Tag: Deepika Padukone

  • ತಂದೆಗಾಗಿ ದೀಪಿಕಾ ಟ್ವೀಟ್

    ತಂದೆಗಾಗಿ ದೀಪಿಕಾ ಟ್ವೀಟ್

    ಮುಂಬೈ: ಬಾಲಿವುಡ್ ಮಸ್ತಾನಿ ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಪಡುಕೋಣೆಗಾಗಿ ಟ್ವೀಟ್ ಮಾಡಿ, ನಮಗೆ ನಿಮ್ಮ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. ಪ್ರಕಾಶ್ ಪಡುಕೋಣೆ ಮಾಜಿ ಬ್ಯಾಡ್ಮಿಂಟನ್ ಆಟಗಾರರಾಗಿದ್ದಾರೆ.

    ಪತ್ರಕರ್ತರೊಬ್ಬರ ಟ್ವೀಟಿಗೆ ಪ್ರತಿಕ್ರಿಯೆ ನೀಡಿರುವ ಪದ್ಮಾವತಿ, ಅಪ್ಪ, ಬ್ಯಾಡ್ಮಿಂಟನ್ ಮತ್ತು ಭಾರತದ ಕ್ರೀಡಾಲೋಕಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮ ಶಿಸ್ತು, ಸಮರ್ಪಣೆ ಮತ್ತು ಶಿಸ್ತು ಹಲವರಿಗೆ ಸ್ಪೂರ್ತಿಯಾಗಿದೆ. ಇಷ್ಟು ವರ್ಷಗಳ ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆಗಳು. ನಮಗೆ ನಿಮ್ಮ ಬಗ್ಗೆ ಗೌರವ ಮತ್ತು ಹೆಮ್ಮೆ ಇದೆ ಎಂದು ಭಾವನಾತ್ಮಕವಾಗಿ ಮುದ್ದಿನ ಮಗಳಾಗಿ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

    ಇದೇ ದಿನ ಪ್ರಕಾಶ್ ಪಡುಕೋಣೆಯವರು, ಲಂಡನ್ ನಗರದ ವೆಂಬ್ಲೆ ಏರೆನಾದಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಶಿಪ್ ತಮ್ಮದಾಗಿಸಿಕೊಂಡಿದ್ದರು ಎಂದು ಬರೆದು ದೀಪಿಕಾ ಅವರಿಗೆ ಪತ್ರಕರ್ತ ಟ್ಯಾಗ್ ಮಾಡಿದ್ದರು. ಈ ಟ್ವೀಟಿಗೆ ದೀಪಿಕಾ ಪ್ರತಿಕ್ರಿಯಿಸುವ ತಮ್ಮ ತಂದೆಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

  • ಬೇಬಿ ನನ್ನ ಮೇಲೆ ಕರುಣೆ ಇರಲಿ: ದೀಪಿಕಾ ಬಿಕಿನಿ ಫೋಟೋಗೆ ರಣ್‍ವೀರ್ ಕಮೆಂಟ್

    ಬೇಬಿ ನನ್ನ ಮೇಲೆ ಕರುಣೆ ಇರಲಿ: ದೀಪಿಕಾ ಬಿಕಿನಿ ಫೋಟೋಗೆ ರಣ್‍ವೀರ್ ಕಮೆಂಟ್

    – ದೀಪಿಕಾ ಹಾಟ್ ಫೋಟೋಶೂಟ್

    ಮುಂಬೈ: ಬಾಲಿವುಡ್ ನಟಿ, ಪತ್ನಿ ದೀಪಿಕಾ ಪಡುಕೋಣೆ ಮಾದಕ ಫೋಟೋಗೆ ರಣ್‍ವೀರ್ ಸಿಂಗ್ ಫನ್ನಿಯಾಗಿ ಕಮೆಂಟ್ ಮಾಡಿದ್ದಾರೆ.

    ಬಾಲಿವುಡ್ ಬಾಜೀರಾವ್-ಮಸ್ತಾನಿ ಜೋಡಿ ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಸಮುದ್ರದಡದಲ್ಲಿ ಬಿಕಿನಿ ತೊಟ್ಟು ಮಾದಕವಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಪಡ್ಡೆಹುಡುಗರ ಮನಸ್ಸಿಗೆ ಕಿಚ್ಚು ಹಚ್ಚುವ ಫೋಟೋಗಳನ್ನು ದೀಪಿಕಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪತ್ನಿಯ ಫೋಟೋಗೆ ಕಮೆಂಟ್ ಮಾಡಿರುವ ಪತಿ ರಣ್‍ವೀರ್ ಸಿಂಗ್, ಬೇಬಿ ಕರುಣೆ ಇರಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

    ಮದುವೆಗೂ ಮುನ್ನ ಇದೇ ರೀತಿ ಒಬ್ಬರನ್ನೊಬ್ಬರ ಫೋಟೋಗಳಿಗೆ ಕಮೆಂಟ್ ಮಾಡುವ ಮೂಲಕ ಕಾಲೆಳೆಯುತ್ತಿದ್ದರು. ಸದ್ಯ ಜೋಡಿ ’83’ ಸಿನಿಮಾದಲ್ಲಿ ನಾಲ್ಕನೇ ಬಾರಿಗೆ ಜೊತೆಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಿನಿಮಾ ಪ್ರಚಾರಕ್ಕಾಗಿ ಚೆನ್ನೈಗೆ ತೆರಳಿದ್ದರು. ಚೆನ್ನೈನಿಂದ ಹಿಂದಿರುಗುತ್ತಿರುವ ಬಗ್ಗೆ ರಣ್‍ವೀರ್ ಸಿನಿಮಾ ತಂಡದ ಜೊತೆಯಲ್ಲಿನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದರು.

    ಪತಿಯ ಫೋಟೋ ನೋಡಿದ ದೀಪಿಕಾ, ಮನೆಗೆ ಬರುವಾಗ ಒಂದು ಕೆ.ಜಿ. ಮೈಸೂರು ಪಾಕ್ ಮತ್ತು ಎರಡೂವರೆ ಕೆ.ಜಿ. ಗರಿ ಗರಿಯಾದ ಮಸಾಲೆ ಆಲೂಗಡ್ಡೆ ಚಿಪ್ಸ್ ತೆಗೆದುಕೊಂಡು ಬರಬೇಕು ಎಂದು ಕಮೆಂಟ್ ಮಾಡಿದ್ದರು. ಹೀಗೆ ಸದಾ ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಆ್ಯಕ್ಟೀವ್ ಆಗಿರುತ್ತಾರೆ.

  • ಬಾಹುಬಲಿ ಪ್ರಭಾಸ್‍ಗೆ ನಾಯಕಿ ಆಗ್ತಾರಾ ದೀಪಿಕಾ ಪಡುಕೋಣೆ?

    ಬಾಹುಬಲಿ ಪ್ರಭಾಸ್‍ಗೆ ನಾಯಕಿ ಆಗ್ತಾರಾ ದೀಪಿಕಾ ಪಡುಕೋಣೆ?

    ಮುಂಬೈ: ಬಾಹುಬಲಿ ಖ್ಯಾತಿಯ ಡಾರ್ಲಿಂಗ್ ಪ್ರಭಾಸ್ ಅವರಿಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗ್ತಾರಾ ಎಂಬ ಪ್ರಶ್ನೆ ಈಗ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿದೆ.

    ಸದ್ಯ ಪ್ರಭಾಸ್ ಅವರು ‘ಪ್ರಭಾಸ್ 20’ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಜೊತೆ ಮಹಾನಟಿ ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಅವರು ನಿರ್ದೇಶನದ ಮೊತ್ತೊಂದು ಚಿತ್ರದಲ್ಲಿ ಪ್ರಭಾಸ್ ನಟಿಸಲಿದ್ದಾರೆ. ಈ ಚಿತ್ರಕ್ಕೆ ಪ್ರಭಾಸ್ ಅವರಿಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಅವರು ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಈಗಾಗಲೇ ಈ ವಿಚಾರವಾಗಿ ಚಿತ್ರತಂಡ ದೀಪಿಕಾ ಪಡುಕೋಣೆ ಅವರನ್ನು ಸಂಪರ್ಕ ಮಾಡಿ ಮಾತುಕತೆ ನಡೆಸಿದೆ ಎನ್ನಲಾಗಿದೆ. ಆದರೆ ದೀಪಿಕಾ ಪಡುಕೋಣೆ ಅವರು ಇನ್ನೂ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಎಲ್ಲಾ ಅಂದುಕೊಂಡಂತೆ ಅದರೆ ಮೊದಲ ಬಾರಿಗೆ ಬಾಲಿವುಡ್ ಬೆಡಗಿ ದೀಪಿಕಾ ಟಾಲಿವುಡ್‍ನಲ್ಲಿ ನಟಿಸಲಿದ್ದಾರೆ. ಕನ್ನಡ, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ದೀಪಿಕಾ ತೆಲುಗು ಚಿತ್ರಗಳಲ್ಲಿ ನಟಿಸಿಲ್ಲ.

    2018 ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ನಾಗ್ ಅಶ್ವಿನ್ ನಿರ್ದೇಶನದ ಮಹಾನಟಿ ಚಿತ್ರಕ್ಕೆ ದೀಪಿಕಾ ಪಡುಕೋಣೆ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ಅಂದು ಅವರು ಈ ಸಿನಿಮಾದಲ್ಲಿ ನಟಿಸಿರಲಿಲ್ಲ. ಹಾಗಾಗಿ ಆ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅವರು ನಟಿಸಿದ್ದರು. ಆದರೆ ಈಗ ಮತ್ತೆ ನಾಗ್ ಅಶ್ವಿನ್ ಅವರು ತಮ್ಮ ಮುಂದಿನ ಚಿತ್ರಕ್ಕೆ ದೀಪಿಕಾ ಪಡುಕೋಣೆಯನ್ನು ಕರೆತರಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.

    ಕನ್ನಡ ಚಿತ್ರರಂಗದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ದೀಪಿಕಾ ಮಿಂಚಿದ್ದು ಮಾತ್ರ ಬಾಲಿವುಡ್‍ನಲ್ಲಿ. ಓಂ ಶಾಂತಿ ಓಂ ಚಿತ್ರದ ಮೂಲಕ ಬಾಲಿವುಡ್‍ಗೆ ಹಾರಿದ ಈ ಚೆಲುವೆ ಅಲ್ಲೇ ಭಾರತದ ನಂಬರ್ ಒನ್ ನಟಿಯಾಗಿ ಬೆಳೆದರು. ಸದ್ಯ ಅವರ ನಟನೆಯ ’83’ ಚಿತ್ರದ ಬಿಡುಗಡೆ ಸಿದ್ಧವಾಗಿದೆ. ಇತ್ತೀಚೆಗೆ ತೆರೆಕಂಡ ದೀಪಿಕಾ ಅವರ ಛಾಪಕ್ ಚಿತ್ರ ಗಲ್ಲ ಪಟ್ಟಿಗೆಯಲ್ಲಿ ಅಷ್ಟೇನು ಸದ್ದು ಮಾಡಿರಲಿಲ್ಲ.

    ಪ್ರಭಾಸ್ ಅವರು ರಾಜಮೌಳಿ ನಿರ್ದೇಶನದ ಬಾಹುಬಲಿಯ ಎರಡು ಸರಣಿಯ ನಂತರ ಸಹೋ ಸಿನಿಮಾ ಮಾಡಿದ್ದರು. ಆದರೆ ಈ ಸಿನಿಮಾ ಅಷ್ಟೇನು ಹಿಟ್ ಆಗಿರಲಿಲ್ಲ. ಆ್ಯಕ್ಷನ್ ಚಿತ್ರವಾದ ಸಾಹೋ ಪ್ರೇಕ್ಷಕನನ್ನು ಸೆಳೆಯುವಲ್ಲಿ ವಿಫಲವಾಗಿತ್ತು. ಈಗ ಒಂದು ದೊಡ್ಡ ಬ್ರೇಕ್‍ಗಾಗಿ ಕಾಯುತ್ತಿರುವ ಪ್ರಭಾಸ್‍ಗೆ ಅವರು ಮುಂದಿನ ಸಿನಿಮಾ ಕೈ ಹಿಡಿಯುತ್ತಾ ಈ ಚಿತ್ರಕ್ಕೆ ದೀಪಿಕಾ ನಾಯಕಿ ಆಗ್ತಾರಾ ಎಂದು ಕಾದು ನೋಡಬೇಕಿದೆ.

  • ಪತಿ ಜೊತೆ 1 ಕೆ.ಜಿ ಮೈಸೂರು ಪಾಕ್ ತರಲು ಹೇಳಿದ ದೀಪಿಕಾ

    ಪತಿ ಜೊತೆ 1 ಕೆ.ಜಿ ಮೈಸೂರು ಪಾಕ್ ತರಲು ಹೇಳಿದ ದೀಪಿಕಾ

    ನವದೆಹಲಿ: ಬಾಲಿವುಡ್ ಸ್ಟಾರ್ ಕಪಲ್ ಎಂದೇ ಖ್ಯಾತರಾಗಿರುವ ದೀಪಿಕಾ ಪಡುಕೊಣೆ ಹಾಗೂ ರಣ್ ವೀರ್ ಸಿಂಗ್ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ರಣ್ ವೀರ್ ಸಿಂಗ್ ಪೋಸ್ಟ್ ಗಳಿಗೆ ಕಮೆಂಟ್ ಮಾಡುವ ಮೂಲಕ ದೀಪಿಕಾ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಅಂತೆಯೇ ಇದೀಗ ದೀಪಿಕಾ ಸ್ವೀಟ್ ತರುವುದಕ್ಕೆ ಹೇಳಿ ಮತ್ತೆ ಸುದ್ದಿಯಾಗಿದ್ದಾರೆ.

    ಹೌದು. ರಣ್ ವೀರ್ ಸಿಂಗ್ ಮುಂಬರುವ ಸ್ಪೋರ್ಟ್ಸ್ ಡ್ರಾಮಾ ಪ್ರಮೋಶನ್ ಗಾಗಿ ಚೆನ್ನೈಗೆ ತೆರಳಿದ್ದರು. ಅಲ್ಲಿಂದ ಹೊರಡುವ ಮೊದಲು ರಣ್ ವೀರ್, ಇನ್ ಸ್ಟಾದಲ್ಲಿ ಒಂದು ಫೋಟೋ ಹಾಕಿ ಚೆನ್ನೈನಿಂದ ಹೊರಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ದೀಪಿಕಾ ಪಡುಕೋಣೆ!

    ರಣ್ ವೀರ್ ಪೋಸ್ಟ್ ಮಾಡುತ್ತಿದ್ದಂತೆಯೇ ಕಮೆಂಟ್ ಮಾಡಿರುವ ದೀಪಿಕಾ, ಬರುವಾಗ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ತಿನಿಸಾದ ಮೈಸೂರು ಪಾಕ್ 1 ಕೆ.ಜಿ ಹಾಗೂ ಎರಡೂವರೆ ಕೆ.ಜಿ ಗರಿಗರಿಯಾಗಿರುವ ಪೊಟಾಟೋ ಚಿಪ್ಸ್ ಮರೆಯದೇ ತನ್ನಿ ಎಂದು ಬರೆದಿದ್ದಾರೆ. ದೀಪಿಕಾ ಕಮೆಂಟ್ ಮಾಡುತ್ತಿದ್ದಂತೆಯೇ ಅಭಿಮಾನಿಗಳು ತಕ್ಷಣ ಪ್ರತಿಕ್ರಿಯಿಸಲು ಶುರು ಮಾಡಿದ್ದಾರೆ.

    https://www.instagram.com/p/B7vtM0gBqwW/?utm_source=ig_embed

  • ದುಬಾರಿ ಬೆಲೆಯ ಗೌನ್ ಧರಿಸಿ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಿಂಚಿದ ದೀಪಿಕಾ

    ದುಬಾರಿ ಬೆಲೆಯ ಗೌನ್ ಧರಿಸಿ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಿಂಚಿದ ದೀಪಿಕಾ

    ದಾವೋಸ್: ಬಾಲಿವುಡ್‍ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಇತ್ತೀಚಿಗೆ ಸ್ವಿಟ್ಜರ್ಲ್ಯಾಂಡ್ ನ ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕ್ರಿಸ್ಟಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬರೋಬ್ಬರಿ 2.2 ಲಕ್ಷ ರೂ. ಬೆಲೆಯ ದುಬಾರಿ ಗೌನ್‍ ಧರಿಸಿ ದೀಪಿಕಾ ಮಿಂಚಿದ್ದಾರೆ.

    ಬರೋಬ್ಬರಿ 2.2 ಲಕ್ಷ ರೂ. ಬೆಲೆಯ ನೀಲಿ ಬಣ್ಣದ ಗೌನ್‍ನಲ್ಲಿ ದೀಪಿಕಾ ಮಿಂಚಿ ಎಲ್ಲರ ಗಮನ ಸೆಳೆದಿದ್ದಾರೆ. ವೇದಿಕೆ ಮೇಲೆ ನೀಲಿ ಗೌನ್‍ನಲ್ಲಿ ದೀಪಿಕಾ ಕ್ರಿಸ್ಟಲ್ ಅವಾರ್ಡ್ ಪಡೆಯುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ದೀಪಿಕಾ ಅವರ ದೇಹದ ಶೇಪ್‍ಗೆ ತಕ್ಕಂತೆ ಈ ಗೌನ್ ಡಿಸೈನ್ ಮಾಡಲಾಗಿತ್ತು. ಈ ದುಬಾರಿ ಗೌನ್‍ಗೆ ಚೌಕ ಆಕಾರದ ನೆಕ್‍ಲೈನ್, ಪ್ಯಾಡೆಡ್ ಶೋಲ್ಡರ್, ಕೇಪ್ ಸ್ಲೀವ್ಸ್ ಫಿನಿಷಿಂಗ್ ನೀಡಲಾಗಿದೆ. ಈ ಗೌನ್ ಧರಿಸಿದ್ದ ದೀಪಿಕಾ ಅದಕ್ಕೆ ಮ್ಯಾಚಿಂಗ್ ಡೈಮಂಡ್ ಮತ್ತು ಸಫೈರ್ ಇಯರ್‍ರಿಂಗ್ ಹಾಕಿದ್ದರು. ನೋಡಲು ಸಿಂಪಲ್ ಆಗಿ ಕಾಣಿಸಿದರೂ ದೀಪಿಕಾ ಅವರ ಗೌನ್ ಲುಕ್ ಎಲ್ಲರ ಗಮನ ಸೆಳೆದಿದೆ. ವೇದಿಕೆ ಮೇಲೆ ಗೌನ್‍ನಲ್ಲಿ ಕ್ರಿಸ್ಟಲ್ ಅರ್ವಾಡ್ ಜೊತೆ ದೀಪಿಕಾ ಮಿಂಚಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

    ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದಕ್ಕಾಗಿ ದೀಪಿಕಾ ಅವರಿಗೆ ಕ್ರಿಸ್ಟಲ್ ಅವಾರ್ಡ್ 2020 ನೀಡಿ ಗೌರವಿಸಲಾಗಿದೆ. ಸ್ಟಾರ್ ನಟಿ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ದೀಪಿಕಾ ಮಾಡುತ್ತಾ ಬಂದಿದ್ದಾರೆ. ಖಿನ್ನತೆಗೆ ಒಳಗಾದರಿಗೆ ಸಹಾಯ ಮಾಡುವ ಉದ್ದೇಶದಿಂದ 2015ರಲ್ಲಿ `ಲೀವ್ ಲವ್ ಲಾಫ್’ ಸಂಸ್ಥೆಯನ್ನು ದೀಪಿಕಾ ಸ್ಥಾಪಿಸಿದ್ದಾರೆ. ಈ ಮೂಲಕ ಖಿನ್ನತೆಗೆ ಒಳಗಾದವರು ಆ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತಿದ್ದಾರೆ.

    ಪ್ರಶಸ್ತಿ ಸ್ವೀಕಾರ ಮಾಡಿ ಮಾತನಾಡಿದ ದೀಪಿಕಾ, ತಾವು ಖಿನ್ನತೆಗೆ ಒಳಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. 2014ರಲ್ಲಿ ಪ್ರಾರಂಭವಾದ ಖಿನ್ನತೆ ಮತ್ತು ಆತಂಕದಿಂದ ಸಾಕಷ್ಟು ಬಾರಿ ಸಿನಿಮಾ ರಂಗವನ್ನು ತೊರೆಯುವ ನಿರ್ಧಾರ ಮಾಡಿದ್ದೆ. ಆದರೆ ನನ್ನ ತಾಯಿ ನನ್ನನ್ನು ಖಿನ್ನತೆಯಿಂದ ಹೊರಗೆ ಕರೆದುಕೊಂಡು ಬಂದರು. ಖಿನ್ನತೆ ಮತ್ತು ಆತಂಕಕ್ಕೆ ಚಿಕಿತ್ಸೆ ನೀಡಲಾಗುತ್ತೆ. ನನ್ನ ಅನುಭವದ ಪ್ರಕಾರ ಸ್ವೀಕಾರವು ಚೇತರಿಕೆಯ ಮೊದಲ ಹೆಜ್ಜೆಯಾಗಿದೆ ಎಂದು ಭಾಷಣ ಮಾಡಿದರು. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

  • ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಶಸ್ತಿ ಪಡೆದು ಡಿಪ್ರೆಷನ್ ಬಗ್ಗೆ ಬಿಚ್ಚಿಟ್ಟ ದೀಪಿಕಾ

    ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಶಸ್ತಿ ಪಡೆದು ಡಿಪ್ರೆಷನ್ ಬಗ್ಗೆ ಬಿಚ್ಚಿಟ್ಟ ದೀಪಿಕಾ

    ನವದೆಹಲಿ: ಬಾಲಿವುಡ್‍ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಇತ್ತೀಚಿಗೆ ಸ್ವಿಟ್ಜರ್ಲ್ಯಾಂಡ್ ನ ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕ್ರಿಸ್ಟಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಈ ವೇದಿಕೆ ಮೇಲೆ ಪ್ರಶಸ್ತಿ ಪಡೆದ ಬಳಿಕ ದೀಪಿಕಾ ಡಿಪ್ರೆಷನ್ ಬಗ್ಗೆ ಬಿಚ್ಚಿಟ್ಟಿದ್ದಾರೆ.

    ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದಕ್ಕಾಗಿ ದೀಪಿಕಾ ಅವರಿಗೆ ಕ್ರಿಸ್ಟಲ್ ಅವಾರ್ಡ್ 2020 ನೀಡಿ ಗೌರವಿಸಲಾಗಿದೆ. ಸ್ಟಾರ್ ನಟಿ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ದೀಪಿಕಾ ಮಾಡುತ್ತಾ ಬಂದಿದ್ದಾರೆ. ಖಿನ್ನತೆಗೆ ಒಳಗಾದರಿಗೆ ಸಹಾಯ ಮಾಡುವ ಉದ್ದೇಶದಿಂದ 2015ರಲ್ಲಿ ‘ಲೀವ್ ಲವ್ ಲಾಫ್’ ಸಂಸ್ಥೆಯನ್ನು ದೀಪಿಕಾ ಸ್ಥಾಪಿಸಿದ್ದಾರೆ. ಈ ಮೂಲಕ ಖಿನ್ನತೆಗೆ ಒಳಗಾದವರು ಆ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತಿದ್ದಾರೆ.

    ಪ್ರಶಸ್ತಿ ಸ್ವೀಕಾರ ಮಾಡಿ ಮಾತನಾಡಿದ ದೀಪಿಕಾ, ತಾವು ಖಿನ್ನತೆಗೆ ಒಳಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. 2014ರಲ್ಲಿ ಪ್ರಾರಂಭವಾದ ಖಿನ್ನತೆ ಮತ್ತು ಆತಂಕದಿಂದ ಸಾಕಷ್ಟು ಬಾರಿ ಸಿನಿಮಾ ರಂಗವನ್ನು ತೊರೆಯುವ ನಿರ್ಧಾರ ಮಾಡಿದ್ದೆ. ಆದರೆ ನನ್ನ ತಾಯಿ ನನ್ನನ್ನು ಖಿನ್ನತೆಯಿಂದ ಹೊರಗೆ ಕರೆದುಕೊಂಡು ಬಂದರು. ಖಿನ್ನತೆ ಮತ್ತು ಆತಂಕಕ್ಕೆ ಚಿಕಿತ್ಸೆ ನೀಡಲಾಗುತ್ತೆ. ನನ್ನ ಅನುಭವದ ಪ್ರಕಾರ ಸ್ವೀಕಾರವು ಚೇತರಿಕೆಯ ಮೊದಲ ಹೆಜ್ಜೆಯಾಗಿದೆ ಎಂದು ದೀಪಿಕಾ ವೇದಿಕೆ ಮೇಲೆ ಮಾತನಾಡಿದರು.

    ತನ್ನ ಖಿನ್ನತೆಯ ಅನುಭವನ್ನು ಬಿಚ್ಚಿಡುತ್ತ ‘ಲೀವ್ ಲವ್ ಲಾಫ್’ ಫೌಂಡೇಶನ್ ಸ್ಥಾಪಿಸಿರುವ ಬಗ್ಗೆಯು ದೀಪಿಕಾ ಹೇಳಿದರು. ಖಿನ್ನತೆಯಿಂದ ಹೊರಬಂದ ನಂತರ 2015ರಲ್ಲಿ ಲೀವ್ ಲವ್ ಲಾಫ್’ ಫೌಂಡೇಶನ್ ಸ್ಥಾಪಿಸಿದೆ. ಬದಲಾವಣೆಯನ್ನು ಮಾಡುವುದು ಮತ್ತು ಕನಿಷ್ಠ ಒಂದು ಜೀವವನ್ನಾದರು ಉಳಿಸುವ ಉದ್ದೇಶದಿಂದ ಈ ಸಂಸ್ಥೆ ಸ್ಥಾಪಿಸಿದೆ. “ನೀವು ಖಂಡಿತ ಒಬ್ಬಂಟಿಯಲ್ಲ. ಮುಖ್ಯವಾಗಿ ಭರವಸೆ ಇರಬೇಕು ಎಂದು ದೀಪಿಕಾ ಹೇಳಿದರು.

    ಡಿಪ್ರೆಷನ್ ಬಗ್ಗೆ ದೀಪಿಕಾ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು, ಅಭಿಮಾನಿಗಳು ದೀಪಿಕಾ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಕಾರ್ಯಕ್ಕೆ ಭೇಷ್ ಎಂದಿದ್ದಾರೆ.

    https://www.instagram.com/p/B7jO4UfB-2J/?utm_source=ig_embed

  • ಛಪಾಕ್ ಚಿತ್ರದಿಂದ ಎಚ್ಚೆತ್ತ ಮಧ್ಯಪ್ರದೇಶ ಸರ್ಕಾರ – ಅಕ್ರಮ ಆ್ಯಸಿಡ್ ಮಾರಾಟದ ವಿರುದ್ಧ ಅಭಿಯಾನ

    ಛಪಾಕ್ ಚಿತ್ರದಿಂದ ಎಚ್ಚೆತ್ತ ಮಧ್ಯಪ್ರದೇಶ ಸರ್ಕಾರ – ಅಕ್ರಮ ಆ್ಯಸಿಡ್ ಮಾರಾಟದ ವಿರುದ್ಧ ಅಭಿಯಾನ

    ಭೋಪಾಲ್: ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅಭಿನಯದ ಛಪಾಕ್ ಸಿನಿಮಾದಿಂದ ಪ್ರೇರಣೆಗೊಂಡು ಮಧ್ಯಪ್ರದೇಶ ಸರ್ಕಾರ ರಾಜ್ಯದಲ್ಲಿ ಅಕ್ರಮ ಆ್ಯಸಿಡ್ ಮಾರಾಟದ ವಿರುದ್ಧ ಅಭಿಯಾನ ಆರಂಭಿಸಿದೆ.

    ಛಪಾಕ್ ಚಿತ್ರ ಆ್ಯಸಿಡ್ ದಾಳಿ ಸಂತ್ರಸ್ತೆ ಲಕ್ಷ್ಮಿ ಅಗರ್ವಾಲ್ ಅವರ ಕಥೆಯಾಗಿದ್ದು, ಆ್ಯಸಿಡ್ ದಾಳಿ ಬಳಿಕ ಹೇಗೆ ಲಕ್ಷ್ಮಿ ಅವರು ಜೀವನದಲ್ಲಿ ಹೋರಾಡಿದರು ಎನ್ನುವ ಬಗ್ಗೆ ಸಿನಿಮಾದಲ್ಲಿ ತಿಳಿಸಲಾಗಿದೆ. ಈ ಚಿತ್ರದಿಂದ ಪ್ರೇರೇಪಿತವಾದ ಮಧ್ಯಪ್ರದೇಶ ಸರ್ಕಾರ ಮೊದಲು ರಾಜ್ಯದೆಲ್ಲೆಡೆ ಛಪಾಕ್ ಚಿತ್ರಕ್ಕೆ ತೆರಿಗೆ ಹಾಕಲ್ಲ ಎಂದು ಘೋಷಿಸಿತ್ತು. ಇದರ ಬೆನ್ನಲ್ಲೇ ಈಗ ಸರ್ಕಾರ ಆಕ್ರಮ ಆ್ಯಸಿಡ್ ಮಾರಾಟದ ವಿರುದ್ಧ ಅಭಿಯಾನ ಆರಂಭಿಸಿದೆ. ಅಕ್ರಮ ಆ್ಯಸಿಡ್ ಮಾರಾಟದಿಂದ ಆ್ಯಸಿಡ್ ದಾಳಿ ಆಗುತ್ತದೆ. ಅಮಾಯಕ ಹೆಣ್ಣುಮಕ್ಕಳ ಜೀವನ ಇದರಿಂದ ಹಾಳಾಗುವುದನ್ನು ತಡೆಯಲು ಮಧ್ಯಪ್ರದೇಶ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಇದನ್ನೂ ಓದಿ: ಕಪ್ಪು ವಸ್ತ್ರಧರಿಸಿ ಜೆಎನ್‍ಯುಗೆ ಭೇಟಿ ನೀಡಿದ ದೀಪಿಕಾ ಪಡುಕೋಣೆ

    ಈ ಬಗ್ಗೆ ಸ್ವತಃ ಮಧ್ಯಪ್ರದೇಶ ಸಿಎಂ ಕಮಲ್‍ನಾಥ್ ಗುರುವಾರ ಟ್ವೀಟ್ ಮಾಡಿ ತಿಳಿಸಿದ್ದಾರೆ. ರಾಜ್ಯದಲ್ಲಿ ಅಕ್ರಮ ಆ್ಯಸಿಡ್ ಮಾರಾಟವನ್ನು ತಡೆಯುವುದು ಅತ್ಯಂತ ಮುಖ್ಯವಾಗಿದೆ. ಇನ್ನೂ ಆ್ಯಸಿಡ್ ದಾಳಿಗಳನ್ನು ಸಹಿಸಿಕೊಳ್ಳಲು ಆಗಲ್ಲ. ರಾಜ್ಯಾದ್ಯಂತ ಈ ವಿರುದ್ಧ ಅಭಿಯಾನ ನಡೆಸಲು ಈಗಾಗಲೇ ಸೂಚಿಸಲಾಗಿದೆ. ಆ್ಯಸಿಡ್ ದಾಳಿ ಅನಾಗರಿಕತೆ, ಕ್ರೌರ್ಯತೆಯ ಸುಳಿವು. ಇದನ್ನು ನಾವು ಮಟ್ಟಹಾಕಬೇಕು ಎಂದಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೊಳಗಾದ ಯುವತಿಯ ನೈಜ ಕಥೆಯೇ ಛಪಾಕ್

    ಕೇವಲ ಸಿನಿಮಾವನ್ನು ತೆರಿಗೆ ರಹಿತ ಮಾಡಿದರೆ ಸಾಲುವುದಿಲ್ಲ. ಇಂತಹ ಅಮಾನವೀಯ ಕೃತ್ಯಗಳನ್ನು ನಾವು ತಡೆಯಬೇಕು. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ. ಆದ್ದರಿಂದಲೇ ಈ ಅಭಿಯಾನ ಆರಂಭಿಸಿದ್ದೇವೆ ಎಂದು ಕಮಲ್‍ನಾಥ್ ಟ್ವೀಟ್ ಮಾಡಿದ್ದಾರೆ.

    ಪದ್ಮಾವತ್ ಬಳಿಕ ದೀಪಿಕಾ ಪಡುಕೋಣೆ ಛಪಾಕ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ಬಳಿಕ ದೀಪಿಕಾ ನಟಿಸಿರುವ ಮೊದಲ ಚಿತ್ರ ಇದಾಗಿದ್ದು, ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ವಿಷಯಗಳಿಗೆ ಚಿತ್ರ ಸದ್ದು ಮಾಡಿಕೊಂಡು ಬರುತ್ತಿದೆ.

    ಓದಬೇಕೆಂಬ ದೊಡ್ಡ ಕನಸು ಕಂಡ ಯುವತಿಯ ಮೇಲೆ ದುಷ್ಕರ್ಮಿಗಳ ಆ್ಯಸಿಡ್ ದಾಳಿ, ಸ್ಪುರದ್ರೂಪಿಯಾಗಿದ್ದ ಯುವತಿ ತನ್ನನ್ನ ಕನ್ನಡಿಯಲ್ಲಿ ನೋಡಿಕೊಂಡು ಭಯಬೀಳುವ ದೃಶ್ಯಗಳು, ಆ್ಯಸಿಡ್ ದಾಳಿ ಬಳಿಕ ಮನೆಯಿಂದ ಹೊರ ಬರಲು ಹಿಂಜರಿತ, ಆಕೆಯ ಬೆನ್ನಲುಬಾಗಿ ನಿಲ್ಲುವ ಹೋರಾಟಗಾರ್ತಿಯರು, ಸ್ನೇಹಿತರ ಬಾಂಧವ್ಯವನ್ನು ಚಿತ್ರತಂಡ ತೋರಿಸಿರೋದು ಕಣ್ಣಿಗೆ ಕಟ್ಟುವಂತಿದೆ. ಧೈರ್ಯಗುಂದದೇ ನ್ಯಾಯಕ್ಕಾಗಿ ಹೋರಾಟ, ಸಮಾಜ ಸಂತ್ರಸ್ತೆಯನ್ನು ಕಾಣುವ ದೃಷ್ಟಿ, ಕಷ್ಟಗಳ ಸಂಕೋಲೆಯಲ್ಲಿ ಬದುಕುತ್ತಿದ್ದ ಜೀವಕ್ಕೆ ಗೆಳೆಯನ ತಂಪಾದ ಆಸರೆ ಚಿತ್ರದಲ್ಲಿ ಅದ್ಭುತವಾಗಿ ಮೂಡಿಬಂದಿದೆ.

    ದೀಪಿಕಾ ಜೆಎನ್‍ಯುಗೆ ಭೇಟಿ ಕೊಟ್ಟ ಹಿನ್ನೆಲೆ ಛಪಾಕ್ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಆದರೆ ಚಿತ್ರದಲ್ಲಿರುವ ಸಂದೇಶ, ಸತ್ಯಾಂಶ ಮನಗಂಡವರು ಚಿತ್ರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಕ್ಸ್ ಆಫೀಸ್‍ನ್ನಲ್ಲಿ ಈ ಚಿತ್ರ ಹೆಚ್ಚು ಗಳಿಸದಿದ್ದರೂ ಇದರ ಸಂದೇಶ ಮಾತ್ರ ಜನರನ್ನು ತಲುಪಿದೆ.

  • ದೀಪಿಕಾ, ಮಾಜಿ ಸಿಎಂಗೆ ಬಿಜೆಪಿ ಶಾಸಕ ರಾಜುಗೌಡ ಟಾಂಗ್

    ದೀಪಿಕಾ, ಮಾಜಿ ಸಿಎಂಗೆ ಬಿಜೆಪಿ ಶಾಸಕ ರಾಜುಗೌಡ ಟಾಂಗ್

    ಯಾದಗಿರಿ: JNU ವಿದ್ಯಾರ್ಥಿಗಳ ಪರ ನಿಂತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ಮಂಗಳೂರು ಗಲಭೆಯ ವಿಡಿಯೋ ಬಿಡುಗಡೆ ಮಾಡಿದ ಮಾಜಿ ಸಿಎಂ ಬಗ್ಗೆ ಸುರಪುರ ಬಿಜೆಪಿ ಶಾಸಕ ರಾಜುಗೌಡ ಯಾದಗಿರಿಯಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ನಟರು ಮುಖಕ್ಕೆ ಬಣ್ಣ ಹಚ್ಚಿ ನಿರ್ದೇಶಕ ಹೇಳಿದಂತೆ ನಟನೆ ಮಾಡುತ್ತಾರೆ. ಅವರು ಸ್ವಂತ ಬುದ್ಧಿಯಿಂದ ಕೆಲಸ ಮಾಡುವುದು ಕಡಿಮೆ. ತಮ್ಮ ಫೇಮ್ ಮತ್ತು ಪಬ್ಲಿಸಿಟಿಗೆ ಏನು ಬೇಕು ಅದನ್ನು ಮಾತ್ರ ಮಾಡುತ್ತಾರೆ. ದುಡ್ಡು ಕೊಟ್ಟು ಹೋಗಿ ನೋಡುವ ಸಿನಿಮಾದಲ್ಲಿ ಮಾತ್ರ ದೀಪಿಕಾ ಪಡುಕೋಣೆಯನ್ನು ನೋಡೋಕೆ ಚೆನ್ನಾಗಿರುತ್ತೆ. ಅದು ಬಿಟ್ಟು ಅವರ ಇತಿಹಾಸ ತೆಗೆದುಕೊಂಡರೆ ಅವರ ಬಗ್ಗೆ ಉತ್ತರ ಸಿಗುತ್ತೆ. ಹೀಗಾಗಿ ನಾನು ನಟರ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ. ಪಬ್ಲಿಸಿಟಿಗೋಸ್ಕರ ಮಾತನಾಡುವ ಬದಲಾಗಿ ಸತ್ಯದ ಬಗ್ಗೆ ಮಾತಾಡಲಿ ಎಂದು ಶಾಸಕ ರಾಜುಗೌಡ ಹೇಳಿದ್ದಾರೆ.

    ಮಂಗಳೂರು ಗಲಭೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ವಿಚಾರ ಮಾತನಾಡಿದ ಅವರು, ಕುಮಾರಸ್ವಾಮಿ ರಾಜಕಾರಣಿಯಾಗುವುದಕ್ಕಿಂತ ಮೊದಲು ನಿರ್ಮಾಪಕರಾಗಿದ್ದು, ವೀಡಿಯೋ ಎಡಿಟಿಂಗ್ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತು. ಗಲಭೆ ವಿಚಾರ ಇಟ್ಟುಕೊಂಡು ಚೀಪ್ ಪಾಲಿಟಿಕ್ಸ್ ಮಾಡುವುದು ಸರಿಯಲ್ಲ. ರಾಜಕೀಯ ಪಿತೂರಿಯಿಂದ ಮಂಗಳೂರಿನಲ್ಲಿ ಉದ್ದೇಶ ಪೂರಕವಾಗಿ ಗಲಾಟೆಯಾಗಿದೆ ಎಂದರು.

    ಪೊಲೀಸರು ಗಲಾಟೆ ವೀಡಿಯೋ ಬಿಡುಗಡೆ ಮಾಡಿದ ದಿನವೇ ಕುಮಾರಸ್ವಾಮಿಯವರು ತಮ್ಮ ವೀಡಿಯೋ ಬಿಡುಗಡೆ ಮಾಡಬೇಕಿತ್ತು. ಆದರೆ ಇಷ್ಟು ದಿನ ಯಾಕೆ ಸುಮ್ನಿದ್ದರು, ಅವರಿಗೆ ಜನರ ಬಗ್ಗೆ ಅಷ್ಟು ಕಾಳಜಿ ಇದ್ದರೆ ನೆರೆ ಬಂದ ಪ್ರದೇಶಗಳಿಗೆ ಬಂದು ಮಲಗಲಿ. ವಿರೋಧ ಪಕ್ಷದಲ್ಲಿರುವವರು ಇಂತಹ ವೀಡಿಯೋ ಬಿಡುಗಡೆ ಮಾಡಿ ಹೆಸರು ಪಡೆಯುವ ಬದಲು ಜನರ ಕಷ್ಟ ಆಲಿಸಲಿ ಎಂದು ಟಾಂಗ್ ನೀಡಿದ್ದಾರೆ.

  • ಛಪಾಕ್ ಶೋನ ಚಿತ್ರಮಂದಿರದ ಎಲ್ಲಾ ಟಿಕೆಟ್ ಬುಕ್ ಮಾಡಿದ ಕಲಬುರಗಿ ಯೂತ್ ಕಾಂಗ್ರೆಸ್

    ಛಪಾಕ್ ಶೋನ ಚಿತ್ರಮಂದಿರದ ಎಲ್ಲಾ ಟಿಕೆಟ್ ಬುಕ್ ಮಾಡಿದ ಕಲಬುರಗಿ ಯೂತ್ ಕಾಂಗ್ರೆಸ್

    ಕಲಬುರಗಿ: ಜೆಎನ್‍ಯು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟನೆ ‘ಛಪಾಕ್’ ಸಿನಿಮಾ ನೋಡದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ. ಆದರೆ ಇದಕ್ಕೆ ಕಲಬುರಗಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಕೌಂಟರ್ ನೀಡಿದ್ದಾರೆ.

    ಈ ಹಿನ್ನೆಲೆ ಶನಿವಾರ ಕಲಬುರಗಿಯ ಮಿರಜ್ ಚಿತ್ರಮಂದಿರದಲ್ಲಿ ಮಧ್ಯಾಹ್ನ 1 ಗಂಟೆಯ ಹಿಂದಿ ಸಿನಿಮಾ ‘ಛಾಪಕ್’ ಶೋನ ಎಲ್ಲಾ ಟಿಕೆಟ್‍ಗಳನ್ನು ಬುಕ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಸಾಧ್ಯವಾದರೆ ಶಾಸಕ ಪ್ರಿಯಾಂಕ್ ಖರ್ಗೆ ಸಹ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ. ಇದನ್ನೂ ಓದಿ: ರೀಲ್, ರಿಯಲ್‍ನಲ್ಲಿಯೂ ನೀವು ಬೋಲ್ಡ್: ದೀಪಿಕಾಗೆ ಧನ್ಯವಾದ ಹೇಳಿದ ಪ್ರಕಾಶ್ ರೈ

    ಈ ಕುರಿತು ಶಾಸಕ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು, ಕಾಂಗ್ರೆಸ್ಸಿನ ಈ ಪ್ರಯತ್ನ ಆ್ಯಸಿಡ್ ಸಂತ್ರಸ್ತೆಯ ಜೊತೆಗೆ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎನ್ನುವ ಸಂದೇಶ ಕೊಡುತ್ತದೆ. ಅಲ್ಲದೆ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧದ ಪ್ರದರ್ಶನವಾಗಿದೆ ಎಂದು ಬರೆದುಕೊಂಡಿದ್ದಾರೆ.

    ಶನಿವಾರ ಮಧ್ಯಾಹ್ನ 12:30ರ ಸುಮಾರಿಗೆ 1 ಗಂಟೆಯ ಶೋ ಮುನ್ನ ಶಾಸಕರು ಉಪಸ್ಥಿತರಿರಲಿದ್ದಾರೆ. ಅಲ್ಲದೇ ಜೆಎನ್‍ಯು ಗಾಯಾಳು ವಿದ್ಯಾರ್ಥಿಗಳನ್ನು ಭೇಟಿಯಾಗಿರುವುದಕ್ಕೆ ತೀವ್ರ ಟೀಕೆಗೆ ಗುರಿಯಾಗಿರುವ ನಟಿ ದೀಪಿಕಾ ಪಡುಕೋಣೆ ಅವರಿಗೆ ಶುಭಹಾರೈಸಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.

  • ಡಿಂಪಲ್ ಕ್ವೀನ್ ದೀಪಿಕಾಗೆ ಕರ್ನಾಟಕದಲ್ಲಿ ಸಂಕಷ್ಟ

    ಡಿಂಪಲ್ ಕ್ವೀನ್ ದೀಪಿಕಾಗೆ ಕರ್ನಾಟಕದಲ್ಲಿ ಸಂಕಷ್ಟ

    ಬೆಂಗಳೂರು: ನಟಿ ದೀಪಿಕಾ ಪಡುಕೋಣೆ ಚಿತ್ರವನ್ನು ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾದಿಂದ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ.

    ಜೆಎನ್‍ಯು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ದೀಪಿಕಾ ಪರ-ವಿರೋಧ ಮಾತುಗಳು ಕೇಳಿ ಬರ್ತಿವೆ. ಈ ಮಧ್ಯೆ ಕರ್ನಾಟಕದಲ್ಲಿ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ದೀಪಿಕಾ ಪಡುಕೋಣೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ದೇಶವಿರೋಧಿ ಕೃತ್ಯ. ದೀಪಿಕಾ ಹಾಗೂ ಆಕೆಯ ಪತಿ ರಣವೀರ್ ಸಿಂಗ್ ಚಲನಚಿತ್ರ ನಿಷೇಧಿಸಿ, ಛಪಾಕ್ ಸಿನಿಮಾವೂ ರಿಲೀಸ್ ಆಗಬಾರದು ಅಂತಾ ಹಿಂದೂ ಮಹಾಸಭಾದಿಂದ ಪತ್ರ ಬರೆಯಲಾಗಿದೆ.

    ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಶಿಕ್ಷಕರ ಮೇಲೆ ದಾಳಿಯಾದ ನಂತರ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್‍ಯುಗೆ ಮಂಗಳವಾರ ಸಂಜೆ ಸುಮಾರು 7.45 ಕ್ಕೆ ಜೆಎನ್‍ಯು ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದರು. 10 ನಿಮಿಷಗಳ ಕಾಲ ಯೂನಿವರ್ಸಿಟಿಯಲ್ಲಿ ಇದ್ದ ದೀಪಿಕಾ, ಬಳಿಕ ಏನೂ ಪ್ರತಿಕ್ರಿಯೆನೀಡದೆ ವಾಪಸ್ ಆಗಿದ್ದರು.