Tag: Deepa Cholan

  • ಧಾರವಾಡ ನೂತನ ಡಿಸಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ

    ಧಾರವಾಡ ನೂತನ ಡಿಸಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ

    – ಜಿಲ್ಲಾಧಿಕಾರಿ ವರ್ಗಾವಣೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

    ಧಾರವಾಡ: ಕೊರೊನಾ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ. ದೀಪಾ ಚೋಳನ್ ಅವರು ಕಳೆದ ಎರಡು ವರ್ಷಗಳಿಂದ ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದರು. ರಾಜ್ಯ ಸರ್ಕಾರ ದೀಪಾ ಚೋಳನ್ ಅವರನ್ನು ಸರ್ವ ಶಿಕ್ಷಣ ಅಭಿಯಾದ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.

    ಧಾರವಾಡ ನೂತನ ಜಿಲ್ಲಾಧಿಕಾರಿಗಳಾಗಿ ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು. ಇತ್ತ ಕೊರೊನಾ ದಿನೇ ದಿನೇ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಾವು ತಡೆಯುವ ಕೆಲಸ ಮಾಡಲಿದ್ದೇವೆ ಎಂದು ನೂತನ ಜಿಲ್ಲಾಧಿಕಾರಿ ಹೇಳಿದರು.

    ಧಾರವಾಡ ಜಿಲ್ಲೆಯ ಅಧಿಕಾರಿಗಳ ತಂಡ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಇಲ್ಲಿಯ ಜನರು ಕೂಡಾ ಅಧಿಕಾರಿಗಳ ಕಾರ್ಯಕ್ಕೆ ಸಹಕಾರಿಯಾಗಿದ್ದು, ಅಧಿಕಾರಿಗಳ ಜೊತೆ ಸಭೆ ಮಾಡಿ ಮಾಹಿತಿ ಪಡೆದು ಕೊರೊನಾ ತಡೆಯುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು. ಮತ್ತೊಂದು ಕಡೆ ದೀಪಾ ಚೋಳನ್ ಅವರನ್ನ ವರ್ಗಾವಣೆ ಮಾಡಿದ್ದಕ್ಕೆ ಧಾರವಾಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಕೂಡಾ ನಡೆಸಿದ ಘಟನೆ ನಡೆಯಿತು.ಧಾರವಾಡ, ಪಬ್ಲಿಕ್ ಟಿವಿ, ಕೊರೊನಾ, ದೀಪಾ ಚೋಳನ್, ನಿತೇಶ ಪಾಟೀಲ

  • ಕೊರೊನಾದಿಂದ ಗುಣಮುಖವಾಗಿ 63 ವರ್ಷದ ವೃದ್ಧ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೊರೊನಾದಿಂದ ಗುಣಮುಖವಾಗಿ 63 ವರ್ಷದ ವೃದ್ಧ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಧಾರವಾಡ: ಕೋವಿಡ್-19ರಿಂದ ಗುಣಮುಖರಾಗಿರುವ 63 ವರ್ಷದ ವೃದ್ಧ ರೋಗಿ-363 ಅವರನ್ನು ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

    ಸ್ಮಶಾನ ಕಾಯುತಿದ್ದ ರೋಗಿ-363 ಅವರಿಗೆ ದೆಹಲಿಗೆ ಹೋಗಿ ಬಂದಿದ್ದ ವ್ಯಾಪಾರಿಯಿಂದ ಕೊರೊನಾ ತಗುಲಿತ್ತು. ಹುಬ್ಬಳ್ಳಿ ಕರಾಡಿ ಓಣಿಯ ನಿವಾಸಿಯಾಗಿರುವ ರೋಗಿ-363 ಅವರು ಸೋಂಕಿನಿಂದ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ನೆಗೆಟಿವ್ ವರದಿ ಬಂದಿದೆ. ಎಕ್ಸ್-ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

    ಜಿಲ್ಲೆಯಲ್ಲಿ ಇದುವರೆಗೆ 7 ಮಂದಿ ಕೋವಿಡ್-19ರಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯ 5 ಮಂದಿ ಹಾಗೂ ಬಾಗಲಕೋಟೆ ಜಿಲ್ಲೆ ಬದಾಮಿಯ ಒಬ್ಬರು ಸೋಂಕಿತರು ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಕೊರೊನಾ ಗುಣಲಕ್ಷಣ ಇಲ್ಲದಿದ್ರೂ 14 ದಿನ ಹೊರ ಬರಲೇಬೇಡಿ: ಡಿಸಿ ಮನವಿ

    ಕೊರೊನಾ ಗುಣಲಕ್ಷಣ ಇಲ್ಲದಿದ್ರೂ 14 ದಿನ ಹೊರ ಬರಲೇಬೇಡಿ: ಡಿಸಿ ಮನವಿ

    ಧಾರವಾಡ: ಕೊರೊನಾ ಎಫೆಕ್ಟ್ ಆಗಿರುವ ದೇಶಗಳಿಂದ ಧಾರವಾಡ ಜಿಲ್ಲೆಗೆ ಜನರು ಬರುತ್ತಿದ್ದಾರೆ. ಹೀಗಾಗಿ ಕೊರೊನಾ ಗುಣಲಕ್ಷಣ ಇಲ್ಲದಿದ್ದರೂ ಕೂಡ, 14 ದಿನಗಳ ಕಾಲ ಮನೆ ಬಿಟ್ಟು ಬರಲೇಬೇಡಿ ಅಂತ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿಕೊಂಡಿದ್ದಾರೆ.

    ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಿಂದ ಇಬ್ಬರಲ್ಲಿ ಶಂಕಿತ ಸೊಂಕಿರುವ ಹಿನ್ನೆಲೆ ತಪಾಸಣೆಗೆ ಕಳುಹಿಸಿದ್ದ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಧಾರವಾಡ ಜಿಲ್ಲೆಯ ಜನರು ಭಯ ಪಡುವ ಅಗತ್ಯವಿಲ್ಲ ಎಂದರು.

    ರೈಲ್ವೆ ನಿಲ್ದಾಣ ಹಾಗೂ ಮುಖ್ಯವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಒಂದು ಮಾಹಿತಿ ಕೇಂದ್ರ ತೆರೆದಿದ್ದೇವೆ. ಕೊರೊನಾ ಎಫೆಕ್ಟ್ ಇರುವ ದೇಶದಿಂದ ಬರುವವರು ಈ ಕೇಂದ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತಮ್ಮ ಮಾಹಿತಿ ನೀಡಬೇಕು. ಕೊರೊನಾ ಗುಣಲಕ್ಷಣ ಇಲ್ಲದೆ ಹೋದರೂ  14 ದಿನಗಳ ಕಾಲ ಮನೆ ಬಿಟ್ಟು ಹೊರಗೆ ಬರಬಾರದು ಎಂದು ಡಿಸಿ ತಿಳಿಸಿದರು.

    ಧಾರವಾಡ ಜಿಲ್ಲಾಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ವಾರ್ಡ್ ಮಾಡಿದ್ದೇವೆ. ಜೊತೆಗೆ ಕೆಲ ಖಾಸಗಿ ಆಸ್ಪತ್ರೆಗಳು ಸಹ ಮುಂದೆ ಬಂದಿದೆ. ಜಾಸ್ತಿ ಜನ ಶಂಕಿತರು ಇದ್ದರೆ ಅವರಿಗಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ತರಬೇತಿ ಕೇಂದ್ರಗಳ ಜೊತೆಗೆ ಒಂದಷ್ಟು ಹೋಟೆಲ್‌ಗಳನ್ನು ಪಡೆಯಲಿದ್ದೇವೆ ಎಂದು ಮಾಹಿತಿ ನೀಡಿದರು.

     

  • ವೇದಿಕೆ ಮೇಲೆಯೇ ಪ್ರಹ್ಲಾದ್ ಜೋಷಿ ಕ್ಲಾಸ್- ಕಣ್ಣೀರಿಟ್ಟ ಡಿಸಿ

    ವೇದಿಕೆ ಮೇಲೆಯೇ ಪ್ರಹ್ಲಾದ್ ಜೋಷಿ ಕ್ಲಾಸ್- ಕಣ್ಣೀರಿಟ್ಟ ಡಿಸಿ

    ಹುಬ್ಬಳ್ಳಿ: ಸಾರ್ವಜನಿಕ ಕಾರ್ಯಕ್ರಮದ ವೇದಿಕೆ ಮೇಲೆಯೇ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಕೇಂದ್ರ ಸಂಸದೀಯ  ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಾಳಿತ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಹಾಗೂ ಬೃಹತ್ ಪ್ಲಾಸ್ಟಿಕ್ ಸಂಗ್ರಹಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಪ್ರಹ್ಲಾದ್ ಜೋಷಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಅವರನ್ನು ತರಾಟೆಗೆ ತಗೆದುಕೊಂಡರು. ಇದನ್ನೂ ಓದಿ: ಪ್ರಧಾನಿ ಅಮೆರಿಕಕ್ಕೆ ಹೋಗಿದ್ದರಿಂದ ನೆರೆ ಪರಿಹಾರ ಪ್ರಕಟಿಸಲು ತಡವಾಗಿದೆ – ಪ್ರಹ್ಲಾದ್ ಜೋಷಿ

    ಇಷ್ಟು ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದರ ಬಗ್ಗೆ ನನಗೆ ಯಾಕೆ ಮಾಹಿತಿ ನೀಡಿಲ್ಲ? ಅಷ್ಟೇ ಅಲ್ಲದೆ ಇಷ್ಟು ದೊಡ್ಡ ಕಾರ್ಯಕ್ರಮ ಮಾಡಿದರೂ ಸರಿಯಾದ ವ್ಯವಸ್ಥೆ ಮಾಡಿಲ್ಲ. ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ? ನಿಮಗೆ ಅರ್ಥ ಆಗಲ್ವಾ ಎಂದು ಕೇಂದ್ರ ಸಚಿವರು ವೇದಿಕೆ ಮೇಲೆ ತರಾಟೆ ತೆಗೆದುಕೊಂಡರು.

    ಜಿಲ್ಲಾಧಿಕಾರಿ ದೀಪಾ ಚೋಳನ್ ಸಮಜಾಯಿಸಿ ನೀಡಲು ಅವಕಾಶ ನೀಡದೆ ಕೇಂದ್ರ ಸಚಿವರು ಮನಬಂದಂತೆ ಬೈದಿದ್ದಾರೆ. ಕೇಂದ್ರ ಸಚಿವರು ಅಷ್ಟಕ್ಕೆ ಸುಮ್ಮನಾಗದೆ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರನ್ನು ಕರೆದು ತರಾಟೆಗೆ ತಗೆದುಕೊಂಡರು. ಇದೆಲ್ಲವನ್ನು ನೋಡುತ್ತ ಮಧ್ಯದಲ್ಲಿ ಕುಳಿತಿದ್ದ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಯಾರಿಗೂ ಏನನ್ನೂ ಹೇಳದೆ ಮೌನಕ್ಕೆ ಶರಣಾಗಿದ್ದರು.