Tag: dcet

  • DCET: ಅಂತಿಮ ಸುತ್ತಿನ ಫಲಿತಾಂಶ ಪ್ರಕಟ – ಕೆಇಎ

    DCET: ಅಂತಿಮ ಸುತ್ತಿನ ಫಲಿತಾಂಶ ಪ್ರಕಟ – ಕೆಇಎ

    ಬೆಂಗಳೂರು : ಪ್ರಸಕ್ತ ಸಾಲಿನ DCET ಮೂರು ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಪ್ರಕಟಿಸಿದೆ.

    ಆ.25ರಿಂದ 27ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು, ಆ.28ರೊಳಗೆ ಶುಲ್ಕ ಪಾವತಿಸುವುದು. ಕಾಷನ್ ಡೆಪಾಸಿಟ್ ಕಟ್ಟಿದವರ ಹಣವನ್ನು ಶುಲ್ಕದ ಜತೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

    ಸೀಟು ಖಾತರಿ ಚೀಟಿಯನ್ನು ಆ.29ರೊಳಗೆ ಡೌನ್‌ಲೋಡ್ ಮಾಡಿಕೊಂಡು ಆ.30ರೊಳಗೆ ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

    ಕೊನೆ ಸುತ್ತಿನಲ್ಲಿ ಒಟ್ಟು 860 ಮಂದಿಗೆ ವಿವಿಧ ವಿಭಾಗಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ

  • ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ಡಿಸಿಇಟಿಯಲ್ಲಿ ಸೀಟು – ಕೆಇಎ

    ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ಡಿಸಿಇಟಿಯಲ್ಲಿ ಸೀಟು – ಕೆಇಎ

    ಬೆಂಗಳೂರು: ಪ್ರಸಕ್ತ ಸಾಲಿನ ಮರು ಪರೀಕ್ಷೆಯಲ್ಲಿ(ಮೇಕ್ ಅಪ್) ಅರ್ಹತೆ ಪಡೆದ ಡಿಪ್ಲೊಮಾ ಅಭ್ಯರ್ಥಿಗಳಿಗೆ ರ‍್ಯಾಂಕ್ ನೀಡಿ, ಡಿಸಿಇಟಿ ಅಂತಿಮ ಹಂತದ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    ಮರು ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಅಂಕಗಳ ವಿವರಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಪಡೆದು, ಆಗಸ್ಟ್ 13ರಂದು ರ‍್ಯಾಂಕ್ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: `SIR’ ಅಭಿಯಾನ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ – ಲೋಕಸಭೆ, ರಾಜ್ಯಸಭೆಯ ಕಲಾಪ ಮುಂದೂಡಿಕೆ

    ಇವರು ಸೇರಿದಂತೆ ಇದುವರೆಗೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಮೂಲ ದಾಖಲೆಗಳ ಸಮೇತ ಆಗಸ್ಟ್ 14ರ ಮಧ್ಯಾಹ್ನ 2.30ರೊಳಗೆ ಕೆಇಎ ಕಚೇರಿಗೆ ಬಂದು ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

  • D-CET ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ: KEA

    D-CET ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ: KEA

    ಬೆಂಗಳೂರು: ಎರಡನೇ ವರ್ಷ ಅಥವಾ ಮೂರನೇ ಸೆಮಿಸ್ಟರ್‌ನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ DCET-25 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಿ ಪ್ರವೇಶ ಪಡೆಯಲು ಜು.22ರವರಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H.Prasanna) ತಿಳಿಸಿದ್ದಾರೆ.ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ – ವರುಣಾರ್ಭಟಕ್ಕೆ ಭೂಕುಸಿತ, ಅಲ್ಲಲ್ಲಿ ಅವಾಂತರ

    ಜು.22ರಂದು ಬೆಳಿಗ್ಗೆ 11 ಗಂಟೆಯವರೆಗೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ ಶುಲ್ಕ ಪಾವತಿಗೆ, ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದಿದ್ದಾರೆ.

    ಆಯ್ಕೆ 1 ಮತ್ತು 2 ಮಾಡಿಕೊಂಡವರು ಮಾತ್ರ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಆಯ್ಕೆ-1 ದಾಖಲಿಸಿದವರು ಮಂಗಳವಾರವೇ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.ಇದನ್ನೂ ಓದಿ: Breaking | ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ

  • DCET ಜೂ.10ರಿಂದ 13ರವರೆಗೆ ದಾಖಲಾತಿ ಪರಿಶೀಲನೆ – KEA

    DCET ಜೂ.10ರಿಂದ 13ರವರೆಗೆ ದಾಖಲಾತಿ ಪರಿಶೀಲನೆ – KEA

    ಬೆಂಗಳೂರು: ಜೂ.10ರಿಂದ 13ರವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.ಇದನ್ನೂ ಓದಿ: Honeymoon Murder | ಕಾಂಟ್ರ್ಯಾಕ್ಟ್‌ ಕಿಲ್ಲರ್ಸ್‌.. ಫೋನ್‌ಕಾಲ್‌ನಲ್ಲೇ ಪಿನ್‌ ಟು ಪಿನ್‌ ಅಪ್ಡೇಟ್‌ – ಕೊಲೆ ರಹಸ್ಯ ಬಯಲಾಗಿದ್ದೇ ರೋಚಕ

    ಮೂರನೇ ಸೆಮಿಸ್ಟರ್ ಅಥವಾ ಎರಡನೇ ವರ್ಷದ ಇಂಜಿನಿಯರಿಂಗ್ ಕೋರ್ಸುಗಳ ನೇರ ಪ್ರವೇಶಾತಿಗೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ದಾಖಲಾತಿ ಪರಿಶೀಲನೆ ನಡೆಯುವ 37 ಕಾಲೇಜುಗಳ ಪಟ್ಟಿಯನ್ನು ಕೆಇಎ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಿಸಲಾಗಿದೆ. ಅಭ್ಯರ್ಥಿಗಳು ಮುಂಗಡವಾಗಿ ದಿನಾಂಕ ನಿಗದಿ ಮಾಡಿಕೊಂಡು ತಮಗೆ ಹತ್ತಿರವಾಗುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು ಎಂದು ತಿಳಿಸಿದ್ದಾರೆ.

    ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್‌ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್ ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ವಿವರಿಸಿದ್ದಾರೆ.ಇದನ್ನೂ ಓದಿ: ಮುಂಬೈ ವಿಕ್ಟರಿ ಪರೇಡ್‌ ಉಲ್ಲೇಖಿಸಿ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದ ಡಿಎನ್‌ಎ

  • DCET: ಅರ್ಜಿ ತಿದ್ದುಪಡಿಗೆ ಜೂ.8ರವರೆಗೆ ಅವಕಾಶ – ಕೆಇಎ

    DCET: ಅರ್ಜಿ ತಿದ್ದುಪಡಿಗೆ ಜೂ.8ರವರೆಗೆ ಅವಕಾಶ – ಕೆಇಎ

    ಬೆಂಗಳೂರು: ಎಂಜಿನಿಯರಿಂಗ್ (Engineering) ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ ಡಿಸಿಇಟಿ-25 (DCET 25) ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜೂ.5 ರಿಂದ 8ರವರೆಗೆ ಅವಕಾಶ‌ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

    ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ಹೆಸರು, ತಂದೆ- ತಾಯಿ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ನಂಬರ್ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

  • ಡಿಸಿಇಟಿ: ಅರ್ಜಿ ಸಲ್ಲಿಸಲು ಮೇ 13ರವರೆಗೆ ದಿನಾಂಕ ವಿಸ್ತರಣೆ: ಕೆಇಎ

    ಡಿಸಿಇಟಿ: ಅರ್ಜಿ ಸಲ್ಲಿಸಲು ಮೇ 13ರವರೆಗೆ ದಿನಾಂಕ ವಿಸ್ತರಣೆ: ಕೆಇಎ

    ಬೆಂಗಳೂರು: ಡಿಸಿಇಟಿ-25ಗೆ (DCET) ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    ಅಂದು ಬೆಳಿಗ್ಗೆ 11ರವರೆಗೆ ಅರ್ಜಿ ಸಲ್ಲಿಸಿ, ಅಂದೇ ಸಂಜೆ 6 ಗಂಟೆ ಒಳಗೆ ಶುಲ್ಕ ಪಾವತಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

    ಡಿಪ್ಲೊಮಾ ಮಾಡಿದವರಿಗೆ ಎಂಜಿನಿಯರಿಂಗ್ ಕೋರ್ಸ್‌ಗೆ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಸಿಇಟಿ ನಡೆಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

  • ಡಿಸಿಇಟಿ ಕ್ಯಾಶುಯಲ್ ಸುತ್ತು ಆರಂಭ-ಕೆಇಎ

    ಡಿಸಿಇಟಿ ಕ್ಯಾಶುಯಲ್ ಸುತ್ತು ಆರಂಭ-ಕೆಇಎ

    ಬೆಂಗಳೂರು: ಡಿಸಿಇಟಿ-24 ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸೆಪ್ಟೆಂಬರ್ 18ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

    ಸೀಟುಗಳ ಲಭ್ಯತೆಯನ್ನು ಸೆ.18ರ ಮಧ್ಯಾಹ್ನ 2ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಸೆ.18ರ 4ಗಂಟೆಯಿಂದ ಸೆ.20ರವರೆಗೆ ಹೊಸದಾಗಿ ಆಯ್ಕೆ ದಾಖಲಿಸಬಹುದು. ಸೆ.21ರಂದು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು. ಸೆ.23ರಿಂದ 25ರವರೆಗೆ ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಸೆ.25ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಕೇಸ್‌ – ಡಿಕೆಶಿ, ಸಿಬಿಐಗೆ ಸುಪ್ರೀಂ ನೋಟಿಸ್

    ಜುಲೈನಲ್ಲಿ ನಡೆದ ಮೇಕ್ ಅಪ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಡಿಸಿಇಟಿ (DCET) ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳ ರ‍್ಯಾಂಕ್ ಅನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿರುವ ಅಭ್ಯರ್ಥಿಗಳು ಕೂಡ ಹೊಸದಾಗಿ ಆಯ್ಕೆ ದಾಖಲಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ರಾಜಾತಿಥ್ಯ – ಕಲಬುರಗಿ ಜೈಲಿಗೆ ವಿಲ್ಸನ್‌ ಗಾರ್ಡನ್‌ ನಾಗ ಶಿಫ್ಟ್‌

    ಅಲ್ಲದೆ, ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಪಡೆಯದ ಮತ್ತು ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳೂ ಈ ಸುತ್ತಿನಲ್ಲಿ ಹೊಸದಾಗಿ ಆಯ್ಕೆ ದಾಖಲಿಸಬಹುದು ಎಂದು ಹೇಳಿದರು. ಇದನ್ನೂ ಓದಿ: 2030 ರ ವೇಳೆಗೆ 32.5 ಲಕ್ಷ ಕೋಟಿ ರೂ. ಮೌಲ್ಯದ ಸಾಲ ನೀಡಲು ಬ್ಯಾಂಕ್‌ಗಳ ಬದ್ಧ

  • Diploma CET Exam- ತಾತ್ಕಾಲಿಕ ಸರಿ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜೂ.26 ಕೊನೆಯ ದಿನ

    Diploma CET Exam- ತಾತ್ಕಾಲಿಕ ಸರಿ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜೂ.26 ಕೊನೆಯ ದಿನ

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಡಿಸಿಇಟಿ-2024ರ ತಾತ್ಕಾಲಿಕ ಸರಿ ಉತ್ತರಗಳನ್ನು ತನ್ನ ವೆಬ್‌ಸೈಟ್  www.kea.kar.nic.in ನಲ್ಲಿ ಪ್ರಕಟಿಸಿದೆ.

    ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಅವರು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿ, ಪ್ರಕಟಿಸಿರುವ ತಾತ್ಕಾಲಿಕ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಬಯಸಿದಲ್ಲಿ, ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ಜೂನ್ 26ರ ಬೆಳಿಗ್ಗೆ 11ರೊಳಗಾಗಿ ಸಲ್ಲಿಸಬಹುದು ಎಂದು ಸೂಚಿಸಿದ್ದಾರೆ.

     

    ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಯ ವಿವರಗಳನ್ನು ನಮೂದಿಸಿ, ಅದಕ್ಕೆ ಪೂರಕ ಸಮರ್ಥನೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಹೆಚ್ಚುವರಿ ಡಿಸಿಎಂ ಬೇಡಿಕೆ ಇದ್ರೆ ಮೂರಲ್ಲ ಐದು ಡಿಸಿಎಂ ಹುದ್ದೆ ಸೃಷ್ಟಿಸಲಿ: ಡಿ.ಕೆ.ಸುರೇಶ್

    ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

     

  • DCET-2024: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

    DCET-2024: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

    ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ/ ಮೂರನೇ ಸೆಮಿಸ್ಟರ್ ಗೆ ನೇರ ಪ್ರವೇಶ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ DCET-2024ಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೇ 20 ರಿಂದ 23 ರವರೆಗೆ ಕೊನೆಯ ಅವಕಾಶ ಕಲ್ಪಿಸಿದೆ.

    ಅಭ್ಯರ್ಥಿಗಳ ಮನವಿ ಪರಿಗಣಿಸಿ ಈ ಕಾಲಾವಕಾಶ ನೀಡಿದ್ದು, ಇದುವರೆಗೆ ನೋಂದಣಿ ಮಾಡಿಕೊಳ್ಳದಿರುವ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳು ಮೇ 20ರ ಬೆಳಗ್ಗೆ 11ರಿಂದ ಮೇ 23ರ ರಾತ್ರಿ 11.59ರೊಳಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ ಮೇ 24 ರೊಳಗೆ ಶುಲ್ಕ ಪಾವತಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

    VAO ಶುಲ್ಕ ಪಾವತಿಗೆ ಮೇ 22 ಕಡೆಯ ದಿನ: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಮೇ 18 ಕಡೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಮೇ 22 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡಲು ಸೂಚಿಸಲಾಗಿದೆ.