Tag: debt

  • ಒಂದು ತಿಂಗಳ ಒಳಗೆ ಫ್ರೆಂಚ್‌ ಪ್ರಧಾನಿ ಪಟ್ಟದಿಂದ ಇಳಿದ ಲೆಕೋರ್ನು – 3 ವರ್ಷದಲ್ಲಿ 7 ಮಂದಿ ರಾಜೀನಾಮೆ

    ಒಂದು ತಿಂಗಳ ಒಳಗೆ ಫ್ರೆಂಚ್‌ ಪ್ರಧಾನಿ ಪಟ್ಟದಿಂದ ಇಳಿದ ಲೆಕೋರ್ನು – 3 ವರ್ಷದಲ್ಲಿ 7 ಮಂದಿ ರಾಜೀನಾಮೆ

    ಪ್ಯಾರಿಸ್: ಮೂರು ವಾರಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದ ಫ್ರಾನ್ಸ್‌ (France) ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು (Sebastien Lecornu) ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಸೋಮವಾರ ಲೆಕೋರ್ನು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

    ರಕ್ಷಣಾ ಸಚಿವರಾಗಿದ್ದ 39 ವರ್ಷದ ಲೆಕೋರ್ನು ಸೆ.9 ರಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸೆಬಾಸ್ಟಿಯನ್ ಲೆಕೋರ್ನು ಹೊಸ ಕ್ಯಾಬಿನೆಟ್‌ ಘೋಷಣೆ ಮಾಡಿ ಸೋಮವಾರ ಪ್ರಥಮ ಸಭೆ ನಡೆಸಬೇಕಿತ್ತು. ಆದರೆ ಹೊಸ ಕ್ಯಾಬಿನೆಟ್‌ಗೆ ಆಡಳಿತ ಪಕ್ಷದಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ 3 ವರ್ಷಗಳಲ್ಲಿ ಫ್ರಾನ್ಸ್‌ನಲ್ಲಿ ಏಳು ಪ್ರಧಾನಿಗಳು ರಾಜೀನಾಮೆ ಸಲ್ಲಿಸಿದ್ದಾರೆ.

    ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್
    ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

    ರಾಜೀನಾಮೆ ಯಾಕೆ?
    ಫ್ರಾನ್ಸ್‌ ಸಂಸತ್ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಸದ್ಯ ಫ್ರಾನ್ಸ್‌ನಲ್ಲಿ ಅಲ್ಪಮತದ ಸರ್ಕಾರವಿದೆ. 2026ರಲ್ಲಿ ಬಜೆಟ್ ಮಂಡಿಸಬೇಕಿದ್ದು, ಅದಕ್ಕೆ ಬಹುಮತದ ಅಂಗೀಕಾರ ಪಡೆಯಬೇಕಿದೆ. ಬಜೆಟ್‌ಗೆ ಅಂಗೀಕಾರ ಪಡೆಯಲು ವಿಫಲವಾದ ಬೆನ್ನಲ್ಲೇ ಸೆಬಾಸ್ಟಿಯನ್ ಲೆಕೋರ್ನು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲಿದ್ದ ಪ್ರಧಾನಿಗಳಿಗೆ ಮಿತ್ರ ಕೂಟದಿಂದ ಬೆಂಬಲ ಸಿಗದ ಕಾರಣ ಅವರು ರಾಜೀನಾಮೆ ಸಲ್ಲಿಸಿದ್ದರು.  ಇದನ್ನೂ ಓದಿ:  ಅಮೆಜಾನ್‌ ಕಾಡಿನ ಮರಗಳು ದಪ್ಪ ಆಗ್ತಿವೆಯಂತೆ – ಇದು ಗುಡ್‌ ನ್ಯೂಸ್‌ or ಬ್ಯಾಡ್‌ ನ್ಯೂಸ್?

    ಎಡಪಂಥೀಯರ ಕೂಟ ಅಧ್ಯಕ್ಷರ ಚುನಾವಣೆಗೆ ಆಗ್ರಹಿಸುತ್ತಿದ್ದರೆ ಬಲಪಂಥೀಯರ ಆರ್‌ಎನ್ ಕೂಟವು ಸಂಸತ್ತನ್ನು ವಿಸರ್ಜಿಸಿ ಚುನಾವಣೆಗೆ ಆಗ್ರಹಿಸುತ್ತಿದೆ. ಆದರೆ ಮ್ಯಾಕ್ರನ್ 2027ರವರೆಗೆ ನಾನೇ ಅಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

    ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಅನುಮಾನ. ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆಯದಿರುವ ಸಾಧ್ಯತೆಯೇ ಹೆಚ್ಚಿದೆ. ಹೀಗಾಗಿ ಮುಂದಿನ ಅಧ್ಯಕ್ಷೀಯ ಚುನಾವಣೆ ನಡೆಯುವ 2027 ರವರೆಗೆ ರಾಜಕೀಯ ಅಸ್ಥಿರತೆ ಹೀಗೆಯೇ ಮುಂದುವರಿಯುವ ಸಾಧ್ಯತೆಯಿದೆ.

    ಫ್ರಾನ್ಸ್‌ನ ಸಾರ್ವಜನಿಕ ಸಾಲವು (Debt) ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ. ಫ್ರಾನ್ಸ್‌ನ ಸಾಲ-ಜಿಡಿಪಿ ಅನುಪಾತವು ಈಗ ಗ್ರೀಸ್ ಮತ್ತು ಇಟಲಿಯ ನಂತರ ಯುರೋಪಿಯನ್ ಒಕ್ಕೂಟದ ಮೂರನೇ ಅತ್ಯಧಿಕವಾಗಿದೆ ಮತ್ತು ಯುರೋಪಿಯನ್‌ ನಿಯಮಗಳ ಅಡಿಯಲ್ಲಿ ಅನುಮತಿಸಲಾದ 60 ಪ್ರತಿಶತಕ್ಕಿಂತ ಎರಡು ಪಟ್ಟು ಹತ್ತಿರದಲ್ಲಿದೆ.

    ಕೋವಿಡ್‌ ಬಳಿಕ ಫ್ರಾನ್ಸ್‌ ಸಾಲದ ಸುಳಿಗೆ ತಲುಪಿದೆ. ದೇಶದಲ್ಲಿ ದುಡಿಯುವ ಯುವ ಜನತೆ ಪ್ರಮಾಣ ಕಡಿಮೆ ಇದ್ದರೆ ಪಿಂಚಣಿ ಪಡೆಯುವ ಹಿರಿಯರ ಸಂಖ್ಯೆ ಹೆಚ್ಚಾಗಿದ್ದಾರೆ. ಕೋವಿಡ್‌ ಬಳಿಕ ಸರ್ಕಾರದ ಖರ್ಚು ಹೆದ್ದಾಗಿದ್ದು ಆದಾಯ ಕಡಿಮೆಯಿದೆ. ಹೀಗಾಗಿ ವಿಪರೀತ ಪ್ರಮಾಣದಲ್ಲಿ ಸಾಲ ಮಾಡಿದ್ದರಿಂದ ಈಗ ಫ್ರಾನ್ಸ್‌ ಆರ್ಥಿಕ ಸಮಸ್ಯೆಗೆ ಸಿಲುಕಿದೆ.

  • ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ದಾವಣಗೆರೆ: ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ (Micro Finance) ಹಾಗೂ ಸ್ವಸಹಾಯ ಸಂಘಗಳ ಕಿರುಕುಳಕ್ಕೆ ಬೇಸತ್ತು ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ.

    ಗಂಗನರಸಿ ಗ್ರಾಮದ ಸುವರ್ಣಮ್ಮ (56), ಅಂಗವಿಕಲ ಮಗಳು ಗೌರಮ್ಮ (26) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು. ಕೂಲಿ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಸಾಲದ ಹೊರೆಗೆ ಬಳಲಿದ್ದರು ಎನ್ನಲಾಗುತ್ತಿದ್ದು, ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ತಿಂಗಳ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ಕಷ್ಟಪಡುತ್ತಿದ್ದರು. ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

    ಸಾಲಗಾರರ ಕಾಟ ತಾಳಲಾರದೆ ಇಂದು ತುಂಗಾಭದ್ರಾ ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

  • ತುಮಕೂರು| ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ

    ತುಮಕೂರು| ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ

    ತುಮಕೂರು: ಸಾಲಬಾಧೆ (Indebtedness) ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತಿ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ.

    ಅನಿಲ್ (47) ಹಾಗೂ ಉಮಾ (45) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ ಸೇವಿಸಿದ ಪರಿಣಾಮ ಅನಿಲ್ ಮೃತಪಟ್ಟಿದ್ದು, ಪತ್ನಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಅನಿಲ್ ಕಗ್ಗೆರೆ ಗ್ರಾಮದವರಾಗಿದ್ದು, ಹೌಸಿಂಗ್ ಬೋರ್ಡ್‌ನಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ವಾಸವಿದ್ದರು. ಹಲವು ವರ್ಷಗಳಿಂದ ಕುಣಿಗಲ್ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಇತ್ತೀಚಿಗೆ ಆನ್‌ಲೈನ್‌ನಲ್ಲಿ ಹಣ ಹೂಡಿಕೆ (Online Investment) ಮಾಡಿ ಅನಿಲ್ ಸುಮಾರು 8-10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್‌ನನ್ನು ಎನ್‌ಕೌಂಟರ್‌ ಮಾಡಿದ್ರೆ 1,11,11,111 ರೂ. ಬಹುಮಾನ – ಕರ್ಣಿ ಸೇನೆಯಿಂದ ಘೋಷಣೆ

    ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸೋಮವಾರ ಸಂಜೆ ತಮ್ಮ ಮನೆಯಲ್ಲಿ ಮಾತ್ರೆ ಸೇವಿಸಿ ಪತಿ, ಪತ್ನಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಡ ಅನಿಲ್ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಪತ್ನಿ ಉಮಾಗೆ ಕುಣಿಗಲ್ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಕೆವಿ ಹಾಗೂ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ನಕಲಿ ರಸಗೊಬ್ಬರ, ಕ್ರಿಮಿನಾಶಕ ಸಾಗಿಸುತ್ತಿದ್ದ ವಾಹನ ಜಪ್ತಿ

  • ತಮಿಳುನಾಡು| ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ತಮಿಳುನಾಡು| ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ (Tamil Nadu) ಪುದುಕೊಟ್ಟೈನಲ್ಲಿ (Pudukkottai) ನಡೆದಿದೆ.

    ಬುಧವಾರ ಬೆಳಗ್ಗೆ ತಿರುಚ್ಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಂತಿತ್ತು. ಸಂಜೆಯಾದರೂ ಅದೇ ಸ್ಥಳದಲ್ಲಿ ಕಾರು ನಿಂತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಶಿಲಿಸಿದಾಗ ಕಾರಿನೊಳಗೆ ಐವರು ಮೃತಪಟ್ಟಿರುವುದು ಕಂಡುಬಂದಿದೆ. ಇದನ್ನೂ ಓದಿ: ಉಸಿರುಗಟ್ಟಿಸಿ ಮಹಾಲಕ್ಷ್ಮಿ ಕೊಲೆ; ಆ್ಯಕ್ಸಲ್ ಬ್ಲೇಡ್‌ನಿಂದ ದೇಹ ಪೀಸ್ – ಹಂತಕನ ಡೆತ್‌ನೋಟ್‌ನಲ್ಲಿ ಕೊಲೆ ರಹಸ್ಯ ರಿವೀಲ್

    ಮೃತರನ್ನು ಉದ್ಯಮಿ ಮಣಿಕಂದನ್ (50), ಅವರ ಪತ್ನಿ ನಿತ್ಯ, ತಾಯಿ ಸರೋಜಾ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಸೇಲಂ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಲೆಬನಾನ್‍ಗೆ ಬರಬೇಡಿ – ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

    ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಕುಟುಂಬಸ್ಥರು ಸಾಲಗಾರರ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಮಣಿಕಂದನ್ ಲೋಹದ ವ್ಯಾಪಾರ ಮಾಡುತ್ತಿದ್ದು, ಸಾಲ ಮಾಡಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ದೂರುದಾರ ಸ್ನೇಹಮಯಿ ಕೃಷ್ಣ

    ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪುದುಕೊಟ್ಟೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ-ಕಾಲೇಜುಗಳಿಗೆ ರಜೆ

  • ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    – ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲು

    ಬೆಳಗಾವಿ: ಪತ್ನಿ ಹಾಗೂ ಅತ್ತೆ ಸೇರಿಕೊಂಡು ಸಾಲಗಾರ ಪತಿಯನ್ನು (Husband) ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿಯ ಪೀರವನಾಡಿ ನಿವಾಸಿ ವಿನಾಯಕ್ ಜಾಧವ್ (48) ಕೊಲೆಯಾದ ಪತಿ. ಜುಲೈ 29ರಂದು ರಾತ್ರಿ ಅಮ್ಮ-ಮಗಳು ಸೇರಿಕೊಂಡು ಸಾಲಗಾರ ಪತಿಯನ್ನು ಹತ್ಯೆ ಮಾಡಿದ್ದಾರೆ. ವಿನಾಯಕ್ ಜಾಧವ್ ಉದ್ಯಮಬಾಗದಲ್ಲಿ ಸ್ವಂತ ಉದ್ಯಮ ಹೊಂದಿದ್ದ. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ವಿಪರೀತ ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತು ಮನೆಯನ್ನು ಸಾಲಕ್ಕೆ ಅಡಮಾನವಾಗಿ ಇಟ್ಟು ಜನರ ಕಿರುಕುಳಕ್ಕೆ ನೊಂದು ಬೆಳಗಾವಿ ಬಿಟ್ಟು ಮೂರು ವರ್ಷಗಳಿಂದ ಪರಾರಿಯಾಗಿದ್ದ. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

    ಜುಲೈ 29ರಂದು ವಿನಾಯಕ್ ಜಾಧವ್ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಮನೆಯಲ್ಲಿ ಪತ್ನಿ ರೇಣುಕಾ ಜೊತೆಗೆ ವಿಪರೀತ ಜಗಳ ಮಾಡಿದ್ದ. ಬಳಿಕ ಪತಿಯನ್ನು ಹಗ್ಗದಿಂದ ಕುತ್ತಿಗೆ ಕಟ್ಟಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆಗೆ ಪತ್ನಿ ರೇಣುಕಾಗೆ ಆಕೆಯ ತಾಯಿ ಶೋಭಾ ಸಾಥ್ ನೀಡಿದ್ದರು. ಹತ್ಯೆ ಬಳಿಕ ಶವವನ್ನು ಮನೆಯ ಮುಂಭಾಗದಲ್ಲಿ ಬಿಸಾಡಿದ್ದರು. ಬೆಳಗ್ಗೆ ಅಕ್ಕಪಕ್ಕದ ಮನೆಯವರನ್ನು ಕರೆದು ಪತಿ ಮದ್ಯಪಾನ ಮಾಡಿ ಬಿದ್ದಿದ್ದಾನೆ. ಇದು ಕೊಲೆಯಲ್ಲ, ಸಹಜ ಸಾವು ಎಂದು ತಾಯಿ, ಮಗಳು ಬಿಂಬಿಸಿದ್ದರು. ಆದರೆ ವಿನಾಯಕ್ ಜಾಧವ್ ಸಹೋದರ ಅರುಣ್ ಸಾವಿನಲ್ಲಿ ಶಂಕೆ ಇದೆ ಎಂದು ದೂರು ನೀಡಿದ್ದರು. ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸರು ಕೊಲೆಯ ರಹಸ್ಯ ಬಯಲು ಮಾಡಿದ್ದಾರೆ. ಪ್ರಕರಣ ಸಂಬಂಧ ಪತ್ನಿ ರೇಣುಕಾ ಹಾಗೂ ಆಕೆಯ ತಾಯಿ ಶೋಭಾಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್‌- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

  • ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ಸಾಲಬಾಧೆ ತಾಳದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

    ರಾಯಚೂರು: ರೈತನೋರ್ವ (Farmer) ಸಾಲಬಾಧೆ (Indebtedness) ತಾಳದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಉಪ್ಪಲದೊಡ್ಡಿ ಗ್ರಾಮದಲ್ಲಿ ನಡೆದಿದೆ.

    ಮಲ್ಲಪ್ಪ ತೆಗ್ಗಿಹಾಳ (32) ಸಾವನ್ನಪ್ಪಿರುವ ಯುವ ರೈತ. ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಸಾಲ ತೀರಿಸಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ವಿಡಿಯೋ – ಯೂಟ್ಯೂಬರ್‌ ಬಂಧನಕ್ಕೆ ನೋಯ್ಡಾಗೆ ತೆರಳಿ ಬರಿಗೈಯಲ್ಲಿ ಕರ್ನಾಟಕ ಪೊಲೀಸರು ವಾಪಸ್‌

    ತನ್ನ ಮನೆಯ ಬಳಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಹಿನ್ನೆಲೆ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

  • ಚೀನಾ ಸಾಲದ ಸುಳಿಗೆ ಬಿದ್ದ ಮಾಲ್ಡೀವ್ಸ್‌ಗೆ ಐಎಂಎಫ್‌ ಎಚ್ಚರಿಕೆ

    ಚೀನಾ ಸಾಲದ ಸುಳಿಗೆ ಬಿದ್ದ ಮಾಲ್ಡೀವ್ಸ್‌ಗೆ ಐಎಂಎಫ್‌ ಎಚ್ಚರಿಕೆ

    – ವಿದೇಶಗಳಿಂದ ಆರ್ಥಿಕ ಸಹಾಯ ಪಡೆಯುವುದನ್ನು ನಿಲ್ಲಿಸಿ
    – ಪ್ರವಾಸೋದ್ಯಮಕ್ಕೆ ಪೂರಕವಾಗಿರುವ ಯೋಜನೆಗಳನ್ನು ಕೂಡಲೇ ರೂಪಿಸಿ

    ಮಾಲೆ: ಭಾರತದೊಂದಿಗೆ (India) ಕಿತ್ತಾಟ ನಡೆಸಿ ಚೀನಾಗೆ (China) ಹತ್ತಿರವಾಗಿರುವ ಮಾಲ್ಡೀವ್ಸ್‌ (Maldives) ಈಗ ಸಾಲದ ಸುಳಿಯಲ್ಲಿ (Debt Distress) ಸಿಲುಕಿದೆ. ಈಗ ಚೀನಾದಿಂದ ಮತ್ತಷ್ಟು ಸಾಲ ಪಡೆಯಲು ಮುಂದಾಗಿರುವ ಮಾಲ್ಡೀವ್ಸ್‌ಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಮತ್ತೊಮ್ಮೆ ಎಚ್ಚರಿಕೆ ನೀಡಿದೆ.

    ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಮಾಲ್ಡೀವ್ಸ್‌ ಕೂಡಲೇ ತನ್ನ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರ ವೆಚ್ಚವನ್ನು ಕಡಿತ ಮಾಡಬೇಕು ಮತ್ತು ಹೊರ ದೇಶಗಳಿಂದ ಆರ್ಥಿಕ ಸಹಾಯ ಪಡೆಯುವುದನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದೆ.

    ಸಾಲದ ಸುಳಿಯಲ್ಲಿ ಸಿಲುಕಿರುವ ಮಾಲ್ಡೀವ್ಸ್‌ ಆರ್ಥಿಕತೆ ಕುಸಿಯುವ ಲಕ್ಷಣಗಳು ಕಾಣಿಸುತ್ತಿವೆ. ಸಾಲದ ಜೊತೆಗೆ ಆದಾಯ ವೃದ್ಧಿಸುವ ಯಾವುದೇ ಯೋಜನೆಗಳನ್ನು ಸರ್ಕಾರ ಕೈಗೊಂಡಿಲ್ಲ. ಹೀಗಾಗಿ ರಾಷ್ಟ್ರದ ಪ್ರಮುಖ ಆದಾಯದ ಮೂಲವಾಗಿರುವ ಪ್ರವಾಸೋದ್ಯಮಕ್ಕೆ (Tourism) ಪೂರಕವಾಗಿರುವ ಯೋಜನೆಗಳನ್ನು ಕೂಡಲೇ ರೂಪಿಸಬೇಕು ಎಂದು ಐಎಂಎಫ್‌ ಹೇಳಿದೆ. ಇದನ್ನೂ ಓದಿ: ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ 

     

    ಕಳೆದ ವರ್ಷ ಅಂತ್ಯಕ್ಕೆ ಮಾಲ್ಡೀವ್ಸ್‌ ವಿದೇಶಗಳಿಂದ 4.038 ಬಿಲಿಯನ್‌ ಡಾಲರ್‌ (ಅಂದಾಜು 33.71 ಸಾವಿರ ಕೋಟಿ ರೂ.) ಸಾಲ ಪಡೆದಿದೆ. ಇದು ಮಾಲ್ಡೀವ್ಸ್‌ ಜಿಡಿಪಿಗಿಂತ 118%ರಷ್ಟು ಹೆಚ್ಚಿದೆ. ಈ ಪೈಕಿ 25% ರಷ್ಟು ಸಾಲವನ್ನು ಚೀನಾದ ಎಕ್ಸ್‌ಪೋರ್ಟ್‌-ಇಂಪೋರ್ಟ್‌ ಬ್ಯಾಂಕ್‌ನಿಂದಲೇ ಪಡೆದಿದೆ.

    ಭಾರತ ವಿರೋಧಿಯಾಗಿರುವ ಮೊಹಮ್ಮದ್ ಮುಯಿಜು ಅಧ್ಯಕ್ಷರಾದ ಬಳಿಕ ಚೀನಾಗೆ ಭೇಟಿ ನೀಡಿ ಸಹಾಯ ಪಡೆದ್ದರು. ಚುನಾವಣಾ ಪ್ರಚಾರದಲ್ಲಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ಹೊರ ಹಾಕುವುದಾಗಿ ಘೋಷಿಸಿದ್ದರು. ಅದರಂತೆ ಭಾರತದ ಸೈನಿಕರು ಈಗ ಮಾಲ್ಡೀವ್ಸ್‌ ತೊರೆದಿದ್ದು ಚೀನಾ ಈಗ ರಕ್ಷಣಾ ಸಹಾಯ ಒದಗಿಸುವುದಾಗಿ ಹೇಳಿದೆ.‌ ಇದನ್ನೂ ಓದಿ: ಚೀನಾದ ತಾಳಕ್ಕೆ ಕುಣಿಯುತ್ತಿದ್ದರೂ ಮಾನವೀಯ ನೆರವು – ಭಾರತದ ಸಹಾಯಕ್ಕೆ ಧನ್ಯವಾದ ಹೇಳಿದ ಮಾಲ್ಡೀವ್ಸ್‌

    ಚೀನಾದಿಂದ ಭಾರೀ ಹೂಡಿಕೆ
    ಮಾಲ್ಡೀವ್ಸ್‌ನ ಐದಕ್ಕೂ ಹೆಚ್ಚು ದ್ವೀಪಗಳನ್ನು ಚೀನಾದ ಕಂಪನಿಗಳು 50 ವರ್ಷಗಳಿಗೆ ಗುತ್ತಿಗೆ ಪಡೆದಿವೆ. ಮಾಲೆ ಸಮುದ್ರ ಸೇತುವೆ ಅಭಿವೃದ್ಧಿ ಯೋಜನೆಯ ವೆಚ್ಚದ 50% ರಷ್ಟು ಹಣವನ್ನು ಚೀನಾವೇ ಭರಿಸಿದೆ. ಅಷ್ಟೇ ಅಲ್ಲದೇ 50% ರಷ್ಟು ವೆಚ್ಚವನ್ನು ಸಾಲದ ರೂಪದಲ್ಲಿ ನೀಡಿದೆ. ಚೀನಾ -ಮಾಲ್ಡೀವ್ಸ್‌ ಸ್ನೇಹ ಸೇತುವೆ, ವಿಮಾನ ನಿಲ್ದಾಣ ನವೀಕರಣ, ಮನೆಗಳ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳಿಗೆ ಚೀನಾ ಸರ್ಕಾರ ಬಿಲಿಯನ್‌ಗಟ್ಟಲೇ ಡಾಲರ್‌ ಹಣವನ್ನು ಹೂಡಿಕೆ ಮಾಡಿದೆ. ಮಾಲ್ಡೀವ್ಸ್‌ ಮತ್ತು ಚೀನಾದ ಸಂಬಂಧ ಈಗ ಆರಂಭವಾಗಿದ್ದಲ್ಲ. 1975 ರಿಂದಲೇ ಚೀನಾ ಮಾಲ್ಡೀವ್ಸ್‌ನಲ್ಲಿ ಹೂಡಿಕೆ ಮಾಡಲು ಆರಂಭಿಸಿತ್ತು.

     
    ಏನಿದು ಚೀನಾದ ಕುತಂತ್ರ?
    ವ್ಯಾಪಾರ ಮಾರುಕಟ್ಟೆಯನ್ನು ವಿಸ್ತರಿಸುವ ನೆಪದಲ್ಲಿ ಆರಂಭಿಸಿರುವ ಒನ್‌ ಬೆಲ್ಟ್‌ ಒನ್‌ ರೋಡ್‌ ಯೋಜನೆ ಮೂಲಕ ಚೀನಾ ಇಡೀ ವಿಶ್ವವನ್ನೇ ಆಳಲು ಹೊರಟಿದೆ. ಈ ಯೋಜನೆಗೆ ಈಗ 10 ವರ್ಷ ಪೂರ್ಣಗೊಂಡಿದೆ. ಸರಳವಾಗಿ ಹೇಳುವುದಾರೆ ರಸ್ತೆ, ರೈಲು, ಹಡಗಿನ ಮೂಲಕ ವಸ್ತುಗಳನ್ನು ಸಾಗಿಸಲು ಆರಂಭವಾದ ಯೋಜನೆ ಇದು. ರಷ್ಯಾ, ಸೌದಿ ಅರೇಬಿಯಾ, ಕತಾರ್‌, ಇರಾನ್‌, ಅರ್ಜೈಂಟಿನಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ ಸೇರಿದಂತೆ ಬರೋಬ್ಬರಿ 150 ದೇಶಗಳು ಈ ಯೋಜನೆಗೆ ಸಹಿ ಹಾಕಿದೆ.

    ಯೋಜನೆಯನ್ನು ಸರಳವಾಗಿ ವಿವರಿಸುವುದಾರೆ ಹಿಂದುಳಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಚೀನಾ ಭಾರೀ ದೊಡ್ಡ ಮೊತ್ತದ ಯೋಜನೆಯನ್ನು ಕೈಗೊಳ್ಳುತ್ತದೆ. ಈ ಯೋಜನೆಗೆ ಅರ್ಧದಷ್ಟು ಹಣವನ್ನು ಚೀನಾ ಹೂಡಿಕೆ ಮಾಡಿದರೆ ಉಳಿದ ಅರ್ಧ ಹಣವನ್ನು ಆ ದೇಶಗಳು ಹೂಡಿಕೆ ಮಾಡಬೇಕು. ಆ ದೇಶಗಳಿಗೆ ಹಣ ಹೂಡಿಕೆ ಮಾಡಲು ಶಕ್ತಿ ಇಲ್ಲದ ಕಾರಣ ಚೀನಾದ ಬ್ಯಾಂಕ್‌ಗಳೇ ದೇಶಗಳಿಗೆ ಸಾಲ ನೀಡುತ್ತದೆ. ಸಾಲ ಪಾವತಿ ಆಗದೇ ಇದ್ದಾಗ ಯೋಜನೆಯನ್ನೇ ಚೀನಾ ಸಂಪೂರ್ಣ ಸ್ವಾಧೀನಪಡಿಸಿಕೊಳ್ಳುತ್ತದೆ. ಚೀನಾ -ಪಾಕಿಸ್ತಾನ ಎಕಾನಮಿಕ್‌ ಕಾರಿಡಾರ್‌ ಹೆಸರಿನಲ್ಲಿ ಪಾಕ್ ಸಾಲ ಪಡೆದುಕೊಂಡಿತ್ತು ಸದ್ಯ ಅಂದಾಜು 30 ಬಿಲಿಯನ್‌ ಡಾಲರ್‌ ಹಣವನ್ನು ಪಾಕಿಸ್ತಾನ ಚೀನಾಗೆ ಪಾವತಿ ಮಾಡಬೇಕಿದೆ. ಚೀನಾ ಹಣವನ್ನು ಪಾವತಿ ಮಾಡಲು ಕನಿಷ್ಟ 40 ವರ್ಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

    ಶ್ರೀಲಂಕಾದ ಹಂಬನ್‌ತೋಟ ಬಂದರನ್ನು ಚೀನಾ ಸಹಕಾರದಿಂದ ಅಭಿವೃದ್ಧಿ ಪಡಿಸಲಾಗಿದೆ. ಅಭಿವೃದ್ಧಿ ಪಡಿಸಿದರೂ ನಿರೀಕ್ಷಿತ ಪ್ರಮಾಣದ ಲಾಭವಾಗಿಲ್ಲ. ಸಾಲ ಮರುಪಾವತಿ ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ 2017ರಲ್ಲಿ 99 ವರ್ಷಗಳ ಕಾಲ ಚೀನಾದ ಚೀನಾ ಮರ್ಚಂಟ್‌ ಪೋರ್ಟ್‌ ಹೋಲ್ಡಿಂಗ್‌ಗೆ ಲೀಸ್‌ಗೆ ನೀಡಲಾಗಿದೆ.

    ಪಾಕಿಸ್ತಾನ, ಶ್ರೀಲಂಕಾ ಮಾತ್ರವಲ್ಲ ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡ, ಮಲೇಷ್ಯಾ ಸೇರಿದಂತೆ ಹಲವು ದೇಶಗಳು ಸಾಲದ ಸುಳಿಯಲ್ಲಿ ಸಿಲುಕಿವೆ. ಈ ಕಾರಣಕ್ಕೆ ಚೀನಾದ ಒನ್‌ ರೋಡ್‌, ಒನ್‌ ಬೆಲ್ಟ್‌ ಈಗ ಡೆಟ್‌ ಟ್ರ್ಯಾಪ್‌ ಡಿಪ್ಲೊಮಸಿ ಎಂದೇ ಎಂದೇ ಕುಖ್ಯಾತಿ ಪಡೆದಿದೆ.

     

  • ಸಾಲದ ಕಾಟಕ್ಕೆ ಬೇಸತ್ತು, ಪತ್ನಿಯನ್ನ ನೇಣುಹಾಕಿ ಕೊಂದು ತಾನೂ ಆತ್ಮಹತ್ಯೆ

    ಸಾಲದ ಕಾಟಕ್ಕೆ ಬೇಸತ್ತು, ಪತ್ನಿಯನ್ನ ನೇಣುಹಾಕಿ ಕೊಂದು ತಾನೂ ಆತ್ಮಹತ್ಯೆ

    ಬಳ್ಳಾರಿ: ಸಾಲದ (Loan) ಕಾಟಕ್ಕೆ ಬೇಸತ್ತು, ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಳ್ಳಾರಿಯ (Bellary) ಬಂಡಿಹಟ್ಟಿಯಲ್ಲಿ ನಡೆದಿದೆ.

    ನಗರದ ಆಂಜನೇಯ ದೇವಸ್ಥಾನ ಬಳಿ ನಿವಾಸಿಗಳಾದ ಈರಣ್ಣ (28) ತನ್ನ ಪತ್ನಿ ದುರ್ಗಮ್ಮಳನ್ನ (25) ನೇಣು ಹಾಕಿ ಕೊಂದು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಈರಣ್ಣನ ಈ ಕೆಟ್ಟ ನಿರ್ಧಾರದಿಂದ ರಾಕೇಶ್ ಎಂಬ 16 ತಿಂಗಳ ಮಗು ಅನಾಥವಾಗಿದೆ. ಇದನ್ನೂ ಓದಿ: ಕುಡಿದು ದೇಗುಲದ ಗೋಡೆಗೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ಸಿಡೆಂಟ್ ಮಾಡಿ ಬಾಲಕನ ಕೊಲೆ

    ಮೃತ ಈರಣ್ಣನಿಗೆ ಕುಡಿಯುವ ಚಟ ಇತ್ತು. ಅದಕ್ಕಾಗಿ ಪತ್ನಿ ಬಳಿ ಪದೇ ಪದೇ ಹಣ ಕೇಳುತ್ತಿದ್ದ. ಪತ್ನಿ ಅಲಲ್ಲಿ ಸಾಲ ಮಾಡಿ ಪತಿಗೆ ಹಣ ನೀಡಿದ್ದಳು. ಆದ್ರೆ ಹೆಂಡತಿ ಬಳಿ ಹಣ ಪಡೆದ ಪತಿ, ಈರಣ್ಣಾ ಕುಡಿದು ಹಾಳು ಮಾಡಿದ್ದಾನೆ. ಕೊನೆಗೆ ಸಾಲಗಾರರು ಮನೆಗೆ ಬಂದು ಹಣ ಕೇಳುತ್ತಾರೆ, ಎಲ್ಲಿಂದ ಹಣ ತಂದು ಕೊಡುತ್ತೀಯಾ ಎಂದು ಪತ್ನಿ ದುರ್ಗಮ್ಮ, ಪತಿಯ ಜೊತೆ ಜಗಳ ಮಾಡಿದ್ದಾಳೆ.‌ ಇದರಿಂದ ಭಯಪಟ್ಟು ಸಾಲಗಾರರ ಕಾಟ ತಪ್ಪಿಸಿಕೊಳ್ಳಲು ಪತ್ನಿಯನ್ನ ನೇಣು ಹಾಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಈ ಸಂಭಂದ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ (Cowl Bazar Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗ್ಯಾಂಗ್ ರೇಪ್‌ಗೆ ಒಳಗಾಗಿ ತಪ್ಪಿಸಿಕೊಂಡ ಮಹಿಳೆ- ಬೆತ್ತಲಾಗಿ ಸಹಾಯಕ್ಕೆ ಅಂಗಲಾಚಿದ್ರೂ ಹುಚ್ಚಿ ಎಂದುಕೊಂಡ ಜನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖ್ಯಾತ ಕಲಾ ನಿರ್ದೇಶಕ ದೇಸಾಯಿ ಆತ್ಮಹತ್ಯೆಗೆ ಕಾರಣ ಬಹಿರಂಗ

    ಖ್ಯಾತ ಕಲಾ ನಿರ್ದೇಶಕ ದೇಸಾಯಿ ಆತ್ಮಹತ್ಯೆಗೆ ಕಾರಣ ಬಹಿರಂಗ

    ಬಾಲಿವುಡ್ ನ (Bollywood)ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಮೊನ್ನೆಯಷ್ಟೇ ನೇಣಿಗೆ ಶರಣಾಗಿದ್ದರು. ಕಲಾನಿರ್ದೇಶನಕ್ಕಾಗಿ (Art Director) ಬರೋಬ್ಬರಿ ನಾಲ್ಕು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಹಾಗೂ ಸೂಪರ್ ಹಿಟ್ ಸಿನಿಮಾಗಳಿಗೆ ಕೆಲಸ ಮಾಡಿದ್ದ ಮತ್ತೂ ಸ್ವಂತ ಸ್ಟುಡಿಯೋ ಹೊಂದಿದ್ದ ದೇಸಾಯಿ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ಆತಂಕಕ್ಕೆ ದೂಡಿತ್ತು. ಇದೀಗ ಅದರ ಹಿಂದಿನ ಕಾರಣ ಬಹಿರಂಗವಾಗಿದೆ.

    ನಿತಿನ್ ದೇಸಾಯಿ ತಮ್ಮದೇ ಆದ ‘ಎನ್.ಡಿ ಸ್ಟುಡಿಯೋ’ ಹೊಂದಿದ್ದರು. ಈ ಸ್ಟುಡಿಯೋಗಾಗಿ ಅವರು ಸಾಲವನ್ನು ಪಡೆದಿದ್ದರು. ಕಾಲಮಿತಿಯೊಳಗೆ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಟುಡಿಯೋಗಾಗಿ ಇವರು 252 ಕೋಟಿ ರೂಪಾಯಿ ಸಾಲ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಸಾಲ ತೀರಿಸಲು ಆಗದ್ದಕ್ಕೆ ನ್ಯಾಯಾಲಯ ಕಳೆದ ವಾರವಷ್ಟೇ ಅವರಿಗೆ ನೋಟಿಸ್ ನೀಡಿತ್ತು.  ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

    ಬಾಲಿವುಡ್ (Bollywood)ನಲ್ಲಿ ಕಲಾ ನಿರ್ದೇಶಕರಾಗಿ, ನಿರ್ದೇಶಕರಾಗಿ, ಪ್ರೊಡಕ್ಷನ್ ಡಿಸೈನರ್ ಆಗಿ ಹೀಗೆ ವಿವಿಧ ವಿಭಾಗಗಳಲ್ಲಿ ದೇಸಾಯಿ ಕೆಲಸ ಮಾಡಿದ್ದರು. ಅಲ್ಲದೇ, ಹಿಂದಿ ಮತ್ತು ಮರಾಠಿ ಕಿರುತೆರೆಯಲ್ಲೂ ಸಾಕಷ್ಟು ಕೆಲಸ ಮಾಡಿದ್ದರು. ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಖ್ಯಾತ ನಿರ್ದೇಶಕರ ಸಿನಿಮಾಗಳಿಗೆ ಸೆಟ್ ಹಾಕಿದ್ದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್- ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ಆಗಸ್ಟ್ 9‍ಕ್ಕೆ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಅಷ್ಟರಲ್ಲಿ ಇಂಥದ್ದೊಂದು ತಪ್ಪು ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎನ್ನುತ್ತಾರೆ ದೇಸಾಯಿ ಆಪ್ತರು. ಕಲಾ ನಿರ್ದೇಶನಕ್ಕಾಗಿಯೇ ಅವರು 4 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಮೊನ್ನೆ ಮುಂಬೈನ ಕರ್ಜತ್ ಎನ್.ಡಿ ಸ್ಟುಡಿಯೋದಲ್ಲಿ ನೇಣಿಗೆ  (Suicide) ಶರಣಾಗಿದ್ದಾರೆ.

     

    ಜೋದಾ ಅಕ್ಬರ್, ಲಗಾನ್, ಹಮ್ ದಿಲ್ ದೆ ಜುಕೆ ಸನಂ ಹೀಗೆ ಸಾಕಷ್ಟು ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದ ನಿತಿನ್, ಬೃಹತ್ ಸೆಟ್ ಗಳಲ್ಲಿ ನಿರ್ಮಾಣ ಮಾಡುವಲ್ಲಿ ದೇಸಾಯಿ ಪಳಗಿದ್ದರು. ಅನೇಕರು ನಿತಿನ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

    ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

    ಬಳ್ಳಾರಿ: ಶಾಲೆ ಆರಂಭವಾದ ಎರಡನೆ ದಿನವೇ ಮಕ್ಕಳಿಗೆ ಶಾಕ್ ಎದುರಾಗಿದೆ. ಆಡಳಿತ ಮಂಡಳಿ ಮಾಡಿರುವ ಎಡವಟ್ಟಿನಿಂದ ಮಕ್ಕಳಿಗೆ ಸಮಸ್ಯೆಯಾಗಿದೆ.

    ಹೌದು. ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಬ್ಯಾಂಕ್ ಸಿಬ್ಬಂದಿ ಶಾಲೆಯನ್ನೇ ಸೀಜ್ (School Seize) ಮಾಡಿದ ಘಟನೆಯೊಂದು ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿರುವ ರಾಜೀವ್ ಗಾಂಧಿ ಸ್ಮಾರಕ ವಿದ್ಯಾ ಸಂಸ್ಥೆ ಸೀಜ್ ಆಗಿರುವ ಸ್ಕೂಲ್. ಶಾಲೆ ಸೀಜ್ ಆಗಿರುವ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಯ ಹೊರಗಡೆ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ಬಂದಿದೆ.

    ಎಂ. ಸವಿತಾ, ಎಂ ಕೃಷ್ಣಕಿಶೋರ್ ರೆಡ್ಡಿ, ಎಂ.ಸತ್ಯನಾರಾಣ ಸೇರಿದಂತೆ ಆಡಳಿತ ಮಂಡಳಿಯವರು ಶಾಲೆಯ ಮೇಲೆ ಸಾಲ ಪಡೆದಿದ್ದಾರೆ. ಆಂಧ್ರ ಮೂಲದ ಇನ್‍ಕ್ರೆಡ್ ಫೈನಾನ್ಸಿಯಲ್ ಸರ್ವೀಸ್ ಲಿಮಿಟೆಡ್‍ನಿಂದ ಒಂದು ಕೋಟಿಗೂ ಅಧಿಕ ಮೊತ್ತದ ಸಾಲವನ್ನು ಪಡೆದುಕೊಂಡಿದ್ದಾರೆ. ಆ ಬಳಿಕ ಸರಿಯಾಗಿ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ನ್ಯಾಯಲಯ (Court) ದಿಂದ ಆದೇಶ ತಂದು ಸೀಜ್ ಮಾಡಿದ್ದಾರೆ. ಇದನ್ನೂ ಓದಿ: ಸ್ಟೇಜ್‌ನಲ್ಲೇ ಎಡವಿ ಬಿದ್ದ US ಅಧ್ಯಕ್ಷ ಜೋ ಬೈಡನ್‌ – ವೀಡಿಯೋ ವೈರಲ್‌

    ಆಡಳಿತ ಮಂಡಳಿ ಹಾಗೂ ಬ್ಯಾಂಕ್ (Bank) ನವರ ವ್ಯವಹಾರದಿಂದಾಗಿ ಇಂದು ಮಕ್ಕಳು ಪರದಾಡುವಂತಾಗಿದೆ. ಮಕ್ಕಳನ್ನು ಹೊರಗಡೆ ಕೂರಿಸದೇ ಬೇರೆಡೆ ವ್ಯವಸ್ಥೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಒಂದು ವೇಳೆ ವ್ಯವಸ್ಥೆ ಮಾಡದಿದ್ದರೆ ಕ್ರಮದ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ. ಇತ್ತ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಹಿಡಿ ಶಾಪ ಹಾಕುತ್ತಿದ್ದಾರೆ.