -ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸುಗಳು ಮಿತಿಮೀರುತ್ತಲೇ ಇವೆ. ಕಳೆದ ಒಂದು ವಾರದ ಹಿಂದೆ ಜಿಲ್ಲೆಯಲ್ಲಿ ಎರಡಂಕಿಯನ್ನು ದಾಟದ ಮಹಾಮಾರಿ, 7 ದಿನ ಎನ್ನುವಷ್ಟರಲ್ಲೇ 200ರ ಗಡಿಯನ್ನು ದಾಟಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಬೇಕು ಅನ್ನೋ ಕೂಗು ಕೇಳಿಬಂದಿತ್ತು.

    ನಾಲ್ಕು ದಿನಗಳ ಹಿಂದೆಯಷ್ಟೇ ಜಿಲ್ಲೆಯ ಶಾಸಕರು ಪರಿಷತ್ ಸದಸ್ಯರು ಲಾಕ್‍ಡೌನ್ ಮಾಡಿದ್ರೆ ಉತ್ತಮ ಎಂದು ಉಸ್ತುವಾರಿ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಜಿಲ್ಲಾಧಿಕಾರಿ ಮಾತ್ರ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡುವುದಿಲ್ಲ. ಅಷ್ಟಕ್ಕೂ ಲಾಕ್‍ಡೌನ್ ಮಾಡಿದರೆ ಕೊರೊನಾ ನಿಯಂತ್ರಣಕ್ಕೆ ಬರುವುದಿಲ್ಲ.

    ಲಾಕ್‍ಡೌನ್ ಮಾಡಿ ಮತ್ತೆ ಓಪನ್ ಮಾಡಿದಾಗ ಸಹಜವಾಗಿಯೇ ವೈರಸ್ ಹರಡಿಯೇ ಹರಡುತ್ತದೆ. ಜೊತೆಗೆ ಮುಖ್ಯವಾಗಿ ಲಾಕ್ ಡೌನ್ ಮಾಡಿದರೆ ಬಡವರು, ಮಧ್ಯಮ ವರ್ಗದ ಜನರು ತೀವ್ರ ಸಮಸ್ಯೆ ಅನುಭವಿಸಲಿದ್ದಾರೆ. ಹೀಗಾಗಿ ಲಾಕ್ ಡೌನ್ ಮಾಡುವುದಿಲ್ಲ. ಬದಲಾಗಿ ಜಿಲ್ಲೆಗೆ ಹೊಅರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯ, ದೇಶಗಳಿಂದ ಕೊಡಗಿಗೆ ಬರುವವರಿಂದ ಕೊವಿಡ್ ವೈರಸ್ ಹರಡುತ್ತಿದೆ. ಆದ್ದರಿಂದ ಹೊರ ಜಿಲ್ಲೆಗಳಿಂದ ಬರುವವರಿಗೆ ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.

    ಹೊರ ರಾಜ್ಯ ಮತ್ತು ಹೊರದೇಶಗಳಿಂದ ಬರುತ್ತಿವವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡುತ್ತಿದೆ. ಇವರಿಗೆ ಕೈಗೆ ಸೀಲು ಹಾಕಲಾಗುತ್ತಿದ್ದು, ಅಂತಹವರು ಯಾವುದೇ ಕಾರಣಕ್ಕೂ ಹೊರಬರಬಾರದು. ಕೋವಿಡ್ ಲಕ್ಷಣಗಳಿರುವವರು ಹೊರಗೆ ಓಡಾಡುವ ಬದಲು ತಪ್ಪದೆ ಆಸ್ಪತ್ರೆಗೆ ಹೋಗಿ ಪರಿಶೀಲಿಸಿಕೊಳ್ಳಬೇಕು.

    ಜನರು ಕೂಡ ಗುಂಪುಗೂಡುವುದನ್ನು ನಿಯಂತ್ರಿಸಬೇಕು ಎಂದಿದ್ದಾರೆ. ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಜಿಲ್ಲೆಯಲ್ಲಿ ಕಫ್ರ್ಯೂ ಜಾರಿ ಮಾಡಲಾಗಿದ್ದು, ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

  • ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿಷೇಧ

    ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿಷೇಧ

    ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿದೆ. ಲಾಕ್‍ಡೌನ್ ಮಾಡಬೇಕೆ, ಬೇಡವೆ ಎಂಬ ಚರ್ಚೆಗಳೂ ನಡೆಯುತ್ತಿವೆ. ಇದರ ಮಧ್ಯೆ ಇದೀಗ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ಬಂದ್ ಮಾಡಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.

    ತಕ್ಷಣದಿಂದ ಜಾರಿಯಾಗುವಂತೆ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಕಾರ್ಯಾಲಯ ಸಂಪರ್ಕಿಸುವ ಕಚೇರಿಯನ್ನು ಸಾರ್ವಜನಿಕ ಪ್ರವೇಶದಿಂದ ಹೊರಗಿಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಬಹುತೇಕ ಸಿಬ್ಬಂದಿ ಕೋವಿಡ್-19 ನಿರ್ವಹಣೆಯ ಒಂದಿಲ್ಲೊಂದು ತಂಡಗಳಲ್ಲಿ ನೇರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಅಥವಾ ಇನ್ನಿತರ ರೀತಿಯಲ್ಲಿ ತೊಡಕಾಗುತ್ತಿದೆ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

    ಜನರ ಅನುಕೂಲಕ್ಕಾಗಿ ಕಿಯೋಸ್ಕ್ ಅಳವಡಿಸಲಾಗುತ್ತಿದ್ದು, ಜನ ಅನ್‍ಲೈನ್ ಮೂಲಕ ಯಾವುದೇ ರೀತಿಯ ವರದಿ ಅಥವಾ ಅರ್ಜಿಗಳನ್ನು ಪಡೆದುಕೊಳ್ಳಬಹುದು ಎಂದು ಅದೇಶದಲ್ಲಿ ತಿಳಿಸಲಾಗಿದೆ. ಕಿಯೋಸ್ಕ್ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ ಅಗತ್ಯ ಮುಂಜಾಗ್ರತೆ ವಹಿಸಿ ಸಾರ್ವಜನಿಕರ ಅರ್ಜಿಗಳಿಗೆ ಸ್ಪಂದಿಸುವಂತೆ ಹಾಗೂ ಕೆಲಸ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.

  • ಉಡುಪಿ ಲಾಕ್‍ಡೌನ್ ಆಗಲ್ಲ, ಗಡಿ ಸೀಲ್ ಮಾಡುವ ಚಿಂತನೆ ಇದೆ: ಡಿಸಿ ಜಿ.ಜಗದೀಶ್

    ಉಡುಪಿ ಲಾಕ್‍ಡೌನ್ ಆಗಲ್ಲ, ಗಡಿ ಸೀಲ್ ಮಾಡುವ ಚಿಂತನೆ ಇದೆ: ಡಿಸಿ ಜಿ.ಜಗದೀಶ್

    ಉಡುಪಿ: ಜಿಲ್ಲೆಯನ್ನು ಲಾಕ್‍ಡೌನ್ ಮಾಡುವ ಸಾಧ್ಯತೆ ಇಲ್ಲ. ನಾಳೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದು ಲಾಕ್‍ಡೌನ್ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ ನೀಡಿದ್ದಾರೆ.

    ಉಡುಪಿ ಜಿಲ್ಲೆಗೆ ಮುಕ್ತ ಪ್ರವೇಶ ಇರುವುದಿಲ್ಲ. ಜಿಲ್ಲೆಯ ಗಡಿಯನ್ನು ಸೀಲ್‍ಡೌನ್ ಮಾಡಿ, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುತ್ತೇವೆ. ಈ ನಿರ್ಧಾರಕ್ಕೆ ಮೊದಲು ಉಡುಪಿ ಜಿಲ್ಲೆಯಿಂದ ಹೊರಗಡೆ ಹೋಗಲು ಹಾಗೂ ಜಿಲ್ಲೆಯ ಒಳಗೆ ಬರಲು ಸಮಯ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ.

    ಕೋವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ಕೈಗೊಳ್ಳುವ ಎಲ್ಲ ನಿಯಮಗಳನ್ನು ಜನ ಪ್ರತಿನಿಧಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಸಾರ್ವಜನಿಕರ ಓಡಾಟದ ವಾಹನಗಳನ್ನು ತಡೆಯುವ ಅಥವಾ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ.

  • ಸೋಂಕಿತನಿಗೆ ಚಿಕಿತ್ಸೆ ನೀಡದೆ ಕಿಮ್ಸ್‌ಗೆ ಕಳುಹಿಸಿದ ಆಸ್ಪತ್ರೆಗೆ ನೋಟಿಸ್

    ಸೋಂಕಿತನಿಗೆ ಚಿಕಿತ್ಸೆ ನೀಡದೆ ಕಿಮ್ಸ್‌ಗೆ ಕಳುಹಿಸಿದ ಆಸ್ಪತ್ರೆಗೆ ನೋಟಿಸ್

    – ಅರೆ ಬೆಂದ ಆಹಾರ ನೀಡಿದವರಿಗೂ ನೋಟಿಸ್
    – ಧಾರವಾಡ ಜಿಲ್ಲಾಧಿಕಾರಿಗಳಿಂದ ಕ್ರಮ

    ಧಾರವಾಡ: ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲೇ ಖಾಸಗಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ ಹಾಗೂ ಕೋವಿಡ್-19 ಕೇಂದ್ರಗಳಲ್ಲಿ ಎಡವಟ್ಟುಗಳು ಹೆಚ್ಚುತ್ತಿದ್ದು, ಸೋಂಕಿತರನ್ನು ಆತಂಕಕ್ಕೀಡು ಮಾಡಿದೆ.

    ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ಕಿಮ್ಸ್ ಗೆ ಕಳುಹಿಸಿದ್ದ ಹುಬ್ಬಳ್ಳಿಯ ವಿವೇಕಾನಂದ ಖಾಸಗಿ ಆಸ್ಪತ್ರೆಗೆ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದು, ಮಾತ್ರವಲ್ಲದೆ ಕೊವಿಡ್-19 ಕೇಂದ್ರದಲ್ಲಿ ಅರೆ ಬೆಂದ ಅನ್ನ ಕೊಟ್ಟವರಿಗೂ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇಬ್ಬರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ವಿವೇಕಾನಂದ ಆಸ್ಪತ್ರೆಯವರು ಹುಬ್ಬಳ್ಳಿ ಕಿಮ್ಸ್‍ಗೆ ಕಳುಹಿಸಿದ್ದರು. ಈ ಹಿನ್ನೆಲೆ ನೋಟಿಸ್ ಕೊಡುತಿದ್ದೆವೆ. ವಿವೇಕಾನಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಆಸ್ಪತ್ರೆಯವರು ಕಿಮ್ಸ್‍ಗೆ ಕಳುಹಿಸಿದ್ದರಿಂದ ಸೋಂಕಿತರು ಅಲ್ಲಿ ಚಿಕಿತ್ಸೆಗೆ ಕಾಯಬೇಕಾಯಿತು ಎಂದು ಜಿಲ್ಲಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

    ಸೋಂಕಿತರು ಮೊದಲೇ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು, ವಿವೇಕಾನಂದ ಆಸ್ಪತ್ರೆ ಖಾಸಗಿ ಕೊವಿಡ್-19 ಕೇರ್ ಸೆಂಟರ್ ಲಿಸ್ಟನಲ್ಲಿ ಕೂಡ ಇದೆ. ಆದರೂ ಕಿಮ್ಸ್‍ಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

    ಹುಬ್ಬಳ್ಳಿಯ ಹೆಗ್ಗೆರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಐಎಲ್‍ಐ ರೋಗಿಗಳಿಗೆ ಅರೆ ಬೆಂದ ಅನ್ನ ಕೊಟ್ಟಿರುವ ಹಿನ್ನೆಲೆ, ಫುಡ್ ಸೆಫ್ಟಿ ಆಫೀಸರ್ ಕಡೆಯಿಂದ ಫುಡ್ ಸಪ್ಲೈಯರ್ ಗೆ ನೋಟಿಸ್ ನೀಡಲಾಗಿದೆ. ಸದ್ಯ ಫುಡ್ ಸಪ್ಲೈಯರ್ ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವದಾಗಿ ಹೇಳಿದ್ದಾರೆ ಎಂದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಕೊವಿಡ್-19 ಕೇರ್ ಸೆಂಟರ್‍ನಲ್ಲಿರುವ ರೋಗಿಗಳಿಗೆ ಸೋಂಕಿನ ಲಕ್ಷಣ ಕಂಡು ಬಂದರೆ ಕಿಮ್ಸ್‍ಗೆ ರವಾನೆ ಮಾಡಲಿ, ಇದಕ್ಕಾಗಿ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕಿಮ್ಸ್‍ನಲ್ಲಿ ಬೆಡ್ ಕೊರತೆ ಇಲ್ಲ, 250 ಬೆಡ್‍ಗಳಲ್ಲಿ 190 ಭರ್ತಿಯಾಗಿವೆ, ಇನ್ನೂ 60 ಬೆಡ್ ಖಾಲಿ ಇವೆ. ಎಸ್‍ಡಿಎಂ ಆಸ್ಪತ್ರೆಯಲ್ಲಿ 100 ಬೆಡ್ ಇವೆ ಎಂದು ಮಾಹಿತಿ ನೀಡಿದರು.