Tag: deemed university

  • ಡೀಮ್ಡ್ ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್ ಖಾನ್‌ನನ್ನು ವಜಾಗೊಳಿಸಿದ ಕೇರಳ ಸರ್ಕಾರ

    ಡೀಮ್ಡ್ ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್ ಖಾನ್‌ನನ್ನು ವಜಾಗೊಳಿಸಿದ ಕೇರಳ ಸರ್ಕಾರ

    ತಿರುವನಂತಪುರಂ: ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ (Deemed University) ಕುಲಪತಿ (Chancellor) ಸ್ಥಾನದಿಂದ ಕೇರಳ (Kerala) ರಾಜ್ಯಪಾಲ (Governor) ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಅವರನ್ನು ರಾಜ್ಯ ಸರ್ಕಾರ ಗುರುವಾರ ವಜಾಗೊಳಿಸಿದೆ.

    ಕೇರಳದಲ್ಲಿ ಹಲವು ದಿನಗಳಿಂದ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ನಡೆಯುತ್ತಿದ್ದು, ಇದೀಗ ತಾರಕಕ್ಕೇರಿದೆ. ಬುಧವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ವಜಾಗೊಳಿಸಲು ಕೇರಳದ ಎಡ ನೇತೃತ್ವದ ಸರ್ಕಾರ (LDF) ನಿರ್ಧರಿಸಿದ್ದು, ಇಂದು ಅವರನ್ನು ವಜಾಗೊಳಿಸಿದೆ. ಇದನ್ನೂ ಓದಿ: ಮೋದಿ ಬೆಂಗಳೂರು ಡೈರಿ: ಎಷ್ಟು ಗಂಟೆಗೆ ಏನು ಕಾರ್ಯಕ್ರಮ? ಯಾವೆಲ್ಲ ರಸ್ತೆಗಳು ಬಂದ್‌?

    ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಹೆಚ್ಚು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ವಜಾಗೊಳಿಸಲಾಗಿದೆ.

    ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆಡಳಿತ ಇನ್ನು ಮುಂದೆ ರಾಜ್ಯದ ವಿಶ್ವವಿದ್ಯಾಲಯಗಳ ಚುಕ್ಕಾಣಿ ಹಿಡಿಯಲು ರಾಜ್ಯಪಾಲರು ಬಯಸುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬೆಂಗಳೂರು, ಹೈದರಾಬಾದ್‌ನಲ್ಲೂ ಇಂದಿನಿಂದ ಜಿಯೋ ಟ್ರೂ 5G ಲಭ್ಯ

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ ಡೀಮ್ಡ್ ವಿವಿ ಮಾನ್ಯತೆ: ಬೊಮ್ಮಾಯಿ

    ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ ಡೀಮ್ಡ್ ವಿವಿ ಮಾನ್ಯತೆ: ಬೊಮ್ಮಾಯಿ

    ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್‍ಗೆ ಡೀಮ್ಡ್ ವಿಶ್ವವಿದ್ಯಾಲಯ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಚಿತ್ರಕಲಾ ಪರಿಷತ್ ಆಯೋಜಿಸಿದ್ದ 19ನೇ ಚಿತ್ರಸಂತೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಲಾ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಕರ್ನಾಟಕ ಚಿತ್ರ ಕಲಾಪರಿಷತ್‍ಗೆ ಡೀಮ್ಡ್ ವಿಶ್ವವಿದ್ಯಾಲಯ ಮಾನ್ಯತೆ ನೀಡಲಾಗುತ್ತದೆ. ಇದಕ್ಕಾಗಿ ವಿಶೇಷ ಕಾಯ್ದೆ ತಂದು ಮುಂದಿನ ಅಧಿವೇಶನದಲ್ಲಿ ಪಾಸ್ ಮಾಡಿಕೊಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಇದನ್ನೂ ಓದಿ: ತರಬೇತಿ ನಿರತ ಐಆರ್‌ಬಿ ಪೊಲೀಸ್ ಹೃದಯಾಘಾತದಿಂದ ಸಾವು

    ಇದಲ್ಲದೆ ರಾಜ್ಯದ 6 ಪ್ರಾದೇಶಿಕ ಜಿಲ್ಲೆಗಳಲ್ಲಿ ಚಿತ್ರ ಕಲಾ ಗ್ಯಾಲರಿ ಸ್ಥಾಪನೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಸ್ವತಃ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು. ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ಸರ್ಕಾರದ ಉದ್ದೇಶ. ಕಲೆಗೆ ಬೆಲೆ ಕೊಡುವ ಕೆಲಸ ಸರ್ಕಾರ ಮಾಡುತ್ತದೆ. ಹೀಗಾಗಿ ರಾಜ್ಯದ 6 ಪ್ರಾದೇಶಿಕ ಜಿಲ್ಲೆಗಳಲ್ಲಿ ಚಿತ್ರ ಕಲಾ ಗ್ಯಾಲರಿ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಪ್ರತಿ ಜಿಲ್ಲೆಗಳಲ್ಲಿ ಕಲೆಯನ್ನು ಪ್ರಚಾರಪಡಿಸುವ ಕೆಲಸಕ್ಕೂ ಸರ್ಕಾರ ಸಹಕಾರ ನೀಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ಚಿತ್ರಸಂತೆ ಉದ್ಘಾಟನೆ ಮಾಡಿದ ಮುಖ್ಯಮಂತ್ರಿಗಳು ಚಿತ್ರಸಂತೆಯ ವೀಕ್ಷಣೆ ಮಾಡಿದರು. ಕಲಾವಿದರ ಕಲಾ ಕೃತಿಗೆ ಮನಸೋತರು. ಚಿತ್ರಸಂತೆ ವೀಕ್ಷಣೆ ವೇಳೆ ಐಸ್ ಕ್ರೀಂ ಹುಡುಗನಿಂದ ಜಾಯ್ ಐಸ್ ಕ್ರೀಂ ಕ್ಯಾಂಡಿ ಖದೀರಿ ಮಾಡಿ ಸವಿದರು.

  • ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ: ಡೀಮ್ಡ್ ಅಧ್ಯಕ್ಷ

    ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ: ಡೀಮ್ಡ್ ಅಧ್ಯಕ್ಷ

    ಬೆಳಗಾವಿ: ಯದ್ಧಪೀಡಿತ ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗಿ ವಾಪಸ್ಸಾಗಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುತ್ತದೆ ಎಂದು ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ತಿಳಿಸಿದ್ದಾರೆ.

    ಉಕ್ರೇನ್‌ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಶಿಕ್ಷಣ ಅರ್ಧಕ್ಕೆ ತೊರೆದು ಬಂದಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಲಾಗುತ್ತದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದ ಸಾವಿರಾರು ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕೆ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಧ್ವಜದಿಂದಾನೆ ನಾವು ಇಂದು ಬದುಕಿ ತಾಯ್ನಾಡಿಗೆ ಬಂದಿದ್ದೇವೆ: ವಿದ್ಯಾರ್ಥಿ

    ಕೇಂದ್ರ ಸರ್ಕಾರ ಆಪರೇಶನ್ ಗಂಗಾ ಮೂಲಕ ಸಾವಿರಾರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆತರುವಲ್ಲಿ ಅಪ್ರತಿಮವಾದ ಕಾರ್ಯವನ್ನು ನಿರ್ವಹಿಸಿದ್ದಾರೆ. ತನ್ನಿಮಿತ್ತ ಪ್ರಧಾನಿಯವರಿಗೆ ಹಾಗೂ ಅವರ ಸಮಸ್ತ ತಂಡಕ್ಕೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆಂದು ಹೇಳಿದ್ದಾರೆ. ಇದನ್ನೂ ಓದಿ: ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾಯ್ತು- ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು: ಅನೀಫ್ರೆಡ್ ಡಿಸೋಜಾ

    ಪ್ರಧಾನಿ ಸೂಚಿಸಿರುವಂತೆ ಉಕ್ರೇನ್‌ನಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮಧ್ಯದಲ್ಲಿಯೇ ತೊರೆದು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಆ ವೈದ್ಯ ವಿದ್ಯಾರ್ಥಿಗಳ ಮುಂದಿನ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಸೂಚನೆ ಹಾಗೂ ನಿಯಮಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ಕಲಿಯುತ್ತಿದ್ದ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಪ್ರವೇಶವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

  • ಪರೀಕ್ಷೆ ನಡೆಸಲು ಮುಂದಾಗಿದ್ದ ಕ್ರೈಸ್ಟ್‌ ಸೇರಿ ಡೀಮ್ಡ್‌ ವಿವಿಗಳಿಗೆ ಸರ್ಕಾರದಿಂದ ಚಾಟಿ

    ಪರೀಕ್ಷೆ ನಡೆಸಲು ಮುಂದಾಗಿದ್ದ ಕ್ರೈಸ್ಟ್‌ ಸೇರಿ ಡೀಮ್ಡ್‌ ವಿವಿಗಳಿಗೆ ಸರ್ಕಾರದಿಂದ ಚಾಟಿ

    ಬೆಂಗಳೂರು: ಕೋವಿಡ್‌ 19 ಸಮಯದಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲು ಮುಂದಾಗುತ್ತಿದ್ದ ಬೆಂಗಳೂರಿನ ಕ್ರೈಸ್ಟ್‌ ಸೇರಿ, ಡೀಮ್ಡ್‌ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಚಾಟಿ ಬೀಸಿದೆ.

    ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಇನ್ಯಾವುದೇ ತರಗತಿಗಳಿಗೆ ಪರೀಕ್ಷೆ ನಡೆಸದಂತೆ ಕ್ರೈಸ್ಟ್ ವಿಶ್ವವಿದ್ಯಾಲಯ ಸೇರಿ ಎಲ್ಲಾ ಡೀಮ್ಡ್ ವಿವಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಇಂಟರ್ನಲ್ ಅಸಸ್ಮೆಟ್ ಶೇ.50 ಹಾಗೂ ಹಿಂದಿನ ಪರೀಕ್ಷೆಗಳಿಂದ ಶೇ.50 ಅಂಕದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್‌ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ.

    ಅಂತಿಮ ವರ್ಷ ಬಿಟ್ಟು ಉಳಿದ ಎಲ್ಲ ತರಗತಿಯ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕ್ರೈಸ್ಟ್‌ ವಿಶ್ವವಿದ್ಯಾಲಯ ಪದವಿ ತರಗತಿಗಳಿಗೆ ಆನ್‌ಲೈನ್‌ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದು ಭಾರೀ ಟೀಕೆಗೆ ಗುರಿಯಾಗಿತ್ತು.

    ಈಗಾಗಲೇ ಅಂತಿಮ ವರ್ಷದ ಪದವಿ ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಯುಜಿಸಿ ಮತ್ತು ರಾಜ್ಯ ಸರ್ಕಾರ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಹೀಗಿದ್ದರೂ ಸ್ವಾಯತ್ತ ಸಂಸ್ಥೆಯಾಗಿರುವ ಕ್ರೈಸ್ಟ್‌ ವಿಶ್ವವಿದ್ಯಾಲಯ ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶಗಳನ್ನು ಗಾಳಿಗೆ ತೂರಿ ಪರೀಕ್ಷೆ ನಡೆಸಲು ಮುಂದಾಗಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಆನ್‌ಲೈನ್‌ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕದ ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ಡೈರಿ ವೃತ್ತದಿಂದ ಕಾಲೇಜಿನವರೆಗೂ ಜಾಥಾ ನಡೆಸಿ ಪ್ರತಿಭಟನೆ ನಡೆಸಿದ್ದರು.