Tag: Dehradun Accident

  • ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    – ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದ ವಿದ್ಯಾರ್ಥಿಗಳು

    ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.

    ಟೊಯೋಟಾ ಇನ್ನೋವಾ ಕಾರ್‌ನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಕುಡಿದು ಕಾರ್ ರೇಸ್ ಮಾಡುತ್ತಿದ್ದರು ಎನ್ನಲಾಗಿದೆ. ಮುಂದಿದ್ದ ಟ್ರಕ್‌ಗೆ ಕಾರು ಗುದ್ದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ವಿದ್ಯಾರ್ಥಿಗಳ ದೇಹಗಳು ಚೆಲ್ಲಾಪಿಲ್ಲಿಯಾಗಿವೆ.

    ಕೆಲವು ವಿದ್ಯಾರ್ಥಿಗಳ ರುಂಡ, ಮುಂಡ ಬೇರ್ಪಟ್ಟಿದೆ. ಕಾಲೇಜು ವಿದ್ಯಾರ್ಥಿಗಳು ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದರು.