Tag: DC

  • ಕಲಬುರಗಿ, ಬಾಗಲಕೋಟೆಯಲ್ಲಿ ಮದುವೆಗೆ ನಿಷೇಧ

    ಕಲಬುರಗಿ, ಬಾಗಲಕೋಟೆಯಲ್ಲಿ ಮದುವೆಗೆ ನಿಷೇಧ

    ಬಾಗಕೋಟೆ/ಕಲಬುರಗಿ: ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಜನರಿಗೆ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜನ ಸೇರುವ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಆದೇಶ ಹೊರಡಿಸಿದ್ದಾರೆ.

    ಡಿಸಿಎಂ ಗೋವಿಂದ ಕಾರಜೋಳ ಈ ಬಗ್ಗೆ ಪತ್ರ ಬರೆದು ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರ್ಯಾಯವಾಗಿ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆ ಕಾರ್ಯಗಳನ್ನ ನಡೆಸುವಂತೆ ಆದೇಶ ಹೊರಡಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸರ್ಕಾರವು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಕೊರೊನಾ ನಿಯಂತ್ರಣಕ್ಕೆ ಬಾರದಿರುವುದು ಆತಂಕಕಾರಿ ಸಂಗತಿಯಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ಇದರ ಪರಿಣಾಮದಿಂದ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಿಗೂ ಕೊರೊನಾ ಸೋಂಕು ಹರಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆ ಕಾರಣಕ್ಕಾಗಿ ಜಿಲ್ಲೆಯಲ್ಲಿ ಇನ್ನೂ ಮುಂದೆ ಜನ ಸೇರಿಸಿ ಮದುವೆ ಸಮಾರಂಭಗಳನ್ನು ಆಚರಿಸಲು ಅನುಮತಿ ನೀಡಬಾರದು. ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆ ಕಾರ್ಯಗಳನ್ನು ನಡೆಸಲು ಪರವಾನಿಗೆ ನೀಡುವಂತೆ ಸೂಚಿಸಿದೆ.

    ಇತ್ತೀಚೆಗಷ್ಟೆ ಹಲವೆಡೆ ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಜನ ಸೇರುವ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಕ್ರಮಗೊಳ್ಳಲಾಗಿದೆ.

    ಈ ಬಗ್ಗೆ ಬಾಗಲಕೋಟೆ ಡಿಸಿ ಕೆ.ರಾಜೇಂದ್ರ ಸುದ್ದಿಗೋಷ್ಠಿ ನಡೆಸಿದ್ದು, ಜಿಲ್ಲೆಯಲ್ಲಿ ಮದುವೆ, ಸೀಮಂತ ಹಾಗೂ ಅಂತ್ಯಸಂಸ್ಕಾರ ಅವಾಂತರದಿಂದಲೇ 70ಕ್ಕೂ ಹೆಚ್ಚು ಪ್ರಕರಣಗಳು ಬಂದಿವೆ. ಕಲಾದಗಿ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಮದುವೆ, ಇಳಕಲ್ ಮದುವೆ, ಡಾಣಕಶಿರೂರ ಸೀಮಂತ, ಚಿಕ್ಕಮ್ಯಾಗೇರಿ ರೈಲ್ವೆ ಟಿಕೆಟ್ ಕಲೆಕ್ಟರ್ ಅಂತ್ಯಸಂಸ್ಕಾರ ಈ ಪ್ರಕರಣಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಈ ಪ್ರಕರಣಗಳಿಂದಲೇ 70ಕ್ಕೂ ಹೆಚ್ಚು ಪ್ರಕರಣ ಬಂದಿವೆ. ಇನ್ನೂ ಹೆಚ್ಚಿನ ಪಾಸಿಟಿವ್ ಪ್ರಕರಣ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ಇದೆಲ್ಲ ಗಮನಿಸಿದ ಡಿಸಿಎಂ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ಡಿಸಿಎಂ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಮದುವೆ, ಸೀಮಂತ ಕಾರ್ಯ ನಿಷೇಧ ಮಾಡಲಾಗಿದೆ. ಮದುವೆಯಾಗುವವರು ಕೇವಲ ನೊಂದಣಾಧಿಕಾರಿ ಕಚೇರಿಗಳಲ್ಲಿ ಮಾತ್ರ ಮಾಡಿಕೊಳ್ಳಬೇಕು. ಯಾರೇ ಮರಣ ಹೊಂದಿದರು ತಾಲೂಕಾಡಳಿತದ ಮತ್ತು ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಡಿಸಿ ಸೂಚನೆ ನೀಡಿದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವ ಸಂಸ್ಕಾರ ಮಾಡಿದವರು ಅಮಾನತು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವ ಸಂಸ್ಕಾರ ಮಾಡಿದವರು ಅಮಾನತು

    – ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್

    ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ- ಸಿಎಂ

    ಈ ಬಗ್ಗೆ ಸಚಿವ ಶ್ರೀರಾಮು ಟ್ವೀಟ್ ಮಾಡಿದ್ದು, ಶವ ಸಂಸ್ಕಾರ ಮಾಡಿದ್ದ 8 ಜನರನ್ನು ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಮೊದಲಿಗೆ, “ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ” ಎಂದು ಶವ ಸಂಸ್ಕಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ. ಕೋವಿಡ್-19 ರಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು, ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಅಂತ್ಯ ಸಂಸ್ಕಾರವನ್ನು ಸೂಕ್ತ ಹಾಗೂ ಸಕಲ ಗೌರವಗಳಿಂದ ನೆರವೇರಿಸುವುದು ನಮ್ಮ ಸಂಸ್ಕೃತಿ. ಸೋಂಕಿನಿಂದ ಮೃತಪಟ್ಟವರು ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡದೆ ಸಲ್ಲಿಸಬೇಕಾದ ಗೌರವ ಸಲ್ಲಿಸೋಣ. ಮಾನವೀಯತೆ ಮೆರೆಯೋಣ ಎಂದು ಶ್ರೀರಾಮುಲು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಸೋಮವಾರ ಒಂದೇ ದಿನ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯವನ್ನು ಕಂಡರೆ ಎಂಥವರಿಗೂ ಕರುಳು ಹಿಂಡುವಂತಿತ್ತು. ಒಂದೇ ಬಾರಿ ಶವ ಸಂಸ್ಕಾರ ಮಾಡಬೇಕಾದರೆ ಆರೋಗ್ಯ ಇಲಾಖೆಯ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು.

    ಜಿಲ್ಲಾಧಿಕಾರಿ ಕ್ಷಮೆ
    ಪ್ರಕರಣದ ಕುರಿತು ತನಿಖೆ ನಡೆಸುವಂತೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶಿಸಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

    ಅಮಾನವೀಯ ಘಟನೆ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಸಹ ಬೇಸರ ವ್ಯಕ್ತಪಡಿಸಿ, ಬಹಿರಂಗವಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಮಾರ್ಚುರಿ ಸ್ಟ್ಯಾಫ್ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್ ನ ನುರಿತ ತಂಡ ನೇಮಕ ಮಾಡುವಂತೆ ಸೂಚಿಸಿದ್ದಾರೆ.

  • ತಪ್ಪೊಪ್ಪಿಕೊಂಡು, ಬಹಿರಂಗವಾಗಿ ಕ್ಷಮೆಯಾಚಿಸಿದ ಬಳ್ಳಾರಿ ಜಿಲ್ಲಾಧಿಕಾರಿ

    ತಪ್ಪೊಪ್ಪಿಕೊಂಡು, ಬಹಿರಂಗವಾಗಿ ಕ್ಷಮೆಯಾಚಿಸಿದ ಬಳ್ಳಾರಿ ಜಿಲ್ಲಾಧಿಕಾರಿ

    – ಅಮಾನವೀಯ ರೀತಿಯಲ್ಲಿ ಶವ ಸಂಸ್ಕಾರ ಪ್ರಕರಣ
    – ಕೊರೊನಾದಿಂದ ಸಾವನ್ನಪ್ಪಿದವರ ನಿರ್ವಹಣೆಗೆ ಬೇರೆ ತಂಡ

    ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯ ಸಂಸ್ಕಾರ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಕುರಿತು ಇದೀಗ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನಕುಲ್ ಅವರು ಪ್ರತಿಕ್ರಿಯಿಸಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ತಪ್ಪಿಸ್ಥರ ವಿರಿದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    ಸೋಮವಾರ ಒಂದೇ ದಿನ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯವನ್ನು ಕಂಡರೆ ಎಂಥವರಿಗೂ ಕರುಳು ಹಿಂಡುವಂತಿತ್ತು. ಒಂದೇ ಬಾರಿ ಶವ ಸಂಸ್ಕಾರ ಮಾಡಬೇಕಾದರೆ ಆರೋಗ್ಯ ಇಲಾಖೆಯ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು. ಈ ವಿಡಿಯೋ ಕುರಿತು ಜಿಲ್ಲಾಧಿಕಾರಿ ಸಹ ಬೇಸರ ವ್ಯಕ್ತಪಡಿಸಿದ್ದರು.

    ಇದೀಗ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

    ಈ ಕುರಿತು ಜಿಲ್ಲಾಧಿಕಾರಿ ಬೇಸರ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಮಾರ್ಚುರಿ ಸ್ಟ್ಯಾಫ್ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಅಲ್ಲದೆ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್‍ನ ನುರಿತ ತಂಡ ನೇಮಕ ಮಾಡುವಂತೆ ಸೂಚಿಸಿದ್ದಾರೆ.

  • ಕೋವಿಡ್‍ನಿಂದ ಸಾವನ್ನಪ್ಪಿದ್ರೂ ಜಿಲ್ಲಾಡಳಿತಕ್ಕೆ ಮಾಹಿತಿ ಇಲ್ಲ- ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಎಚ್ಚರಿಕೆ

    ಕೋವಿಡ್‍ನಿಂದ ಸಾವನ್ನಪ್ಪಿದ್ರೂ ಜಿಲ್ಲಾಡಳಿತಕ್ಕೆ ಮಾಹಿತಿ ಇಲ್ಲ- ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಎಚ್ಚರಿಕೆ

    ಮೈಸೂರು: ಕೋವಿಡ್‍ನಿಂದ ಸಾವನ್ನಪ್ಪಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ನೋಟೀಸ್ ಮೂಲಕವೇ ಎಚ್ಚರಿಕೆ ನೀಡಿದ ಡಿಸಿ, ಕೋವಿಡ್ -19 ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ನಿರ್ಲಕ್ಷ್ಯ ವಹಿಸುತ್ತಿವೆ. SARI, ILI ಹಾಗೂ ಕೋವಿಡ್ ಗುಣಲಕ್ಷಣದ ರೋಗಿಯ ಮಾಹಿತಿ ನೀಡಬೇಕು. ಯಾವುದೇ ಆಸ್ಪತ್ರೆಗಳಿಗೆ ಈ ಗುಣಲಕ್ಷಣದ ರೋಗಿ ದಾಖಲಾದರೆ ವೆಬ್‍ಸೈಟ್‍ಗೆ ಅಪ್ಡೇಟ್ ಮಾಡಬೇಕು. ಆದರೆ ಕೆಲವೊಂದು ಆಸ್ಪತ್ರೆಗಳು ಮಾಹಿತಿ ನೀಡುತ್ತಿಲ್ಲ. ಎರಡು ಕೋವಿಡ್ ಪ್ರಕರಣದ ರೋಗಿ ಸಾವನ್ನಪ್ಪಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಇದು ನಿರ್ಲಕ್ಷ್ಯತನದ ಪರಮಾವಧಿಯಾಗಿದೆ. ಇದು ನಿಮಗೆ ಕೊನೆಯ ಎಚ್ಚರಿಕೆ ಎಂದು ತಿಳಿಸಿದ್ದಾರೆ.

    ಇನ್ನು ಮುಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಎಲ್ಲ ಮಾಹಿತಿ ನೀಡಿ. ಇಲ್ಲವಾದರೆ ನಿಮ್ಮ ಆರೋಗ್ಯ ಸಂಸ್ಥೆಯ ನೋಂದಣಿ ರದ್ದು ಮಾಡಬೇಕಾಗುತ್ತದೆ ಎಂದು ರೋಗಿ ಸಾವನ್ನಪ್ಪಿದರೂ ಮಾಹಿತಿ ನೀಡದ ಆಸ್ಪತ್ರೆಗೆ ಡಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

  • ಸಂಜೆ 4ರ ನಂತರ ಚಾಮರಾಜನಗರ ಲಾಕ್- ಡಿಸಿ ರವಿ ಆದೇಶ

    ಸಂಜೆ 4ರ ನಂತರ ಚಾಮರಾಜನಗರ ಲಾಕ್- ಡಿಸಿ ರವಿ ಆದೇಶ

    ಚಾಮರಾಜನಗರ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದರೂ ಮೂರು ತಿಂಗಳ ಕಾಲ ಹಸಿರು ಝೋನ್ ನಲ್ಲಿದ್ದ ಏಕಮಾತ್ರ ಜಿಲ್ಲೆ ಚಾಮರಾಜನಗರ. ಆದರೆ ಇದೀಗ ಚಾಮರಾಜನಗರಕ್ಕೂ ಕೊರೊನಾ ವಕ್ಕರಿಸಿ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಚಾಮರಾಜನಗರ ಎಪಿಎಂಸಿ ವ್ಯಾಪಾರಿಗಳು, ಗುಂಡ್ಲುಪೇಟೆ ಪಟ್ಟಣದ ವ್ಯಾಪಾರಿಗಳು ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿ ಸಹ ಹೆಚ್ಚೆತ್ತುಕೊಂಡಿದ್ದು, ಚಾಮರಾಜನಗರ ಜಿಲ್ಲಾದ್ಯಂತ ಸಂಜೆ 4ರ ನಂತರ ಲಾಕ್‍ಡೌನ್ ಆದೇಶ ಹೊರಡಿಸಿದ್ದಾರೆ. ಆದೇಶದನ್ವಯ ಸಂಜೆ 4ರ ನಂತರ ಅಂಗಡಿ ಮುಂಗ್ಗಟ್ಟುಗಳನ್ನು ಮುಚ್ಚಿಸುವ ಕೆಲಸಕ್ಕೆ ಜಿಲ್ಲೆಯ ಪೊಲೀಸರು, ನಗರಸಭಾ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಮುಂದಾಗಿದ್ದಾರೆ.

    ಬೆಳಗ್ಗೆ 7 ರಿಂದ ಸಂಜೆ 4ರ ವರೆಗೆ ವ್ಯಾಪಾರ ವಹಿವಾಟು ನಡೆಸಿ, ಸಂಜೆ 4 ರಿಂದ ಬೆಳಗ್ಗೆ 7 ರವರೆಗೆ ಯಾವುದೇ ವ್ಯಾಪಾರ ವಹಿವಾಟು ನಡೆಸದಂತೆ ಸೂಚಿಸಲಾಗಿದೆ. ಹಲವು ವ್ಯಾಪಾರಿಗಳು ತಾವೇ ಖುದ್ದು ಬಾಗಿಲು ಮುಚ್ಚುವ ಮೂಲಕ ಜಿಲ್ಲಾಡಳಿತದ ನಿರ್ಧಾರಕ್ಕೆ ಸ್ವಾಗತ ಕೋರಿದ್ದಾರೆ. ಇದಲ್ಲದೆ ಮತ್ತೆ ಅಂತರ್‍ಜಿಲ್ಲಾ ಚೆಕ್ ಪೋಸ್ಟ್ ನಿರ್ಮಾಣಕ್ಕೆ ಡಿಸಿ ರವಿ ಮನಸ್ಸು ಮಾಡಿದ್ದು, ಈ ಮೂಲಕ ಕೊರೊನಾವನ್ನು ಜಿಲ್ಲೆಯಿಂದ ಹೊಡೆದೊಡಿಸಿ, ಮತ್ತೆ ಹಸಿರು ಜಿಲ್ಲೆಯಾಗಿ ಮಾಡಲು ಪಣ ತೊಟ್ಟಿದ್ದಾರೆ.

  • ಉಡುಪಿಯಲ್ಲಿ ಕೊರೊನಾಗೆ ಎರಡನೇ ಬಲಿ – ಮಹಾರಾಷ್ಟ್ರದಿಂದ ಬಂದ 3 ತಾಸಿನಲ್ಲಿ ಸಾವು

    ಉಡುಪಿಯಲ್ಲಿ ಕೊರೊನಾಗೆ ಎರಡನೇ ಬಲಿ – ಮಹಾರಾಷ್ಟ್ರದಿಂದ ಬಂದ 3 ತಾಸಿನಲ್ಲಿ ಸಾವು

    – ಮೃತ ವ್ಯಕ್ತಿಗೆ ಲಕ್ಷಣ ಇಲ್ಲದಿದ್ರೂ ಸೋಂಕು

    ಉಡುಪಿ: ಮಹಾಮಾರಿ ಕೊರೊನಾ ಉಡುಪಿ ಜಿಲ್ಲೆಯಲ್ಲಿ ಎರಡನೇ ಬಲಿ ಪಡೆದಿದೆ. ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಮೂರೇ ಗಂಟೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

    ಗುರುವಾರ ಮಧ್ಯಾಹ್ನ ಉಡುಪಿ ಜಿಲ್ಲೆಯ ನೋಂದಣಿ ಕೇಂದ್ರಕ್ಕೆ ಬಂದಿದ್ದ ವ್ಯಕ್ತಿಯನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದರು. 54 ವರ್ಷದ ಆ ವ್ಯಕ್ತಿಯಲ್ಲಿ ಕೊರೊನಾದ ಯಾವುದೇ ಗುಣಲಕ್ಷಣಗಳು ಕಂಡು ಬಂದಿಲ್ಲ. ಹಾಗಾಗಿ ಅವರನ್ನು ನೇರವಾಗಿ ಹೋಂ ಕ್ವಾರಂಟೈನ್‍ಗೆ ಅಧಿಕಾರಿಗಳು ಕಳುಹಿಸಿದ್ದಾರೆ. ಮಧ್ಯಾಹ್ನ 2.30ಕ್ಕೆ ಮನೆ ತಲುಪಿದ ವ್ಯಕ್ತಿ ಸಂಜೆ 5.30 ಕ್ಕೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಆತಂಕಗೊಂಡ ಮನೆಯವರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಈ ಸಂದರ್ಭ ಮೃತಪಟ್ಟಿರುವುದು ಸಾಬೀತಾಗಿದೆ.

    ಮಹಾರಾಷ್ಟ್ರದಿಂದ ಬಂದಿರುವ ಕಾರಣ ತಕ್ಷಣ ಜಿಲ್ಲಾಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಯಿತು. ಮೃತ ವ್ಯಕ್ತಿಯ ಗಂಟಲ ದ್ರವವನ್ನು ತೆಗೆದು ಪರೀಕ್ಷೆ ಮಾಡಿದ ಸಂದರ್ಭದಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. 54 ವರ್ಷದ ವ್ಯಕ್ತಿಯಲ್ಲಿ ಯಾವುದೇ ಲಕ್ಷಣಗಳು ಇಲ್ಲದಿರುವುದರಿಂದ ಸಾವಿಗೆ ಕಾರಣ ಏನು ಎನ್ನುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿಯಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದರು.

    ಕುಂದಾಪುರದಲ್ಲಿ ಮಾತನಾಡಿದ ಡಿಸಿ, ಕೆಲ ಪ್ರಕರಣಗಳಲ್ಲಿ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ಕೊರೊನಾ ಇರುವುದು ಆ ನಂತರ ಸಾಬೀತಾಗುತ್ತದೆ. ಸಾರ್ವಜನಿಕರು ಬಹಳ ಜಾಗರೂಕರಾಗಿರಬೇಕು ಎಂದು ಮನವಿ ಮಾಡಿದರು. ಈ ಹಿಂದೆ ಮಹಾರಾಷ್ಟ್ರದಿಂದ ಬಂದ ಕುಂದಾಪುರದ ವ್ಯಕ್ತಿ ಮೇ 14ರಂದು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದರು.

  • ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸುವಂತೆ ಹಾಸನ ಡಿಸಿ ಸೂಚನೆ

    ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸುವಂತೆ ಹಾಸನ ಡಿಸಿ ಸೂಚನೆ

    ಹಾಸನ: ಪ್ರತಿ ಕ್ವಿಂಟಾಲ್‍ಗೆ 10,300 ರೂ. ನಂತೆ ಬೆಂಬಲ ಬೆಲೆಯೊಂದಿಗೆ ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೂ.11ರ ಸರ್ಕಾರಿ ಆದೇಶದಂತೆ ಕೊಬ್ಬರಿಯನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ಖರೀದಿ ಕೇಂದ್ರಗಳನ್ನು ತರಬೇಕಿದೆ. ಕೇಂದ್ರ ಸರ್ಕಾರ ಬೆಂಬಲಬೆಲೆಯೊಂದಿಗೆ ಕೊಬ್ಬರಿ ಖರೀದಿಸಲು ನೆಫೆಡ್ ಸಂಸ್ಥೆಯನ್ನು ಗುರುತಿಸಿದ್ದು, ರಾಜ್ಯ ಸರ್ಕಾರ ಸಹಕಾರ ಮಾರಾಟ ಮಂಡಳಿ ಮೂಲಕ ಖರೀದಿಸಲು ಸೂಚನೆ ನೀಡಿದೆ. ಅದರಂತೆ ನಾಳೆಯಿಂದ ಮುಂದಿನ 15 ದಿನಗಳ ಕಾಲ ರೈತರ ನೋಂದಣಿ ಕಾರ್ಯ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

    ಅರಸೀಕೆರೆ ಹಾಗೂ ಚನ್ನರಾಯಪಟ್ಟಣಗಳಲ್ಲಿ ಎರಡು ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಎಕರೆಗೆ 6 ಕ್ವಿಂಟಾಲ್‍ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಕೊಬ್ಬರಿ ಖರೀದಿಸಲು ಅವಕಾಶವಿದೆ. ಒಂದು ವೇಳೆ ಫ್ರೂಟ್ಸ್(ರೈತರ ನೊಂದಣಿ ಹಾಗೂ ಫಲಾನುಭವಿಗಳ ಕೇಂದ್ರಿಕೃತ ಮಾಹಿತಿ ವ್ಯವಸ್ಥೆ) ಐ.ಡಿ. ಇಲ್ಲದವರು ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಣಿ ಮಾಡಿ ಪಡೆಯಬಹುದಾಗಿದೆ. ಇದರಲ್ಲಿ ಆಧಾರ್ ಸಂಖ್ಯೆಯೊಂದಿಗೆ ಜೋಡಿಸಿರುವ ರಾಷ್ಟ್ರೀಕೃತ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕ ಶ್ರೀಹರಿ ಅರಸೀಕೆರೆ, ಬೇಲೂರು ಹಾಗೂ ಹಾಸನ ತಾಲ್ಲೂಕುಗಳ ರೈತರು ಅರಸೀಕೆರೆ ಎಪಿಎಂಸಿಯ ಖರೀದಿ ಕೇಂದ್ರದಲ್ಲಿ ಮತ್ತು ಚನ್ನರಾಯಪಟ್ಟಣದಲ್ಲಿ ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ, ಆಲೂರು ತಾಲೂಕುಗಳ ರೈತರು ಚನ್ನರಾಯಪಟ್ಟಣ ಎಪಿಎಂಸಿಯ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

    ಜಂಟಿ ಕೃಷಿ ನಿರ್ದೇಶಕ ಡಾ.ಮಧುಸೂದನ್, ತೋಟಗಾರಿಕಾ ಉಪನಿರ್ದೇಶಕ ಮಂಜುನಾಥ್ ಕೊಬ್ಬರಿ ಖರೀದಿ ವ್ಯವಸ್ಥೆ ನೋಂದಣಿ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿ, ಗುರುತಿನ ಚೀಟಿ ಹಾಗೂ ಹೊಸ ಗುರುತಿನ ಚೀಟಿ ನೀಡುವ ಪ್ರಕ್ರಿಯೆ ಕುರಿತು ವಿವರಿಸಿದರು.

  • ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ- 86 ಮಂದಿ ನೌಕರರಿಗೆ ಸೋಂಕು

    ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ- 86 ಮಂದಿ ನೌಕರರಿಗೆ ಸೋಂಕು

    ಬಳ್ಳಾರಿ: ಮಹಾಮಾರಿ ಕೊರೊನಾ ರಣಕೇಕೆ ಬಳ್ಳಾರಿ ಜಿಲ್ಲೆಯಲ್ಲಿ ಮುಂದುವರೆದಿದ್ದು ಜಿಲ್ಲೆಗೆ ಜಿಂದಾಲ್ ಉಕ್ಕು ಕಂಪನಿ ಕಂಟಕವಾಗಿ ಪರಿಣಮಿಸಿದೆ. ಇಂದು ಒಂದೇ ದಿನ ಜಿಂದಾಲ್ ನಲ್ಲಿ 46 ಪ್ರಕರಣಗಳು ದಾಖಲಾಗುವ ಮೂಲಕ ಜಿಂದಾಲ್ ನೌಕರರಲ್ಲಿ ಈವರೆಗೂ ಕಾಣಿಸಿಕೊಂಡ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ ಆಗಿದೆ.

    ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ಇರುವ ಜಿಂದಾಲ್ ಸಮೂಹ ಸಂಸ್ಥೆಯಲ್ಲಿ 33 ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಲಾಕ್‍ಡೌನ್ ಆರಂಭ ಆಗಿನಿಂದಲೂ ಜಿಂದಾಲ್ ಕಂಪನಿಯನ್ನು ಸಂಪೂರ್ಣವಾಗಿ ಮುಚ್ಚುವಂತೆ ಸ್ಥಳೀಯ ಪ್ರತಿನಿಧಿಗಳು ಆಗ್ರಹ ಮಾಡಿದ್ದರು. ಆದರೆ ಇಷ್ಟು ದಿನ ಜಿಂದಾಲ್ ನಲ್ಲಿ ಒಂದೇ ಒಂದು ಪ್ರಕರಣ ಪತ್ತೆ ಆಗಿರಲಿಲ್ಲ. ಕಳೆದ ಒಂದು ವಾರದಿಂದ ಜಿಂದಾಲ್ ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ.

    ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾದರೆ ಇದರಲ್ಲಿ ಜಿಂದಾಲ್ ಸೋಂಕಿತರ ಸಂಖ್ಯೆ 86. ಕಳೆದ ಎರಡು ದಿನಗಳಿಂದ ಜಿಂದಾಲ್ ನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಳವಾಗುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ಅವರು ಜಿಂದಾಲ್ ಓಪಿಜಿ ಸೆಂಟರ್ ಗೆ ಅನಿರ್ಧಿಷ್ಟ ಕಾಲ ರಜೆ ನೀಡುವಂತೆ ಆದೇಶ ಮಾಡಿದ್ದಾರೆ. ಅಲ್ಲದೇ ಜಿಂದಾಲ್ ನಲ್ಲಿ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಳ ಆಗುವ ಮುನ್ಸೂಚನೆಯನ್ನು ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ನೀಡಿದ್ದಾರೆ.

    ಹೀಗಾಗಿ ಜಿಂದಾಲ್‍ನ ಕೆಲ ಕಾರ್ಖಾನೆಯ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಲು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಅಲ್ಲದೆ ಜಿಂದಾಲ್ ಓಪಿಜಿ ಸೆಂಟರ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ರಜೆ ನೀಡುವುದರ ಜೊತೆಯಲ್ಲಿ ಎಲ್ಲ ಸಿಬ್ಬಂದಿ ಹೋಂ ಕ್ವಾರಂಟೈನ್ ಆಗಲು ಸೂಚನೆ ನೀಡಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿ ಜಿಂದಾಲ್ ಆಡಳಿತ ಮಂಡಳಿಯ ಜೊತೆಯಲ್ಲಿ ಸಭೆ ನಡೆಸಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಂದಾಲ್ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.

  • ನಿಮ್ಮ ಮನೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿದ್ರೆ ದಯವಿಟ್ಟು ಹೊರ ರಾಜ್ಯದಿಂದ ಬರಬೇಡಿ- ಉಡುಪಿ ಡಿಸಿ ಮನವಿ

    ನಿಮ್ಮ ಮನೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿದ್ರೆ ದಯವಿಟ್ಟು ಹೊರ ರಾಜ್ಯದಿಂದ ಬರಬೇಡಿ- ಉಡುಪಿ ಡಿಸಿ ಮನವಿ

    ಉಡುಪಿ: ನಿಮ್ಮ ಮನೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿದ್ದರೆ ದಯವಿಟ್ಟು ಹೊರ ರಾಜ್ಯದಿಂದ ಬರಬೇಡಿ. ಹೊರ ರಾಜ್ಯದಿಂದ ಬರುವವರು ಸ್ವಲ್ಪ ತಡೀರಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದರೆ ಇಡೀ ಮನೆ ಸೀಲ್ ಆಗುತ್ತದೆ. ಮಕ್ಕಳಿಗೆ ಪರೀಕ್ಷೆ ಬರೆಯೋಕೆ ಆಗಲ್ಲ. ಮಕ್ಕಳು ಪರೀಕ್ಷೆ ಮುಗಿಸಿದ ಮೇಲೆ ಊರಿಗೆ ಬನ್ನಿ ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿಗೆ ಕ್ವಾರಂಟೈನ್ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇದೆ. ಹೊರರಾಜ್ಯದಿಂದ ಬಂದವರನ್ನು ಹೋಮ್, ಸಾಂಸ್ಥಿಕ ಕ್ವಾರಂಟೈನ್‍ಗೆ ಕಳುಹಿಸುವ ಅಧಿಕಾರವೂ ಇದೆ ಎಂದರು.

    ಮಹಾರಾಷ್ಟ್ರದಿಂದ ಬರುವರಿಗೆ 14 ದಿನ ಹೋಂ ಕ್ವಾರಂಟೈನ್ ಕಡ್ಡಾಯ. ಹೋಂ ಕ್ವಾರಂಟೈನ್ ಉಲ್ಲಂಘಿಸಿದರೆ ಶಿಕ್ಷಿಸಲಾಗುವುದು. ಕ್ವಾರಂಟೈನ್ ಇರುವ ವ್ಯಕ್ತಿಯ ಬಗ್ಗೆ ನೆರಮನೆಯವರು ಮಾಹಿತಿ ನೀಡಬೇಕು. ಎಪಿಡಮಿಕ್ ಕಾಯ್ದೆಯಲ್ಲಿ ಆ ಮಾಹಿತಿಯಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

  • ರಾಯಚೂರು ಕೋವಿಡ್-19 ಆಸ್ಪತ್ರೆಯಿಂದ 34 ಜನ ಡಿಸ್ಚಾರ್ಜ್

    ರಾಯಚೂರು ಕೋವಿಡ್-19 ಆಸ್ಪತ್ರೆಯಿಂದ 34 ಜನ ಡಿಸ್ಚಾರ್ಜ್

    ರಾಯಚೂರು: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಜಿಲ್ಲೆಯ ಕೊವಿಡ್-19 ಆಸ್ಪತ್ರೆಯಿಂದ ಇಂದು 34 ಜನರನ್ನ ಡಿಸ್ಚಾರ್ಜ್ ಮಾಡಲಾಗಿದೆ. ಮೇ 17, 18 ಹಾಗೂ 19 ರಂದು ಆಸ್ಪತ್ರೆಗೆ ದಾಖಲಾಗಿದ್ದವರನ್ನ ಬಿಡುಗಡೆ ಮಾಡಲಾಗಿದೆ.

    ಐಸೋಲೇಷನ್‍ನಲ್ಲಿದ್ದವರನ್ನ ಮತ್ತೊಮ್ಮೆ ಪರೀಕ್ಷೆ ಮಾಡಿದಾಗ ನೆಗೆಟಿವ್ ಬಂದಿದೆ. ಹೀಗಾಗಿ 34 ಜನರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಈಗ ಬಿಡುಗಡೆಯಾದವರು 14 ದಿನ ಹೋಂ ಕ್ವಾರಂಟೈನ್ ಇರಬೇಕು. ಬಿಡುಗಡೆಯಾದವರಲ್ಲಿ ರಾಯಚೂರು ಹಾಗೂ ದೇವದುರ್ಗ ತಾಲೂಕಿನವರಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ತಿಳಿಸಿದರು.

    ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರಿಗೆ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಪುಷ್ಪವೃಷ್ಠಿ ಮಾಡಿದರು.

    ಕೊರೊನಾ ಸೋಂಕಿನ ಮೂಲವೇ ತಿಳಿಯದೆ ತಲೆನೋವಾಗಿದ್ದ ರಾಯಚೂರು ತಾಲೂಕು ಮಲಿಯಾಬಾದ್‍ನ ಎರಡು ವರ್ಷದ ಬಾಲಕಿ ಸಹ ಇಂದು ಬಿಡುಗಡೆಯಾಗಿದ್ದಾಳೆ. ಬಾಲಕಿಗೆ ಈಗ ನೆಗೆಟಿವ್ ಬಂದಿದೆ. ಆದರೆ ಮಲಿಯಾಬಾದ್ ಗ್ರಾಮ ಕಂಟೈನ್ಮೆಂಟ್ ಝೋನ್ ಆಗಿ ಮುಂದುವರಿಯಲಿದೆ ಅಂತ ವೆಂಕಟೇಶ್ ಕುಮಾರ್ ತಿಳಿಸಿದರು.