ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲೇ ಭಾರಿ ಹೈಡ್ರಾಮಾ ನಡೆದಿದೆ. ಜಾರಕಿಹೊಳಿ ಸಹೋದರರು ವರ್ಸಸ್ ಲಕ್ಷ್ಮಣ ಸವದಿ, ಉಮೇಶ್ ಕತ್ತಿ ಬಣಗಳ ನಡುವೆ ಜಟಾಪಟಿ ಏರ್ಪಟ್ಟಿದೆ.
ಜಾರಕಿಹೊಳಿ ಬಣದ ಅಭ್ಯರ್ಥಿ ಅಪ್ಪಾಸಾಹೇಬ್ ಕುಲಗೋಡೆ ವಿರುದ್ಧ ಮತದಾನ ಹಕ್ಕು ಪಡೆದವರ ಮತಚೀಟಿ ಇಟ್ಟುಕೊಂಡ ಆರೋಪ ಕೇಳಿಬಂದಿದೆ. ಮತದಾನ ಮಾಡಲು 40 ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಲಾಗಿದೆ.
ರಾಯಭಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಬಸಗೌಡ ಆಸಂಗಿ ಕಣಕ್ಕಿಳಿದಿದ್ದಾರೆ. ಇವರು ಸವದಿ-ಕತ್ತಿ ಬಣದಿಂದ ಗುರುತಿಸಿಕೊಂಡಿದ್ದಾರೆ. ಬೆಳಗಾವಿಯ ಇಫಾ ಹೋಟೆಲ್‌ಗೆ ನುಗ್ಗಿ ಬಸಗೌಡ ಆಸಂಗಿ ಬೆಂಬಲಿಗರು ಗಲಾಟೆ ತೆಗೆದಿದ್ದಾರೆ.
ಹೋಟೆಲ್ ಮುಂಭಾಗದಲ್ಲಿ ಸವದಿ ಹಾಗೂ ಜಾರಕಿಹೊಳಿ ಬೆಂಬಲಿಗರ ನಡುವೆ ನೂಕಾಟ-ತಳ್ಳಾಟ ಆಗಿದೆ. ಕೈ-ಕೈ ಮಿಲಾಯಿಸುವ ಹಂತಕ್ಕೆ ಪ್ರಕರಣ ಹೋಗಿದೆ. ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಬರಮನಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದರು.
ಜಾರಕಿಹೊಳಿ ಸಹೋದರರ ವಿರುದ್ಧ ಮಾಜಿ ಸಂಸದ ರಮೇಶ ಕತ್ತಿ (Ramesh Katti) ಹಾಗೂ ಶಾಸಕ ಲಕ್ಷ್ಮಣ ಸವದಿ (Lakashman Savadi) ತೊಡೆ ತಟ್ಟಿ ನಾವು ಯುದ್ಧಕ್ಕೆ ಸಿದ್ಧ ಎನ್ನುವ ಸಂದೇಶ ಸಾರಿದ್ದಾರೆ.
ಬೆಳಗಾವಿ: ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದೆ. ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ (Resort Politics) ಮಾಡ್ತಿದ್ರು. ಆದರೆ ಬೆಳಗಾವಿ (Belagavi) ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯ ಒದಗಿ ಬಂದಿದೆ.
ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್‌ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್ 19ಕ್ಕೆ ನಡೆಯುವ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಬರಲಿದ್ದಾರೆ. ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದೆ. ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದು, ರೆಸಾರ್ಟ್ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.
– ಜಾರಕಿಹೊಳಿ ಗುಂಪಿಗೆ ಆರಂಭಿಕ ಮೇಲುಗೈ – 6 ತಾಲೂಕಿನಲ್ಲಿ ಅವಿರೋಧ ಆಯ್ಕೆ
ಬೆಳಗಾವಿ: ಜಿಲ್ಲೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ (DCC Bank) ಶನಿವಾರ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. 16 ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಇಳಿದಿದ್ದಾರೆ. ಆರಂಭದ ಹಂತದಲ್ಲೇ ಜಾರಕಿಹೊಳಿ ಬ್ರದರ್ಸ್ (Jarkiholi Brothers) ಗುಂಪು ಮೆಲುಗೈ ಸಾಧಿಸಿದೆ.
ಅ.19 ರಂದು ನಡೆಯಲಿರುವ ಮತದಾನಕ್ಕೆ ಈ ವರೆಗೂ ಒಟ್ಟು 64 ನಾಮಪತ್ರ ಸಲ್ಲಿಕೆಯಾಗಿವೆ. ಈ ಪೈಕಿ ಆರು ತಾಲೂಕಿನಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದು ಆರಂಭದಲ್ಲೇ ಜಾರಕಿಹೊಳಿ ಗುಂಪು ಮೇಲುಗೈ ಸಾಧಿಸಿದೆ.
ಹಾಲಿ, ಮಾಜಿ ಶಾಸಕರು ಸೇರಿದಂತೆ ಮಾಜಿ ಸಂಸದರು ಕೂಡ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ಈಗಾಗಲೇ ಜಾರಕಿಹೊಳಿ ಬ್ರದರ್ಸ್ 13 ಜನರ ತಂಡವನ್ನು ಸಿದ್ಧಪಡಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಥಣಿ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಬೇರೆ ಕಡೆಗಳಲ್ಲಿ ತಮ್ಮವರನ್ನು ಅಖಾಡಕ್ಕಿಳಿಸಿದ್ದಾರೆ.
ರಮೇಶ್ ಕತ್ತಿ (Ramesh Katti) ಮತ್ತು ಲಕ್ಷ್ಮಣ ಸವದಿ (Laksham savdi) ನಡೆ ಇನ್ನೂ ನಿಗೂಢವಾಗಿದ್ದು ಜಾರಕಿಹೊಳಿ ಸಹೋದರರಿಗೆ ಶಾಕ್ ಕೊಡಲು ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಸದ್ಯ ಆರಂಭಿಕ ಹಂತದಲ್ಲಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದು ಆರು ತಾಲೂಕಿನ ಪೈಕಿ ಐದು ಜಾರಕಿಹೊಳಿ ಬ್ರದರ್ಸ್ ಗುಂಪಿನವರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ
ಅವಿರೋಧ ಆಯ್ಕೆ: ಗೋಕಾಕ್‌ನಿಂದ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಜಾರಕಿಹೊಳಿ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಬೆಳಗಾವಿ ತಾಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯರಗಟ್ಟಿಯಿಂದ ವಿಶ್ವಾಸ್ ವೈದ್ಯ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಮೂಡಲಗಿ ನೀಲಕಂಠ ಜಾರಕಿಹೊಳಿ ಗುಂಪಿನಲ್ಲಿದ್ದವರು ಅವಿರೋಧ ಆಯ್ಕೆಯಾದರೆ ಇತ್ತ ಯಾವುದೇ ಗುಂಪಿನಲ್ಲಿ ಗುರುತಿಸಿಕೊಳ್ಳದೇ ಚಿಕ್ಕೋಡಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಗಣೇಶ್ ಹುಕ್ಕೇರಿ ಕೂಡ ಆಯ್ಕೆಯಾಗಿದ್ದಾರೆ.
ಶನಿವಾರ ಮಧ್ಯಾಹ್ನ ಮೂರು ಗಂಟೆಯವರೆಗೂ ಕಾದು ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಶಾಸಕ ವಿಶ್ವಾಸ್ ವೈದ್ಯ, ನೀಲಕಂಠ, ಗಣೇಶ್ ಹುಕ್ಕೇರಿ ಬೆಂಬಲಿಗರು ಗುಲಾಲ್ ಹಚ್ಚಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಜಾರಕಿಹೊಳಿ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು.
ಒಂದು ಕಡೆ ಜಾರಕಿಹೊಳಿ ಬ್ರದರ್ಸ್ ಆರಂಭಿಕ ಹಂತದಲ್ಲಿ ಮೇಲುಗೈ ಸಾಧಿಸಿದರೂ ಠಕ್ಕರ್ ಕೊಡಲು ಲಕ್ಷ್ಮಣ ಸವದಿ ಹಾಗೂ ರಮೇಶ್ ಕತ್ತಿ ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಹೇಗಾದರೂ ಮಾಡಿ ಅಧ್ಯಕ್ಷಗಾದಿ ಹಿಡಿಯಬೇಕು ತಮ್ಮ ಹಿಡಿತದಲ್ಲಿ ಡಿಸಿಸಿ ಬ್ಯಾಂಕ್ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಪ್ಲ್ಯಾನ್ ಮಾಡ್ತಿದ್ದು ಅ.19ರ ವರೆಗೂ ಕಾದು ನೋಡಿ ಅಂತಿದ್ದಾರೆ.
ಇದೇ ಮೊದಲ ಬಾರಿಗೆ ಅಣ್ತಮ್ಮಂದಿರು ತಾವು ಸ್ಪರ್ಧೆ ಮಾಡುವುದನ್ನ ಬಿಟ್ಟು ತಮ್ಮ ಕುಡಿಗಳಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದು ಈ ಮೂಲಕ ಜಾರಕಿಹೊಳಿ ಮನೆತನದ ಎರಡನೇ ಪೀಳಿಗೆ ಅಧಿಕೃತವಾಗಿ ರಾಜಕೀಯ ರಂಗ ಪ್ರವೇಶ ಮಾಡಿದೆ. ಈ ಕುರಿತು ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಾವು ಎಳೆದುಕೊಂಡು ಹೋಗುತ್ತಿರುವ ತೇರನ್ನು ಮಕ್ಕಳು ಎಳೆಯಬೇಕು ಜನರ ಸೇವೆ ಮಾಡಬೇಕೆನ್ನುವ ಉದ್ದೇಶದಿಂದ ಚುನಾವಣೆಗೆ ನಿಲ್ಲಿಸಿದ್ದಾಗಿ ಹೇಳಿದ್ದಾರೆ.
ತಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎನ್ನುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಎಂಟ್ರಿಯಾಗಿದ್ದಾರೆ. ಸಹಕಾರಿ ಸಂಘಗಳ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದು ಜಾರಕಿಹೊಳಿ ಸಹೋದರರ ಮತ್ತೊಂದು ದಾಳ ಅಂತಾ ಹೇಳಲಾಗುತ್ತಿದ್ದು ಬಾಲಚಂದ್ರ ಜಾರಕಿಹೊಳಿ ಕೂಡ ರಾಜಕಾರಣದಲ್ಲಿ ಎಲ್ಲವೂ ಮಾಡಬೇಕು ಅಂತಾ ಹೇಳಿದ್ದಾರೆ.
ಒಟ್ಟಿನಲ್ಲಿ ಸಾಕಷ್ಟು ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ಅಕ್ಟೋಬರ್ 19ರಂದು ಮತದಾನ ನಡೆಯಲಿದ್ದು ಈಗಾಗಲೇ ಆರು ತಾಲೂಕಿನಲ್ಲಿ ಯಾವುದೇ ನಾಮ ಪತ್ರ ಸಲ್ಲಿಕೆಯಾಗದ ಹಿನ್ನೆಲೆ ಅವಿರೋಧ ಆಯ್ಕೆ ಖಚಿತವಾಗಿದ್ದು ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಇತ್ತ ಜಾರಕಿಹೊಳಿ ಬ್ರದರ್ಸ್ ಕಡೆಯಿಂದ ಡಿಸಿಸಿ ಬ್ಯಾಂಕ್ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಲಿಂಗಾಯತ ಅಸ್ತ್ರ ಪ್ರಯೋಗ ಆಗಿದ್ದು ಇದರಿಂದ ತಮ್ಮ ಗುಂಪು ಗೆದ್ದರೆ ಲಿಂಗಾಯತರೇ ಅಧ್ಯಕ್ಷ ಅಂತಾ ಬಾಲಚಂದ್ರ ಹೇಳಿದ್ದು ಮತ್ತಷ್ಟು ರೋಚಕತೆ ಹೆಚ್ಚಿಸಿದೆ.
– ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕನಿಗೆ ರಸ್ತೆಯಲ್ಲೇ ಕ್ಲಾಸ್
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಂಸದ ರಮೇಶ ಕತ್ತಿ (Ramesh Katti) ನಡುವಿನ ಡಿಸಿಸಿ ಬ್ಯಾಂಕ್ ಚುನಾವಣೆಯ (DCC Bank Election) ಫೈಟ್ ಜೋರಾಗಿದ್ದು, ಇಬ್ಬರ ನಡುವಿನ ತಿಕ್ಕಾಟದಿಂದ ಶಾಂತವಾಗಿದ್ದ ಹುಕ್ಕೇರಿ ಕ್ಷೇತ್ರದಲ್ಲಿ ಗಲಾಟೆ ನಡೆದಿದೆ.
ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ರಾಜೇಂದ್ರ ಪಾಟೀಲ ವಿರುದ್ಧ ಅಕ್ಟೋಬರ್ 19 ರಂದು ಚುನಾವಣೆ ನಡೆಯಲಿದೆ. ಒಂದು ಪ್ರಾಥಮಿಕ ಕೃಷಿ ಪತ್ತಿನಿಂದ ಒಂದು ಮತ ಚಲಾಯಿಸುವ ಅಧಿಕಾರ ಇರುತ್ತದೆ. ಹುಕ್ಕೇರಿ ತಾಲೂಕಿನಲ್ಲಿ ಒಟ್ಟು 90 ಕೃಷಿ ಪತ್ತಿನ ಸಂಘಗಳಿದ್ದು ಒಟ್ಟು 90 ಮತಗಳ ಚಲಾವಣೆ ಆಗಬೇಕಿದೆ.
ಈ ಕಾರಣಕ್ಕೆ ಪ್ರತಿನಿತ್ಯ ಹುಕ್ಕೇರಿ ತಾಲೂಕಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕರ ಬಹುಮತ ಪಡೆಯಲು ಹರಸಾಹಸ ನಡೆಸುತ್ತಿದ್ದಾರೆ. ಇದಕ್ಕಾಗಿ ಸತೀಶ್ ಜಾರಕಿಹೊಳಿ ಎದುರೇ ಗಲಾಟೆ ಆಗಿದೆ. ಜಾರಕಿಹೊಳಿ ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನ ಪತ್ನಿ ನಿರ್ದೇಶಕನ ಕೊರಳು ಪಟ್ಟಿ ಹಿಡಿದು ಎಳೆದಾಡಿ ಕಪಾಳ ಮೋಕ್ಷ ಮಾಡಿ ರಸ್ತೆಯಲ್ಲೇ ತರಾಟೆ ತೆಗೆದುಕೊಂಡಿದ್ದಾಳೆ.
ಮದಿಹಳ್ಳಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿಗೆ ಪತ್ನಿ ಲಗಮವ್ವ ಏಟು ನೀಡಿದ್ದಾಳೆ. ಗಂಡ ಹೆಂಡತಿ ಜಗಳ ಬಿಡಿಸಲು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪೊಲೀಸರು ಸುಸ್ತಾಗಿ ಹೋಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬಂದ ಮಾಜಿ ಸಂಸದ ರಮೇಶ್ ಕತ್ತಿ ಕೂಡ ಬಂದಿದ್ದರಿಂದ ಎರಡು ಗುಂಪುಗಳ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ತಲುಪಿತ್ತು.
ಬೆಳವಣಿಗೆಗಳ ನಡುವೆ ಬೆಲ್ಲದ ಬಾಗೇವಾಡಿ ಗ್ರಾಮದ ಕತ್ತಿ ಒಡೆತನದ ವಿಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ತಡರಾತ್ರಿ ಹೈಡ್ರಾಮಾ ನಡೆಯಿತು. ಪಾಶ್ಚಾಪೂರ ಗ್ರಾಮದ 6 ಪಿಕೆಪಿಎಸ್ ನಿರ್ದೇಶಕರನ್ನು ಯಮಕನಮರಡಿ ಪೊಲೀಸರು ಬಂದು ವಾಪಸ್ ಪಾಶ್ಚಾಪೂರ ಗ್ರಾಮಕ್ಕೆ ಕರೆ ತಂದಿದ್ದಾರೆ.
ಕೆಲದಿನಗಳಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಯಮಕನಮರಡಿ ಪಿಐ ಜಾವೇದ ಮುಶಾಪೂರೆ ವಿಎಸ್‌ಎಲ್ ಕಾರ್ಖಾನೆಗೆ ತೆರಳಿ ವಾಪಸ್ ಕಳಿಸುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಯಾವುದೇ ಕಾರಣಕ್ಕೂ ವಾಪಸ್ ಕಳುಹಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪೊಲೀಸರು ಹಾಗೂ ರಮೇಶ ಕತ್ತಿ ನಡುವೆ ವಾಗ್ವಾದ ನಡೆದಿದೆ. ಬಳಿಕ ಪೊಲೀಸರು ನಿರ್ದೇಶಕರನ್ನು ವಾಪಸ್ ಪಾಶ್ಚಾಪೂರ ಗ್ರಾಮಕ್ಕೆ ಕರೆ ತಂದು ಕುಟಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕತ್ತಿ ಹಾಗೂ ಜಾರಕಿಹೊಳಿ ಕುಟುಂಬಗಳ ತಿಕ್ಕಾಟ ತಾರಕಕ್ಕೇರುತ್ತಿದ್ದು, ಮುಂದೆ ಬೆಳಗಾವಿ ಜಿಲ್ಲೆಯಲ್ಲಿ ಈ ಎರಡು ಕುಟುಂಬಗಳ ರಣಯುದ್ಧ ಹೊಸ ಅಧ್ಯಾಯ ಬರೆಯುವದರಲ್ಲಿ ಸಂಶಯವೇ ಇಲ್ಲ.
ಬೆಳಗಾವಿ: ಈ ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಲಿಂಗಾಯತರನ್ನೇ (Lingayat) ಆಯ್ಕೆ ಮಾಡುತ್ತೇವೆ ಎನ್ನುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ (Balachandra Jarkiholi) ಡಿಸಿಸಿ ಬ್ಯಾಂಕ್ ಚುನಾವಣೆಗೂ (DCC Bank Election) ಮುನ್ನ ಲಿಂಗಾಯತ ಸಮಾಜದ ಪರ ಬ್ಯಾಟ್ ಬೀಸಿದ್ದಾರೆ.
ಜಾರಕಿಹೊಳಿ ಸಹೋದರರು ಕಳ್ಳರು ಎಂದು ಮಾಜಿ ಸಚಿವ ಎ ಬಿ ಪಾಟೀಲ್ ಅವರು ತುಡಗರು ಯಾರು ಎಂದು ಸ್ಪಷ್ಟಪಡಿಸಬೇಕು. ರಮೇಶ ಕತ್ತಿ ಅವರನ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾವೇ ದಿವಂಗತ ಉಮೇಶ ಕತ್ತಿ ಅವರಿಗೆ ಈ ವಿಚಾರ ಗೊತ್ತಿತ್ತು.ರಮೇಶ ಕತ್ತಿ ಅವರಿಗಿಂತ ಚೆನ್ನಾಗಿ ಡಿಸಿಸಿ ಬ್ಯಾಂಕ್ ನಾವು ಮುನ್ನೆಡೆಸುತ್ತೇವೆ. ಮುಂದಿನ ದಿನಗಳಲ್ಲಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಾನು ಹುಕ್ಕೇರಿಯಲ್ಲಿ ಪ್ರಚಾರ ಆರಂಭ ಮಾಡುತ್ತೇವೆ ಎಂದರು.
ಡಿಸಿಸಿ ಬ್ಯಾಂಕ್ ಚುನಾವಣೆ ನಮ್ಮ ಗುಂಪಿನಲ್ಲಿ ಲಕ್ಷ್ಮಣ ಸವದಿ ಇಲ್ಲ. ಅಥಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ನಮ್ಮ ಗುಂಪಿನ ಅಭ್ಯರ್ಥಿಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ತುಮಕೂರು: ಸತತ 6ನೇ ಬಾರಿ ತುಮಕೂರು (Tumakuru) ಡಿಸಿಸಿ ಬ್ಯಾಂಕಿನ (DCC Bank) ಅಧ್ಯಕ್ಷರಾಗಿ ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ವಿರಾಜಮಾನರಾಗಿದ್ದಾರೆ.
ಇಂದು ನಡೆದ ಅಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಜಣ್ಣರ ಆಪ್ತ ಜಿ.ಜೆ.ರಾಜಣ್ಣ ಪಟ್ಟಕ್ಕೇರಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಸಚಿವ ರಾಜಣ್ಣ, ರೈತರ ಬದುಕನ್ನು ಹಸನಗೊಳಿಸೋದೆ ನಮ್ಮ ಉದ್ದೇಶ. ದೇಶದ ಜಿಡಿಪಿಗೆ ಹಳ್ಳಿಗಳ ರೈತರ ಕೊಡುಗೆ ಅಪಾರ. ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ಬ್ಯಾಂಕಿನ ಯೋಜನೆ ಇರಲಿದೆ ಎಂದರು. ಇದನ್ನೂ ಓದಿ: ಸೆ.7ಕ್ಕೆ ಬೆಂಗಳೂರಿನಲ್ಲಿ ಅಸ್ಟೆಮಿದ ಐಸಿರ-2025 – ರಾಜಧಾನಿಯಲ್ಲಿ ತುಳುವರ ಅತಿದೊಡ್ಡ ಹಬ್ಬ
ನಬಾರ್ಡ್ನಿಂದ ಅಫೆಕ್ಸ್ ಬ್ಯಾಂಕಿಗೆ 5500 ಕೋಟಿ ರೂ. ಬರಬೇಕಿತ್ತು. ಆದರೆ ಈ ಬಾರಿ ಕೇವಲ 2,340 ಕೋಟಿಯಷ್ಟೇ ಬಂದಿದೆ. ಅದರಿಂದ ಜಿಲ್ಲಾ ಬ್ಯಾಂಕುಗಳಿಗೆ ನಷ್ಟ ಆಗಲಿದೆ. ಸದ್ಯ ರೈತರ ಸಾಲ ಮನ್ನಾ ಮಾಡಲು ನಾನು ಒತ್ತಾಯ ಮಾಡೋದಿಲ್ಲ. ಆದರೆ ಕುಮಾರಸ್ವಾಮಿ ಕಾಲದಲ್ಲಿ ಮನ್ನಾ ಆಗಿದ್ದ ರೈತರ 258 ಕೋಟಿ ರೂ. ಬಿಡುಗಡೆ ಮಾಡುವಂತೆ ಒತ್ತಾಯ ಮಾಡೋದಾಗಿ ತಿಳಿಸಿದರು. ಇದನ್ನೂ ಓದಿ: ಚಾ.ನಗರ| ಐಸ್ ಕ್ರೀಂ, ಗೋಬಿಗಾಗಿ ಕಿಡ್ನ್ಯಾಪ್ ಕಥೆ ಕಟ್ಟಿದ 10 ವರ್ಷದ ಬಾಲಕ
ಜೊತೆಗೆ ಜಿಎಸ್ ಟಿ ಸ್ಲಾಬ್ ಕಡಿಮೆ ಮಾಡಿರುವ ಸರ್ಕಾರದ ಕ್ರಮ ಸ್ವಾಗತ. ಆದರೆ ರಾಜ್ಯಕ್ಕೆ ಆಗುವ ನಷ್ಟ ಕೇಂದ್ರ ಭರಿಸಿಕೊಳ್ಳಬೇಕು ಎಂದರು. ಇದೇ ವೇಳೆ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿದ ರಾಜಣ್ಣ, ಬ್ರೈನ್ ಮ್ಯಾಪಿಂಗ್ ಬಗ್ಗೆ ಯಾವನು ಹೇಳಿದ್ದಾನೋ ಅವನಿಗೇ ಕೇಳಿ ಎಂದು ಗರಂ ಆದರು. ರಾಜಣ್ಣ ಮತ್ತೇ ಸಹಕಾರಿ ಸಚಿವರಾಗುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ರಾಜಣ್ಣ ಏನಾಗ್ತಾನೋ ಏನೋ ಗೊತ್ತಿಲ್ಲ. ಅದೇನಾಗುತ್ತೋ ಯಾವ ಸಂದರ್ಭಕ್ಕೆ ಅದನ್ನು ಅನುಭವಿಸಿಕೊಂಡು ಹೋಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯ | ಸಾಮೂಹಿಕ ಗಣೇಶ ವಿಸರ್ಜನೆ – ಇಂದು, ನಾಳೆ ನಾಗಮಂಗಲದಲ್ಲಿ ನಿಷೇಧಾಜ್ಞೆ
ಚಿಕ್ಕೋಡಿ: ಡಿಸಿಸಿ ಬ್ಯಾಂಕ್ ಚುನಾವಣೆ (Belagavi DCC Bank) ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಜಾರಕಿಹೊಳಿ ಸಹೋದರರನ್ನು ಬದಿಗಿಟ್ಟು ಡಿಸಿಸಿ ಬ್ಯಾಂಕ್ ಹತೋಟಿಗೆ ಪಡೆಯುವ ಬೆಳಗಾವಿ ಜಿಲ್ಲೆಯ ಪಕ್ಷಾತೀತ ಲಿಂಗಾಯತ ನಾಯಕರ ಪ್ಲಾನ್ ಫ್ಲಾಪ್ ಮಾಡುವಲ್ಲಿ ಜಾರಕಿಹೊಳಿ ಸಹೋದರರು (Jarkiholi Brothers) ಯಶಸ್ವಿಯಾಗಿದ್ದಾರೆ.
ಲಿಂಗಾಯತ ನಾಯಕರ ಸಭೆಗೆ (Lingayat Leaders Meeting) ಜಾರಕಿಹೊಳಿ ಬ್ರದರ್ಸ್ ಚೆಕ್ ಮೇಟ್ ನೀಡಿದ್ದು ಕೊಲ್ಲಾಪೂರ ಮಠವೊಂದರಲ್ಲಿ ನಡೆದ ಬೆಳಗಾವಿ ಲಿಂಗಾಯತ ನಾಯಕರ ಸಭೆ ಬಹುತೇಕ ವಿಫಲವಾದಂತಾಗಿದೆ. ಲಿಂಗಾಯತ ನಾಯಕರ ಸಭೆ ಬೆನ್ನಲ್ಲೇ ಲಿಂಗಾಯತ ಮುಖಂಡ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆ ಜಾರಕಿಹೊಳಿ ಸಹೋದರರು ಸಂಧಾನ ಮಾಡಿಕೊಂಡಿದ್ದಾರೆ. ಇದನ್ನೂಓದಿ: ರಾಹುಲ್ ಗಾಂಧಿ ಆರೋಪ ನಿಜ, ಬೆಂ.ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ –ಡಿಕೆಶಿ
ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿರುವ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಮಾಲೀಕತ್ವದ ಬ್ಯಾಂಕಿನಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಜೊತೆಗೆ ಬಾಲಚಂದ್ರ ಜಾರಕಿಹೊಳಿ ಸಭೆ ನಡೆಸಿದ್ದಾರೆ. ಸಚಿವ ಸತೀಶ ಜಾರಕಿಹೊಳಿ, ಶಾಸಕ ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಪ್ರಭಾಕರ ಕೋರೆ, ಬಾಲಚಂದ್ರ ಜಾರಕಿಹೊಳಿ, ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇದನ್ನೂಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
ಎಲ್ಲ ಮುಖಂಡರ ಸೇರಿ ಸಮಿತಿ ಮಾಡಿ ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು ಕತ್ತಿ ಕುಟುಂಬ ಹೊರಗಿಟ್ಟು ಸಮಿತಿ ರಚನೆ ಮಾಡಲು ತಯಾರಿ ನಡೆಸಲಾಗುತ್ತಿದೆ.
ಬೀದರ್: ಕನ್ನಡ (Kannada) ಮಾತನಾಡಿ ಎಂದಿದಕ್ಕೆ ರೂಲ್ಸ್ ಇದೆಯಾ ಎಂದು ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ವ್ಯಕ್ತಿ ಮೇಲೆಯೇ ದರ್ಪ ಮೆರೆದ ಘಟನೆ ಬೀದರ್ (Bidar) ಜಿಲ್ಲೆಯ ಹುಲಸೂರು ಪಟ್ಟಣದ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ.
ಇದು ಕರ್ನಾಟಕ, ಮಹಾರಾಷ್ಟ್ರ ಅಲ್ಲ ಎಂದು ವ್ಯಕ್ತಿ ಹೇಳಿದ್ದಾರೆ. ಈ ವೇಳೆ ಬ್ಯಾಂಕ್‌ನಲ್ಲಿ ನಿಮ್ಮ ಅಕೌಂಟ್ ಇದೆಯಾ, ಇಲ್ಲವಾದ್ರೆ ಇಲ್ಲಿಂದ ಹೋಗಿ ಎಂದು ಸಿಬ್ಬಂದಿ ಕಿರಿಕ್ ಮಾಡಿದ್ದಾರೆ. ಅಜ್ಜನ ಬ್ಯಾಂಕ್ ಅಕೌಂಟ್ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದ ವ್ಯಕ್ತಿ ಮೇಲೆಯ ಡಿಸಿಸಿ ಬ್ಯಾಂಕ್ ಸಿಬ್ಬಂದಿ ದರ್ಪ ತೋರಿದ್ದಾರೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಗಳ ಕಿವಿಯೋಲೆ ಕಳವು – ಬೌರಿಂಗ್ ಆಸ್ಪತ್ರೆಯ ವಿರುದ್ಧ ದೂರು
ಬೆಂಗಳೂರು: ಕಾಂಗ್ರೆಸ್ (Congress) ಮುಖಂಡ ಮಂಜುನಾಥ ಗೌಡ (Manjunath Gowda) ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದ್ದು 13.91 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ ಸ್ತಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (Shivamogga DCC Bank Scam) ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಳೆದ ಏಪ್ರಿಲ್ ನಲ್ಲಿ ಶಿವಮೊಗ್ಗದಲ್ಲಿ ಮಂಜುನಾಥ ಗೌಡ ಅವರ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿತ್ತು. ಇದನ್ನೂ ಓದಿ: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ
ಸ್ಥಿರ ಮತ್ತು ಚರ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.
ಶಿವಮೊಗ್ಗದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಂಜುನಾಥ್ ಗೌಡ ಪರಪ್ಪನ ಅಗ್ರಹಾರದಲ್ಲಿ (Parappana Agrahara) ನ್ಯಾಯಾಂಗ ಬಂಧನದಲ್ಲಿದ್ದಾರೆ.
ಶಿವಮೊಗ್ಗ/ ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಹಗರಣ ಪ್ರಕರಣದಲ್ಲಿ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಮಂಜುನಾಥ್ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳವಾರ (ಏ.8) ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಅವರ ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್‌ಹೌಸ್ ಮೇಲೂ ದಾಳಿ ನಡೆಸಲಾಗಿತ್ತು. ಈ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇಂದು (ಏ.9) ಅವರನ್ನು ಬಂಧಿಸಿ, 1ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ
ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್‌ನಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.