Tag: Dead Line

  • 48 ಗಂಟೆಯ ಒಳಗಡೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಕಾನೂನು ಕ್ರಮ: NHM ಸಿಬ್ಬಂದಿಗೆ ಡೆಡ್‌ಲೈನ್‌

    48 ಗಂಟೆಯ ಒಳಗಡೆ ಕೆಲಸಕ್ಕೆ ಹಾಜರಾಗಿ, ಇಲ್ಲದಿದ್ದರೆ ಕಾನೂನು ಕ್ರಮ: NHM ಸಿಬ್ಬಂದಿಗೆ ಡೆಡ್‌ಲೈನ್‌

    ಬೆಂಗಳೂರು: ಮುಷ್ಕರ ನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಸಿಬ್ಬಂದಿಗೆ ಸರ್ಕಾರ ಡೆಡ್‌ಲೈನ್‌ (Deadline) ನೀಡಿದ್ದು 48 ಗಂಟೆಗಳ‌ ಒಳಗೆ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ ಇಲಾಖೆ (Health Ministry) ಖಡಕ್‌ ಸೂಚನೆ ನೀಡಿದೆ.

    ಎನ್‌ಎಚ್‌ಎಂ ನಿರ್ದೇಶಕರು ನೋಟಿಸ್‌ ಕಳುಹಿಸಿದ್ದು, 48 ಗಂಟೆಯ ಒಳಗಡೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ಹಾಜರಾಗದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

    ಆರೋಗ್ಯ ಇಲಾಖೆ ತುರ್ತುಸೇವೆ ನೀಡುವ ಇಲಾಖೆಯಾಗಿದ್ದು ಮುಷ್ಕರದಿಂದ ರೋಗಿಗಳಿಗೆ ತೊಂದರೆ ಆಗುತ್ತಿದೆ. ಈ ಹಿನ್ನಲೆ ಎನ್‌ಹೆಚ್‌ಎಂ ಸಿಬ್ಬಂದಿಗೆ ನೋಟಿಸ್‌ ಜಾರಿಯಾಗಿದೆ. ಇದನ್ನೂ ಓದಿ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

    ಕಳೆದ ಒಂದು ತಿಂಗಳಿನಿಂದ ಕರ್ತವ್ಯಕ್ಕೆ ಹಾಜರಾಗದೇ ವೇತನ ಹೆಚ್ಚಳ ಮತ್ತು ಹುದ್ದೆ ಖಾಯಂಗೊಳಿಸುವಂತೆ ಆಗ್ರಹಿಸಿ ಎನ್‌ಹೆಚ್‌ಎಂ ಸಿಬ್ಬಂದಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ನೋಟಿಸ್‌ನಲ್ಲಿ ಏನಿದೆ?
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮವು 2005 ರಿಂದ ಜಾರಿಯಲ್ಲಿದ್ದು ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರವಾಗಿದೆ. ಇದು ಮಿಷನ್‌ ಮೋಡ್‌ ಪ್ರಾಜೆಕ್ಟ್‌ ಆಗಿರುವುದರಿಂದ ನಿಗದಿಪಡಿಸಿದ ಉದ್ದೇಶ ಹಾಗೂ ಗುರಿಗಳು ಸಫಲವಾದ ನಂತರ ಕಾರ್ಯಕ್ರಮ ಮುಕ್ತಾಯಗೊಳ್ಳುವುದರ ಬಗ್ಗೆ ಕೇಂದ್ರ ಸರ್ಕಾರವು ತಿರ್ಮಾನಿಸುತ್ತದೆ.

    ಈ ಯೋಜನೆಯಲ್ಲಿ ಸುಮಾರು 53 ಕಾರ್ಯಕ್ರಮಗಳು ರಾಜ್ಯದಲ್ಲಿ ವಿವಿಧ ಹಂತದಲ್ಲಿ ಜಾರಿಯಲ್ಲಿರುತ್ತವೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಒಳಗುತ್ತಿಗೆ ಆಧಾರದ ಮೇಲೆ 26,943 ಮತ್ತು 3,631 ಹೊರಗುತ್ತಿಗೆ ಒಟ್ಟು 30,574 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೌಕರರ ಪ್ರಮುಖ ಬೇಡಿಕೆಯಂದ ಸಂಬಳವನ್ನು ಏರಿಸಲಾಗಿದ್ದು, ಮಾರ್ಚ್‌ 4 ರಂದು ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಳಿದ ಬೇಡಿಕೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಆಶ್ವಾಸನೆ ನೀಡಿದ್ದಾರೆ.

  • ನರ್ತನ್ ನಿರ್ದೇಶನದಲ್ಲಿ ಯಶ್ ನಟಿಸ್ತಾರಾ ಅಥವಾ ಇಲ್ಲವಾ? : ಒಂದು ವಾರ ಡೆಡ್ ಲೈನ್

    ನರ್ತನ್ ನಿರ್ದೇಶನದಲ್ಲಿ ಯಶ್ ನಟಿಸ್ತಾರಾ ಅಥವಾ ಇಲ್ಲವಾ? : ಒಂದು ವಾರ ಡೆಡ್ ಲೈನ್

    ಕೆಜಿಎಫ್ 2 ಸಿನಿಮಾದ ನಂತರ ಯಶ್ ಬೇಡಿಕೆ ತುಂಬಾ ಹೆಚ್ಚಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಯ ಸಿನಿಮಾ ನಿರ್ಮಾಪಕರು, ನಿರ್ದೇಶಕರು ಯಶ್ ಹಿಂದೆ ಬಿದ್ದಿದ್ದಾರೆ. ಇಷ್ಟೊಂದು ಬೇಡಿಕೆ ಇರುವಾಗ ಯಶ್ ಮೌನವಹಿಸಿದ್ದಾರೆ. ತಮಿಳು, ತೆಲುಗು,  ಕನ್ನಡ ಸಿನಿಮಾಗಳ ಬಗ್ಗೆ ಸುದ್ದಿ ಆಗುತ್ತಿದ್ದರೂ, ಯಾವುದಕ್ಕೂ ಪ್ರತಿಕ್ರಿಯಿಸದೆ ಬರುತ್ತಿರುವ ಸುದ್ದಿಗಳನ್ನು ಓದಿಕೊಂಡು ಸುಮ್ಮನಾಗಿದ್ದಾರೆ. ಆದರೂ, ಸುದ್ದಿಗಳು ಮಾತ್ರ ನಿಲ್ಲುತ್ತಿಲ್ಲ.

    ಈವರೆಗೂ ನರ್ತನ್ ನಿರ್ದೇಶನದ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸುದ್ದಿ ಆಗಿತ್ತು. ಆ ಸಿನಿಮಾಗಾಗಿಯೇ ಯಶ್ ತಯಾರಿ ಆಗುತ್ತಿದ್ದಾರೆ ಎಂದೂ ಹೇಳಲಾಗಿತ್ತು. ಯಶ್ ಆಪ್ತರು ಕೂಡ ಈ ಸುದ್ದಿಯನ್ನು ಖಚಿತ ಪಡಿಸಿದ್ದರು. ಆದರೆ, ಒಂದು ವಾರದಿಂದ ನರ್ತನ್ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ನರ್ತನ್ ಸಿನಿಮಾಗೂ ಮುಂಚೆ, ಮತ್ತೊಂದು ಭಾರೀ ಬಜೆಟ್ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಈ ನಡುವೆ ನರ್ತನ್ ಮಾಧ್ಯಮವೊಂದರ ಜೊತೆ ಮಾತನಾಡಿ, ಸಿನಿಮಾ ರಂಗ ಅಂದರೆ, ಅಲ್ಲಿ ವದಂತಿಗಳು, ಗಾಸಿಪ್ ಗಳು ಇರಲೇಬೇಕು. ಯಶ್ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವುದು ಒಂದು ವಾರದೊಳಗೆ ಗೊತ್ತಾಗಲಿದೆ. ಬಹುಶಃ ಒಂದು ವಾರದಲ್ಲಿ ಸಿನಿಮಾ ಬಗ್ಗೆ ಕ್ಲ್ಯಾರಿಟಿ ಸಿಗಬಹುದು ಎಂದು ಹೇಳಿದ್ದಾರೆ. ಅಲ್ಲಿಗೆ ಒಂದು ವಾರದಲ್ಲಿ ಯಶ್ ಅವರ ಹೊಸ ಸಿನಿಮಾದ ಅಪ್ ಡೇಟ್ ಏನಾದರೂ ಸಿಗಬಹುದಾ ಕಾದುನೋಡಬೇಕು.

    Live Tv
    [brid partner=56869869 player=32851 video=960834 autoplay=true]