Tag: death

  • ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ

    ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ

    ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗಂಗಮ್ಮ (35) ತನ್ನ ಮಕ್ಕಳಾದ ಆಕಾಶ್(8) ಹಾಗೂ ಗುರು(6) ಹೇನಿನ ಪುಡಿಯ ಔಷಧಿ ಕುಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷ ಸೇವನೆಯಿಂದ ಆಕಾಶ್ ಮೃತಪಟ್ಟಿದ್ದು, ಗುರುವಿನ ಸ್ಥಿತಿ ಗಂಭೀರವಾಗಿದ್ದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಗಂಗಮ್ಮ ಮಾನಸಿಕ ಅಸ್ವಸ್ಥಯಾಗಿದ್ದು ಕೌಟುಂಬಿಕ ಕಲಹದಿಂದ ಮನನೊಂದು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಸಂಬಂಧಿಕರು ಹೇಳಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಚಿತ್ರದುರ್ಗ: ಕಾರ್‍ಗೆ ಲಾರಿ ಡಿಕ್ಕಿ- ಇಬ್ಬರ ದುರ್ಮರಣ, ಮೂವರಿಗೆ ಗಾಯ

    ಚಿತ್ರದುರ್ಗ: ಕಾರ್‍ಗೆ ಲಾರಿ ಡಿಕ್ಕಿ- ಇಬ್ಬರ ದುರ್ಮರಣ, ಮೂವರಿಗೆ ಗಾಯ

    ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

    ಮೃತರನ್ನು ತುಮಕೂರು ಜಿಲ್ಲೆ ಮಧುಗಿರಿ ಮೂಲದ ರಾಜಶೇಖರ್(58) ಹಾಗೂ ವಂಶಿ (27) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಇವರು ಗೋಕರ್ಣದಿಂದ ಮಧುಗಿರಿ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

    ಘಟನೆಯಲ್ಲಿ ಇಬ್ಬರು ಮೃತಪಟ್ಟು, ಇನ್ನುಳಿದ ಮೂವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಡಿವೈಡರ್‍ಗೆ ಬೈಕ್ ಡಿಕ್ಕಿ- ರಸ್ತೆಗೆ ಬಿದ್ದಿದ್ದ ಯುವತಿ ಮೇಲೆ ಹರಿದ ಐರಾವತ ಬಸ್

    ಡಿವೈಡರ್‍ಗೆ ಬೈಕ್ ಡಿಕ್ಕಿ- ರಸ್ತೆಗೆ ಬಿದ್ದಿದ್ದ ಯುವತಿ ಮೇಲೆ ಹರಿದ ಐರಾವತ ಬಸ್

    ಮಂಡ್ಯ: ರಸ್ತೆ ಡಿವೈಡರಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಯುವತಿ ಪಕ್ಕದ ರಸ್ತೆಗೆ ಬಿದ್ದು, ಆಕೆಯ ಮೇಲೆ ಐರಾವತ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಬಳಿ ನಡೆದಿದೆ.

    ಶ್ವೇತಾ (24) ಎಂಬವರೇ ಅಪಘಾತದಲ್ಲಿ ಸಾವನ್ನಪ್ಪಿದ ಯುವತಿ. ಬೈಕ್ ಸವಾರ ಮಹೇಶ್ (26) ಎಂಬವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಹೇಶ್ ಮತ್ತು ಶ್ವೇತಾ ಇಬ್ಬರೂ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಬೈಕ್‍ನಲ್ಲಿ ಬೆಂಗಳೂರಿನಿಂದ ಮೈಸೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ ಸುಮಾರು ಬೆಳಗ್ಗೆ 7 ಗಂಟೆಗೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂದೆ ಕುಳಿತಿದ್ದ ಶ್ವೇತಾ ಡಿವೈಡರ್ ಹಾರಿ ಪಕ್ಕದ ರಸ್ತೆಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಎದುರುಗಡೆಯಿಂದ ಬರುತ್ತಿದ್ದ ಐರಾವತ ಬಸ್ ಶ್ವೇತಾ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಘಟನೆಯಲ್ಲಿ ಗಾಯಗೊಂಡ ಮಹೇಶ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಬಸ್ ಮತ್ತು ಬೈಕ್ ಡಿಕ್ಕಿ- ತಂದೆ ಸಾವು, ಮಗನಿಗೆ ಗಂಭೀರ ಗಾಯ

    ಬಸ್ ಮತ್ತು ಬೈಕ್ ಡಿಕ್ಕಿ- ತಂದೆ ಸಾವು, ಮಗನಿಗೆ ಗಂಭೀರ ಗಾಯ

    ಹಾವೇರಿ: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಬ್ರಿಡ್ಜ್ ಬಳಿ ನಡೆದಿದೆ.

    60 ವರ್ಷದ ಬಸಪ್ಪ ಮುದಿ ಸಾವನ್ನಪ್ಪಿದ್ದ ದುರ್ದೈವಿ. ಇನ್ನೂ ಬೈಕ್‍ನಲ್ಲಿದ್ದ ಬಸಪ್ಪರ ಮಗ ಗಣೇಶ್ (22) ಅವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಣೇಶ್ ಬೈಕ್ ಚಲಾಯಿಸುತ್ತಿದ್ದರು. ಸಾರಿಗೆ ಬಸ್ ಬೆಂಗಳೂರಿನಿಂದ ಗದಗ ತೆರಳುತಿತ್ತು.

    ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಬಸ್ ಆಟೋಗೆ ಡಿಕ್ಕಿ, ಆಟೋ ಬೈಕ್‍ಗೆ ಡಿಕ್ಕಿ- ಓರ್ವ ಸಾವು, ಮೂವರ ಸ್ಥಿತಿ ಗಂಭೀರ

    ಬಸ್ ಆಟೋಗೆ ಡಿಕ್ಕಿ, ಆಟೋ ಬೈಕ್‍ಗೆ ಡಿಕ್ಕಿ- ಓರ್ವ ಸಾವು, ಮೂವರ ಸ್ಥಿತಿ ಗಂಭೀರ

    ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಸರಣಿ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಬೈಕ್‍ನ ಹಿಂಬದಿ ಸವಾರ ಆಂಧ್ರಪ್ರದೇಶ ಮೂಲದ 26 ವರ್ಷದ ರಂಗಸ್ವಾಮಿ ಮೃತ ದುರ್ದೈವಿ. ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಹೊರಬರುತ್ತಿದ್ದಂತೆ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

    ಚಾಲಕನ ನಿಯಂತ್ರಣ ತಪ್ಪಿದ ಬಸ್ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಆಟೋ ರಾಜಕಾಲುವೆಗೆ ಉರುಳಿದೆ. ಈ ವೇಳೆ ಆಟೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಲ್ಲದೆ ರಸ್ತೆ ಬದಿ ನಿಂತಿದ್ದ ರಂಜಿತಾ ಎಂಬವರಿಗೆ ಬಸ್ ತಾಕಿದ್ದು ಅವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    https://www.youtube.com/watch?v=33XNxaS07sA

     

  • ಒಂದೇ ಹೊಂಡಕ್ಕೆ ಮೂವರು ಬಲಿ: ಇದು ಅಕ್ರಮ ಮರುಳಗಾರಿಕೆ ಎಫೆಕ್ಟ್!

    ಒಂದೇ ಹೊಂಡಕ್ಕೆ ಮೂವರು ಬಲಿ: ಇದು ಅಕ್ರಮ ಮರುಳಗಾರಿಕೆ ಎಫೆಕ್ಟ್!

    ರಾಯಚೂರು: ಅಕ್ರಮ ಮರಳುಗಾರಿಕೆಯಿಂದಾಗಿ ಉಂಟಾಗಿರುವ ಹೊಂಡವೊಂದು ಕಳೆದ ಮೂರು ತಿಂಗಳಲ್ಲಿ ಮೂವರನ್ನ ಬಲಿ ಪಡೆದಿದೆ.

    ರಾಯಚೂರು ತಾಲೂಕಿನ ಗುಂಜಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಹೊಂಡದಲ್ಲಿ ಶವವಾಗಿ ತೇಲಿದ್ದಾನೆ. ಗ್ರಾಮದ 35 ವರ್ಷದ ಜನಾರ್ಧನ್ ಸಾವನ್ನಪ್ಪಿರುವ ಮೃತ ದುರ್ದೈವಿ.

    ಅಕ್ರಮ ಮರಳುಗಾರಿಕೆಯಿಂದ ಹಳ್ಳದ ಬಳಿ ಈ ಹೊಂಡ ಸೃಷ್ಠಿಯಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆ ಕೂಡ ಹೊಂಡದ ಹತ್ತಿರವೇ ಇರುವುದರಿಂದ ಜನರು ಈಗ ಭಯಗೊಂಡಿದ್ದಾರೆ.

    ಮಾರ್ಚ್ 5 ರಂದು ಹೊಂಡದಲ್ಲಿ ಮೀನು ಹಿಡಿಯಲು ಹೋಗಿ ಗ್ರಾಮದ ಇಬ್ಬರು ಬಾಲಕರು ಹೊಂಡದಲ್ಲಿ ಸಾವನ್ನಪ್ಪಿದ್ದರು. ವಿನಯ್ ಹಾಗೂ ಅಖಿಲೇಶ್ ಮೃತಪಟ್ಟ ವಿದ್ಯಾರ್ಥಿಗಳು. ಈಗ ಹೊಂಡ ಪುನಃ ಇನ್ನೋರ್ವ ವ್ಯಕ್ತಿಯನ್ನು ಬಲಿಪಡೆದಿದೆ. ಘಟನೆ ಹಿನ್ನೆಲೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಹೊಂಡವನ್ನು ಮುಚ್ಚಬೇಕು ಅಂತ ಗ್ರಾಮಸ್ಥರು ಆಗ್ರಹಿಸಿದ್ದಾರೆ.

     

  • ಸಮುದ್ರ ದಂಡೆಯ ಮೇಲೆ ಸೆಲ್ಫೀ ತೆಗೆಯಲು ಹೋದ ಯುವಕ ನೀರುಪಾಲು

    ಸಮುದ್ರ ದಂಡೆಯ ಮೇಲೆ ಸೆಲ್ಫೀ ತೆಗೆಯಲು ಹೋದ ಯುವಕ ನೀರುಪಾಲು

    ಕಾರವಾರ: ಸಮುದ್ರ ದಂಡೆಯ ಮೇಲೆ ಸೆಲ್ಫೀ ತೆಗೆದುಕೊಳ್ಳಲು ಹೋದ ಯುವಕನೊಬ್ಬ ನೀರಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಕಾರವಾರ ತಾಲೂಕಿನ ಅಂಕೋಲಾದ ಹನಿ ಬೀಚ್‍ನಲ್ಲಿ ನಡೆದಿದೆ.

    ಗುರುದರ್ಶನ್ ಶೇಠ್ ಸಮುದ್ರದಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ. ಸ್ಥಳದಲ್ಲಿದ್ದ ಗುರುದರ್ಶನ್ ಗೆಳೆಯರು ಈತನನ್ನು ರಕ್ಷಿಸಲು ಸಮುದ್ರಕ್ಕೆ ಇಳಿದು ತಾವೂ ಕೂಡ ಪ್ರಾಣಾಪಾಯದಲ್ಲಿ ಸಿಲುಕಿಕೊಂಡಿದ್ದರು. ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ರಾಹುಲ್ ಶೇಟ್, ಅಕ್ಷಯ ಬಾಳೇರಿ, ಹಾಗೂ ಪ್ರಶಾಂತ್ ಗಾವಡಿ ಎಂಬ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

    ಈ ನಾಲ್ವರು ಯುವಕರು ಕುಮಟಾದ ಬಾಳಿಗಾ ಕಾಲೇಜಿನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಭಾನುವಾರ ಸಂಜೆ ನಾಲ್ವರು ಅಂಕೋಲದ ಬಾಳೇಬೈಲಿನ ಹನಿಬೀಚ್ ಗೆ ವಿಹಾರಕ್ಕೆ ತೆರಳಿದ್ರು. ಈ ವೇಳೆ ಘಟನೆ ಸಂಭವಿಸಿದ್ದು, ಗುರುದರ್ಶನ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

  • ಶಾಲೆಗೆ ರಜೆಯೆಂದು ಈಜಲು ಹೋದ ಬಾಲಕರಿಬ್ಬರ ದುರ್ಮರಣ

    ಶಾಲೆಗೆ ರಜೆಯೆಂದು ಈಜಲು ಹೋದ ಬಾಲಕರಿಬ್ಬರ ದುರ್ಮರಣ

    ಚಿಕ್ಕಬಳ್ಳಾಪುರ: ಇಂದು ಭಾನುವಾರ ಶಾಲೆಗೆ ರಜೆಯೆಂದು ಕೆರೆಗೆ ಈಜಲು ಹೋಗಿದ್ದ ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುರಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮುಬಾರಕ್ (13) ಮತ್ತು ಮನ್ಸೂರ್ (12) ಮೃತ ಬಾಲಕರು. ಕುರಬರಹಳ್ಳಿಯ ಮುಬಾರಕ್ ಮತ್ತು ಬುರ್ಜಾನಕುಂಟೆ ಗ್ರಾಮದ ಮನ್ಸೂರು ಇಬ್ಬರೂ ತಮ್ಮ ಗೆಳೆಯರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಮುಬಾರಕ್ ಮತ್ತು ಮನ್ಸೂರು ನೀರುಪಾಲಾಗಿದ್ದಾರೆ.

    ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಗೌರಿಬಿದನುರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಹಿಂಬದಿಯಿಂದ ಶಾಲಾ ಬಸ್ ಡಿಕ್ಕಿ-4 ವರ್ಷದ ಬಾಲಕಿ ಸಾವು

    ಹಿಂಬದಿಯಿಂದ ಶಾಲಾ ಬಸ್ ಡಿಕ್ಕಿ-4 ವರ್ಷದ ಬಾಲಕಿ ಸಾವು

    ಬೆಂಗಳೂರು: ಶಾಲಾ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ನೆಲಮಂಗಲ ತಾಲೂಕಿನ ಅರಿಶಿಣಕುಂಟೆ ಬಳಿ ನಡೆದಿದೆ.

    ವರ್ಷ (4) ಮೃತ ಬಾಲಕಿ. ವರ್ಷ ಎಸ್‍ಎಂ ರ್ಯಾಂಕಿಂಗ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಎಲ್‍ಕೆಜಿ ಓದುತ್ತಿದ್ದಳು. ಎಂದಿನಂತೆ ಇಂದು ಕೂಡ ವರ್ಷ ಶಾಲಾ ಬಸ್‍ನಲ್ಲಿ ಬಂದಿದ್ದಳು. ಆದ್ರೆ ಬಾಲಕಿಯನ್ನು ಬಸ್‍ನಿಂದ ಇಳಿಸುವಾಗ ಈ ಅವಘಡ ಸಂಭವಿಸಿದೆ.

    ಘಟನೆಯ ನಂತರ ಬಸ್ ಚಾಲಕ ನಾಪತ್ತೆಯಾಗಿದ್ದಾನೆ. ಇತ್ತ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಯಾದಗಿರಿ: ವಿದ್ಯುತ್ ತಂತಿ ತಗುಲಿ ರೈತ ಸಾವು

    ಯಾದಗಿರಿ: ವಿದ್ಯುತ್ ತಂತಿ ತಗುಲಿ ರೈತ ಸಾವು

    ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತರೊಬ್ಬರು ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ನಡೆದಿದೆ.

    65 ವರ್ಷದ ಹಣಮಂತ ಡೊಣ್ಣೆಗೌಡ ಮೃತ ರೈತ. ಹಣಮಂತ ಅವರು ಪ್ರತಿ ದಿನದಂತೆ ಇಂದು ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದರು. ಸೋಮವಾರ ರಾತ್ರಿ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದ್ದರಿಂದ ವಿದ್ಯುತ್ ತಂತಿ ತುಂಡಾಗಿ ಜಮೀನಿನಲ್ಲಿ ಬಿದ್ದಿದೆ.

     

    ವಿದ್ಯುತ್ ಪ್ರವಹಿಸುತ್ತಿರುವ ತಂತಿಯನ್ನ ಗಮನಿಸದ ರೈತ ಹಣಮಂತ ಅದನ್ನ ತುಳಿದು ಸಾವನ್ನಪ್ಪಿದ್ದಾರೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.