ಚೆನ್ನೈ: ನಡು ರಸ್ತೆಯಲ್ಲಿ ರೌಡಿಯನ್ನು ಬರ್ಬರವಾಗಿ ಹತ್ಯೆ (Murder) ಮಾಡಿದ ಘಟನೆ ತಮಿಳುನಾಡಿನ (Tamil Nadu) ಈರೋಡ್‌ನಲ್ಲಿ ನಡೆದಿದೆ.
ಜಾನ್ ಅಲಿಯಾಸ್ ಚಾಣಕ್ಯನ್ ಕೊಲೆಯಾದ ರೌಡಿಶೀಟರ್. ಬುಧವಾರ ಬೆಳಗ್ಗೆ ಸೇಲಂನಿಂದ ತಿರುಪುರಕ್ಕೆ ಜಾನ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು.
ಮಧ್ಯಾಹ್ನ ಗೌಡಮ್ ಪಾಳ್ಯಮ್ ಬಳಿ ಹೆದ್ದಾರಿಯಲ್ಲಿ ರೌಡಿಗಳು ದಾಳಿ ನಡೆಸಿದ್ದಾರೆ. ಕಾರನ್ನು ಹಿಂಬಾಲಿಸಿಕೊಂಡು ಬಂದ ನಾಲ್ಕು ಮಂದಿ ಜಾನ್ ಕಾರನ್ನು ತಡೆದು ನಿಲ್ಲಿಸಿ ಮನಬಂದಂತೆ ಮಾರಾಕಾಸ್ತ್ರಗಳಿಂದ ಥಳಿಸಿದ್ದಾರೆ.
ಈ ವೇಳೆ ಪತಿಯನ್ನು ಉಳಿಸಿಕೊಳ್ಳಲು ಅಡ್ಡ ಬಂದ ಪತ್ನಿ ಮೇಲು ಸಹ ದಾಳಿ ಮಾಡಿದ್ದಾರೆ. ಜಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಪತ್ನಿ ಗಂಭೀರ ಗಾಯಗೊಂಡಿದ್ದಾರೆ. ಪತ್ನಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ದಾರಿಯಲ್ಲಿ ಹೋಗುತ್ತಿದ್ದವರು ಕೊಲೆ ಮಾಡುತ್ತಿರುವ ದೃಶ್ಯ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ. ಚಿತ್ತೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ಜಿಲ್ಲೆಯಲ್ಲಿ ಹೋಳಿ ಆಚರಣೆ ಬಳಿಕ ಸ್ನಾನಕ್ಕೆಂದು ಕೆರೆಗೆ ತೆರಳಿ ನಾಪತ್ತೆಯಾಗಿದ್ದ ಇಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ರಾಯಚೂರು (Raichuru) ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಸ್ನಾನಕ್ಕೆಂದು ಹೊಂಡಕ್ಕೆ ಜಿಗಿದ ಓರ್ವ ವ್ಯಕ್ತಿ ನೀರು ಪಾಲಾಗಿದ್ದರು. ನಾಪತ್ತೆಯಾಗಿದ್ದವರನ್ನು ಜಾಗೀರವೆಂಕಟಾಪುರ ಗ್ರಾಮದ ಸೋಮನಗೌಡ (45) ಎಂದು ತಿಳಿಯಲಾಗಿದ್ದು, ಇದೀಗ ಶವವಾಗಿ ಪತ್ತೆಯಾಗಿದ್ದಾರೆ.ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾ ರಾವ್ ಆಪ್ತ ವಶಕ್ಕೆ
ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ರಾಯಚೂರು ತಾಲೂಕಿನ ಆರ್‌ಡಿಎಸ್ ಕಾಲುವೆಗೆ ಸ್ನಾನಕ್ಕೆಂದು ಹೋಗಿದ್ದ ಯರಗೇರಾ ಗ್ರಾಮದ ಮಹಾದೇವ (30) ನಾಪತ್ತೆಯಾಗಿದ್ದರು. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸಿತ್ತು.
ಪ್ರಯಾಗ್‌ರಾಜ್: ಹೊಸಕೋಟೆಯಿಂದ (Hoskote) ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪ್ರಯಾಗ್‌ರಾಜ್‌ಗೆ (Prayagraj) 150 ಕಿ.ಮೀ ದೂರದ ಮಧ್ಯಪ್ರದೇಶದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಶಮಂತ್ (17) ಎಂದು ಗುರುತಿಸಲಾಗಿದೆ.
ಕಾಲೇಜು ಮುಂದೆ ಸ್ನೇಹಿತರೊಂದಿಗೆ ಮಾತನಾಡುತ್ತಾ ಶಮಂತ್ ನಿಂತಿದ್ದ. ಈ ವೇಳೆ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಕರ್ನಾಟಕ-ಆಂಧ್ರ ಬಸ್‌ಗಳ ಓವರ್‌ಟೆಕ್ ಪೈಪೋಟಿ – 8ರ ಬಾಲಕಿ ಸಮೇತ ಸೋದರ ಮಾವ ಸಾವು
ಸಿಲಿಂಡರ್ ಸ್ಫೋಟದ ವೇಳೆ ಮನೆಯಲ್ಲಿ ವಾಸವಾಗಿದ್ದ ಇಬ್ಬರು ಗಾಯಗೊಂಡಿದ್ದರು. ಇಬ್ಬರ ಪೈಕಿ ಓರ್ವ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ. ಗಾಯಾಳುಗಳಿಗೆ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಷ್ಣು ದೇಹದ ಬಹುತೇಕ ಭಾಗಗಳಿಗೆ ಗಾಯವಾಗಿ, ಚಿಂತಾಜನಕ ಸ್ಥಿತಿಯಲ್ಲಿದ್ದ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಘಟನೆ ಏನು?
ಜ.06 ರಂದು ಬೊಮ್ಮಸಂದ್ರ (Bommasandra) ಸಮೀಪದ ಕಿತ್ತಗಾನ ಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರವಾಗಿತ್ತು. ಜಯನಗರ ಮೂಲದ ಸುನಿಲ್ ಎಂಬವರಿಗೆ ಸೇರಿದ್ದ ಕಟ್ಟಡದಲ್ಲಿ ಇಬ್ಬರು ವಾಸವಾಗಿದ್ದರು. ಕೆಲಸಕ್ಕೆ ಹೋಗಲು ಒಬ್ಬರು ಸ್ನಾನ ಮಾಡುತ್ತಿದ್ದರಂತೆ. ಇದೇ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಇನ್ನೋರ್ವ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡನೇ ಅಂತಸ್ತಿನಿಂದ ಕೆಳಗೆ ಬಿದ್ದಿದ್ದ. ಸ್ಫೋಟದ ತೀವ್ರತೆಗೆ ಕಟ್ಟಡದ ಹಾಲೋ ಬ್ಲಾಕ್‌ಗಳು ಹಾರಿಹೋಗಿದ್ದವು. ಜೊತೆಗೆ ಬಿಲ್ಡಿಂಗ್ ನಾಲ್ಕು ಪಿಲ್ಲರ್‌ಗಳು ಕೂಡ ಛಿದ್ರಗೊಂಡಿದ್ದವು. ಇದರ ಪರಿಣಾಮ ನಾಲ್ಕು ಬಿಲ್ಡಿಂಗ್, 3 ಕಾರು, 6 ದ್ವಿಚಕ್ರ ವಾಹನಗಳು ಹಾನಿಗೊಳಗಾಗಿದ್ದವು.ಇದನ್ನೂ ಓದಿ: ವೈಕುಂಠ ಏಕಾದಶಿ- ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಬಾರಮುಲ್ಲಾ ಜಿಲ್ಲೆಯಿಂದ ಬಂದಿದ್ದ ಕುಟುಂಬ ಪಂದ್ರಾಥಾನ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜಿಲ್ಲೆಯಲ್ಲಿರುವ ಚಳಿಯ ಪರಿಣಾಮದಿಂದ ಉಸಿರುಗಟ್ಟಿದ್ದು, ಪ್ರಜ್ಞಾಹೀನರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ರವಾನಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ದುಃಖ ವ್ಯಕ್ತಪಡಿಸಿದ್ದು, ಆಪ್ತರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ದೇವರು ನೋವನ್ನು ಭರಿಸುವ ಶಕ್ತಿ ನೀಡಲಿ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.
ಚಳಿಗಾಲದ ತಿಂಗಳುಗಳಲ್ಲಿ ಬಿಸಿಮಾಡುವ ಸಾಧನಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ. ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಬಿಸಿ ಉಪಕರಣಗಳ ಸುರಕ್ಷಿತ ಬಳಕೆಯ ಸಲಹೆಗಳನ್ನು ಪಾಲಿಸಿ. ವಿವೇಚನೆಯಿಲ್ಲದೇ ಯಾವುದನ್ನು ಕೂಡ ಬಳಸಬೇಡಿ. ಈ ಗ್ಯಾಜೆಟ್‌ಗಳು ಕಾರ್ಬನ್ ಮಾನಾಕ್ಸೈಡ್ ಅನ್ನು ಉತ್ಪಾದಿಸುತ್ತವೆ ಮತ್ತು ಸಂಪೂರ್ಣವಾಗಿ ಮುಚ್ಚಿದ ಕೋಣೆಯಲ್ಲಿ ಈ ಉಪಕರಣಗಳನ್ನು ಬಳಸುವುದು ಮಾರಕ ಎಂದು ತಿಳಿಸಿದರು.ಇದನ್ನೂ ಓದಿ: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು – ಸಾವಿನ ಸಂಖ್ಯೆ 12ಕ್ಕೆ ಏರಿಕೆ
ಎಳ್ಳ ಅಮವಾಸ್ಯೆ ಹಿನ್ನೆಲೆ ಕುಟುಂಬಸ್ಥರು ಸೇರಿ ಜಮೀನಿಗೆ ತೆರಳಿದ್ದ ವೇಳೆ ಶಿವಲಿಂಗಯ್ಯ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ. ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಮಕ್ಕಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಹೊಂಡಕ್ಕೆ ಬಿದ್ದ ಮೂರು ಮಕ್ಕಳನ್ನು ರಕ್ಷಿಸಿದ್ದು, ಆಸ್ಪತ್ರೆಗೆ ರಾವನಿಸಲಾಗಿದೆ.
ಇಂದು (ಡಿ.27) ರಜೆಯ ಹಿನ್ನೆಲೆ ಅನಿರುದ್ದ ತನ್ನ ಸಹೋದರ ಹಾಗೂ ಗೆಳೆಯರೊಂದಿಗೆ ಬೇಗಂ ತಲಾಬ್‌ಗೆ ತೆರಳಿದ್ದರು. ಈ ವೇಳೆ ಅನಿರುದ್ದ ಈಜಲು ಕೆರೆಗೆ ಇಳಿದಿದ್ದ. ಸಹೋದರ ಹಾಗೂ ಗೆಳೆಯರು ಎಷ್ಟೇ ಬೇಡ ಹೇಳಿದರೂ ಕೇಳದೇ ನೀರಿಗೆ ಇಳಿದಿದ್ದಾನೆ. ಬಳಿಕ ನೀರು ಪಾಲಾಗಿದ್ದಾನೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮೃತನ ಶವಕ್ಕಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಬೋಟ್ ಮೂಲಕ ನೀರಿನಲ್ಲಿ ಹುಡುಕಾಟ ನಡೆಸಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಲನಗರ (Jalanagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಅತ್ಮಹತ್ಯೆ ಕೇಸ್ – ಇಬ್ಬರು ಹೆಡ್‌ಕಾನ್‌ಸ್ಟೇಬಲ್ ಸಸ್ಪೆಂಡ್
ರಾಯಚೂರು: ಭತ್ತದ ಹೊಟ್ಟು ತುಂಬಿದ್ದ ಲಾರಿ ಎರಡು ಬೈಕ್‌ಗಳ ಮೇಲೆ ಪಲ್ಟಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ರಾಯಚೂರು (Raichuru) ಜಿಲ್ಲೆಯ ಸಿಂಧನೂರು (Sindhanuru) ತಾಲೂಕಿನ ಪಿಡಬ್ಲ್ಯುಡಿ ಕ್ಯಾಂಪ್ ಬಳಿ ನಡೆದಿದೆ.
ಮೃತರನ್ನು ಲಿಂಗಸುಗೂರು (Lingasuguru) ತಾಲೂಕಿನ ನೀರಾವರಿ ಇಲಾಖೆಯ ಎಂಜಿನಿಯರ್‌ಗಳಾದ ಮಲ್ಲಿಕಾರ್ಜುನ (28), ಶಿವರಾಜಕುಮಾರ (28) ಹಾಗೂ ಸಿಂಧನೂರಿನ ಕಂಪ್ಯೂಟರ್ ಆಪರೇಟರ್ ಮಹಿಬೂಬ್ ಪಾಷಾ (36) ಎಂದು ಗುರುತಿಸಲಾಗಿದೆ. ಇನ್ನೂ ಲಾರಿ ಚಾಲಕ ಹಾಗೂ ಕ್ಲಿನರ್‌ಗೆ ಗಾಯವಾಗಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಶೀಘ್ರವೇ ಸುಪ್ರೀಂನಲ್ಲಿ ಮೇಲ್ಮನವಿ
ಭತ್ತದ ಹೊಟ್ಟು ತುಂಬಿದ್ದ ಲಾರಿ ರಾಯಚೂರು ಮಾರ್ಗವಾಗಿ ತೆರಳುತ್ತಿತ್ತು. ಇದೇ ಸಮಯದಲ್ಲಿ ಊಟ ಮುಗಿಸಿ ಮೂವರು ಸೇರಿ ಎರಡು ಬೈಕ್‌ನಲ್ಲಿ ತಮ್ಮ ರೂಂಗಳಿಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಪಲ್ಟಿ ಹೊಡೆದಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮುಂಬೈ: ಬಸ್‌ನ ಬ್ರೇಕ್‌ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ 6 ಜನ ಸಾವನ್ನಪ್ಪಿದ್ದು, 49 ಜನ ಗಾಯಗೊಂಡಿರುವ ಘಟನೆ ಮುಂಬೈನ (Mumbai) ಕುರ್ಲಾದಲ್ಲಿ (Kurla) ನಡೆದಿದೆ.
ಬೃಹತ್ ಮುಂಬೈ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ ಬಸ್‌ನ ಬ್ರೇಕ್ ಫೇಲ್ ಆದ ಪರಿಣಾಮ ಅಪಘಾತ ಸಂಭವಿಸಿದೆ. ಸೋಮವಾರ (ಡಿ.9) ರಾತ್ರಿ 9:50ಕ್ಕೆ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಬಳಿಕ 30 ರಿಂದ 40 ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಪಾದಚಾರಿಗಳ ಮೇಲೆ ಹಾಯ್ದು ಮುಂದಕ್ಕೆ ಸಾಗಿದೆ. ಎದುರಿಗೆ ಇದ್ದ ಗೋಡೆಗೆ ಡಿಕ್ಕಿ ಹೊಡೆದು ಬಳಿಕ ಅಲ್ಲಿಯೇ ನಿಂತಿದೆ.ಇದನ್ನೂ ಓದಿ: ‘ಪುಷ್ಪ 2’ ಸಕ್ಸಸ್ ನಂತರ ಬಾಲಿವುಡ್‌ನಲ್ಲಿ ಫಹಾದ್ ಫಾಸಿಲ್‌ಗೆ ಬಂಪರ್ ಆಫರ್
ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 49 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಯಾನ್ ಮತ್ತು ಕುರ್ಲಾ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯಗಳು ಸೆರೆಯಾಗಿವೆ. ಬಸ್ ಅತೀವೇಗದಿಂದ ಕೆಳಗಿಳಿಯುತ್ತಿದ್ದು, ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆಯುತ್ತದೆ.
ಈ ಕುರಿತು ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಯೊಬ್ಬರು ಮಾತನಾಡಿ, ಬಸ್‌ನ ಬ್ರೆಕ್ ಫೇಲ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನವು ಒಲೆಕ್ಟ್ರಾದಿಂದ ತಯಾರಿಸಲ್ಪಟ್ಟ 12 ಮೀಟರ್ ಉದ್ದದ ಎಲೆಕ್ಟ್ರಿಕ್ ಬಸ್ ಆಗಿದ್ದು, ಇದನ್ನು ಬೆಸ್ಟ್ ಲೀಸ್‌ನಲ್ಲಿ ತೆಗೆದುಕೊಳ್ಳಲಾಗಿದೆ. ಬಸ್ ಕೇವಲ ಮೂರು ತಿಂಗಳ ಹಳೆಯದು. ಇದನ್ನು ಈ ವರ್ಷ ಆ.20 ರಂದು ಖರೀದಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಅಪಘಾತವನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾತನಾಡಿ, ನಾನು ರೈಲ್ವೇ ನಿಲ್ದಾಣಕ್ಕೆ ಹೋಗುವಾಗ ಜೋರಾಗಿ ಶಬ್ದವೊಂದು ಕೇಳಿತು. ಸ್ಥಳಕ್ಕೆ ಹೋಗಿ ನೋಡಿದಾಗ ಬಸ್ ಪಾದಚಾರಿಗಳಿಗೆ ಹಾಗೂ ಆಟೋರಿಕ್ಷಾ ಸೇರಿದಂತೆ ಮೂರು ಕಾರುಗಳು ಹಾಗೂ ಪೊಲೀಸ್ ವಾಹನಕ್ಕೂ ಡಿಕ್ಕಿ ಹೊಡೆದಿತ್ತು. ನಾನು ಆಟೋದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂದು ಹೋದೆವು ಎಂದು ತಿಳಿಸಿದ್ದಾರೆ.
ಸದ್ಯ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಿಎನ್‌ಎಸ್ ಸೆಕ್ಷನ್ 105ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಚಾಲಕ ಕುಡಿದು ಬಸ್ ಚಲಾಯಿಸುತ್ತಿದ್ದನಾ? ಎಂದು ತಿಳಿಯಲು ರಕ್ತದ ಮಾದರಿ ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್