Tag: Defense Minister Rajnath Singh

  • ಮೂವರು ಕೇಂದ್ರ ಸಚಿವರೊಂದಿಗೆ ಎಂ.ಬಿ ಪಾಟೀಲ್ ಭೇಟಿ – ರಾಜ್ಯದ ಬೇಡಿಕೆಗಳ ಕುರಿತು ಚರ್ಚೆ

    ಮೂವರು ಕೇಂದ್ರ ಸಚಿವರೊಂದಿಗೆ ಎಂ.ಬಿ ಪಾಟೀಲ್ ಭೇಟಿ – ರಾಜ್ಯದ ಬೇಡಿಕೆಗಳ ಕುರಿತು ಚರ್ಚೆ

    – ರಾಜನಾಥ್ ಸಿಂಗ್, ಹೆಚ್‌ಡಿಕೆ, ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ

    ನವದೆಹಲಿ: ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮೂವರು ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ.

    ಮಂಗಳವಾರ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ವಿಸ್ತೃತ ಮಾತುಕತೆ ನಡೆಸಿದರು.ಇದನ್ನೂ ಓದಿ: ಹಿರಿಯ ಅಧಿಕಾರಿ ವಿರುದ್ಧ IAF ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾಧಿಕಾರಿಯಿಂದ ಅತ್ಯಾಚಾರ ಆರೋಪ – ಕೇಸ್‌ ದಾಖಲು

    2025ರ ಫೆ.12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಎಂ.ಬಿ ಪಾಟೀಲ ಅವರು ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

    ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಜರೂರು, ರಾಜ್ಯದಲ್ಲಿರುವ ಬಿಎಚ್‌ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ನೀಡಬೇಕು ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಚರ್ಚಿಸಿದರು.

    ಬಳಿಕ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಜೊತೆ ಮಾತನಾಡಿ, ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ವಿಚಾರ ವಿನಿಮಯ ನಡೆಸಿದರು. ಇ.ವಿ. ವಲಯದಲ್ಲಿ ನವೋದ್ಯಮಗಳಿಗೆ 10 ಸಾವಿರ ಕೋಟಿ ರೂ. ಪೂರೈಸಲು ಎದುರಾಗಿರುವ ಸವಾಲು, ಫೇಮ್-3 ಯೋಜನೆಯ ಜಾರಿಯಲ್ಲಿ ಆಗುತ್ತಿರುವ ವಿಳಂಬ, ರಕ್ಷಣಾ ತಂತ್ರಜ್ಞಾನ ಹಬ್‌ಗಳ ಸ್ಥಾಪನೆಯ ಜರೂರು, ಬೆಂಗಳೂರು ಗ್ರಾಮಾಂತರದಲ್ಲಿ ಇಎಂಸಿ ಕ್ಲಸ್ಟರ್ ಸ್ಥಾಪನೆಗೆ ಬಾಕಿ ಇರುವ ಅನುಮೋದನೆಯ ಕುರಿತು ಮಾತನಾಡಿದರು.

    ಹಾರೋಹಳ್ಳಿ, ಕುಡುತಿನಿ ಮತ್ತು ದೇವಕತ್ತಿಕೊಪ್ಪದಲ್ಲಿ ಕೈಗಾರಿಕಾ ಯೋಜನೆಗಳಿಗೆ ಬಾಕಿ ಇರುವ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ, ಸೆಮಿಕಂಡಕ್ಟರ್ ಕಂಪನಿ ಸ್ಥಾಪನೆಯ ತುರ್ತು ಮತ್ತು ಕೇಂದ್ರವು ಇತ್ತೀಚೆಗೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ರೂಪಿಸಿರುವ 12 ಸ್ಮಾರ್ಟ್ ಸಿಟಿ ಯೋಜನೆಯಿಂದ ಕರ್ನಾಟಕವನ್ನು ಹೊರಗಿಟ್ಟಿರುವುದರ ಬಗ್ಗೆ ಮಾತುಕತೆ ನಡೆಸಿದರು.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಾತನಾಡಿ, ಬೇಗನೆ ಹಾಳಾಗುವಂತಹ ಪದಾರ್ಥಗಳನ್ನು ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್‌ಟಿ ತೆರಿಗೆಯನ್ನು ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಈಗ ಇರುವ ಭಾರೀ ಆಮದು ತೆರಿಗೆ ಮತ್ತು ಸುಂಕವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಪುನರ್‌ ವಿಮರ್ಶೆ ನಡೆಸಬೇಕು – ಎಂ.ಸಿ.ಸುಧಾಕರ್

    ಸಿಂಗಪೂರ್ ಹೈಕಮೀಷನರ್ ಭೇಟಿ
    ಇದಕ್ಕೂ ಮುನ್ನ ಎಂ.ಬಿ ಪಾಟೀಲ, ಸಿಂಗಪುರ್ ಹೈಕಮಿಷನರ್ ಸೈಮನ್ ವಾಂಗ್ ಅವರನ್ನು ಭೇಟಿಯಾಗಿ, ಫೆಬ್ರವರಿಯಲ್ಲಿ ನಡೆಯಲಿರುವ ಹಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು.

    ಈ ಸಂದರ್ಭದಲ್ಲಿ ಅವರು, ಇತ್ತೀಚೆಗೆ ಭಾರತ ಮತ್ತು ಸಿಂಗಪೂರ್ ಸೆಮಿಕಂಡಕ್ಟರ್, ಡಿಜಿಟಲ್ ಸಹಕಾರ, ಆರೋಗ್ಯ ಸೇವೆ, ವೈದ್ಯಕೀಯ ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಮಾಡಿಕೊಂಡಿರುವ ಒಡಂಬಡಿಕೆ ಕುರಿತು ಚರ್ಚಿಸಿದರು.

    ಇದಕ್ಕೆ ಸ್ಪಂದಿಸಿದ ಹೈಕಮಿಷನರ್, ನೆಟ್-ಜೀರೋ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸಲು ತಮಗಿರುವ ಆಸಕ್ತಿಯನ್ನು ಮತ್ತು ಜೊತೆಗೆ ಡೇಟಾ ಕೇಂದ್ರಗಳು, ಎಂಆರ್ ಓ, ವೈದ್ಯಕೀಯ ಉಪಕರಣಗಳು ಮತ್ತು ಔಷಧ ಕಂಪನಿಗಳಲ್ಲಿ ಹೂಡಿಕೆ ಮಾಡಲು ತಮ್ಮ ದೇಶದ ಕಂಪನಿಗಳಿರುವ ಒಲವನ್ನು ಹಂಚಿಕೊಂಡರು.

  • ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಸತ್‍ನಲ್ಲಿ ಮಾಹಿತಿ ನೀಡಿದ್ರು ರಾಜನಾಥ್ ಸಿಂಗ್

    ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಸತ್‍ನಲ್ಲಿ ಮಾಹಿತಿ ನೀಡಿದ್ರು ರಾಜನಾಥ್ ಸಿಂಗ್

    ನವದೆಹಲಿ: ತಮಿಳುನಾಡಿನ ನೀಲಗಿರಿ ಅರಣ್ಯ ಪ್ರದೇಶದಲ್ಲಿ (ಕೂನೂರು ಬಳಿ) ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾರ್ಲಿಮೆಂಟ್‍ಗೆ ಇಂದು ವಿವರಿಸಿದರು.

    ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಪಾರ ದುಃಖ ಮತ್ತು ಭಾರವಾದ ಹೃದಯದಿಂದ ನಿನ್ನೆ ಮಧ್ಯಾಹ್ನ ಸಂಭವಿಸಿದ ಹೆಲಿಕಾಪ್ಟರ್ ಪತನದ ದುರದೃಷ್ಟಕರ ಸುದ್ದಿಯನ್ನು ತಿಳಿಸಲು ನಾನು ನಿಂತಿದ್ದೇನೆ. ಭಾರತದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ದುರಂತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿದ್ದರು. ವಾಯುಪಡೆಯ ಹೆಲಿಕಾಪ್ಟರ್ ನಿನ್ನೆ ಬೆಳಗ್ಗೆ 11:48ಕ್ಕೆ ಸೂಲೂರ್ ಏರ್‌ಬೇಸ್‌ನಿಂದ ಹೊರಟು, ಮಧ್ಯಾಹ್ನ 12:15ಕ್ಕೆ ವೆಲ್ಲಿಂಗ್‍ಟನ್‍ನಲ್ಲಿ ಇಳಿಯುವ ನಿರೀಕ್ಷೆ ಇತ್ತು. ಆದರೆ ಮಧ್ಯಾಹ್ನ 12:08ರ ಸುಮಾರಿಗೆ ಸೂಳೂರು ವಾಯುನೆಲೆಯಲ್ಲಿ ಏರ್ ಟ್ರಾಫಿಕ್ ತನ್ನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ ಎಂದು ವಿವರಿಸಿದರು. ಇದನ್ನೂ ಓದಿ: ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಬ್ಲ್ಯಾಕ್‌ ಬಾಕ್ಸ್ ಪತ್ತೆ- ಬಯಲಾಗುತ್ತಾ ದುರಂತದ ರಹಸ್ಯ?

    ಕೆಲವು ಸ್ಥಳೀಯರು ಕೂನೂರು ಸಮೀಪದ ಕಾಡಿನಲ್ಲಿ ಬೆಂಕಿಯನ್ನು ಕಂಡು ಸ್ಥಳಕ್ಕೆ ಧಾವಿಸಿದರು. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರ್ ಅನ್ನು ಸ್ಥಳೀಯರು ನೋಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಎಲ್ಲರನ್ನೂ ಮಿಲಿಟರಿ ಆಸ್ಪತ್ರೆಗೆ ಸಾಗಿಸಲಾಯಿತು. ದುರಾದೃಷ್ಟವಶಾತ್ ಸಿಡಿಎಸ್ ಜನರಲ್ ಬಿಪಿನ್ ರಾವತ್, ಪತ್ನಿ ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು – ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು

    ಈ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಸ್ಥಿತಿ ಗಂಭೀರವಾಗಿದ್ದರೂ, ಆರೋಗ್ಯ ಸ್ಥಿರವಾಗಿದೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ಗ್ರೂಪ್ ಕ್ಯಾಪ್ಟನ್ ಸಿಂಗ್ ಅವರು ತೀವ್ರ ಸುಟ್ಟ ಗಾಯಗಳಿಂದ ವೆಲ್ಲಿಂಗ್ಟನ್‍ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತಕ್ಕೆ ಬಲಿಯಾಗಿರುವ ಸಾಯಿ ತೇಜ್‍ಗೆ 27 ವರ್ಷ!

    ಹೆಲಿಕಾಪ್ಟರ್ ಪತನಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ ತನಿಖೆಗೆ ಆದೇಶಿಸಲಾಗಿದೆ. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖಾ ತಂಡವು ನಿನ್ನೆಯೇ ದುರಂತದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಯಾರು ಗೊತ್ತಾ?

    ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸೇನಾ ಗೌರವಗಳೊಂದಿಗೆ ನೆರವೇರಿಸಲಾಗುವುದು. ಇತರ ಸೇನಾ ಸಿಬ್ಬಂದಿಯ ಅಂತಿಮ ವಿಧಿವಿಧಾನಗಳನ್ನು ಸೂಕ್ತ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಇದಕ್ಕೂ ಮುನ್ನ ದುರಂತದಲ್ಲಿ ಸಾವಿಗೀಡಾದ ಬಿಪಿನ್ ರಾವತ್, ಪತ್ನಿ ಹಾಗೂ ಸೇನಾ ಸಿಬ್ಬಂದಿಗೆ ಪಾರ್ಲಿಮೆಂಟ್‍ನಲ್ಲಿ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರ್ಮರಣ

  • ಲೇಹ್, ಲಡಾಖ್‍ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ- ಸಮರಾಭ್ಯಾಸ ವೀಕ್ಷಣೆ

    ಲೇಹ್, ಲಡಾಖ್‍ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ- ಸಮರಾಭ್ಯಾಸ ವೀಕ್ಷಣೆ

    ಲಡಾಖ್: ಕಳೆದ ಎರಡು ತಿಂಗಳಿನಿಂದ ಭಾರತ ಮತ್ತು ಚೀನಾ ಗಡಿ ಪ್ರದೇಶದಲ್ಲಿದ್ದ ಉದ್ವಿಗ್ನ ಪರಿಸ್ಥಿತಿ ತಿಳಿಯಾಗುತ್ತಿದೆ. ಪರಿಣಾಮ ಗಡಿ ಪ್ರದೇಶದ ಪರಿಸ್ಥಿತಿಗಳನ್ನು ಅರಿಯಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲೇಹ್‍, ಲಡಾಖ್ ಮತ್ತು ಜಮ್ಮು ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸವನ್ನು ಕೈಗೊಂಡಿದ್ದಾರೆ.

    ಲೇಹ್‍ನಲ್ಲಿ ಪ್ಯಾರಾ ಡ್ರಾಪಿಂಗ್ ಕೌಶಲವನ್ನು ವೀಕ್ಷಿಸಿದ ರಾಜನಾಥ್ ಸಿಂಗ್ ಬಳಿಕ ಪ್ಯಾರಾ ಡ್ರಾಪಿಂಗ್ ಮತ್ತು ಸ್ಕೋಪಿಂಗ್ ಶಸ್ತ್ರಾಸ್ತ್ರಗಳ ಪರಿಶೀಲನೆ ನಡೆಸಿದರು. ‘ಗಡಿಯಲ್ಲಿ ಪರಿಸ್ಥಿತಿ ಪರಿಶೀಲಿಸಲು ಭೇಟಿ ನೀಡಿದ್ದು, ಈ ಪ್ರದೇಶದಲ್ಲಿ ನಿಯೋಜಿಸಲಾಗಿರುವ ಭದ್ರತಾ ಪಡೆಯ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

    ಲೇಹ್‍ನ ಸ್ಟಕ್ನಾದಲ್ಲಿ ಭಾರತೀಯ ಸೇನೆಯ ಟಿ-90 ಟ್ಯಾಂಕ್‍ಗಳು ಮತ್ತು ಬಿಎಂಪಿ ಕಾಲಾಳು ಪಡೆಯ ಯುದ್ಧ ವಾಹನಗಳು ಈ ಸಂದರ್ಭದಲ್ಲಿ ಸಮರಾಭ್ಯಾಸ ನಡೆಸಿದ್ದು, ರಾಜ್‍ನಾಥ್ ಸಿಂಗ್, ಬಿಪಿನ್ ರಾವತ್ ಸೇನೆಯ ಸಮರಾಭ್ಯಾಸವನ್ನು ವೀಕ್ಷಿಸಿದರು. ಸಚಿವ  ರಾಜನಾಥ್ ಸಿಂಗ್ ಅವರಿಗೆ ಭೇಟಿ ಸಂದರ್ಭದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ಅವರು ಸಾಥ್ ನೀಡಿದ್ದಾರೆ.

    ಇಂದು ಮತ್ತು ನಾಳೆ ಗಡಿ ಪ್ರದೇಶದ ಪರಿಶೀಲನೆ ಬಳಿ ಸೈನ್ಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಚಿವರು ಮಾಹಿತಿ ಪಡೆಯಲಿದ್ದಾರೆ. ಆ ಬಳಿಕ ಶನಿವಾರ ಮಧ್ಯಾಹ್ನ ಶ್ರೀನಗರಕ್ಕೆ ಭೇಟಿ ನೀಡಿ ಅಲ್ಲಿಂದ ಪಾಕಿಸ್ತಾನದ ಗಡಿ ಪ್ರದೇಶಕ್ಕೆ ಪರಿಸ್ಥಿತಿಯನ್ನು ವಿಕ್ಷೀಸಲಿದ್ದಾರೆ. ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ. ಉಳಿದಂತೆ ಇದೇ ಜುಲೈ 03 ರಂದು ಪ್ರಧಾನಿ ಮೋದಿ ಲಡಾಖ್ ಭೇಟಿ ನೀಡಿ ಸೈನಿಕರಿಗೆ ಧೈರ್ಯ ತುಂಬುವ ಕಾರ್ಯ ಮಾಡಿದ್ದರು.