ನವದೆಹಲಿ: ದೆಹಲಿ ಚುನಾವಣೆ (Delhi Elections) ಸಮೀಪಿಸುತ್ತಿದ್ದಂತೆ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದೆ. ಚುನಾವಣಾ ಆಯೋಗವು ಬಿಜೆಪಿ ಎದುರು ಶರಣಾಗಿದೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಾಗ್ದಾಳಿ ನಡೆಸಿದ್ದಾರೆ.
ಭಾರತೀಯ ಚುನಾವಣಾ ಆಯೋಗವನ್ನು ಗುರಿಯಾಗಿಟ್ಟುಕೊಂಡು ದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ ಅಸ್ತಿತ್ವದಲ್ಲಿಲ್ಲ ಎಂದು ತೋರುತ್ತದೆ. ಇದೊಂದು ರೀತಿಯಲ್ಲಿ ಬಹಳ ದೊಡ್ಡ ಪ್ರಶ್ನೆಯನ್ನ ಹುಟ್ಟುಹಾಕುತ್ತಿದೆ ಅಂದರು. ಇದನ್ನೂ ಓದಿ: ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್‌ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ
ಇದೇ ತಿಂಗಳ ಕೊನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿವೃತ್ತರಾಗುತ್ತಿದ್ದಾರೆ. ನಿವೃತ್ತಿಯ ನಂತರ ಅವರಿಗೆ ರಾಜ್ಯಪಾಲರ ಹುದ್ದೆ, ರಾಷ್ಟ್ರಪತಿ ಹುದ್ದೆ ನೀಡಬಹುದು. ಹೀಗಾಗಿ ನಾನು ರಾಜೀವ್ ಕುಮಾರ್ ಅವರನ್ನ ಕೈಮುಗಿದು ಕೇಳಿಕೊಳ್ಳುತ್ತೇನೆ. ನಿಮ್ಮ ಕರ್ತವ್ಯವನ್ನ ನಿರ್ವಹಿಸಿ ಯಾವುದೇ ಹುದ್ದೆಯ ದುರಾಸೆಯನ್ನ ಬಿಟ್ಟುಬಿಡಿ ಎಂದು ಮನವಿ ಮಾಡಿದ್ರು.
ದೆಹಲಿ ಕೇಂದ್ರಿತ ಯಾವುದೇ ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿತ್ತು, ಈ ನಡುವೆ ಆದಾಯ ತೆರಿಗೆಯಲ್ಲಿ ವಿನಾಯತಿ ನೀಡಿರುವುದು ಚುನಾವಣೆಯಲ್ಲಿ ಬಿಜೆಪಿ ನಾಯಕರಿಗೆ ಶಕ್ತಿ ತುಂಬಿದಂತಾಗಲಿದೆ. 2020ರಲ್ಲಿ, ಮಧ್ಯಮ ವರ್ಗದ ಬೆಂಬಲದಿಂದ ಆಮ್ ಆದ್ಮಿ ಪಕ್ಷ ಗೆಲುವಿನತ್ತ ಸಾಗಿತು.
2024ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಿದ್ದು ಇದೇ ಮಧ್ಯಮ ವರ್ಗ, ಈಗ ಬಜೆಟ್ ನಲ್ಲೂ ಪ್ರಧಾನಿ ನರೇಂದ್ರ ಮೋದಿ ಮಧ್ಯಮ ವರ್ಗವನ್ನು ಕೇಂದ್ರೀಕರಿಸಿದ್ದು ಆದಾಯ ತೆರಿಗೆ ಮಿತಿ ಸಡಿಲಿಕೆಯಿಂದ ಬಿಜೆಪಿಯತ್ತ ದೆಹಲಿಯಲ್ಲಿ ಒಲವು ಹೆಚ್ಚಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: Budget 2025: ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ (Delhi Elections) ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ `ಗೃಹಲಕ್ಷ್ಮಿ’ ಮಾದರಿಯಲ್ಲಿ `ಪ್ಯಾರಿ ದೀದಿ ಯೋಜನೆ’ (Pyari Didi Yojan) ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಸೋಮವಾರ ಪ್ರಕಟಿಸಿದರು.
ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಇಂದು ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡೆ. ಈ ವೇಳೆ ಮಹಿಳೆಯರಿಗೆ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ “ಪ್ಯಾರಿ ದೀದಿ” ಯೋಜನೆಯನ್ನು ಘೋಷಿಸಲಾಯಿತು. ದಿಲ್ಲಿಯಲ್ಲಿ… pic.twitter.com/KoOyfc65k4
ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಮೊದಲ ದಿನವೇ ʻಪ್ಯಾರಿ ದೀದಿʼ ಯೋಜನೆ ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ ಎಂದು ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ ಅಂದರೆ 1924ರ ಡಿ.26 ರಂದು ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಅದರ ಶತಮಾನೋತ್ಸವವನ್ನು ನಾವು ಇತ್ತೀಚೆಗಷ್ಟೇ ಆಚರಿಸಿದ್ದೇವೆ. ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಾಗದಲ್ಲಿ ಇರುವ ಬಾವಿಯಲ್ಲಿನ ನೀರು ತೆಗೆದುಕೊಂಡು ಸಿದ್ದರಾಮಯ್ಯ ಅವರು ಸೇರಿದಂತೆ ನಮ್ಮ ಪಕ್ಷದ ನಾಯಕರು ಅಲ್ಲಿನ ಜಾಗವನ್ನು ಸ್ವಚ್ಛ ಮಾಡಿ ಕರ್ನಾಟಕ ರಾಜ್ಯವನ್ನು ಭ್ರಷ್ಟ ಸರ್ಕಾರದಿಂದ ಮುಕ್ತಗೊಳಿಸುವ ಪಣತೊಟ್ಟೆವು. ಇದನ್ನೂ ಓದಿ: 60% ಕಮೀಷನ್ ಆರೋಪಕ್ಕೆ ಹೆಚ್‌ಡಿಕೆ ದಾಖಲಾತಿ ಕೊಟ್ಟಿದ್ದಾರಾ? – ಸಿಎಂ ಪ್ರಶ್ನೆ
ಇದೇ ಸಂದರ್ಭದಲ್ಲಿ ನಮ್ಮ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿಯನ್ನು ಘೋಷಣೆ ಮಾಡಲಾಯಿತು. ನಂತರ ಗೃಹಲಕ್ಷ್ಮಿ ಯೋಜನೆಯನ್ನು ಪ್ರಿಯಾಂಕಾ ಗಾಂಧಿ ಅವರು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಇದು ಕೇವಲ ಭರವಸೆಯಾಗಬಾರದು. ಈ ಯೋಜನೆ ಜಾರಿ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಬೇಕು ಎಂದು ಹೇಳಿದರು. ಹೀಗಾಗಿ ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್‌ಗೆ ಸಹಿ ಹಾಕಿದೆವು. ನಂತರ ಸರ್ಕಾರ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಲಾಯಿತು. ಮೊದಲ 3 ತಿಂಗಳಲ್ಲಿ ಎಲ್ಲಾ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ ಎಂದು ವಿವರಿಸಿದರು.
ಮಾಸಿಕ 4-5 ಸಾವಿರ ಉಳಿತಾಯ:
ಈ ಯೋಜನೆಗಳಿಗಾಗಿ 56 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 1.22 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ಬದಲಾವಣೆ ತರಲಾಗಿದೆ. ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ರಾಜ್ಯದ ಆರ್ಥಿಕತೆ ಪ್ರಗತಿ ಸಾಧಿಸುತ್ತಿದೆ. ಸಮಾಜದ ಪ್ರತಿ ವರ್ಗದ ಹಿತವನ್ನು ಕಾಯಬೇಕು ಎಂಬುದು ಮಹಾತ್ಮಾ ಗಾಂಧಿ ಅವರ ಸಂದೇಶವಾಗಿತ್ತು. ಹೀಗಾಗಿ ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗಟಾರ ಸ್ವಚ್ಛತೆಗೆ 200 ರೂ. ಕೇಳಿದ ಪಂಚಾಯತ್ – ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದಾರೆ ವೃದ್ಧ ದಂಪತಿ
ಇದೇ ವೇಳೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳ ಕುಟುಂಬಗಳಲ್ಲಿ ಆಗಿರುವ ಬದಲಾವಣೆ, ನೆರವಿನ ಕುರಿತ ವಿಡಿಯೋಗಳನ್ನು ಪ್ರಸಾರ ಮಾಡಲಾಯಿತು. ನಾವು ಇಲ್ಲಿ ತೋರಿಸಿರುವ ವಿಡಿಯೋಗಳು ನಾವು ಮಾಡಿರುವುದಲ್ಲ. ಮಾಧ್ಯಮಗಳು ವರದಿ ಮಾಡಿರುವ ವಿಡಿಯೋಗಳನ್ನು ನಿಮ್ಮ ಮುಂದೆ ಇಟ್ಟಿದ್ದೇವೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಯಾವುದೇ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ರವಾನಿಸಲಾಗುತ್ತಿದೆ ಎಂದರು.
ಟೀಕಿಸಿದವರಿಂದಲೇ ನಮ್ಮ ಯೋಜನೆ ನಕಲು:
ನಾವು ಈ ಯೋಜನೆ ಘೋಷಣೆ ಮಾಡಿದಾಗ, ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರ ದಿವಾಳಿಯಾಗಲಿದೆ ಎಂದು ಮಧ್ಯಪ್ರದೇಶದಲ್ಲಿ ಹೇಳಿದರು. ನಂತರ ಮಹಾರಾಷ್ಟ್ರದಲ್ಲೂ ನಮ್ಮ ಯೋಜನೆ ವಿರುದ್ಧ ಅಪಪ್ರಚಾರ ಮಾಡಿದರು. ಅಂತಿಮವಾಗಿ ಎಲ್ಲಾ ರಾಜ್ಯಗಳ ಚುನಾವಣೆಯಲ್ಲೂ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕಲ್ಯಾಣಕ್ಕಾಗಿ, ರಕ್ಷಣೆಗಾಗಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಮೋದಿ ಅವರ ಸರ್ಕಾರ ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿತ್ತು. ಆದರೆ ಬೆಲೆಗಳನ್ನು ಡಬಲ್ ಮಾಡಿತು. ಜನಧನ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದಂತೆ ಭರವಸೆ ಈಡೇರಿಸಲಿಲ್ಲ. ಬಿಜೆಪಿ ಸರ್ಕಾರಗಳು ಕೊಟ್ಟ ಮಾತನ್ನು ಎಂದಿಗೂ ಉಳಿಸಿಕೊಂಡಿಲ್ಲ. ಆದರೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿವೆ.
ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಗ್ರಾಮೀಣ ಉದ್ಯೋಗ ಖಾತರಿ, ಮಾಹಿತಿ ಹಕ್ಕು ಸೇರಿದಂತೆ ಸಂವಿಧಾನಿಕ ತಿದ್ದುಪಡಿ ಮೂಲಕ ಗ್ಯಾರಂಟಿ ಯೋಜನೆ ನೀಡಲಾಗಿತ್ತು. ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿಗಳ ಕಾಲ ದೇಶವನ್ನು ಆಳಿದೆ. ಮತ್ತೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಒಳ್ಳೆಯ ದಿನಗಳು ಮತ್ತೆ ಬರಲಿವೆ. ದೆಹಲಿ ಹಾಗೂ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ತರಲು ಜನರು ನಮಗೆ ಮತ್ತೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.
ನವದೆಹಲಿ: ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರಾದ ವಿ.ಕೆ ಸಕ್ಸೆನಾ (VK Saxena), ಜಾರಿ ನಿರ್ದೇಶನಾಲಯಕ್ಕೆ (ED) ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಜ್ರಿವಾಲ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಆರೋಪದಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು, ಆದರೆ ವಿಚಾರಣೆ ಆರಂಭವಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಅನುಮೋದನೆಯನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದ ನಂತರ, ಇಡಿ ಅನುಮತಿ ಕೋರಿ ಪತ್ರ ಬರೆದಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಏನಾದ್ರೂ ನಾನೇ ಕಾರಣನಾ? ನನಗೂ ಸಿ.ಟಿ ರವಿ ಬಗ್ಗೆ ಸಿಂಪತಿ ಇದೆ – ಡಿಕೆಶಿ
ಕೇಜ್ರಿವಾಲ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮಾಡಿದ ಬಹುದೊಡ್ಡ ಆರೋಪಗಳಲ್ಲಿ ಮದ್ಯ ನೀತಿ ಹಗರಣವೂ ಒಂದಾಗಿದೆ. ಹಗರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಇಡಿ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನ ಬಂಧಿಸಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥರು ಸೆಪ್ಟೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿಂದ ಬಿಡುಗಡೆಯಾದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2025ರ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಮರು ಆಯ್ಕೆ ಮಾಡಿದ ಬಳಿಕವೇ ಉನ್ನತ ಹುದ್ದೆಗಳಿಗೆ ಮರಳುವುದಾಗಿ ಪ್ರತಿಜ್ಞೆ ಮಾಡಿದ್ದರು.
ಇನ್ನೂ ಕೇಜ್ರಿವಾಲ್ ಮತ್ತು ಆಪ್ ಪಕ್ಷದ ವಿರುದ್ಧ ಇಡಿ ಸಲ್ಲಿಸಿದ ಕೊನೆಯ ಚಾರ್ಜ್‌ಶೀಟ್‌ನಲ್ಲಿ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಹಗರಣದ ಕಿಂಗ್‌ಪಿನ್ ಎಂದು ಹೆಸರಿಸಿತ್ತು. ಸಿಸೋಡಿಯಾ ಸಹ ಮದ್ಯನೀತಿ ಹಗರಣದಲ್ಲಿ 18 ತಿಂಗಳು ಜೈಲು ವಾಸ ಅನುಭವಿಸಿ, ಕಳೆದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದರು. ಇದನ್ನೂ ಓದಿ: ನೆಲಮಂಗಲದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೊರಟಿದ್ದ ಒಂದೇ ಕುಟುಂಬದ 6 ಮಂದಿ ದುರ್ಮರಣ
https://youtu.be/YlG_OlaLqTs?si=3RuOGm_tcymnxqzA
ಇ.ಡಿ ಆರೋಪ ಏನು?
ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರು 100 ಕೋಟಿ ಲಂಚ ಪಡೆಯುವ ಸಲುವಾಗಿ 2021-22ನೇ ಸಾಲಿನ ಅಬಕಾರಿ ನೀತಿಯಲ್ಲಿ ಬದಲಾವಣೆ ತಂದಿದ್ದರು. ಇದರಲ್ಲಿ 45 ಕೋಟಿ ರೂ.ಗಳನ್ನ ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದರು ಎಂಬುದು ಇ.ಡಿ ಆರೋಪ. ಈಗಾಗಲೇ ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಶುಕ್ರವಾರ (ಡಿ.20) ದೆಹಲಿ ಹೈಕೋರ್ಟ್ ಇ.ಡಿಗೆ ನೋಟಿಸ್ ನೀಡಿದೆ.