Tag: Deepika Padukone

  • Kalki 2898 AD: 7 ನಿಮಿಷ ನಟಿಸಿದಕ್ಕೆ 20 ಕೋಟಿ ಸಂಭಾವನೆ ಪಡೆದ ಕಮಲ್ ಹಾಸನ್

    Kalki 2898 AD: 7 ನಿಮಿಷ ನಟಿಸಿದಕ್ಕೆ 20 ಕೋಟಿ ಸಂಭಾವನೆ ಪಡೆದ ಕಮಲ್ ಹಾಸನ್

    ಪ್ಯಾನ್ ಇಂಡಿಯಾ ಸಿನಿಮಾ ‘ಕಲ್ಕಿ 2898 ಎಡಿ’ (Kalki 2898 AD)  ಜೂನ್ 27ರಂದು ಬಿಡುಗಡೆಯಾಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಇದೀಗ ಕಲ್ಕಿ ಚಿತ್ರದಲ್ಲಿ ವಿಲನ್ ಆಗಿ ನಟಿಸಿರುವ ಕಮಲ್ ಹಾಸನ್ (Kamal Haasan) 7 ನಿಮಿಷ ನಟಿಸಿದಕ್ಕೆ 20 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.

    ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone), ಬಿಗ್ ಬಿ ನಟನೆಯ ಕಲ್ಕಿ ಚಿತ್ರ ಸಕ್ಸಸ್‌ಫುಲ್ ಪ್ರದರ್ಶನ ಕಾಣ್ತಿದೆ. ರಿಲೀಸ್ ಬಳಿಕ ಕಮಲ್ ಹಾಸನ್ (Kamal Haasan) ನಟಿಸಿದ ಯಾಸ್ಕಿನ್ ಪಾತ್ರದ ಬಗ್ಗೆ ಟಾಕ್ ಆಗುತ್ತಿದೆ. ಈ ಪಾತ್ರಕ್ಕೆ ಅವರು ಸೆಲೆಕ್ಟ್ ಆಗಿದ್ದು ಹೇಗೆ? ಸಂಭಾವನೆ ವಿಚಾರದ ಬಗ್ಗೆ ಫ್ಯಾನ್ಸ್‌ಗೆ ಈಗ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ:ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ ಫಸ್ಟ್‌ ರಿಯಾಕ್ಷನ್

    ಸಿನಿಮಾ ಆರಂಭದಲ್ಲಿ ಹಣ್ಣು ಹಣ್ಣು ಮುದುಕನ ಪಾತ್ರದಲ್ಲಿ ಕಮಲ್ ಎಂಟ್ರಿ ಕೊಡ್ತಾರೆ. ಆದರೆ ಚಿತ್ರದ ಅಂತ್ಯದಲ್ಲಿ ಅವರ ನಿಜವಾದ ಲುಕ್ ರಿವೀಲ್ ಆಗುತ್ತದೆ. ಅದನ್ನು ನೋಡಿಯೇ ಫ್ಯಾನ್ಸ್ ದಂಗಾಗಿದ್ದಾರೆ. ಡೈರೆಕ್ಟರ್ ನಾಗ್ ಅಶ್ವಿನ್ ಕತೆ ಮಾಡಿದಾಗಲೇ ಯಾಸ್ಕಿನ್ ಪಾತ್ರವಿತ್ತಂತೆ ಆದರೆ ಯಾರು ಈ ಪಾತ್ರ ಸೂಕ್ತ ಎಂದು ಫೈನಲ್ ಆಗಿರಲಿಲ್ಲವಂತೆ.

    ಬಳಿಕ ಚಿತ್ರೀಕರಣ ಪ್ರಾರಂಭಿಸಿದ ವೇಳೆ, ಕೊಂಚ ಅಳುಕಿನಿಂದಲೇ ಕಮಲ್ ಹಾಸನ್‌ರನ್ನು ಯಾಸ್ಕಿನ್ ಪಾತ್ರಕ್ಕೆ ಕೇಳಿದ್ರಂತೆ ನಾಗ್ ಅಶ್ವಿನ್. ಆದರೆ ಕಮಲ್ ಖುಷಿಯಿಂದಲೇ ಈ ಪಾತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟರು. ಆದರೆ ಮೂರೇ ದೃಶ್ಯ, 7 ನಿಮಿಷ 4 ಸೆಕೆಂಡ್ ನಟಿಸಿದ ಕಮಲ್‌ ಹಾಸನ್‌ಗೆ ನಿರ್ಮಾಪಕ ಅಶ್ವಿನ್ ದತ್ 20 ಕೋಟಿ ರೂ. ಸಂಭಾವನೆ ನೀಡಿರೋದು ಈಗ ಹಾಟ್ ಟಾಪಿಕ್ ಆಗಿದೆ.

    ಅಂದಹಾಗೆ, ‘ಕಲ್ಕಿ 2898 ಎಡಿ’ ಪಾರ್ಟ್ 2ನಲ್ಲಿ ಕಮಲ್ ಹಾಸನ್ ಪಾತ್ರವೇ ಹೈಲೆಟ್. ವಿಲನ್ ಆಗಿರುವ ಕಮಲ್ ಪಾತ್ರದ ಮೇಲೆ ಕಥೆ ಸುತ್ತಲಿದೆಯಂತೆ. ಭಾಗ 2ರಲ್ಲಿ ಯಾರು ಊಹಿಸಿರದ ಸಾಕಷ್ಟು ಟ್ವಿಸ್ಟ್‌ಗಳು ಎದುರಾಗಲಿದೆ. ಕಲ್ಕಿ ಸಿನಿಮಾದ ಸಕ್ಸಸ್‌ ನಂತರ ಪಾರ್ಟ್‌ 2 ಬರಲಿದೆ ಎಂದು ಕೇಳಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ.

  • ಬರಲಿದೆ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಪಾರ್ಟ್ 2

    ಬರಲಿದೆ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಪಾರ್ಟ್ 2

    ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone), ಬಿಗ್ ಬಿ ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಜೂನ್ 27ರಂದು ರಿಲೀಸ್ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಈ ಬೆನ್ನಲ್ಲೇ ಕಲ್ಕಿ ಪಾರ್ಟ್ 2 ಬರುವ ಬಗ್ಗೆ ಕೂಡ ಸಿಹಿಸುದ್ದಿ ಸಿಕ್ಕಿದೆ. ಇದನ್ನೂ ಓದಿ:ಯಾರೂ ಜೈಲಿನ ಬಳಿ ಬರಬೇಡಿ: ಅಭಿಮಾನಿಗಳಿಗೆ ನಟ ದರ್ಶನ್‌ ಮನವಿ

    ಈ ಸಿನಿಮಾದ ಕತೆ ನಡೆಯುವುದು ಕಲಿಯುಗದ ಅಂತ್ಯದಲ್ಲಿ ಎಂದು ನಿರ್ದೇಶಕ ತೋರಿಸಿ ಕೊಟ್ಟಿದ್ದಾರೆ. 6000 ಸಾವಿರ ವರ್ಷಗಳ ನಡುವೆ ನಡೆವ ಕತೆಯಿದು. 3 ಗಂಟೆಯಲ್ಲಿ ಹೇಳಲು ಸಾಧ್ಯವಿಲ್ಲ. ಎರಡನೇ ಭಾಗದಲ್ಲಿ ಕಲ್ಕಿ ಚಿತ್ರ ಹಲವು ಟ್ವಿಸ್ಟ್‌ಗಳೊಂದಿಗೆ ಬರಲಿದೆ.

    ಸಿನಿಮಾ ರಿಲೀಸ್‌ಗೂ ಮುನ್ನ 2 ಭಾಗಗಳಲ್ಲಿ ಬರಲಿದೆ ಎಂದು ಚಿತ್ರತಂಡ ಘೋಷಿಸಿರಲಿಲ್ಲ. ಈಗ ಸಿನಿಮಾ ನೋಡಿದವರಿಗೆ ಇದು ಖಾತ್ರಿಯಾಗಿದೆ. ಚಿತ್ರದ ಬಗ್ಗೆ ಇನ್ನೂ ಕಥೆ ಹೊರಬರೋದು ಬಾಕಿಯಿದೆ. ಇದು ಆರಂಭವಷ್ಟೇ, ಕಲ್ಕಿ ಭಾಗ 2ರಲ್ಲಿ ಮತ್ತಷ್ಟು ಮಾಹಿತಿ ಸಿಗಲಿದೆ.

    ವೈಜಯಂತಿ ಮೂವೀಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ (Prabhas), ದೀಪಿಕಾ ಪಡುಕೋಣೆ, ಬಿಗ್ ಬಿ, ಕಮಲ್ ಹಾಸನ್, ದಿಶಾ ಪಟಾನಿ ಸೇರಿದಂತೆ ಹಲವರು ನಟಿಸಿದ್ದಾರೆ. ಮೃಣಾಲ್ ಠಾಕೂರ್, ವಿಜಯ್ ದೇವರಕೊಂಡ, ರಾಜಮೌಳಿ, ರಾಮ್ ಗೋಪಾಲ್ ವರ್ಮಾ,ದುಲ್ಕರ್ ಸಲ್ಮಾನ್ ಗೆಸ್ಟ್ ರೋಲ್‌ನಲ್ಲಿ ನಟಿಸಿದ್ದಾರೆ.

  • ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್- ಮೊದಲ ಶೋಗೆ ಉತ್ತಮ ರೆಸ್ಪಾನ್ಸ್

    ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್- ಮೊದಲ ಶೋಗೆ ಉತ್ತಮ ರೆಸ್ಪಾನ್ಸ್

    ಪ್ರಭಾಸ್ (Prabhas), ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ ಇಂದು (ಜೂನ್ 27) ಸಿನಿಮಾ ರಿಲೀಸ್ ಆಗಿದೆ. ಫಸ್ಟ್ ಡೇ, ಫಸ್ಟ್ ಶೋಗೆ ಪ್ರೇಕ್ಷಕರಿಂದ ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

    ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ನಟಿಸಿದ್ದಾರೆ. ಕಲ್ಕಿ ಚಿತ್ರಕ್ಕೆ ಐತಿಹಾಸಿಕದ ಟಚ್ ಕೊಟ್ಟಿದ್ದು, ಸಹಕಾರಿ ಆಗಿದೆ. ಕೊನೆಯ 30 ನಿಮಿಷ ಥ್ರಿಲ್ಲಿಂಗ್ ಆಗಿದೆ ಎಂದು ಫ್ಯಾನ್ಸ್ ಕೊಂಡಾಡಿದ್ದಾರೆ.‌ ಇದನ್ನೂ ಓದಿ:ಕೀರ್ತಿ ಸುರೇಶ್ ನಟನೆಯ ಮೊದಲ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ಇನ್ನೂ ಚಿತ್ರದಲ್ಲಿ ಭೂತ, ವರ್ತಮಾನ ಹಾಗೂ ಭವಿಷ್ಯದ ಕಥೆಯನ್ನು ಡೈರೆಕ್ಟರ್ ನಾಗ್ ಅಶ್ವೀನ್ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಟ್ರೈಲರ್ ಝಲಕ್‌ನಲ್ಲೇ ಆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುವ ಮೂಲಕ ಕಲ್ಕಿ ಟ್ರೈಲರ್ ಶುರುವಾಗಿತ್ತು.

    ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ. ಟ್ರೈಲರ್‌ನಿಂದ ಕುತೂಹಲ ಕೆರಳಿದ್ದ ಈ ಚಿತ್ರ, ರಿಲೀಸ್ ಬಳಿಕ ಪ್ರೇಕ್ಷಕರಿಗೆ ಉತ್ತರ ಸಿಕ್ಕಿದೆ. ಸಿನಿಮಾ ನೋಡಿ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಲಂಡನ್ ಟ್ರಿಪ್ ಮುಗಿಸಿ ಮುಂಬೈಗೆ ಬಂದಿಳಿದ ದೀಪಿಕಾ ದಂಪತಿ

    ಲಂಡನ್ ಟ್ರಿಪ್ ಮುಗಿಸಿ ಮುಂಬೈಗೆ ಬಂದಿಳಿದ ದೀಪಿಕಾ ದಂಪತಿ

    ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಇತ್ತೀಚೆಗೆ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಈ ಬೆನ್ನಲ್ಲೇ ಪತಿ ಜೊತೆ ಲಂಡನ್‌ಗೆ ನಟಿ ಹಾರಿದ್ದರು. ಈಗ ವೆಕೇಷನ್ ಮುಗಿಸಿ ಮುಂಬೈಗೆ ಬಂದಿಳಿದಿದ್ದಾರೆ.

    ಮದುವೆಯಾಗಿ 6 ವರ್ಷಗಳ ನಂತರ ಚೊಚ್ಚಲ ಮಗು ಆಗಮನವಾಗುತ್ತಿದೆ. ತಾಯ್ತನದಲ್ಲಿ ಖುಷಿಯಲ್ಲಿರುವ ದೀಪಿಕಾ ಇತ್ತೀಚೆಗೆ ಲಂಡನ್‌ಗೆ ಪತಿ ರಣ್‌ವೀರ್ ಸಿಂಗ್ ಜೊತೆ ತೆರಳಿದ್ದರು. ಈಗ ಮೋಜು ಮಸ್ತಿ ಮುಗಿಸಿ ಮುಂಬೈಗೆ ಈ ಜೋಡಿ ಮರಳಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ಈ ವೇಳೆ, ಗರ್ಭಿಣಿ ದೀಪಿಕಾರನ್ನು ಪತಿ ರಣವೀರ್ ಜೋಪಾನ ಮಾಡುತ್ತಿರುವ ರೀತಿ ನೋಡಿ ಖುಷಿಪಟ್ಟಿದ್ದಾರೆ. ಬೆಸ್ಟ್ ಪತಿ ಎಂದು ಫ್ಯಾನ್ಸ್ ಹಾಡಿಹೊಗಳಿದ್ದಾರೆ. ಇದನ್ನೂ ಓದಿ:ವರುಣ್ ಧವನ್ ಜೊತೆ ಶ್ರೀಲೀಲಾ ಡ್ಯುಯೆಟ್‌

    ಅಂದಹಾಗೆ, ಪ್ರಭಾಸ್ ಜೊತೆಗಿನ ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಬಹುಭಾಷೆಗಳಲ್ಲಿ ಜೂನ್ 27ರಂದು ರಿಲೀಸ್ ಆಗಲಿದೆ.

  • ದೀಪಿಕಾ ಮಗು ಸಿನಿಮಾ ಮಾಡಲಿದೆ- ಭವಿಷ್ಯ ನುಡಿದ ಕಮಲ್ ಹಾಸನ್

    ದೀಪಿಕಾ ಮಗು ಸಿನಿಮಾ ಮಾಡಲಿದೆ- ಭವಿಷ್ಯ ನುಡಿದ ಕಮಲ್ ಹಾಸನ್

    ಚಿತ್ರರಂಗದಲ್ಲಿನ ಬಹುನಿರೀಕ್ಷಿತ ಪ್ರಭಾಸ್, ದೀಪಿಕಾ (Deepika Padukone) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಇಡೀ ತಂಡ ಬ್ಯುಸಿಯಾಗಿದೆ. ಈ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಮಗು ಸಿನಿಮಾ ಮಾಡಲಿದೆ ಎಂದು ಕಮಲ್ ಹಾಸನ್ ಭವಿಷ್ಯ ನುಡಿದ್ದಾರೆ.

    ನಿರ್ದೇಶಕ ನಾಗ್ ಅಶ್ವೀನ್ (Nag Ashwin) ಮಗುವಿನಂತೆ ಎಂದು ದೀಪಿಕಾ ವಿವರಿಸಿದರು. ನಾಗ್ ಅಶ್ವೀನ್ ಅವರು ನನಗೆ ಕಾಲ್ ಮಾಡಿದ್ದಾಗ ನಾನು ಬಾಂಬೆಯಲ್ಲಿದ್ದೆ. ಬೇರೆ ಬೇರೆ ಸಿನಿಮಾದ ಚಿತ್ರೀಕರಣದಲ್ಲಿದ್ದ ಕಾರಣ, ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ದೆ. ಆಗ ನನಗೆ ಹಲವು ನಿರ್ದೇಶಕರು ಕರೆ ಮಾಡಿದ್ದರು. ಹಾಗಾಗಿ ನಾನು ಏನಾಯಿತು ಎಂದು ಕೇಳಿದಾಗ, ನಾವು ಕಮಲ್ ಸರ್ ಜೊತೆಗೆ ನಮ್ಮ ಮೊದಲ ದಿನದ ಶೂಟ್ ಮಾಡಿದ್ದೇವೆ ಎಂದು ತಿಳಿಸಲು ಕಾಲ್ ಮಾಡಿರೋದಾಗಿ ಮಗುವಿನಂತೆ ನಾಗ್ ಅಶ್ವೀನ್ ಹೇಳಿದರು ಎಂದು ದೀಪಿಕಾ ಮಾತನಾಡಿದರು.

    ಈ ವೇಳೆ, ದೀಪಿಕಾ ಪಡುಕೋಣೆ ಬೇಬಿ ಬಂಪ್ ತೋರಿಸಿ ಮುಂದೊಂದು ದಿನ ಈ ಮಗು ಕೂಡ ಸಿನಿಮಾ ಮಾಡಲಿ ಎಂದು ಹಾರೈಸುತ್ತೇನೆ ಎಂದು ಕಮಲ್ ಹಾಸನ್ (Kamal Haasan) ಮಾತನಾಡಿದರು. ಇದನ್ನೂ ಓದಿ:ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ ಚಿತ್ರಾಲ್ ರಂಗಸ್ವಾಮಿ

    ಇನ್ನೂ ಚಿತ್ರದಲ್ಲಿ ಭೂತ, ವರ್ತಮಾನ ಹಾಗೂ ಭವಿಷ್ಯದ ಕಥೆಯನ್ನು ಡೈರೆಕ್ಟರ್ ನಾಗ್ ಅಶ್ವೀನ್ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಟ್ರೈಲರ್ ಝಲಕ್‌ನಲ್ಲೇ ಆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುಮ ಮೂಲಕ ಕಲ್ಕಿ ಟ್ರೈಲರ್ ಶುರುವಾಗುತ್ತೆ. ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ.

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಇದನ್ನೂ ಸಹ ನಾನು ಸೋಲಲ್ಲ ಎಂದು ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ. ಪ್ರಭಾಸ್ ಜೊತೆ ದೀಪಿಕಾ, ದಿಶಾ ಪಟಾನಿ ಮಿಂಚಿದ್ದಾರೆ. ಅಮಿತಾಭ್, ಕಮಲ್ ಹಾಸನ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ವಿಎಫ್‌ಎಕ್ಸ್ ದೃಶ್ಯಕ್ಕೆ ಫ್ಯಾನ್ಸ್ ಮನಸೋತಿದ್ದಾರೆ. ಇದೇ ಜೂನ್ 27ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

  • ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ- ಟಿಕೆಟ್ ರೇಟ್ ಡಬಲ್

    ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ- ಟಿಕೆಟ್ ರೇಟ್ ಡಬಲ್

    ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ. ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಕೂಡ ಶುರುವಾಗಿದೆ. ಇದನ್ನೂ ಓದಿ:250 ಕೋಟಿ ಸಾಲದ ಸುಳಿಯಲ್ಲಿ ರಕುಲ್ ಪ್ರೀತ್ ಸಿಂಗ್ ಪತಿ

    ಮಲ್ಟಿಸ್ಟಾರ್ ಸಿನಿಮಾ ಆಗಿರುವ ‘ಕಲ್ಕಿ’ ಚಿತ್ರದ ಬಗ್ಗೆ ಫ್ಯಾನ್ಸ್ ಭಾರೀ ಕ್ರೇಜ್ ಇದೆ. ಇನ್ನೂ ಬೆಳ್ಳಂಬೆಳಗ್ಗೆ ಸಾಕಷ್ಟು ಕಡೆ ಸಿನಿಮಾದ ಮೊದಲ ಪ್ರದರ್ಶನ ಆರಂಭವಾಗಿದೆ. ಚಿತ್ರಕ್ಕೆ ಭಾರೀ ಕ್ರೇಜ್ ಇದೆ ಎಂಬ ಕಾರಣಕ್ಕೆ ಟಿಕೆಟ್ ದರ ಕೂಡ ಹೆಚ್ಚಿಸಲಾಗಿದೆ. ಇದನ್ನೂ ಓದಿ:ಸರಳವಾಗಿ ಜರುಗಿತು ಝಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಮದುವೆ

    ಇದೀಗ ಟಿಕೆಟ್ ದರವನ್ನು 400 ರೂ.ಯಿಂದ 700 ರೂ.ವರೆಗೆ ಹೆಚ್ಚಿಸಲಾಗಿದೆ. ಇನ್ನೂ ಟಿಕೆಟ್ ದರ ಹೆಚ್ಚಿಸಲಿದ್ದಾರೆ ಎನ್ನಲಾಗಿದೆ. ಬಾಹುಬಲಿ ಸಿನಿಮಾ ಬಳಿಕ ಮತ್ತೆ ಅದೇ ರೀತಿ ಕಲ್ಕಿ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ನಿರೀಕ್ಷೆ ಹೆಚ್ಚಿಸಿದೆ.

    ಇನ್ನೂ ಚಿತ್ರದಲ್ಲಿ ಭೂತ, ವರ್ತಮಾನ ಹಾಗೂ ಭವಿಷ್ಯದ ಕಥೆಯನ್ನು ಡೈರೆಕ್ಟರ್ ನಾಗ್ ಅಶ್ವೀನ್ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಟ್ರೈಲರ್‌ ಝಲಕ್‌ನಲ್ಲೇ ಆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುಮ ಮೂಲಕ ಕಲ್ಕಿ ಟ್ರೈಲರ್ ಶುರುವಾಗುತ್ತೆ. ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ.

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಇದನ್ನೂ ಸಹ ನಾನು ಸೋಲಲ್ಲ ಎಂದು ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ. ಪ್ರಭಾಸ್ (Prabhas) ಜೊತೆ ದೀಪಿಕಾ, ದಿಶಾ ಪಟಾನಿ ಮಿಂಚಿದ್ದಾರೆ. ಅಮಿತಾಭ್, ಕಮಲ್ ಹಾಸನ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ವಿಎಫ್‌ಎಕ್ಸ್ ದೃಶ್ಯಕ್ಕೆ ಫ್ಯಾನ್ಸ್ ಮನಸೋತಿದ್ದಾರೆ. ಸದ್ಯ ಜೂನ್‌ 27ಕ್ಕೆ ಕಲ್ಕಿ ಸಿನಿಮಾ ಥಿಯೇಟರ್‌ನಲ್ಲಿ ಅಬ್ಬರಿಸಲು ಸಿದ್ಧವಾಗಿದೆ.

  • ‘ಕಲ್ಕಿ’ ಇವೆಂಟ್‌ಗೆ 1,14,000 ಮೌಲ್ಯದ ಡ್ರೆಸ್ ಧರಿಸಿ ಬಂದ ದೀಪಿಕಾ ಪಡುಕೋಣೆ

    ‘ಕಲ್ಕಿ’ ಇವೆಂಟ್‌ಗೆ 1,14,000 ಮೌಲ್ಯದ ಡ್ರೆಸ್ ಧರಿಸಿ ಬಂದ ದೀಪಿಕಾ ಪಡುಕೋಣೆ

    ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Paukone) ಸದ್ಯ ‘ಕಲ್ಕಿ 2898 ಎಡಿ’ (Kali 2898 AD) ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಿಗಿಸಿಕೊಂಡಿದ್ದಾರೆ. ಹೀಗಿರುವಾಗ ಇತ್ತೀಚೆಗೆ ‘ಕಲ್ಕಿ’ ಚಿತ್ರದ ಪ್ರಿ ರಿಲೀಸ್ ಇವೆಂಟ್‌ನಲ್ಲಿ ದುಬಾರಿ ಮೊತ್ತದ ಡ್ರೆಸ್ ಧರಿಸಿ ಬಂದಿದ್ದಾರೆ. ನಟಿಯ ಡ್ರೆಸ್ ರೇಟ್ ಕೇಳಿಯೇ ಫ್ಯಾನ್ಸ್ ದಂಗಾಗಿದ್ದಾರೆ.

    ‘ಕಲ್ಕಿ’ ಸಿನಿಮಾ ಕಾರ್ಯಕ್ರಮಕ್ಕೆ ದೀಪಿಕಾ ಪಡುಕೋಣೆ ಸಿಂಪಲ್ ಡ್ರೆಸ್‌ನಲ್ಲಿ ಎಂಟ್ರಿ ಕೊಟ್ಟಿದ್ದರು. ನೋಡಲು ಸಿಂಪಲ್ ಎನಿಸಿದರೂ ಅದು ದುಬಾರಿ ಮೊತ್ತದ ಬಟ್ಟೆಯಾಗಿದೆ. ದೀಪಿಕಾ ಧರಿಸಿದ ಕಪ್ಪು ಬಣ್ಣದ ಡ್ರೆಸ್‌ಗೆ 1,14,000 ಲಕ್ಷ ರೂ.ದಾಗಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಸತ್ಯ ಬಿಚ್ಚಿಟ್ಟ ‘ಸೂರ್ಯವಂಶ’ ನಟಿ

    ಅಂದಹಾಗೆ ‘ಕಲ್ಕಿ’ ಚಿತ್ರದ ಕಾರ್ಯಕ್ರಮದಲ್ಲಿ ಗರ್ಭಿಣಿ ದೀಪಿಕಾ ವೇದಿಕೆಯಿಂದ ಇಳಿಯಲು ಪ್ರಭಾಸ್ (Prabhas) ಸಹಾಯ ಮಾಡಿದ್ದಾರೆ. ಅದಕ್ಕೆ, ಅಮಿತಾಭ್ ಬಚ್ಚನ್ (Amithab Bachchan) ಕಾಲೆಳೆದಿದ್ದರು. ಈ ವಿಡಿಯೋ ಸಖತ್ ವೈರಲ್ ಆಗಿತ್ತು.

    ಸಿನಿಮಾ ಕುರಿತು ಈವೆಂಟ್‌ನಲ್ಲಿ ಮಾತಾಡಿ, ಬರುತ್ತಿದ್ದಂತೆ ಗರ್ಭಿಣಿ ದೀಪಿಕಾ ವೇದಿಕೆಯಿಂದ ಇಳಿಯಲು ಮುಂದಾದಾಗ, ಪ್ರಭಾಸ್ ಮತ್ತು ಅಮಿತಾಭ್ ಇಬ್ಬರೂ ನಟಿಯ ಸಹಾಯಕ್ಕೆ ಧಾವಿಸಿದರು. ಪ್ರಭಾಸ್ ಅವರು ದೀಪಿಕಾ ಅವರ ಕೈ ಹಿಡಿದು ಆರಾಮವಾಗಿ ವೇದಿಕೆಯಿಂದ ಕೆಳಗೆ ಇಳಿಯಲು ಸಹಾಯ ಮಾಡಿದರು. ಬಿಗ್ ಬಿ ಅವರು ಪ್ರಭಾಸ್ ಹಿಂದೆ ನಿಂತು ತಮಾಷೆ ಮಾಡಿದರು.

     

    View this post on Instagram

     

    A post shared by Viral Bhayani (@viralbhayani)

    ಈ ಕಾರ್ಯಕ್ರಮದಲ್ಲಿ ಡಾರ್ಲಿಂಗ್ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮತ್ತು ದೀಪಿಕಾ ಪಡುಕೋಣೆ, ರಾಣಾ ದಗ್ಗುಬಾಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ‘ಕಲ್ಕಿ’ ಪ್ರೀ ರಿಲೀಸ್ ಈವೆಂಟ್‌ಗಾಗಿ 10 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ.


    ಅಂದಹಾಗೆ, ‘ಕಲ್ಕಿ 2898 ಎಡಿ’ ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಬಹುಭಾಷೆಗಳಲ್ಲಿ ಸಿನಿಮಾ ತೆರೆ ಕಾಣಲಿದೆ. ಮೊದಲ ಬಾರಿಗೆ ದೀಪಿಕಾ, ಈ ಚಿತ್ರಕ್ಕಾಗಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷ.

  • ಗರ್ಭಿಣಿ ದೀಪಿಕಾ ಸ್ಟೇಜ್‌ನಿಂದ ಕೆಳಗಿಳಿಯಲು ಸಹಾಯ ಮಾಡಿದ ಪ್ರಭಾಸ್‌ಗೆ ಕಾಲೆಳೆದ ಬಿಗ್ ಬಿ

    ಗರ್ಭಿಣಿ ದೀಪಿಕಾ ಸ್ಟೇಜ್‌ನಿಂದ ಕೆಳಗಿಳಿಯಲು ಸಹಾಯ ಮಾಡಿದ ಪ್ರಭಾಸ್‌ಗೆ ಕಾಲೆಳೆದ ಬಿಗ್ ಬಿ

    ಹುನಿರೀಕ್ಷಿತ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ರಿಲೀಸ್‌ಗೆ ರೆಡಿ ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ದೀಪಿಕಾ ಪಡುಕೋಣೆ (Deepika Padukone) ಭಾಗಿಯಾಗಿ ಚಿತ್ರತಂಡಕ್ಕೆ ಸಾಥ್ ನೀಡುತ್ತಿದ್ದಾರೆ. ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಗರ್ಭಿಣಿ ದೀಪಿಕಾ ವೇದಿಕೆಯಿಂದ ಇಳಿಯಲು ಪ್ರಭಾಸ್ ಸಹಾಯ ಮಾಡಿದ್ದಾರೆ. ಅದಕ್ಕೆ, ಅಮಿತಾಭ್ ಬಚ್ಚನ್ ಕಾಲೆಳೆದಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ತುಂಬು ಗರ್ಭಿಣಿಯಾಗಿರುವ ದೀಪಿಕಾ ಪಡುಕೋಣೆ ಮುಂಬೈನಲ್ಲಿ ನಡೆದ ‘ಕಲ್ಕಿ’ ಸಿನಿಮಾ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಸಿನಿಮಾ ಕುರಿತು ಈವೆಂಟ್‌ನಲ್ಲಿ ಮಾತಾಡಿ, ಬರುತ್ತಿದ್ದಂತೆ ದೀಪಿಕಾ ವೇದಿಕೆಯಿಂದ ಇಳಿಯಲು ಮುಂದಾದಾಗ, ಪ್ರಭಾಸ್ ಮತ್ತು ಅಮಿತಾಭ್ ಇಬ್ಬರೂ ನಟಿಯ ಸಹಾಯಕ್ಕೆ ಧಾವಿಸಿದರು. ಪ್ರಭಾಸ್ (Prabhas) ಅವರು ದೀಪಿಕಾ ಅವರ ಕೈ ಹಿಡಿದು ಆರಾಮವಾಗಿ ವೇದಿಕೆಯಿಂದ ಕೆಳಗೆ ಇಳಿಯಲು ಸಹಾಯ ಮಾಡಿದರು. ಬಿಗ್ ಬಿ ಅವರು ಪ್ರಭಾಸ್ ಹಿಂದೆ ನಿಂತು ತಮಾಷೆ ಕೂಡ ಮಾಡಿದ್ದಾರೆ. ಇದನ್ನೂ ಓದಿ:ತೆಲುಗು ನಟ ಚಿರಂಜೀವಿ ಮಾಜಿ ಅಳಿಯ ಶಿರೀಶ್ ನಿಧನ

    ಈ ಕಾರ್ಯಕ್ರಮದಲ್ಲಿ ಡಾರ್ಲಿಂಗ್ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮತ್ತು ದೀಪಿಕಾ ಪಡುಕೋಣೆ, ರಾಣಾ ದಗ್ಗುಬಾಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ‘ಕಲ್ಕಿ’ ಪ್ರೀ ರಿಲೀಸ್ ಈವೆಂಟ್‌ಗಾಗಿ 10 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ. ದೀಪಿಕಾ ಅವರು ವೇದಿಕೆಯಲ್ಲಿ ಸಿನಿಮಾ ಕುರಿತಾಗಿ ಕೂಡ ಮಾತನಾಡಿದ್ದಾರೆ.

    ಅಂದಹಾಗೆ, ‘ಕಲ್ಕಿ 2898 ಎಡಿ’ ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಬಹುಭಾಷೆಗಳಲ್ಲಿ ಸಿನಿಮಾ ತೆರೆ ಕಾಣಲಿದೆ. ಮೊದಲ ಬಾರಿಗೆ ದೀಪಿಕಾ, ಈ ಚಿತ್ರಕ್ಕಾಗಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷ.

  • ಬೇಬಿ ಬಂಪ್‌ ಫೋಟೋ ಹಂಚಿಕೊಂಡ ದೀಪಿಕಾ ಪಡುಕೋಣೆ

    ಬೇಬಿ ಬಂಪ್‌ ಫೋಟೋ ಹಂಚಿಕೊಂಡ ದೀಪಿಕಾ ಪಡುಕೋಣೆ

    ಬೆಂಗಳೂರಿನ ಬೆಡಗಿ ಸದ್ಯ ಬಾಲಿವುಡ್‌ನ ಟಾಪ್ ನಟಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ಬೇಬಿ ಬಂಪ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಕಪ್ಪು ಬಣ್ಣದ ಡ್ರೆಸ್‌ನಲ್ಲಿ ಧರಿಸಿ ನಗು ನಗುತ್ತಾ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬೇಬಿ ಬಂಪ್ ಲುಕ್ ಶೇರ್ ಮಾಡಿ ಸಾಕು, ನನಗೆ ಹಸಿವಾಗುತ್ತಿದೆ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ನಟಿಯ ಪೋಸ್ಟ್ಗೆ ಇದೀಗ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

    ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಹಾಜರಾಗಲು ನಟಿ ರೆಡಿಯಾಗಿರುವ ಫೋಟೋವನ್ನು ಶೇರ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಸೂರ್ಯ ಜೊತೆ ನಟಿಸಲು 4 ಕೋಟಿ ಸಂಭಾವನೆ ಪಡೆದ ಪೂಜಾ ಹೆಗ್ಡೆ

    ಅಂದಹಾಗೆ, ಹಲವು ವರ್ಷಗಳ ಡೇಟಿಂಗ್ ನಂತರ 2018ರ ನವೆಂಬರ್‌ನಲ್ಲಿ ರಣವೀರ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ 6 ವರ್ಷಗಳ ನಂತರ ಮೊದಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ.

  • ಕಲ್ಕಿ ಪ್ರಭಾಸ್‌ಗೆ ಜೊತೆಯಾದ ವಿಜಯ್ ದೇವರಕೊಂಡ

    ಕಲ್ಕಿ ಪ್ರಭಾಸ್‌ಗೆ ಜೊತೆಯಾದ ವಿಜಯ್ ದೇವರಕೊಂಡ

    ಸೌತ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಕಲ್ಕಿ 2898 ಎಡಿ’ (Kalki 2898 AD) ರಿಲೀಸ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone), ಬಿಗ್ ಬಿ ಅಂತಹ ಘಟಾನುಘಟಿ ಸ್ಟಾರ್‌ಗಳು ಇರುವ ಸಿನಿಮಾಗೆ ಮತ್ತೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ತೆಲುಗಿನ ರೌಡಿ ಬಾಯ್ ಕೂಡ ಸಾಥ್ ನೀಡುತ್ತಿದ್ದಾರೆ.‌ ಇದನ್ನೂ ಓದಿ:ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

    ಕಲ್ಕಿ ಪ್ರಭಾಸ್‌ಗೆ (Prabhas) ವಿಜಯ್ ದೇವರಕೊಂಡ ಈ ಚಿತ್ರದಲ್ಲಿ ಸಾಥ್ ನೀಡಲಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ್ (Vijay Devarakonda) ಕೂಡ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ ಎಂಬ ಪಾತ್ರದ ಮೂಲಕ ಬರುತ್ತಿದ್ದಾರೆ. ಪವರ್‌ಫುಲ್ ಪಾತ್ರಕ್ಕೆ ‘ಫ್ಯಾಮಿಲಿ ಸ್ಟಾರ್’ ನಟ ಜೀವತುಂಬಲಿದ್ದಾರೆ.

    ಅಂದಹಾಗೆ, ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುಮ ಮೂಲಕ ಕಲ್ಕಿ ಟ್ರೈಲರ್ ಶುರುವಾಗುತ್ತೆ. ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ.

    ಯುದ್ಧದಲ್ಲಿ ಇದುವರೆಗೂ ನಾನು ಸೋತಿಲ್ಲ, ಇದನ್ನೂ ಸಹ ನಾನು ಸೋಲಲ್ಲ ಎಂದು ಖಡಕ್ ಆಗಿ ಪ್ರಭಾಸ್ ಡೈಲಾಗ್ ಹೊಡೆದಿದ್ದಾರೆ. ಪ್ರಭಾಸ್ ಜೊತೆ ದೀಪಿಕಾ, ದಿಶಾ ಪಟಾನಿ ಮಿಂಚಿದ್ದಾರೆ. ಅಮಿತಾಭ್, ಕಮಲ್ ಹಾಸನ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ನ ವಿಎಫ್‌ಎಕ್ಸ್ ದೃಶ್ಯಕ್ಕೆ ಫ್ಯಾನ್ಸ್ ಮನಸೋತಿದ್ದಾರೆ.

    ಇನ್ನೂ ನಾಗ ಅಶ್ವೀನ್ ನಿರ್ದೇಶನದ ‘ಕಲ್ಕಿ 2898’ ಎಡಿ ಸಿನಿಮಾ ಬಹುಭಾಷೆಗಳಲ್ಲಿ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಮೊದಲ ಬಾರಿಗೆ ದೀಪಿಕಾ ಪಡುಕೋಣೆ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷವಾಗಿದೆ.