Tag: Delhi excise policy case

  • ಮನೀಶ್ ಸಿಸೋಡಿಯಾ ಜಾಮೀನು ನಿಯಮ ಸಡಿಲಿಸಿದ ಸುಪ್ರೀಂ

    ಮನೀಶ್ ಸಿಸೋಡಿಯಾ ಜಾಮೀನು ನಿಯಮ ಸಡಿಲಿಸಿದ ಸುಪ್ರೀಂ

    ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ (Delhi) ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ಜಾಮೀನು ಷರತ್ತುಗಳನ್ನು ಸುಪ್ರೀಂಕೋರ್ಟ್ (Supreme Court) ಸಡಿಲಿಸಿದೆ. ಈ ಮೂಲಕ ವಾರಕ್ಕೆ ಎರಡು ಬಾರಿ ತನಿಖಾ ಸಂಸ್ಥೆಗಳಿಗೆ ಮುಂದೆ ಹಾಜರಾಗುವ ಷರತ್ತಿಗೆ ತಡೆ ನೀಡಿದೆ.ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಗುಲಾಬಿ ಜೊತೆಗೆ ತ್ರಿವರ್ಣ ಧ್ವಜ ನೀಡಿದ ವಿಪಕ್ಷಗಳು

    ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಮತ್ತು ಮನಿ ಲ್ಯಾಂಡರಿಂಗ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಆ.9 ರಂದು ಸಿಸೋಡಿಯಾ ಅವರ ಜಾಮೀನಿನಲ್ಲಿ ಷರತ್ತುಗಳನ್ನು ವಿಧಿಸಲಾಗಿತ್ತು. ಇದೀಗ ಷರತ್ತುಗಳ ಮಾರ್ಪಡಿಸುವ ಸಂದರ್ಭದಲ್ಲಿ ಷರತ್ತುಗಳ ಅಗತ್ಯವಿಲ್ಲ ಎಂದು ಪೀಠ ಆದೇಶ ಹೊರಡಿಸಿದೆ.

    ಸುಪ್ರೀಂಕೋರ್ಟ್ನ ತೀರ್ಪು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪ್ರಕರಣಗಳೆರಡಕ್ಕೂ ಅನ್ವಯಿಸುತ್ತದೆ. ಆದಾಗ್ಯೂ, ಸಿಸೋಡಿಯಾ ಅವರು ನಿಯಮಿತವಾಗಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಇದನ್ನೂ ಓದಿ: ಪಿಎಂ ಮೋದಿರನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ

     

  • ದೆಹಲಿ ಸಿಎಂಗೆ ಆ.20 ರ ವರೆಗೆ ಜೈಲೇ ಗತಿ

    ದೆಹಲಿ ಸಿಎಂಗೆ ಆ.20 ರ ವರೆಗೆ ಜೈಲೇ ಗತಿ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಕಸ್ಟಡಿಯನ್ನು ಆ.20 ರ ವರೆಗೆ ವಿಸ್ತರಿಸಿ ಗುರುವಾರ ರೂಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.

    ತಿಹಾರ್ ಜೈಲಿನಿಂದ (Tihar Jail) ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಮಾತೃತ್ವದ ರಜೆ ವೇಳೆ ಬೇರೆಯವರ ನೇಮಕ – ಹುದ್ದೆಯಲ್ಲಿ ಮುಂದುವರೆಯುವಂತೆ ಹೈಕೋರ್ಟ್ ತೀರ್ಪು

    ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸಿಎಂ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿತ್ತು.

    ಕೇಜ್ರಿವಾಲ್ ಅವರನ್ನು ಸಮರ್ಥನೀಯ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಕೇಜ್ರಿವಾಲ್‌ಗೆ ನೀಡಲಾದ ಜಾಮೀನು ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ಪರಿಹರಿಸಲು ಅಲ್ಪಾವಧಿಯ ಮುಂದೂಡಿಕೆಯನ್ನು ಕೋರಲಾಗಿದೆ. ಇದನ್ನೂ ಓದಿ: ವಕ್ಫ್ ಬೋರ್ಡ್‌ ಅಧಿಕಾರವನ್ನು ಕಡಿಮೆ ಮಾಡುವ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

  • ಅಬಕಾರಿ ನೀತಿ ಪ್ರಕರಣ – ಅರವಿಂದ್ ಕೇಜ್ರಿವಾಲ್‍ಗೆ ಮಧ್ಯಂತರ ಜಾಮೀನು

    ಅಬಕಾರಿ ನೀತಿ ಪ್ರಕರಣ – ಅರವಿಂದ್ ಕೇಜ್ರಿವಾಲ್‍ಗೆ ಮಧ್ಯಂತರ ಜಾಮೀನು

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ನೀಡಿದೆ.

    ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17ರಂದು ಈ ತೀರ್ಪನ್ನು ಕಾಯ್ದಿರಿಸಿತ್ತು. ಇದನ್ನೂ ಓದಿ:

    ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಚಾರಕ್ಕಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಅವರು ಜೂನ್ 2 ರಂದು ಕೋರ್ಟ್ ಮುಂದೆ ಶರಣಾಗಿದ್ದರು.

    ಜೂನ್ 20ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿತ್ತು. ಇಡಿ ಮರುದಿನ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಜೂನ್ 21ರಂದು ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಇದಾದ ಬಳಿಕ ಜೂನ್ 26ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

    ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಿದ್ದರು.

    ಏನಿದು ಅಬಕಾರಿ ನೀತಿ ಪ್ರಕರಣ?
    2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಗಿತ್ತು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ನಂತರ ಇಡಿ ಪಿಎಂಎಲ್‍ಎ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

  • ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ

    ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ

    ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗಳ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ವಾದಗಳನ್ನು ಮೇ 7 ರಂದು ಆಲಿಸಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

    ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ವಿಚಾರಣೆ ನಡೆಸಿತು. ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧನದ ವಿರುದ್ಧ ಕೇಜ್ರಿವಾಲ್ ಅವರು ಮನವಿ ಸಲ್ಲಿಸಿದ್ದಾರೆ. ಮಧ್ಯಂತರ ಜಾಮೀನಿನ ಪ್ರಶ್ನೆಯ ಕುರಿತು ವಾದಗಳನ್ನು ಮೇ 7 ರಂದು ಆಲಿಸಬಹುದು ಎಂದು ಪೀಠವು ಹೇಳಿದೆ. ಇದನ್ನೂ ಓದಿ: ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ಪ್ರಕರಣದ ವಿಚಾರಣೆಯನ್ನು ಮಂಗಳವಾರ ಬೆಳಗ್ಗೆಗೆ ಪೋಸ್ಟ್ ಮಾಡುತ್ತೇವೆ. ಚುನಾವಣೆಯ ಕಾರಣದಿಂದ ನಾವು ಮಧ್ಯಂತರ ಜಾಮೀನಿನ ಪ್ರಶ್ನೆಯನ್ನು ಪರಿಗಣಿಸಬಹುದು. ತಾನು ಅಂತಿಮವಾಗಿ ಏನನ್ನೂ ನಿರ್ಧರಿಸಿಲ್ಲ. ವಿಚಾರಣೆಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲದಿದ್ದರೆ ಅಂತಹ ಮಧ್ಯಂತರ ಪರಿಹಾರವನ್ನು ಪರಿಗಣಿಸಬಹುದು ಎಂದು ವಕೀಲರಿಗೆ ತಿಳಿಸುವುದಾಗಿ ಪೀಠವು ಸ್ಪಷ್ಟಪಡಿಸಿತು.

    ಜಾಮೀನು ನೀಡುವುದು ಅಥವಾ ಇಲ್ಲವೇ ಎಂಬುದರ ಕುರಿತು ಏನನ್ನೂ ಹೇಳುತ್ತಿಲ್ಲ. ನಾವು ನೀಡಬಹುದು ಅಥವಾ ನೀಡದೇ ಇರಬಹುದು. ನಾವು ನಿಮಗೆ ಮುಕ್ತವಾಗಿರಬೇಕು. ಏಕೆಂದರೆ ಎರಡೂ ಕಡೆಯವರು ಆಶ್ಚರ್ಯಪಡಬೇಕಾಗಿಲ್ಲ ಎಂದು ಪೀಠವು ಎಎಸ್‌ಜಿ ರಾಜು ಮತ್ತು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿಗೆ ಪೀಠ ತಿಳಿಸಿದೆ. ಇದನ್ನೂ ಓದಿ: ಜೈಲಿನಲ್ಲಿ ಕೇಜ್ರಿವಾಲ್‌ರನ್ನ ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗ್ತಿದೆ: ಆಪ್ ಆರೋಪ

    ವಿಚಾರಣೆಯ ವೇಳೆ ಪೀಠವು ದೆಹಲಿಯಲ್ಲಿ ಚುನಾವಣಾ ದಿನಾಂಕಗಳ ಬಗ್ಗೆಯೂ ಕೇಳಿತು. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದರು.

  • ಮದ್ಯ ನೀತಿ ಪ್ರಕರಣ – ನ.2ಕ್ಕೆ ಕಚೇರಿಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ಸಮನ್ಸ್

    ಮದ್ಯ ನೀತಿ ಪ್ರಕರಣ – ನ.2ಕ್ಕೆ ಕಚೇರಿಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ಸಮನ್ಸ್

    ನವದೆಹಲಿ: ಪ್ರಸ್ತುತ ರದ್ದಾಗಿರುವ ದೆಹಲಿಯ ಅಬಕಾರಿ ನೀತಿಗೆ (Delhi Excise Policy Case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸಮನ್ಸ್ ನೀಡಿದೆ.

    ಈ ವರ್ಷದ ಫೆಬ್ರವರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಕ್ಟೋಬರ್ 4 ರಂದು ಆಪ್ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿಯ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಇದೀಗ ಅದೇ ಪ್ರಕರಣದಲ್ಲಿ ದೆಹಲಿ ಸಿಎಂಗೆ ಇಡಿ ಸಮನ್ಸ್ ನೀಡಿದೆ. ನವೆಂಬರ್ 2 ರಂದು (ಗುರುವಾರ) ತನ್ನ ಕಚೇರಿಯಲ್ಲಿ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ತಿಳಿಸಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳ ಬಳಿಕ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಈ ಪ್ರಕರಣದಲ್ಲಿ 338 ಕೋಟಿ ರೂ. ಹಣ ವರ್ಗಾವಣೆ ಆಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಪಾಕ್‌ ಕಳಪೆ ಪ್ರದರ್ಶನ – ಮೊದಲನೇಯ ದೊಡ್ಡ ವಿಕೆಟ್‌ ಪತನ

    ದೆಹಲಿ ಸರ್ಕಾರ 2021ರ ನವೆಂಬರ್ 17ರಂದು ಈ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರ ಆರೋಪದ ಮೇಲೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಯಿತು. ಈ ಅಬಕಾರಿ ನೀತಿ ಆರ್ಥಿಕ ಲಾಭವನ್ನು ಪಡೆಯುವ ಸಲುವಾಗಿ ಮದ್ಯದ ಪರವಾನಗಿಯನ್ನು ಅನರ್ಹರಿಗೂ ನೀಡುವಲ್ಲಿ ಸರ್ಕಾರ ಒಲವು ತೋರಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ದೆಹಲಿ ಸರ್ಕಾರ ಮತ್ತು ಸಿಸೋಡಿಯಾ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: ಕ್ರೀಡಾ ಉತ್ಸವದಲ್ಲಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ವ್ಯಕ್ತಿ ಸಾವು – ಟ್ರ್ಯಾಕ್ಟರ್ ಸ್ಟಂಟ್ ಬ್ಯಾನ್ ಮಾಡಿದ ಪಂಜಾಬ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

    ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

    ನವದೆಹಲಿ: ತೆಲಂಗಾಣದ ಮುಖ್ಯಮಂತ್ರಿ (Telangana CM) ಕೆ ಚಂದ್ರಶೇಖರ್ ರಾವ್ (KCR) ಅವರ ಪುತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ ಕವಿತಾ (K Kavitha) ಅವರು ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ (Delhi Excise Policy Case) ಸಂಬಂಧಿಸಿದಂತೆ ವಿಚಾರಣೆಗೆ ಮಾರ್ಚ್ 11 ರಂದು ಜಾರಿ ನಿರ್ದೇಶನಾಲಯದ (ED) ಮುಂದೆ ಹಾಜರಾಗುವುದಾಗಿ ಘೋಷಿಸಿದ್ದಾರೆ.

    ದೆಹಲಿ ಅಬಕಾರಿ ನೀತಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾರ್ಚ್ 9 ರಂದು ದೆಹಲಿಯಲ್ಲಿ (Delhi) ಇಡಿ ಕಚೇರಿಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ ಕವಿತಾ ವಿಚಾರಣೆಗೆ ಹಾಜರಾಗಲು 1 ವಾರ ಅವಕಾಶ ಕೋರಿ ಇಡಿಗೆ ಮನವಿ ಸಲ್ಲಿಸಿದ್ದರು. ಆದರೆ ಇಡಿ ಈ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಕವಿತಾ ಇಡಿಗೆ ಇನ್ನೊಂದು ಪತ್ರ ಬರೆದು ಮಾರ್ಚ್ 11ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

    ಬುಧವಾರ ತಡರಾತ್ರಿ ಕವಿತಾ ಅವರ ಕಚೇರಿಯಿಂದ ಈ ಕುರಿತು ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ನಾನು ಜವಾಬ್ದಾರಿಯುತ ಭಾರತೀಯ ನಾಗರಿಕಳಾಗಿದ್ದೇನೆ. ಈ ರಾಷ್ಟ್ರದ ಮಹಿಳೆಯಾಗಿ ಕಾನೂನಿನ ಅಡಿಯಲ್ಲಿ ಒದಗಿಸಲಾದ ಹಕ್ಕುಗಳಿಗೆ ಅನುಗುಣವಾಗಿ ನಡೆದುಕೊಳ್ಳಲಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಪೋಷಕರೇ ಎಚ್ಚರ- ಮಕ್ಕಳಲ್ಲಿ ಹೆಚ್ಚಾಗ್ತಿದೆ ಆಡಿನೋ ವೈರಸ್..!

    ವಿಚಾರಣೆಗೆ ಹಾಜರಾಗಲು ಇಡಿ ಇಷ್ಟು ಕಡಿಮೆ ಸಮಯವನ್ನು ಏಕೆ ನೀಡಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇಡಿ ತನಿಖೆಯ ಹಿಂದೆ ರಾಜಕೀಯ ಉದ್ದೇಶಗಳು ಇರುವುದು ಇದರಲ್ಲಿ ಕಾಣಿಸುತ್ತಿದೆ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾನು ಮುಂದಿನ ವಾರದ ಕಾರ್ಯಕ್ರಮಗಳನ್ನು ಈಗಾಗಲೇ ನಿಗದಿಮಾಡಿಕೊಂಡಿದ್ದೇನೆ. ವಿಚಾರಣೆಗೆ ಕಾಲಾವಕಾಶ ಕೋರಿರುವುದನ್ನು ನಿರಾಕರಿಸುವುದರ ಹಿಂದೆ ರಾಜಕೀಯ ಪ್ರೇರಿತ ಕಾರಣಗಳಿವೆ ಎಂದು ಆರೋಪಿಸಿದ್ದಾರೆ.

    ಆದರೂ ಈ ದೇಶದ ಕಾನೂನು ಪಾಲಿಸುವ ಜವಾಬ್ದಾರಿಯುತ ಪ್ರಜೆಯಾಗಿ ನಾನು ಮಾರ್ಚ್ 11ರಂದು ಇಡಿ ಕಚೇರಿಗೆ ಹಾಜರಾಗಲಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಹೇಳಿಕೆ ಬೆನ್ನಲ್ಲೇ ಆ್ಯಕ್ಟೀವ್ ಆದ ವಿ.ಸೋಮಣ್ಣ ಬೆಂಬಲಿಗರು

  • ಕೆಲ ತಿಂಗಳು ಜೈಲಲ್ಲಿದ್ರೂ I Don’t Care- ವಿಚಾರಣೆಗೆ ಸಿಬಿಐ ಕಚೇರಿ ತಲುಪಿದ ಸಿಸೋಡಿಯಾ

    ಕೆಲ ತಿಂಗಳು ಜೈಲಲ್ಲಿದ್ರೂ I Don’t Care- ವಿಚಾರಣೆಗೆ ಸಿಬಿಐ ಕಚೇರಿ ತಲುಪಿದ ಸಿಸೋಡಿಯಾ

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದ (Delhi excise policy case) ತನಿಖೆಯ ಭಾಗವಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಭಾನುವಾರ ಬೆಳಗ್ಗೆ ತಮ್ಮ ನಿವಾಸದಿಂದ ಸಿಬಿಐ ಕಚೇರಿಗೆ ವಿಚಾರಣೆಗೆ ತೆರಳಿದ್ದಾರೆ.

    ಕೇಂದ್ರೀಯ ತನಿಖಾ ಸಂಸ್ಥೆ (CBI) ಅವರ ವಿಚಾರಣೆ ನಡೆಸುವುದಕ್ಕೂ ಮುಂಚಿತವಾಗಿ ಸಿಸೋಡಿಯಾ ಅವರ ನಿವಾಸದಿಂದ ಕಚೇರಿಯುದ್ದಕ್ಕೂ ಆಮ್ ಆದ್ಮಿ ಪಕ್ಷದ (AAP) ಬೆಂಬಲಿಗರು ಫಲಕಗಳನ್ನು ಹಿಡಿದುಕೊಂಡು ಅವರೊಂದಿಗೆ ಮೆರವಣಿಗೆ ತೆರಳಿದ್ದಾರೆ. ಸಿಬಿಐ ಕಚೇರಿ ಆವರಣದ ಸುತ್ತಲೂ ಬೆಂಬಲಿಗರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳಾಗದಂತೆ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಸಿಬಿಐ ಮನೀಶ್ ಸಿಸೋಡಿಯಾ ಅವರಿಗೆ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕರೆ ನೀಡಿತ್ತು. ಆದರೆ ಅವರು ರಾಜ್ಯ ಬಜೆಟ್‌ನಲ್ಲಿ ನಿರತರಾಗಿದ್ದರಿಂದ ಅದನ್ನು ಮುಂದೂಡಲಾಗಿತ್ತು. ಭಾನುವಾರ ವಿಚಾರಣೆಗೆ ತೆರಳುವುದಕ್ಕೂ ಮುನ್ನ ಸಿಸೋಡಿಯಾ ತಾವು ಕೆಲ ತಿಂಗಳು ಜೈಲಿಗೆ ಹೋಗಲು ಸಿದ್ಧ ಎಂದು ಹೇಳಿದ್ದಾರೆ. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

    ಇಂದು ನಾನು ಮತ್ತೊಮ್ಮೆ ಸಿಬಿಐ ವಿಚಾರಣೆಗೆ ತೆರಳುತ್ತಿದ್ದೇನೆ. ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ. ಲಕ್ಷಾಂತರ ಮಕ್ಕಳ ಪ್ರೀತಿ ಹಾಗೂ ಕೋಟ್ಯಂತರ ದೇಶ ವಾಸಿಗಳ ಆಶೀರ್ವಾದ ನನ್ನೊಂದಿಗಿದೆ. ನಾನು ಕೆಲವು ತಿಂಗಳು ಜೈಲಿನಲ್ಲಿ ಇರಬೇಕಾಗಿ ಬಂದರೂ ನನಗೆ ಚಿಂತೆಯಿಲ್ಲ ಎಂದು ಸಿಸೋಡಿಯಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

    ಸಿಬಿಐ ವಿಚಾರಣೆಯ ಬಳಿಕ ಸಿಸೋಡಿಯಾ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಲಕ್ಷಗಳ ರೂಪದಲ್ಲಿ ನೆರವಿನ ಹಸ್ತಚಾಚಿದ ನಟ ಅನುಪಮ್ ಖೇರ್

  • ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

    ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ (Delhi excise policy case) ಸಂಬಂಧಿಸಿ ಹೈದರಾಬಾದ್ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ.

    ಆರೋಪಿ ಬುಚ್ಚಿ ಬಾಬು ಗೋರಂಟ್ಲಾ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ( K Chandrashekar Rao) ಅವರ ಪುತ್ರಿ ಎಂಎಲ್‍ಸಿ ಕವಿತಾ (Kavitha) ಅವರ ಮಾಜಿ ಆಡಿಟರ್ ಆಗಿದ್ದ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಗೋರಂಟ್ಲಾ ಅವರು ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಗ್ರಾಮದೇವತೆಗಾಗಿ ಊರಿಗೆ ಊರೇ ಖಾಲಿ- ಕಲಘಟಗಿಯಲ್ಲಿ ವಿಶಿಷ್ಟ ಜಾತ್ರೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಡಿ. 12ರಂದು ಕೆಸಿಆರ್ ಪುತ್ರಿ ಕವಿತಾ ಅವರನ್ನು ಹೈದರಾಬಾದ್‍ನಲ್ಲಿ ಸಿಬಿಐ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ಜಾತಕ ಹೊಂದಿಸಿ ಹಿಂದೂ ಸಂಪ್ರದಾಯದಂತೆ 2 ಗಿಳಿಗಳಿಗೆ ಅದ್ಧೂರಿ ವಿವಾಹ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k