Tag: Delhi Election Results

  • ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ: ಅಮಿತ್ ಶಾ

    ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ: ಅಮಿತ್ ಶಾ

    ನವದೆಹಲಿ: ದೆಹಲಿಯಲ್ಲಿ (New Delhi) ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ. ಭರವಸೆ ಮುರಿಯುವವರಿಗೆ ತಕ್ಕ ಪಾಠವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

    ದೆಹಲಿ ಚುನಾವಣಾ ಫಲಿತಾಂಶದಲ್ಲಿ (Delhi Election Results) 27 ವರ್ಷಗಳ ಬಳಿಕ ಬಿಜೆಪಿ ಮೇಲುಗೈ ಸಾಧಿಸಿದ ಕುರಿತು ಮಾತನಾಡಿದ ಅವರು, ದೆಹಲಿಯ ಜನರು ಸುಳ್ಳು, ವಂಚನೆ ಮತ್ತು ಭ್ರಷ್ಟಾಚಾರದ ‘ಶೀಷ್‌ಮಹಲ್’ ಅನ್ನು ನಾಶಮಾಡುವ ಮೂಲಕ ದೆಹಲಿಯನ್ನು ಆಪ್ ಮುಕ್ತಗೊಳಿಸಲು ತೀರ್ಮಾನಿಸಿದ್ದಾರೆ. ಭರವಸೆಗಳನ್ನು ಮುರಿಯುವವರಿಗೆ ದೆಹಲಿ ತಕ್ಕ ಪಾಠ ಕಲಿಸಿದೆ. ಇದು ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ಒಂದು ಉದಾಹರಣೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಆಪ್ ಸೋಲನ್ನು ದುರಹಂಕಾರ ಮತ್ತು ಅರಾಜಕತೆಯ ಸೋಲು ಎಂದು ಕರೆದರು. ಇದನ್ನೂ ಓದಿ: ದೆಹಲಿಯಲ್ಲಿ ಬಿಜೆಪಿ ಗೆಲುವು, ರಾಜ್ಯದ ಮುಂದಿನ ಚುನಾವಣೆಗೆ ದಿಕ್ಸೂಚಿ – ಆರ್.ಅಶೋಕ್

    ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ. ಅಲ್ಲದೇ ದೆಹಲಿಯನ್ನು ವಿಶ್ವದ ನಂಬರ್ ಒನ್ ರಾಜಧಾನಿಯನ್ನಾಗಿ ಮಾಡುತ್ತದೆ. ಇದು ‘ಮೋದಿ ಗ್ಯಾರಂಟಿ’ಯ ಗೆಲುವು. ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನರಿಗೆ ಧನ್ಯವಾದ ಎಂದು ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ದೆಹಲಿ ಚುನಾವಣೆಯಲ್ಲಿ ಸೋತ AAPಯನ್ನು ಕೌರವರಿಗೆ ಹೋಲಿಸಿದ ಸ್ವಾತಿ ಮಲಿವಾಲ್‌

    ಯಮುನಾ, ಕೊಳಕು ಕುಡಿಯುವ ನೀರು, ಹಾಳಾದ ರಸ್ತೆಗಳು, ತುಂಬಿ ಹರಿಯುವ ಚರಂಡಿಗಳು ಮತ್ತು ಪ್ರತಿ ಬೀದಿಯಲ್ಲಿ ತೆರೆದಿರುವ ಮದ್ಯದ ಅಂಗಡಿಗಳಿಗೆ ಸಾರ್ವಜನಿಕರು ತಮ್ಮ ಮತಗಳಿಂದ ತಕ್ಕ ಉತ್ತರ ನೀಡಿದ್ದಾರೆ. ದೆಹಲಿ ಈಗ ಮೋದಿಯವರ ನೇತೃತ್ವದಲ್ಲಿ ಆದರ್ಶ ರಾಜಧಾನಿಯಾಗಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಸೇರಿ ಇಡೀ ದೇಶ ಬಿಜೆಪಿ ಮಯವಾಗಲಿದೆ – ಜನಾರ್ದನ ರೆಡ್ಡಿ

  • ದೆಹಲಿ ಚುನಾವಣಾ ಫಲಿತಾಂಶದಿಂದ ಕೇಜ್ರಿವಾಲ್ ಮುಖವಾಡ ಕಳಚಿಬಿದ್ದಿದೆ: ವಿಜಯೇಂದ್ರ

    ದೆಹಲಿ ಚುನಾವಣಾ ಫಲಿತಾಂಶದಿಂದ ಕೇಜ್ರಿವಾಲ್ ಮುಖವಾಡ ಕಳಚಿಬಿದ್ದಿದೆ: ವಿಜಯೇಂದ್ರ

    ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ (AAP) ಅರವಿಂದ ಕೇಜ್ರಿವಾಲ್ (Arvind Kejriwal ) ಅವರ ಮುಖವಾಡ ಚುನಾವಣಾ ಫಲಿತಾಂಶದಿಂದ ಕಳಚಿಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

    ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ಪರ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಪ್ರಬುದ್ಧ ಮತದಾರರು ದೆಹಲಿ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ನಮಗೆ ಆಶೀರ್ವಾದ ಮಾಡಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಹ್ಯಾಟ್ರಿಕ್‌ ಸಾಧನೆ ಮಾಡಿದೆ, ಡಿಕೆಶಿ ಗ್ಯಾರಂಟಿ ಠುಸ್‌ ಪಟಾಕಿ ಆಗಿದೆ: ವಿಜಯೇಂದ್ರ ವ್ಯಂಗ್ಯ

    ಮನೀಷ್ ಸಿಸೋಡಿಯಾ ಅವರೂ ಸೋಲುತ್ತಿದ್ದಾರೆ. ಲಿಕ್ಕರ್, ಶೀಶ್ ಮಹಲ್ ಹಗರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಪ್ ಬಣ್ಣ ಬಯಲಾಗಿದೆ. ಇನ್ನೂ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಶೂನ್ಯ ಸಂಪಾದನೆ ಮಾಡಿತ್ತು. ಹರಿಯಾಣ, ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ಸಿಗೆ ಮುಖಭಂಗ ಆಗಿತ್ತು ಎಂದು ವ್ಯಂಗ್ಯವಾಡಿದ್ದಾರೆ.

    ಗ್ಯಾರೆಂಟಿಗಳೆಲ್ಲ ತಾತ್ಕಾಲಿಕ, ಆ ತಾತ್ಕಾಲಿಕ ಗ್ಯಾರೆಂಟಿಗಿಂತ ದೃಢ ನಾಯಕತ್ವ ಕೊಡುವ ನರೇಂದ್ರ ಮೋದಿಜೀ ನೇತೃತ್ವದ ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ದೆಹಲಿ ಮತದಾರರಿಂದ ಮತ್ತೊಮ್ಮೆ ರುಜುವಾತಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮುಸ್ಲಿಮ್‌ ಬಾಹುಳ್ಯ ಇರೋ ಮುಸ್ತಫಾಬಾದ್‌ನಲ್ಲಿ ಬಿಜೆಪಿಗೆ ಗೆಲುವು

  • ಕಾಂಗ್ರೆಸ್‌ ಹ್ಯಾಟ್ರಿಕ್‌ ಸಾಧನೆ ಮಾಡಿದೆ, ಡಿಕೆಶಿ ಗ್ಯಾರಂಟಿ ಠುಸ್‌ ಪಟಾಕಿ ಆಗಿದೆ: ವಿಜಯೇಂದ್ರ ವ್ಯಂಗ್ಯ

    ಕಾಂಗ್ರೆಸ್‌ ಹ್ಯಾಟ್ರಿಕ್‌ ಸಾಧನೆ ಮಾಡಿದೆ, ಡಿಕೆಶಿ ಗ್ಯಾರಂಟಿ ಠುಸ್‌ ಪಟಾಕಿ ಆಗಿದೆ: ವಿಜಯೇಂದ್ರ ವ್ಯಂಗ್ಯ

    ಬೆಂಗಳೂರು: ದೆಹಲಿಯಲ್ಲಿ ಕಾಂಗ್ರೆಸ್‌ (Congress) ಹ್ಯಾಟ್ರಿಕ್‌ ಸಾಧನೆ ಮಾಡಿದೆ. ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಅಲ್ಲದೇ ದೆಹಲಿಯಲ್ಲಿ ಡಿಕೆಶಿ ಗ್ಯಾರಂಟಿ ಠುಸ್‌ ಪಟಾಕಿ ಆಗಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವ್ಯಂಗ್ಯವಾಡಿದರು.

    ದೆಹಲಿ ಚುನಾವಣಾ ಫಲಿತಾಂಶದ (Delhi Election Results) ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹ್ಯಾಟ್ರಿಕ್‌ ಸಾಧನೆ ಮಾಡಿದೆ. ಮೋದಿಗೆ ಪರ್ಯಾಯ ನಾಯಕನನ್ನ ಕೊಡ್ತೀವಿ ಅಂತ ಬಿಂಬಿಸಿಕೊಳ್ಳುವ ಕಾಂಗ್ರೆಸ್‌ಗೆ ಲೋಕಸಭಾ ಚುನಾವಣೆ, ಹರಿಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಮುಖಭಂಗ ಆಗಿತ್ತು. ಈಗ ಕಾಂಗ್ರೆಸ್‌ ಸ್ಥಿತಿ ಏನು ಅಂತ ಜನ ತೋರಿಸಿಕೊಟ್ಟಿದ್ದಾರೆ ಎಂದು ತಿವಿದರು. ಇದನ್ನೂ ಓದಿ: ಜನಶಕ್ತಿಯೇ ಸರ್ವಶ್ರೇಷ್ಠ – ಅಭಿವೃದ್ಧಿ, ಉತ್ತಮ ಆಡಳಿತ ಗೆಲ್ಲುತ್ತದೆ: ಮೋದಿ

    ಇನ್ನೂ ದೆಹಲಿಯಲ್ಲಿ ಗ್ಯಾರಂಟಿ ಪ್ರಚಾರಕ್ಕೆ ಡಿಕೆ ಶಿವಕುಮಾರ್‌ ಅವರೇ ಹೋಗಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿ, ಗ್ಯಾರಂಟಿಗಳೆಲ್ಲವೂ ತಾತ್ಕಾಲಿಕ. ನಮ್ಮ ರಾಜ್ಯದಲ್ಲೇ ಮೈಕ್ರೋ ಫೈನಾನ್ಸ್‌ನಿಂದ ಏನಾಗ್ತಿದೆ ಎಂಬುದನ್ನು ಜನ ನೋಡ್ತಿದ್ದಾರೆ. ಹಾಗಾಗಿ ದೆಹಲಿಯ ಪ್ರಬುದ್ಧ ಮತದಾರರು ಅರ್ಥಮಾಡಿಕೊಂಡಿದ್ದಾರೆ. ತಾತ್ಕಾಲಿಕ ಗ್ಯಾರಂಟಿಗಿಂತ ನರೇಂದ್ರ ಮೋದಿ ಅವರ ದೃಢ ನಾಯಕತ್ವ ಹೊಂದಿರುವ ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಜನ ಅರ್ಥಮಾಡಿಕೊಂಡಿದ್ದಾರೆ. ಇದರಿಂದ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದು ದೆಹಲಿ ಜನತೆಗೆ ಧನ್ಯವಾದ ಅರ್ಪಿಸಿದರು.  ಇದನ್ನೂ ಓದಿ: ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ಮುಂದುವರಿದು… ಬಿಜೆಪಿಗೆ 27 ವರ್ಷಗಳ ನಂತರ ಅಭೂತಪೂರ್ವ ಗೆಲುವು ಸಿಕ್ಕಿದೆ. ದೆಹಲಿ ಜನತೆಗೆ, ಮತದಾರರಿಗೆ, ವರಿಷ್ಠ ನಾಯಕರಿಗೆ, ದೆಹಲಿ ಬಿಜೆಪಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆಪ್ ಪಕ್ಷ ಭ್ರಷ್ಟಾಚಾರ ವಿರುದ್ಧ ಆಂದೋಲನ ಮಾಡಿ ಅಧಿಕಾರಕ್ಕೆ ಬಂದಿತ್ತು. ಆದರೀಗ ಕೇಜ್ರಿವಾಲ್, ಆಪ್ ಮುಖವಾಡ ಕಳಚಿ ಬಿದ್ದಿದೆ, ಆಪ್ ನಾಯಕರ ಬಣ್ಣವೂ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ – ಪೋಸ್ಟರ್ ಹಾಕಿ, ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ! 

  • ಕೇಜ್ರಿವಾಲ್‌ ಸೋಲಿಸಿ ತಾಯಿಯ ಸೋಲಿಗೆ ಸೇಡು ತೀರಿಸಿದ ಸಂದೀಪ್‌ ದೀಕ್ಷಿತ್‌

    ಕೇಜ್ರಿವಾಲ್‌ ಸೋಲಿಸಿ ತಾಯಿಯ ಸೋಲಿಗೆ ಸೇಡು ತೀರಿಸಿದ ಸಂದೀಪ್‌ ದೀಕ್ಷಿತ್‌

    ನವದೆಹಲಿ: ಆರಂಭದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ನವದೆಹಲಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ಸೋಲು ಕಂಡಿದ್ದಾರೆ. ಆದಾಗ್ಯೂ ತನ್ನ ತಾಯಿಯನ್ನು ಸೋಲಿಸಿದ ಕೇಜ್ರಿವಾಲ್‌ (Arvind Kejriwal) ವಿರುದ್ಧ ಸೇಡು ತೀರಿಕೊಳ್ಳುವಲ್ಲಿ ಸಂದೀಪ್‌ ದೀಕ್ಷಿತ್‌ (Sandeep Dikshit) ಯಶಸ್ವಿಯಾಗಿದ್ದಾರೆ.

    ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿರುವ ಕೇಜ್ರಿವಾಲ್‌, ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಸಾಹಿಬ್‌ ಸಿಂಗ್‌ ವಿರುದ್ಧ 4,089 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇತ್ತ 3ನೇ ಸ್ಥಾನದಲ್ಲಿರುವ ಕಾಂಗ್ರೆಸ್‌ ಅಭ್ಯರ್ಥಿ 4,568 ಮತಗಳನ್ನ ಪಡೆದುಕೊಂಡಿದ್ದಾರೆ. ಆಪ್‌ ಪಾಲಿನ ಮತಗಳನ್ನು ತಿಂದುಹಾಕಿರುವ ಸಂದೀಪ್‌ ದೀಕ್ಷಿತ್‌, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಿದ್ದಾರೆ. ಇದನ್ನೂ ಓದಿ: ನಮ್ಮನ್ನು ಸೋಲಿಸಲು ಮೋದಿಗೆ ಇನ್ನೊಂದು ಜನ್ಮ ಬೇಕು ಎಂದಿದ್ದ ಕೇಜ್ರಿವಾಲ್‌ಗೆ ಸೋಲು

    ಸತತ 3ನೇ ಬಾರಿಗೆ ನವದೆಹಲಿ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿದ ಕೇಜ್ರಿವಾಲ್‌ ಒಟ್ಟು 25,999 ಮತಗಳನ್ನು ಪಡೆದಿದ್ದರೆ, ಸಂದೀಪ್‌ ದೀಕ್ಷಿತ್‌ 4,568 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಒಟ್ಟು 30,088 ಮತಗಳನ್ನು ಪಡೆದುಕೊಂಡಿದ್ದು 4,089 ಮತಗಳಿಂದ ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: ದೆಹಲಿ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾಗೆ ಹೀನಾಯ ಸೋಲು

    1993ರಿಂದ ಸತತವಾಗಿ ಚುನಾವಣೆಯಲ್ಲಿ ಗೆಲುವು ಕಂಡಿದ್ದ ಶೀಲಾ ದೀಕ್ಷಿತ್‌ ಅವರನ್ನ ಅರವಿಂದ್‌ ಕೇಜ್ರಿವಾಲ್‌ 2013ರಲ್ಲಿ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲಿಸಿದ್ದರು. 25,864 ಮತಗಳ ಅಂತರದಿಂದ ಕೇಜ್ರಿವಾಲ್‌ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ಲೋಕಸಭಾ ಚುನಾವಣೆ ವೇಳೆ INDIA ಒಕ್ಕೂಟದ ಭಾಗವಾಗಿದ್ದ ಕಾಂಗ್ರೆಸ್‌ ಮತ್ತು ಆಪ್‌ ದೆಹಲಿಯಲ್ಲಿ ಪ್ರತ್ಯೇಕ ಸ್ಪರ್ಧೆ ಮಾಡಿತ್ತು. ಸದ್ಯದ ಚುನಾವಣಾ ಫಲಿತಾಂಶ ಗಮನಿಸಿದರೆ ಆಪ್‌ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಮತಗಳನ್ನು ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಾಲಾಗಿವೆ. ಹೀಗಾಗಿ ಇಂಡಿಯಾ ಮೈತ್ರಿ ಕಡಿದುಕೊಂಡು ಆಪ್‌ ತಪ್ಪು ಮಾಡಿತೆ ಎಂಬ ಪ್ರಶ್ನೆಯೂ ಎದ್ದಿದೆ.

  • ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಗೆಲುವಿನ ನಗೆ ಬೀರಿದ್ದಾರೆ.

    ಕಲ್ಕಾಜಿ ಕ್ಷೇತ್ರವು ಯಾರ ಪಾಲಾಗಲಿದೆ ಎಂಬುದು ಕೊನೆ ವರೆಗಿನ ಕುತೂಹಲವಾಗಿತ್ತು. ಮತ ಎಣಿಕೆಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ತೀವ್ರ ಪೈಪೋಟಿ ಇತ್ತು. ಆರಂಭದಲ್ಲಿ ದೆಹಲಿ ಸಿಎಂ ಅತಿಶಿ ಹಿನ್ನಡೆ ಅನುಭವಿಸಿದ್ದರು.

    2020ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಅತಿಶಿ ಗೆದ್ದಿದ್ದರು. ಈ ಬಾರಿ ಬಿಜೆಪಿಯ ರಮೇಶ್‌ ಬಿಧುರಿ ಹಾಗೂ ಕಾಂಗ್ರೆಸ್‌ನ ಅಲ್ಕಾ ಲಂಬಾ ವಿರುದ್ಧ ಕಣಕ್ಕಿಳಿದಿದ್ದರು. ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದರು.

    ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಉನ್ನತ ನಾಯಕರ ಆಘಾತಕಾರಿ ಸೋಲುಗಳ ಹೊರತಾಗಿಯೂ ಮುಖ್ಯಮಂತ್ರಿ ಅತಿಶಿ ದಕ್ಷಿಣ ದೆಹಲಿಯ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ನಾಯಕರಾದ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಜೈಲು ಸೇರಿದಾಗ, ಸರ್ಕಾರವನ್ನು ಅತಿಶಿ ಮುನ್ನಡೆಸಿದ್ದರು. ಕೇಜ್ರಿವಾಲ್‌ ಜೈಲಿಂದ ಹೊರಬಂದಾಗ, ನಾಯಕಿ ಅತಿಶಿ ಅವರು ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

  • ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡ್ತಿದ್ದವರಿಗೆ ದೆಹಲಿ ಜನರಿಂದ ತಕ್ಕ ಪಾಠ: ಜೋಶಿ

    ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡ್ತಿದ್ದವರಿಗೆ ದೆಹಲಿ ಜನರಿಂದ ತಕ್ಕ ಪಾಠ: ಜೋಶಿ

    ಹುಬ್ಬಳ್ಳಿ: ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ದೆಹಲಿ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

    ದೆಹಲಿ ಚುನಾವಣಾ ಫಲಿತಾಂಶದ (Delhi Election Results) ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ (BJP) ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ಪ್ರಧಾನಿ ಮೋದಿ, ಜೆ.ಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ದೆಹಲಿ ಜನತೆಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ನಮ್ಮನ್ನು ಸೋಲಿಸಲು ಮೋದಿಗೆ ಇನ್ನೊಂದು ಜನ್ಮ ಬೇಕು ಎಂದಿದ್ದ ಕೇಜ್ರಿವಾಲ್‌ಗೆ ಸೋಲು

    ನಕಾರಾತ್ಮಕ ತಂತ್ರಗಳ ಮೂಲಕ ರಾಜಕೀಯ ಮಾಡುತ್ತಿದ್ದವರಿಗೆ ದೆಹಲಿ ಜನ ತಕ್ಕ ಪಾಠ ಕಲಿಸಿದ್ದಾರೆ. ದೆಹಲಿಯಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತಿದ್ದವರಿಗೆ ಕಪಾಳ ಮೋಕ್ಷವಾಗಿದೆ. ನಾವು ಪ್ರಜಾಪ್ರಭುತ್ವವನ್ನು ನಂಬಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಯಶಸ್ವಿಯಾದ ರಚನಾತ್ಮಕ ಹಾಗೂ ಪ್ರಬಲ ರಾಜಕೀಯ ಪಕ್ಷ ಇರಬೇಕು ಎನ್ನುವುದು ನಮ್ಮ ಅಭಿಲಾಷೆ ಎಂದರು. ಇದನ್ನೂ ಓದಿ: ದೆಹಲಿ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾಗೆ ಹೀನಾಯ ಸೋಲು

    ಕಾಂಗ್ರೆಸ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಸ್ಥಿತಿ ಕಾಂಗ್ರೆಸ್‌ಗೆ ಒಳ್ಳೆಯದಲ್ಲ. ಈ ಬಗ್ಗೆ ಕಾಂಗ್ರೆಸ್ ಆತ್ಮಾವಾಲೋಕನ ಮಾಡಿಕೊಳ್ಳಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ ಅಂತ ಅಹಂಕಾರದಲ್ಲಿರುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪೀಣ್ಯ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ BMRCL ಚಿಂತನೆ

  • Delhi Election 2025 Results | ಅರವಿಂದ್‌ ಕೇಜ್ರಿವಾಲ್‌ಗೆ ಸೋಲು

    Delhi Election 2025 Results | ಅರವಿಂದ್‌ ಕೇಜ್ರಿವಾಲ್‌ಗೆ ಸೋಲು

    ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಸಾಹಿಬ್‌ ಸಿಂಗ್‌ ವಿರುದ್ಧ ಸೋಲು ಕಂಡಿದ್ದಾರೆ. ಈ ಮೂಲಕ ಸತತ 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗುವ ಕನಸು ನುಚ್ಚುನೂರಾಗಿದೆ.

    ಕಳೆದ 2 ಚುನಾವಣೆಗಳಲ್ಲೂ ನವದೆಹಲಿ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಕೇಜ್ರಿವಾಲ್‌ ಸತತ 2 ಬಾರಿ ಸಿಎಂ ಆಗಿದ್ದರು. 3ನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಪರ್ವೇಶ್‌ ವಿರುದ್ಧ 3,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇದನ್ನೂ ಓದಿ: ನಮ್ಮನ್ನು ಸೋಲಿಸಲು ಮೋದಿಗೆ ಇನ್ನೊಂದು ಜನ್ಮ ಬೇಕು ಎಂದಿದ್ದ ಕೇಜ್ರಿವಾಲ್‌ಗೆ ಸೋಲು

    ಸತತ 3ನೇ ಬಾರಿಗೆ ನವದೆಹಲಿ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿದ ಕೇಜ್ರಿವಾಲ್‌ ಒಟ್ಟು 25,999 ಮತಗಳನ್ನು ಪಡೆದಿದ್ದರೆ, ಸಂದೀಪ್‌ ದೀಕ್ಷಿತ್‌ 4,568 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಒಟ್ಟು 30,088 ಮತಗಳನ್ನು ಪಡೆದುಕೊಂಡಿದ್ದು 4,089 ಮತಗಳಿಂದ ಗೆದ್ದು ಬೀಗಿದ್ದಾರೆ. ಕೇಜ್ರಿವಾಲ್‌, ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಸಾಹಿಬ್‌ ಸಿಂಗ್‌ ವಿರುದ್ಧ 4,089 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

    ಮದ್ಯ ನೀತಿ ಹಗರಣದಲ್ಲಿ ಭ್ರಷ್ಟಾಚಾರಾ ಆರೋಪದ ಮೇಲೆ ಜೈಲು ಸೇರಿದ ಕೇಜ್ರಿವಾಲ್‌ ರಾಜೀನಾಮೆ ಕೊಡಲು ಹಿಂದೇಟು ಹಾಕಿದರು. ಈ ವೇಳೆ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ಜೈಲುಪಾಲಾದರು. ಇನ್ನೇನು ಆಪ್‌ ಬಹುತೇಕ ನಾಮಾವಶೇಷವಾಯ್ತು ಅನ್ನೋ ಹೊತ್ತಿಗೆ ಜೈಲಿನಿಂದ ಕೇಜ್ರಿವಾಲ್‌ ಬಿಡುಗಡೆಯಾದರು. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಜನಾದೇಶ ಪಡೆದು ಆಯ್ಕೆಯಾದ ಬಳಿಕವೇ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ಶಪಥಗೈದಿದ್ದರು.

    ಈ ನಡುವೆ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ದೌರ್ಜನ್ಯ ಪ್ರಕರಣ ಸಹ ಸಂಕಷ್ಟ ತಂದೊಡ್ಡಿತು. ಪ್ರತಿ ಹಂತದಲ್ಲೂ ಲೆಪ್ಟಿನೆಂಟ್ ಗರ್ವನರ್ ಜೊತೆಗೆ ಸಂಘರ್ಷ ನಡೆಯುತ್ತಲೇ ಇತ್ತು. ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಶೀಷ್ ಮಹಲ್ ಆರೋಪ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು. ಖುದ್ದು ಪ್ರಧಾನಿ ಮೋದಿ ಅವರೇ ಶೀಷ್‌ಮಹಲ್‌ ನವೀಕರಣಕ್ಕೆ ಕೋಟ್ಯಂತರ ರೂಪಾಯಿ ಅಕ್ರಮ ಮಾಡಿರುವುದಾಗಿ ಆರೋಪಿಸಿದ್ದರು. ಇದನ್ನೂ ಓದಿ: ದೆಹಲಿ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾಗೆ ಹೀನಾಯ ಸೋಲು

    ಹೀಗೆ ಆಪ್ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸಾಲು ಸಾಲು ಸವಾಲು ಎದುರಿಸಬೇಕಾಯ್ತು. ಕೊನೆಗೆ ಜನರಿಂದ ಮಾನ್ಯತೆ ಪಡೆಯದೇ ಮತ್ತೆ ಸಿಎಂ ಕುರ್ಚಿ ಮೇಲೆ ಕೂರಲ್ಲ ಎಂದು ಶಪಥ ಮಾಡಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಇದೀಗ ಈ ಹೋರಾಟದಲ್ಲಿ ಕೇಜ್ರಿವಾಲ್‌ ಸೋಲು ಕಂಡಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್‌ ಸೋಲಿಗೆ ಕಾರಣ: ಆರ್‌. ಅಶೋಕ್‌

  • ಕೇಜ್ರಿವಾಲ್‌ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್‌ ಸೋಲಿಗೆ ಕಾರಣ: ಆರ್‌. ಅಶೋಕ್‌

    ಕೇಜ್ರಿವಾಲ್‌ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್‌ ಸೋಲಿಗೆ ಕಾರಣ: ಆರ್‌. ಅಶೋಕ್‌

    – ರಾಜನ ರೀತಿಯ ಆಡಳಿತ ನೋಡಿ ಜನ ಬೇಸತ್ತಿದ್ದಾರೆ ಎಂದ ವಿಪಕ್ಷ ನಾಯಕ

    ಬೆಂಗಳೂರು: ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯುಮುನಾ ನದಿ ಮೇಲೆ ಕಳಂಕ ಹಾಕಿಬಿಟ್ರು. ಅಲ್ಲದೇ ಜೈಲಿನಲ್ಲಿದ್ದುಕೊಂಡು 2 ತಿಂಗಳು ಆಡಳಿತ ಸ್ಥಗಿತಗೊಳಿಸಿದ್ರು. ಇದರ ಶಾಪ ತಟ್ಟಿದೆ. ಹಾಗಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ (R Ashoka ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್‌, ಕಾರು, ಮಫ್ಲರ್‌, ನಿಮಿಷ ನಿಮಿಷಕ್ಕೂ ಕೆಮ್ಮೋದು, 2 ಬೆಡ್‌ರೂಮ್‌ ಫ್ಲ್ಯಾಟ್‌, ಈಗ ಶೀಷ್‌ ಮಹಲ್‌ ಅದರಲ್ಲಿ 25 ರೂಮ್‌ಗಳಿವೆ. ಕಾರು, ಎಸ್ಕಾರ್ಟ್‌ ಹೀಗೆ ರಾಜನ ರೀತಿಯ ಆಡಳಿತ ನೋಡಿ ಜನ ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್‌ – `ಕೈʼ ನಾಯಕರಿಗೆ ಮುಖಭಂಗ

    ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯುಮುನಾ ನದಿ (Yamuna River) ಮೇಲೆ ಕೇಜ್ರಿವಾಲ್ ಕಳಂಕ ಹಾಕಿಬಿಟ್ರು. ಯಮುನಾ ನದಿ ಒಂದು ದಿನಕ್ಕೆ ಮಲಿನ ಆಗಿಲ್ಲ. ದೆಹಲಿ ಜನ ಪ್ರತಿದಿನ ಕುಡಿಯುತ್ತಿದ್ದ, ಗಂಗೆ ಅಂತ ಪೂಜೆ ಮಾಡ್ತಿದ್ದ ನೀರಿನ ಮೇಲೆಯೇ ಕಳಂಕ ತಂದರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ. ಕೇಜ್ರಿವಾಲ್‌ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿಬಿಟ್ಟರು. ಇದೇ ಅವರ ಸೋಲಿಗೆ ಕಾರಣ ಎಂದು ನುಡಿದಿದ್ದಾರೆ.

    ಯಾರೇ ಸಿಎಂ ಜೈಲಿಗೆ ಹೋದಾಗ ರಾಜೀನಾಮೆ ಕೊಟ್ಟು ಅವರದ್ದೇ ಪಕ್ಷದ ಮತ್ತೊಬ್ಬರಿಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕಿತ್ತು. ಆದ್ರೆ ಇವರು 2 ತಿಂಗಳು ಜೈಲಿನಲ್ಲಿದ್ದುಕೊಂಡು ಆಡಳಿತ ಸ್ಥಗಿತಗೊಳಿಸಿದ್ರು, ಅದರ ಶಾಪ ತಟ್ಟಿದೆ. ಜೊತೆಗೆ ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟವೇ ಕೇಜ್ರಿವಾಲ್‌ ದೊಡ್ಡ ಕಳ್ಳ, ಭ್ರಷ್ಟಾಚಾರಿ ಎಂದು ಹೇಳಿದಾಗ ಜನರಿಗೆ ಅರ್ಥವಾಯ್ತು. ಮಳ್ಳಿತರ ಬಂದು ಕಳ್ಳತನ ತರ ಆಗಿದ್ದಾನೆ ಎಂದು ಕಾಂಗ್ರೆಸ್‌ ಆಪಾದನೆ ಮಾಡಿತು. ಜೊತೆಗೆ ಪ್ರಧಾನಿ ಮೋದಿ ಅವರ ಆಡಳಿತ ಬಿಜೆಪಿ ಗೆಲುವಿಗೆ ಕಾರಣ ಎಂದು ಅಶೋಕ್‌ ಹೇಳಿದ್ದಾರೆ.  ಇದನ್ನೂ ಓದಿ: ಆರೋಗ್ಯ ಸಮಸ್ಯೆ ಇದೆ, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ: ಸೆಲೆಬ್ರಿಟಿಗಳಿಗೆ ದರ್ಶನ್‌ ಮನವಿ

    ಇಂಡಿಯಾ ಒಕ್ಕೂಟ ಒಡೆದು ಛಿದ್ರವಾಗಿದೆ. ಅಖಿಲೇಶ್‌ ಯಾದವ್‌, ಒಮರ್‌ ಅಬ್ದುಲ್ಲಾ ಎಲ್ಲರೂ ಕಾಂಗ್ರೆಸ್ಸನ್ನ ಟೀಕೆ ಮಾಡ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಸಹ ಈಗ ಪಾರ್ಟಿಮೆಂಟ್‌ ಪ್ರವೇಶಿಸಿದ್ದು, ವಂಶಪಾರಂಪರ್ಯ ರಾಜಕಾರಣ ಮುಂದುವರಿಸಿದ್ದಾರೆ. ಮೋದಿ ಜನಕ್ಕೋಸ್ಕರ ಕೆಲಸ ಮಾಡಿದ್ರೆ ಸೋನಿಯಾ, ರಾಹುಲ್‌, ಪ್ರಿಯಾಂಕ ತಮ್ಮ ಕುಟುಂಬಕ್ಕಾಗಿ ಮಾಡ್ತಿದ್ದಾರೆ ಎನ್ನೋದು ಜಗಜ್ಜಾಹೀರಾಗಿದೆ. ಆದ್ದರಿಂದ ಜನ ಮೋದಿ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ದೆಹಲಿಯಲ್ಲಿ ಅಧಿಕಾರ ಕೊಟ್ಟಿದ್ದಾರೆ. ದೆಹಲಿ ಜನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: 2020 ರಲ್ಲಿ 14-1, 2025 ರಲ್ಲಿ 4-11: ರಾಜಧಾನಿ ಹೋರಾಟದಲ್ಲಿ ಎಎಪಿಗೆ ದಕ್ಷಿಣ ದೆಹಲಿ ದೊಡ್ಡ ಹಿನ್ನಡೆ

  • Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್‌ – `ಕೈʼ ನಾಯಕರಿಗೆ ಮುಖಭಂಗ

    Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್‌ – `ಕೈʼ ನಾಯಕರಿಗೆ ಮುಖಭಂಗ

    ನವದೆಹಲಿ: ಬಿಜೆಪಿ-ಎಎಪಿ (BJP vs AAP) ನಡುವಿನ ಪೈಪೋಟಿ ಚುನಾವಣಾ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸುತ್ತಲೇ ಇದೆ. ಅದ್ರೆ ಉಚಿತ ಗ್ಯಾರಂಟಿ ಘೋಷಿಸಿ ಸೀಮಿತ ಹೋರಾಟ ನಡೆಸಿದ ಕಾಂಗ್ರೆಸ್‌ (Congress) ಒಂದೇ ಒಂದು ಕ್ಷೇತ್ರದಲ್ಲಿಯೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಇದು ಕೇಂದ್ರದ ನಾಯಕರಿಗೂ ಮುಖಭಂಗತರಿಸಿದೆ.

    ಆರಂಭದಿಂದಲೂ ಬಿಜೆಪಿ-ಆಪ್‌ ನಡುವೆ ಪೈಪೋಟಿ ಮುಂದುವರಿದಿದೆ. 11:30 ಗಂಟೆ ವೇಳೆಗೆ ಬಿಜೆಪಿ 44 ಸ್ಥಾನಗಳಲ್ಲಿ ಹಾಗೂ ಆಪ್‌ 26 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈಗಾಗಲೇ ಮ್ಯಾಜಿಕ್‌ ನಂಬರ್‌ ತಲುಪಿರುವ ಬಿಜೆಪಿ 27‌ ವರ್ಷಗಳ ಬಳಿಕ ದೆಹಲಿಯಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಇದನ್ನೂ ಓದಿ: Delhi Election Results | 16 ಕ್ಷೇತ್ರಗಳಲ್ಲಿ ಬಿಜೆಪಿ-ಆಪ್‌ ನಡುವೆ ನೇರಾನೇರ ಫೈಟ್‌ – 7 ಕ್ಷೇತ್ರಗಳಲ್ಲಿ ಬಿಜೆಪಿಗೆ 2,000 ಮತಗಳ ಲೀಡ್‌

    ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ:
    ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದ ಕೇಜ್ರಿವಾಲ್‌ 2 ರಿಂದ 5 ಸುತ್ತುಗಳ ವರೆಗೂ‌ 300ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಪರ್ವೇಶ್‌ ವಿರುದ್ಧ 6ನೇ ಸುತ್ತಿನಲ್ಲಿ 225 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಇದನ್ನೂ ಓದಿ: ಮೈತ್ರಿ ಎಲ್ಲ ಕಾಲದಲ್ಲೂ ಒಂದೇ ರೀತಿ ಇರಲ್ಲ; ದೆಹಲಿ ಫಲಿತಾಂಶದ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

    ಮ್ಯಾಜಿಕ್‌ ನಂಬರ್‌ ತಲುಪಿದ ಬಿಜೆಪಿ:
    ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, 11 ಗಂಟೆ ವೇಳೆಗೆ ಬಿಜೆಪಿ 44 ಸ್ಥಾನಗಳೊಂದಿಗೆ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಆಪ್‌ 28 ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ. ಕಾಂಗ್ರೆಸ್‌ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

    2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್‌ 28, ಕಾಂಗ್ರೆಸ್‌ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್‌ಗೆ ಕಾಂಗ್ರೆಸ್‌ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್‌ (Arvind Kejriwal) ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು. ಇದನ್ನೂ ಓದಿ: ಈ ಬಾರಿಯೂ ಗೆಲುವು ನಮ್ಮದೇ – ಆಪ್‌ ಕಾರ್ಯಕರ್ತರ ಸಂಭ್ರಮಾಚರಣೆ ಆರಂಭ

    ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.

  • Delhi Election Results | 16 ಕ್ಷೇತ್ರಗಳಲ್ಲಿ ಬಿಜೆಪಿ-ಆಪ್‌ ನಡುವೆ ನೇರಾನೇರ ಫೈಟ್‌ – 7 ಕ್ಷೇತ್ರಗಳಲ್ಲಿ ಬಿಜೆಪಿಗೆ 2,000 ಮತಗಳ ಲೀಡ್‌

    Delhi Election Results | 16 ಕ್ಷೇತ್ರಗಳಲ್ಲಿ ಬಿಜೆಪಿ-ಆಪ್‌ ನಡುವೆ ನೇರಾನೇರ ಫೈಟ್‌ – 7 ಕ್ಷೇತ್ರಗಳಲ್ಲಿ ಬಿಜೆಪಿಗೆ 2,000 ಮತಗಳ ಲೀಡ್‌

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ (Delhi Election Results) ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್‌ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ.

    ಸದ್ಯ 10:30ರ ವೇಳೆಗೆ 42 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 27 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆಯಲ್ಲಿತ್ತು. 10:50ರ ಸುಮಾರಿಗೆ ಬಿಜೆಪಿ 40 ಕ್ಷೇತ್ರ, ಆಪ್‌ 30 ಕ್ಷೇತ್ರಗಳಲ್ಲಿ, 10:55ರ ವೇಳೆಗೆ ಬಿಜೆಪಿ 41 ಹಾಗೂ ಎಎಪಿ 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ ಕಾಂಗ್ರೆಸ್‌ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಅಲ್ಲದೇ 16 ಕ್ಷೇತ್ರಗಳಲ್ಲಿ ಬಿಜೆಪಿ-ಆಪ್‌ ನಡುವೆ ನೇರಾನೇರ ಫೈಟ್‌ ಏರ್ಪಟ್ಟಿದ್ದು, 7 ಕ್ಷೇತ್ರಗಳಲ್ಲಿ 2,000ಕ್ಕೂ ಅಧಿಕ ಮತಗಳ ಮುನ್ನಡೆಯಲ್ಲಿದೆ. ಕಲ್ಕಾಜಿ ಕ್ಷೇತ್ರದಲ್ಲಿ ಸಿಎಂ ಅತಿಶಿ ಸತತವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ.

    ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ:
    ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದ ಕೇಜ್ರಿವಾಲ್‌ 2 ರಿಂದ 5 ಸುತ್ತುಗಳ ವರೆಗೂ‌ 300ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಪರ್ವೇಶ್‌ ವಿರುದ್ಧ 6ನೇ ಸುತ್ತಿನಲ್ಲಿ 225 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಇದನ್ನೂ ಓದಿ: Delhi Election Results | ಬಿಜೆಪಿಗೆ ಆರಂಭಿಕ ಮುನ್ನಡೆ – ಕೇಜ್ರಿವಾಲ್‌ ಸೇರಿ ಆಪ್‌ ಘಟಾನುಘಟಿ ನಾಯಕರಿಗೆ ಹಿನ್ನಡೆ

    ಮ್ಯಾಜಿಕ್‌ ನಂಬರ್‌ ತಲುಪಿದ ಬಿಜೆಪಿ:
    ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, 11 ಗಂಟೆ ವೇಳೆಗೆ ಬಿಜೆಪಿ 41 ಸ್ಥಾನಗಳೊಂದಿಗೆ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಆಪ್‌ 29 ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ. ಕಾಂಗ್ರೆಸ್‌ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

    2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್‌ 28, ಕಾಂಗ್ರೆಸ್‌ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್‌ಗೆ ಕಾಂಗ್ರೆಸ್‌ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್‌ (Arvind Kejriwal) ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು. ಇದನ್ನೂ ಓದಿ: Delhi Election Results | ನವದೆಹಲಿ ಕ್ಷೇತ್ರದಲ್ಲಿ ಹಾವು – ಏಣಿ ಆಟ; ಕೇಜ್ರಿವಾಲ್‌ಗೆ ಅಲ್ಪ ಮುನ್ನಡೆ

    ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ. ಇದನ್ನೂ ಓದಿ: 4ನೇ ಬಾರಿಗೂ ಕೇಜ್ರಿವಾಲ್‌ ಸಿಎಂ ಆಗ್ತಾರೆ – ಸಚಿವ ಸೌರಭ್ ಭಾರದ್ವಾಜ್ ವಿಶ್ವಾಸ