Tag: de-notification

  • ಪೆರಿಫೆರಲ್ ರಿಂಗ್ ರಸ್ತೆಗೆ ಈಗ ಡಿ ನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗೋಕೆ ಸಿದ್ಧ ಇಲ್ಲ: ಡಿಕೆಶಿ

    ಪೆರಿಫೆರಲ್ ರಿಂಗ್ ರಸ್ತೆಗೆ ಈಗ ಡಿ ನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗೋಕೆ ಸಿದ್ಧ ಇಲ್ಲ: ಡಿಕೆಶಿ

    ಬೆಂಗಳೂರು: ಪೆರಿಫೆರಲ್ ರಿಂಗ್ ರಸ್ತೆಗೆ (Peripheral Ring Road) ಈಗ ನಾನು ಡಿ ನೋಟಿಫಿಕೇಶನ್ (De-Notification) ಮಾಡಿ ಜೈಲಿಗೆ ಹೋಗೋಕೆ ಸಿದ್ಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಗೋಪಿನಾಥ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಫೆರಿಫೆರಲ್ ರಿಂಗ್ ರಸ್ತೆ 2ಕ್ಕೆ ಮೊದಲ ಅಧಿಸೂಚನೆ ಬಂದಿದ್ದು 2005-06ರಲ್ಲಿ. ಆದರೆ ಯಾವುದೇ ಸರ್ಕಾರ ಇದನ್ನು ಡಿ ನೋಟಿಫಿಕೇಶನ್ ಮಾಡಲಿಲ್ಲ. ಡಿ ನೋಟಿಫಿಕೇಶನ್ ಮಾಡದೇ ಪ್ಲಾನ್‌ಗಳಿಗೆ ಅನುಮತಿ ನೀಡಿಲ್ಲ. ಈಗ ಇದು ನನ್ನ ಕಾಲಕ್ಕೆ ಬಂದಿದೆ. ಇದನ್ನು ಡಿನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ. ಇದು ನನ್ನ ವೈಯಕ್ತಿಕ ಹಾಗೂ ಸರ್ಕಾರದ ತೀರ್ಮಾನ ಎಂದರು. ಇದನ್ನೂ ಓದಿ: ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ: ಕೆಇಎ

    ನೈಸ್ ರಸ್ತೆ ಇಲ್ಲವಾಗಿದ್ದರೆ ಬೆಂಗಳೂರು ಸತ್ತು ಹೋಗುತ್ತಿತ್ತು. ಇದು ನೈಸ್ ರಸ್ತೆಗೆ ಪರ್ಯಾಯವಾಗಿ ಬರುತ್ತಿರುವ ರಸ್ತೆ. ಪಿಆರ್‌ಆರ್ 1ಕ್ಕೆ 26 ಸಾವಿರ ಕೋಟಿ ರೂ. ಬೇಕಾಗಿದೆ. ಅಂದಿನ ಕಾಲದಲ್ಲೇ ಮಾಡಿದ್ದರೆ 4-5 ಸಾವಿರ ಕೋಟಿಯಲ್ಲಿ ಮುಗಿಯುತ್ತಿತ್ತು. ಬಿಡಿಎ ವ್ಯಾಪ್ತಿಯಲ್ಲಿ ಹೊಸ ಪರಿಹಾರ ನೀತಿ ಬರುವುದಿಲ್ಲ. ಆದರೂ ನಾವು ರೈತರಿಗೆ ತೊಂದರೆ ಮಾಡಬಾರದು ಎಂದು ಉತ್ತಮ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಅಪ್ರತಿಮ ಸಾಹಸ ಪ್ರದರ್ಶನ – 16 BSF ಯೋಧರಿಗೆ ಶೌರ್ಯ ಪದಕ

    ಪಿಆರ್‌ಆರ್ 2 ಕೂಡ ಆರ್ಥಿಕವಾಗಿ ಸರಿದೂಗಬೇಕು. ಇದಕ್ಕೆ 27 ಸಾವಿರ ಕೋಟಿ ಸಾಲ ಮಾಡಲು ಆಗುವುದಿಲ್ಲ. ಇಲ್ಲಿ ಕೆಲವರು ಮನೆ ಕಟ್ಟಿದ್ದಾರೆ, ಕೆಲವರು ಕಟ್ಟಿಲ್ಲ ಎಂದು ಹೇಳಿದ್ದೀರಿ. ನಾವು ಎಲ್ಲರ ಹಿತ ಗಮನದಲ್ಲಿಟ್ಟುಕೊಂಡು ಪ್ರತಿ ಪ್ರಕರಣವನ್ನು ಪರಿಶೀಲನೆ ಮಾಡುತ್ತೇವೆ. ನಿಮ್ಮ ಸಲಹೆಗಳಿದ್ದರೆ ನೀಡಿ. ಆದರೆ ಈ ರಸ್ತೆ ಮಾಡುವುದನ್ನು ನಿಲ್ಲಿಸಲು ಆಗುವುದಿಲ್ಲ. ಈ ಭಾಗದಲ್ಲಿ ಒಂದೇ ಕಡೆ 5 ಸಾವಿರ ಮನೆ ಇವೆ. ಎಲ್ಲವನ್ನು ಕೆಡವಲು ಆಗುತ್ತದೆಯೇ ಎಂಬ ಪ್ರಶ್ನೆ ಇದೆ. ಹೀಗಾಗಿ ಈ ಭಾಗದಲ್ಲಿ ಪರ್ಯಾಯ ಮಾರ್ಗ ಇದೆಯೇ ಎಂದು ಪರಿಶೀಲಿಸುತ್ತೇವೆ. ಪರಿಷತ್ ಸದಸ್ಯರಾಗಿ, ಆ ಭಾಗದ ಜನಪ್ರತಿನಿಧಿಯಾಗಿರುವುದರಿಂದ ನಿಮ್ಮನ್ನು ನಮ್ಮ ಅಧಿಕಾರಿಗಳ ಜೊತೆ ಕೂರಿಸಿ ಚರ್ಚೆಗೆ ಅವಕಾಶ ನೀಡುತ್ತೇನೆ. ನಿಮಗೆ ಯಾವುದು ಉತ್ತಮವೆನಿಸುತ್ತದೆಯೋ ಆ ಸಲಹೆ ನೀಡಿ. ಆದರೆ ಯೋಜನೆ ಕೈಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ದಾವಣಗೆರೆ | ಅಪ್ರಾಪ್ತನಿಂದ ಬೈಕ್ ರೈಡ್ – ಮಾಲೀಕನಿಗೆ 25,000 ದಂಡ

    ಇಲ್ಲಿ ಪರಿಹಾರವನ್ನು ರೈತರಿಗೆ ನೀಡುತ್ತೀರೋ, ಅಥವಾ ಅಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ನೀಡುತ್ತೀರೋ ಎಂದು ಕೇಳಿದಾಗ, ಯಾರು ಆ ಜಾಗದಲ್ಲಿ ಇದ್ದಾರೋ, ಯಾರ ಬಳಿ ದಾಖಲೆಗಳಿವೆಯೋ ಅವರಿಗೆ ಪರಿಹಾರ ನೀಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ

  • ಬಿಎಸ್‌ವೈಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್

    ಬಿಎಸ್‌ವೈಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್

    ನವದೆಹಲಿ: ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಸದ್ಯಕ್ಕೆ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ಮಾಡದಂತೆ ಸೂಚಿಸಿದೆ.

    ತಮ್ಮ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿದ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

    SUPREME COURT

    2000-2001ನಲ್ಲಿ ಐಟಿ ಕಾರಿಡಾರ್ ಯೋಜನೆಗೆ ವಶಪಡಿಸಿಕೊಂಡ ಭೂಮಿಯನ್ನು 2006 ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅಧಿಕಾರ ದುರ್ಬಳಕೆ ಮಾಡಿಕೊಂಡು ಆಪ್ತರ ಹೆಸರಿಗೆ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ವಾಸುದೇವ ರೆಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

    ಈ ಪ್ರಕರಣವನ್ನು ವಜಾ ಮಾಡುವಂತೆ ಬಿ.ಎಸ್ ಯಡಿಯೂರಪ್ಪ ಹಾಗೂ ಮತ್ತೋರ್ವ ಆರೋಪಿ ಆರ್.ವಿ ದೇಶಪಾಂಡೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆರ್.ವಿ ದೇಶಪಾಂಡೆ ಅವರನ್ನು ಪ್ರಕರಣದಿಂದ ಕೈ ಬಿಟ್ಟು ಬಿಎಸ್‌ವೈ ವಿರುದ್ಧ ತನಿಖೆ ನಡೆಸಲು ಸೂಚನೆ ನೀಡಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಬಿಎಸ್‍ವೈ ವಿರುದ್ಧ ಮತ್ತೆರಡು ಡಿನೋಟಿಫಿಕೇಷನ್ ಪ್ರಕರಣಗಳಲ್ಲಿ ಎಫ್‍ಐಆರ್‍ಗೆ ಸಿದ್ಧತೆ- ಎಸಿಬಿ ಬಳಿಯಿವೆ 18 ಅಸ್ತ್ರ

    ಬಿಎಸ್‍ವೈ ವಿರುದ್ಧ ಮತ್ತೆರಡು ಡಿನೋಟಿಫಿಕೇಷನ್ ಪ್ರಕರಣಗಳಲ್ಲಿ ಎಫ್‍ಐಆರ್‍ಗೆ ಸಿದ್ಧತೆ- ಎಸಿಬಿ ಬಳಿಯಿವೆ 18 ಅಸ್ತ್ರ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮತ್ತೆ ಎಫ್‍ಐಆರ್ ಸಂಕಷ್ಟ ಎದುರಾಗ್ತಿದೆ. ಇಂದು ಮತ್ತೆರಡು ಡಿನೋಟಿಫಿಕೇಶನ್ ಪ್ರಕರಣಗಳಲ್ಲಿ ಬಿಎಸ್‍ವೈ ವಿರುದ್ಧ ಎಸಿಬಿ ಎಫ್‍ಐಆರ್ ದಾಖಲಿಸೋ ಸಾಧ್ಯತೆ ಇದೆ.

    ದೊಡ್ಡಬೆಟ್ಟಹಳ್ಳಿಯ 9.19 ಎಕರೆ ನೋಟಿಫಿಕೇಷನ್ ಪ್ರಕರಣ, ರಾಮಗೊಂಡನಹಳ್ಳಿಯ 48.34 ಎಕರೆ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಲು ಎಸಿಬಿ ಸಿದ್ಧತೆ ನಡೆಸಿದೆ. ಇಷ್ಟೇ ಅಲ್ಲ, ಇನ್ನೂ 18 ಡಿನೋಟಿಫಿಕೇಷನ್ ಪ್ರಕರಣಗಳಲ್ಲಿ ಯಡಿಯೂರಪ್ಪ ತಪ್ಪಿತಸ್ಥರು. ಭೂ ಮಾಲೀಕರಿಗೆ ಅಕ್ರಮವಾಗಿ ಲಾಭ ಮಾಡಿ ಸರ್ಕಾರಕ್ಕೆ ನಷ್ಟ ಮಾಡಿದ್ದಾರೆ ಅಂತ ಎಸಿಬಿಯ ಉಪ ಆಯುಕ್ತರು ನೀಡಿರೋ ವಿಚಾರಣಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಇದನ್ನೂ ಓದಿ: ಬಿಎಸ್‍ವೈಗೆ ಮತ್ತೆ ಸಂಕಷ್ಟ – 257 ಎಕರೆ ಅಕ್ರಮ ಡಿನೋಟಿಫಿಕೇಷನ್ ಆರೋಪ, ಎಸಿಬಿಗೆ ದೂರು ದಾಖಲು

    40ಕ್ಕೂ ಹೆಚ್ಚು ಅಧಿಕಾರಿಗಳು ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಸದ್ಯ ವಿವಾದದಲ್ಲಿ ಸಿಲುಕಿರುವ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಒಬ್ಬರೇ 78 ಎಕರೆ ಡಿನೋಟಿಫೈ ಮಾಡಿದ್ದಾರೆ. ಈ ಕಡತಗಳಿಗೆಲ್ಲಾ ಬಿಎಸ್ ಅಂತಾ ಯಡಿಯೂರಪ್ಪ ಸಹಿ ಹಾಕಿದ್ದಾರೆ. ವಿಚಾರಣಾ ವರದಿಯ ಎಕ್ಸ್ ಕ್ಲೂಸೀವ್ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಈಗಾಗಲೇ ಎರಡು ಪ್ರಕರಣಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ ರದ್ಧತಿ ಕೋರಿ ಬಿಎಸ್‍ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‍ನಲ್ಲಿ ನಡೆಯಲಿದೆ. ಒಂದು ವೇಳೆ ಎಫ್‍ಐಆರ್‍ಗಳಿಗೆ ತಡೆಯಾಜ್ಞೆ ಸಿಕ್ಕಿದ್ರೂ ಸದ್ಯಕ್ಕೆ ಯಡಿಯೂರಪ್ಪಗೆ ಸಂಕಷ್ಟ ತಪ್ಪಿದ್ದಲ್ಲ.

    ಇದನ್ನೂ ಓದಿ: ಬಿಎಸ್‍ವೈ ಡಿನೋಟಿಫಿಕೇಶನ್ ಕೇಸ್‍ಗೆ ಮತ್ತೆ ಟ್ವಿಸ್ಟ್- ಬಸವರಾಜೇಂದ್ರ ಆರೋಪ ಸತ್ಯಕ್ಕೆ ದೂರ ಅಂತು ಎಸಿಬಿ