Tag: degree

  • KSET -23 ತಾತ್ಕಾಲಿಕ ಅಂಕ ಪ್ರಕಟ

    KSET -23 ತಾತ್ಕಾಲಿಕ ಅಂಕ ಪ್ರಕಟ

    ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆಸೆಟ್-2023 (KSET-23) ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

    ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲಾ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು (Marks) ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ (keakset2023@gmail.com) ಮಾಡಬೇಕು ಎಂದು ಸೂಚಿಸಿದೆ. ಜನವರಿ 13ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ ಏ.4ರಂದು ಅಂತಿಮ ಕೀ ಉತ್ತರಗಳನ್ನು (Key Answer) ಬಿಡುಗಡೆ ಮಾಡಿತ್ತು.  ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಹಿಂಪಡೆಯಲು ಕೋರ್ಟ್‌ನಿಂದ ಯಾವುದೇ ಆದೇಶ ಬಂದಿಲ್ಲ: MEA

     

    ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್‌ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಇಲ್ಲ – ಪುತ್ರನಿಗೆ ಬಿಜೆಪಿ ಮಣೆ

     

  • ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

    ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

    ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ (Sringeri) ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.

    ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ.

    ಸುರಕ್ಷಾ ಗಣೇಶ ಹಬ್ಬಕ್ಕೆಂದು (Ganesh Festival) ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

     

    ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು.

    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ

    EDUCATION
    ಸಾಂದರ್ಭಿಕ ಚಿತ್ರ

    ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

    ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

    ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಅಮರನಾಥಕ್ಕೆ ರಾಜ್ಯದಿಂದ 100ಕ್ಕೂ ಹೆಚ್ಚು ಯಾತ್ರಿಕರು ಭೇಟಿ: ಎಲ್ಲ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ

    ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜುಲೈ 11ರಿಂದ ಪದವಿ ಕಾಲೇಜು ದಾಖಲಾತಿ- ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಕೆ: ಅಶ್ವಥ್ ನಾರಾಯಣ

    ಜುಲೈ 11ರಿಂದ ಪದವಿ ಕಾಲೇಜು ದಾಖಲಾತಿ- ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಕೆ: ಅಶ್ವಥ್ ನಾರಾಯಣ

    ಬೆಂಗಳೂರು: ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

    ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಎಲ್ಲವೂ ಆನ್ ಲೈನ್ ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಸಿಂಗಲ್ ಲಾಗಿನ್ ನಿಂದಲೇ ಯಾವ ಕಾಲೇಜಿಗೆ ಬೇಕಾದರೂ ಅರ್ಜಿ ಹಾಕಬಹುದು ಎಂದು ಮಾಹಿತಿ ನೀಡಿದರು.

    ಅರ್ಜಿ ಹಾಕಲು ಬೇರೆ ಬೇರೆ ಸಂಸ್ಥೆಗಳಿಗೆ ಓಡಾಡುವ ಅಗತ್ಯ ಇಲ್ಲ. ಪಿಯುಸಿ ನಂಬರ್ ಹಾಕಿದರೆ ಆಂಕಪಟ್ಟಿಗೆ ಸಂಬಂಧಿಸಿದ ಮಾಹಿತಿ ಸಿಗಲಿದೆ. ಉಳಿದಂತೆ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಇತ್ಯಾದಿಗಳು ಕೂಡ ಆಧಾರ್ ದೃಢೀಕರಣದಿಂದ ಸಿಗಲಿವೆ ಎಂದು ಸಚಿವರು ವಿವರಿಸಿದರು.

    ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರದಲ್ಲಿ ಎರಡನೇ ವರ್ಷಕ್ಕೆ ಬೇಕಾದ ಪಠ್ಯಕ್ರಮದ ಬಗ್ಗೆ ಇತ್ತೀಚೆಗೆ ಕುಲಪತಿಗಳ ಸಭೆ ನಡೆಸಲಾಗಿದೆ. ಹಾಗೆಯೇ ಮೊದಲನೇ ವರ್ಷದಲ್ಲಿ ಎನ್ ಇ ಪಿ 2020 ಅನುಷ್ಠಾನವನ್ನು ಪರಿಣಾಮಕಾರಿಯಾಗಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ ಎಂದರು.

    ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 100 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಂಗ್ರಹವಾಗುವ ಶುಲ್ಕವನ್ನು ಇನ್ನು ಮುಂದೆ ಕಾಲೇಜುಗಳಲ್ಲೇ ಬಳಸಲು ಅವಕಾಶ ನೀಡಲಾಗಿದೆ. ಸ್ವಾತಂತ್ರ್ಯ ಬಂದ ಮೇಲೆ ಇದೇ ಮೊದಲು ಈ ರೀತಿಯ ತೀರ್ಮಾನ ಮಾಡಲಾಗಿದೆ. ವರ್ಷಕ್ಕೆ ಕನಿಷ್ಠ 50 ಕೋಟಿ ರೂಪಾಯಿ ಹಣ ಕಾಲೇಜುಗಳಲ್ಲೇ ಉಳಿಯಲಿದ್ದು ಅದರಿಂದ ಕಾಲೇಜುಗಳಲ್ಲಿನ ಸಣ್ಣಪುಟ್ಟ ಖರ್ಚುಗಳಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

    ಈಗ ವಿ.ವಿ.ಗಳ ಮೂಲಕ ಸರ್ಕಾರಕ್ಕೆ ಭೌತಿಕ ಕಡತ ಸಲ್ಲಿಸಲು ಅವಕಾಶ ನಿರಾಕರಿಸಲಾಗಿದೆ. ಎಲ್ಲಾ ಕಡತಗಳು ಇ-ಆಫೀಸ್ ಮೂಲಕವೇ ಬರುತ್ತಿದ್ದು, 32,000 ಇ- ಕಡತಗಳು ಸೃಜನೆಗೊಂಡಿವೆ. ಜೊತೆಗೆ 11 ಲಕ್ಷ ವಿದ್ಯಾರ್ಥಿಗಳಿಗೆ 1600 ಕೋಟಿ ರೂಪಾಯಿಗಳನ್ನು ಪೋರ್ಟಲ್ ಮೂಲಕ ಅವರವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಎಲ್ಲಾ ವಿ.ವಿ.ಗಳಲ್ಲೂ ಎಚ್.ಆರ್.ಎಂ.ಎಸ್. ಪ್ಲ್ಯಾಟ್ ಫಾರ್ಮ್ ಮೂಲಕವೇ ವೇತನ ಪಾವತಿ ಆಗುತ್ತಿದೆ ಎಂದು ಹೇಳಿದರು.

    ಐಐಎಂ ಮಾದರಿಯಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಡಾ.ವಾಸುದೇವ ಅತ್ರೆ ಸಮಿತಿ ವರದಿ ಕೊಟ್ಟಿದೆ. ಇದರ ಪ್ರಕಾರ ಹೊಸ ಕಾಯ್ದೆ ರಚಿಸಲು ಉದ್ದೇಶಿಸಿದ್ದು ಅದನ್ನು ಸಾರ್ವಜನಿಕರ ಅವಗಹನೆಗೆ ಉನ್ನತ ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಹಾಕಲಾಗಿದೆ. ಸಾರ್ವಜನಿಕರು ಹೊಸ ಕಾಯ್ದೆ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು ಎಂದರು.

    Live Tv
    [brid partner=56869869 player=32851 video=960834 autoplay=true]

  • ಚಹಾ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ಅರ್ಥಶಾಸ್ತ್ರ ಪದವೀಧರೆ

    ಚಹಾ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ಅರ್ಥಶಾಸ್ತ್ರ ಪದವೀಧರೆ

    ಪಾಟ್ನಾ: ಉನ್ನತ ಶಿಕ್ಷಣ ಪಡೆದರೂ ಹಲವು ಮಂದಿಗೆ ಕೆಲಸ ಸಿಗದೆ ಮನೆಯಲ್ಲಿಯೇ ಇರುವ ಅನೇಕ ಉದಾಹರಣೆಗಳು ಮನಮ್ಮ ಕಣ್ಣ ಮುಂದಿವೆ. ಆದರೆ ಇಲ್ಲೊಬ್ಬ ಯುವತಿ ಮಾತ್ರ ತನಗೆ ಕೆಲಸ ಸಿಕ್ಕಿಲ್ಲ ಎಂದು ಕೈ ಕಟ್ಟಿ ಕುಳಿತುಕೊಳ್ಳದೆ ಪರ್ಯಾಯ ಉಪಾಯ ಕಂಡುಕೊಂಡು ಜೀವನ ರೂಪಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಹೌದು. ಪ್ರಿಯಾಂಕಾ ಗುಪ್ತಾ ಪರ್ಯಾಯ ಮಾರ್ಗ ಕಂಡುಕೊಂಡು ಯಶಸ್ಸು ಕಂಡ ಯುವತಿ. ಪಾಟ್ನಾ ಮೂಲದವರಾಗಿರುವ ಈಕೆ 2019ರಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದುಕೊಂಡಿದ್ದಾರೆ. ಆದರೆ ಆ ಬಳಿಕ ಇವರು ಸಾಕಷ್ಟು ಕಡೆಗಳಲ್ಲಿ ಪ್ರಯತ್ನಿಸಿದರೂ ಎಲ್ಲಿಯೂ ಉದ್ಯೋಗ ದೊರಕಲಿಲ್ಲ. ಬರೋಬ್ಬರಿ 2 ವರ್ಷಗಳಿಂದ ಹುಡುಕಿದರೂ ಕೆಲಸ ಸಿಗದ ಪರಿಣಾಮ 24 ವರ್ಷದ ಪ್ರಿಯಾಂಕಾ, ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಲು ನಿರ್ಧರಿಸಿದ್ದಾರೆ. ಅಂತೆಯೇ ಚಹಾ ಅಂಗಡಿಯೊಂದನ್ನು ಓಪನ್ ಮಾಡಿದ್ದಾರೆ.

    ಪಾಟ್ನಾದ ಮಹಿಳಾ ಕಾಲೇಜು ಮುಂದೆ ಚಹಾ ಅಂಗಡಿ ತೆರೆದು, ಇದೀಗ ಇದರಲ್ಲಿ ಯಶಸ್ಸು ಕಂಡಿದ್ದಾರೆ. ತಮ್ಮ ಅಂಗಡಿಯಲ್ಲಿ ಅತೀ ಕಡಿಮೆ ಬೆಲೆಗೆ ಕುಲ್ಹಾದ್ ಟೀ, ಮಸಾಲಾ ಟೀ, ಪಾನ್ ಚಹಾ ಮತ್ತು ಚಾಕ್ಲೇಟ್ ಟೀ ಮಾರಾಟ ಮಾಡುತ್ತಿದ್ದಾರೆ. ಅತಿ ಕಡಿಮೆ ಅವಧಿಯಲ್ಲಿ ಟೀ ಸ್ಟಾಲ್ ಹೆಚ್ಚು ಜನಪ್ರಿಯವಾಗಿದ್ದು, ಕೇವಲ 15ರಿಂದ 20ರೂ.ಗೆ ಚಹಾ ಮಾರಾಟ ಮಾಡುತ್ತಿರುವುದರಿಂದ ಇದೀಗ ಪ್ರಿಯಾಂಕಾ ಹೆಚ್ಚಿನ ಆದಾಯ ಸಹ ಗಳಿಸುತ್ತಿದ್ದಾರೆ.

    ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಬ್ಯಾಂಕ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅನುತ್ತೀರ್ಣವಾದ ಬಳಿಕ ಚಹಾ ಅಂಗಡಿ ಓಪನ್ ಮಾಡುವ ನಿರ್ಧಾರ ಮಾಡಿದ್ದೇನೆ. ಇದೀಗ ಸ್ವಂತ ಚಹಾ ಅಂಗಡಿ ನಡೆಸುತ್ತಿದ್ದು, ಆರಂಭದಲ್ಲಿ ನನ್ನ ಸ್ನೇಹಿತರು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಇದೀಗ ಸ್ವಾವಲಂಬಿಯಾಗಿ ಜೀವನ ನಡೆಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಭಾರತದಿಂದ ವೈದ್ಯಕೀಯ ಉಪಕರಣ ಬಯಸಿದ ರಷ್ಯಾ

    ಪ್ರಿಯಾಂಕಾ ತಮ್ಮ ಟೀ ಸ್ಟಾಲ್‍ಗೆ ‘ಚಾಯ್ ವಾಲಿ’ ಎಂದು ಹೆಸರಿಟ್ಟಿದ್ದಾರೆ. ಇವರಿಗೆ ಬೆಂಗಳೂರಿನ ಎಂಬಿಎ ಚಾಯ್ ವಾಲಾ ಎಂದೇ ಖ್ಯಾತಿ ಪಡೆದಿರುವ ಪ್ರಫುಲ್ ಬಿಲೋರ್ ಅವರು ಮಾದರಿಯಂತೆ. ಅಲ್ಲದೆ ಅವರ ಅಂಗಡಿಯ ಕೆಲವೊಂದು ಪಂಚ್ ಲೈನ್ ಅನ್ನು ತಮ್ಮ ಅಂಗಡಿಯಲ್ಲಿ ಪ್ರಿಯಾಂಕಾ ಬರೆದುಕೊಂಡಿದ್ದಾರೆ.

  • ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ಸೂಚನೆ: ಅಶ್ವಥ್ ನಾರಾಯಣ

    ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ಸೂಚನೆ: ಅಶ್ವಥ್ ನಾರಾಯಣ

    ಬೆಂಗಳೂರು: ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

    ಕೊರೊನಾ 3ನೇ ಅಲೆ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರ ಹಿನ್ನಲೆಯಲ್ಲಿ ಸಿಲಬಸ್ ಮುಕ್ತಾಯ ಆಗಿರಲಿಲ್ಲ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿವಿಗಳಿಗೆ ಸೆಮಿಸ್ಟರ್ ಪರೀಕ್ಷೆ  ಮುಂದೂಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ತಮಿಳುನಾಡು ಸಿಎಂ ಮನೆಗೆ ಶಿವರಾಜ್‍ಕುಮಾರ್ ದಂಪತಿ ಭೇಟಿ

    ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳೆಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ ಮೇಲೆ ಹೇಳಿದ ಕಾರಣಗಳಿಂದ  ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದಾರೆ.

     

  • ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಅಶ್ವತ್ಥ ನಾರಾಯಣ

    ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಅಶ್ವತ್ಥ ನಾರಾಯಣ

    ಬೆಂಗಳೂರು: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

    ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದಿದ್ದಾರೆ.

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು ‘ಡಿಗ್ರಿ ಆನರ್ಸ್’ ಎಂದು ಪರಿಗಣಿಸಲಾಗುತ್ತದೆ, ಮತ್ತೂ ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಡಿಸಿಎಂ ವಿವರಿಸಿದ್ದಾರೆ.

    ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಪುನುರುಚ್ಛರಿಸಿದ್ದಾರೆ. ಇದನ್ನೂ ಓದಿ: ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಐಟಿಸಿಎ ಫೆಲೋಶಿಪ್

    ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ದೃಷ್ಟಿ ಇಟ್ಟುಕೊಂಡು ಅತ್ಯಂತ ಪುರಾತನ ಭಾಷೆಯಾದ ಕನ್ನಡದ ಭೋಧನೆ ಮತ್ತು ಕಲಿಕೆಯನ್ನು ಮತ್ತಷ್ಟು ವಿಸ್ತೃತಗೊಳಿಸುವ ಉದ್ದೇಶ ಸರಕಾರಕ್ಕೆ ಇದೆಯೇ ವಿನಾ, ಅದಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ಚಿಂತನೆ ಹೊಂದಿಲ್ಲ. ಈ ಬಗ್ಗೆ ಯಾವುದೇ ತಪ್ಪು ಅಭಿಪ್ರಾಯ ಉಂಟಾಗುವುದು ಬೇಡ ಎಂದು ಡಿಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಡಾ.ಅಶ್ವತ್ಥನಾರಾಯಣ್ ಫೌಂಡೇಶನ್‍ನಿಂದ ಮಲ್ಲೇಶ್ವರ ಕ್ಷೇತ್ರದಲ್ಲಿ 25,000 ಲಸಿಕೆ -ಡಿಸಿಎಂ

    ಈ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಆಗುತ್ತದೆ. ಅಂದರೆ, ಮೊದಲ ವರ್ಷವನ್ನು ಶೂನ್ಯವರ್ಷ ಎಂದು ಪರಿಗಣಿಸಲಾಗಿದೆ. ಆಡಳಿತಾತ್ಮಕ-ಕಾನೂನಾತ್ಮಕ ಸಿದ್ಧತೆಗಳನ್ನು ಪ್ರಸಕ್ತ ವರ್ಷದಲ್ಲಿ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಅದರ ರೂಪುರೇಶೆಯಷ್ಟೇ ಸದ್ಯಕ್ಕೆ ಸಿದ್ಧವಾಗುತ್ತಿದೆ. ಕನ್ನಡ ಕಲಿಕೆಯನ್ನು ಮೊಟಕುಗೊಳಿಸಲಾಗುತ್ತದೆ ಎಂದು ಈಗಲೇ ಆತಂಕಪಡುವುದು ಬೇಡ. ಸೂಕ್ತ ಮಾಹಿತಿ ಪಡೆದುಕೊಂಡು ಗೊಂದಲ ಬಗೆಹರಿಸಿಕೊಳ್ಳಬಹುದು ಎಂದು ಡಿಸಿಎಂ ಮನವಿ ಮಾಡಿದರು. ಇದನ್ನೂ ಓದಿ: ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ವ್ಯಾಕ್ಸಿನ್: ಅಶ್ವತ್ಥನಾರಾಯಣ್

  • ಆಟೋ ಹತ್ತಿದ ಪದವಿ ವಿದ್ಯಾರ್ಥಿನಿ- ಪೊದೆಯತ್ತ ಎಳೆದು ಚಾಲಕ ರೇಪ್!

    ಆಟೋ ಹತ್ತಿದ ಪದವಿ ವಿದ್ಯಾರ್ಥಿನಿ- ಪೊದೆಯತ್ತ ಎಳೆದು ಚಾಲಕ ರೇಪ್!

    ಹೈದರಾಬಾದ್: ಪದವಿ ವಿದ್ಯಾರ್ಥಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ಹೈದರಾಬಾದ್‍ನ ಘಟ್ಕಸರ್ ನಲ್ಲಿ ಬುಧವಾರ ನಡೆದಿದೆ.

    ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ವಾಪಸ್ಸಾಗುತ್ತಿದ್ದಳು. ಈ ಸಂದರ್ಭದಲ್ಲಿ ಮನೆಗೆ ತೆರಳಲೆಂದು ಆಕೆ ಆಟೋ ಹತ್ತಿದ್ದಾಳೆ. ಆದರೆ ಚಾಲನ ಇದೇ ಸಮಯದಲ್ಲಿ ಆಕೆಯನ್ನು ಕಿಡ್ನಾಪ್ ಮಾಡಿ ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲದೆ ಪೊದೆಯ ಬಳಿ ಆಕೆಯನ್ನು ಎಳೆದುಕೊಂಡು ಹೋಗಿ ತನ್ನ ಕಾಮ ತೃಷೆ ತೀರಿಸಿಕೊಂಡಿದ್ದಾನೆ.

    ಅತ್ಯಾಚಾರ ಎಸಗಿದ ಬಳಿಕ ಚಾಲಕ ತನ್ನ ಆಟೋದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇತ್ತ ವಿದ್ಯಾರ್ಥಿನಿ ರಸ್ತೆ ಬದಿ ಬಂದು ಸಹಾಯಕ್ಕಾಗಿ ಅಂಗಲಾಚಿದ್ದಾಳೆ. ಈ ವಿಚಾರ ಬಯಲಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕುಡಲೇ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಘಟನೆ ಸಂಬಂಧ ಘಟ್ಕಸರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ಬೆಂಗ್ಳೂರು ವಿವಿಯಿಂದ ಸಿಹಿ ಸುದ್ದಿ- ಪದವಿ ಪಡೆಯಲು ಮತ್ತೊಂದು ಅವಕಾಶ!

    ಬೆಂಗ್ಳೂರು ವಿವಿಯಿಂದ ಸಿಹಿ ಸುದ್ದಿ- ಪದವಿ ಪಡೆಯಲು ಮತ್ತೊಂದು ಅವಕಾಶ!

    ಬೆಂಗಳೂರು: ಪದವಿ ಪೂರ್ಣಗೊಳಿಸಲು ಸಾಧ್ಯವಾಗದೆ ಸಮಸ್ಯೆ ಎದುರಿಸಿದ್ದ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಮತ್ತೊಮ್ಮೆ ಪರೀಕ್ಷೆ ಬರೆಯಲು ಒಂದು ಸುವರ್ಣ ಅವಕಾಶ ನೀಡಲು ಚಿಂತನೆ ನಡೆಸಿದೆ. ವಿವಿಯ ಹಳೆಯ ವಿದ್ಯಾರ್ಥಿಗಳಿಗೆ ಪದವಿ ಪಡೆದುಕೊಳ್ಳಲು ಅವಕಾಶವನ್ನು ಮಾಡಿಕೊಡಲಿದೆ.

    ಹಳೆಯ ವಿದ್ಯಾರ್ಥಿಗಳು ಪಾಸ್ ಆಗದ ವಿಷಯಗಳನ್ನು ಮತ್ತೆ ಪರೀಕ್ಷೆ ಬರೆದು ಪಾಸ್ ಮಾಡಿಕೊಳ್ಳುವ ಸುವರ್ಣ ಅವಕಾಶವನ್ನು ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾಡಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಲಿದೆ ಎಂಬ ಮಾಹಿತಿ ಲಭಿಸಿದೆ.

    2004ರಿಂದ 2019ರವರೆಗೆ ಇಂಜಿನಿಯರಿಂಗ್ ಒಳಗೊಂಡಂತೆ ಎಲ್ಲಾ ಪದವಿ ಕೋರ್ಸ್‌ಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬಹುದಾಗಿದೆ. ಇಂತಹ ಸಾವಿರಾರು ವಿದ್ಯಾರ್ಥಿಗಳ ಪೈಕಿ ಕೆಲವರು ಮತ್ತೊಮ್ಮೆ ಅವಕಾಶ ನೀಡುವಂತೆ ಬೆಂ.ವಿ.ವಿ.ಗೆ ಪತ್ರ ಬರೆದು ಮನವಿ ಮಾಡಿದ್ದರು. ಒಂದಾದ ಮೇಲೆ ಒಂದರಂತೆ ಸಾಕಷ್ಟು ಮನವಿ ಪತ್ರಗಳು ವಿವಿಗೆ ಬಂದ ಹಿನ್ನಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

    ಅದಷ್ಟು ಬೇಗ ಪ್ರಕಟಣೆ ಹೊರಡಿಸಿ 2004 ರಿಂದ 2019 ರ ನಡುವೆ ವ್ಯಾಸಂಗ ಮಾಡಿ ಪದವಿ ಪಡೆದುಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸುವ ಅವಕಾಶ ಮಾಡಿಕೊಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ. ಅನುತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸುವ ಆಶಾಕಿರಣ ಮತ್ತೊಮ್ಮೆ ಮೂಡಿದೆ.

  • ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವಂತೆ ಆಗ್ರಹ

    ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವಂತೆ ಆಗ್ರಹ

    ಬೆಳಗಾವಿ: ಸರ್ಕಾರಿ ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡುವಂತೆ ಒತ್ತಾಯಿಸಿ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು.

    ರಾಜ್ಯದಲ್ಲಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಲ್ಯಾಪ್‍ಟಾಪ್ ನೀಡುತ್ತಿದೆ. ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಉನ್ನತ ಶಿಕ್ಷಣ ನಿರ್ದೇಶಕ ಮತ್ತು ಕಾಲೇಜಿನ ಪ್ರಾಚಾರ್ಯರರು ಕೇವಲ ಪ್ರಥಮ ವರ್ಷ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿದ್ದಾರೆ. ಎಲ್ಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡಬೇಕೆಂದು ಆಗ್ರಹಿಸಿದರು.

    ಕಿರಣ ದುಶಾಂದಾರ, ಕಿಶೋರಿ ಪಾಟೀಲ, ಸಂದ್ಯಾ ಹೆಗಡೆ, ರಾಕೇಶ ಬಲಭೀಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.