Tag: dead

  • Hyderabad | ಶಾಲೆಯಲ್ಲಿ ಕಬ್ಬಿಣದ ಗೇಟ್ ಬಿದ್ದು 6ರ ಬಾಲಕ ಸಾವು

    Hyderabad | ಶಾಲೆಯಲ್ಲಿ ಕಬ್ಬಿಣದ ಗೇಟ್ ಬಿದ್ದು 6ರ ಬಾಲಕ ಸಾವು

    ಹೈದರಾಬಾದ್: ಶಾಲೆಯಲ್ಲಿ ಕಬ್ಬಿಣದ ಗೇಟ್ ಬಿದ್ದು ತಲೆಗೆ ಪೆಟ್ಟಾದ ಕಾರಣ 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ (Hyderabad) ಹಯಾತ್ ನಗರದ ಎಂಪಿಪಿ ಶಾಲೆಯಲ್ಲಿ ನಡೆದಿದೆ.

    ಮೃತ ಬಾಲಕನನ್ನು 1ನೇ ತರಗತಿಯ ಅಜಯ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 4 ಗಂಟೆಯ ಸುಮಾರಿಗೆ ಶಾಲೆಯ ಕಬ್ಬಿಣದ ಗೇಟ್ ಬಳಿ ಆಟವಾಡುತ್ತಿದ್ದಾಗ ಘಟನೆ ನಡೆದಿದೆ.ಇದನ್ನೂ ಓದಿ: ಮೊದಲ ಫಲಿತಾಂಶ ಪ್ರಕಟ | ಕಮಲಾ, ಟ್ರಂಪ್‌ಗೆ ಬಿತ್ತು ತಲಾ 3 ಮತ – ಮಧ್ಯರಾತ್ರಿ ಚುನಾವಣೆ ಯಾಕೆ?

    ಪೊಲೀಸರ ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಕೆಲವು ಮಕ್ಕಳು ಗೇಟ್ ಮೇಲೆ ಏರಿ ಅದನ್ನು ಅತ್ತಿಂದಿತ್ತ ತಿರುಗಿಸುತ್ತಾ ಆಟವಾಡುತ್ತಿದ್ದರು. ಈ ವೇಳೆ ಅಜಯ್ ಕೂಡ ಆಟವಾಡುತ್ತಿದ್ದನು. ಗೇಟ್‌ನ ಜಾಯಿಂಟ್‌ಗಳು ಮುರಿದು ಅಲ್ಲಿಯೇ ಆಡುತ್ತಿದ್ದ ಅಜಯ್ ಮೇಲೆ ಬಿದ್ದಿದೆ. ಇದರಿಂದಾಗಿ ಆತನ ತಲೆಗೆ ಗಂಭೀರ ಗಾಯಗಳಾಗಿದ್ದವು. ಇದರಿಂದಾಗಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

    ಇದಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಈ ಘಟನೆ ಮೊದಲನೇಯದಲ್ಲ. ಇದಕ್ಕೂ ಮುನ್ನ ಇದೇ ಜು.31 ರಂದು ಗಿರಿಜಾ ಗಣೇಶ್ ಶಿಂಧೆ ಎಂಬ ಮೂರೂವರೆ ವರ್ಷದ ಬಾಲಕಿಯ ಮೇಲೆ ಕಬ್ಬಿಣದ ಗೇಟ್ ಬಿದ್ದು ಸಾವನ್ನಪ್ಪಿದ್ದಳು.

    ಈ ಭೀಕರ ಅಪಘಾತವು ಸಮೀಪದ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದ್ದು, ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿತ್ತು. ಸಿಸಿಟಿವಿ ದೃಶ್ಯದಲ್ಲಿ ಗೇಟ್ ಬಳಿ ಆಟವಾಡುತ್ತಿದ್ದ ಮಕ್ಕಳು ಗೇಟ್‌ನ್ನು ಮುಚ್ಚಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅಲ್ಲಿಯೇ ನಡೆದುಕೊಂಡ ಹೋಗುತ್ತಿದ್ದ ಗಿರಿಜಾ ಮೇಲೆ ಗೇಟ್ ಏಕಾಏಕಿ ಕುಸಿದು ಬಿದ್ದಿತ್ತು. ಇದರಿಂದಾಗಿ ಬಾಲಕಿ ಸಾವನ್ನಪ್ಪಿದ್ದಳು.ಇದನ್ನೂ ಓದಿ: ಬಿಟ್ಟಿ ಸಲಹೆ ಕೊಟ್ಟ ನೆಟ್ಟಿಗನಿಗೆ ಸಮಂತಾ ತಿರುಗೇಟು

  • ಹಾಲಿವುಡ್ ‘ಹ್ಯಾರಿ ಪಾಟರ್’ ಸರಣಿಯ ರುಬೆಸ್ ಪಾತ್ರಧಾರಿ ನಿಧನ

    ಹಾಲಿವುಡ್ ‘ಹ್ಯಾರಿ ಪಾಟರ್’ ಸರಣಿಯ ರುಬೆಸ್ ಪಾತ್ರಧಾರಿ ನಿಧನ

    ಜೇಮ್ಸ್ ಬಾಂಡ್, ಹ್ಯಾರಿ ಪಾಟರ್ (Harry Potter) ಸೇರಿದಂತೆ ಸಾಕಷ್ಟು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದ ಸ್ಕಾಟಿಶ್ ನಟ ರಾಬಿ ಕೋಲ್ಟ್ರೇನ್ (Robbie Coltrane) ನಿಧನರಾಗಿದ್ದಾರೆ. ಹ್ಯಾರಿ ಪಾಟರ್ ಸಿನಿಮಾದ ರುಬೆಸ್ ಹ್ಯಾಗ್ರಿಡ್ ಪಾತ್ರದ ಮೂಲಕ ರಾಬಿ ಸಾಕಷ್ಟು ಹೆಸರು ಮಾಡಿದ್ದರು. ಕ್ರ್ಯಾಕರ್ ಸಿರೀಸ್ ನಿಂದಲೂ ಅವರು ಭಾರೀ ಜನಪ್ರಿಯತೆಯನ್ನು ಪಡೆದಿದ್ದರು.

    72ರ ವಯಸ್ಸಿನ ರಾಬಿ ಕೋಲ್ಟ್ರೇನ್ ನಿಧನದ ಸುದ್ದಿಯನ್ನು ಅಲ್ಲಿನ ಮಾಧ್ಯಮಗಳು ಖಚಿತ ಪಡಿಸಿದ್ದು, ಸಾವಿಗೆ ಕಾರಣವನ್ನೂ ಮಾತ್ರ ತಿಳಿಸಿಲ್ಲ. ಶುಕ್ರವಾರ ತಡರಾತ್ರಿ ನಟ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು ರಾಬಿ ಅವರ ಏಜೆಂಟ್ ತಿಳಿಸಿದ್ದಾರೆ. 40 ವರ್ಷದಿಂದ ಅವರ ಏಜೆಂಟ್ ಆಗಿ ಕೆಲಸ ಮಾಡಿದ್ದಕ್ಕೆ ಹೆಮ್ಮೆಯಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ


    ರಾಬಿ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಟಿವಿ ಮತ್ತು ವೆಬ್ ಸಿರೀಸ್ ನಲ್ಲೂ ಕಾಣಿಸಿಕೊಂಡಿದ್ದಾರೆ. 1990ರಲ್ಲಿ ಮೊದಲ ಬಾರಿಗೆ ಕ್ರ್ಯಾಕರ್ ಸಿರೀಸ್ ನಲ್ಲಿ ಅವರು ಡಿಟೆಕ್ಟಿವ್ ಪಾತ್ರ ಮಾಡಿದ್ದಾರೆ. ಆ ಪಾತ್ರ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಈ ನಟನೆಗಾಗಿ ಅವರಿಗೆ ಅಕಾಡಮಿ ಟೆಲಿವಿಷನ್ ಪ್ರಶಸ್ತಿ ಕೂಡ ಬಂದಿತ್ತು. ಅಲ್ಲದೇ, ಜೇಮ್ಸ್ ಬಾಂಡ್ (James Bond) ಸೇರಿದಂತೆ ಹಲವು ಸಿನಿಮಾಗಳಲ್ಲೂ ರಾಬಿ ಕಾಣಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾನಗಲ್‍ನಲ್ಲಿ ಸಿಡಿಲು ಬಡಿದು ಓರ್ವ ಸಾವು – ಇಬ್ಬರಿಗೆ ಗಂಭೀರ ಗಾಯ

    ಹಾನಗಲ್‍ನಲ್ಲಿ ಸಿಡಿಲು ಬಡಿದು ಓರ್ವ ಸಾವು – ಇಬ್ಬರಿಗೆ ಗಂಭೀರ ಗಾಯ

    ಹಾವೇರಿ: ಸಿಡಿಲು ಬಡಿದು ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ಮೃತರನ್ನ ವಿರೇಶ ಹೊಸಮನಿ(25) ಗುರುತಿಸಲಾಗಿದೆ. ಗಾಯಗೊಂಡವರನ್ನ ಶಶಾಂಕ ಮತ್ತು ದೇವರಾಜ ಎಂದು ಗುರುತಿಸಲಾಗಿದೆ. ಹಾನಗಲ್ ಪಟ್ಟಣದಲ್ಲಿ ಯುವಕರು ಟೈಲ್ಸ್ ಕೆಲಸ ಮಾಡುತ್ತಿದ್ದರು.

    ಕೆಲಸ ಮುಗಿಸಿಕೊಂಡು ಬೈಕ್ ಮೇಲೆ ಸ್ವಗ್ರಾಮ ಹಸನಾಬಾದಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸಿಡಿಲು ಗುಡುಗಿನೊಂದಿಗೆ ಮಳೆ ಬರುತ್ತಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಆಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬದವರಿಗೆ ಶಾಸಕ ಶ್ರೀನಿವಾಸ ಮಾನೆ ಸಾಂತ್ವನ ಹೇಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ರಂಗು ರಂಗಿನ ಬಣ್ಣ ಎರಚುವ ನೆಪದಲ್ಲಿ ಆ್ಯಸಿಡ್ ಎರಚಿ ಕೊಲೆ

    ರಂಗು ರಂಗಿನ ಬಣ್ಣ ಎರಚುವ ನೆಪದಲ್ಲಿ ಆ್ಯಸಿಡ್ ಎರಚಿ ಕೊಲೆ

    ಪಾಟ್ನಾ: ರಂಗು ರಂಗಿನ ಬಣ್ಣಗಳನ್ನು ಎರಚಿಕೊಂಡು ಹೋಳಿ ಆಚರಣೆ ನಡೆಯುತ್ತಿರುವಾಗಲೇ, ದುಷ್ಕರ್ಮಿಗಳು ಆ್ಯಸಿಡ್ ಎರಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

    ಬಿಹಾರದ ನಳಂದಾ ಜಿಲ್ಲೆಯಲ್ಲಿ, ಹೋಳಿ ಆಚರಣೆ ವೇಳೆ ವ್ಯಕ್ತಿಯೋರ್ವನ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಈ ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕಳಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ನಳಂದಾ ಜಿಲ್ಲೆಯ ಎಸ್‍ಡಿಪಿಒ ಕೃಷ್ಣ ಮುರಾರಿ ಪ್ರಸಾದ್ ತಿಳಿಸಿದ್ದಾರೆ.ಇದನ್ನೂ ಓದಿ:ಸೋಶಿಯಲ್ ಮೀಡಿಯಾ ಸ್ಟಾರ್ ಡಾಲಿ ಭೀಕರ ರಸ್ತೆ ಅಪಘಾತದಲ್ಲಿ ಸಾವು

    ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಗ್ರಾಮಸ್ಥರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳದಲ್ಲಿ ಭಾರಿ ಪೊಲೀಸರನ್ನು ನಿಯೋಜಿಸಲಾಗಿದೆ. . ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

  • ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕೂಲಿಕಾರ್ಮಿಕ ಬಲಿ

    ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕೂಲಿಕಾರ್ಮಿಕ ಬಲಿ

    ಹಾಸನ: ಕೂಲಿಕಾರ್ಮಿಕರೊಬ್ಬರು ನಿರ್ಮಾಣ ಹಂತದ ಅಣೆಕಟ್ಟು ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಬಳಿ ನಡೆದಿದೆ.

    ಮಂಜೇಗೌಡ (45) ಮೃತ ಕೂಲಿಕಾರ್ಮಿಕ. ಕಟ್ಟೆಬೆಳಗುಲಿ ಗ್ರಾಮದ ಸಮೀಪ ಹರಿಯುತ್ತಿರುವ ಹೇಮಾವತಿ ನದಿಗೆ ಅಣೆಕಟ್ಟು ಕಟ್ಟುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಸುಮಾರು 20 ಅಡಿ ಎತ್ತರಕ್ಕೆ ಕೂಲಿ ಕಾರ್ಮಿಕನನ್ನು ಕಬ್ಬಿಣದ ಕಂಬಿಗಳನ್ನು ಹಿಡಿದು ಮೇಲಕ್ಕೆ ಹತ್ತಿಸಿದ್ದರು. ಈ ವೇಳೆ ತಲೆಗೆ ಅವರಿಗೆ ಹೆಲ್ಮೆಟ್ ನೀಡಿರಲಿಲ್ಲ. ಸುರಕ್ಷತಾ ಬಲೆಯನ್ನು ಕೂಡಾ ಅಳವಡಿಸಿರಲಿಲ್ಲ. ಇದನ್ನೂ ಓದಿ: ಚಂದನವನದಲ್ಲಿ ಲವ್ಲಿ ವ್ಯಾಲೆಂಟೈನ್ಸ್ ಡೇ – ಅಭಿಮಾನಿಗಳೊಂದಿಗೆ ಹಂಚಿಕೊಂಡ್ರು ಸ್ಪೆಷಲ್ ಫೋಟೋ!

    ಮಂಜೇಗೌಡರವರು ಕೆಲಸ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಕೂಲಿಕಾರ್ಮಿಕನ ಸಾವಿಗೆ ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಂಬಂಧಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ

    ಘಟನೆಯು ಹೊಳೆನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಇಬ್ಬನಿ ಇದ್ದಿದ್ದರಿಂದ ರಸ್ತೆ ಕಾಣದೆ ನಿಂತಿದ್ದ ಟ್ರಕ್‍ಗೆ ಕಾರ್ ಡಿಕ್ಕಿ- ನಾಲ್ವರು ದುರ್ಮರಣ

    ಇಬ್ಬನಿ ಇದ್ದಿದ್ದರಿಂದ ರಸ್ತೆ ಕಾಣದೆ ನಿಂತಿದ್ದ ಟ್ರಕ್‍ಗೆ ಕಾರ್ ಡಿಕ್ಕಿ- ನಾಲ್ವರು ದುರ್ಮರಣ

    ಒಡಿಶಾ: ನಿಂತಿದ್ದ ಟ್ರಕ್‍ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದು, 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ಲಹಬಾದಿ ನಗರದಲ್ಲಿ ನಡೆದಿದೆ.

    ರೋಜಲಿನ್ ದಿಗಲ್, ಭಾಗಿಯಾ ದಿಗಲ್, ದೀಪ್ತಿ ರಂಜನ್ ಪ್ರಧಾನ್. ಪೂರ್ಣಚಂದ್ರ ಮಿಶ್ರಾ ಮೃತರಾಗಿದ್ದಾರೆ. ಈ ಘಟನೆ ನಿನ್ನೆ ಮಧ್ಯರಾತ್ರಿ 12.30ರ ಹೊತ್ತಿಗೆ ನಡೆದಿದೆ. ಕಾರಿನಲ್ಲಿ ಡ್ರೈವರ್ ಸೇರಿ ಒಟ್ಟು 9 ಮಂದಿ ಇದ್ದರು. ರಾತ್ರಿ ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    POLICE JEEP

    ಅಪಘಾತಕ್ಕೀಡಾದ ವಾಹನ ಒಮಿನಿ ಎಂದು ಹೇಳಲಾಗಿದ್ದು, ಇವರೆಲ್ಲ ಪಾರ್ಟಿಯೊಂದರಿಂದ ವಾಪಸ್ ಮಧ್ಯರಾತ್ರಿ ಮನೆಗೆ ಹೋಗುತ್ತಿದ್ದರು. ಅತಿಯಾಗಿ ಬೀಳುತ್ತಿದ್ದ ಇಬ್ಬನಿಯೇ ಕಾರಣವೆಂದು ಹೇಳಲಾಗಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಇದನ್ನೂ ಓದಿ: ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಅಂದ ಅಯೂಬ್ ಖಾನ್ – ಸಿಡಿದೆದ್ದ ಜೈನ ಸಮುದಾಯ

  • ಕೃಷ್ಣೆಯ ಆರ್ಭಟಕ್ಕೆ ಕೊಚ್ಚಿ ಹೋದ ನೂತನ ಸೇತುವೆ

    ಕೃಷ್ಣೆಯ ಆರ್ಭಟಕ್ಕೆ ಕೊಚ್ಚಿ ಹೋದ ನೂತನ ಸೇತುವೆ

    – ಮೂರು ದಿನಗಳ ಬಳಿಕ ತೇಲಿ ಬಂದ ಮೃತ ದೇಹ

    ಯಾದಗಿರಿ: ಕೃಷ್ಣಾ ನದಿಯ ಪ್ರವಾಹಕ್ಕೆ ಕೃಷ್ಣಾ ಹೈಡ್ರೋಪವರ್ ವತಿಯಿಂದ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ.

    ಸುರಪುರ ತಾಲೂಕಿನ ಬೆಂಚಿಗಡ್ಡಿ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಈ ಸೇತುವೆಯನ್ನು ನಿರ್ಮಾಣ ಮಾಡಿ ಕಳೆದ ವರ್ಷವಷ್ಟೇ ಉದ್ಘಾಟನೆ ಮಾಡಲಾಗಿತ್ತು. ಪಿಡಬ್ಲೂಡಿ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಿದ್ದ ಸೇತುವೆಯನ್ನು ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿತ್ತು. ಸದ್ಯ ಕೃಷ್ಣಾ ನದಿಯಿಂದ 5.60 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಸೇತುವೆ ಕೊಚ್ಚಿ ಹೋಗಿರುವುದರಿಂದ ನೀಲಕಂಠರಾಯನ ಗಡ್ಡಿಗೆ ಸಂಪರ್ಕ ಕಡಿತವಾಗಿದ್ದು, ನಡುಗಡ್ಡೆಯಾಗಿ ಪರಿರ್ತನೆಯಾಗಿದೆ.

    ಪ್ರತಿವರ್ಷವೂ ಮಳೆಯ ಸಂದರ್ಭದಲ್ಲಿ ನಡುಗಡ್ಡೆಯಾಗಿ ಪರಿವರ್ತನೆಯಾಗುತ್ತಿದ್ದ ನೀಲಕಂಠರಾಯನ ಗಡ್ಡಿ ಗ್ರಾಮಕ್ಕೆ ಸೇತುವೆ ನಿರ್ಮಾಣ ಮಾಡಿದ್ದರಿಂದ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದರು. ಆದರೆ ಅವರ ಸಂತಸ ಬಹುಬೇಗ ಮಾಯವಾಗಿದೆ. ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪ್ರತಿವರ್ಷ ಸಮಸ್ಯೆ ಎದುರಾಗುತ್ತಿರುವುದನ್ನು ತಿಳಿದಿದ್ದ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಈ ಬಾರಿ ಕಳೆದ 2 ದಿನಗಳ ಹಿಂದೆಯಷ್ಟೇ ಗ್ರಾಮಸ್ಥರಿಗೆ ಆಹಾರ ಪೂರೈಕೆ ಮಾಡಿತ್ತು. ಸದ್ಯ ನೀರಿನ ಪ್ರಮಾಣ ಕಡಿಮೆ ಆಗಲು ಸರಿಸುಮಾರು 1 ತಿಂಗಳು ಅವಧಿ ಬೇಕಾಗುತ್ತದೆ ಎಂಬ ಮಾಹಿತಿ ಲಭಿಸಿದ್ದು, ಮುಂದಿನ ಅವಧಿಯಲ್ಲಿ ಗ್ರಾಮಸ್ಥರನ್ನು ಸಂಪರ್ಕ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕಿದೆ.

    ತೇಲಿ ಬಂದ ಮೃತ ದೇಹ: ಕಳೆದ ಮೂರು ದಿನಗಳ ಹಿಂದೆ ಪಂಪ್ ಸೆಟ್ ತರಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋಗಿದ್ದ ರೈತನ ಮೃತ ದೇಹ ನದಿಯಲ್ಲಿ ತೇಲಿ ಬಂದಿದೆ. ಯಾದಗಿರಿ ತಾಲೂಕಿನ ಕೋಳೂರು ಗ್ರಾಮದ ಸಾಹೇಬರೆಡ್ಡಿ ಮೃತ ರೈತರಾಗಿದ್ದು. ಮೂರು ದಿನಗಳ ಹಿಂದೆ ಭೀಮಾನದಿಯಲ್ಲಿ ಕೊಚ್ಚಿ ಹೋಗಿದ್ದರು. ಎರಡು ದಿನಗಳು ನಿರಂತರ ಶೋಧ ಕಾರ್ಯ ನಡೆಸಿದರು ಅವರ ಮೃತ ದೇಹ ಪತ್ತೆಯಾಗಿರಲಿಲ್ಲ. ಆದರೆ ಇಂದು ಬೆಳಗ್ಗೆ ನದಿಯಲ್ಲಿ ಮೃತ ದೇಹ ತೇಲಿ ಬಂದಿದೆ.

  • ವರುಣನ ಆರ್ಭಟಕ್ಕೆ ಮತ್ತೆ ಮೂರು ಸಾವು – ಬೆಂಗಳ್ಳೂರಿನಲ್ಲಿ ಧರಗೆ ಉರುಳಿದ ಮರಗಳು

    ವರುಣನ ಆರ್ಭಟಕ್ಕೆ ಮತ್ತೆ ಮೂರು ಸಾವು – ಬೆಂಗಳ್ಳೂರಿನಲ್ಲಿ ಧರಗೆ ಉರುಳಿದ ಮರಗಳು

    ಬೆಂಗಳೂರು: ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿದಿದ್ದು, ಇಂದು ಮತ್ತೆ ಮೂವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇತ್ತ ಬೆಂಗಳೂರಿನಲ್ಲಿ ರಾತ್ರಿ ಗಾಳಿ, ಸಹಿತ ಮಳೆಯಾಗಿದ್ದು ಮರಗಳು ಧರೆಗೆ ಉರುಳಿವೆ.

    ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಸಮೇತ ಧಾರಾಕಾರವಾಗಿ ಮಳೆ ಸುರಿದಿದೆ. ರಾಣೆಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಟಪಟ್ಟಿದ್ದಾರೆ. ಚಿದಾನಂದಪ್ಪ ಕೃಷ್ಣಪ್ಪ ಹಳೇಗೌಡರ (48) ಮೃತ ರೈತ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    ಜಿಲ್ಲೆಯ ರಾಣೆಬೆನ್ನೂರು, ಹಾವೇರಿ, ಬ್ಯಾಡಗಿ, ರಟ್ಟಿಹಳ್ಳಿಯಲ್ಲಿ ಗುಡುಗು ಸಹಿತ ಕೆಲಕಾಲ ಮಳೆಯಾಗಿದೆ. ಪೂರ್ವ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು, ರೈತರು ಹೆಚ್ಚಿನ ಮಳೆಯ ನಿರೀಕ್ಷೆಯಲ್ಲಿದ್ದಾರೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರೇಹಳ್ಳಿಯಲ್ಲಿ ಸಿಡಿಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಅರೇಹಳ್ಳಿ ಗ್ರಾಮದ ವಿರೂಪಾಕ್ಷಪ್ಪ(45) ಸಿಡಿಲಿಗೆ ಬಲಿಯಾದ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತ ರೈತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ ಅವರು ಸಾಂತ್ವಾನ ಹೇಳಿದ್ದಾರೆ.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆದಿವಾಲ ಗೊಲ್ಲರಹಟ್ಟಿಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆನಂದ್ (38) ಮೃತ ದುರ್ದೈವಿ. ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಮೃತ ವ್ಯಕ್ತಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪೋರೇಷನ್ ಸೇರಿದಂತೆ ಹಲವಡೆ ವರುಣನ ಆರ್ಭಟ ಮುಂದುವರಿದಿದ್ದು, ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡುವಂತಾಗಿದೆ.

    ಬೆಂಗಳೂರಿನಲ್ಲಿ ಮಧ್ಯೆ ರಾತ್ರಿವರೆಗೂ ವರುಣನ ಆರ್ಭಟ ಮುಂದುವರಿಯಲಿದ್ದು, ಗಂಟೆಗೆ 25-30 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಶವಿವಾರ ಗರಿಷ್ಠ 98 ಮಿಲಿಮೀಟರ್ ಮಳೆಯಾಗಿತ್ತು. ಇಂದು ಗರಿಷ್ಠ ಮಳೆಯಾಗುವ ಸಾಧ್ಯತೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಯಶವಂತಪುರ ಸರ್ಕಲ್ ಪೋಲಿಸ್ ಸ್ಟೇಶನ್ ರೋಡ್‍ನಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಬಿಎಚ್‍ಎಲ್ ಫ್ಯಾಕ್ಟರಿ ಪಕ್ಕದಲ್ಲಿ ಮರವೊಂದು ಬಿದ್ದು, ಬಿಬಿಎಂಪಿ ಕಸದ ಗಾಡಿ ಜಖಂಗೊಂಡಿದೆ. ಇತ್ತ ಮಂತ್ರಿಮಾಲ್ ಹತ್ತಿರ ಎರಡು ಮರಗಳು ನೆಲಕ್ಕೆ ಬಿದ್ದಿದೆ.

  • ಜ್ಯೂಸ್ ಎಂದು ನೀಲಗಿರಿ ತೈಲ ಕುಡಿದ ಬಾಲಕಿ ಸಾವು!

    ಜ್ಯೂಸ್ ಎಂದು ನೀಲಗಿರಿ ತೈಲ ಕುಡಿದ ಬಾಲಕಿ ಸಾವು!

    ಮೈಸೂರು: ನೀಲಗಿರಿ ತೈಲವನ್ನು ಮನೆಯಲ್ಲಿ ಎಲ್ಲಂದರಲ್ಲಿ ಇಡುವ ಪೋಷಕರು ಈ ಸುದ್ದಿಯನ್ನು ಓದಲೇ ಬೇಕು. ನೀಲಗಿರಿ ತೈಲ ಕುಡಿದು 5 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕುಶಾಲನಗರ ತಾಲೂಕು ಕೂಡಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಕೂಡಿಗೆ ಕೊಪ್ಪಲು ಗ್ರಾಮದ ಪ್ರಸನ್ನ ಕುಮಾರ್ ಎಂಬವರ ಮಗಳು ವರ್ಷಿತ (5) ಸಾವನ್ನಪ್ಪಿದ ದುರ್ದೈವಿ ಬಾಲಕಿ. ಜ್ಯೂಸ್ ಎಂದು ಭಾವಿಸಿ ನೀಲಗಿರಿ ತೈಲ ಕುಡಿದು ಅಸ್ವಸ್ಥಳಾದ ವರ್ಷಿತಾಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರ್ಷಿತಾ ಸಾವನ್ನಪ್ಪಿದ್ದಾಳೆ.

     

    ನೀಲಗಿರಿ ತೈಲವನ್ನ ಕುಡಿದ ವರ್ಷಿತಾಳನ್ನು ಆಸ್ಪತ್ರೆಗೆ ಕರೆದೊಯ್ಯಲು 108 ಆಂಬ್ಯುಲೆನ್ಸ್ ಕರೆ ಮಾಡಿದ್ದೆ. ಅವರು ಮೈಸೂರಿನ ಆಸ್ಪತ್ರೆಯಿಂದ ಅಂಬುಲೆನ್ಸ್ ಕಳಿಸುವಂತೆ ತಿಳಿಸುತ್ತಾರೆ. ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಗ್ರಾಮಕ್ಕೆ ಬರಲಿಲ್ಲ. ಅಷ್ಟೇ ಅಲ್ಲದೇ ವಾಹನದಲ್ಲಿ ಆಮ್ಲಜನಕ ಸೇರಿದಂತೆ ಸೂಕ್ತ ಸೌಲಭ್ಯಗಳಿರಲಿಲ್ಲ. ಇದರಿಂದಾಗಿ ವರ್ಷಿತಾ ಸಾವು ಬದುಕಿನ ಮಧ್ಯೆ ಹೋರಾಡುವ ಪರಿಸ್ಥಿತಿ ಎದುರಾಯಿತು. ಬಳಿಕ ಆಸ್ಪತ್ರೆಗೆ ತಲುಪಿದಾಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ಮೃತ ಬಾಲಕಿ ತಂದೆ ಪ್ರಸನ್ನಕುಮಾರ್ ಆರೋಪಿಸಿದ್ದಾರೆ.

    ಹೆಸರಿಗೆ ಮಾತ್ರ ಅಂಬುಲೆನ್ಸ್ ವ್ಯವಸ್ಥೆ ಇದೆ. ಅದರಲ್ಲಿ ಅಗತ್ಯ ಚಿಕಿತ್ಸಾ ಸಾಮಗ್ರಿಗಳು ಹಾಗೂ ಆಮ್ಲಜನಕ ಇಟ್ಟಿಲ್ಲ. ಇವರು ರೋಗಿಗಳ ಜೀವನದ ಜೊತೆಗೆ ಆಟವಾಡುತ್ತಿದ್ದಾರೆ ಎಂದು ದೂರಿದರು.

    ಮಗಳಿಗೆ ಗಾಯವಾಗಿತ್ತು. ಅದಕ್ಕೆ ಹಚ್ಚಿಕೊಳ್ಳಲು ನೀಲಗಿರಿ ತೈಲವನ್ನು ಮನೆಯಲ್ಲಿ ಇಡಲಾಗಿತ್ತು. ವರ್ಷಿತಾಗೆ ಜ್ಯೂಸ್ ಅಂದ್ರೆ ತುಂಬಾ ಇಷ್ಟ. ಪ್ರಸನ್ನಕುಮಾರ್ ಮಗಳಿಗೆ ಜ್ಯೂಸ್ ತಂದು ಕೊಡುತ್ತಿದ್ದರು. ಮನೆಯಲ್ಲಿ ಆಟವಾಡುತ್ತಿದ್ದ ವರ್ಷಿತಾಗೆ ಇಂದು ನೀಲಗಿರಿ ಬಾಟಲ್ ನೋಡಿದ್ದಾಳೆ. ಬಾಟಲ್‍ನಲ್ಲಿರುವುದು ಜ್ಯೂಸ್ ಎಂದು ತಿಳಿದು ಕುಡಿದ ಪರಿಣಾಮ ಅಸ್ವಸ್ಥಳಾಗಿ ಬಿದ್ದಿದ್ದಳು. ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರ್ಷಿತಾ ಅಜ್ಜಿ ಸುಶೀಲಾ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

    ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

    ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ನಡೆದಿದೆ.

    ದಾವಣಗೆರೆ ಮೂಲದ ಸುಮಂತ್(23), ದರ್ಶನ್(24) ಹಾಗೂ ಸುನೀಲ್(23) ಮೃತ ದುರ್ದೈವಿಗಳು. ಗೋವಾದಿಂದ ದಾವಣಗೆರೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಇಬ್ಬರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv