Tag: Delhi Cm

  • ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ – ಎಎಪಿ ಆರೋಪ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.

    ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ನಡೆಸಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ತಿಳಿಸಿರುವ ಸಿಸೋಡಿಯಾ ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಕೇಜ್ರಿವಾಲ್‌ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಎಎಪಿ ಆರೋಪಿಸಿದೆ. ಇದನ್ನೂ ಓದಿ: ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರು ಹಾಗೂ ಸಿಸೋಡಿಯಾ ಆರೋಪಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಇತಿಹಾಸ ತಾಲಿಬಾನ್‌, ಐಸಿಸ್‌ ಮತಾಂಧರಷ್ಟೇ ಘೋರ: ಬಿಜೆಪಿ ವಾಗ್ದಾಳಿ

    ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.

  • ದೆಹಲಿ ಲೆಫ್ಟಿನೆಂಟ್ ಗವರ್ನರ್ ಜೊತೆ ಸಿಎಂ ಕೇಜ್ರಿವಾಲ್ ಮತ್ತೆ ಜಟಾಪಟಿ

    ದೆಹಲಿ ಲೆಫ್ಟಿನೆಂಟ್ ಗವರ್ನರ್ ಜೊತೆ ಸಿಎಂ ಕೇಜ್ರಿವಾಲ್ ಮತ್ತೆ ಜಟಾಪಟಿ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದರೇ ಮತ್ತೊಂದು ಕಡೆ ಕ್ವಾರಂಟೈನ್ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ

    ದೆಹಲಿಯಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ದೆಹಲಿ ಆಗಮಿಸುವವರಿಗೆ ಐದು ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಆದೇಶ ಹೊರಡಿಸಿದ್ದಾರೆ. ಈ ಹೊಸ ಆದೇಶ ವಿವಾದಕ್ಕೆ ಕಾರಣವಾಗಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಐದು ದಿನ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ ಅವಶ್ಯಕತೆ ಇಲ್ಲ ಎಂದು ಆಗ್ರಹಿಸಿದ್ದಾರೆ.

    ಹೊಸ ಆದೇಶ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ದೆಹಲಿ ತುರ್ತು ನಿರ್ವಹಣಾ ಪ್ರಾಧಿಕಾರದ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಅನಿಲ್ ಬೈಜಾಲ್ ಆದೇಶದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಸಣ್ಣ ಪ್ರಮಾಣ ಗುಣಲಕ್ಷಣಗಳು ಇದ್ದರೇ ಮನೆಯಲ್ಲಿ ಕ್ವಾರಂಟೈನ್ ಮಾಡಲು ಐಸಿಎಂಆರ್ ಸೂಚನೆ ನೀಡಿದೆ. ಈ ಹಂತದಲ್ಲಿ ದೆಹಲಿಗೆ ಆಗಮಿಸಿದವರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡುವ ಅವಶ್ಯಕ ಇರಲಿಲ್ಲ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದೆಹಲಿಯಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಂತದಲ್ಲೇ ಆಸ್ಪತ್ರೆ ಮತ್ತು ಆರೋಗ್ಯ ಸಿಬ್ಬಂದಿ ಕೊರತೆ ಸೃಷ್ಟಿಯಾಗಿದೆ. ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದರೆ ಅವರಿಗೆ ಚಿಕಿತ್ಸೆ ನೀಡುವುದು ಹೇಗೆ ಆರೋಗ್ಯ ಸಿಬ್ಬಂದಿಯನ್ನು ಹೇಗೆ ನಿಯೋಜಿಸುವುದು ಎಂದು ಪ್ರಶ್ನಿಸಿದ್ದಾರೆ.

    ಕೇಂದ್ರ ಸರ್ಕಾರ 500 ರೈಲ್ವೆ ಕೋಚ್ ಗಳನ್ನು ನೀಡಿದೆ. ಆದರೆ ದೆಹಲಿಯಲ್ಲಿರುವ ಹವಾಮಾನ ಬಿಸಿಲಿನ ತಾಪಮಾನಕ್ಕೆ ಕೋಚ್ ಗಳಲ್ಲಿ ಕ್ವಾರಂಟೈನ್ ಮಾಡುವುದು ಕಷ್ಟ. ಹೊಸ ಆದೇಶಗಳಿಂದ ತೊಂದರೆಗಳು ಹೆಚ್ಚು ಹೀಗಾಗಿ ಆದೇಶ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಈ ಹಿಂದೆ ದೆಹಲಿ ಆಸ್ಪತ್ರೆಗಳಲ್ಲಿ ದೆಹಲಿ ನಾಗರಿಕರಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಬಹಿರಂಗವಾಗಿ ವಿರೋಧಿಸಿದ್ದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಸರ್ಕಾರದ ಆದೇಶ ರದ್ದು ಮಾಡಿದ್ದರು. ಈ ವೇಳೆಯೂ ಗವರ್ನರ್ ಮತ್ತು ಸಿಎಂ ನಡುವೆ ಮಾತಿನ ಸಮರ ನಡೆದಿತ್ತು.

  • ಸಿಎಂ ಕೇಜ್ರಿವಾಲ್ ಕೊರೊನಾ ವರದಿ ನೆಗೆಟಿವ್

    ಸಿಎಂ ಕೇಜ್ರಿವಾಲ್ ಕೊರೊನಾ ವರದಿ ನೆಗೆಟಿವ್

    ನವ ದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಕೊರೊನಾ ವರದಿ ನೆಗೆಟಿವ್ ಬಂದಿದೆ. ಇಂದು ಬೆಳಗ್ಗೆ ಅರವಿಂದ್ ಕೇಜ್ರಿವಾಲ್ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಸಂಜೆ ಬಂದ ವರದಿ ನೆಗೆಟಿವ್ ಬಂದಿದೆ ಎಂದು ಅಧಿಕಾರಿಗಳು ಖಿಚಿತಪಡಿಸಿದ್ದಾರೆ.

    ಗಂಟಲು ಇನ್ಫೆಕ್ಷನ್ ಮತ್ತು ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಮಧ್ಯಾಹ್ನದ ನಂತರ ಮುಖ್ಯಮಂತ್ರಿಗಳು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಐಸೋಲೇಟೆಡ್ ಆಗಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಡಿಸಿಎಂ ಮನೀಷ್ ಸಿಸೋಡಿಯಾ, ಮುಖ್ಯಮಂತ್ರಿಗಳಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಮುನ್ನೇಚ್ಚರಿಕೆ ಕ್ರಮವಾಗಿ ಐಸೋಲೇಷನ್ ನಲ್ಲಿದ್ದಾರೆ ಎಂದು ಹೇಳಿದ್ದರು.

    ಇಂದು ಬೆಳಗ್ಗೆ ಸಿಎಂ ಅನುಪಸ್ಥಿತಿಯಲ್ಲಿ ನಡೆದ ರಾಜ್ಯದ ಹಿರಿಯ ಅಧಿಕಾರಿಗಳು ಮತ್ತು ತಜ್ಷರು ಸಭೆ ಸಿಸೋಡಿಯಾ ಅವರ ನೇತೃತ್ವದಲ್ಲಿ ನಡೆಯಿತು. ದೆಹಲಿಯಲ್ಲಿ ಕೊರೊನಾ ಸಮುದಾಯದ ಮಟ್ಟದಲ್ಲಿ ಹಬ್ಬಿಲ್ಲ. ಇದೇ ರೀತಿ ಮುಂದುವರಿದ್ರೆ ಜುಲೈ 31ರಷ್ಟರಲ್ಲಿ ಸೋಂಕಿತರ ಸಂಖ್ಯೆ 5.5 ಲಕ್ಷದಷ್ಟು ಹೆಚ್ಚಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.

    ಇಂದು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ಐದು ದಿನಗಳ ಹಿಂದೆ ಗ್ವಾಲಿಯರ್ ನಲ್ಲಿ ಸಿಂಧಿಯಾ, ತಾಯಿ ಮಾಧವಿ ರಾಜೇ, ಪತ್ನಿ ಪ್ರಿಯದರ್ಶಿನಿ, ಮಗಳು ಅನನ್ಯಾ ರಾಜೇ, ಪುತ್ರ ಮಾಹಾಆರ್ಯಮನ್ ಎಲ್ಲರೂ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಇದೀಗ ವರದಿ ಬಂದಿದ್ದು, ಇಬ್ಬರಿಗೆ ಸೋಂಕು ತಗುಲಿರೋದು ಖಚಿತವಾಗಿದೆ. ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರೋ ಜ್ಯೋತಿರಾದಿತ್ಯ ಸಿಂಧಿಯಾ ಭೋಪಾಲ್ ನಲ್ಲಿ ನಾಮಪತ್ರ ಸಲ್ಲಿಕೆಯ ಬಳಿಕ ದೆಹಲಿಗೆ ತೆರಳಿದ್ದರು. ಲಾಕ್‍ಡೌನ್ ಸಮಯದಲ್ಲಿಯೂ ಸಿಂಧಿಯಾ ದೆಹಲಿಯಲ್ಲಿದ್ದರು.

  • ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್

    ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್

    ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ.

    ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.

    ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಭಾನುವಾರ ಮಧ್ಯಾಹ್ನ ಬಳಿಕ ಇದ್ದ ಎಲ್ಲ ಸಭೆಗಳನ್ನು ರದ್ದು ಮಾಡಿ ಕ್ವಾರಂಟೈನ್ ನಲ್ಲಿದ್ದಾರೆ. ದೆಹಲಿಯಲ್ಲಿ ಈವರೆಗೂ 28,936 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 812 ಮಂದಿ ಸಾವನ್ನಪ್ಪಿದ್ದಾರೆ. 11,000 ಮಂದಿ ಗುಣ ಮುಖ ಹೊಂದಿದ್ದಾರೆ.