Tag: DCP Ravi De Channanavar

  • ಕೊಹ್ಲಿಗೆ ಅಭಿನಂದನೆ ಸಲ್ಲಿಸಿದ್ರು ಡಿಸಿಪಿ ಚನ್ನಣ್ಣನವರ್

    ಕೊಹ್ಲಿಗೆ ಅಭಿನಂದನೆ ಸಲ್ಲಿಸಿದ್ರು ಡಿಸಿಪಿ ಚನ್ನಣ್ಣನವರ್

    ಬೆಂಗಳೂರು: ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣನವರ್ ಅವರು ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

    ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಬಗ್ಗೆ ವಿರಾಟ್ ಅವರು “ನಮ್ಮ ಗೌರವಾನ್ವಿತ ರಾಷ್ಟ್ರಪತಿಯಿಂದ ನಾನು ಖೇಲ್ ರತ್ನ ಪ್ರಶಸ್ತಿ ಪಡೆದು ಕೊಂಡಿದ್ದೇನೆ” ಎಂದು ಟ್ವೀಟ್ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದರು.

    ವಿರಾಟ್ ಕೊಹ್ಲಿ ಮಾಡಿದ್ದ ಟ್ವೀಟ್ ಗೆ ಡಿಸಿಪಿ ರವಿ ಅವರು ರೀಟ್ವೀಟ್ ಮಾಡಿ, ‘ಅಭಿನಂದನೆಗಳು ವಿರಾಟ್ ಕೊಹ್ಲಿ’ ಎಂದು ಬರೆದು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ರನ್ ಮಷಿನ್ ಕೊಹ್ಲಿಗೆ ಖೇಲ್ ರತ್ನ ಪ್ರಶಸ್ತಿ – ಯಾರಿಗೆ ಯಾವ ಪ್ರಶಸ್ತಿ?

    ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ಕೋವಿಂದ್ ಅವರು, “ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ನಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ 2018ರಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. ಭಾರತದ ಕ್ರಿಕೆಟ್ ತಂಡದ ನಾಯಕತ್ವ ವಹಿಸಿರುವ ವಿರಾಟ್ ಕೊಹ್ಲಿ, 2016 ಟಿ20 ಕ್ರಿಕೆಟ್‍ನಲ್ಲಿ ಭಾಗವಹಿಸಿದ್ದರು. ಅಲ್ಲದೇ ಇದುವರೆಗೂ ಟೆಸ್ಟ್ ಕ್ರಿಕೆಟ್ ನಲ್ಲಿ 23 ಶತಕಗಳು ಮತ್ತು 19 ಅರ್ಧಶತಕಗಳನ್ನು ಗಳಿಸಿದ್ದಾರೆ” ಎಂದು ಟ್ವೀಟ್ ಮಾಡಿದ್ದರು.

    ಈ ಹಿಂದೆ ಕೊಹ್ಲಿ ಅವರ ಹೆಸರನ್ನು ಬಿಸಿಸಿಐ ಎರಡನೇ ಬಾರಿಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು. ಕಳೆದ ಬಾರಿ 2016 ರಲ್ಲಿ ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು. ಆದರೆ ಆ ಸಾಲಿನಲ್ಲಿ ರಿಯೋ ಒಲಿಂಪಿಕ್ ಪದಕ ವಿಜೇತರಾಗಿದ್ದ ಪಿವಿ ಸಿಂಧು, ಸಾಕ್ಷಿ ಮಲಿಕ್ ಮತ್ತು ಜಿಮ್ನಾಸ್ಟಿಕ್ಸ್ ಇತಿಹಾಸದಲ್ಲಿ ಭಾರತದ ಪರ ವಿಶೇಷ ಸಾಧನೆ ಮಾಡಿದ್ದ ದೀಪಾ ಕರ್ಮಕರ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಸಿಕ್ಕಿತ್ತು. ಆದರೆ ಈ ಬಾರಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ವೇಟ್ ಲಿಫ್ಟಿಂಗ್ ಮೀರಾಬಾಯಿ ಚಾನುಗೆ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ದೊರೆತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv