Tag: Delhi Airport

  • ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಕಾರ್ಯಾಚರಣೆಗೂ ಅಡ್ಡಿ

    ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಕಾರ್ಯಾಚರಣೆಗೂ ಅಡ್ಡಿ

    ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ (Delhi NCR) ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ (Delhi Airport) ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯಾಗಿ 209 ನಿರ್ಗಮನ ಮತ್ತು 43 ಆಗಮನದಲ್ಲಿ ವಿಳಂಬವಾಗಿದೆ.

    ನಿರಂತರ ಮಳೆಯಿಂದಾಗಿ ನೋಯ್ಡಾ ಮತ್ತು ಗಾಜಿಯಾಬಾದ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ, ಡಿಫೆನ್ಸ್ ಕಾಲೋನಿ ಮತ್ತು ಪ್ರೀತ್ ವಿಹಾರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವ್ಯಾಪಕ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಿದೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

    ರಾಜಧಾನಿಯ ಹಲವಾರು ಪ್ರಮುಖ ಮಾರ್ಗಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಡಿಎನ್‌ಡಿ ಫ್ಲೈವೇ, ಮಥುರಾ ರಸ್ತೆ, ವಿಕಾಸ್ ಮಾರ್ಗ, ಐಎಸ್‌ಬಿಟಿ, ಗೀತಾ ಕಾಲೋನಿ ಮತ್ತು ರಾಜಾರಾಮ್ ಕೊಹ್ಲಿ ಮಾರ್ಗ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಂಚಾರ ನಿಧಾನಗತಿಯಲ್ಲಿ ಸಾಗಿತು. ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

    ಬದರ್ಪುರದಿಂದ ಆಶ್ರಮದವರೆಗೆ ವಾಹನಗಳ ಉದ್ದನೆಯ ಸಾಲುಗಳು ಸಾಲುಗಟ್ಟಿ ನಿಂತಿದ್ದರಿಂದ ಕಚೇರಿ ಪ್ರಯಾಣಿಕರು ಮತ್ತು ಶಾಲಾ ಬಸ್‌ಗಳು ಸಾಕಷ್ಟು ವಿಳಂಬವಾದವು. ಇದನ್ನೂ ಓದಿ: ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

  • ಬೆಂಗಳೂರು ಏರ್‌ಪೋರ್ಟ್‌ನಲ್ಲಿ  2020 ರಿಂದ ಇಲ್ಲಿಯವರೆಗೆ 343 ಬಾರಿ ಪಕ್ಷಿಗಳು ಡಿಕ್ಕಿ

    ಬೆಂಗಳೂರು ಏರ್‌ಪೋರ್ಟ್‌ನಲ್ಲಿ 2020 ರಿಂದ ಇಲ್ಲಿಯವರೆಗೆ 343 ಬಾರಿ ಪಕ್ಷಿಗಳು ಡಿಕ್ಕಿ

    ನವದೆಹಲಿ: ಬೆಂಗಳೂರು (Bengaluru) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) 2020 ರಿಂದ ಇಲ್ಲಿಯವರೆಗೆ 343 ಬಾರಿ ಪಕ್ಷಿಗಳು (Bird Hit Incidents) ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ಕೇಂದ್ರ ಸರ್ಕಾರ (Union Government) ಹೇಳಿದೆ.

    ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ (Murlidhar Mohol) ಅವರು ರಾಜ್ಯಸಭೆಗೆ (Rajya Sabha) ಈ ಮಾಹಿತಿ ನೀಡಿದ್ದಾರೆ. ಭಾರತದಲ್ಲಿರುವ ಪ್ರಮುಖ ವಿಮಾನ ನಿಲ್ದಾಣಗಳಿಗೆ ಹೋಲಿಸಿದರೆ ದೆಹಲಿಯಲ್ಲಿ ಅತಿ ಹೆಚ್ಚು ಬಾರಿ ಪಕ್ಷಿಗಳು ಡಿಕ್ಕಿ ಹೊಡೆದಿವೆ. 2020 ರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 695 ಬಾರಿ ಪಕ್ಷಿಗಳು ವಿಮಾನಕ್ಕೆ ಡಿಕ್ಕಿಯಾಗಿವೆ.

    ದೆಹಲಿಯ ಬಳಿಕ ಮುಂಬೈ (407), ಮೂರನೇ ಸ್ಥಾನದಲ್ಲಿ ಅಹಮದಾಬಾದ್ (337) ಮತ್ತು ನಾಲ್ಕನೇ ಸ್ಥಾನದಲ್ಲಿ ಬೆಂಗಳೂರು (343) ಇದೆ. ದೇಶದ ಅತಿದೊಡ್ಡ ವಿಮಾನ ನಿಲ್ದಾಣ ಆಗಿರುವ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ವರ್ಷ ಜೂನ್ ವರೆಗೆ 41 ಬಾರಿ ಪಕ್ಷಿಗಳು ಡಿಕ್ಕಿ ಹೊಡೆದಿವೆ. 2023 ರಲ್ಲಿ 185, 2022 ರಲ್ಲಿ 183, 2024 ರಲ್ಲಿ 130 ಬಾರಿ ಪಕ್ಷಿ ಡಿಕ್ಕಿ ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

    ವಿಶೇಷವಾಗಿ ವಿಮಾನ ಟೇಕಾಫ್‌ ಮತ್ತು ಲ್ಯಾಂಡಿಂಗ್ ಹಂತದಲ್ಲಿ ಪಕ್ಷಿಗಳು ಡಿಕ್ಕಿಯಾಗುತ್ತವೆ. ಪಕ್ಷಿ ಡಿಕ್ಕಿಯಾಗುವುದನ್ನು ತಪ್ಪಿಸಲು ವಿಮಾನ ನಿಲ್ದಾಣಗಳು ಹಲವಾರು ಕ್ರಮಗಳನ್ನು  ಕೈಗೊಂಡಿವೆ.  ಇದನ್ನೂ ಓದಿ: ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೆ ಏನಾಗುತ್ತೆ?

    ವಿಮಾನ ನಿಲ್ದಾಣದ ಬಳಿ ಮನೆ ಮತ್ತು ಅಡುಗೆ ತ್ಯಾಜ್ಯವನ್ನು ಎಸೆಯುವುದನ್ನು ತಪ್ಪಿಸಬೇಕು ಮತ್ತು ಪಕ್ಷಿಗಳು ಮತ್ತು ಪಾರಿವಾಳಗಳಿಗೆ ಆಹಾರವನ್ನು ನೀಡಬಾರದು ಎಂದು ಹೇಳಿವೆ. ಆಹಾರ ಹಾಕಿದಾಗ ಮತ್ತು ತ್ಯಾಜ್ಯ ಎಸೆದಾಗ ಅವುಗಳನ್ನು ತಿನ್ನಲು ಪಕ್ಷಿಗಳು ಹಾರುತ್ತಾ ಬರುವುದಿಂದ ವಿಮಾನಗಳಿಗೆ ಡಿಕ್ಕಿ ಹೊಡೆಯುವ ಸಾಧ್ಯತೆ ಹೆಚ್ಚಿರುತ್ತದೆ.

    ತೆರೆದ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮಾಂಸಕ್ಕಾಗಿ ವಧಿಸಬಾರದು. ಮುಖ್ಯವಾಗಿ ಖಾಲಿ ಇರುವ ಕಟ್ಟಡಗಳಿದ್ದಲ್ಲಿ ತಿಳಿಸಬೇಕು ಎಂದು ವಿಮಾನ ನಿಲ್ದಾಣಗಳು ಆಗಾಗ ಮನವಿ ಮಾಡುತ್ತಿರುತ್ತವೆ. ಕಟ್ಟಡಗಳು ಖಾಲಿ ಇದ್ದಲ್ಲಿ ಬಾವಲಿಗಳು ಆ ಜಾಗಕ್ಕೆ ಬರುವ ಸಾಧ್ಯತೆಗಳಿರುತ್ತವೆ.

  • ದೆಹಲಿಯಲ್ಲಿ ಭಾರೀ ಮಳೆ – ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು, ಧರೆಗುರುಳಿದ ಮರಗಳು

    ದೆಹಲಿಯಲ್ಲಿ ಭಾರೀ ಮಳೆ – ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು, ಧರೆಗುರುಳಿದ ಮರಗಳು

    – ವಿಮಾನ ಹಾರಾಟದಲ್ಲಿ ವ್ಯತ್ಯಯ, ರೆಡ್ ಅಲರ್ಟ್ ಘೋಷಣೆ

    ನವದೆಹಲಿ: ದೆಹಲಿ(Delhi) ಮತ್ತು ಎನ್‌ಆರ್‌ಸಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.

    ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Indira Gandhi International Airport) ಬೀಸಿದ ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ 100ಕ್ಕೂ ಹೆಚ್ಚು ವಿಮಾನಗಳ ಕಾರ್ಯಾಚರಣೆ ವಿಳಂಬವಾಗಿದೆ. ಅಲ್ಲದೇ ಭಾರೀ ಮಳೆಗೆ 25ಕ್ಕೂ ಹೆಚ್ಚು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಇದನ್ನೂ ಓದಿ: ಕೋವಿಡ್ ಆತಂಕ – ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೊರೊನಾ ಪಾಸಿಟಿವ್

    ದೆಹಲಿಯ ಮೋತಿ ಬಾಗ್, ಮಿಂಟೋ ರಸ್ತೆ, ದೆಹಲಿ ಕಂಟೋನ್ಮೆಂಟ್ ಮತ್ತು ದೀನ್ ದಯಾಳ್ ಉಪಾಧ್ಯಾಯ ಮಾರ್ಗಗಳು ಸಂಪೂರ್ಣ ಜಲಾವೃತವಾಗಿತ್ತು. ಮಹಿಪಾಲಪುರ ಮೇಲ್ಸೇತುವೆಯ ಕೆಳಗೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇದನ್ನೂ ಓದಿ: ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ

    ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ಮಳೆ ಪರಿಣಾಮ ಬೀರಿದೆ. ದೆಹಲಿಯ ಮೇಲಿನ ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಗಳಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದೆ ಎಂದು ಇಂಡಿಗೋ(Indigo) ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ಇದನ್ನೂ ಓದಿ: ‘ಬ್ರೋಕನ್‌ ಹಾರ್ಟ್‌ ಸಿಂಡ್ರೋಮ್‌’; ಇದು ಹೃದಯದ ಮಾತು – ಪುರುಷರೇ ಜೋಕೆ!

    ಇದೀಗ ಭಾರೀ ಮಳೆಗೆ ರಾಜಧಾನಿ ನವದೆಹಲಿ ಸೇರಿ ಹಲವೆಡೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

  • ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ದಟ್ಟ ಮಂಜು – 100ಕ್ಕೂ ಅಧಿಕ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ

    ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ದಟ್ಟ ಮಂಜು – 100ಕ್ಕೂ ಅಧಿಕ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ

    ನವದೆಹಲಿ: ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ದಟ್ಟ ಮಂಜು (Dense fog) ಆವರಿಸಿದ್ದು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಅಲ್ಲದೇ ಕಡಿಮೆ ಗೋಚರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ (Flights) ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ.

    ದಟ್ಟ ಮಂಜಿನಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಸಂಭವಿಸಿದೆ. CAT-III ಸಾಮರ್ಥ್ಯದ ವಿಮಾನಗಳು ಮಾತ್ರ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಹಾಗೂ ಟೇಕಾಫ್ ಆಗುತ್ತಿವೆ. ವಿಮಾನ ಕಾರ್ಯಾಚರಣೆಯ ಸ್ಥಿತಿಗತಿ ಬಗ್ಗೆ ತಿಳಿದುಕೊಂಡು ಏರ್‌ಪೋರ್ಟ್‌ಗೆ ಹೋಗಿ ಎಂದು ಇಂಡಿಗೊ ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು | ದರ್ಶನಕ್ಕೆ ಪಾಸ್‌ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!

    ಇನ್ನೂ Flightradar.com ಮಾಹಿತಿ ಪ್ರಕಾರ 100ಕ್ಕೂ ಅಧಿಕ ವಿಮಾನಗಳ ಕಾರ್ಯಾಚರಣೆಯಲ್ಲಿ ಏರುಪೇರಾಗಿದೆ. ಈ ನಡುವೆ ವಿಮಾನಗಳ ಕಾರ್ಯಾಚರಣೆ ಬಗ್ಗೆ ವಿಮಾನಯಾನ ಕಂಪನಿಗಳ ಜೊತೆ ಸಂಪರ್ಕದಲ್ಲಿರಿ ಎಂದಿರುವ ದೆಹಲಿ ವಿಮಾನ ನಿಲ್ದಾಣವು, ಉಂಟಾದ ಸಮಸ್ಯೆಗೆ ಪ್ರಯಾಣಿಕರ ಕ್ಷಮೆ ಕೋರಿದೆ. ಇದನ್ನೂ ಓದಿ: ಬೈಕ್ ನಿಲ್ಲಿಸಲು ಮೆಟ್ರೋ ಪಾರ್ಕಿಂಗ್‌ ಬಳಸುತ್ತಿದ್ದರೆ ಹುಷಾರಾಗಿರಿ!

    ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ ಸುಮಾರು 1,300 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ಇದನ್ನೂ ಓದಿ: Tirupati Stampede: ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನ, ಅಧಿಕಾರಿಗಳು ಅಮಾನತು

  • ದೆಹಲಿಯಲ್ಲಿ ವಾಯು ಮಾಲಿನ್ಯ; 300ಕ್ಕೂ ಅಧಿಕ ವಿಮಾನಗಳ ಹಾರಾಟ ವ್ಯತ್ಯಯ

    ದೆಹಲಿಯಲ್ಲಿ ವಾಯು ಮಾಲಿನ್ಯ; 300ಕ್ಕೂ ಅಧಿಕ ವಿಮಾನಗಳ ಹಾರಾಟ ವ್ಯತ್ಯಯ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ಮುಂದುವರಿದಿದೆ. ಇಂದು (ಗುರುವಾರ) ಮುಂಜಾನೆ AQI 452ರ ಗಡಿ ದಾಟಿದ್ದು ದಟ್ಟಮಂಜಿನಂತಹ ಹೊಗೆ ಆಚರಿಸಿಕೊಂಡಿತ್ತು. ಫ್ಲೈಟ್‌ರಾಡಾರ್ ಪ್ರಕಾರ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದೆ, ಇದರಿಂದಾಗಿ 300 ಅಧಿಕ ವಿಮಾನಗಳು ವಿಳಂಬವಾಗಿವೆ.

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಜಧಾನಿ ಪ್ರದೇಶದ ಹಲವಾರು ಪ್ರದೇಶಗಳಲ್ಲಿ AQI 450 ಕ್ಕಿಂತ ಹೆಚ್ಚು ದಾಖಲಾಗಿದೆ. ಆನಂದ್ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್ಪುರಿ, ಮುಂಡ್ಕಾ, ನಜಾಫ್ಗಢ್, ಲಜಪತ್ ನಗರ, ಪಟ್ಪರ್ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್, ಮತ್ತು ವಜೀರ್‌ಪುರ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಸೇರಿವೆ.

    ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್‌ನಿಂದ ದೆಹಲಿಗೆ ಹಿಂದಿರುಗಿದ ಬಗ್ಗೆ ಮಾತನಾಡಿ, ದೆಹಲಿಗೆ ಆಗಮಿಸಿದ್ದು `ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದ ಅನುಭವ’ ಎಂದು ಹೇಳಿದರು. ವಯನಾಡಿನ ವಾಯು ಗುಣಮಟ್ಟ ಸೂಚ್ಯಂಕವು 35% ರಷ್ಟಿದ್ದರೆ, ದೆಹಲಿಯ ಮಾಲಿನ್ಯವು ಮರುಕಳಿಸಲಾಗದ ಬಿಕ್ಕಟ್ಟಾಗಿದೆ ಎಂದು ವಿವರಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಸಾಮೂಹಿಕ ಕ್ರಮಕ್ಕೆ ಕರೆ ನೀಡಿದರು.

    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟಿಯರಾಲಜಿಯು ನವೆಂಬರ್ 15 ರಿಂದ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಸ್ವಲ್ಪ ಸುಧಾರಣೆ ಕಂಡುಬರುವ ಮುನ್ಸೂಚನೆಯನ್ನು ಒದಗಿಸಿದೆ, ವಾರಾಂತ್ಯದಲ್ಲಿ ಮತ್ತಷ್ಟು ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.

  • ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ನವದೆಹಲಿ: ದೆಹಲಿ ವಿಮಾನ ನಿಲ್ದಾಣದ (Delhi Airport) ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿ ಗಾಯಗೊಂಡ ಘಟನೆ ನಡೆದಿದೆ.

    ಇಂದು ಮುಂಜಾನೆ 5.30ಕ್ಕೆ ಈ ಅವಘಡ ಸಂಭವಿಸಿದೆ. ಭಾರೀ ಮಳೆಯ ಪರಿಣಾಮ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ದುರ್ಮರಣ

    ಘಟನೆ ನಡೆದ ಕೂಡಲೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು,  ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.

    ಸದ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಛಾವಣಿ ಕುಸಿತದಿಂದ ಟ್ಯಾಕ್ಸಿ ಸೇರಿದಂತೆ ಹಲವು ವಾಹನಗಳು ಜಖಂ ಆಗಿವೆ. ಘಟನೆಯ ಪರಿಣಾಮ ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ.

    ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಎಕ್ಸ್‌ ಮಾಡಿ, ಟಿ1 ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ಘಟನೆಯ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಅಗ್ನಿಶಾಮ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಬರೆದುಕೊಂಡಿದ್ದಾರೆ.‌

     

  • ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

    ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

    ನವದೆಹಲಿ: ದೆಹಲಿಯಿಂದ (Delhi) ದುಬೈಗ್‌ ತೆರಳುತ್ತಿದ್ದ ವಿಮಾನಕ್ಕೆ (Dubai Flight) ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೋಮವಾರ ಬೆಳಗ್ಗೆ 9:35ಕ್ಕೆ ಐಜಿಐ ವಿಮಾನ ನಿಲ್ದಾಣದ DIAL ಕಚೇರಿಗೆ, ದೆಹಲಿಯಿಂದ ದುಬೈ ಹೋಗಬೇಕಿದ್ದ ವಿಮಾನದೊಳಗೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಮುಸ್ಲಿಮರು, ಯಾದವರು ನನಗೆ ಮತ ಹಾಕಿಲ್ಲ, ಅವರಿಗಾಗಿ ನಾನು ಯಾವ ಕೆಲಸ ಮಾಡಲ್ಲ: ಜೆಡಿಯು ಸಂಸದ

    ವಿಮಾನವನ್ನು ಪರಿಶೀಲಿಸಿದಾಗ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

  • ದೆಹಲಿ ಏರ್‌ಪೋರ್ಟ್‌ ಸುತ್ತ ಸೆಕ್ಷನ್‌ 144 ಜಾರಿ; ಡ್ರೋನ್‌ ಹಾರಾಟ, ಲೇಸರ್‌ ಲೈಟ್‌ ಚಟುವಟಿಕೆಗೂ ನಿಷೇಧ – ಕಾರಣ ಏನು?

    ದೆಹಲಿ ಏರ್‌ಪೋರ್ಟ್‌ ಸುತ್ತ ಸೆಕ್ಷನ್‌ 144 ಜಾರಿ; ಡ್ರೋನ್‌ ಹಾರಾಟ, ಲೇಸರ್‌ ಲೈಟ್‌ ಚಟುವಟಿಕೆಗೂ ನಿಷೇಧ – ಕಾರಣ ಏನು?

    ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (IGI) ಆವರಣದಲ್ಲಿ ಡ್ರೋನ್‌ ಹಾರಾಟ ಹಾಗೂ ಲೇಸರ್‌ ಕಿರಣಗಳ ಚಟುವಟಿಕೆಗಳನ್ನು ನಡೆಸದಂತೆ ದೆಹಲಿ ಪೊಲೀಸರು (Delhi Police) ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

    ರಾಷ್ಟ್ರ ರಾಜಧಾನಿಯಲ್ಲಿನ ರಾಜಕೀಯ ವಿದ್ಯಮಾನಗಳು ಹಾಗೂ ಮುಂದಿನ ಪ್ರಧಾನ ಮಂತ್ರಿಗಳ (Prime Minister) ಪ್ರಮಾಣ ವಚನ ಸ್ವೀಕಾರ ಸಮಾರಂಭವೂ ಇರುವುದರಿಂದ ಏರ್‌ಪೋರ್ಟ್‌ನಲ್ಲಿ (Delhi Airport) ವಿವಿಐಪಿ ವಿಮಾನಗಳು ಚಲಿಸಲಿವೆ. ಆದ್ದರಿಂದ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಆದೇಶವು ಜುಲೈ 30ರ ವರೆಗೆ ಜಾರಿಯಲ್ಲಿರುತ್ತದೆ. ಇದನ್ನೂ ಓದಿ: ಬಿಜೆಪಿಗೆ ಗೆಲುವು | ಹೂಡಿಕೆದಾರರ ಸಂಪತ್ತು ಒಂದೇ ದಿನ 14 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌, ನಿಫ್ಟಿ

    ಐಜಿಐ ವಿಮಾನ ನಿಲ್ದಾಣದಲ್ಲಿ ಏರ್‌ ಟ್ರಾಫಿಕ್‌ ಕಂಟ್ರೋಲ್‌ ಮತ್ತು ಲೇಸರ್‌ ಕಿರಣಗಳಿಂದ (Laser Beams) ಪೈಲಟ್‌ಗಳ ದೃಷ್ಟಿ ವಿಚಲಿತಗೊಳ್ಳುವ ಘಟನೆಗಳು ಬೆಳಕಿಗೆ ಬಂದಿವೆ. ವಿಮಾನಗಳ ಲ್ಯಾಂಡಿಂಗ್‌ ಸಂದರ್ಭದಲ್ಲಿ ಹೀಗೆ ಪೈಲಟ್‌ಗಳ ದೃಷ್ಟಿಯು ವಿಚಲಿತಗೊಳ್ಳವುದರಿಂದ ಸಿಬ್ಬಂದಿ ಹಾಗೂ ವಿಮಾನದ ಸುರಕ್ಷತೆಗೆ ಅಪಾಯ ಉಂಟುಮಾಡಬಹುದು. ಇದನ್ನೂ ಓದಿ: ಪಾಕ್ ಪರ ಬೇಹುಗಾರಿಕೆ – ಬ್ರಹ್ಮೋಸ್ ಏರೋಸ್ಪೇಸ್‍ನ ಮಾಜಿ ಇಂಜಿನಿಯರ್‌ಗೆ ಜೀವಾವಧಿ ಶಿಕ್ಷೆ

    ಅಲ್ಲದೇ ವಿಮಾನ ನಿಲ್ದಾಣದ ಸುತ್ತಮುತ್ತ ಮನೆಗಳು, ಹೋಟೆಲ್‌ ರೆಸ್ಟೋರೆಂಟ್‌ಗಳು ಇದ್ದು, ಲೇಸರ್‌ ಹಾಗೂ ಲೈಟಿಂಗ್ಸ್‌ ಗಳನ್ನು ಬಳಸಲಾಗುತ್ತದೆ. ಇವು ಪೈಲಟ್‌ಗಳು ವಿಮಾನ ಲ್ಯಾಡಿಂಗ್‌ ಮಾಡುವ ಸಂದರ್ಭದಲ್ಲಿ ದೃಷ್ಟಿ ವಿಚಲನಕ್ಕೆ ಕಾರಣವಾಗುತ್ತದೆ. ಪ್ರಸ್ತುತ ಲೇಸರ್‌ ಕಿರಣಗಳ ಬಳಕೆ ನಿಯಂತ್ರಿಸಲು ಯಾವುದೇ ಪರ್ಯಾಯ ಕ್ರಮಗಳು ಇಲ್ಲದ ಕಾರಣ, ಜೀವಹಾನಿ ಮತ್ತು ವಿಮಾನ ಸುರಕ್ಷತೆಗಳ ಕಾರಣಕ್ಕೆ ಲೇಸರ್‌ ಚಟುವಟಿಕೆಗಳಿಗೆ ನಿಷೇಧಾಜ್ಞೆ (Section 144) ವಿಧಿಸಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆಗೈದು ಡೋರ್ ತೆಗೆಯಲು ಯತ್ನ- ಆರೋಪಿ ಅರೆಸ್ಟ್

    ಡ್ರೋನ್‌ ಹಾರಾಟಕ್ಕೂ ನಿಷೇಧ:
    ವಿವಿಐಪಿಗಳ ಓಡಾಟ ಹೆಚ್ಚಾಗಿರುವ ಸಂದರ್ಭಗಳಲ್ಲಿ ಡ್ರೋನ್‌ಗಳು (Drones), ಪ್ಯಾರಾಗ್ಲೈಡರ್‌ ಹಾಗೂ ಮಾನವ ರಹಿತ ಡ್ರೋನ್‌ಗಳನ್ನು ಬಳಸಿ ಭಯೋತ್ಪಾದಕ ದಾಳಿ ನಡೆಸಲು ಯೋಜಿಸಿದ್ದಾರೆ ಎಂಬ ಮಾಹಿತಿಗಳು ಗುಪ್ತಚರ ಇಲಾಖೆಗೆ ಆಗಾಗ್ಗೆ ಬಂದಿವೆ. ಈ ಕಾರಣಗಳಿಂದ ವಿಮಾನ ನಿಲ್ದಾಣ ಆವರಣದಲ್ಲಿ ಸಾರ್ವಜನಿಕರಿಂದ ಡ್ರೋನ್‌ ಹಾರಾಟಕ್ಕೂ ನಿಷೇಧ ಹೇರಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಐಪಿಸಿ ಸೆಕ್ಷನ್‌ 188 ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಸಿದ್ದಾರೆ.

  • ಚಿನ್ನ ಕಳ್ಳಸಾಗಣೆ – ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಆಪ್ತ ಸಹಾಯಕ ಬಂಧನ

    ಚಿನ್ನ ಕಳ್ಳಸಾಗಣೆ – ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಆಪ್ತ ಸಹಾಯಕ ಬಂಧನ

    ನವದೆಹಲಿ: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ (Shashi Tharoor) ಅವರ ಮಾಜಿ ಆಪ್ತ ಸಹಾಯಕ ಸೇರಿದಂತೆ ಇಬ್ಬರನ್ನು ದೆಹಲಿ ಕಸ್ಟಮ್ಸ್ ಬುಧವಾರ ಬಂಧಿಸಿದೆ.

    ತರೂರ್‌ಗೆ ಮಾಜಿ ಪಿಎ ಆಗಿದ್ದ ಶಿವಕುಮಾರ್ ಪ್ರಸಾದ್ ಅವರು ದುಬೈನಿಂದ ವ್ಯಕ್ತಿಯೊಬ್ಬರನ್ನು ಬರಮಾಡಿಕೊಳ್ಳಲು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಪ್ರಯಾಣಿಕರು ಸುಮಾರು 500 ಗ್ರಾಂ ಚಿನ್ನವನ್ನು ಪ್ರಸಾದ್ ಅವರಿಗೆ ನೀಡಲು ಪ್ರಯತ್ನಿಸಿದಾಗ ಇಬ್ಬರನ್ನೂ ಬಂಧಿಸಲಾಯಿತು. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಪುರಿ ಜಗನ್ನಾಥ ಚಂದನ್ ಜಾತ್ರಾ ಉತ್ಸವದಲ್ಲಿ ಪಟಾಕಿ ಅವಘಡ – 15 ಮಂದಿಗೆ ಗಾಯ

    ಪ್ರಸಾದ್ ಅವರು ಏರೋಡ್ರೋಮ್ ಎಂಟ್ರಿ ಪರ್ಮಿಟ್ ಕಾರ್ಡ್ ಅನ್ನು ಹೊಂದಿದ್ದು, ಅದು ಅವರಿಗೆ ವಿಮಾನ ನಿಲ್ದಾಣದ ಆವರಣಕ್ಕೆ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ. ಅವರು ವಿಮಾನ ನಿಲ್ದಾಣದ ಆವರಣವನ್ನು ಪ್ರವೇಶಿಸಿದ್ದರು.

    ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಶಶಿ ತರೂರ್ ಅವರ ಸಹಾಯಕನ ಬಂಧನಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಟೀಕಾಪ್ರಹಾರ ನಡೆಸಿವೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಸ್ಫೋಟಿಸುವ ಬೆದರಿಕೆ: ಅಪ್ರಾಪ್ತ ವಶಕ್ಕೆ

    ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಆಪ್ತ ಸಹಾಯಕ ಬಂಧನಕ್ಕೊಳಗಾದ ಒಂದು ದಿನದ ನಂತರ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದರು. ಪ್ರಕರಣದಲ್ಲಿ ಕನೂನು ತನ್ನದೇ ಆದ ಕ್ರಮಕೈಗೊಳ್ಳಬೇಕು.

  • ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

    ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

    – ತುರ್ತು ದ್ವಾರದ ಮೂಲಕ ಪ್ರಯಾಣಿಕರ ಸ್ಥಳಾಂತರ

    ನವದೆಹಲಿ: ವಾರಣಾಸಿಗೆ (Varanasi) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 5 ಗಂಟೆ ಸುಮಾರಿಗೆ ಟೇಕ್ ಆಫ್ ಆಗಬೇಕಿತ್ತು. ತಕ್ಷಣವೇ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದ್ದು, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದನ್ನೂ ಓದಿ: ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ

    ಎಲ್ಲ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಇಳಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಸ್ಪಷ್ಟತೆ ಇಲ್ಲ.

    ಕೆಲವರು ಪ್ರಯಾಣಿಕರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ, ವಾರಣಾಸಿಯಿಂದ ದೆಹಲಿ ವಿಮಾನ ವಿಳಂಬವಾಗಿದೆ ಎಂದು ದೂರಿದ್ದರು. ಇದನ್ನೂ ಓದಿ: ಬೆಳ್ಳೂರಿನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

    ಪ್ರಯಾಣಿಕರೊಬ್ಬರಿಗೆ ಉತ್ತರಿಸಿದ ಏರ್‌ಲೈನ್, ಈ ಅನುಭವಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ನಮ್ಮ ಪ್ರಯಾಣಿಕರ ಪ್ರಯಾಣದ ಯೋಜನೆಗಳಿಗೆ ಅಡ್ಡಿಪಡಿಸುವ ಉದ್ದೇಶ ಎಂದಿಗೂ ನಮ್ಮದಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ತಿಳಿಸಿದೆ.