Tag: Delhi High Court

  • ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ

    ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ

    ನವದೆಹಲಿ: ಸಸ್ಯಾಹಾರಿ ಎಂದು ಮಾರಾಟವಾಗುವ ಪತಂಜಲಿ (Patanjali) ಬ್ರ‍್ಯಾಂಡ್‌ನ ಹರ್ಬಲ್ ಟೂತ್ ಪೌಡರ್ ‘ದಿವ್ಯ ಮಂಜನ್’ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ಗೆ (Delhi High Courtt) ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಪತಂಜಲಿ ಕಂಪನಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

    ವಕೀಲ ಯತಿನ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದು, ಪತಂಜಲಿಯ ದಿವ್ಯ ಮಂಜನ್ (Divya Manjan) ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಹಸಿರು ಚುಕ್ಕೆಯನ್ನು ಹೊಂದಿದೆ. ಹೀಗಾಗಿ ನಾನು ದೀರ್ಘಕಾಲದಿಂದ ಬಳಸುತ್ತಿದ್ದೇನೆ. ಆದರೆ ಈ ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಷಿನಾಲಿಸ್ ಅಥವಾ ಮೀನಿನ ಸಾರ ಇದೆ ಎಂದು ಸಂಶೋಧನೆಯೊಂದು ಹೇಳಿದೆ. ಇದನ್ನೂ ಓದಿ: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ

    ‘ದಿವ್ಯ ಮಂಜನ್’ನಲ್ಲಿ ಸಮುದ್ರಫೆನ್ ಪ್ರಾಣಿ ಆಧಾರಿತ ಉತ್ಪನ್ನವಾಗಿದೆ ಎಂದು ರಾಮ್‌ದೇವ್ ಸ್ವತಃ ಯೂಟ್ಯೂಬ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಇದು ಮಿಸ್ ಬ್ರ‍್ಯಾಂಡಿಂಗ್ ಮತ್ತು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯ ಉಲ್ಲಂಘನೆಯಾಗಿದೆ. ಗ್ರಾಹಕರ ಧಾರ್ಮಿಕ ನಂಬಿಕೆಗಳು ಹಾನಿಯಾಗಿದೆ. ಈ ಸಂಶೋಧನೆಯು ತನಗೆ ಮತ್ತು ಕುಟುಂಬಕ್ಕೆ ವಿಶೇಷವಾಗಿ ದುಃಖಕರವಾಗಿದೆ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತೀರ್ಪಿನ ಅಗತ್ಯವಿದೆ: ಮೋದಿ

    ದೆಹಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ ಮತ್ತು ಆಯುಷ್ ಸಚಿವಾಲಯ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಿಗೆ ದೂರು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನೂ ಓದಿ: ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಗೆ 200ನೇ ದಿನ – ಅನ್ನದಾತರ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ವಿನೇಶ್ ಫೋಗಟ್

    ಉತ್ಪನ್ನದ ತಪ್ಪು ಲೇಬಲ್ ಅನ್ನು ಪರಿಹರಿಸಲು ಮತ್ತು ಪ್ರತಿವಾದಿಗಳನ್ನು ಹೊಣೆಗಾರರನ್ನಾಗಿ ಮಾಡಲು ನ್ಯಾಯಾಂಗದ ಮಧ್ಯಸ್ಥಿಕೆಯನ್ನು ಮನವಿ ಬಯಸುತ್ತಿದ್ದು ಜೊತೆಗೆ ಮಾಂಸಾಹಾರಿ ಉತ್ಪನ್ನವನ್ನು ಸೇವಿಸುವುದರಿಂದ ಉಂಟಾಗುವ ತೊಂದರೆಗೆ ಪರಿಹಾರವನ್ನು ಸಹ ಅರ್ಜಿದಾರರು ಕೋರಿದ್ದಾರೆ. ಇದನ್ನೂ ಓದಿ: ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಪುರುಷರಿಗೆ ವಂಚಿಸುತ್ತಿದ್ದ ಮಹಿಳೆ ಅರೆಸ್ಟ್

    ಅರ್ಜಿಯನ್ನು ಕೈಗೆತ್ತಿಕೊಂಡ ನಂತರ ದೆಹಲಿ ಹೈಕೋರ್ಟ್ ಪತಂಜಲಿ ಆಯುರ್ವೇದ, ಬಾಬಾ ರಾಮ್‌ದೇವ್, ಕೇಂದ್ರ ಸರ್ಕಾರ ಮತ್ತು ಉತ್ಪನ್ನವನ್ನು ತಯಾರಿಸುವ ಪತಂಜಲಿಯ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 28ರಂದು ನಿಗದಿಪಡಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಶಂಕಿತ ಉಗ್ರ ಅರೆಸ್ಟ್‌

    ಪತಂಜಲಿ ಮತ್ತು ಅದರ ಸಹ-ಸಂಸ್ಥಾಪಕರಾದ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ಈ ಹಿಂದೆ ಮೋಸಗೊಳಿಸುವ ಜಾಹೀರಾತು ಅಭ್ಯಾಸಗಳಲ್ಲಿ ತೊಡಗಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕೋರ್ಟ್ ಎಚ್ಚರಿಕೆ ಬಳಿಕ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಬಹಿರಂಗ ಕ್ಷಮೆಯಾಚಿಸಿದ್ದರು. ಇದನ್ನೂ ಓದಿ: ಸರ್ಕಾರಗಳು ತರ್ಲೆ ಮಾಡೋದು ಕಡಿಮೆ ಮಾಡಿದ್ರೆ ನಮ್ಮ ಶಿಕ್ಷಣ ವ್ಯವಸ್ಥೆ ಇನ್ನೂ ಚೆನ್ನಾಗಿರುತ್ತೆ: ರಂಗನಾಥ್‌

  • ಬ್ರಿಜ್ ಭೂಷಣ್ ಸಿಂಗ್‍ಗೆ ಹಿನ್ನಡೆ – ಪ್ರಕರಣ ರದ್ದು ಮಾಡಲು ನಿರಾಕರಿಸಿದ ಹೈಕೋರ್ಟ್

    ಬ್ರಿಜ್ ಭೂಷಣ್ ಸಿಂಗ್‍ಗೆ ಹಿನ್ನಡೆ – ಪ್ರಕರಣ ರದ್ದು ಮಾಡಲು ನಿರಾಕರಿಸಿದ ಹೈಕೋರ್ಟ್

    ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಭಾರತೀಯ ಕುಸ್ತಿ ಫೆಡರೇಶನ್ (Wrestling Federation of India) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್  (Brij Bhushan Sharan Singh) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ (Delhi High Court) ನಿರಾಕರಿಸಿದೆ.

    ಇಂದಿನ ವಿಚಾರಣೆಯ ಸಂದರ್ಭದಲ್ಲಿ ಬ್ರಿಜ್ ಭೂಷಣ್ ಅವರ ಪರ ವಕೀಲರು ಕುಸ್ತಿಪಟುಗಳ ಆರೋಪ ಹಿಡನ್ ಅಜೆಂಡಾವನ್ನು ಹೊಂದಿದೆ. ಅವರನ್ನು ಡಬ್ಲ್ಯುಎಫ್‍ಐ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲು ನಡೆಸಿದ ಹುನ್ನಾರ ಎಂದು ವಾದಿಸಿದರು. ಇದನ್ನೂ ಓದಿ: ಸೆ.9ವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ – ಇಂದೇ ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ಶಿಫ್ಟ್‌

    ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧದ ಆರೋಪಗಳ ಮತ್ತು ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದ ಸಂಪೂರ್ಣ ಪ್ರಕ್ರಿಯೆಗಳೆರಡನ್ನೂ ರದ್ದು ಮಾಡುವ ಎರಡು ಅರ್ಜಿಗಳನ್ನು ಒಂದೇ ಅರ್ಜಿಯಲ್ಲಿ ಸಲ್ಲಿಸಿದ ನಡೆಯನ್ನು ಪ್ರಶ್ನಿಸಿದರು. ಪ್ರಕರಣ ರದ್ದು ಮಾಡಲು ನಿರಾಕರಿಸಿ ಮುಂದಿನ ವಿಚಾರಣೆಗೆ ಸಿದ್ಧರಾಗಲು ಸೂಚಿಸಿದರು. ಬಳಿಕ ವಿಚಾರಣೆಯನ್ನು ಸೆ.26ಕ್ಕೆ ನ್ಯಾಯಾಲಯ ಮುಂದೂಡಿತು.

    ಸಿಂಗ್ ವಿರುದ್ಧ ಆರೋಪ ಹೊರಿಸಲು ಸಾಕಷ್ಟು ದಾಖಲೆಗಳಿವೆ ಎಂದು ವಿಚಾರಣಾ ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಇದಾದ ಬಳಿಕ ಬ್ರಿಜ್ ಭೂಷಣ್ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಹಾಗೂ ಎಫ್‍ಐಆರ್ ಸಂಬಂಧ ವಿಚಾರಣ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

    ಸಿಂಗ್ ವಿರುದ್ಧ ಒಟ್ಟು ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿದ್ದಾರೆ. ಅಪ್ರಾಪ್ತ ಕುಸ್ತಿಪಟುಗಳು ಕೂಡ ಸಿಂಗ್ ವಿರುದ್ಧ ಆರೋಪ ಮಾಡಿದ್ದರು. ನಂತರ ಆಕೆ ತನ್ನ ದೂರನ್ನು ಹಿಂಪಡೆದಿದ್ದು, ದೆಹಲಿ ಪೊಲೀಸರು ಆ ಪ್ರಕರಣದಲ್ಲಿ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯಿದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ರದ್ದತಿ ವರದಿಯನ್ನು ಸಲ್ಲಿಸಿದ್ದರು. ಇದನ್ನೂ ಓದಿ: PMLA ಪ್ರಕರಣಗಳಲ್ಲೂ ಜಾಮೀನು ಒಂದು ನಿಯಮ, ಜೈಲು ಒಂದು ವಿನಾಯಿತಿ – ಸುಪ್ರೀಂಕೋರ್ಟ್

  • ಪೂಜಾ ಖೇಡ್ಕರ್‌ಗೆ ತಾತ್ಕಾಲಿಕ ರಿಲೀಫ್ – ಬಂಧಿಸದಂತೆ ದೆಹಲಿ ಹೈಕೋರ್ಟ್ ಸೂಚನೆ

    ಪೂಜಾ ಖೇಡ್ಕರ್‌ಗೆ ತಾತ್ಕಾಲಿಕ ರಿಲೀಫ್ – ಬಂಧಿಸದಂತೆ ದೆಹಲಿ ಹೈಕೋರ್ಟ್ ಸೂಚನೆ

    ನವದೆಹಲಿ: ಇತ್ತೀಚೆಗೆ ಐಎಎಸ್ (IAS) ಹುದ್ದೆಯಿಂದ ವಜಾಗೊಂಡಿರುವ ಪೂಜಾ ಖೇಡ್ಕರ್ (Puja Khedkar) ಅವರನ್ನು ಆ.21 ವರೆಗೂ ಬಂಧಿಸದಂತೆ ದೆಹಲಿ ಹೈಕೋರ್ಟ್ (Delhi High Court) ಪೊಲೀಸರಿಗೆ ನಿರ್ದೇಶನ ನೀಡಿದೆ. ನಿರೀಕ್ಷಣಾ ಜಾಮೀನು ಕೋರಿ ಪೂಜಾ ಖೇಡ್ಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸುಬ್ರಮಣ್ಯ ಪ್ರಸಾದ್ ಈ ಆದೇಶ ಹೊರಡಿಸಿದ್ದಾರೆ.

    ವಿಚಾರಣೆ ವೇಳೆ ಆಕೆಯ ತಕ್ಷಣದ ಕಸ್ಟಡಿ ಅಗತ್ಯವಿದೆ ಎಂದು ತೋರುತ್ತಿಲ್ಲ. ಅದಕ್ಕಾಗಿ ಈಗಲೇ ಬಂಧನದ ಅಗತ್ಯವಿಲ್ಲ. ನಡೆಯುತ್ತಿರುವ ತನಿಖೆಗೆ ಅವರು ಸಹಕರಿಸಲಿ. ಯುಪಿಎಸ್‍ಸಿಯನ್ನು (UPSC) ಪ್ರಕರಣದಲ್ಲಿ ಕಕ್ಷಿ ಮಾಡಿ ಆಕೆಯ ಮಧ್ಯಂತರ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಆಯೋಗ ಮತ್ತು ದೆಹಲಿ ಪೊಲೀಸರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

    2023ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಖೇಡ್ಕರ್, ಅವರ ಹೆಸರು, ಆಕೆಯ ತಂದೆ ಮತ್ತು ತಾಯಿಯ ಹೆಸರುಗಳು, ಅವರ ಭಾವಚಿತ್ರ, ಸಹಿ, ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಬದಲಾಯಿಸುವ ಮೂಲಕ ಅವರ ಗುರುತನ್ನು ನಕಲಿ ಮಾಡಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

    ಆ.1 ರಂದು ದೆಹಲಿ ಸೆಷನ್ ನ್ಯಾಯಾಲಯವು ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. ಖೇಡ್ಕರ್ ಅವರ ಕ್ರಮಗಳು ಯುಪಿಎಸ್‍ಸಿಗೆ ವಂಚನೆ ಮಾಡಿದ್ದು ಮಾತ್ರವಲ್ಲದೆ ಅರ್ಹ ಅಭ್ಯರ್ಥಿಗಳು ಅವರ ಸರಿಯಾದ ಅವಕಾಶಗಳಿಂದ ವಂಚಿತರಾಗಿದ್ದಾರೆ ಎಂದು ಸೆಷನ್ಸ್ ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

  • ಕೇಜ್ರಿವಾಲ್‌ ಬಂಧನ- ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌

    ಕೇಜ್ರಿವಾಲ್‌ ಬಂಧನ- ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಕೇಂದ್ರ ತನಿಖಾ ದಳಕ್ಕೆ (CBI) ನೋಟಿಸ್ ಜಾರಿ ಮಾಡಿದೆ.

    ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಕೇಜ್ರಿವಾಲ್ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಸಂಬಂಧ ಇಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ (Neena Bansal Krishna) ನೇತೃತ್ವದ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಬಳಿಕ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು, 7 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

    ಸಿಬಿಐನ ಬಂಧನ ಮತ್ತು ರಿಮಾಂಡ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ವೇಳೆ, ದೆಹಲಿ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ (Abhishek Manu Singhvi), ಬಂಧನದ ಅವಶ್ಯಕತೆ ಏನು? ಸಿಬಿಐ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಬಂಧಿಸುವ ಪ್ರಶ್ನೆಯೇ ಇಲ್ಲ. 2022 ರ ಎಫ್‌ಐಆರ್ ಅನ್ನು ಏಪ್ರಿಲ್ 2023 ರಲ್ಲಿ ವಿಚಾರಣೆ ನಡೆಸಲಾಯಿತು ಮತ್ತು ಈಗ 2024 ರ ಜೂನ್‌ನಲ್ಲಿ ಬಂಧಿಸಲಾಗಿದೆ. ಏಜೆನ್ಸಿಗೆ ಕೆಲವು ಕಾರಣವಿರಬೇಕು ಅಥವಾ ಬಂಧನಕ್ಕೆ ಆಧಾರವಾಗಿ ಕೇಜ್ರಿವಾಲ್ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದರು ಎಂದು ವಾದಿಸಿದರು.

    ಈ ಕುರಿತು ನ್ಯಾಯಾಲಯವು ನೀವು ಬಂಧನವನ್ನು ರದ್ದುಪಡಿಸಲು ಮತ್ತು ಕಸ್ಟಡಿಯಿಂದ ಬಿಡುಗಡೆ ಮಾಡಲು ಒತ್ತಾಯಿಸುತ್ತಿದ್ದೀರಿ ಎಂದು ಕೇಳಿತು. ಇದಕ್ಕೆ ಸಿಂಘ್ವಿ ಅವರು ಸಕಾರಾತ್ಮಕವಾಗಿ ಉತ್ತರಿಸಿದಾಗ, ಕೇಜ್ರಿವಾಲ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆಯೇ ಎಂದು ಕೋರ್ಟ್ ಕೇಳಿದೆ. ಈ ವೇಳೆ ಸಿಂಘ್ವಿ, ಈಗ ಅಲ್ಲ, ಆದರೆ ನಾವು ಸಲ್ಲಿಸಲು ಅರ್ಹರಾಗಿದ್ದೇವೆ. ನಾವು ಮುಂದೆ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದೇವೆ ಎಂದರು.

    ಕೇಜ್ರಿವಾಲ್ ಅವರ ಅರ್ಜಿಯ ಮೇಲೆ ಕೋರ್ಟ್ ನೋಟಿಸ್ ಜಾರಿಗೊಳಿಸಿ ಸಿಬಿಐಗೆ ನಿರ್ದೇಶಿಸಿತು. ‌ ಪ್ರಕರಣದ ಮುಂದಿನ ವಿಚಾರಣೆ ಜುಲೈ 17 ರಂದು ನಡೆಯಲಿದೆ. ಜೂನ್ 29 ರಂದು, ಎಎಪಿ ಮುಖ್ಯಸ್ಥರನ್ನು ಸಿಟಿ ಕೋರ್ಟ್‌ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

  • ಜೈಲಿನಿಂದ ಸಿಎಂ ಕೇಜ್ರಿವಾಲ್‌ ಬಿಡುಗಡೆಗೆ ಹೈಕೋರ್ಟ್‌ ತಡೆ

    ಜೈಲಿನಿಂದ ಸಿಎಂ ಕೇಜ್ರಿವಾಲ್‌ ಬಿಡುಗಡೆಗೆ ಹೈಕೋರ್ಟ್‌ ತಡೆ

    ನವದೆಹಲಿ: ದೆಹಲಿ ಮದ್ಯ ನೀತಿಗೆ (Delhi Liquor Policy) ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ (Arvind Kejriwal) ಹಿನ್ನಡೆಯಾಗಿದೆ. ಜೈಲಿನಿಂದ ಕೇಜ್ರಿವಾಲ್‌ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ.

    ಹೊಸ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ರೋಸ್‌ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್‌ (Delhi High Court) ಮೊರೆ ಹೋಗಿತ್ತು. ನ್ಯಾ. ಸುಧೀರ್ ಕುಮಾರ್ ಜೈನ್ ಮತ್ತು ರವೀಂದರ್ ದುಡೇಜಾ ಪೀಠವು ಅರ್ಜಿ ತುರ್ತು ವಿಚಾರಣೆ ನಡೆಸಿದ್ದು, ಜಾಮೀನು ಆದೇಶಕ್ಕೆ ತಡೆ ನೀಡಿದೆ. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

    ಅರ್ಜಿಯ ವಿಚಾರಣೆ ನಡೆಸುವವರೆಗೂ ವಿಚಾರಣಾ ನ್ಯಾಯಾಲಯದ ಆದೇಶದ ಪ್ರಕಾರ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

    ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಇಂದು ಸಂಜೆ 4 ಗಂಟೆಗೆ ತಿಹಾರ್ ಜೈಲಿಗೆ ಭೇಟಿ ನೀಡಿ ದೆಹಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಯೋಜಿಸಿದ್ದರು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ

  • ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರ ಮೊಮ್ಮಗನಿಗೆ ಜಾಮೀನು

    ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರ ಮೊಮ್ಮಗನಿಗೆ ಜಾಮೀನು

    ಮಂಗಳೂರು: ಐಸಿಸ್ (ISIS) ನಂಟು ಪ್ರಕರಣದಲ್ಲಿ ಎನ್ ಐಎಯಿಂದ ಬಂಧನಕ್ಕೊಳಗಾಗಿದ್ದ ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ (Delhi Highcourt) ಜಾಮೀನು ನೀಡಿದೆ.

    2021 ರ ಆಗಸ್ಟ್ 21 ರಂದು ಬಂಧನಕ್ಕೊಳಗಾಗಿದ್ದ ರೆಹಮಾನ್ ಮೊಬೈಲ್ ನಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳಿಗೆ ಐಸಿಸ್ ಪರವಾದ  ಬಾವುಟ, ಕರಪತ್ರ ವೀಡಿಯೋಗಳು ಸಿಕ್ಕಿದ್ದವು. ಇದನ್ನು ಕೋರ್ಟ್‍ಗೂ ನೀಡಲಾಗಿತ್ತು. ಈ ನಡುವೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್ ನಲ್ಲಿ ರೆಹಮಾನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಕೋರ್ಟ್ ಜಾಮೀನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

    ಜಾಮೀನು ಆದೇಶದಲ್ಲಿ ಹಲವು ಅಂಶಗಳನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದ್ದು, ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನು ಉಗ್ರ ನಂಟು ಎನ್ನಲು ಆಗಲ್ಲ. ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ. ಇವುಗಳೆಲ್ಲ ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು. ಹಾಗಾಗಿ ಇದನ್ನ ಇಟ್ಟು ಕೊಂಡವರನ್ನ ಐಸಿಸ್ ನಂಟನ್ನ ಸಾಬೀತುಪಡಿಸಲು ಆಗಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದನ್ನೂ ಓದಿ: ಕೈಬೆರಳಿನ ಶಸ್ತ್ರಚಿಕಿತ್ಸೆಗೆ ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿದ್ರು!- ತನಿಖೆಗೆ ಆದೇಶ

  • ಮಕ್ಕಳಿಗೆ ತರಗತಿಗಳಲ್ಲಿ ಎಸಿ ವ್ಯವಸ್ಥೆ ಕಲ್ಪಿಸುವ ವೆಚ್ಚವನ್ನು ಪೋಷಕರೇ ಭರಿಸಬೇಕು: ದೆಹಲಿ ಹೈಕೋರ್ಟ್

    ಮಕ್ಕಳಿಗೆ ತರಗತಿಗಳಲ್ಲಿ ಎಸಿ ವ್ಯವಸ್ಥೆ ಕಲ್ಪಿಸುವ ವೆಚ್ಚವನ್ನು ಪೋಷಕರೇ ಭರಿಸಬೇಕು: ದೆಹಲಿ ಹೈಕೋರ್ಟ್

    ನವದೆಹಲಿ: ಮಕ್ಕಳಿಗೆ ಶಾಲೆಯಲ್ಲಿ ಹವಾ ನಿಯಂತ್ರಣ (Air Conditioner) ವ್ಯವಸ್ಥೆ ಕಲ್ಪಿಸಲು ತಗಲುವ ವೆಚ್ಚವನ್ನು ಪೋಷಕರೇ ಭರಿಸಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ (Delhi High Court) ಹೇಳಿದೆ.

    ತರಗತಿಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ನೀಡಲು ಶುಲ್ಕ ವಿಧಿಸುವ ಖಾಸಗಿ ಶಾಲೆಯ ಹಕ್ಕನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ಮಹಾರಾಜ ಅಗ್ರಸೈನ್ ಪಬ್ಲಿಕ್ ಸ್ಕೂಲ್ ಎಸಿಗಾಗಿ ಪ್ರತಿ ವಿದ್ಯಾರ್ಥಿಗೆ 2,000 ಮಾಸಿಕ ಶುಲ್ಕ ವಿಧಿಸುತ್ತಿದೆ. ಇದು ಅಸಮಂಜಸವಾಗಿದೆ ಎಂದು ಅರ್ಜಿದಾರರಾದ ಮನೀಶ್ ಗೋಯೆಲ್ ಅರ್ಜಿ ಸಲ್ಲಿಸಿದ್ದರು. ಶಿಕ್ಷಣ ನಿರ್ದೇಶನಾಲಯ (ಡಿಒಇ) ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನ್ನನ್ನು ಟಾರ್ಗೆಟ್‌ ಮಾಡಲಾಗಿದೆ: ʼಕೈʼ ವಿರುದ್ಧ ರಾಧಿಕಾ ಕಿಡಿ

    ತರಗತಿಗಳಲ್ಲಿ ಹವಾನಿಯಂತ್ರಣ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿಯು ಶಾಲೆಯ ಆಡಳಿತದ ಮೇಲಿದೆ. ಇದಕ್ಕಾಗಿ ಶಾಲೆಯ ಸ್ವಂತ ಹಣ ಮತ್ತು ಸಂಪನ್ಮೂಲಗಳನ್ನು ಬಳಸಬೇಕು. ವಿದ್ಯಾರ್ಥಿಗಳ ಮೇಲೆ ಈ ಶುಲ್ಕವನ್ನು ವಿಧಿಸುವುದು ದೆಹಲಿ ಶಾಲಾ ಶಿಕ್ಷಣ ನಿಯಮಗಳು, 1973ರ ನಿಯಮ 154ಗೆ ವಿರುದ್ಧವಾಗಿದೆ ಎಂದು ಮನೀಶ್ ಗೋಯೆಲ್ ವಾದಿಸಿದರು. ಆದರೆ ಈ ವಾದವನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ದ್ವಿಸದಸ್ಯ ಪೀಠ ಒಪ್ಪಲಿಲ್ಲ. ಶಾಲೆಗಳು ವಿಧಿಸುವ ಇತರ ಶುಲ್ಕಗಳಿಗೆ ಎಸಿ ಶುಲ್ಕವನ್ನು ಹೋಲಿಸಿದ ಪೀಠ, ಹವಾನಿಯಂತ್ರಣ ಸೌಲಭ್ಯವು ಶಾಲೆಗಳು ವಿಧಿಸುವ ಲ್ಯಾಬ್ ಮತ್ತು ಸ್ಮಾರ್ಟ್‌ಕ್ಲಾಸ್ ಶುಲ್ಕದಂತಹ ಇತರ ಶುಲ್ಕಗಳಿಗಿಗೆ ಸಮ. ಇಂತಹ ಸೌಲಭ್ಯಗಳನ್ನು ಒದಗಿಸುವ ಆರ್ಥಿಕ ಹೊರೆಯನ್ನು ಶಾಲಾ ಆಡಳಿತದ ಮೇಲೆ ಮಾತ್ರ ಹಾಕಲಾಗುವುದಿಲ್ಲ ಎಂದು ಹೇಳಿತು. ಇದನ್ನೂ ಓದಿ: ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

    ಪೋಷಕರು ಶಾಲೆಯನ್ನು ಆಯ್ಕೆ ಮಾಡುವಾಗ ತಮ್ಮ ಮಕ್ಕಳಿಗೆ ಒದಗಿಸುವ ಸೌಲಭ್ಯಗಳು ಮತ್ತು ಸೌಲಭ್ಯಗಳ ವೆಚ್ಚದ ಬಗ್ಗೆ ಗಮನ ಹರಿಸಬೇಕು ಎಂದು ಪೀಠ ಹೇಳಿತು. ದೆಹಲಿ ಸರ್ಕಾರವು ಸಮಸ್ಯೆಯನ್ನು ಪರಿಶೀಲಿಸುತ್ತಿದೆ ಮತ್ತು ಹಲವಾರು ದೂರುಗಳ ನಂತರ ಕ್ರಮ ಕೈಗೊಂಡ ವರದಿಯನ್ನು ಕೇಳಿದೆ ಎಂದು ಡಿಒಇ ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ದೆಹಲಿ ಬಳಿಕ ಅಹಮದಾಬಾದ್ ಶಾಲೆಗಳಿಗೂ ಬಾಂಬ್ ಬೆದರಿಕೆ

  • ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ

    ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ

    ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (New Excise Policy) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು (Bail) ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ದೆಹಲಿ ಹೈಕೋರ್ಟ್‌ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ.

    ಪಿಎಂಎಲ್‌ಎ ವಿಶೇಷ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್ ಎರಡನೇ ಸಾಮಾನ್ಯ ಜಾಮೀನು ಅರ್ಜಿ ವಜಾ ಮಾಡಿದ ಹಿನ್ನೆಲೆ ಮೇಲ್ಮನವಿ ಸಲ್ಲಿಸಿರುವ ಅವರು ವಿಧಾನಸಭೆ ಸದಸ್ಯನಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ತುರ್ತು ವಿಚಾರಣೆ ನಡೆಸುವಂತೆ ಇಂದು ಮನವಿ ಮಾಡಿದರು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ಡಿವೈಎಸ್‍ಪಿ ವಿರುದ್ಧದ ಘೋಷಿತ ಆರೋಪಿ ಆದೇಶ ಕೈಬಿಟ್ಟ ಹೈಕೋರ್ಟ್

    Delhi High Court

    ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ ಇತರೇ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಳ್ಳಬಹುದು. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

    ಇ.ಡಿ ಪರ ವಾದಿಸಿದ್ದ ಜೋಹೆಬ್ ಹೊಸೈನ್, ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ. ತನಿಖೆ ವಿಳಂಬ ಆರೋಪವನ್ನು ಒಪ್ಪಲು ಸಾಧ್ಯವಿಲ್ಲ. ಪ್ರಕರಣದ ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹಲವು ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಈ ಹಂತದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ತನಿಖಾ ಸಂಸ್ಥೆಗಳ ವಾದ ಪುರಸ್ಕರಿಸಿದ ಕೋರ್ಟ್, ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಎರಡನೇ ಸಾಮಾನ್ಯ ಅರ್ಜಿಯನ್ನು ವಜಾ ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಇಲ್ಲಿ ಸಾಯ್ತಿದ್ರೆ ಪಾಕ್ ಅಲ್ಲಿ ಅಳುತ್ತಿದೆ: ಮೋದಿ

    ಕಳೆದ ವರ್ಷ ಫೆಬ್ರವರಿ 26 ಮತ್ತು ಮಾರ್ಚ್ 9 ರಂದು ಮನೀಷ್ ಸಿಸೋಡಿಯಾ ಅವರನ್ನು ಕ್ರಮವಾಗಿ ಸಿಬಿಐ ಮತ್ತು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ, ಸಿಸೋಡಿಯಾ ಮತ್ತು ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ‘ಶಿಫಾರಸು’ ಮತ್ತು ‘ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ’ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಒಂದು ಸುಳ್ಳನ್ನು ಸಾವಿರ ಬಾರಿ ಪುನರಾವರ್ತಿಸಿದರೂ ಅದು ಸತ್ಯವಾಗುವುದಿಲ್ಲ: ಖರ್ಗೆ

  • ಪ್ರಧಾನಿ ಮೋದಿಯನ್ನ ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ಪ್ರಧಾನಿ ಮೋದಿಯನ್ನ ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ನವದೆಹಲಿ: ಹಿಂದೂ-ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ (ಏಪ್ರಿಲ್ 29) ವಿಚಾರಣೆ ನಡೆಸಲಿದೆ.

    ವಕೀಲ ಆನಂದ್ ಎಸ್ ಜೊಂಧಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಆರು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಚುನಾವಣೆಯಿಂದ ಅನರ್ಹಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ (ECI) ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ಇಲ್ಲ – ಇವಿಎಂ ಬಗ್ಗೆ ಸಲ್ಲಿಕೆಯಾದ ಎಲ್ಲಾ ಅರ್ಜಿ ವಜಾ

    ಏ.9 ರಂದು ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ವಿರುದ್ಧ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಹಿಂದೂ ಮತ್ತು ಸಿಖ್ ದೇವರುಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದಾರೆ. ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರ ಪರವಾದ ಒಲುವು ಹೊಂದಿದ್ದಾರೆ ಎಂದು ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅಭಿವೃದ್ಧಿ ಹಾಗೂ ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್‌ನ ಪ್ರತಿಗಳನ್ನು ವಾಪಸ್ ತಂದಿರುವುದಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

    ಪ್ರಧಾನ ಮಂತ್ರಿಯವರ ಭಾಷಣಗಳು ಮತದಾರರಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ. ಪ್ರಧಾನಿ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುತ್ತವೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951 ರ ಅಡಿಯಲ್ಲಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಆಯೋಗಕ್ಕೆ ಮನವಿ ಮಾಡಿದೆ‌. ಲೋಕಸಭೆ ಚುನಾವಣೆಯ ಮತದಾನದ ದಿನಾಂಕವು ಅತ್ಯಂತ ವೇಗವಾಗಿ ಸಮೀಪಿಸುತ್ತಿರುವ ಹಿನ್ನಲೆ ಚುನಾವಣಾ ಆಯೋಗದಿಂದ ನ್ಯಾಯಯುತ ಕ್ರಮಕ್ಕೆ ತಕ್ಷಣ ನಿರ್ದೇಶಿಸಲು ಹೈಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಬಿಜೆಪಿಗೆ ಸೇರೋದಾದ್ರೆ ಮನೆಗೆ ಹೋಗಿ ಕರ್ಕೊಂಡು ಬರ್ತೀನಿ: ಖರ್ಗೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು

  • ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿ ಮೂರನೇ ಅರ್ಜಿ – ಅರ್ಜಿದಾರರನ್ನು ತರಾಟೆ ತೆಗೆದುಕೊಂಡ ಕೋರ್ಟ್; ದಂಡದ ಎಚ್ಚರಿಕೆ

    ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿ ಮೂರನೇ ಅರ್ಜಿ – ಅರ್ಜಿದಾರರನ್ನು ತರಾಟೆ ತೆಗೆದುಕೊಂಡ ಕೋರ್ಟ್; ದಂಡದ ಎಚ್ಚರಿಕೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲದಿಂದ ಬಂಧನಕ್ಕೊಳ್ಳಪಟ್ಟಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ದೆಹಲಿಯ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ನಿರ್ದೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದ ಆಮ್ ಆದ್ಮಿ ಪಕ್ಷದ (AAP) ಮಾಜಿ ಶಾಸಕರನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ಟೀಕಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸುಬ್ರಮೋನಿಯಂ ಪ್ರಸಾದ್ ನೇತೃತ್ವದ ಪೀಠ ಅರ್ಜಿದಾರರಾದ ಸಂದೀಪ್ ಕುಮಾರ್ ಅವರನ್ನ ತರಾಟೆಗೆ ತೆಗೆದುಕೊಂಡಿತು. ಈ ಹಿಂದೆ ಇಂತಹ ಎರಡು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಅದಾಗ್ಯೂ ನೀವು ಅರ್ಜಿ ಸಲ್ಲಿಸಿದ್ದೀರಿ. ಹೀಗಾಗಿ ನಿಮ್ಮ ಮೇಲೆ ಭಾರೀ ವೆಚ್ಚವನ್ನು ವಿಧಿಸಬೇಕು ಎಂದು ಕೋರ್ಟ್ ಹೇಳಿತು. ಇದನ್ನೂ ಓದಿ: ಕೇಂದ್ರ, ರಾಜ್ಯದ ನಡುವೆ ಸ್ಪರ್ಧೆ ಬೇಡ – ಬರ ಪರಿಹಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಸಲಹೆ

    Delhi High Court

    ಪ್ರಚಾರ ಹಿತಾಸಕ್ತಿ ಅರ್ಜಿಯಲ್ಲದೆ ಬೇರೇನೂ ಅಲ್ಲ ಎಂದ ಪೀಠ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು ಇದೇ ರೀತಿಯ ವಿಷಯಗಳನ್ನು ಆಲಿಸಿದೆ ಮತ್ತು ತಿರಸ್ಕರಿಸಿದೆ‌. ಇದೇ ರೀತಿಯ ಅರ್ಜಿಗಳನ್ನು ಆಲಿಸಿದ್ದರಿಂದ ಅಂತಿಮವಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಈ ಅರ್ಜಿಯನ್ನು ವರ್ಗಾಯಿಸಲಾಯಿತು.

    ಮಾರ್ಚ್ 28 ರಂದು, ಸುರ್ಜಿತ್ ಸಿಂಗ್ ಯಾದವ್ ಎಂಬಾತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ತಿರಸ್ಕರಿಸಿತ್ತು. ಕಾರ್ಯಾಂಗ ಮತ್ತು ಅಧ್ಯಕ್ಷರು ಸಮಸ್ಯೆಯನ್ನು ಪರಿಶೀಲಿಸಬೇಕು ಮತ್ತು ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆಗ ಹೇಳಿತ್ತು. ಏಪ್ರಿಲ್ 4 ರಂದು, ಹಿಂದೂ ಸೇನೆಯ ಅಧ್ಯಕ್ಷರಾದ ವಿಷ್ಣು ಗುಪ್ತಾ ಅವರ ಮತ್ತೊಂದು ಪಿಐಎಲ್ ಅನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು. ಸಿಎಂ ಆಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಕರೆ ಎಂದು ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ