Tag: DC

  • ಮೈಸೂರಿನಲ್ಲಿ ಮತ್ತೆ DC Vs MLA ಫೈಟ್- ಬಗಾದಿ ವರ್ಗಾವಣೆಗೆ ರಾಮದಾಸ್ ಪಟ್ಟು

    ಮೈಸೂರಿನಲ್ಲಿ ಮತ್ತೆ DC Vs MLA ಫೈಟ್- ಬಗಾದಿ ವರ್ಗಾವಣೆಗೆ ರಾಮದಾಸ್ ಪಟ್ಟು

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara-2022 ಉತ್ಸವ ಜಿಲ್ಲಾಧಿಕಾರಿ ಮತ್ತು ಜನಪ್ರತಿನಿಧಿ ಮಧ್ಯೆ ಮುಸುಕಿನ ಗುದ್ದಾಟಕ್ಕೆ ವೇದಿಕೆಯಾಗುತ್ತಿದೆ. ಒಂದೇ ಒಂದು ಬಿಲ್ (Bill) ವಿಚಾರ ಬಿಜೆಪಿ ಶಾಸಕ ಮತ್ತು ಜಿಲ್ಲಾಧಿಕಾರಿ ನಡುವೆ ಮುನಿಸು ತಂದಿಟ್ಟಿದೆ. ಇದರಿಂದ ಜಿಲ್ಲಾ ಉಸ್ತುವಾರಿ ಮಂತ್ರಿಗೂ ತಲೆನೋವು ಶುರುವಾಗಿದ್ದು, ಶಾಸಕರ ಅಸಮಾಧಾನ ತಣಿಸುವ ಹೊಸ ಟಾಸ್ಕ್ ಹೆಗಲ ಮೇಲೇರಿದೆ.

    ಕಳೆದ 8-10 ತಿಂಗಳ ಹಿಂದೆ ಮೈಸೂರಿನಲ್ಲಿ ಜಿಲ್ಲಾಧಿಕಾರಿ ಮತ್ತು ಜನಪ್ರತಿನಿಧಿಗಳ ಫೈಟ್ ನಡೆದಿತ್ತು. ಅದನ್ನು ಇಡೀ ರಾಜ್ಯ ಕುತೂಹಲದಿಂದ ನೋಡಿತ್ತು. ಈಗ ಇಡೀ ವಿಶ್ವವೇ ಮೈಸೂರಿನ ದಸರಾವನ್ನು ನೋಡುವ ಸಂದರ್ಭದಲ್ಲೇ ಮತ್ತೊಂದು ಸುತ್ತಿನ ಜನಪ್ರತಿನಿಧಿ ವರ್ಸಸ್ ಜಿಲ್ಲಾಧಿಕಾರಿ ನಡುವಿನ ಫೈಟ್ ಸದ್ದಿಲ್ಲದೆ ಶುರುವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ (Dr. Bagadi Gautham) ವರ್ಗಾವಣೆಗೆ ಮೈಸೂರಿನ ಬಿಜೆಪಿಯ ಹಿರಿಯ ಶಾಸಕ ಎಸ್.ಎ.ರಾಮದಾಸ್ (S A Ramdas) ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

    ಡಿಸಿ ಬಗಾದಿ ಗೌತಮ್ ಹಾಗೂ ಅಪರ ಜಿಲ್ಲಾಧಿಕಾರಿ ಮಂಜುನಾಥ್ ವರ್ಗಾವಣೆ ಮಾಡದೆ ಇದ್ದರೆ ತಾವು ದಸರಾದ ಎಲ್ಲಾ ಕಾರ್ಯಕ್ರಮಗಳನ್ನು ಬಹಿಷ್ಕರಿಸುತ್ತೇನೆ. ದಸರಾಗೆ ನನ್ನ ಯಾವ ಸಹಕಾರವೂ ಇರುವುದಿಲ್ಲ ಎಂದು ರಾಮದಾಸ್ ಕೋಪಗೊಂಡಿದ್ದಾರೆ ಎನ್ನಲಾಗ್ತಿದೆ. ಆದರೆ ರಾಮದಾಸ್ ಪಟ್ಟಿಗೆ ಸರ್ಕಾರ (BJP Government) ಬಗ್ಗಿದಂತೆ ಕಾಣುತ್ತಿಲ್ಲ. ದಸರಾ ಸಂದರ್ಭದಲ್ಲಿ ಡಿಸಿ ವರ್ಗಾವಣೆ ಅಸಾಧ್ಯವಾದ ಮಾತು. ಇದರ ಮೇಲೆ ನಿಮ್ಮಿಷ್ಟ ಅಂತಾ ಸರ್ಕಾರ ರಾಮದಾಸ್‍ಗೆ ಸ್ಪಷ್ಟಪಡಿಸಿರೋ ಕಾರಣ ಶಾಸಕರು ಮತ್ತಷ್ಟು ಅಸಮಾಧಾನಗೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದಕ್ಕೆ ಪೂರಕವಾಗಿ ರಾಮದಾಸ್, ದಸರಾ ಪೂರ್ವಭಾವಿ ಸಿದ್ಧತೆಗಳ ಯಾವ ಸಭೆಗೂ ಹಾಜರಾಗಿಲ್ಲ. ಎಲ್ಲಾ ಜನಪ್ರತಿನಿಧಿಗಳು ಸಭೆಗೆ ಬಂದರು ಕೂಡ ಬಿಜೆಪಿಯ ಹಿರಿಯ ಶಾಸಕನ ಗೈರು ಎದ್ದು ಕಾಣುತ್ತಿದೆ.

    ಡಿಸಿ ಮತ್ತು ಅಪರ ಜಿಲ್ಲಾಧಿಕಾರಿ ಮೇಲೆ ಶಾಸಕ ರಾಮದಾಸ್ ಈ ಪ್ರಮಾಣದಲ್ಲಿ ರೊಚ್ಚಿಗೆದ್ದಿರೋದಕ್ಕೆ ಕಾರಣ ಒಂದು ಬಿಲ್. ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆಗೂ ಒಂದು ತಿಂಗಳ ಮುನ್ನ ನಾಲ್ಕು ಭಾನುವಾರವೂ ಯೋಗ ತಾಲೀಮು ನಡೆದಿತ್ತು. ಇದರ ನೇತೃತ್ವ ವಹಿಸಿದ್ದ ಶಾಸಕ ರಾಮದಾಸ್, ನಂತರ ತಾಲೀಮಿನ ಬಿಲ್ ಮಂಜೂರು ಮಾಡುವಂತೆ ಡಿಸಿಗೆ ಹೇಳಿದ್ದಾರೆ. ಆದರೆ ಡಿಸಿ ಬಗಾದಿ ಗೌತಮ್ ಜಿಲ್ಲಾಡಳಿತದ ಪೂರ್ವಾನುಮತಿ ಇಲ್ಲದೆ ಮಾಡಿರೋ ತಾಲೀಮಿನ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲ. ಕಾನೂನಾತ್ಮಕವಾಗಿ ನಾನು ಬಿಲ್ ಹಣ ಮಂಜೂರು ಅಸಾಧ್ಯ ಎಂದು ರಾಮದಾಸ್ ಆಜ್ಞೆಯನ್ನು ಸರಾಸಗಟಾಗಿ ತಿರಸ್ಕರಿಸಿದ್ದಾರಂತೆ. ಇದನ್ನೂ ಓದಿ: ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

    ಆದರೆ ರಾಮದಾಸ್ ಈ ಬಿಲ್‍ಗಾಗಿ ಹಿರಿಯರಿಂದ ಹೇಳಿಸಿದರೂ ಡಿಸಿ ಮಾತ್ರ ಬಿಲ್ ಮಂಜೂರಾತಿಗೆ ಒಪ್ಪಿಲ್ಲ. ಇದರಿಂದ ರಾಮದಾಸ್ ಅಸಮಾಧಾನಗೊಂಡು, ಒಬ್ಬ ಹಿರಿಯ ಶಾಸಕರ ಮಾತಿಗೆ ಬೆಲೆ ಇಲ್ವಾ ಎಂದು ಪ್ರಶ್ನಿಸಿ ಡಿಸಿ ವರ್ಗಾವಣೆಗೆ ಪಟ್ಟು ಹಿಡಿದಿದ್ದು, ದಸರಾಗೆ ತಮ್ಮ ಅಸಹಕಾರ ಮುಂದುವರಿಸಿದ್ದಾರೆ ಎನ್ನಲಾಗ್ತಿದೆ. ಆದರೆ ರಾಮದಾಸ್ ಮನವೊಲಿಸುವ ಟಾಸ್ಕ್ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೆಗಲೇರಿದ್ದು, ಅತ್ತ ದಸರಾ ಸಿದ್ಧತೆಯನ್ನೇ ನೋಡೋದಾ ಇಲ್ಲ ಸ್ವಪಕ್ಷಿಯ ಶಾಸಕನ ಅಸಮಾಧಾನ ತಣಿಸೋದ ಎನ್ನೋ ಸಂದಿಗ್ಧತೆಯಲ್ಲಿ ಸಿಲುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರು ಡಿಸಿಗೆ ಹ್ಯಾಕರ್ಸ್ ಕಾಟ- ನಕಲಿ ವಾಟ್ಸಪ್ ಖಾತೆ ಮೂಲಕ ಹಣಕ್ಕೆ ಬೇಡಿಕೆ

    ಮಂಗಳೂರು ಡಿಸಿಗೆ ಹ್ಯಾಕರ್ಸ್ ಕಾಟ- ನಕಲಿ ವಾಟ್ಸಪ್ ಖಾತೆ ಮೂಲಕ ಹಣಕ್ಕೆ ಬೇಡಿಕೆ

    ಮಂಗಳೂರು: ಎಲ್ಲವೂ ಡಿಜಿಟಲೈಸ್ ಆಗ್ತಾ ಇದ್ದ ಹಾಗೆನೇ ಇವುಗಳಲ್ಲಿ ಆಗುವ ವಂಚನೆ (Cheating) ಪ್ರಕರಣಗಳು ಕೂಡ ಹೆಚ್ಚುತ್ತಲೇ ಇವೆ. ಸೈಬರ್ ಅಪರಾಧಗಳನ್ನ ತಡೆಯೋಕೆ ಪೊಲೀಸರು ಚಾಪೆ ಕೆಳಗೆ ನುಸುಳಿದ್ರೆ ಸೈಬರ್ ಖದೀಮರು ರಂಗೋಲಿ ಕೆಳಗೆ ತೂರಿ ಯಾಮಾರಿಸ್ತಾ ಇದ್ದಾರೆ. ಇಲ್ಲಿವರೆಗೆ ಸ್ವಲ್ಪ ಪಾಪ್ಯುಲಾರಿಟಿ ಇರೋ ಮಂದಿಯ ಖಾತೆ ಹ್ಯಾಕ್ ಮಾಡಿ ದುಡ್ಡು ಪೀಕಿಸೋಕೆ ಟ್ರೈ ಮಾಡ್ತಾ ಇದ್ದ ಖದೀಮರು, ಈಗ ಅಧಿಕಾರಿಗಳ ಬೆನ್ನು ಬಿದ್ದಿದ್ದಾರೆ. ಹೌದು ದಕ್ಷಿಣ ಕನ್ನಡ (Dakshina Kannada) ಜಿಲ್ಲಾಧಿಕಾರಿಗಳ ಈ ರೀತಿಯ ಸಮಸ್ಯೆ ತಂದಿಟ್ಟಿದ್ದಾರೆ ಕಿಲಾಡಿಗಳು.

    ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ (Cyber Crime) ಮೂಲಕ ವಂಚಿಸೋದು ಹೆಚ್ಚಾಗ್ತಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಹೊರತಾಗಿಲ್ಲ. ಡಿಸಿ ಖಾತೆಗೆ ಕನ್ನ ಹಾಕಿದ ಖದೀಮರು ಡಿಸಿ ಹೆಸರು, ಫೋಟೋ ಬಳಸಿಕೊಂಡು ವಾಟ್ಸಪ್ (Whatsapp) ಮೂಲಕ ಹಣ ವರ್ಗಾಯಿಸುವಂತೆ ಡಿಸಿ ಕೆ.ವಿ ರಾಜೇಂದ್ರ (K V Rajendra) ಗೆಳೆಯರಿಗೆ ಮೆಸೇಜ್ ರವಾನಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸಿದ ಸಿದ್ದರಾಮಯ್ಯ

    ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (DC) ಡಾ.ರಾಜೇಂದ್ರ ಕೆ.ವಿ. ವಾಟ್ಸಪ್ ಖಾತೆ ಹ್ಯಾಕ್ ಮಾಡಲಾಗಿದ್ದು. 85907 10748 ನಂಬರ್‍ನಿಂದ ಡಿಸಿ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿದ್ದ ಹಲವರಿಗೆ ಮೆಸೇಜ್ (Message) ಮಾಡಿದ್ದಾರೆ. ಜನತೆಗೆ ನಂಬಿಕೆ ಬರಲಿ ಅಂತಾ ವಾಟ್ಸಪ್ ಡಿಪಿಗೆ ಜಿಲ್ಲಾಧಿಕಾರಿಯವರ ಫೋಟೋ ಹಾಕಿ ಹಣ ವರ್ಗಾಯಿಸುವಂತೆ ಮೆಸೇಜ್ ಕಳಿಸಿದ್ದಾರೆ. ಇದಕ್ಕೆ ಡಿಸಿಯವರ ಇಮೇಲ್ ಹ್ಯಾಕ್ ಮಾಡಿ ಕಾಂಟ್ಯಾಕ್ಟ್ ಲಿಸ್ಟ್ ಪಡೆದಿರುವ ಸಾಧ್ಯತೆಗಳಿವೆ.

    ಈ ವಿಚಾರ ಬೆಳಕಿಗೆ ಬರುತ್ತಲೇ ಯಾರೂ ಹಣ ವರ್ಗಾಯಿಸದಂತೆ ಜನರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಮಂಗಳೂರಿ (Mangaluru) ನ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ. ಇತ್ತ ಸೈಬರ್ ಕ್ರೈಂ ವಿಭಾಗ ಇನ್ನಷ್ಟು ಅಲರ್ಟ್ ಆಗಿ ಖದೀಮರ ಪತ್ತೆಗೆ ಬಲೆ ಬೀಸಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಹೊನ್ನಾವರ ಮೀನುಗಾರರ ಮೇಲೆ ದೌರ್ಜನ್ಯ – ಜಿಲ್ಲಾಧಿಕಾರಿ, ಎಸ್ಪಿಗೆ ಸಮನ್ಸ್ ಜಾರಿ

    ಹೊನ್ನಾವರ ಮೀನುಗಾರರ ಮೇಲೆ ದೌರ್ಜನ್ಯ – ಜಿಲ್ಲಾಧಿಕಾರಿ, ಎಸ್ಪಿಗೆ ಸಮನ್ಸ್ ಜಾರಿ

    ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ(DC) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಸಮನ್ಸ್ ಜಾರಿ ಮಾಡಲಾಗಿದೆ.

    ಹೊನ್ನಾವರದ ಕಾಸರಕೋಡದ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿ ಮಾಡಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತಗೊಳಿಸುವಂತೆ ಹಾಗೂ ಬಂದರಿಗೆ ರಸ್ತೆ ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ಜ.24ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರನ್ನು ಎಫ್‍ಐಆರ್ ಸಹ ದಾಖಲಿಸದೇ ಬಂಧಿಸಿ ಸಂಜೆ ವೇಳೆ ಬಿಡುಗಡೆಗೊಳಿಸಲಾಗಿತ್ತು. ಇದನ್ನೂ ಓದಿ: ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ, ಅತ್ಯಾಚಾರ

    ಈ ವೇಳೆ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿ ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೆ ಮೇ 6ರಂದು ದೂರು ದಾಖಲಿಸಿದ್ದರು. ಈ ದೂರಿನನ್ವಯ ಜುಲೈ 19ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್ ಅವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆಯಿಂದ ಯಾವುದೇ ವರದಿ ಸಹ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ

    Live Tv
    [brid partner=56869869 player=32851 video=960834 autoplay=true]

  • ಮಂಡ್ಯದ ವಸತಿ ಶಾಲೆಯಿಂದ 9ನೇ ತರಗತಿ ವಿದ್ಯಾರ್ಥಿ ನಾಪತ್ತೆ – ಪೊಲೀಸರಿಗೆ ಸವಾಲಾಯ್ತು ಕೇಸ್

    ಮಂಡ್ಯದ ವಸತಿ ಶಾಲೆಯಿಂದ 9ನೇ ತರಗತಿ ವಿದ್ಯಾರ್ಥಿ ನಾಪತ್ತೆ – ಪೊಲೀಸರಿಗೆ ಸವಾಲಾಯ್ತು ಕೇಸ್

    ಮಂಡ್ಯ: ತಾಯಿ ಇಲ್ಲದ ತಬ್ಬಲಿ ಮಗು ಎಂದು ಅಜ್ಜಿ ಆ ಹುಡುಗನನ್ನು ಮುದ್ದಾಗಿ ಸಾಕಿದ್ದಳು. ಇದೀಗ ಆ ಹುಡುಗ ವಸತಿ ಶಾಲೆಯಿಂದ (Residential School) ನಿಗೂಢವಾಗಿ ನಾಪತ್ತೆಯಾಗಿದ್ದಾನೆ. ಇತ್ತ ಮುದ್ದಾಗಿ ಸಾಕಿದ್ದ ಮೊಮ್ಮಗ ಕಾಣುತ್ತಿಲ್ಲ ಎಂದು ಅಜ್ಜಿ ಕಣ್ಣೀರಿಡುತ್ತಿದ್ದಾರೆ.

    ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಈರೇಗೌಡ ಎಂಬುವವರ ಪುತ್ರ ಕಿಶೋರ್ ನಾಪತ್ತೆಯಾಗಿದ್ದಾನೆ. ಚಿಕ್ಕ ವಯಸ್ಸಿನಲ್ಲಿ ತಾಯಿ ಕಳೆದುಕೊಂಡು ತಬ್ಬಲಿಯಾದ ಕಿಶೋರ್‌ನನ್ನು ತಂದೆ ಹಾಗೂ ಅಜ್ಜಿ ಪ್ರೀತಿಯಿಂದ ಸಾಕಿ ಸಲಹಿದ್ದರು. ಕಿಶೋರ್‌ನನ್ನು ವಿದ್ಯಾವಂತನನ್ನಾಗಿ ಮಾಡಬೇಕೆಂಬ ಕನಸನ್ನು ಕಟ್ಟಿಕೊಂಡಿದ್ದರು. ಹೀಗಾಗಿ ಕಿಶೋರ್‌ನನ್ನು ಮಂಡ್ಯದ ತಂಗಳಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ (Morarji Desai Residential School) ಸೇರಿಸಿದ್ದರು. ಇದನ್ನೂ ಓದಿ: ಗೇಟ್ ತೆಗೆಯೋದು ತಡವಾಗಿದ್ದಕ್ಕೆ ಸೆಕ್ಯೂರಿಟಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕಿ

    ವಸತಿ ಶಾಲೆಯಲ್ಲಿ ಕಿಶೋರ್ 9ನೇ ತರಗತಿ ವಿದ್ಯಾಭ್ಯಾಸ (Education) ಮಾಡುತ್ತಿದ್ದ. ಜು.27ರಂದು ರಜೆ ಇದ್ದ ಕಾರಣ ಕಿಶೋರ್ ವಸತಿ ಶಾಲೆಯಿಂದ ಮನೆಗೆ ಬಂದಿದ್ದ. ನಂತರ ರಜೆ ಮುಗಿದ ಬಳಿಕ ತಂದೆ ಈರೇಗೌಡ ಕಿಶೋರ್‌ನನ್ನು ಆ.8 ರಂದು ಮತ್ತೆ ವಸತಿ ಶಾಲೆಗೆ ಬಿಟ್ಟು ಬಂದಿದ್ದರು. ಇದಾದ ನಂತರ ಮತ್ತೆ ಗೌರಿ-ಗಣೇಶ ಹಬ್ಬಕ್ಕೆ (Ganesha Festoival) ತಾಯಿಗೆ ಎಡೆ ಇಡಲು ಕಿಶೋರ್‌ನನ್ನು ಮನೆಗೆ ಕರೆತರಲು ಹೋದ ವೇಳೆ ಇಲ್ಲಿನ ಶಿಕ್ಷಕರು 20 ದಿನಗಳಿಂದ ನಿಮ್ಮ ಮಗ ಶಾಲೆಗೇ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಕ್ಸ್ ಚಚ್ಚಿ ಅಂಪೈರ್‌ರನ್ನು ಬಡಿದೆಬ್ಬಿಸಿದ ಸ್ಮಿತ್ – ಆಸಿಸ್ ಆಟಗಾರನ ಕ್ರೀಡಾ ಬದ್ಧತೆಗೆ ಮೆಚ್ಚುಗೆ

    ಆ.8 ರಂದು ಈರೇಗೌಡ ಕಿಶೋರ್‌ನನ್ನು ಮೊರಾರ್ಜಿ ದೇಸಾಯಿ ಶಾಲೆಗೆ ಬಿಡುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಕಿಶೋರ್ ಮತ್ತೆ ಶಾಲೆಯಿಂದ ಹೊರ ಬರುವ ದೃಶ್ಯ ಮಾತ್ರ ಇಲ್ಲ. ಇದಲ್ಲದೇ ಕಿಶೋರ್ ಟ್ರಂಕ್ ಹಾಗೂ ಬಟ್ಟೆಗಳು ಹಾಸ್ಟೆಲ್‌ನಲ್ಲೇ ಇವೆ. ಟ್ರಂಕ್ ಬಳಿ ಒಂದು ಲೆಟರ್ ಸಿಕ್ಕಿದ್ದು, ಇದ್ರಲ್ಲಿ ನನಗೆ ಈ ಶಾಲೆಯಲ್ಲಿ ಓದಲು ಇಷ್ಟವಿಲ್ಲ. ಈ ಬಗ್ಗೆ ನಿಮಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಅಪ್ಪ-ಚಿಕ್ಕಪ್ಪ ನನ್ನ ಹುಡುಕಬೇಡಿ ಎಂದು ಬರೆದಿದೆ. ಆದ್ರೆ ಕಿಶೋರ್ ಪೋಷಕರು ಇದು ನನ್ನ ಮಗನ ಕೈಬರಹವಲ್ಲ ಎಂದು ಹೇಳುತ್ತಿದ್ದಾರೆ. ಇತ್ತ ಪ್ರೀತಿಯಿಂದ ಸಾಕಿದ ಮೊಮ್ಮಗ ಕಾಣೆಯಾಗಿರುವ ಸುದ್ದಿಯನ್ನು ಕೇಳಿ ಅಜ್ಜಿ ಕಣ್ಣೀರು ಹಾಕುತ್ತಿದ್ದಾಳೆ. ಇದನ್ನೂ ಓದಿ: ಕೆರೆ ಮಧ್ಯ ತೆಪ್ಪದಲ್ಲಿ ತೆರಳಿ ಬೆಸ್ಕಾಂ ಸಿಬ್ಬಂದಿಯಿಂದ ವಿದ್ಯುತ್ ದುರಸ್ತಿ – ಎಲ್ಲೆಡೆ ಮೆಚ್ಚುಗೆ

    ವಿದ್ಯಾರ್ಥಿಯೊಬ್ಬ ಮೊರಾರ್ಜಿ ದೇಸಾಯಿ ಶಾಲೆಯಿಂದ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಿಸಿಟಿವಿ ದೃಶ್ಯದಲ್ಲಿ ವಿದ್ಯಾರ್ಥಿ ಶಾಲೆಯಿಂದ ಹೊರಗೆ ಹೋಗುವುದು ಸೆರೆಯಾಗಿಲ್ಲ. ಹೀಗಿರುವಾಗ ವಿದ್ಯಾರ್ಥಿ ಎಲ್ಲಿಗೆ ಹೋದ ಎಂಬ ಪ್ರಶ್ನೆಗಳು ಮೂಡುತ್ತಿದೆ. ಈ ಬಗ್ಗೆ ಕಿಶೋರ್ ಪೋಷಕರು ಕೆರಗೊಡು ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯನ್ನು ಕೇಳಿದ್ರೆ ಈ ಬಗ್ಗೆ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಯನ್ನು ಹುಡುಕುತ್ತೇವೆ, ಅಲ್ಲದೇ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

    ಬೆಂಗ್ಳೂರಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    weather

    ಬೆಂಗಳೂರಿನ ಮೆಜಸ್ಟಿಕ್‌, ರೇಸ್‌ಕೋರ್ಸ್‌, ರಾಜಾಜೀನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧೆಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿವೆ. ಜನರು ರಸ್ತೆಯಲ್ಲಿ ನಡೆದಾಡುವುದಕ್ಕೂ ಕಷ್ಟಪಡುವಂತಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ

    Rain

    ವಾಹನ ಸಂಚಾರಕ್ಕೂ ತೊಂದರೆಯಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಶ್ರೀನಿವಾಸ್‌ ರಜೆ ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಿಲ್ಲಾಧಿಕಾರಿ ಜೊತೆ ವಿದ್ಯಾರ್ಥಿನಿ ರೌಂಡ್ಸ್- ಡಿಸಿ ಆಡಳಿತ ವೈಖರಿ ಪರಿವೀಕ್ಷಣೆ

    ಜಿಲ್ಲಾಧಿಕಾರಿ ಜೊತೆ ವಿದ್ಯಾರ್ಥಿನಿ ರೌಂಡ್ಸ್- ಡಿಸಿ ಆಡಳಿತ ವೈಖರಿ ಪರಿವೀಕ್ಷಣೆ

    ಚಿಕ್ಕಬಳ್ಳಾಪುರ: ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿನಿ ಇಡೀ ದಿನ ಜಿಲ್ಲಾಧಿಕಾರಿಗಳ ಜೊತೆಗೆ ಆಡಳಿತ ಕಾರ್ಯವೈಖರಿ ಪರಿವೀಕ್ಷಣೆ ನಡೆಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

    ಜಿಲ್ಲಾಧಿಕಾರಿಗಳ ದಿನಚರಿ ಹೇಗಿರುತ್ತದೆ? ನಿತ್ಯ ಏನೆಲ್ಲ ಕೆಲಸ ಕಾರ್ಯಗಳಲ್ಲಿ ಅವರು ತೊಡಗಿಸಿಕೊಂಡಿರುತ್ತಾರೆ ಎಂಬ ಕೌತುಕ ಬಹುತೇಕರಲ್ಲಿ ಸರ್ವೇ ಸಾಮಾನ್ಯವಾಗಿರುತ್ತದೆ. ಆದರೆ ಅವಕಾಶ ಸಿಗುವುದಿಲ್ಲ, ಇದರಿಂದ ಬೆಳಗ್ಗಿನಿಂದ ಸಂಜೆ ತನಕ ಅಧಿಕಾರಿಗಳ ಕಾರಿನಲ್ಲಿ ಓಡಾಡಿ, ವಿವಿಧ ಸಭೆ- ಸಮಾರಂಭಗಳಲ್ಲಿ ಪಾಲ್ಗೊಂಡು ಎಲ್ಲವನ್ನೂ ಆಲಿಸಿ, ನೋಟ್ಸ್ ಮಾಡಿಕೊಳ್ಳುವ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಬಿ.ಎಮ್.ಪಲ್ಲವಿ ತೀರ್ಥ ಅವರು ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಜೊತೆಯಲ್ಲಿದ್ದು, ಅವರ ಎಲ್ಲ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾಗಿ ಜಿಲ್ಲಾಧಿಕಾರಿಯೊಂದಿಗೆ ಆಡಳಿತವನ್ನು ಹತ್ತಿರದಿಂದ ಕಂಡರು.

    ಅಂದಹಾಗೆ ಜಿಲ್ಲಾ ಕೌಶಲ್ಯ ದಿನಾಚರಣೆಯ ಅಂಗವಾಗಿ ಯುವ ಜನತೆಯಲ್ಲಿ ಕೌಶಲ್ಯಾಭಿವೃದ್ಧಿ ಮಹತ್ವದ ಕುರಿತು ಜಾಗೃತಿ ಮೂಡಿಸಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು 8 ರಿಂದ 12ನೇ ತರಗತಿ ಮತ್ತು ಪದವಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿದ್ದ ಕೌಶಲ್ಯ ಮತ್ತು ಸಾಮಥ್ರ್ಯಗಳ ಮೇಲೆ ಕೇಂದ್ರೀಕೃತವಾದ ಉನ್ನತ ಶಿಕ್ಷಣ ಬಗ್ಗೆ ಮರುಚಿಂತನೆ ಎಂಬ ವಿಷಯದ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ (ವಿಜ್ಞಾನ ವಿಭಾಗ) ವಿದ್ಯಾರ್ಥಿನಿ ಬಿ.ಎಮ್.ಪಲ್ಲವಿ ತೀರ್ಥ ಅವರು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ವಿಜೇತರಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಒಟ್ಟಾರೆ 21 ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ವಿಜೇತರಾದ ವಿದ್ಯಾರ್ಥಿಗಳಿಗೆ ಕೌಶಲ್ಯಸ್ಫೂರ್ತಿ ಶೀರ್ಷಿಕೆಯಡಿ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಕಾರ್ಯಕ್ರಮದಡಿ ಭಾಗವಹಿಸಲು ಅವಕಾಶವಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಬಿ.ಎಮ್.ಪಲ್ಲವಿ ತೀರ್ಥ ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಾರ್ಯ ಚಟುವಟಿಕೆಗಳಲ್ಲಿ ಜೊತೆಯಲ್ಲಿದ್ದರು. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಪಲ್ಲವಿಯನ್ನು ಮಾನ್ಯ ಜಿಲ್ಲಾಧಿಕಾರಿಗಳು ವಿದ್ಯಾರ್ಥಿನಿ ಬರೆದ ಪ್ರಬಂಧವನ್ನು ಓದಿ ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಸ್ತಿ ಪತ್ರ ಹಾಗೂ ಕೌಶಲ್ಯ ಕೈಪಿಡಿ ಪುಸ್ತಕವನ್ನು ನೀಡಿ ಅಭಿನಂದಿಸಿದರು.

    ಯುವಜನರಲ್ಲಿ ಕೌಶಲ್ಯ ಹೆಚ್ಚಿಸುವುದು ಮುಖ್ಯ: ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು ಕೌಶಲ್ಯಾಭಿವೃದ್ಧಿ, ವಿಜೇತರಾದ ವಿದ್ಯಾರ್ಥಿಗಳಿಗೆ ಕೌಶಲ್ಯಸ್ಫೂರ್ತಿ ಶೀರ್ಷಿಕೆಯಡಿ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಕಾರ್ಯಕ್ರಮದಡಿ ಜಿಲ್ಲಾಧಿಕಾರಿಯವರ ಕಾರ್ಯವೈಖರಿ ಹತ್ತಿರದಿಂದ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ಸರ್ಕಾರದ ನಿರ್ದೇಶನದಂತೆ ಮಾರ್ಗದರ್ಶನ ನೀಡಿದ್ದೇವೆ. ವಿದ್ಯಾರ್ಥಿಗಳಿಗೆ ಇಂತಹ ಅವಕಾಶ ಕಲ್ಪಿಸಿಕೊಡುವುದು ಕೂಡ ಉತ್ತಮ ಕಾರ್ಯವಾಗಿದೆ ಎಂದರು.

    ಐಎಎಸ್ ಅಧಿಕಾರಿಯಾಗುವ ಗುರಿ: ಇಂದು ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಅವರ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತಮ ಅಧಿಕಾರಿಯಾಗಿ ಸಮಾಜಸೇವೆ ಆಗುವ ಗುರಿಯನ್ನು ಹೊಂದಿದ್ದೇನೆ ಎಂದಿ ಬಿ.ಎಮ್.ಪಲ್ಲವಿ ತೀರ್ಥ ಅವರು ತಮ್ಮ ಅನುಭವವನ್ನು ಹಂಚಿಕೊಂಡರು.

    ಪಲ್ಲವಿ ಭಾಗಿಯಾದ ಸರ್ಕಾರಿ ಕಾರ್ಯಕ್ರಮಗಳು: ಮೊದಲಿಗೆ ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿ, ಸರ್ಕಾರಿ ಯೋಜನೆಗಳು ಹಾಗೂ ಸವಲತ್ತುಗಳ ಕುರಿತು ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    ತದ ನಂತರ ಚಿಕ್ಕಬಳ್ಳಾಪುರ ತಾಲೂಕಿನ ಬೀಡಗಾನಹಳ್ಳಿ, ದೇವಿಶೆಟ್ಟಿಹಳ್ಳಿ, ಯಲುವಳ್ಳಿ ಗ್ರಾಮದಲ್ಲಿ ಏರ್ಪಡಿಸಿರುವ ವಿವಿಧ ಕಾಮಗಾರಿಗಳಿಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಶಂಕುಸ್ಥಾಪನೆ ಮಾಡಿದರು. ಈ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ವಿದ್ಯಾರ್ಥಿನಿ ಪಲ್ಲವಿ ಭಾಗಿಯಾಗಿ ಸರ್ಕಾರಿ ಕಾರ್ಯಕ್ರಮಗಳ ರೂಪುರೇಷೆಗಳನ್ನು ತಿಳಿದುಕೊಂಡರು. ನಂತರ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಪ್ರಕರಣಗಳ ಇತ್ಯರ್ಥಪಡಿಸುವ ವೇಳೆಯಲ್ಲಿ ಭಾಗಿಯಾಗಿದ್ದರು.

    ಪಲ್ಲವಿ ಇವರು, ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ನಿವಾಸಿಗಳಾದ ಮಂಜುನಾಥ್ ಹಾಗೂ ನಾರಾಯಣಮ್ಮ ಅವರ ಪುತ್ರಿಯಾಗಿರುವ ಇವರು, ಪ್ರಸ್ತುತ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎಸ್ಸಿ (ವಿಜ್ಞಾನ ವಿಭಾಗ)ದಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ

    Live Tv
    [brid partner=56869869 player=32851 video=960834 autoplay=true]

  • ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

    ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

    ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕಾಗಿ ವಿವಿಧ ಇಲಾಖೆಯ ಮಧ್ಯೆ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಉತ್ಸವಕ್ಕೆ ಮುಂಚಿತವಾಗಿಯೇ ಕೋಮು ಸೌಹಾರ್ದ ಸಭೆ ನಡೆಸುವಂತೆ ತಿಳಿಸಿದೆ.

    ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್‌ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೂ ಸೇರಿದಂತೆ ಸುತ್ತೋಲೆ ಬಿಡುಗಡೆ ಮಾಡಿದೆ. ಉತ್ಸವಕ್ಕೂ ಮುಂಚೆ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಸಭೆ ನಡೆಸಲು ಸೂಚನೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್‌

    ಆಗಸ್ಟ್‌ 30ರಿಂದ ಗೌರಿ ಗಣೇಶ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಪ್ರಕ್ರಿಯ ಸಾಮಾನ್ಯವಾಗಿದ್ದು, ಈ ಸಂದರ್ಭದಲ್ಲಿ ಉತ್ಸವವನ್ನು ಆಯೋಜಿಸುವ ಆಯೋಜಕರಿಗೆ ಪರವಾನಗಿ ನೀಡುವುದು ವಿವಿಧ ಇಲಾಖೆಗಳ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಬೇಕು ಎಂದು ಹೇಳಿದೆ. ಇದನ್ನೂ ಓದಿ:  ಎಲ್ಲರೂ ನೂಪುರ್‌ಗೆ ಕ್ಷಮೆ ಕೇಳುವಂತೆ ಹೇಳಿದರು, ಆದರೆ ನಾನು ಮಾತ್ರ ಬೆಂಬಲ ನೀಡಿದ್ದೇನೆ: ರಾಜ್ ಠಾಕ್ರೆ

    ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

    1. ಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕ, ಪರವಾನಗಿಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ ಅಗ್ನಿಶಾಮಕ, ಪೋಲಿಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಪರವಾನಗಿ ನೀಡಲು ಸೂಕ್ತ ಕ್ರಮ ವಹಿಸುವುದು.
    2. ಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚಾರ ಮಾಡುವುದು.
    3. ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ 3 ದಿನಗಳ ಒಳಗೆ ಪರವಾನಗಿ ನೀಡಲು ಕ್ರಮ ವಹಿಸುವುದು.
    4. ರವಾನಿಗೆ ನೀಡುವ ಮುನ್ನ ಆಯೋಜಕರಿಂದ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆ ಪಡೆಯುವುದು
    5. ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮ ವಹಿಸುವಂತೆ ಆಯೋಜಕರಿಗೆ ಸೂಚಿಸುವುದು.
    6. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು.
    7. ವಿಶೇಷವಾಗಿ ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ಕೊಡುವಂತಿಲ್ಲ.
    8. ತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸುವುದು.

    Live Tv
    [brid partner=56869869 player=32851 video=960834 autoplay=true]

  • ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ, ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಶಾಸಕ ಸಾ.ರಾ.ಮಹೇಶ್ 1,500 ಪುಟಗಳಷ್ಟು ದಾಖಲೆಗಳನ್ನ ಸಲ್ಲಿಸಿದ್ದಾರೆ.

    ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಕರ್ತವ್ಯ ಲೋಪ ಎಸಗಿದ ಆರೋಪ ಸಂಬಂಧ ತನಿಖೆ ಆರಂಭವಾಗಿದೆ. ವಸತಿ ಇಲಾಖೆ ಕಾರ್ಯದರ್ಶಿ ಹಾಗೂ ಅಬಕಾರಿ ಇಲಾಖೆಯ ಆಯುಕ್ತ ಡಾ.ಜೆ ರವಿಶಂಕರ್ ನೇತೃತ್ವದಲ್ಲಿ ಮೈಸೂರು ಡಿಸಿ ಕಚೇರಿಯ ಸಭಾಂಗಣದಲ್ಲಿ ತನಿಖೆ ನಡೆಯುತ್ತಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ. ಈ ಹಿಂದೆ ಪ್ರಕರಣಗಳ ತನಿಖೆ ಸಂಬಂಧ ಡಾ.ಜೆ.ರವಿಶಂಕರ್ ಅವರು ಶಾಸಕ ಸಾ.ರಾ.ಮಹೇಶ್ ಅವರಿಗೆ ನೋಟಿಸ್ ನೀಡಿದ್ದರು. ಇದೀಗ ತನಿಖಾಧಿಕಾರಿ, ರವಿಶಂಕರ್ ಅವರಿಗೆ ಶಾಸಕರು 1,500 ಪುಟಗಳಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಗುಡ್ ನೈಟ್ ಕಾಯಿಲ್ ಲಿಕ್ವಿಡ್ ಕುಡಿದು 2 ವರ್ಷದ ಮಗು ಸಾವು

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು 30 ದಿನದಲ್ಲಿ ವಿಚಾರಣೆ ಪ್ರಕ್ರಿಯೆ ಮುಗಿಯುತ್ತದೆ. ಈ ಪ್ರಕರಣದಲ್ಲಿ ನಾನು ಮಾಡಿದ್ದ ಎಲ್ಲಾ ಆರೋಪಕ್ಕೂ ದಾಖಲೆಗಳನ್ನು ನೀಡಿದ್ದೇನೆ. ಐಎಎಸ್ ಅಧಿಕಾರಿಯನ್ನ ಅಮಾನತು ಮಾಡಬೇಕಾಗಿದೆ. ನನಗೆ ತನಿಖೆಯ ಮೇಲೆ ವಿಶ್ವಾಸವಿದೆ. ನಾನು ಯಾವ ದುರುದ್ದೇಶದಿಂದಲೂ ಈ ಆರೋಪಗಳನ್ನು ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಫಿನ್‌ಲ್ಯಾಂಡ್ ಪ್ರಧಾನಿಯ ಖಾಸಗಿ ವೀಡಿಯೋ ಲೀಕ್ – ಮುಚ್ಚಿಡಲು ಏನೂ ಇಲ್ಲವೆಂದ ಮರಿನ್

    ರೋಹಿಣಿ ಸಿಂಧೂರಿ ಅವರು ನನ್ನ ಮೇಲೆ ದುರುದ್ದೇಶದ ಭೂ ಅಕ್ರಮ ಆರೋಪ ಮಾಡಿದ್ದರು. ಈ ತನಿಖೆಯ ವರದಿ ಬಂದ ಮೇಲೆ ಜನರಿಗೆ ಆ ಅಧಿಕಾರಿಯ ನಿಜ ಬಣ್ಣ ಗೊತ್ತಾಗಲಿದೆ. ಆ ಐಎಎಸ್ ಅಧಿಕಾರಿಯ ಬಣ್ಣ ಬಯಲು ಮಾಡುವುದೇ ನನ್ನ ಉದ್ದೇಶ ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗ್ರಾಮಕ್ಕೆ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸಿ – ಡಿಸಿಗೆ ಮನವಿ ಮಾಡಿದ ಪುಟ್ಟ ಬಾಲಕಿ

    ಗ್ರಾಮಕ್ಕೆ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸಿ – ಡಿಸಿಗೆ ಮನವಿ ಮಾಡಿದ ಪುಟ್ಟ ಬಾಲಕಿ

    ಶಿವಮೊಗ್ಗ: 5 ವರ್ಷದ ಪುಟ್ಟ ಬಾಲಕಿ ಗ್ರಾಮಕ್ಕೆ ರಸ್ತೆ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿರುವ ಸುದ್ದಿ ಶಿವಮೊಗ್ಗದಲ್ಲಿ ನಡೆದಿದೆ.

    ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಉರುಳುಗಲ್ಲು ಗ್ರಾಮದ 5 ವರ್ಷದ ಬಾಲಕಿ ಸಾನ್ವಿ ಅಂಗನವಾಡಿಗೆ ಹೋಗಿ ಬರಲು ರಸ್ತೆ ಮಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲಿ ದೇಶ ಸೋತಿತ್ತು – ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗೆದ್ದಿದೆ: ಸುನಿಲ್ ಕುಮಾರ್

    ಉರುಳುಗಲ್ಲು ಗ್ರಾಮಸ್ಥರು ಸರಿಯಾದ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಇಲ್ಲದೇ ಪರದಾಡುತ್ತಿದ್ದಾರೆ. ಈ ಹಿಂದೆ ಗ್ರಾಮಸ್ಥರು ಸಹ ಹಲವು ಬಾರಿ ಪ್ರತಿಭಟನೆ ಮಾಡಿದ್ದು, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆ ಕೆಲವು ದಿನಗಳ ಹಿಂದೆ ರಸ್ತೆ ನಿರ್ಮಿಸಲು ಗ್ರಾಮಸ್ಥರು ಮುಂದಾಗಿದ್ದರು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರ ಮೇಲೆ ಅರಣ್ಯ ಇಲಾಖೆಯ ಕೇಸ್ ಕೂಡ ಹಾಕಿದ್ದರು.

    ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸ್ಥಳೀಯರು ಅರಣ್ಯ ಸಿಬ್ಬಂದಿ ವರ್ತನೆ ವಿರೋಧಿಸಿ ಪಾದಯಾತ್ರೆ ಕೂಡ ಮಾಡಿದ್ದರು. ಈಗ ಈ ಪುಟಾಣಿ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕೈದಿಗಳಿಂದ ಮೊಬೈಲ್ ಬಳಕೆ – ಟೈಲ್ಸ್, ಗೋಡೆ ಕೊರೆದು ಬಚ್ಚಿಟ್ಟಿದ್ದ 19 ಫೋನ್ ವಶಕ್ಕೆ

    Live Tv
    [brid partner=56869869 player=32851 video=960834 autoplay=true]

  • ದಕ್ಷಿಣಕನ್ನಡದಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್- ನಾಳೆ ಶಾಂತಿ ಸಭೆ

    ದಕ್ಷಿಣಕನ್ನಡದಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್- ನಾಳೆ ಶಾಂತಿ ಸಭೆ

    ಮಂಗಳೂರು: ದಕ್ಷಿಣ ಕ್ನನಡ ಜಿಲ್ಲೆಯಲ್ಲಿ ಸಾಲು ಸಾಲು ಹತ್ಯೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತಿದ್ದು, ನಾಳೆ ಶಾಂತಿ ಸಭೆ ನಡೆಯಲಿದೆ.

    ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಮಾತನಾಡಿ, ಗುಪ್ತಚರ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ ಮೂರು ದಿನ ಕಠಿಣ ಪರಿಸ್ಥಿತಿ ಇದೆ. ಹೀಗಾಗಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತದೆ. ನಗರ ವ್ಯಾಪ್ತಿಗೂ ಬಂದ್ ಆದೇಶ ಅನ್ವಯವಾಗಲಿದೆ ಎಂದರು.

    ಇದು ನೈಟ್ ಕರ್ಫ್ಯೂ ಅಲ್ಲ, ಬದಲಾಗಿ ಜನ ಕಡಿಮೆ ಮಾಡಿ ಪೊಲೀಸರಿಗೆ ಶಾಂತಿ ಸುವ್ಯವಸ್ಥಿತೆ ಕಾಪಾಡುವ ಉದ್ದೇಶವಾಗಿದೆ. ಅಗತ್ಯ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ ಸಿನಿಮಾ ಶೋ ಬಂದ್ ಮಾಡಲು ಸೂಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ: ತೇಜಸ್ವಿ ಸೂರ್ಯ

    ಸಾರ್ವಜನಿಕ ಸಭೆ ಸಮಾರಂಭ ಮಾಡುವಂತೆ ಇಲ್ಲ, ಆಯೋಜಕರಿಗೆ ಸೂಚನೆ ಮಾಡಲಾಗಿದೆ. ರಾತ್ರಿ ಅಗತ್ಯ ಪ್ರಯಾಣ ಮಾಡುವವರು ಟಿಕೆಟ್ ಗಳನ್ನು ತೋರಿಸಿ ಪ್ರಯಾಣ ಮಾಡಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಇಡೀ ಬಿಜೆಪಿ ಪಕ್ಷ ಹಾಳಾಗಿ ಹೋಗುತ್ತೆ, ಅಣ್ಣಪ್ಪನ ಶಾಪ ಇದೆ: ಮಹೇಶ್ ಶೆಟ್ಟಿ ತಿಮರೋಡಿ ಕಿಡಿ

    ದ.ಕ ಜಿಲ್ಲೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಸಲಾಗುತ್ತದೆ. ಪೊಲೀಸ್ ಹಿರಿಯ ಅಧಿಕಾರಿಗಳು, ವಿವಿಧ ಧರ್ಮದ ಮುಖಂಡರು ಹಾಗೂ ರಾಜಕೀಯ ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಸಲಹೆ ಸೂಚನೆಗಳನ್ನು ಎಲ್ಲರಿಂದ ಪಡೆಯಲಾಗುತ್ತದೆ. ಜಿಲ್ಲಾಡಳಿತದ ಮುಂದಿನ ನಿಯಮ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]