Tag: death sentence

  • ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

    ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

    ಸನಾ: ಯೆಮೆನ್‌ನಲ್ಲಿ (Yemen) ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ (Nimisha Priya) ವಿಧಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ಹಿಂದೆ ಅಮಾನತುಗೊಂಡಿದ್ದ ಮರಣದಂಡನೆ ಶಿಕ್ಷೆಯನ್ನ ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ಈ ಮಾಹಿತಿ ನೀಡಿದೆ.

    ಗ್ರ್ಯಾಂಡ್ ಮುಫ್ತಿ ಕಚೇರಿ (Grand Mufti of India) ಮಾಹಿತಿ ಪ್ರಕಾರ, ಯೆಮೆನ್‌ ರಾಜಧಾನಿ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಶಿಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ರೆ ಯೆಮನ್‌ ಸರ್ಕಾರದಿಂದ ಅಧಿಕೃತ ಲಿಖಿತ ಪ್ರಕಟಣೆ ಬಂದಿಲ್ಲ ಎಂದೂ ಸಹ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

    ವಿದೇಶಾಂಗ ಸಚಿವಾಲಯ ಹೇಳುವುದೇನು?
    37 ವರ್ಷದ ನಿಮಿಷಾ ಪ್ರಿಯಾ ಮರಣದಂಡನೆ (Death Sentence) ಸಂಪೂರ್ಣ ರದ್ದಾದ ಬಗ್ಗೆ ಗ್ರ್ಯಾಂಡ್ ಮುಫ್ತಿ ಕಚೇರಿ ಹೇಳಿಕೆಯನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ. ಶಿಕ್ಷೆ ಸಂಪೂರ್ಣ ರದ್ದಾಗಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯಾಗಲಿ, ಲಿಖಿತ ಆದೇಶವಾಗಲಿ ಬಂದಿಲ್ಲ. ನಿಮಿಷಾ ಪ್ರಕರಣದ ಕುರಿತು ಕೆಲ ವ್ಯಕ್ತಿಗಳು ಹಂಚಿಕೊಳ್ಳುತ್ತಿರುವ ಮಾಹಿತಿ ತಪ್ಪಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.  ಇದನ್ನೂ ಓದಿ: ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ

    ನಿಮಿಷಾ ಪ್ರಿಯಾ ಯಾರು?
    ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನರ್ಸ್. ಯೆಮನ್ ನಾಗರಿಕ ತಲಾಲ್ ಅಬ್ದೋ ಮೆಹದಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ, 2017 ರಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅದಕ್ಕೂ ಮುನ್ನ ಅವರು ಹಲವಾರು ವರ್ಷಗಳ ಕಾಲ ಆ ದೇಶದಲ್ಲಿ ನರ್ಸ್ ಆಗಿ ಕೆಲಸ ಮಾಡಿದ್ದರು.  ಇದನ್ನೂ ಓದಿ: ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಬಂದೂಕುದಾರಿ ಸೇರಿ ಐವರು ಸಾವು

    ಯೆಮನ್ ಪ್ರಜೆಯ ಕೊಲೆ ಏಕಾಯ್ತು?
    ತಲಾಲ್ ಅವರ ಬೆಂಬಲದೊಂದಿಗೆ, ನಿಮಿಷಾ 2015ರ ಏಪ್ರಿಲ್‌ನಲ್ಲಿ ವಿದೇಶದಲ್ಲಿ ತನ್ನ ಕನಸಿನ ಚಿಕಿತ್ಸಾಲಯವನ್ನು ತೆರೆದರು. ಅಲ್ಲಿ ಅವರು ಮಾನಸಿಕ, ದೈಹಿಕ ಮತ್ತು ಆರ್ಥಿಕ ಕಿರುಕುಳವನ್ನು ಅನುಭವಿಸಿದ್ದಾರೆಂದು ಆರೋಪಿಸಲಾಗಿದೆ. ತಲಾಲ್ ಕ್ಲಿನಿಕ್‌ನಲ್ಲಿ ಶೇ.33 ರಷ್ಟು ಪಾಲನ್ನು ಪಡೆಯಲು ಸುಳ್ಳು ದಾಖಲೆ ಸೃಷ್ಟಿಸಿದ್ದ. ಆಕೆಯ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಂಡಿದ್ದ. ಕಾನೂನುಬದ್ಧವಾಗಿ ಮದುವೆಯಾಗಿದ್ದಾವೆಂದು ಸೂಚಿಸಲು ವಿವಾಹ ಪ್ರಮಾಣಪತ್ರವನ್ನು ಸಹ ನಕಲಿ ಮಾಡಿದ್ದ. ಮಹ್ದಿ ತನ್ನ ಮೇಲೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಿಮಿಷಾ ಆರೋಪಿಸಿದ್ದರು.

    2017ರ ಜುಲೈನಲ್ಲಿ ನಿಮಿಷಾ ಜೈಲಿಗೆ ಭೇಟಿ ನೀಡಿದಾಗ, ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯಲು ಮಹ್ದಿಗೆ ನಿದ್ರಾಜನಕ ಇನ್‌ಜೆಕ್ಷನ್ ಚುಚ್ಚಿದರು. ಪ್ರಮಾಣ ಅತಿಯಾದ್ದರಿಂದ ವ್ಯಕ್ತಿ ಮೃತಪಟ್ಟಿದ್ದ. ಮತ್ತೊಬ್ಬ ನರ್ಸ್ ಸಹಾಯ ಪಡೆದು ಮೃತದೇಹ ವಿಲೇವಾರಿಗೆ ಮುಂದಾಗಿದ್ದರು. ದೇಹವನ್ನು ಕತ್ತರಿಸಿ ನೀರಿನ ಟ್ಯಾಂಕ್‌ನಲ್ಲಿ ಭಾಗಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದ್ದ. ಇಬ್ಬರೂ ತಲೆಮರೆಸಿಕೊಂಡಿದ್ದರು. ಕೊನೆಗೆ ಅವರನ್ನು ಪೊಲೀಸರು ಬಂಧಿಸಿದರು. ಇದನ್ನೂ ಓದಿ: ಆಸ್ಟ್ರೇಲಿಯಾದ ನೈಸರ್ಗಿಕ ವಿಪತ್ತಾದ ‘ಆಲ್ಗಲ್ ಬ್ಲೂಮ್’ – ಈ ಬಿಕ್ಕಟ್ಟಿನ ಹಿಂದಿನ ಕಾರಣವೇನು?

    ಯೆಮನ್ ನ್ಯಾಯಾಲಯ ತೀರ್ಪೇನು?
    ಕೊಲೆ ಪ್ರಕರಣದಲ್ಲಿ ಪ್ರಿಯಾಳನ್ನು ಬಂಧಿಸಿ ಯೆಮನ್‌ನಲ್ಲಿ ವಿಚಾರಣೆ ನಡೆಸಲಾಯಿತು. 2020 ರಲ್ಲಿ, ಸ್ಥಳೀಯ ನ್ಯಾಯಾಲಯವು ಆಕೆಗೆ ಒಮ್ಮೆ ಅಲ್ಲ, ಮೂರು ಬಾರಿ ಮರಣದಂಡನೆ ವಿಧಿಸಿತು. ನಂತರ ಮೇಲ್ಮನವಿ ನ್ಯಾಯಾಲಯವು ಒಂದು ಶಿಕ್ಷೆಯನ್ನು ರದ್ದುಗೊಳಿಸಿತು. ಆದಾಗ್ಯೂ, ದೇಶದ ಸುಪ್ರೀಂ ಕೋರ್ಟ್ ಉಳಿದ ಎರಡು ಶಿಕ್ಷೆಯನ್ನು ಎತ್ತಿಹಿಡಿಯಿತು. ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ, ಕಳೆದ ವರ್ಷ ಆಕೆಗೆ ಮರಣದಂಡನೆಯನ್ನು ಅನುಮೋದಿಸಿದರು. ಪ್ರಿಯಾ ಪ್ರಸ್ತುತ ಸನಾ ಕೇಂದ್ರ ಜೈಲಿನಲ್ಲಿದ್ದಾರೆ. ಈ ವರ್ಷದ ಜನವರಿಯಲ್ಲಿ, ಹೌತಿ ನಿಯಂತ್ರಿತ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್‌ನ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರು ಮರಣದಂಡನೆಯನ್ನು ಅನುಮೋದಿಸಿದರು.

    ಬ್ಲಡ್‌ ಮನಿ ಅಂದ್ರೆ ಏನು?
    ಪ್ರಿಯಾ ಅವರು ಯೆಮನ್‌ನಲ್ಲಿದ್ದು ಸಾಮಾಜಿಕ ಕಾರ್ಯಕರ್ತರೊಬ್ಬರೊಂದಿಗೆ ಕ್ಷಮಾ ಪರಿಹಾರ ಮೊತ್ತದ (ಬ್ಲಡ್ ಮನಿ) ವಿಚಾರವಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಆತನ ಕುಟುಂಬವು ಕ್ಷಮಾ ಪರಿಹಾರ ಮೊತ್ತವನ್ನು ಸ್ವೀಕರಿಸಲು ಒಪ್ಪಿದರೆ ಮಾತ್ರ ಮರಣ ದಂಡನೆಯನ್ನು ತಪ್ಪಿಸಲು ಸಾಧ್ಯ ಎಂದು ಹೇಳಲಾಗಿತ್ತು.

  • ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

    ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

    – ಎಕ್ಸ್‌ನಲ್ಲಿ ವೀಡಿಯೋ ಹಂಚಿಕೊಂಡ ಕೆಎ ಪೌಲ್

    ಸನಾ: ಯೆಮೆನ್‌ನಲ್ಲಿ (Yemen) ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ (Nimisha Priya) ವಿಧಿಸಲಾಗಿದ್ದ ಮರಣದಂಡನೆ ರದ್ದಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್‌ನ ಸಂಸ್ಥಾಪಕ ಡಾ. ಕೆ.ಎ ಪೌಲ್ (KL Paul) ತಿಳಿಸಿದ್ದಾರೆ.

    ಈ ಕುರಿತು ಭಾರತ ಸರ್ಕಾರ, ನಿಮಿಷ ಪ್ರಿಯಾ ಕುಟುಂಬಸ್ಥರು ಮತ್ತು ಮರಣದಂಡನೆ ಮುಂದೂಡಿಕೆ ಕಾರಣರಾದ ಗ್ರ‍್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ.ಇದನ್ನೂ  ಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

    ಸೋಮವಾರ ರಾತ್ರಿ ಯೆಮೆನನ್ ಸನಾದಿಂದ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ಪೌಲ್ ಅವರು, ದೇವರ ದಯೆಯಿಂದ, ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಬಿಡುಗಡೆ ಮಾಡಲು ಭಾರತಕ್ಕೆ ಅವಕಾಶ ಕಲ್ಪಿಸಲಾಗಿದೆ. ನಿಮಿಷಾ ಅವರ ಸುರಕ್ಷಿತ ಪ್ರಯಾಣಕ್ಕಾಗಿ ರಾಜತಾಂತ್ರಿಕರನ್ನು ಕಳುಹಿಸಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ನಿಮಿಷಾ ಅವರ ಮರಣದಂಡನೆ ರದ್ದಾಗಿರುವುದನ್ನು ಖಚಿತಪಡಿಸಿ ಈವರೆಗೆ ಯಾವುದೇ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿಲ್ಲ.

    ಈ ಮೊದಲು ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರು ಯೆಮನ್‌ನಲ್ಲಿ ಜು.16ಕ್ಕೆ ಮರಣದಂಡನೆಗೆ ಗುರಿಯಾಗಬೇಕಿತ್ತು. ಆದರೆ ಇಂಡಿಯನ್ ಗ್ರ‍್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿತ್ತು ಎಂದು ಉನ್ನತ ಮೂಲಗಳು ತಿಳಿಸಿದ್ದವು.

    ಏನಿದು ಪ್ರಕರಣ?
    2017ರಲ್ಲಿ ನಿಮಿಷಾ ಪ್ರಿಯಾ ಅವರಿಂದ ತಲಾಲ್ ಅಬ್ದೋ ಮೆಹದಿ ಕೊಲೆಯಾಗಿದ್ದರು. ಪ್ರಕರಣ ಸಂಬಂಧ ಪ್ರಿಯಾಳಿಗೆ ಯೆಮನ್ ರಾಷ್ಟ್ರದ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ಸಂಬಂಧ ಕೊಲೆಯಾದ ವ್ಯಕ್ತಿಯ ಸಹೋದರ ಅಬ್ದೆಲ್ಫತ್ತಾ ಮೆಹದಿ ಪ್ರತಿಕ್ರಿಯಿಸಿದ್ದು, ಈ ಅಪರಾಧಕ್ಕೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು.ಇದನ್ನೂ  ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ

  • ಕಲಬುರಗಿ | ಪೋಕ್ಸೊ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ಪ್ರಕಟ

    ಕಲಬುರಗಿ | ಪೋಕ್ಸೊ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ಪ್ರಕಟ

    ಕಲಬುರಗಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

    ಅಪರಾಧಿ ಯುವಕನನ್ನು ಆಳಂದ (Alanda) ತಾಲ್ಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ (28) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕರ್ನಾಟಕದ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

    2023ರ ಜು.15ರಂದು ಆಳಂದ ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಪುಸ್ತಕವೊಂದನ್ನು ತರಲು ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಅಪರಾಧಿ ಗುಂಡೇರಾವ ಬಾಲಕಿಯನ್ನು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಪಕ್ಕದ ಹೊಲದಲ್ಲಿದ್ದ ಬಾವಿಯೊಂದರಲ್ಲಿ ಶವವನ್ನು ಬೀಸಾಡಿ ಹೋಗಿದ್ದ. ಈ ಕುರಿತು ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಪೋಕ್ಸೊ ಕಾಯ್ದೆಯಡಿ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ, ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಕಾನೂನು ಪ್ರಾಧಿಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಮೃತ ಬಾಲಕಿಯ ತಾಯಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದ್ದರು.

    ನಿಂಬರ್ಗಾ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.ಇದನ್ನೂ ಓದಿ: ನೆಲಕ್ಕೆ ಬಿದ್ರೂ ಬಿಡದೆ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿ ವಿಂಗ್ ಕಮಾಂಡರ್ ದರ್ಪ

  • ಮರ್ಯಾದಾ ಹತ್ಯೆ| ಜೋಡಿಯನ್ನು ಕೊಲೆಗೈದ ನಾಲ್ವರಿಗೆ ಮರಣದಂಡನೆ

    ಮರ್ಯಾದಾ ಹತ್ಯೆ| ಜೋಡಿಯನ್ನು ಕೊಲೆಗೈದ ನಾಲ್ವರಿಗೆ ಮರಣದಂಡನೆ

    ಗದಗ: ಜೋಡಿ ಕೊಲೆ ಮಾಡಿದ್ದ ನಾಲ್ವರು ಅಪರಾಧಿಗಳಿಗೆ ಜಿಲ್ಲಾ ನ್ಯಾಯಾಲಯ (Gadag District Court) ಮರಣದಂಡನೆ ಶಿಕ್ಷೆ (Death Sentence) ವಿಧಿಸಿ ಆದೇಶ ನೀಡಿದೆ.

    ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಅನ್ಯ ಜಾತಿಯ ರಮೇಶ್ ಮಾದರ ಮತ್ತು ಗಂಗಮ್ಮ ಅವರು ಪ್ರೀತಿಸಿ ಮದುವೆಯಾಗಿದ್ದರು. ಕುಟುಂಬಸ್ಥರ ವಿರೋಧ ನಡುವೆ ಗಂಗಮ್ಮ ಪ್ರೀತಿಸಿ ಅಂತರಜಾತಿ ವಿವಾಹ (Marriage) ಆಗಿದ್ದಕ್ಕೆ ಗಂಗಮ್ಮ ಸಂಬಂಧಿಕರು ಕೊಲೆ ಮಾಡಿದ್ದರು.

    2019 ರಲ್ಲಿ ಗಂಗಮ್ಮ ಸಂಬಂಧಿಕರು ಲಕ್ಕಲಕಟ್ಟಿ ಗ್ರಾಮದಲ್ಲಿ ರಮೇಶ್ ಹಾಗೂ ಗಂಗಮ್ಮಳನ್ನು ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ (Case) ದಾಖಲಾಗಿತ್ತು.

     

    ತನಿಖೆ ನಡೆಸಿದ ಪೊಲೀಸರು ಶಿವಪ್ಪ ರಾಠೋಡ್, ರವಿಕುಮಾರ ರಾಠೋಡ್, ರಮೇಶ್ ರಾಠೋಡ್ ಹಾಗೂ ಬಸ್ ಡ್ರೈವರ್ ಆಗಿದ್ದ ಪರಶುರಾಮ್ ರಾಠೋಡ್ ಮೇಲೆ ಐಪಿಸಿ ಸೆಕ್ಷನ್ 427, 449, 302, 506(2) ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಚಂಡೀಗಢ ಮೇಯರ್‌ ಚುನಾವಣೆ ಗೆದ್ದ ಬಿಜೆಪಿ; ಎಎಪಿ-ಕಾಂಗ್ರೆಸ್‌ ಮೈತ್ರಿಗೆ ಮುಖಭಂಗ

    ವಿಚಾರಣೆ ವೇಳೆ ನಾಲ್ವರ ಮೇಲಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ.

  • ಬಾಲಕಿಯ ಅತ್ಯಾಚಾರವೆಸಗಿ ಹತ್ಯೆ – ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

    ಬಾಲಕಿಯ ಅತ್ಯಾಚಾರವೆಸಗಿ ಹತ್ಯೆ – ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

    ಮುಂಬೈ: 2019ರಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ವ್ಯಕ್ತಿಗೆ ನಾಗ್ಪುರ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

    ಸಂಜಯ್ ಪುರಿ (32) ಎಂಬಾತನ ವಿರುದ್ಧ ಆರೋಪ ರುಜುವಾತಾಗಿದೆ. ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಆರ್ ಪಡವಾಲ್ ಅವರಿದ್ದ ಪೀಠ, ಐಪಿಸಿ ಸೆಕ್ಷನ್ 302 (ಕೊಲೆ) ಐಪಿಸಿ ಸೆಕ್ಷನ್ 376(ಎ) (ಬಿ) (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಸೆಕ್ಷನ್ 6ರ ಅಡಿಯಲ್ಲಿ ಅಪರಾಧಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ- ಶೋಭಾ ಕರಂದ್ಲಾಜೆಗೆ ಬಿಗ್ ರಿಲೀಫ್

    ಬಾಲಕಿ ಕಲ್ಮೇಶ್ವರ ತಾಲೂಕಿನ ಲಿಂಗ ಗ್ರಾಮದ ಜಮೀನಿನಲ್ಲಿ ಕಾರ್ಮಿಕರಾಗಿದ್ದ ತನ್ನ ಪೋಷಕರೊಂದಿಗೆ ವಾಸವಾಗಿದ್ದಳು. ಅವಳ ಮೃತದೇಹ 2019 ಡಿಸೆಂಬರ್ 6 ರಂದು ತಲೆಗೆ ತೀವ್ರವಾದ ಗಾಯಗಳಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಟ್ಟೆಯ ತುಂಡು ಮತ್ತು ರಾಡ್‍ನ್ನು ಆಕೆಯ ಬಾಯಿಕೆ ಹಾಕಲಾಗಿತ್ತು. ತನಿಖೆ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈಯಲಾಗಿದೆ ಎಂದು ತಿಳಿದು ಬಂದಿತ್ತು.

    ಪ್ರಕರಣದಲ್ಲಿ ಒಟ್ಟು 26 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಬಳಿಕ ಅಪರಾಧಿಯ ಕೃತ್ಯ ಬಯಲಾಗಿದ್ದು, ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಇದನ್ನೂ ಓದಿ: ಪಾಕ್ ಪರ ಬೇಹುಗಾರಿಕೆ – ಬ್ರಹ್ಮೋಸ್ ಏರೋಸ್ಪೇಸ್‍ನ ಮಾಜಿ ಇಂಜಿನಿಯರ್‌ಗೆ ಜೀವಾವಧಿ ಶಿಕ್ಷೆ

  • ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

    ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

    – ಮೋದಿಯ ರಾಜತಾಂತ್ರಿಕ ವಿಜಯವೆಂದ ಬಿಜೆಪಿ

    ದೋಹಾ: ಗೂಢಚರ್ಯೆ ಪ್ರಕರಣದಲ್ಲಿ ಮರಣದಂಡನೆಯ (Death Sentence) ಭೀತಿ ಎದುರಿಸುತ್ತಿದ್ದ ಭಾರತೀಯ ನೌಕಾಪಡೆಯ ಎಂಟು ಮಂದಿ ನಿವೃತ್ತ ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಂಟು ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ರದ್ದು ಮಾಡಿ ಕತಾರ್ ಕೋರ್ಟ್ (Qatar Court) ತೀರ್ಪು ನೀಡಿದೆ. ಈ ಮೂಲಕ ಕಾನೂನು ಸಮರದಲ್ಲಿ ಭಾರತ ಸರ್ಕಾರಕ್ಕೆ (Indian Government) ಮೊದಲ ಗೆಲುವು ಸಿಕ್ಕಿದೆ.

    ಮರಣದಂಡನೆಯನ್ನು ಜೈಲು ಶಿಕ್ಷೆಯಾಗಿ ಮಾರ್ಪಾಡು ಮಾಡಿ ತೀರ್ಪು ನೀಡಿದೆ. ಆದರೆ ಎಷ್ಟು ವರ್ಷ ಶಿಕ್ಷೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಬಗ್ಗೆ ಕತಾರ್ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಈ ಪ್ರಕರಣದಲ್ಲಿ ಮುಂದಿನ ಹೆಜ್ಜೆ ಇಡುವ ಬಗ್ಗೆ ಕಾನೂನು ಪರಿಣಿತರನ್ನು ಸಂಪರ್ಕಿಸಿದೆ.

    ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್ ಮತ್ತು ಇತರ ಅಧಿಕಾರಿಗಳು ಬಂಧಿತ ವ್ಯಕ್ತಿಗಳ ಕುಟುಂಬ ಸದಸ್ಯರೊಂದಿಗೆ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

    ತೀರ್ಪಿನ ಸಂಪೂರ್ಣ ವಿವರಕ್ಕೆ ನಾವು ಕಾಯುತ್ತಿದ್ದೇವೆ. ಈ ವಿಚಾರದಲ್ಲಿ ಆರಂಭದಿಂದಲೂ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ ಮತ್ತು ನಾವು ಎಲ್ಲಾ ಕಾನ್ಸುಲರ್ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸುತ್ತೇವೆ. ಈ ಪ್ರಕರಣದ ವಿಚಾರಣೆಯು ಗೌಪ್ಯ ಮತ್ತು ಸೂಕ್ಷ್ಮ ಸ್ವರೂಪವಾಗಿರುವ ಕಾರಣ, ಈ ಹಂತದಲ್ಲಿ ಯಾವುದೇ ಹೆಚ್ಚಿನ ಪ್ರತಿಕ್ರಿಯೆಯನ್ನು ನೀಡುವುದು ಸೂಕ್ತವಲ್ಲಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ: ಪುಟಿನ್ ಆಹ್ವಾನ

    ಕತಾರ್ ಸೇನಾ ಪಡೆಗಳಿಗೆ ತರಬೇತಿ ನೀಡುವ ಓಮನ್ ಮೂಲದ ಸಂಸ್ಥೆಯಲ್ಲಿ ಭಾರತೀಯ ನೌಕಾಪಡೆಯ 8 ನಿವೃತ್ತ ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ಆದರೆ ಗೂಢಚರ್ಯೆ ಆರೋಪದ ಮೇರೆಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಇವರ ಬಂಧನವಾಗಿತ್ತು. ವಿಚಾರಣೆ ಬಳಿಕ ಈ ಅಕ್ಟೋಬರ್‌ನಲ್ಲಿ 8 ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು.

    ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಯಿಂದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಗೆ ರಿಲೀಫ್‌ ಸಿಕ್ಕಿದೆ. ಇದು ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿದೇಶಾಂಗ ನೀತಿಯ ರಾಜತಾಂತ್ರಿಕ ಪ್ರಯತ್ನಕ್ಕೆ ಸಿಕ್ಕಿದ ವಿಜಯವಾಗಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ.

     

  • ಅತ್ಯಾಚಾರಗೈದು ಬಾಲಕಿಯ ಕೊಲೆ- ಕಾಮುಕನಿಗೆ ಗಲ್ಲುಶಿಕ್ಷೆ

    ಅತ್ಯಾಚಾರಗೈದು ಬಾಲಕಿಯ ಕೊಲೆ- ಕಾಮುಕನಿಗೆ ಗಲ್ಲುಶಿಕ್ಷೆ

    ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ್ದ ಪ್ರಕರಣದ (Rape And Murder) ಅಪರಾಧಿಗೆ ವಿಶೇಷ ನ್ಯಾಯಾಲಯ (Court) ಮರಣದಂಡನೆ (Death Sentence) ವಿಧಿಸಿದೆ.

    ವ್ಯಕ್ತಿಯು 9 ವರ್ಷದ ಬಾಲಕಿಯ (Minor Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ.

    ಗಾಜಿಯಾಬಾದ್ ಪೋಕ್ಸೋ ನ್ಯಾಯಾಲಯವು ( Ghaziabad POCSO Court) ಶಿಕ್ಷೆಯನ್ನು ಪ್ರಕಟಿಸಿದೆ. ಘಟನೆ ನಡೆದ ಸುಮಾರು 6 ತಿಂಗಳ ನಂತರ ನ್ಯಾಯಾಲಯವು ಆರೋಪಿಗಳಿಗೆ ಐಪಿಸಿ ಸೆಕ್ಷನ್ 302 (ಮರಣದಂಡನೆ), 363 (ಅಪಹರಣ) ಮತ್ತು 376 (ಅತ್ಯಾಚಾರ) ರ ಅಡಿಯಲ್ಲಿ ಶಿಕ್ಷೆ ವಿಧಿಸಿದೆ ಎಂದು ಗಾಜಿಯಾಬಾದ್ ಗ್ರಾಮಂತರದ ಡಿಸಿಪಿ ರವಿ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: 20 ವರ್ಷದ ಯುವಕನನ್ನು 100ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಂದು ಪೊದೆಗೆ ಎಸೆದ!

    2022ರ ಆ. 18ರಂದು ಮೋದಿನಗರ ಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿಯು ಶವವಾಗಿ ಪತ್ತೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ಅದೇ ಗ್ರಾಮದ ವ್ಯಕ್ತಿಯನ್ನು ಬಂಧಿಸಿದ್ದರು. ಇದನ್ನೂ ಓದಿ: 8 ವರ್ಷದ ಮಗ, ಪತ್ನಿಯನ್ನು ಹತ್ಯೆಗೈದು, ತಾನು ಆತ್ಮಹತ್ಯೆಗೆ ಶರಣಾದ ಟೆಕ್ಕಿ

  • ಗೋರಖನಾಥ ದೇವಸ್ಥಾನದ ಮೇಲೆ ದಾಳಿ : ಐಐಟಿಯಲ್ಲಿ ಓದಿದ ಉಗ್ರನಿಗೆ ಗಲ್ಲು ಶಿಕ್ಷೆ

    ಗೋರಖನಾಥ ದೇವಸ್ಥಾನದ ಮೇಲೆ ದಾಳಿ : ಐಐಟಿಯಲ್ಲಿ ಓದಿದ ಉಗ್ರನಿಗೆ ಗಲ್ಲು ಶಿಕ್ಷೆ

    ಲಕ್ನೋ: ಗೋರಖನಾಥ ದೇವಸ್ಥಾನದ (Gorakhnath Temple) ಮೇಲೆ ದಾಳಿ ನಡೆಸಿದ ಉಗ್ರನಿಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ವಿಶೇಷ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಸ್ವಕ್ಷೇತ್ರ ಗೋರಖನಾಥ ದೇವಸ್ಥಾನದ ಮೇಲೆ ಅಹ್ಮದ್ ಮುರ್ತಜಾ ಅಬ್ಬಾಸಿ (Ahmed Murtaza Abbasi) 2022ರ ಏಪ್ರಿಲ್‌ 3 ರಂದು ದಾಳಿ ನಡೆಸಿದ್ದ. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಉತ್ತರ ಪ್ರದೇಶ ಪ್ರಾಂತೀಯ ಪೊಲೀಸರ ಮೇಲೆ ಅಹ್ಮದ್‌ ಕುಡುಗೋಲಿನಿಂದ ಹಲ್ಲೆ ನಡೆಸಿದ್ದ. ದಾಳಿ ಬಳಿಕ ಆತನನ್ನು ಪೊಲೀಸರು ಬೆನ್ನಟ್ಟಿ ಬಂಧಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ್ದ ಎನ್‌ಐಎ ನ್ಯಾಯಾಲಯ (NIA Special Court) ಮುರ್ತಜಾ ಅಬ್ಬಾಸಿ ದೋಷಿ ಎಂದು ತೀರ್ಪು ನೀಡಿ ಸೋಮವಾರ ಗಲ್ಲು ಶಿಕ್ಷೆಯನ್ನು (Death Sentence) ವಿಧಿಸಿದೆ. ಇದನ್ನೂ ಓದಿ: ಬೇರೊಬ್ಬನ ಜೊತೆ ಮೊಬೈಲ್‍ನಲ್ಲಿ ಮಾತನಾಡಿದ್ದಕ್ಕೆ ಪ್ರಿಯತಮೆಯ ಮೇಲೆ ಶೂಟೌಟ್!

    ಯಾರು ಈ ಮುರ್ತಜಾ?
    ಮುರ್ತಜಾ ಮುಂಬೈ ಐಐಟಿಯಲ್ಲಿ ರಾಸಾಯನಿಕ ಎಂಜಿನಿಯರ್ ಪದವಿ ಪಡೆದಿದ್ದ. 2016 ರಲ್ಲಿ ಭಾರತದಿಂದ ಪಲಾಯನ ಮಾಡಿರುವ ವಿವಾದಿತ ಇಸ್ಲಾಮಿಕ್ ಧರ್ಮಗುರು ಝಾಕಿರ್ ನಾಯ್ಕ್‌ನಿಂದ ಮುರ್ತಜಾ ಸ್ಫೂರ್ತಿ ಪಡೆದಿದ್ದ. ತನಿಖೆಯ ಸಮಯದಲ್ಲಿ ಪೊಲೀಸರು ಆತನ ಲ್ಯಾಪ್‌ಟಾಪ್ ಮತ್ತು ಪೆನ್ ಡ್ರೈವ್‌ನಲ್ಲಿ ಜಿಹಾದ್‌ಗೆ ಸಂಬಂಧಿಸಿದ ವೀಡಿಯೊಗಳು ಸೇರಿದಂತೆ ಅನುಮಾನಾಸ್ಪದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

    ಈತ ಗೋರಖ್‌ಪುರ ನಿವಾಸಿಯಾಗಿದ್ದರೂ ಆಧಾರ್‌ ಕಾರ್ಡ್‌ ಮುಂಬೈನಲ್ಲಿ ಮಾಡಲಾಗಿತ್ತು.  ಮಾಧ್ಯಮಗಳ ಜೊತೆ  ಮಾತನಾಡಿದ್ದ ತಂದೆ ಮಗ ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ- ಮೊದಲ ಮರಣದಂಡನೆ ಶಿಕ್ಷೆ

    ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ- ಮೊದಲ ಮರಣದಂಡನೆ ಶಿಕ್ಷೆ

    ಟೆಹ್ರಾನ್: ಹಿಜಬ್ ವಿರೋಧಿ ಭಾರೀ ಪ್ರತಿಭಟನೆ (Anti Hijab Protest) ನಡೆಯುತ್ತಿರುವ ಇರಾನ್‌ನಲ್ಲಿ (Iran) ಮೊದಲ ಬಾರಿಗೆ ಆರೋಪಿಗೆ ಮರಣದಂಡನೆ ಶಿಕ್ಷೆ (Death Sentence) ವಿಧಿಸಲಾಗಿದೆ.

    ದೇಶಲ್ಲಿ ಹಿಜಬ್ ಅನ್ನು ವಿರೋಧಿಸಿ ನಿರಂತರವಾಗಿ ಅಶಾಂತಿ ಮುಂದುವರಿದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಸಿರುವ ಆರೋಪದಲ್ಲಿ ಕೆಲವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಕ್ಲೆರಿಕಲ್ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿರುವವರನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮೊದಲ ಬಾರಿಗೆ ಮರಣದಂಡನೆ ವಿಧಿಸಿದೆ.

    ಪ್ರತಿಭಟನೆಯಲ್ಲಿ ತೊಡಗಿದ ವ್ಯಕ್ತಿಯೊಬ್ಬರು ಕಟ್ಟಡಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಇನ್ನೂ 5 ಜನರಿಗೆ ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ಆರೋಪದ ಮೇಲೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಪಾಕಿಸ್ತಾನಿ ಮಹಿಳೆಯ ಹೆಸರು!

    ಈ ತೀರ್ಪುಗಳನ್ನು ಕ್ರಾಂತಿಕಾರಿ ನ್ಯಾಯಾಲಯದ ಪ್ರತ್ಯೇಕ ಶಾಖೆಗಳು ನೀಡಿವೆ. ಆದರೆ ವಿಚಾರಣೆಯಲ್ಲಿರುವ ಪ್ರತಿಭಟನಾಕಾರರ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ. ಅವರು ಈ ನಿರ್ಧಾರಗಳನ್ನು ಮೇಲ್ಮನವಿಗೆ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

    ಇರಾನ್‌ನಲ್ಲಿ ಕ್ಲೆರಿಕಲ್ ಆಡಳಿತವನ್ನು ವಿರೋಧಿಸುವವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವುದಕ್ಕೆ ಹೆಸರುವಾಸಿಯಾಗಿದೆ. 1979ರಲ್ಲಿ ಇಸ್ಲಾಮಿಕ್ ಕ್ರಾಂತಿಯಾದ ಬಳಿಕ ನ್ಯಾಯಾಲಯವನ್ನು ಸ್ಥಾಪಿಸಲಾಯಿತು. ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ ನಡೆಸಿರುವ ನೂರಾರು ಜನರನ್ನು ಬಂಧಿಸಲಾಗಿದೆ. ಅವರಿಗೆ ಸಾರ್ವಜನಿಕವಾಗಿ ವಿಚಾರಣೆ ನಡೆಸುವುದಾಗಿ ತಿಳಿಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ

    Live Tv
    [brid partner=56869869 player=32851 video=960834 autoplay=true]

  • ವಿಕೃತಕಾಮಿ ಉಮೇಶ್‌ ರೆಡ್ಡಿಗೆ ರಿಲೀಫ್‌ – ಸುಪ್ರೀಂನಿಂದ ಗಲ್ಲು ಶಿಕ್ಷೆ ರದ್ದು

    ವಿಕೃತಕಾಮಿ ಉಮೇಶ್‌ ರೆಡ್ಡಿಗೆ ರಿಲೀಫ್‌ – ಸುಪ್ರೀಂನಿಂದ ಗಲ್ಲು ಶಿಕ್ಷೆ ರದ್ದು

    ನವದೆಹಲಿ: ವಿಕೃತ ಕಾಮಿ ಉಮೇಶ್‌ ರೆಡ್ಡಿ(Umesh Reddy) ಮರಣ ದಂಡನೆ(Death Sentence)‌ ಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

    ಕರ್ನಾಟಕ ಹೈಕೋರ್ಟ್‌ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್‌ ರೆಡ್ಡಿ ಸುಪ್ರೀಂ(Supreme Court) ಮೆಟ್ಟಿಲೇರಿದ್ದ. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಉದಯ್‌ ಲಲಿತ್‌ ಅವರಿದ್ದ ತ್ರಿಸದಸ್ಯ ಪೀಠ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿದೆ.

    ಕಾನೂನನ್ನು ಉಲ್ಲಂಘಿಸಿ 10 ವರ್ಷಗಳ ಕಾಲ ಏಕಾಂಗಿಯಾಗಿ ಬೆಳಗಾವಿ ಜೈಲಿನಲ್ಲಿ ಇರಿಸಲಾಗಿದೆ. ಅಪರಾಧಿ ಯೋಗಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ. ಹೀಗಾಗಿ ಈತನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡಿಸಲಾಗಿದೆ ಎಂದು ಪೀಠ  ತನ್ನ ಆದೇಶದಲ್ಲಿ ತಿಳಿಸಿದೆ.

    ಯಾರು ಉಮೇಶ್‌ ರೆಡ್ಡಿ?
    ಸೈನಿಕನಾಗಿ ವೃತ್ತಿ ಜೀವನ ಆರಂಭಿಸಿದ್ದ ಈತ ಪೊಲೀಸ್‌ ಇಲಾಖೆಯಲ್ಲೂ ಕೆಲಸ ಮಾಡಿದ್ದಾನೆ. ಈತ ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ. ಈತನ ಕೃತ್ಯಗಳು ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗುಜರಾತ್‌ನಲ್ಲೂ ಬೆಳಕಿಗೆ ಬಂದಿವೆ. ಇನ್ನೂ ಕೆಲವು ಪ್ರಕರಣಗಳು ಹೊರ ಜಗತ್ತಿಗೆ ಪರಿಚಯವೇ ಆಗಿಲ್ಲ ಎನ್ನುವುದು ಪೊಲೀಸರ ಅಭಿಪ್ರಾಯ.

    1969ರಲ್ಲಿ ಚಿತ್ರದುರ್ಗದಲ್ಲಿ ಜನಿಸಿದ್ದ ಉಮೇಶ್‌ ರೆಡ್ಡಿ, ಸಿಆರ್‌ಪಿಎಫ್‌ಗೆ ಆಯ್ಕೆಯಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆಗೆ ನಿಯೋಜನೆಗೊಂಡಿದ್ದ. ಕಮಾಂಡರ್‌ ಮನೆಯಲ್ಲಿ ಡ್ಯೂಟಿಯಲ್ಲಿದ್ದಾಗ ಅವರ ಮಗಳ ಮೇಲೆಯೆ ಅತ್ಯಾಚಾರಕ್ಕೆ ಯತ್ನಿಸಿ, ಸೇನೆಯಿಂದ ಹೊರಬಿದ್ದಿದ್ದ. ಬಳಿಕ ಚಿತ್ರದುರ್ಗ ಜಿಲ್ಲಾ ಸಶಸ್ತ್ರಮೀಸಲು ಪಡೆ ಸೇರಿ ಅಪಘಾತ ಪ್ರಕರಣವೊಂದರಲ್ಲಿ ಸಿಕ್ಕಿ ಹಾಕಿಕೊಂಡಿದ್ದ. ಇದು ಸಣ್ಣ ಅಪರಾಧ ಎಂದು ಆತನನ್ನು ಬಿಟ್ಟು ಕಳಿಸಲಾಗಿತ್ತು.

    ಇದಾದ ಬಳಿಕ ಈತ ತನ್ನ ಕೃತ್ಯ ಆರಂಭಿಸಿದ್ದ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪುರುಷರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಕೃತ್ಯ ನಡೆಸುತ್ತಿದ್ದ. ನೀರು ಕೇಳುವ ನೇಪದಲ್ಲಿ ಮನೆ ಪ್ರವೇಶಿಸಿ ಮಹಿಳೆಯರಿಗೆ ಚಾಕು ತೋರಿಸಿ ಬಟ್ಟೆ ಬಿಚ್ಚುವಂತೆ ಹೇಳಿ ಅತ್ಯಾಚಾರ ನಡೆಸಿ ಹತ್ಯೆಗೈದು ಚಿನ್ನಗಳೊಂದಿಗೆ ಪರಾರಿಯಾಗುತ್ತಿದ್ದ. ಸಂತ್ರಸ್ತೆಯ ಒಳ ಉಡುಪಿನೊಂದಿಗೆ ತೆರಳುತ್ತಿದ್ದ. ಪೊಲೀಸರು ಬಂಧಿಸುವ ಸಮಯದಲ್ಲಿ ಆತ ತನ್ನ ಉಡುಪಿನ ಒಳಗಡೆ ಮಹಿಳೆಯರ ಒಳ ಉಡುಪು ಧರಿಸಿ ಸಿಕ್ಕಿ ಬೀಳುತ್ತಿದ್ದ.

    Live Tv
    [brid partner=56869869 player=32851 video=960834 autoplay=true]