Tag: DCC Bank Election

  • ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

    ಬೆಳಗಾವಿ: ಕುಂದಾನಗರಿ ಬೆಳಗಾವಿ (Belagavi) ಅಂದ್ರೆ ರಾಜಕೀಯ ಮನೆತನಗಳ ಸಮರ. ಅದರಲ್ಲೂ ಕತ್ತಿ- ಜಾರಕಿಹೊಳಿ ಕುಟುಂಬದ ಮಧ್ಯೆ ರಾಜಕೀಯ ಜಿದ್ದಾಜಿದ್ದಿ ತೀರಾ ಸಾಮಾನ್ಯ. ಒಬ್ಬರಿಗೊಬ್ಬರು ಕತ್ತಿ ಮಸಿಯುತ್ತಾ ಆಗಾಗ್ಗೆ ಕದನದಲ್ಲಿ ಕೆಲವರು ಜಾರಿ ಬೀಳುತ್ತಲೇ ಇರ್ತಾರೆ. ಇದೀಗ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ (DCC Bank Election) ಮತ್ತೊಮ್ಮೆ ಬದ್ಧವೈರಿಗಳ ಕದನಕ್ಕೆ ಅಣಿಯಾಗಿದೆ. ಇಂದು ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಶಾಂತಿಯುತವಾಗಿ ನಡೆಯಿತು.

    ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ನಡೆದಿರುವ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಸವದಿ ಮತ್ತು ಕತ್ತಿ ಟೀಂ ಜೊತೆಗೆ ತೀವ್ರ ಕಾದಾಟಕ್ಕೆ ಸಾಕ್ಷಿಯಾಯಿತು. ಜಾರಕಿಹೊಳಿ ಸಹೋದರರು ಒಂದು ಬಣವಾದರೇ, ಸಂಸದ ರಮೇಶ್ ಕತ್ತಿ ಹಾಗೂ ಶಾಸಕ ಲಕ್ಷ್ಮಣ ಸವದಿ ಜಾರಕಿಹೊಳಿ ಬ್ರದರ್ಸಗೆ ತೊಡೆ ತಟ್ಟಿದ್ದಾರೆ. 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೆ 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣ ಗೆಲುವು ಸಾಧಿಸಿ ಸಂಭ್ರಮಾಚರಣೆ ನಡೆಸಿದರು. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹೈಡ್ರಾಮಾ; ಜಾರಕಿಹೊಳಿ v/s ಸವದಿ-ಕತ್ತಿ ಬಣ ಜಟಾಪಟಿ

    ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನದ ನಡುವೆ ಜಾರಕಿಹೊಳಿ ಬಣದವರು ಮತ್ತು ಸವದಿ-ಕತ್ತಿ ಬಣದ ಸದಸ್ಯರು ಕೈಕೈ ಮಿಲಾಯಿಸಿದರು. ಮತದಾರರಿಗೆ ಡೆಲಿಗೇಷನ್ ಪಾರ್ಮ್ ಕೊಡುತ್ತಿಲ್ಲ ಎಂದ ಜಾರಕಿಹೊಳಿ ಬಣದ ಅಪ್ಪಾಸಾಹೇಬ್ ಕುಲಗೋಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದರು. ನಂತರ ಜಾರಕಿಹೊಳಿ ಬಣದ ಕಾರ್ಯಕರ್ತರ ವಿರುದ್ಧ ರಾಯಭಾಗ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಸಗೌಡ ಆಸಂಗಿ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ, ಟ್ವೀಟ್ ಮಾಡುತ್ತಿದ್ದಾರೆ: ಡಿಕೆಶಿ

    ಇನ್ನು ಮತದಾನದ ಹಕ್ಕಿಗಾಗಿ ಪಿಕೆಪಿಎಸ್ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಇದರಿಂದ ನಾಲ್ಕು ತಾಲೂಕಿನ ಫಲಿತಾಂಶದ ಕುರಿತು ಚುನಾವಣಾ ಫಲಿತಾಂಶವನ್ನು ಪ್ರಕಟಿಸದಂತೆ ಚುನಾವಣಾಧಿಕಾರಿಗಳಿಗೆ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ 4 ಕ್ಷೇತ್ರಗಳಾದ ನಿಪ್ಪಾಣಿ, ಕಿತ್ತೂರು, ಬೈಲಹೊಂಗಲ, ಹುಕ್ಕೇರಿ ಕ್ಷೇತ್ರದ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ನ್ಯಾಯಾಲಯದಲ್ಲಿ ಚುನಾವಣಾ ಫಲಿತಾಂಶ ಘೋಷಣೆ ಮಾಡದಂತೆ ಆದೇಶ ಬರುತ್ತಿದ್ದಂತೆ ನಾಲ್ಕು ತಾಲೂಕಿನ ಅಭ್ಯರ್ಥಿಗಳು ಸಂಭ್ರಮಾಚರಣೆ ಮಾಡಿದರು. ಇದನ್ನೂ ಓದಿ: ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ

    ರಾಮದುರ್ಗ ತಾಲೂಕಿನ ಫಲಿತಾಂಶ:
    ಮಲಣ್ಣಾ ಯಾದವಾಡ – 19 ಮತಗಳು
    ಶ್ರೀಕಾಂತ್ ಧವನ – 16 ಮತಗಳು
    ಮಲ್ಲಣ್ಣಾ ಯಾದವಾಡ 3 ಮತಗಳಿಂದ ಗೆಲುವು

    ಅಥಣಿ ತಾಲೂಕಿನ ಫಲಿತಾಂಶ:
    ಲಕ್ಷ್ಮಣ ಸವದಿ- 122 ಮತಗಳು
    ಮಹೇಶ್ ಕುಮಟಳ್ಳಿ – 3 ಮತಗಳು
    ಲಕ್ಷ್ಮಣ ಸವದಿ 119 ಮತಗಳಿಂದ ಗೆಲುವು

    ರಾಯಭಾಗ ತಾಲೂಕಿನ ಫಲಿತಾಂಶ:
    ಅಪ್ಪಾಸಾಹೇಬ್ ಕುಲಗೋಡೆ – 120 ಮತಗಳು
    ಬಸನಗೌಡ ಆಸಂಗಿ – 64 ಮತಗಳು
    ಅಪ್ಪಾಸಾಹೇಬ್ ಕುಲಗೋಡೆ 56 ಮತಗಳಿಂದ ಗೆಲುವು

    ಇನ್ನೂ 7 ಕ್ಷೇತ್ರಗಳಲ್ಲಿ ಅಥಣಿ, ರಾಯಬಾಗ, ರಾಮದುರ್ಗ 3 ಕ್ಷೇತ್ರಗಳ ಚುನಾವಣೆ ಫಲಿತಾಂಶ ಅಧಿಕೃತ ಘೋಷಣೆಯಾಗಿದ್ದು ಉಳಿದ ಹುಕ್ಕೇರಿ, ನಿಪ್ಪಾಣಿ, ಬೈಲಹೊಂಗಲ, ಕಿತ್ತೂರು ಕ್ಷೇತ್ರಗಳ 4ರ ಫಲಿತಾಂಶ ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಅಧಿಕೃತವಾಗಿ ಪ್ರಕಟ ಮಾಡುವಂತಿಲ್ಲ. ಹೀಗಾಗಿ ಬೆಳಗಾವಿ ಪೊಲೀಸರು ಬಿ.ಕೆ ಮಾಡಲ್ ಕಾಲೇಜು ಸುತ್ತಮುತ್ತ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಇದನ್ನೂ ಓದಿ: ಕಳೆದ ಅಕ್ಟೋಬರ್‌ನಿಂದಲೇ ಹತ್ಯೆಗೆ ಸ್ಕೆಚ್‌, ಮರಣೋತ್ತರ ಪರೀಕ್ಷೆಯನ್ನ ನಾನು ನೋಡಬೇಕು ಎಂದಿದ್ದ ಮಹೇಂದ್ರ ರೆಡ್ಡಿ

    ಒಟ್ಟಿನಲ್ಲಿ ಮತದಾನ ಶಾಂತಿಯುತವಾಗಿ ಜರುಗಿ 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೆ, 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣ ಗೆಲುವು ಸಾಧಿಸಿದೆ. ಇದನ್ನೂ ಓದಿ: ಮಳೆಯಾಟದಲ್ಲಿ ಗೆದ್ದ ಆಸ್ಟ್ರೇಲಿಯಾ – ಭಾರತದ ವಿರುದ್ಧ 7 ವಿಕೆಟ್‌ಗಳ ಗೆಲುವು

  • ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ: ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದೆ. ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ (Resort Politics) ಮಾಡ್ತಿದ್ರು. ಆದರೆ ಬೆಳಗಾವಿ (Belagavi) ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯ ಒದಗಿ ಬಂದಿದೆ.

    ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್‌ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್ 19ಕ್ಕೆ ನಡೆಯುವ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಬರಲಿದ್ದಾರೆ. ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದೆ. ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದು, ರೆಸಾರ್ಟ್ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

  • DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

    DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

    – ರೋಚಕತೆ ಪಡೆದ ಡಿಸಿಸಿ ಬ್ಯಾಂಕ್‌ ಚುನಾವಣೆ
    – ನಾಮಪತ್ರ ಸಲ್ಲಿಕೆ ಮಾಡಿದ ಸವದಿ, ರಾಜು ಕಾಗೆ
    – ಮೊದಲ ಬಾರಿಗೆ ಡಿಸಿಸಿ ಚುನಾವಣೆಗೆ ಕಾಗೆ ಎಂಟ್ರಿ

    ಬೆಳಗಾವಿ: ನಮ್ಮ ಸಮಿತಿ ಸದಸ್ಯರ ಸಂಖ್ಯೆ ಒಂಬತ್ತಾಗುತ್ತೋ? ಹನ್ನೊಂದಾಗುತ್ತೋ? ಹದಿನೈದಾಗುತ್ತೋ ನೋಡೋಣ. ಮೇಲೆ ಕುಳಿತವನು ಆಟ ಆಡಿಸ್ತಾನೆ. ನಾವೆಲ್ಲ ಗೊಂಬೆಗಳು, ಹೇಳಿದಂತೆ ಆಟ ಆಡುತ್ತೇವೆ ಎಂದು ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ (Laxman Savadi) ಹೇಳಿದ್ದಾರೆ.

    ಡಿಸಿಸಿ ಬ್ಯಾಂಕ್ ಚುನಾವಣೆ (DCC Bank Election) ದಿನದಿಂದ ದಿನಕ್ಕೂ ರೋಚಕತೆ ಪಡೆಯುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡದಲ್ಲಿ ಈಗಾಗಲೇ ಕತ್ತಿ ಜಾರಕಿಹೊಳಿ, ಹಾಗೂ ಹುಕ್ಕೇರಿ, ಜೊಲ್ಲೆ ಮನೆತನಗಳಿದ್ದು ಈಗ ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ (Raju Kage) ಶಕ್ತಿ ಪ್ರದರ್ಶನ ಮಾಡಿದ್ದಾರೆ.

    ಅಥಣಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕಾಗವಾಡ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ‌ರಾಜು ಕಾಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಇಬ್ಬರೂ ಏಕಾಕಾಲಕ್ಕೆ ಆಗಮಿಸಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ:  ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ವಾಲಿಬಾಲ್‌ ಕೋಚ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ

    ನಾವೂ ಯಾರ ಬಣದಲ್ಲೂ ಇಲ್ಲ ಎನ್ನುವ ಮೂಲಕ ಜಾರಕಿಹೊಳಿ ಸಹೋದರರಿಗೆ (Jarkiholi Brothers) ಶಾಸಕ ಕಾಗೆ ಶಾಕ್ ಕೊಟ್ಟಿದ್ದಾರೆ. ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಅಖಾಡಕ್ಕೆ ಶಾಸಕ ರಾಜು ಕಾಗೆ ಎಂಟ್ರಿಯಾಗುತ್ತಿದ್ದು ರಾಜು ಕಾಗೆಯವರನ್ನು ಗೆಲ್ಲಿಸುವ ಹೊಣೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹೊತ್ತಿದ್ದಾರೆ. ಕಾಗೆ ವಿರುದ್ಧ ಮಾಜಿ ಸಚಿವ ಶ್ರೀಮಂತ ಪಾಟೀಲ ಪುತ್ರ ಕಣಕ್ಕಿಳಿದಿದ್ದು ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ ಕುಮಟಳ್ಳಿ ಸ್ಪರ್ಧೆ ಮಾಡುತ್ತಿದ್ದಾರೆ.

    ಈ ವೇಳೆ ಮಾತನಾಡಿದ ಲಕ್ಷ್ಮಣ ಸವದಿ, ನಾನು ಹಾಗೂ ರಾಜು ಕಾಗೆ ಒಂದೇ ಸಮಿತಿಯಲ್ಲಿದ್ದು ನಮ್ಮ ಸಮಿತಿಗೆ ಬರುವ ಎಲ್ಲರಿಗೂ ಸ್ವಾಗತ ಮಾಡುತ್ತೇವೆ. ಹೋಗುವವರಿಗೂ ಧನ್ಯವಾದ ಹೇಳಿ ಕಳಿಸುತ್ತೇವೆ ಎಂದರು. ಇದನ್ನೂ ಓದಿ: ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ

    ನಮ್ಮ ಜೊತೆ ಯಾರೂ ಇಲ್ಲ ಎನ್ನುತ್ತೀರಿ. ಆದರೆ ಬಣ ಮಾಡುತ್ತಿರುವುದು ಯಾಕೆ ಎಂಬ ಪ್ರಶ್ನೆಗೆ, ಸಸಿ ನೆಡುವ ವೇಳೆ ಒಂದೇ ಇರುತ್ತೆ. ಬಳಿಕ ಎಲೆ, ಕಾಯಿ, ಹೂವು ಎಲ್ಲವೂ ಬರುತ್ತದೆ ಎನ್ನುವ ಮೂಲಕ ಮಾರ್ಮಿಕವಾಗಿ ತಮ್ಮ ಗುಂಪಿನ ಸದಸ್ಯರ ಸಂಖ್ಯೆ ಹೆಚ್ಚಾಗಲಿದೆ ಎಂಬ ಸುಳಿವು ನೀಡಿದರು.

  • ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ

    ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ

    ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ (DCC Bank Election) ನಿರ್ದೇಶಕ ಸ್ಥಾನದ‌ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಸಹೋದರ ಪರಿಷತ್‌ ಸದಸ್ಯ ಚನ್ನರಾಜ್ ಹಟ್ಟಿಹೊಳಿ (Channaraj Hattiholi) ಕಣದಿಂದ ಹಿಂದೆ ಸರಿದಿದ್ದಾರೆ.

    ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸತೀಶ ಜಾರಕಿಹೊಳಿಯವರ (Satish Jarkiholi) ಮನವೊಲಿಕೆ ಹಿನ್ನೆಲೆಯಲ್ಲಿ ಚುನಾವಣೆ ಕಣದಿಂದ ಚನ್ನರಾಜ್ ಹಿಂದಕ್ಕೆ ಸರಿದಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಬೆಂಗಳೂರು | 2 ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿ ಆತ್ಮಹತ್ಯೆ ಪತಿ ಅರೆಸ್ಟ್

    ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಕಳೆದ ನಾಲ್ಕೈದು ತಿಂಗಳಿಂದ ಖಾನಾಪುರ ತಾಲೂಕಿನಿಂದ ಚನ್ನರಾಜ್ ಹಟ್ಟಿಹೊಳಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಖಾನಾಪುರದ ಪಿಕೆಪಿಎಸ್ ನಿರ್ದೇಶಕರ ಮನ ಗೆಲ್ಲಲು ಚನ್ನರಾಜ್ ಯಶಸ್ವಿಯಾಗಿದ್ದರು ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ‌ ಚನ್ನರಾಜ್ ಸ್ಪರ್ಧೆಯಿಂದ ಹಿಂಪಡೆಯಲಿದ್ದಾರೆ ಎಂದು ತಿಳಿಸಿದರು.

    ಚುನಾವಣೆ ಕಣದಿಂದ ಚನ್ನರಾಜ್ ಹಿಂದೆ ಸರಿದಿದ್ದೇಕೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

  • ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಬ್ರದರ್ಸ್‌ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು

    ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಬ್ರದರ್ಸ್‌ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು

    ಬೆಳಗಾವಿ: ಪ್ರತಿಷ್ಠಿತ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರ (Jarkiholi Brothers) ವಿರುದ್ಧದ ಹೋರಾಟಕ್ಕೆ ಲಿಂಗಾಯತ (Lingayat) ನಾಯಕರು ಸಜ್ಜಾಗಿದ್ದಾರೆ.

    ಹೌದು. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಲಿಂಗಾಯತ ನಾಯಕರು ನಿರ್ಧರಿಸಿದ್ದಾರೆ. ಮಹಾರಾಷ್ಟ್ರದ (Maharashtra) ಪ್ರಮುಖ ಮಠವೊಂದರಲ್ಲಿ ಲಿಂಗಾಯತ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ. ಪಕ್ಷಾತೀತವಾಗಿ ಈ ಸಭೆಗೆ ಹಾಜರಾಗಿ ಡಿಸಿಸಿ ಬ್ಯಾಂಕ್‌ನಲ್ಲಿ ಹಿಡಿತ ಸಾಧಿಸಲು ಒಗ್ಗಟ್ಟಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ.

    ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿರುವುದು ಕುತೂಹಲ ಮೂಡಿಸಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜೊಲ್ಲೆ ದಂಪತಿ, ರಮೇಶ್ ಕತ್ತಿ, ಅಶೋಕ ಪಟ್ಟಣ್, ನಿಖಿಲ್ ಕತ್ತಿ, ಮಹಾದೇವಪ್ಪ ಯಾದವಾಡ, ರಾಜು ಕಾಗೆ, ಚನ್ನರಾಜ್ ಹಟ್ಟಿಹೊಳಿ ಸೇರಿ ಬಹುತೇಕ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯ ಬಗ್ಗೆ ಯಾವುದೇ ಮಾಹಿತಿ ಬಹಿರಂಗ ಆಗದಂತೆ ನಾಯಕರು ಎಚ್ಚರಿಕೆ ವಹಿಸಿದ್ದಾರೆ.

     

    ಲಿಂಗಾಯತ ನಾಯಕರು ರಹಸ್ಯ ಸಭೆ ನಡೆಸಿದ ಬೆನ್ನಲ್ಲೇ ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡಕ್ಕೆ ಜಾರಕಿಹೊಳಿ ಬ್ರದರ್ಸ್ ಎಂಟ್ರಿಯಾಗಿದ್ದಾರೆ. ತಮ್ಮ ಬೆಂಬಲಿತರ ಪರ ಬಾಲಚಂದ್ರ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೊಪ್ಪಳ | ಮಾಜಿ ಶಾಸಕ ದಡೇಸೂಗುರು ಕಾರಿಗೆ ಕಲ್ಲೆಸೆದ ಕಿಡಿಗೇಡಿಗಳು

    ಲಿಂಗಾಯತ ನಾಯಕರ ಸಭೆ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಹುಕ್ಕೇರಿ ತಾಲೂಕಿನಲ್ಲಿರುವ ಪ್ರತಿಷ್ಠಿತ ನಿಡಸೋಸಿ ಲಿಂಗಾಯತ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಲಿಂಗಾಯತ ಕಾರ್ಡ್ ಪ್ಲೇ ಮಾಡುವ ಮೂಲಕ ಸಚಿವ ಜಾರಕಿಹೊಳಿ ಎದುರಾಳಿಗಳಿಗೆ ತಿರುಗೇಟು ನೀಡಿದ್ದಾರೆ.