Tag: Delhi Baba

  • ಲೈಂಗಿಕ ಕಿರುಕುಳ ಕೇಸ್‌ | ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ ಚೈತನ್ಯಾನಂದ ಸರಸ್ವತಿ

    ಲೈಂಗಿಕ ಕಿರುಕುಳ ಕೇಸ್‌ | ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ ಚೈತನ್ಯಾನಂದ ಸರಸ್ವತಿ

    – 40 ದಿನಗಳಲ್ಲಿ 13 ಹೋಟೇಲ್‌ ಬಲಿಸಿದ್ದ ಕಾಮಿಸ್ವಾಮಿ

    ನವದೆಹಲಿ: 17 ವಿದ್ಯಾರ್ಥಿನಿಯರಿಗೆ (Students) ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ (Chaitanyananda Saraswati) ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ ಎಂದು ಮೂಲಗಳು ಹೇಳಿವೆ. ಸಾಮಾನ್ಯ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ ಸ್ವಾಮೀಜಿ ಸಣ್ಣ ಸಣ್ಣ ಹೋಟೇಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಅನ್ನೋದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

    Swami Chaitanyananda Saraswati

    ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ತನಿಖೆಗೆ ಸಹಕರಿಸುತ್ತಿಲ್ಲ, ಯಾವುದೇ ಪ್ರಶ್ನೆ ಕೇಳಿದ್ರೂ ಗೊತ್ತಿಲ್ಲ, ಇಲ್ಲ ಎಂದು ಉತ್ತರ ಹೇಳುತ್ತಿದ್ದಾರೆ. ವಿಚಾರಣೆ ವೇಳೆ ನನಗೆ ಪ್ರಧಾನಿ ನರೇಂದ್ರ ಮೋದಿ ಗೊತ್ತು, ಪ್ರಧಾನಿ ಕಚೇರಿ ಜೊತೆಗೆ ನೇರ ಸಂಪರ್ಕ ಹೊಂದಿದ್ದೇನೆ ಎಂದು ಬೆದರಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಮೋದಿ, ಟ್ರಂಪ್‌ ಜೊತೆಗಿನ AI ಫೋಟೋಗಳು ಪತ್ತೆ
    ತನಿಖೆಯ ವೇಳೆ ಆರೋಪಿಯ ಕೋಣೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆಗೆ ಛಾಯಾಚಿತ್ರಗಳು ಕಂಡುಬಂದಿವೆ, ಪ್ರಾಥಮಿಕ ತನಿಖೆಯಲ್ಲಿ ಈ ಚಿತ್ರಗಳನ್ನು AI ಬಳಸಿ ರಚಿಸಲಾಗಿದೆ ಅನ್ನೋದು ಗೊತ್ತಾಗಿದೆ. ನಕಲಿ ವಿಸಿಟಿಂಗ್ ಕಾರ್ಡ್‌ಗಳನ್ನು ಸಹ ಪತ್ತೆಹಚ್ಚಿದ್ದು, ಅದು ವಿಶ್ವಸಂಸ್ಥೆ ಮತ್ತು ಬ್ರಿಕ್ಸ್ ಜೊತೆಗಿನ ಆತನ ಸಂಬಂಧ ತೋರಿಸುತ್ತದೆ. ಅವುಗಳನ್ನು ವಶಪಡಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕ್ರೀಡಾ ಮೈದಾನದಲ್ಲಿ `ಆಪರೇಷನ್‌ ಸಿಂಧೂರ’ – ಫಲಿತಾಂಶ ಒಂದೇ, ಭಾರತಕ್ಕೆ ಜಯ: ಮೋದಿ ಬಣ್ಣನೆ

    Chaitanyananda Saraswati Swamiji

    ಸ್ವಾಮೀಜಿ ಬಳಿಯಿದ್ದ ಒಂದು ಐಪ್ಯಾಡ್ ಮತ್ತು ಮೂರು ಮೊಬೈಲ್ ಫೋನ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ. ಒಂದು ಫೋನ್‌ನಲ್ಲಿ ಹಾಸ್ಟೆಲ್‌ನ ಸಿಸಿಟಿವಿ ವಿಡಿಯೋಗಳು ಪತ್ತೆಯಾಗಿದೆ. ಮೂಬೈಲ್ ಮೂಲಕ ಹಾಸ್ಟೆಲ್ ಮೇಲೆ ನಿಗಾ ವಹಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಸರಸ್ವತಿಗೆ ಸಂಬಂಧಿಸಿದ ಬಹು ಬ್ಯಾಂಕ್ ಖಾತೆಗಳು ಮತ್ತು ಸ್ಥಿರ ಠೇವಣಿಗಳಲ್ಲಿ ಇರಿಸಲಾಗಿದ್ದ 8 ಕೋಟಿ ರೂ.ಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  ಇದನ್ನೂ ಓದಿ: ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

  • IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!

    IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!

    ನವದೆಹಲಿ: ದೆಹಲಿಯ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದ್ದು, ಮಾಜಿ ವಿದ್ಯಾರ್ಥಿ ಹಾಗೂ ಐಎಎಫ್‌ನ ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಕಾಮಪುರಾಣವೇ ಬಹಿರಂಗಗೊಂಡಿದೆ.

    ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿ `ದೆಹಲಿ ಬಾಬಾ’ ಎಂದೇ ಖ್ಯಾತಿ ಪಡೆದಿದ್ದ ಚೈತನ್ಯಾನಂದ ಸ್ವಾಮೀಜಿ ಮತ್ತಷ್ಟು ಅವಾಂತರು ಬೆಳಕಿಗೆ ಬರ್ತಿವೆ. ಈ ಸ್ವಘೋಷಿತ ದೇವಮಾನವನ ರಾಸಲೀಲೆ ಬಗ್ಗೆ ಮಾಜಿ ವಿದ್ಯಾರ್ಥಿ ಹಾಗೂ ಐಎಎಫ್‌ನ ಗ್ರೂಪ್ ಕ್ಯಾಪ್ಟನ್‌ವೊಬ್ಬರು ಕೂಡ ಕೆಲ ದಿನಗಳ ಹಿಂದಷ್ಟೇ ಇ-ಮೇಲ್ ಕಳಿಸಿದ್ದರು. ಇದರಿಂದಾಗಿಯೇ ಕಾಮಿಸ್ವಾಮಿಯ ಬಣ್ಣ ಬಯಲಿಗೆ ಬಂದಿದೆ ಅಂತಲೂ ತಿಳಿದು ಬಂದಿದೆ.ಇದನ್ನೂ ಓದಿ: ನೀನು ಸುಂದರವಾಗಿ ಕಾಣ್ತೀಯಾ, ಬೇಬಿ I Love You: ಕಾಲೇಜು ವಿದ್ಯಾರ್ಥಿನಿಯರ ಬೆನ್ನುಬಿದ್ದಿದ್ದ ಸ್ವಾಮೀಜಿ

    ಇನ್ನೂ ದೌರ್ಜನ್ಯ ಪ್ರಕರಣದಲ್ಲಿ ಸಂಸ್ಥೆಯ ಡೀನ್ ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳ ಪ್ರಕಾರ, ಚೈತನ್ಯಾನಂದ ತನ್ನ ನೆಲಮಹಡಿಯ ಕಚೇರಿಯನ್ನು ಲೈಂಗಿಕ ಕಿರುಕುಳದ ತಾಣವನ್ನಾಗಿ ಪರಿವರ್ತಿಸಿದ್ದ. ಸಂತ್ರಸ್ತರು ಮಾತನಾಡದಂತೆ ಅಥವಾ ಸಂಸ್ಥೆಯಿಂದ ಹೊರಹೋಗದಂತೆ ತಡೆಯಲು ಅವರ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಪಿಎಚ್‌ಡಿ, ಎಂಬಿಎ ಮಾಡಿರೋದಾಗಿಯೂ ಸ್ವಾಮೀಜಿ ಹೇಳಿಕೊಂಡಿದ್ದರು.

    ಏನಿದು ಪ್ರಕರಣ?
    62 ವರ್ಷದ ಸ್ವಾಮೀಜಿಯು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಲೈಂಗಿಕ ಕಿರುಕುಳ ಆರೋಪದ ಮೇಲೆ ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

    ಎಫ್‌ಐಆರ್‌ನಲ್ಲಿ ಕಿರುಕುಳ ನೀಡಿರುವ ಬಗ್ಗೆ ಯುವತಿಯರ ಹೇಳಿಕೆ ಉಲ್ಲೇಖವಾಗಿದೆ. EWS ಕೋಟಾದಡಿ ಬಂದ ವಿದ್ಯಾರ್ಥಿನಿಯರನ್ನು ಸ್ವಾಮೀಜಿ ಟಾರ್ಗೆಟ್ ಮಾಡುತ್ತಿದ್ದರು. ಸ್ಕಾಲರ್‌ಶಿಪ್ ಕೊಡಿಸುವ, ಅಂಕಗಳನ್ನು ಕಟ್ ಮಾಡುವ, ಮಾರ್ಕ್ಸ್ ಕಾರ್ಡ್ ಕೊಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ.

    ವಿದೇಶ ಪ್ರವಾಸದ ಆಫರ್ ನೀಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ತಡರಾತ್ರಿ ಮೆಸೇಜ್ ಮಾಡಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುತ್ತಿದ್ದರು. ಕಾಲೇಜಿನ ಡೀನ್ ಕೂಡ ಸ್ವಾಮೀಜಿಗೆ ಸಾಥ್ ನೀಡುತ್ತಿದ್ದರು. ಡೀನ್‌ಗೆ ದೂರು ನೀಡಲು ಬಂದರೆ, ಮೆಸೇಜ್‌ಗೆ ಪ್ರತಿಕ್ರಿಯೆ ನೀಡುವಂತೆ ಸಲಹೆ ನೀಡುತ್ತಿದ್ದರೆಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.ಇದನ್ನೂ ಓದಿ: ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ

  • 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

    17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

    ನವದೆಹಲಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೆಹಲಿ ಬಾಬಾ ಎಂದೇ ಖ್ಯಾತಿಯಾಗಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ (Swami Chaitanyananda Saraswati) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ದೆಹಲಿಯ ವಸಂತ್ ಕುಂಜ್ ಪೊಲೀಸ್ (Vasant Kunj Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾಮಿ ಪಾರ್ಥಸಾರಥಿ, ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್-ರಿಸರ್ಚ್ ಕಾಲೇಜು ನಡೆಸುತ್ತಿರುವ ಸ್ವಾಮೀಜಿ ಸ್ಕಾಲರ್‌ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ಪನ್ನುನ್ ವಿರುದ್ಧ ಕೇಸ್

    ವಿಚಾರಣೆಯ ವೇಳೆ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನಲ್ಲಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನ ಪಡೆಯುತ್ತಿದ್ದ 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸ್ವಾಮೀಜಿ ನಿಂದನೀಯ ಭಾಷೆ, ಅಶ್ಲೀಲ ವಾಟ್ಸಾಪ್‌ ಮೆಸೇಜ್ ಮತ್ತು ಅನಗತ್ಯ ದೈಹಿಕ ಸಂಪರ್ಕ ಹೊಂದಿದ್ದರು ಎಂದು 17 ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

    ವಿದ್ಯಾರ್ಥಿನಿಯರ ದೂರಿನ ಅನ್ವಯ ವಸಂತ್ ಕುಂಜ್ ನಾರ್ತ್ ಪೊಲೀಸ್ ಠಾಣೆಯಲ್ಲಿ 75(2)/79/351(2) ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಸಿಸಿಟಿವಿ ಸೇರಿದಂತೆ ಇತರೆ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ನಕಲಿ ನಂಬರ್ ಪ್ಲೇಟ್‌ನೊಂದಿಗೆ ರಾಜತಾಂತ್ರಿಕ ವಾಹನ ಬಳಸುತ್ತಿದ್ದ ವಿಚಾರವೂ ಬಯಲಾಗಿದ್ದು, ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.