Tag: death

  • ಬೆಂಗಳೂರಿನ ಸರ್ಕಾರಿ ಹಾಸ್ಟೆಲ್‍ನಲ್ಲಿ ಘರ್ಷಣೆ – ಕ್ಷುಲ್ಲಕ ಕಾರಣಕ್ಕೆ ಬಿತ್ತು ವಿದ್ಯಾರ್ಥಿ ಹೆಣ!

    ಬೆಂಗಳೂರಿನ ಸರ್ಕಾರಿ ಹಾಸ್ಟೆಲ್‍ನಲ್ಲಿ ಘರ್ಷಣೆ – ಕ್ಷುಲ್ಲಕ ಕಾರಣಕ್ಕೆ ಬಿತ್ತು ವಿದ್ಯಾರ್ಥಿ ಹೆಣ!

    ಬೆಂಗಳೂರು: ಕಾಲೇಜು ಹುಡುಗರ ಮಧ್ಯೆ ನಡೆದ ಘರ್ಷಣೆಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ ಅಂಜನಾ ನಗರದ ಬಳಿಯ ದೇವರಾಜ ಅರಸು ಸರ್ಕಾರಿ ಹಾಸ್ಟೆಲ್‍ನಲ್ಲಿ ನಡೆದಿದೆ.

    ರೋಹಿತ್ ಮೃತ ವಿದ್ಯಾರ್ಥಿ. ಘರ್ಷಣೆಯಲ್ಲಿ ಅಮರೇಶಪ್ಪ ಎಂಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ನಡೆದಿದ್ದೇನು?: ಗುರುವಾರ ರಾತ್ರಿ 10.30 ರ ಸುಮಾರಿಗೆ ದೇವರಾಜ ಅರಸು ಸರ್ಕಾರಿ ಹಾಸ್ಟೆಲ್ ನಲ್ಲಿದ್ದ ರವೀಶ್ ಎಂಬಾತ ಕುಡಿದು ಬಂದು ಶೌಚಾಲಯದ ಬಾಗಿಲು ತೆರೆದೇ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ರೋಹಿತ್ ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ. ಈ ವೇಳೆ ರವೀಶ್ ಕುಡಿದ ಮತ್ತಿನಲ್ಲಿ ರೋಹಿತ್‍ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವೇಳೆ ತಡೆಯಲು ಬಂದ ಅಮರೇಶಪ್ಪನಿಗೂ ಚಾಕುವಿನಿಂದ ಇರಿದಿದ್ದಾನೆ. ಅದೃಷ್ಟವಶಾತ್ ಅಮರೇಶಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ನೆಲಮಂಗಲದ ಸೋಲೂರು ಮೂಲದ ರೋಹಿತ್ ಹಾಗೂ ಅಮರೇಶಪ್ಪ ಇಬ್ರು ಸಹ ಈಸ್ಟ್ ವೆಸ್ಟ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಆರೋಪಿ ರವೀಶ್ ವಿಜಯನಗರದ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಎನ್ನಲಾಗಿದೆ. ಈ ಕುರಿತಂತೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ರವೀಶ್ ಗಾಗಿ ಬಲೆ ಬೀಸಿದ್ದಾರೆ.

  • ಎನ್‍ಆರ್‍ಬಿಸಿ 5ಎ ಕಾಲುವೆ ಹೋರಾಟ: ಸಮಾವೇಶ ಮಾರ್ಗ ಮಧ್ಯೆ ರೈತ ಮುಖಂಡ ಸಾವು

    ಎನ್‍ಆರ್‍ಬಿಸಿ 5ಎ ಕಾಲುವೆ ಹೋರಾಟ: ಸಮಾವೇಶ ಮಾರ್ಗ ಮಧ್ಯೆ ರೈತ ಮುಖಂಡ ಸಾವು

    ರಾಯಚೂರು: ನಾರಾಯಣಪುರ ಬಲದಂಡೆ ಕಾಲುವೆಯ 5ಎ ಕಾಲುವೆ ಯೋಜನೆ ಜಾರಿಗೆ ಆಗ್ರಹಿಸಿ ರಾಯಚೂರಿನ ಲಿಂಗಸುಗೂರು ತಾಲೂಕಿನ ಮಸ್ಕಿಯಲ್ಲಿ ಆಯೋಜಿಸಿದ್ದ ಬೃಹತ್ ರೈತ ಸಮಾವೇಶಕ್ಕೆ ತೆರಳುತ್ತಿದ್ದ ರೈತ ಮುಖಂಡರೊಬ್ಬರು ಮಾರ್ಗಮಧ್ಯದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    ಅಮೀನಗಡ ಗ್ರಾಮದ 45 ವರ್ಷದ ಬಸವರಾಜ್ ನಿಡಿಗೋಳ ಹೋರಾಟದಲ್ಲಿ ಸಾವನ್ನಪ್ಪಿದ ರೈತ ಮುಖಂಡ. ಬಸವರಾಜ್ ಅವರು 5 ಎ ಕಾಲುವೆ ಹೋರಾಟ ಸಮಿತಿಯ ಮುಖಂಡರಾಗಿದ್ದು ಹಲವಾರು ಹೋರಾಟಗಳನ್ನ ರೂಪಿಸಿದ್ದರು. ಯೋಜನೆ ಜಾರಿಯಾದ್ರೆ ಲಕ್ಷಾಂತರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯುತ್ತದೆ ಎಂದು ಸುಮಾರು ವರ್ಷಗಳಿಂದ ಹೋರಾಟ ನಡೆಸಿದ್ರು. ಹೋರಾಟದ ಅಂಗವಾಗಿ ಇಂದು ಮಸ್ಕಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ದುರದೃಷ್ಟವಶಾತ್ ರೈತ ಮುಖಂಡ ಬಸವರಾಜ್ ಸಮಾವೇಶಕ್ಕೆ ಬರುವಾಗಲೇ ಅಸುನೀಗಿದ್ದಾರೆ.

    ಮೃತರ ಅಂತ್ಯ ಕ್ರಿಯೆ ಲಿಂಗಸುಗೂರಿನ ಅಮಿನಗಡ ಗ್ರಾಮದಲ್ಲೇ ನಡೆಯಲಿದ್ದು ಸಮಾವೇಶ ಮುಗಿದ ಬಳಿಕ ರೈತರೆಲ್ಲಾ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸಮಾವೇಶದಲ್ಲಿ ಮಾನ್ವಿ, ಲಿಂಗಸುಗೂರು, ಸಿಂಧನೂರು ತಾಲೂಕಿನ ನೂರಾರು ರೈತರು ಭಾಗವಹಿಸಿದ್ದರು. ಹಿಂದುಳಿದ ಭಾಗವನ್ನು ಸರ್ಕಾರಗಳು ಪದೇ ಪದೇ ನಿರ್ಲಕ್ಷಿಸುತ್ತಿವೆ. 5ಎ ಕಾಲುವೆ ಯೋಜನೆ ಜಾರಿ ಆಗುವವರೆಗೂ ಹೋರಾಟ ನಿಲ್ಲುವುದಿಲ್ಲ ಅಂತ ರೈತ ಹೋರಾಟಗಾರರು ಸಮಾವೇಶದಲ್ಲಿ ಎಚ್ಚರಿಸಿದ್ದಾರೆ.

     

  • ತುಮಕೂರು ಹಾಸ್ಟೆಲ್ ಮಕ್ಕಳ ಸಾವು: ಶಾಲೆಯ ಮಾಜಿ ಪ್ರಾಂಶುಪಾಲ ವಶಕ್ಕೆ

    ತುಮಕೂರು ಹಾಸ್ಟೆಲ್ ಮಕ್ಕಳ ಸಾವು: ಶಾಲೆಯ ಮಾಜಿ ಪ್ರಾಂಶುಪಾಲ ವಶಕ್ಕೆ

    ತುಮಕೂರು: ಹಾಸ್ಟೆಲ್‍ನಲ್ಲಿ ವಿಷದೂಟ ಸೇವಿಸಿ ಮೂರು ಮಕ್ಕಳು ಮೃತರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮಾರ್ಚ್ 9 ರಂದು ಮಾಜಿ ಶಾಸಕ ಕಿರಣ್‍ಕುಮಾರ್ ಒಡೆತನದ ವಿದ್ಯಾವಾರಿಧಿ ಶಾಲೆಯ ಹಾಸ್ಟೆಲ್‍ನಲ್ಲಿ ಮಕ್ಕಳು ವಿಷಾಹಾರ ಸೇವನೆಯಿಂದ ಮೃತಪಟ್ಟಿದ್ದರು. ಇನ್ನೂ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸೆಕ್ಯೂರಿಟಿ ಗಾರ್ಡ್ ರಮೇಶ್ ಮಾರ್ಚ್ 11 ರಂದು ಸಾವನ್ನಪ್ಪಿದ್ದರು.

    ಇದನ್ನೂ ಓದಿ: ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ

    ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದ ಮಕ್ಕಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಕ್ಕಳ ದೇಹದಲ್ಲಿ ದ್ರವರೂಪದ ವಿಷಕಾರಿ ಅಂಶವಿರುವುದು ಪತ್ತೆಯಾಗಿತ್ತು. ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಕೂಡ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದರು.

    ಮಾರ್ಚ್ 8ರ ರಾತ್ರಿ ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ.

    ಕಿರಣ್ ಅವರೊಂದಿಗಿನ ವೈಮನಸ್ಸಿನಿಂದ ರವಿ ಶಾಲೆಯಿಂದ ಹೋರಹೋಗಿದ್ದರು ಎಂದು ಹೇಳಲಾಗಿದೆ. ಪ್ರಕರಣದ ನಂತರ ನಾಪತ್ತೆಯಾಗಿದ್ದ ರವಿಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ತಿಪಟೂರು ಡಿವೈಎಸ್‍ಪಿ ವೇಣುಗೋಪಾಲ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

  • ತುಮಕೂರು: ಕುರಿ ಕದಿಯಲು ಬಂದ ಕಳ್ಳನಿಗೆ ದೊಣ್ಣೆಯಿಂದ ಬಡಿದು ಕೊಲೆ

    ತುಮಕೂರು: ಕುರಿ ಕದಿಯಲು ಬಂದ ಕಳ್ಳನಿಗೆ ದೊಣ್ಣೆಯಿಂದ ಬಡಿದು ಕೊಲೆ

    ತುಮಕೂರು: ಕುರಿ ಕದಿಯಲು ಬಂದ ಕಳ್ಳನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡಮಾಲೂರಿನಲ್ಲಿ ನಡೆದಿದೆ.


    ಮೃತ ಕಳ್ಳ ಆಂಧ್ರ ಮೂಲದವನು ಎನ್ನಲಾಗಿದೆ. ರಾತ್ರಿ ಮೂವರು ಕಳ್ಳರು ಸೇರಿ ದೊಡ್ಡಮಾಲೂರಿನ ರಾಮರೆಡ್ಡಿ ಎಂಬವರ ಮನೆಯಲ್ಲಿ ಕುರಿ ಕದಿಯಲು ಬಂದಿದ್ದಾರೆ. ಕಳ್ಳತನಕ್ಕೆ ಯತ್ನಿಸುವಾಗ ಮಾಲೀಕ ರಾಮರೆಡ್ಡಿ ಎಚ್ಚರಗೊಂಡಿದ್ದಾರೆ. ಈ ವೇಳೆ ಮಾಲೀಕ ಕಳ್ಳರನ್ನು ಅಟ್ಟಿಸಿಕೊಂಡು ಹೋಗಿದ್ದಾರೆ. ಆದ್ರೆ ಇಬ್ಬರು ಕಳ್ಳರು ತಪ್ಪಿಸಿಕೊಂಡು ಪರಾರಿಯಾಗಿದ್ದು, ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದಾನೆ. ಕೈಗೆ ಸಿಕ್ಕ ಕಳ್ಳನನ್ನು ರಾಮರೆಡ್ಡಿ ಹಾಗೂ ಕುಟುಂಬದ ಸದಸ್ಯರು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಮನಬದಂತೆ ಥಳಿಸಿದ್ದಾರೆ. ತೀವ್ರ ಥಳಿತಕ್ಕೊಳಗಾದ ಕಳ್ಳ ಕಟ್ಟಿದ ಕಂಬದಲ್ಲೇ ಸಾವನ್ನಪ್ಪಿದ್ದಾನೆ.

    ಕೊಡಿಗೆನಹಳ್ಳಿ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ರಾಮರೆಡ್ಡಿ ಸೇರಿದಂತೆ ಕುಟುಂಬ ಸದಸ್ಯರಾದ ಉಮೇಶ್, ನಾಗರಾಜು ಮತ್ತು ಬಾಬು ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

  • ಹಾವೇರಿ: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

    ಹಾವೇರಿ: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

    ಹಾವೇರಿ: ಬೈಕ್‍ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಗಜ್ಜೀಹಳ್ಳಿ ಗ್ರಾಮದ ಬಳಿ ನಡೆದಿದೆ.

    42 ವರ್ಷದ ರಾಮಪ್ಪ ಲಮಾಣಿ ಮೃತ ದುರ್ದೈವಿ. ರಾಮಪ್ಪ ಅವರ ಜೊತೆಯಲ್ಲಿ ಬೈಕ್‍ನಲ್ಲಿದ್ದ ಅವರ ಮಗಳು 17 ವರ್ಷದ ಶಿಲ್ಪಾ ಲಮಾಣಿಗೆ ಗಾಯಗಳಾಗಿದ್ದು, ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮಪ್ಪ ಲಮಾಣಿ ಹಾನಗಲ್ ತಾಲೂಕಿನ ಬಾಳೂರು ತಾಂಡಾ ನಿವಾಸಿ ಎಂದು ತಿಳಿದು ಬಂದಿದೆ.

    ರಾಮಪ್ಪ ತಮ್ಮ ಮಗಳು ಶಿಲ್ಪಾಳನ್ನು ಟ್ಯೂಶನ್ ಕ್ಲಾಸ್‍ಗೆ ಬಿಡಲು ಹಾನಗಲ್ ಪಟ್ಟಣಕ್ಕೆ ಹೋಗುವ ವೇಳೆ ಅಪಘತ ಸಂಭವಿಸಿದೆ. ಸ್ಥಳಕ್ಕೆ ಹಾನಗಲ್ ಪೊಲೀಸ್ ಠಾಣೆಯ ಪಿಎಸ್‍ಐ ಟಿ.ಮಂಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಸ್ನಾನಕ್ಕೆ ತೆರಳಿದ್ದ ಬಾಲಕ ಕೆರೆಯಲ್ಲಿ ಸಾವು: ನಾಲ್ವರು ಪಾರು

    ಸ್ನಾನಕ್ಕೆ ತೆರಳಿದ್ದ ಬಾಲಕ ಕೆರೆಯಲ್ಲಿ ಸಾವು: ನಾಲ್ವರು ಪಾರು

    ರಾಯಚೂರು: ಜಿಲ್ಲೆಯ ಸಿಂಧನೂರಿನ ತಾಲೂಕಿನ ಮೂರು ಮೈಲ್ ಕ್ಯಾಂಪ್ ಬಳಿ ಕೆರೆಗೆ ಸ್ನಾನಕ್ಕೆ ತೆರಳಿದ್ದ ಯುವಕ ಜಲಸಮಾಧಿಯಗಿದ್ದಾನೆ.

    ಸಿಂಧನೂರು ಪಟ್ಟಣದ ನಿವಾಸಿ 16 ವರ್ಷದ ಹುಸೇನ್ ಮೃತ ದುರ್ದೈವಿ. ಹುಸೇನ್ ಜೊತೆಯಲ್ಲಿ ಇನ್ನೂ ನಾಲ್ಕು ಜನ ಭಾನುವಾರ ಕೆರೆಗೆ ಸ್ನಾನ ಮಾಡಲು ತೆರಳಿದ್ದರು. ಆದರೆ ಹುಸೇನ್ ಮಾತ್ರ ಕೆರೆಯ ಮದ್ಯದ ಆಳವಾದ ಸ್ಥಳದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾನೆ.

    ಹುಸೇನ್ ಜಲಸಮಾಧಿ ಆಗಿದ್ರೂ, ಆತನ ಗೆಳೆಯರು ಭಯದಿಂದ ಯಾರಿಗೂ ತಿಳಿಸಿರಲಿಲ್ಲ. ತಮ್ಮ ಮಗ ಕಾಣದೇ ಇದ್ದಾಗ ಹುಸೇನ್ ಪೋಷಕರು ಇಂದು ಆತನ ಗೆಳೆಯರನ್ನು ವಿಚಾರಿಸಿದಾಗ ವಿಷಯ ತಿಳಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಹುಸೇನ್ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಈ ಸಂಬಂಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೋಲಾರದಲ್ಲಿ ಟೆಂಪೋ ಟ್ರಾವೆಲರ್‍ಗೆ ಆಯಿಲ್ ಟ್ಯಾಂಕರ್ ಡಿಕ್ಕಿ- ಮೂವರ ಸಾವು

    ಕೋಲಾರದಲ್ಲಿ ಟೆಂಪೋ ಟ್ರಾವೆಲರ್‍ಗೆ ಆಯಿಲ್ ಟ್ಯಾಂಕರ್ ಡಿಕ್ಕಿ- ಮೂವರ ಸಾವು

    ಕೋಲಾರ: ಟೆಂಪೋ ಟ್ರಾವೆಲರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಂಡ್ರಿಗ ಎಂಬ ಗ್ರಾಮದಲ್ಲಿ ನಡೆದಿದೆ.

    ಟೆಂಪೋ ಟ್ರಾವೆಲರ್ ಚಾಲಕ ವಿಶಾಲ್ ಬಾಬು (35), ಕಾಮಾಕ್ಷಿ (27) ಹಾಗು ಬಾಲಕ ರಿದಯ್ (2) ಎಂಬವರು ಮೃತ ದುರ್ಧೈವಿಗಳಾಗಿದ್ದಾರೆ. ಇವರೆಲ್ಲರೂ ತುಮಕೂರು ಜಿಲ್ಲೆಯವರು ಎಂದು ಹೇಳಲಾಗಿದೆ.

    ತುಮಕೂರಿನಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 12 ಮಂದಿ ಟೆಂಪೋ ಟ್ರಾವೆಲರ್ ನಲ್ಲಿ ಹೊರಟಿದ್ದರು. ಈ ವೇಳೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಂಡ್ರಿಗ ಎಂಬಲ್ಲಿ ಟ್ರಾವೆಲರ್ ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಬಂಗಾರಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಆಟೋಗಳಿಗೆ ಲಾರಿ ಡಿಕ್ಕಿಯಾಗಿ 12 ಮಂದಿ ಸ್ಥಳದಲ್ಲೇ ಸಾವು

    ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಆಟೋಗಳಿಗೆ ಲಾರಿ ಡಿಕ್ಕಿಯಾಗಿ 12 ಮಂದಿ ಸ್ಥಳದಲ್ಲೇ ಸಾವು

    ಚಿತ್ರದುರ್ಗ: ಲಾರಿಯೊಂದು ಎರಡು ಆಟೋ ಮತ್ತು ಟಾಟಾ ಏಸ್‍ಗೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ 12 ಜನರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ.

    ಉತ್ತರ ಪ್ರದೇಶ ಮೂಲದ ಲಾರಿಯ ಟೈರ್ ಸ್ಫೋಟಗೊಂಡು ಎರಡು ಆಟೋ ಹಾಗೂ ಒಂದು ಟಾಟಾ ಏಸ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಜನರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಟೋ ನಾಗಸಮುದ್ರದಿಂದ ರಾಂಪುರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಮೃತರ ಮಾಹಿತಿ ಇನ್ನೂ ನಿಖರವಾಗಿ ತಿಳಿದುಬಂದಿಲ್ಲ.

    ಮೃತರೆಲ್ಲರೂ ನಾಗಸಮುದ್ರ ಗ್ರಾಮದ ಸುತ್ತಲಿನ ಗ್ರಾಮದವರು ಎಂದು ಹೇಳಲಾಗಿದೆ. ಆಟೋದಲ್ಲಿದ್ದ ಎಲ್ಲರೂ ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದರು. ಮೃತರಲ್ಲಿ ನಾಲ್ವರು ಮಹಿಳೆಯರು ಉಳಿದವರು ಪುರುಷರಾಗಿದ್ದಾರೆ. 8 ಜನರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತರ ಸಂಖ್ಯೆ ಇನ್ನೂ ಹೆಚ್ಚಾಗು ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

     

  • ನೋಟ್ ಬ್ಯಾನ್‍ನಿಂದ ಸಾವನ್ನಪ್ಪಿರುವವರ ‘ಅಧಿಕೃತ ವರದಿ’ ಇಲ್ಲ: ಕೇಂದ್ರ ಸರ್ಕಾರ

    ನೋಟ್ ಬ್ಯಾನ್‍ನಿಂದ ಸಾವನ್ನಪ್ಪಿರುವವರ ‘ಅಧಿಕೃತ ವರದಿ’ ಇಲ್ಲ: ಕೇಂದ್ರ ಸರ್ಕಾರ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರೂ. ನೋಟ್ ಬ್ಯಾನ್ ಮಾಡಿದ ವೇಳೆ ನೋಟು ಬದಲಾವಣೆಗೆ ಕ್ಯೂನಲ್ಲಿ ನಿಂತು ಜನರು ಸಾವನ್ನಪ್ಪಿರುವ ಬಗ್ಗೆ ಯಾವುದೇ ‘ಅಧಿಕೃತ ವರದಿ’ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

    ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಹಣಕಾಸು ಇಲಾಖೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್, ಜನರು ಸಾವನ್ನಪ್ಪಿರುವಂತಹ ಅಧಿಕೃತ ವರದಿ ನಮಗಿನ್ನೂ ಬಂದಿಲ್ಲ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರದ ನೋಟ್ ಬ್ಯಾನ್ ನಿರ್ಧಾರದಿಂದ ತೊಂದರೆಗೆ ಸಿಲುಕಿ ಎಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಿಪಿಎಂ ಸಂಸದ ಜಿತೇಂದ್ರ ಚೌಧರಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಪ್ರಶ್ನೆ ಕೇಳಿದ್ದರು. ಇದಕ್ಕೆ ಸಚಿವರು ಇಂದು ಲಿಖಿತ ಉತ್ತರ ನೀಡಿದ್ದಾರೆ.

    ನೋಟ್ ಬ್ಯಾನ್ ಮಾಡಿದ್ದಾಗ, ದೇಶದ ಹಲವೆಡೆ ಜನ ಕ್ಯೂನಲ್ಲಿ ನಿಂತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದರು ಎಂಬ ವರದಿಗಳೂ ಬಂದಿದ್ದವು. ಕಳೆದ ನವೆಂಬರ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1 ಸಾವಿರ ರೂ.ಗಳ ನೋಟನ್ನು ಬ್ಯಾನ್ ಮಾಡಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ನೋಟುಗಳನ್ನು ಜಮೆ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿತ್ತು.

    ಇದನ್ನೂ ಓದಿ:ಮತ್ತೆ 2,000 ನೋಟು ನಿಷೇಧವಾಗುತ್ತಾ: ಜನ್ರಲ್ಲಿ ಮೂಡಿದ್ದ ಪ್ರಶ್ನೆಗೆ ಜೇಟ್ಲಿ ಉತ್ತರಿಸಿದ್ರು

  • ಹೈದ್ರಾಬಾದ್ ಕರ್ನಾಟಕದಲ್ಲಿ ಮಳೆ -ಸಿಡಿಲು ಬಡಿದು ಇಬ್ಬರ ಸಾವು

    ಹೈದ್ರಾಬಾದ್ ಕರ್ನಾಟಕದಲ್ಲಿ ಮಳೆ -ಸಿಡಿಲು ಬಡಿದು ಇಬ್ಬರ ಸಾವು

    ಹೈದ್ರಾಬಾದ್ ಕರ್ನಾಟಕ: ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಮಳೆರಾಯ ರಾತ್ರಿ ಸದ್ದು ಮಾಡಿದ್ದಾನೆ. ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಮಳೆಯಾಗಿದೆ. ಗಣಿನಾಡಲ್ಲಿ ಗುಡುಗು-ಸಿಡಿಲಿನೊಂದಿಗೆ 2 ಗಂಟೆ ಮಳೆ ಸುರಿದಿದೆ.

    ಮಳೆಯ ಪರಿಣಾಮ ಅನೇಕ ನಗರ ಸೇರಿದಂತೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ರಾಯಚೂರಿನ ಲಿಂಗಸುಗೂರು, ಸಿಂಧನೂರು, ಮಾನ್ವಿಯಲ್ಲಿ ಮಳೆಯಾಗಿದೆ. ಲಿಂಗಸುಗೂರಿನಲ್ಲಿ ಭಾರೀ ಗಾಳಿಗೆ ಮನೆ ಹಾಗೂ ಅಂಗಡಿಗಳ ಶೆಡ್‍ಗಳು ಹಾರಿಹೋಗಿವೆ.

    ಕೊಪ್ಪಳ, ಯಲಬುರ್ಗಾದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಭಾರಿ ಮಳೆಗೆ ಹರನಾಳ, ಓತಿಹಾಳ ಗ್ರಾಮದಲ್ಲಿ ದ್ರಾಕ್ಷಿ, ಬಾಳೆ, ಲಿಂಬೆ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸಿಡಿಲು ಬಡಿದು 40 ವರ್ಷದ ಮಲ್ಲಪ್ಪ ಧರೆಪ್ಪ ಹುಣಶ್ಯಾಳ ಅನ್ನೋ ರೈತ ಮೃತಪಟ್ಟಿದ್ದಾರೆ.

    ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಸಿಡಿಲು ಬಡಿದು 25 ವರ್ಷದ ಖಾಜಾಹುಸೇನಿ ಮಾಶಾಳಕರ್ ಅನ್ನೋ ಯುವಕ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲೂ ಮಳೆಯ ಸಿಂಚನವಾಗಿದೆ.