Tag: Delhi Earthquake

  • ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ

    ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ

    ನವದೆಹಲಿ: ಗುರುವಾರ ಬೆಳಗ್ಗೆ ದೆಹಲಿ (Delhi) ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

    ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದ್ದು, ಒಂದು ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು 35 ಲಕ್ಷ ವಂಚನೆ – ಇಬ್ಬರು ಅರೆಸ್ಟ್

    ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್

    ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಫರಿದಾಬಾದ್‌ನಲ್ಲಿ ಭೂಮಿ ಕಂಪಿಸಿದೆ. ಹರಿಯಾಣದ ಸೋನಿಪತ್, ರೋಹ್ಟಕ್ ಮತ್ತು ಹಿಸಾರ್‌ನಲ್ಲೂ ಭೂಮಿ ಕಂಪಿಸಿದೆ.

  • ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಭೂಕಂಪ – ಬೆಚ್ಚಿಬಿದ್ದು ಮನೆಗಳಿಂದ ಹೊರಗೆ ಓಡಿದ ಜನ

    ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಭೂಕಂಪ – ಬೆಚ್ಚಿಬಿದ್ದು ಮನೆಗಳಿಂದ ಹೊರಗೆ ಓಡಿದ ಜನ

    ನವದೆಹಲಿ: ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಇಂದು (ಫೆ.17) ಮುಂಜಾನೆ 5:36ರ ವೇಳೆಗೆ ಪ್ರಬಲ ಭೂಕಂಪ ಸಂಭವಿಸಿದೆ.

    ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಆದರೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟ‌ರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

    ಉತ್ತರ ಭಾರತದಾದ್ಯಂತ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಭೂಕಂಪದಿಂದ ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿರುವ ಹಲವಾರು ಬಹುಮಹಡಿ ಕಟ್ಟಡಗಳ ನಿವಾಸಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ. ಗಾಜಿಯಾಬಾದ್‌ನ ನಿವಾಸಿಯೊಬ್ಬರು ಈ ರೀತಿಯ ಅನುಭವವನ್ನು ನನ್ನ ಜೀವಮಾನದಲ್ಲಿ ಅನುಭವಿಸಿರಲಿಲ್ಲ ಎಂದು ಆತಂಕದಿಂದ ನುಡಿದಿದ್ದಾರೆ.

    ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದು, ರೈಲು ಅಪಘಾತಕ್ಕೀಡಾಗಿದಂತೆ ಅಥವಾ ಸೇತುವೆ ಕುಸಿದಂತೆ ಭಾಸವಾಯಿತು. ಹಲವು ಪ್ರಯಾಣಿಕರು ನಿಲ್ದಾಣದಲ್ಲಿರುವ ರೂಮ್‌ ಒಂದರಲ್ಲಿದ್ದರು ಈ ವೇಳೆ, ಎಲ್ಲರೂ ಅಲ್ಲಿಂದ ಹೊರಗೆ ಓಡಿದರು ಎಂದಿದ್ದಾರೆ.

    ನವದೆಹಲಿ ರೈಲು ನಿಲ್ದಾಣದ ಟಿಕೆಟ್‌ ಕೌಂಟರ್‌ನ ಸಿಬ್ಬಂದಿ ಈ ಬಗ್ಗೆ ಮಾತನಾಡಿ, ಪಾವತಿ ಕೌಂಟರ್ ಅಲುಗಾಡಲು ಪ್ರಾರಂಭಿಸಿತು, ಸುತ್ತಮುತ್ತಲಿನ ಎಲ್ಲರೂ ಕಿರುಚುತ್ತಿದ್ದರು ಎಂದು ಹೇಳಿದ್ದಾರೆ.

  • Breakingː ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ

    Breakingː ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ (NewDelhi) ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ (Earthquake) ಅನುಭವವಾಗಿದೆ.

    ಮಂಗಳವಾರ ಮಧ್ಯಾಹ್ನ 1.30ರ ನಂತರ ಕೆಲ ಸೆಕೆಂಡುಗಳ ಭೂಮಿ ಕಂಪಿಸಿದೆ. ಆದ್ರೆ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ತೀವ್ರತೆ 5.4 ರಷ್ಟಿದ್ದು, ಜಮ್ಮು ಮತ್ತು ಕಾಶ್ಮೀರದ (Jammu And Kashmir) ದೋಡಾ ಜಿಲ್ಲೆಯಲ್ಲಿ ಭೂಮಿಯ 6 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ ಟ್ವೀಟ್‌ ಮೂಲಕ ತಿಳಿಸಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಕಂಪನ – ಮನೆಯಿಂದ ಹೊರಗಡೆ ಬಂದ ಜನ

    ಪ್ರಾಥಮಿಕ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋ ಭಾಲೆಸ್ಸಾ ಗ್ರಾಮದ ಬಳಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದನ್ನೂ ಓದಿ: ದೆಹಲಿ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪ – 9 ಮಂದಿ ಸಾವು

  • ದೆಹಲಿ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪ – 9 ಮಂದಿ ಸಾವು

    ದೆಹಲಿ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪ – 9 ಮಂದಿ ಸಾವು

    ಇಸ್ಲಾಮಾಬಾದ್: ಭಾರತದ ರಾಜಧಾನಿ ದೆಹಲಿ (Delhi Earthquake) ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಂಗಳವಾರ ಭೂಮಿ ಕಂಪಿಸಿ ಜನತೆಯಲ್ಲಿ ಭೀತಿ ಹುಟ್ಟಿಸಿತು. ಇದರ ಬೆನ್ನಲ್ಲೇ ಪಾಕಿಸ್ತಾನದಲ್ಲೂ (Pakistan Earthquake) ಪ್ರಬಲ ಭೂಕಂಪವಾಗಿ 9 ಮಂದಿ ಸಾವಿಗೀಡಾಗಿದ್ದಾರೆ.

    ಪಾಕಿಸ್ತಾನದಲ್ಲಿ 6.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದ (Afghanistan) ಹಿಂದೂ ಕುಶ್‌ ಪ್ರದೇಶವು ಭೂಕಂಪನದ ಕೇಂದ್ರಬಿಂದುವಾಗಿದ್ದು, 180 ಕಿ.ಮೀ ಆಳದಲ್ಲಿ ಭೂಕಂಪ ಆಗಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪ್ರಬಲ ಭೂಕಂಪನ – ಬೆಚ್ಚಿ ಮನೆಯಿಂದಾಚೆ ಓಡಿಬಂದ ಜನ

    ಇಸ್ಲಾಮಾಬಾದ್, ಪೇಶಾವರ, ಚಾರ್ಸದ್ದಾ, ಲಾಹೋರ್ ಮತ್ತು ರಾವಲ್ಪಿಂಡಿ ಸೇರಿದಂತೆ ವಿವಿಧ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಅಲ್ಲದೇ ಗುಜ್ರಾನ್‌ವಾಲಾ, ಗುಜರಾತ್, ಸಿಯಾಲ್‌ಕೋಟ್, ಕೋಟ್ ಮೊಮಿನ್, ಮಧ್ ರಂಝಾ, ಚಕ್ವಾಲ್, ಕೊಹತ್ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶಗಳಲ್ಲಿಯೂ ಪ್ರಬಲ ಕಂಪನಗಳು ಸಂಭವಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪದಿಂದಾಗಿ ಅವಘಡ ಸಂಭವಿಸಿದ್ದು, 100 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಜಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ

    ಭಾರತದಲ್ಲೂ ಮಂಗಳವಾರ ರಾತ್ರಿ 10:20 ರ ಸುಮಾರು ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರಬಲವಾಗಿ ಭೂಮಿ‌ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯಲ್ಲಿ ಭೂಮಿ ಕಂಪಿಸಿದ ಹಿನ್ನಲೆ ಜನರು ಆತಂಕಗೊಂಡು ಮನೆಯಿಂದ ಹೊರ ಓಡಿ ಹೋಗಿದ್ದಾರೆ. ನಿನ್ನೆ ತಡರಾತ್ರಿ ನಡೆದ ಈ ಘಟನೆ ಜನರಲ್ಲಿ ಆತಂಕ ಮತ್ತು ಗೊಂದಲವನ್ನು ಸೃಷ್ಟಿ ಮಾಡಿದೆ.

    ಜಮ್ಮು ಮತ್ತು ಕಾಶ್ಮೀರದ ಪೂಂಚ್, ರಜೌರಿ ಸೇರಿದಂತೆ ಎಲ್ಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ. ಪಂಜಾಬ್, ಚಂಡೀಗಢ, ಉತ್ತರಾಖಂಡದಲ್ಲಿ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಜನರು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

  • ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಕಂಪನ – ಮನೆಯಿಂದ ಹೊರಗಡೆ ಬಂದ ಜನ

    ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಕಂಪನ – ಮನೆಯಿಂದ ಹೊರಗಡೆ ಬಂದ ಜನ

    ನವದೆಹಲಿ: ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು ದೆಹಲಿ (NewDelhi) ಮತ್ತು ನೆರೆಯ ಎನ್‌ಸಿಆರ್ (NCR) ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ.

    ಭಾರತೀಯ ಕಾಲಮಾನ ರಾತ್ರಿ 7:55ಕ್ಕೆ ಅಫ್ಘಾನಿಸ್ತಾನದ (Afghanistan) ಫೈಜಾಬಾದ್‌ನಿಂದ ದಕ್ಷಿಣಕ್ಕೆ 79 ಕಿಮೀ ದೂರದಲ್ಲಿ 200 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ಏಕದಿನ ಮಾದರಿಯಲ್ಲಿ ಏಷ್ಯಾಕಪ್ 2023 – ಒಂದೇ ಗುಂಪಿನಲ್ಲಿ ಸ್ಥಾನ ಪಡೆದ ಭಾರತ-ಪಾಕ್

    ಈ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ (Jammu And Kashmir), ದೆಹಲಿ ಹಾಗೂ ನೆರೆಯ ಎನ್‌ಸಿಆರ್ ಪ್ರದೇಶಗಳಲ್ಲಿ ಕಂಪನ ಉಂಟಾಗಿದೆ. ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಜನರು ಆತಂಕಗೊಂಡು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್‌ನಲ್ಲೇ ಹುಡುಗಿ ಮುಂದೆ ಹಸ್ತಮೈಥುನ – ದೂರು ನೀಡಲು ಸಂತ್ರಸ್ತೆ ಹಿಂದೇಟು

    ಕಳೆದ ಭಾನುವಾರ (ಜನವರಿ 1) ಮುಂಜಾನೆ ದೆಹಲಿ ಹಾಗೂ ನೆರೆಯ ಪ್ರದೇಶಗಳಲ್ಲಿ 3.8 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಯಾವುದೇ ಹಾನಿಯ ಬಗ್ಗೆ ವರದಿಯಾಗಿರಲಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು (NCS) ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k