Tag: Delhi-Dehradun Shatabdi Express

  • ಏಕಾಏಕಿ ಹೊತ್ತಿ ಉರಿದ ಶತಾಬ್ದಿ ಎಕ್ಸ್ ಪ್ರೆಸ್ ರೈಲು

    ಏಕಾಏಕಿ ಹೊತ್ತಿ ಉರಿದ ಶತಾಬ್ದಿ ಎಕ್ಸ್ ಪ್ರೆಸ್ ರೈಲು

    ಡೆಹ್ರಾಡೂನ್: ಪ್ರಯಾಣಿಕರನ್ನು ಹೊತ್ತುಸಾಗುತ್ತಿದ್ದ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದ ರೈಲು ಹೊತ್ತಿ ಉರಿದಿದೆ.

    ಉತ್ತರಾಖಂಡದ ಕನ್‍ಸೂರು ಬಳಿ ರೈಲು ಬರುತ್ತಿದ್ದಂತೆ ಸಿ4 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಹಬ್ಬಿದೆ. ರೈಲಿನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

    ರೈಲಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರನ್ನು ಕೂಡಲೇ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಸಾವು ನೋವುಗಳು ಸಂಭವಿಸಿಲ್ಲ ಎಂದು ಉತ್ತರಖಂಡದ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.