Tag: death

  • ಗೋರಖ್‍ಪುರ್‍ನಲ್ಲಿ ಆಗಸ್ಟ್ 31 ರಂದು ಎಷ್ಟು ಮಕ್ಕಳು ಸಾವನ್ನಪ್ಪಿದ್ದಾರೆ ಗೊತ್ತಾ?

    ಗೋರಖ್‍ಪುರ್‍ನಲ್ಲಿ ಆಗಸ್ಟ್ 31 ರಂದು ಎಷ್ಟು ಮಕ್ಕಳು ಸಾವನ್ನಪ್ಪಿದ್ದಾರೆ ಗೊತ್ತಾ?

    ಗೋರಖ್‍ಪುರ್: ಗುರುವಾರ ಒಂದೇ ದಿನದಲ್ಲಿ 16 ಮಕ್ಕಳು ಸಾವನ್ನಪ್ಪಿರುವ ಘಟನೆ ಗೋರಖ್‍ಪುರ್‍ನ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

    16 ಮಕ್ಕಳಲ್ಲಿ ಒಂದು ಮಗು ಎನ್ಸೆಫಾಲಿಟಿಸ್‍ನಿಂದ ಸಾವನ್ನಪ್ಪಿದ್ದರೆ ಆಗಸ್ಟ್ 2017ರಲ್ಲಿ 415 ಮಕ್ಕಳು ಸಾವನ್ನಪ್ಪಿದೆ.

    ಜನವರಿ 2017 ರಿಂದ ಬಿಆರ್‍ಡಿ ಮೆಡಿಕಲ್ ಕಾಲೇಜಿನಲ್ಲಿ ಒಟ್ಟು 1,256 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬುಧವಾರ ಬಿಆರ್‍ಡಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ. ಸಿಂಗ್ ತಿಳಿಸಿದ್ದರು. ಜನವರಿಯಲ್ಲಿ 152, ಫೆಬ್ರವರಿಯಲ್ಲಿ 122, ಮಾರ್ಚ್‍ನಲ್ಲಿ 159, ಜೂನ್‍ನಲ್ಲಿ 137 ಮತ್ತು ಜುಲೈನಲ್ಲಿ 128 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು.

    ಬಿಆರ್‍ಡಿ ಮೆಡಿಕಲ್ ಕಾಲೇಜ್‍ನಲ್ಲಿ ಒಂದು ವಾರದೊಳಗೆ ಹಲವು ಮಕ್ಕಳು ಹಾಗೂ ನವಜಾತ ಶಿಶುಗಳು ಸಾವನ್ನಪ್ಪುತ್ತಿರುವುದು ದೇಶದ ಗಮನವನ್ನು ಸೆಳೆಯುತ್ತಿದೆ. ಅಮ್ಲಜನಕ ಪೂರೈಕೆದಾರರಿಗೆ ಸರಿಯಾಗಿ ಹಣವನ್ನು ಪಾವತಿ ಮಾಡದ ಕಾರಣ ಮಕ್ಕಳ ಸಾವಿನ ಸಂಖ್ಯೆ ಹೆಚ್ಚಳವಾಗಿದೆ.

    ಬಿಆರ್‍ಡಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ರಾಜೀವ್ ಮಿಶ್ರಾ ಹಾಗೂ ಅವರ ಪತ್ನಿ ಪೂರ್ಣಿಮಾ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

  • ಗಣೇಶ ವಿಸರ್ಜನೆ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಯುವಕ ಸಾವು

    ಗಣೇಶ ವಿಸರ್ಜನೆ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಯುವಕ ಸಾವು

    ಬಾಗಲಕೋಟೆ: ಗಣೇಶ ವಿಸರ್ಜನೆ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಯುವಕ ಸಾವನ್ನಪಪ್ಪಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಲಕ್ಣನಟ್ಟಿ ಗ್ರಾಮದಲ್ಲಿ ನಡೆದಿದೆ.

    ಜ್ಞಾನೇಶ್ ಮಾಳದ(25) ಮೃತಪಟ್ಟ ಯವಕ. ಜ್ಞಾನೇಶ್ ಗೆಳೆಯರೊಂದಿಗೆ ಗುರುವಾರ ರಾತ್ರಿ ತಮ್ಮ ಗ್ರಾಮದ ಏರಿಯಾ ಗಣೇಶ ವಿಸರ್ಜನೆ ಮಾಡಲು ಪಕ್ಕದ ಘಟಪ್ರಭಾ ನದಿಗೆ ತೆರಳಿದ್ರು. ಈ ವೇಳೆ ಜ್ಞಾನೇಶ್ ಕಾಲು ಜಾರಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.

    ವಿಷಯ ತಿಳಿದ ಗ್ರಾಮಸ್ಥರು ಗುರುವಾರ ರಾತ್ರಿಯಿಂದಲೇ ಜ್ಞಾನೇಶ್ ಶವ ಹುಡುಕಾಟ ನಡೆಸಿದ್ದಾರೆ. ಈ ವರೆಗೂ ಆತನ ಶವ ಸಿಕ್ಕಿಲ್ಲ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಹಾಗೂ ನುರಿತ ಈಜುಗಾರರಿಂದ ಜ್ಞಾನೇಶ್ ಶವ ಹುಡುಕಾಟ ನಡೆಸಲಾಗುತ್ತಿದೆ.

    ಲೋಕಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕತ್ತು ಕೊಯ್ದು ರೈತನ ಬರ್ಬರ ಹತ್ಯೆ

    ಕತ್ತು ಕೊಯ್ದು ರೈತನ ಬರ್ಬರ ಹತ್ಯೆ

    ಮಂಡ್ಯ: ರೈತರೊಬ್ಬರ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಚಿಕ್ಕತಿಮ್ಮಯ್ಯ (45) ಕೊಲೆಯಾದ ರೈತ. ಚಿಕ್ಕತಿಮ್ಮಯ್ಯ ಎಂದಿನಂತೆ ರಾತ್ರಿ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ರು. ಆದರೆ ಅವರು ತುಂಬಾ ಸಮಯ ಕಳೆದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದ್ರಿಂದ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

    ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸರಿಯಾಗಿ ಓದು ಎಂದಿದ್ದಕ್ಕೆ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ

    ಸರಿಯಾಗಿ ಓದು ಎಂದಿದ್ದಕ್ಕೆ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ

    ಬಾಗಲಕೋಟೆ: ತಂದೆ ತಾಯಿ ಸರಿಯಾಗಿ ಓದು ಎಂದಿದ್ದಕ್ಕೆ ಬಾಲಕಿ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನವನಗರ 54ನೇ ಸೆಕ್ಟರ್ ನಲ್ಲಿ ನಡೆದಿದೆ.

    ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಹೇಮಾ ಗುಳೇದಗುಡ್ಡ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ತಂದೆತಾಯಿ ಚೆನ್ನಾಗಿ ಓದು ಎಂದು ಹೇಳಿದ್ದಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾಳೆ ಎನ್ನಲಾಗಿದೆ.

    ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, ಮೂವರಿಗೆ ಗಾಯ

    ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, ಮೂವರಿಗೆ ಗಾಯ

    ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ರಾಷ್ಟ್ರೀಯ 4ರಲ್ಲಿ ಈ ಘಟನೆ ಸಂಭವಿಸಿದೆ.

    ಪಿಳ್ಳೇಕೇರನಹಳ್ಳಿಯ ಅಣ್ಣಪ್ಪ(35) ಮೃತಪಟ್ಟ ವ್ಯಕ್ತಿ. ಖಾಸಗಿ ಬಸ್ ನಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುತಿತ್ತು. ಈ ವೇಳೆ ಚಾಲನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಬಸ್ ನಲ್ಲಿ ಬೆರಳಣಿಕೆಯಷ್ಟು ಪ್ರಯಾಣಿಕರು ಇದ್ದರಿಂದ ಹೆಚ್ಚಿನ ಅನಾಹುತ ಏನೂ ಅಗಿಲ್ಲ. ಬಸ್ ನ ಅಡಿಯಲ್ಲಿ ಪ್ರಯಾಣಿಕರು ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಕ್ರೇನ್ ಸಹಾಯದಿಂದ ಬಸ್ಸನ್ನು ಮೇಲಕ್ಕೆ ಎತ್ತಿದಾಗ ಯಾರು ಅಡಿಯಲ್ಲಿ ಸಿಲುಕಿರಲಿಲ್ಲ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹೇಮಾವತಿ ನೀರಿನ ಹೋರಾಟಕ್ಕೆ ರಾಜ್ಯದಲ್ಲಿ ಮೊದಲ ಬಲಿ

    ಹೇಮಾವತಿ ನೀರಿನ ಹೋರಾಟಕ್ಕೆ ರಾಜ್ಯದಲ್ಲಿ ಮೊದಲ ಬಲಿ

    ತುಮಕೂರು: ಹೇಮಾವತಿ ನೀರಿನ ಹೋರಾಟಕ್ಕೆ ರೈತ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ನಡೆದಿದೆ.

    ಚಲುವರಾಜು(35) ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈತ. ನೀರು ಹರಿಯುತ್ತಿದ್ದ ನಾಲೆಯ ತೂಬು ಮುಚ್ಚಿಸಲು ಪೊಲೀಸರು ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

    ಮೃತ ಚಲುವರಾಜು ಅವರು ತೂಬು ಮುಚ್ಚುವುದನ್ನು ವಿರೋಧಿಸಿ ನಾಲೆಗೆ ಹಾರಿದ್ದಾರೆ. ಹೀಗಾಗಿ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿಹೋಗಿದ್ದಾರೆ. ಈ ಶವಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪೊಲೀಸರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    https://www.youtube.com/watch?v=9fQtvqI96vs

  • ಮಗಳನ್ನು ಬಾವಿಗೆ ತಳ್ಳಿ, ತಾನು ಆತ್ಮಹತ್ಯೆಗೆ ಶರಣಾದ ತಂದೆ

    ಮಗಳನ್ನು ಬಾವಿಗೆ ತಳ್ಳಿ, ತಾನು ಆತ್ಮಹತ್ಯೆಗೆ ಶರಣಾದ ತಂದೆ

    ಉಡುಪಿ: 8 ವರ್ಷದ ಮಗಳನ್ನು ಬಾವಿಗೆ ತಳ್ಳಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ.

    ಮಲ್ಪೆಯ ಕೊಡವೂರು ನಿವಾಸಿಯಾದ ಶರತ್ ತಮ್ಮದೇ ಮನೆಯ ಬಾವಿಗೆ ಮಗಳು ಕನ್ನಿಕಾಳನ್ನು ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರತ್ ಮತ್ತು ಕನ್ನಿಕಾ ಮಂಗಳವಾರ ರಾತ್ರಿ 12.30ರ ವೇಳೆಯಲ್ಲಿ ಮನೆಯಿಂದ ಕಾಣಿಯಾಗಿದ್ದರು. ಮನೆಯವರು ಸುತ್ತಮುತ್ತ ಹುಡುಕಾಟ ನಡೆಸಿ ಎಲ್ಲಾದರೂ ಸಂಬಂಧಿಕರ ಮನೆಗೆ ಹೋಗಿರಬಹುದು ಎಂದು ಭಾವಿಸಿ ಸುಮ್ಮನಾಗಿದ್ದರು.

    ಬುಧವಾರವೂ ಬಾರದೇ ಇದ್ದಾಗ ಮಲ್ಪೆ ಪೊಲೀಸ್ ಠಾಣೆಗೆ ಮೌಖಿಕ ದೂರು ನೀಡಿದ್ದರು. ಆದರೆ ಇಂದು ಮನೆಯ ತೋಟದಲ್ಲಿದ್ದ ಬಾವಿಯಲ್ಲಿ ಇಬ್ಬರ ಮೃತದೇಹಗಳು ತೇಲುತ್ತಿರುವುದು ಕಂಡುಬಂದಿದೆ. ಮಗಳನ್ನು ಬಾವಿಗೆ ತಳ್ಳಿ ನಂತರ ತಂದೆಯೂ ಹಾರಿರುವ ಶಂಕೆ ವ್ಯಕ್ತವಾಗಿದೆ.

    ಮುಂಚೆ ಅದೇ ಬಾವಿ ಸೇರಿದಂತೆ ಎಲ್ಲಾ ಕಡೆ ಹುಟುಕಾಟ ನಡೆಸಲಾಗಿತ್ತು. ಆದರೆ ಬಾವಿಗೆ ಹಾರಿರುವ ಬಗ್ಗೆ ಯಾವುದೇ ಕುರುಹುಗಳು ಇರಲಿಲ್ಲ. ಸದ್ಯ ಶವಗಳನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಶರತ್ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಗೆ ಸಂಬಂಧಪಟ್ಟ ವೃತ್ತಿಯನ್ನು ಮಾಡಿಕೊಂಡು ಬಂದಿದ್ದರು. ಮಂಗಳವಾರ ರಾತ್ರಿ ಕುಟುಂಬ ಸಮೇತರಾಗಿ ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಕಾರಣಗಳೇ ಇಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಯಾವುದೇ ಜಗಳ-ಕೌಟುಂಬಿಕ ಕಲಹ, ಆರ್ಥಿಕ ಸಮಸ್ಯೆ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

    ತಂದೆ ಶರತ್ ಮಗಳ ಬಗ್ಗೆ ಬಹಳ ಕಾಳಜಿ ಮಾಡುತ್ತಿದ್ದರು. ಒಂದು ದಿನವೂ ಬಿಟ್ಟು ಇರುತ್ತಿರಲಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಹಾಗಾದ್ರೆ ಆತ್ಮಹತ್ಯೆಗೆ ಕಾರಣ ಏನೆಂಬುದು ನಿಗೂಢವಾಗಿಯೇ ಉಳಿದಿದೆ.

    ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವು

    ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವು

    ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಸೊರಬ ತಾಲೂಕಿನ ಕೈಸೋಡಿಯಲ್ಲಿ ಈ ಘಟನೆ ಸಂಭವಿಸಿದೆ. ಬೂಧೇಶ್ (22) ಮೃತ ದುರ್ದೈವಿ. ಗುರುವಾರ ರಾತ್ರಿ ತಮ್ಮ ಮನೆಯ ಮುಂದಿರುವ ಕೆರೆಗೆ ಗಣಪತಿ ವಿಸರ್ಜನೆಗೆ ಹೋದಾಗ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ.

    ಮೃತ ಬೂಧೇಶ್ ಅವರು ಕೃಷಿ ಕೆಲಸ ಮಾಡಿಕೊಂಡಿದ್ದರು. ಸದ್ಯ ಬೂಧೇಶ್ ಮೃತದೇಹ ಸಾಗರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿದೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

     

  • ಜನಪ್ರಿಯ ಗಾಯಕ ಎಲ್.ಎನ್.ಶಾಸ್ತ್ರಿ ಇನ್ನಿಲ್ಲ

    ಜನಪ್ರಿಯ ಗಾಯಕ ಎಲ್.ಎನ್.ಶಾಸ್ತ್ರಿ ಇನ್ನಿಲ್ಲ

    ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ಗಾಯಕ ಎಲ್.ಎನ್.ಶಾಸ್ತ್ರಿ ಅವರು ಅನಾರೋಗ್ಯದ ಕಾರಣ ಇಂದು ವಿಧಿವಶರಾಗಿದ್ದಾರೆ.

    ಬೆಂಗಳೂರಿನ ನಾಗರಬಾವಿಯಲ್ಲಿರುವ ನಿವಾಸದಲ್ಲಿ ಎಲ್.ಎನ್.ಶಾಸ್ತ್ರಿ ಕೊನೆಯುಸಿರೆಳೆದಿದ್ದಾರೆ. ಶಾಸ್ತ್ರಿ ಅವರು ದೀರ್ಘ ಕಾಲದಿಂದ ಕರುಳು ಕ್ಯಾನ್ಸರ್ ರೋಗದಿಂದ ನರುಳುತ್ತಿದ್ದರು.

    ಕನ್ನಡದ ಸ್ಟಾರ್ ನಟರ ಚಿತ್ರಗಳ ಸೂಪರ್ ಹಿಟ್ ಹಾಡುಗಳಿಗೆ ಶಾಸ್ತ್ರಿ ಧ್ವನಿಯಾಗಿದ್ದರು. ‘ಎ’, ‘ಜನುಮದ ಜೋಡಿ’, ‘ಸಿಪಾಯಿ’, ‘ಜೋಡಿ ಹಕ್ಕಿ’ ಚಿತ್ರದ ಹಾಡುಗಳು ಸೇರಿದಂತೆ 3000ಕ್ಕೂ ಅಧಿಕ ಹಾಡನ್ನು ಎಲ್.ಎನ್.ಶಾಸ್ತ್ರಿ ಹಾಡಿದ್ದಾರೆ. ಸಂಗೀತ ನಿರ್ದೇಶಕರೂ ಆಗಿದ್ದ ಅವರು 15ಕ್ಕೂ ಅಧಿಕ ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದಾರೆ. ಜೊತೆಗೆ ‘ಜನುಮದ ಜೋಡಿ’ ಚಿತ್ರದ ‘ಕೋಲು ಮಂಡೆ…’ ಹಾಡಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದರು.

    ಶಾಸ್ತ್ರಿ ಅವರ ಸಾವಿಗೆ ಸ್ಯಾಂಡಲ್‍ವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.

     

  • ಶಿವಮೊಗ್ಗದ ಆಯನೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ಬಲಿ

    ಶಿವಮೊಗ್ಗದ ಆಯನೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ಬಲಿ

    ಶಿವಮೊಗ್ಗ: ನಗರದ ಸಮೀಪದ ಆಯನೂರು ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಸ್ವಿಫ್ಟ್ ಕಾರಿನಲ್ಲಿದ್ದ ಅಶೋಕ, ನವೀನ, ಕಾರ್ತಿಕ, ಮಾರಿಮುತ್ತು, ಕಿರಣ, ಕೇಶವ ಮೃತಪಟ್ಟ ವ್ಯಕ್ತಿಗಳು. ಮೃತಪಟ್ಟವರೆಲ್ಲರೂ ಹೊಸನಗರ ತಾಲೂಕು ಬ್ರಹ್ಮೇಶ್ವರ ಗ್ರಾಮದ ಅಂಬೇಡ್ಕರ್ ಕಾಲೋನಿಯವರು.

    ಇವರು ಹೊಸನಗರದಿಂದ ಶಿವಮೊಗ್ಗಕ್ಕೆ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದರು. ಓವರ್ ಟೇಕ್ ಮಾಡುವ ಭರದಲ್ಲಿ ಸ್ವಿಫ್ಟ್ ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕ್ಯಾಂಟರ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಲಾರಿಯ ಒಳಗೆ ನುಗ್ಗಿತ್ತು.

    ಸ್ಥಳಕ್ಕೆ ಆಯನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.