Tag: Delhi High Court

  • ಅರವಿಂದ್ ಕೇಜ್ರಿವಾಲ್‌ಗೆ ರಿಲೀಫ್ – ಸಿಎಂ ಸ್ಥಾನದಿಂದ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಅರವಿಂದ್ ಕೇಜ್ರಿವಾಲ್‌ಗೆ ರಿಲೀಫ್ – ಸಿಎಂ ಸ್ಥಾನದಿಂದ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಪಟ್ಟಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

    ಪ್ರಕರಣದ ವಿಚಾರಣೆ ವೇಳೆ ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿದೆಯೇ ಎಂದು ಪ್ರಶ್ನಿಸಲಾಯಿತು‌. ನಾವು ಇಂದಿನ ಪತ್ರಿಕೆಯನ್ನು ಓದಿದ್ದೇವೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದಾರೆ. ಇದನ್ನು ರಾಷ್ಟ್ರಪತಿಗಳು ಪರಿಗಣಿಸಬೇಕು. ನಾವು ಯಾಕೆ ಈ ಅರ್ಜಿಯನ್ನು ವಿಚಾರಣೆ ನಡೆಸಬೇಕು. ಇದನ್ನು ಅವರು ಪರಿಗಣಿಸುತ್ತಾರೆ. ನಾವು ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವುದಿಲ್ಲ. ಯಾವುದೇ ಹೈಕೋರ್ಟ್ ಅದನ್ನು ಮಾಡುವುದಿಲ್ಲ ಎಂದು ಎಸಿಜೆ ಹೇಳಿದರು. ಇದನ್ನೂ ಓದಿ: ಕೆಲ ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ – ಸಿಜೆಐಗೆ ವಕೀಲರ ಪತ್ರ

    ರೈತ ಮತ್ತು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಳ್ಳುವ ದೆಹಲಿ ನಿವಾಸಿ ಸುರ್ಜಿತ್ ಸಿಂಗ್ ಯಾದವ್ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹಣಕಾಸು ಅವ್ಯವಹಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿಯೊಬ್ಬರು ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಯಾದವ್ ತಮ್ಮ ಮನವಿಯಲ್ಲಿ ತಿಳಿಸಿದ್ದರು.

    ಮುಂದುವರಿದು ಕೇಜ್ರಿವಾಲ್ ಅವರನ್ನು ಈ ಹುದ್ದೆಯಲ್ಲಿ ಮುಂದುವರಿಸುವುದರಿಂದ ಕಾನೂನು ಪ್ರಕ್ರಿಯೆಗೆ ಅಡ್ಡಿಯುಂಟಾಗುವುದು ಮತ್ತು ನ್ಯಾಯಾಂಗದ ಹಾದಿಗೆ ಅಡ್ಡಿಯಾಗಲಿದೆ. ಕಾರಾಗೃಹದಲ್ಲಿರುವ ಮುಖ್ಯಮಂತ್ರಿಗಳು ಕಾನೂನು ವಿಧಿಸುವ ಯಾವುದೇ ವ್ಯವಹಾರವನ್ನು ನಡೆಸಲು ಅಸಮರ್ಥರಾಗಿರುತ್ತಾರೆ. ಒಂದು ವೇಳೆ ಅದಕ್ಕೆ ಅನುಮತಿಸಿದರೆ ಸರ್ಕಾರದ ರಹಸ್ಯ ದಾಖಲೆಗಳನ್ನು ಜೈಲು ಅಧಿಕಾರಿಗಳು ಸಂಪೂರ್ಣವಾಗಿ ಸ್ಕ್ಯಾನ್ ಮಾಡಬೇಕಾಗುತ್ತದೆ. ಇದನ್ನೂ ಓದಿ: ಭಾರತ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ

    ಇಂತಹ ಕೃತ್ಯವು ಸಂವಿಧಾನದ ಮೂರನೇ ಶೆಡ್ಯೂಲ್ ಅಡಿಯಲ್ಲಿ ಮುಖ್ಯಮಂತ್ರಿಗೆ ಬೋಧಿಸಲಾದ ಗೌಪ್ಯತೆಯ ಪ್ರಮಾಣ ವಚನವನ್ನು ನೇರವಾಗಿ ಉಲ್ಲಂಘಿಸುತ್ತದೆ ಎಂದು ಅವರು ಹೇಳಿದರು. ಆದರೆ ಈ ವಾದ ಪುರಸ್ಕರಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿತು.

  • ಲೆಫ್ಟಿನೆಂಟ್ ಗವರ್ನರ್ ಭಾಷಣಕ್ಕೆ ಅಡ್ಡಿ; 7 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಿದ ಹೈಕೋರ್ಟ್

    ಲೆಫ್ಟಿನೆಂಟ್ ಗವರ್ನರ್ ಭಾಷಣಕ್ಕೆ ಅಡ್ಡಿ; 7 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಿದ ಹೈಕೋರ್ಟ್

    ನವದೆಹಲಿ: ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಕಳೆದ ಫೆಬ್ರವರಿಯಲ್ಲಿ ಏಳು ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ ದೆಹಲಿ ವಿಧಾನಸಭಾ ಸ್ಪೀಕರ್ ಅವರ ಆದೇಶವನ್ನು ದೆಹಲಿ ಹೈಕೋರ್ಟ್ (Delhi High Court) ರದ್ದುಗೊಳಿಸಿದೆ. ಅಮಾನತುಗೊಂಡ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬಳಿಕ ಈ ಆದೇಶ ನೀಡಲಾಗಿದೆ.

    ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ (V.K.Saxena) ಅವರ ಭಾಷಣದ ವೇಳೆ ಬಿಜೆಪಿ ಶಾಸಕರಾದ ಮೋಹನ್ ಸಿಂಗ್ ಬಿಶ್ತ್, ಅಜಯ್ ಮಹಾವರ್, ಒ.ಪಿ.ಶರ್ಮಾ, ಅಭಯ್ ವರ್ಮಾ, ಅನಿಲ್ ಬಾಜ್‌ಪೇಯ್, ಜಿತೇಂದರ್ ಮಹಾಜನ್ ಮತ್ತು ವಿಜೇಂದರ್ ಗುಪ್ತಾ ಅವರು 30 ನಿಮಿಷಗಳಲ್ಲಿ ಹತ್ತು ಬಾರಿ ಭಾಷಣವನ್ನು ವಿರಾಮಗೊಳಿಸುವಂತೆ ಒತ್ತಾಯಿಸಿದ್ದರು‌. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್‌ ರಿಲೀಫ್‌

    ಅಶಿಸ್ತಿನ ವರ್ತನೆ ತೋರಿದ ಶಾಸಕರ ವಿರುದ್ಧ ಕ್ರಮಕ್ಕೆ ಎಎಪಿ ಶಾಸಕ ದಿಲೀಪ್ ಪಾಂಡೆ ಒತ್ತಾಯಿಸಿದರು. ಬಳಿಕ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಈ ವಿಷಯವನ್ನು ವಿಶೇಷಾಧಿಕಾರ ಸಮಿತಿಗೆ ವರ್ಗಾಯಿಸಿದ್ದರು. ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಏಳು ಬಿಜೆಪಿ ಶಾಸಕರನ್ನು ಸದನದ ಕಲಾಪದಲ್ಲಿ ಭಾಗವಹಿಸದಂತೆ ಅಮಾನತುಗೊಳಿಸುವ ಪ್ರಸ್ತಾಪವನ್ನು ಸದನವು ಅಂಗೀಕರಿಸಿತ್ತು.

    ಬಿಜೆಪಿಯ ಏಳು ಶಾಸಕರು ವಿಶೇಷಾಧಿಕಾರ ಸಮಿತಿಯ ಮುಂದೆ ಕಲಾಪ ಮುಗಿಯುವವರೆಗೆ ತಮ್ಮನ್ನು ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಫೆಬ್ರವರಿ 27 ರಂದು ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಬುಧವಾರ ನ್ಯಾಯಾಲಯವು ಏಳು ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಿತು. ಇದನ್ನೂ ಓದಿ: ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

  • AAP ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ತಿರಸ್ಕರಿಸಿದ‌ ದೆಹಲಿ ಹೈಕೋರ್ಟ್

    AAP ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ತಿರಸ್ಕರಿಸಿದ‌ ದೆಹಲಿ ಹೈಕೋರ್ಟ್

    ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರಿಗೆಯಾವುದೇ ಪರಿಹಾರ ಸಿಗುವಂತೆ ಕಾಣುತ್ತಿಲ್ಲ. ದೆಹಲಿ ಹೈಕೋರ್ಟ್ (Delhi High Court) ಅವರ ಜಾಮೀನು ಅರ್ಜಿಯನ್ನು ಇಂದು ತಿರಸ್ಕರಿಸಿದೆ.

    ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಸಂಜಯ್ ಸಿಂಗ್ (Sanjay Singh) ಅವರನ್ನು 2023 ರ ಅಕ್ಟೋಬರ್ 4 ರಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. ಜನವರಿ 31 ರಂದು ಮದ್ಯದ ಹಗರಣ ಪ್ರಕರಣದಲ್ಲಿ ಸಂಜಯ್ ಸಿಂಗ್ ಪರವಾಗಿ ಹಿರಿಯ ವಕೀಲ ಮೋಹಿತ್ ಮಾಥುರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

    ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ವಾದ ಮಂಡಿಸಿದರು. ಜನವರಿ 31 ರಂದು ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ  ಜಾಮೀನು ಅರ್ಜಿ ತಿರಸ್ಕರಿಸಿದೆ. ಇದನ್ನೂ ಓದಿ: ಇಡಿ ಅಧಿಕಾರಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

    ಆರೋಪಗಳೇನು?: ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಸಂಜಯ್ ಸಿಂಗ್ ಅವರು ಕೆಲವು ಮಧ್ಯ ಉತ್ಪಾದಕರು, ಸಗಟು ವ್ಯಾಪಾರಿಗಳು ಸೇರಿದಂತೆ ಹಲವು ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಇಡಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.

  • ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ತಗ್ಗಿದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು (Delhi Schools) ತೆರೆಯಲಾಗಿದ್ದು, ಇದರಲ್ಲಿ ನರ್ಸರಿಯಿಂದ 12ನೇ ತರಗತಿವರೆಗಿನ ಎಲ್ಲಾ ತರಗತಿಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುತ್ತಿದೆ. ಆದರೆ, ಕೆಲವು ಖಾಸಗಿ ಶಾಲೆಗಳು ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳನ್ನು ಮುಚ್ಚಲು ನಿರ್ಧರಿಸಿವೆ.

    ಮಾಲಿನ್ಯ ಇನ್ನೂ ಕೆಟ್ಟ ಪರಿಸ್ಥಿತಿಯಲ್ಲಿದ್ದು, ಸಣ್ಣ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ಖಾಸಗಿ ಶಾಲೆಗಳು ಹೇಳಿವೆ. ಈ ಸಂಬಂಧ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದ್ದು, ಒಂದು ವಾರದವರೆಗೆ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಹಾಗೂ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    ದೆಹಲಿ ವಿಶ್ವವಿದ್ಯಾನಿಲಯವು ವಾಯು ಮಾಲಿನ್ಯದ ದೃಷ್ಟಿಯಿಂದ ನವೆಂಬರ್ 13-19ರ ವರೆಗೆ ಚಳಿಗಾಲದ ರಜೆಯನ್ನು ಘೋಷಿಸಿತ್ತು. ಮಾಲಿನ್ಯ ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಎಲ್ಲ ಕಾಲೇಜುಗಳಲ್ಲಿ ತರಗತಿಗಳನ್ನು ಆರಂಭಿಸಿದೆ. ಕಾಲೇಜುಗಳು ಬಹಳ ದಿನಗಳಿಂದ ಮುಚ್ಚಲ್ಪಟ್ಟಿವೆ, ಹೀಗಾಗಿ ಶಿಕ್ಷಣಕ್ಕೆ ನಷ್ಟವಾಗದಂತೆ ಕಾಲೇಜುಗಳನ್ನು ತೆರೆಯುವುದು ಕಡ್ಡಾಯವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್- ಭಾರೀ ಟ್ರೋಲ್

    ಗಾಳಿಯ ದಿಕ್ಕು ಮತ್ತು ಗಾಳಿಯ ವೇಗದಲ್ಲಿನ ಬದಲಾವಣೆಯಿಂದಾಗಿ ಗಾಳಿಯ ಗುಣಮಟ್ಟವು ತೀವ್ರ ವರ್ಗದಿಂದ ಕಡಿಮೆಯಾಗಿದೆ ಆದರೆ ಗಾಳಿಯು ಇನ್ನೂ ಅತ್ಯಂತ ಕಳಪೆ ವಿಭಾಗದಲ್ಲಿದೆ. ರಾಜಧಾನಿಯಲ್ಲಿನ ಗಾಳಿಯ ಗುಣಮಟ್ಟವು ಒಟ್ಟಾರೆ AQI 398 ರೊಂದಿಗೆ ಅತ್ಯಂತ ಕಳಪೆ ವರ್ಗದಲ್ಲಿದೆ. ಬೆಳಗಿನ ಜಾವ ಗಾಳಿ ಬೀಸುತ್ತಿರುವುದರಿಂದ ಮಂಜು ಮತ್ತು ಹೊಗೆಯ ಪ್ರಮಾಣ ಕಡಿಮೆಯಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

  • ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

    ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

    ನವದೆಹಲಿ: ಪ್ರತಿ ವರ್ಷವೂ ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ಹೆಚ್ಚುತ್ತಿದೆ, ತೀವ್ರ ವಾಯು ಮಾಲಿನ್ಯ ಎದುರಿಸಲು ಸಾಧ್ಯವಿಲ್ಲ ಇದಕ್ಕೆ ಪರಿಹಾರವೇನು? ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನೆ ಮಾಡಿದೆ.

    ದೆಹಲಿ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ ದೆಹಲಿ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರ್ಕಾರಕ್ಕೆ (Rajasthan Government)  ಚಾಟೀ ಬೀಸಿದೆ.

    ದೆಹಲಿಯಲ್ಲಿನ ವಾಯುಮಾಲಿನ್ಯ ಸಮಸ್ಯೆಯನ್ನು ರಾಜಕೀಯ ಚರ್ಚೆಯಾಗಿ ಪರಿವರ್ತಿಸಲು ಸಾಧ್ಯವಿಲ್ಲ, ಮಕ್ಕಳು ಮಾಲಿನ್ಯದಿಂದಾಗಿ ಆರೋಗ್ಯ ಸಮಸ್ಯೆ (Health Problem) ಎದುರಿಸುತ್ತಿದ್ದಾರೆ, ಕೂಡಲೇ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಸಬೇಕು ಮತ್ತು ಶುಕ್ರವಾರದೊಳಗೆ ಪರಿಸ್ಥಿತಿ ಸುಧಾರಣೆಗೆ ಕ್ರಮವಹಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

    ಕೃಷಿ ತಾಜ್ಯ ಅಥವಾ ಹುಲ್ಲು ಸುಡುವಿಕೆ 20-50 ದಿನಗಳವರೆಗೆ ಮಾತ್ರ ಸಂಭವಿಸುತ್ತದೆ ಎಂದು ಪಂಜಾಬ್ ಎ‌ಜಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೀವು ಅದನ್ನು ಹೇಗೆ ಮಾಡುತ್ತೀರಿ ಎಂಬುದರ ಬಗ್ಗೆ ನಮಗೆ ಬೇಕಾಗಿಲ್ಲ, ಹುಲ್ಲು ಸುಡುವುದು ಕೂಡಲೇ ನಿಲ್ಲಬೇಕು, ಎಲ್ಲ ರಾಜ್ಯಗಳು ಬೆಂಕಿಯನ್ನು ನಿಲ್ಲಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ. ನಿಮ್ಮ ಸ್ಥಳೀಯ ಠಾಣೆಯ ಎಸ್‌ಎಚ್‌ಒ ಸಹ ಇದಕ್ಕೆ ಜವಾಬ್ದಾರಿಯಾಗಿರಬೇಕು. ಇಂದಿನಿಂದ ಅವರು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ತಾಕೀತು ಮಾಡಿತು.

    ವಿಚಾರಣೆಯ ಸಂದರ್ಭದಲ್ಲಿ, ಅಮಿಕಸ್ ಕ್ಯೂರಿ ಅಪರಾಜಿತಾ ಸಿಂಗ್ ವಾದಿಸಿ, ದೆಹಲಿಯಲ್ಲಿ ಸ್ಥಾಪಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಹಿಂದಿನ ನಿರ್ದೇಶನಗಳ ನಂತರ ಅಳವಡಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ನಾವು ಟವರ್‌ಗಳು ಕಾರ್ಯನಿರ್ವವಂತೆ ಮಾಡಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿತು. ಇದನ್ನೂ ಓದಿ: ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಇನ್ನೂ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದ ಪೀಠ, ದೆಹಲಿ ಸರ್ಕಾರದ ಮಾಲಿನ್ಯ ನಿಯಂತ್ರಣ ಕ್ರಮಗಳು, ಅದರಲ್ಲೂ ವಿಶೇಷವಾಗಿ ಬೆಸ-ಸಮ ಯೋಜನೆಗೆ ಎಂದಾದರೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆಯೇ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ದೀಪಾವಳಿಯ ನಂತರ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ಈ ಯೋಜನೆ ಎಂದಾದರೂ ಯಶಸ್ವಿಯಾಗಿದಿಯೇ? ಎಂದು ಪ್ರಶ್ನಿಸಿತು. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ

    ದೆಹಲಿ ಸರ್ಕಾರ ಪರ ವಾದ ಮಂಡಿಸಿದ ವಕೀಲರು, ಮೂರು‌ ಹಂತಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು? ಮತ್ತು 4ನೇ ಹಂತದಲ್ಲಿ‌ ಕೈಗೊಳ್ಳಲಿರುವ ಪ್ರಯತ್ನಗಳೇನು? ಎಂದು ಮನವರಿಕೆ ಮಾಡಿದರು‌. ವರ್ಕ್‌ಫ್ರಮ್‌ ಹೋಮ್‌ ವಾಹನಗಳ ನಿರ್ಬಂಧ ಮತ್ತು ಮರಗಳಿಗೆ ನೀರಿನ ಸಿಂಪಡಿಕೆ‌ ಬಗ್ಗೆ ವಿವರಿಸಿದರು. ಶುಕ್ರವಾರ ವಿಚಾರಣೆ ಮುಂದುವರಿಯಲಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್  

  • ಬಾಲಕಿಯ ಮೇಲೆ ಸರ್ಕಾರಿ ಅಧಿಕಾರಿ ಅತ್ಯಾಚಾರ – ಸ್ವಯಂ ದೂರು ದಾಖಲಿಸಿಕೊಂಡ ದೆಹಲಿ ಹೈಕೋರ್ಟ್

    ಬಾಲಕಿಯ ಮೇಲೆ ಸರ್ಕಾರಿ ಅಧಿಕಾರಿ ಅತ್ಯಾಚಾರ – ಸ್ವಯಂ ದೂರು ದಾಖಲಿಸಿಕೊಂಡ ದೆಹಲಿ ಹೈಕೋರ್ಟ್

    ನವದೆಹಲಿ: 16 ವರ್ಷದ ಬಾಲಕಿಯ ಮೇಲೆ ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪ್ರೇಮೋದಯ್ ಖಾಖಾ (Premoday Khakha) ಅತ್ಯಾಚಾರ (Rape) ಮಾಡಿದ ಪ್ರಕರಣ ವಿರುದ್ಧ ದೆಹಲಿ ಹೈಕೋರ್ಟ್ (Delhi High Court) ಸ್ವಯಂ ದೂರು ದಾಖಲಿಸಿಕೊಂಡಿದೆ.

    ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾ. ಸಂಜೀವ್ ನರುಲಾ ಅವರ ವಿಭಾಗೀಯ ಪೀಠವು ದೆಹಲಿ ಪೊಲೀಸ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವರದಿಯನ್ನು ಕೇಳಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಿದೆ.

    ತನ್ನ ಮೇಲೆ ಇತರ ಕೆಲವರು ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ಬಹಿರಂಗಪಡಿಸಿದ್ದಾಳೆ. ಇದಕ್ಕೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೋರ್ಟ್ ಇಂದು ದೆಹಲಿ ಪೊಲೀಸರನ್ನು ವಿಚಾರಣೆ ವೇಳೆ ಪ್ರಶ್ನಿಸಿತು. ಈ ಬಗ್ಗೆಯೂ ತನಿಖೆ ನಡೆಸುವುದಾಗಿ ಪೊಲೀಸ್ ಪರ ವಕೀಲರು ತಿಳಿಸಿದ್ದು, ಬಾಲಕಿಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

    ಬಲಿಪಶುವಿನ ಗುರುತನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಪೊಲೀಸರನ್ನು ಕೇಳಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಕೂಡ ಈ ವಿಚಾರವನ್ನು ಗಮನಕ್ಕೆ ತಂದಿದೆ ಮತ್ತು ನಿಯಮಗಳ ಅನುಸರಣೆಯಲ್ಲಿ ಕೆಲವು ವೈಪರಿತ್ಯಗಳಿವೆ ಆದ್ದರಿಂದ ಪ್ರಕರಣದಲ್ಲಿ ಉತ್ತರವನ್ನು ಸಲ್ಲಿಸುವುದಾಗಿ ಹೇಳಿದೆ. ಇದನ್ನೂ ಓದಿ: ಕಳ್ಳತನದ ಆರೋಪ – ನಾಲ್ವರನ್ನು ತಲೆಕೆಳಗಾಗಿ ನೇತುಹಾಕಿ ಥಳಿಸಿದ ಗುಂಪು

    ಬಾಲಕಿಯ ತಂದೆಯ ಮರಣದ ಬಳಿಕ ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕನಾಗಿದ್ದ ಪ್ರೇಮೋದಯ್ ಖಾಖಾ ಬಾಲಕಿಯನ್ನು ಮನೆಗೆ ಕರೆತಂದು ಪತ್ನಿಯ ಸಹಕಾರದಲ್ಲಿ ನಿರಂತರ ಅತ್ಯಾಚಾರ ಮಾಡಿದ್ದ. ಗರ್ಭಿಣಿಯಾಗಿದ್ದ ಬಾಲಕಿಗೆ ಆರೋಪಿಯ ಪತ್ನಿ ಸೀಮಾ ರಾಣಿ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದಳು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ ಭಯೋತ್ಪಾದಕರು ತಲುಪದಂತೆ ನೋಡಿಕೊಳ್ಳಿ: ಚಕ್ರಪಾಣಿ ಮಹಾರಾಜ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಡಿಯಾ ಪದ ಬಳಕೆ ತಡೆ ನೀಡಲು PIL- 26 ವಿಪಕ್ಷಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್

    ಇಂಡಿಯಾ ಪದ ಬಳಕೆ ತಡೆ ನೀಡಲು PIL- 26 ವಿಪಕ್ಷಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್

    ನವದೆಹಲಿ: ವಿರೋಧ ಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ (INDIA) ಎಂದು ನಾಮಕರಣ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ಗೆ (Delhi Highcourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಗಿರೀಶ್ ಭಾರದ್ವಾಜ್ ಎಂಬವರು ಈ ಅರ್ಜಿ ಸಲ್ಲಿಸಿದ್ದು, ಇಂಡಿಯಾ ಪದ ಬಳಕೆ ಮಾಡದಂತೆ ಸೂಚಿಸಲು ಮನವಿ ಮಾಡಿದ್ದಾರೆ.

    ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ವಿಭಾಗೀಯ ಪೀಠ 26 ವಿರೋಧ ಪಕ್ಷಗಳು, ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ (Central Election Commission) ನೋಟಿಸ್ ನೀಡಿ ಅಕ್ಟೋಬರ್ 31 ರಂದು ವಿಚಾರಣೆ ಮುಂದೂಡಿತು. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ – ಸೂರತ್‌ ನ್ಯಾಯಾಲಯ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ

    ಅರ್ಜಿದಾರರ ಪರ ಹಿರಿಯ ವಕೀಲ ಅರುಣಾ ಶ್ಯಾಮ್ ವಾದ ಮಂಡಿಸಿ, ವಿಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಭಾರತದ (India) ಹೆಸರನ್ನು ಬಳಸುತ್ತಿವೆ. ಇದು 2024 ರ ಮುಂಬರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಶಾಂತಿಯುತ, ಪಾರದರ್ಶಕ ಮತ್ತು ನ್ಯಾಯಯುತ ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ನಾಗರಿಕರನ್ನು ಅನಗತ್ಯ ಹಿಂಸಾಚಾರಕ್ಕೆ ಒಡ್ಡಬಹುದು ಮತ್ತು ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಡಲು ಕಾರಣವಾಗಬಹುದು.

    1950ರ ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 2 ಮತ್ತು 3 ರ ಅಡಿಯಲ್ಲಿ ಭಾರತ ಎಂಬ ಹೆಸರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆ ವಿರೋಧ ಪಕ್ಷಗಳು ಭಾರತೀಯ ಧ್ವಜ ಮತ್ತು ಇಂಡಿಯಾ ಪದ ಬಳಕೆ ಮಾಡದಂತೆ ತಡೆಯಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

    ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿ ವಿಚಾರಣೆಗೆ ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಹಿನ್ನೆಲೆ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

    ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ (Delhi High Court) ನಿರಾಕರಿಸಿದೆ. ಸುದೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್ ಸಾಕ್ಷ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನಲೆ ಜಾಮೀನು (Bail) ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಮನೀಶ್ ಸಿಸೋಡಿಯಾ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಬಲಿಯಾಗುವುದಿಲ್ಲ: ಶರದ್ ಪವಾರ್

     

    ಮನೀಶ್ ಸಿಸೋಡಿಯಾ, ರಾಜಕೀಯ ಸ್ಥಾನಮಾನಗಳು ಹೊಂದಿರುವ ಕಾರಣದಿಂದ ಸಾಕ್ಷಿಗಳನ್ನು ತಿರುಚುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಸಾಕ್ಷ್ಯಗಳ ನಾಶವಾಗದಂತೆ ಕಾಪಾಡಬೇಕಾದ ಹಿನ್ನೆಲೆ ರಾಜಕೀಯ ಹಸ್ತಕ್ಷೇಪದಿಂದ ಉಳಿಸಿಕೊಳ್ಳಲು ಜಾಮೀನು ನಿರಾಕರಿಸಿದೆ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ವಿಪಕ್ಷಗಳ ನಾಯಕರ ಸಭೆ – ಮತ್ತೆ ದಿನಾಂಕ ಮುಂದೂಡಿಕೆ‌

    ಇದೇ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಸಂವಹನ ಉಸ್ತುವಾರಿ ವಿಜಯ್ ನಾಯರ್, ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋನಪಲ್ಲಿ, ಮದ್ಯ ಕಂಪನಿ ಎಂ/ಎಸ್ ಪೆರ್ನೋಡ್ ರಿಕಾರ್ಡ್ ಮ್ಯಾನೇಜರ್ ಬಿನೋಯ್ ಬಾಬು ಬಿನೋಯ್ ಜಾಮೀನು ಅರ್ಜಿಯ ಮೇಲೂ ನ್ಯಾಯಾಲಯ ಆದೇಶ ನೀಡಿದೆ. ಮೇ 6 ರಂದು ಇಡಿ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಮೊದಲ ಬಾರಿಗೆ ಮನೀಶ್ ಸಿಸೋಡಿಯಾ ಹೆಸರನ್ನು ಇಲ್ಲಿ ಉಲ್ಲೇಖಿಸಿದ್ದು ಆರೋಪಿ ಎಂದು ಹೆಸರಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ- ವಿಸ್ತೃತ ವರದಿ ಕೇಳಿದ ಸುಪ್ರೀಂ ಕೋರ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುರುತಿನ ಪುರಾವೆಗಳಿಲ್ಲದೇ 2,000 ರೂ. ನೋಟುಗಳ ವಿನಿಮಯ – ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

    ನವದೆಹಲಿ: ಯಾವುದೇ ಗುರುತಿನ ಪುರಾವೆಗಳಿಲ್ಲದೇ 2,000 ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಅವಕಾಶ ನೀಡುವ ಆರ್‌ಬಿಐ (Reserve Bank of India) ಮಾರ್ಗಸೂಚಿಗಳ ವಿರುದ್ಧ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸುಧಾಂಶು ಧುಲಿಯಾ ನೇತೃತ್ವದ ದ್ವಿ ಸದಸ್ಯ ಪೀಠ ಬೇಸಿಗೆ ರಜೆಯ ಬಳಿಕ ಈ ಅರ್ಜಿಯನ್ನು ಸಿಜೆಐ ಪೀಠದ ಮುಂದೆ ಪ್ರಸ್ತಾಪಿಸಬಹುದು ಎಂದು ಹೇಳಿದೆ.

    ಆರ್‍ಬಿಐ ನಿರ್ಧಾರವನ್ನು ಎತ್ತಿ ಹಿಡಿದ ದೆಹಲಿ ಹೈಕೋರ್ಟ್ (Delhi High Court) ತೀರ್ಪಿನ ವಿರುದ್ಧ ಅಶ್ವಿನಿ ಉಪಾಧ್ಯಾಯ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆರ್‌ಬಿಐ ಮಾರ್ಗಸೂಚಿಗಳು ಸ್ಪಷ್ಟವಾಗಿ ಅನಿಯಂತ್ರಿತವಾಗಿದೆ. ಅಲ್ಲದೇ ಅಪರಾಧಿಗಳು ಕಪ್ಪು ಹಣವನ್ನು ವಿನಿಮಯ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. 3 ದಿನಗಳಲ್ಲಿ 50,000 ಕೋಟಿ ರೂ. ವಿನಿಮಯವಾಗಿದೆ. ಇದು ವಿಶ್ವದಲ್ಲೇ ಮೊದಲ ಬಾರಿಗೆ ನಡೆಯುತ್ತಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

    ಕಪ್ಪು ಹಣ, ಖೋಟಾನೋಟು ಮತ್ತು ಮನಿ ಲಾಂಡರಿಂಗ್ ಎದುರಿಸಲು ಉದ್ದೇಶಿಸಿರುವ ಬಹು ಶಾಸನದ ಉದ್ದೇಶಗಳಿಗೆ ಹೈಕೋರ್ಟ್ ತೀರ್ಪು ವಿರುದ್ಧವಾಗಿದೆ. ಆರ್‌ಬಿಐ ಅಧಿಸೂಚನೆಯು ಭಾರತದಲ್ಲಿ ಕಾನೂನಿನ ನಿಯಮದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಜೆಯ ಸಮಯದಲ್ಲಿ ವಿಚಾರಣೆ ನಡೆಸಲು ಈ ಅರ್ಜಿ ಅರ್ಹವಾಗಿಲ್ಲ. ಬೇಸಿಗೆ ವಿರಾಮದ ನಂತರ ಮುಖ್ಯ ನ್ಯಾಯಾಧೀಶರ ಮುಂದೆ ವಿಷಯವನ್ನು ಪ್ರಸ್ತಾಪಿಸಬಹುದು ಎಂದು ಹೇಳಿತು. ಇದಕ್ಕೆ ಉತ್ತರಿಸಿದ ಉಪಾಧ್ಯಾಯ, ಅಲ್ಲಿಯವರೆಗೆ ಎಲ್ಲಾ ಕಪ್ಪು ಹಣವು ಬಿಳಿ ಹಣವಾಗಿರುತ್ತದೆ ಎಂದರು.

    ದೆಹಲಿ ಹೈಕೋರ್ಟ್ ಮೇ 29 ರಂದು ತನ್ನ ತೀರ್ಪಿನಲ್ಲಿ 2,000 ರೂ. ನೋಟುಗಳು ತಮ್ಮ ಉದ್ದೇಶವನ್ನು ಪೂರೈಸಿವೆ ಮತ್ತು ಅದನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ನೀತಿ ವಿಷಯವಾಗಿದ್ದು, ನ್ಯಾಯಾಲಯಗಳು ಮಧ್ಯಪ್ರವೇಶಿಸಬಾರದು ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿತ್ತು. ಇದನ್ನೂ ಓದಿ: ಎನ್‍ಐಎಯಿಂದ ಮರಣದಂಡನೆಗೆ ಮನವಿ- ಯಾಸಿನ್ ಮಲಿಕ್‍ಗೆ ಹೈಕೋರ್ಟ್ ನೋಟಿಸ್

  • ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

    ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

    ನವದೆಹಲಿ: `ಇಂಡಿಯಾ ದ ಮೋದಿ ಕ್ವೆಶ್ಚನ್’ (India: The Modi Question) ಸಾಕ್ಷ್ಯಚಿತ್ರದ ವಿರುದ್ಧ ದಾಖಲಾದ 10 ಸಾವಿರ ಕೋಟಿ ರೂ. ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ (Delhi High Court) ಸೋಮವಾರ ಬ್ರಿಟಿಷ್ ಬ್ರಾಡ್‍ಕಾಸ್ಟಿಂಗ್ ಕಂಪನಿಗೆ (BBC) ಸಮನ್ಸ್ ಜಾರಿ ಮಾಡಿದೆ.

    ಸಾಕ್ಷ್ಯಚಿತ್ರವು ಭಾರತ, ಅದರ ನ್ಯಾಯಾಂಗ ಮತ್ತು ಸ್ವತಃ ಪ್ರಧಾನಿಯ ಪ್ರತಿಷ್ಠೆಗೆ ಅಗೌರವ ತಂದಿದೆ ಎಂದು ಗುಜರಾತ್‌ (Gujarat) ಮೂಲದ ಜಸ್ಟಿಸ್ ಆನ್ ಟ್ರಯಲ್ (Justice on Trial) ಸಂಸ್ಥೆ ಆರೋಪಿಸಿದೆ. ಅಲ್ಲದೆ ಅದು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಸೆಪ್ಟೆಂಬರ್‍ನಲ್ಲಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

    ಸಾಕ್ಷ್ಯಚಿತ್ರವು ಮಾನಹಾನಿಕರ ವಿಷಯಗಳನ್ನು ಒಳಗೊಂಡಿದೆ. ದೇಶ, ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಭಾರತದ ಪ್ರಧಾನ ಮಂತ್ರಿಯ ವಿರುದ್ಧ ಪ್ರಚೋದನೆ ನೀಡುವಂತಹ ಅಂಶಗಳನ್ನು ಒಳಗೊಂಡಿವೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

    ಈ ಹಿಂದೆ ಬಿಜೆಪಿ (BJP) ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ಕುರಿತು ದೆಹಲಿಯ ಜಿಲ್ಲಾ ನ್ಯಾಯಾಲಯವು ಬಿಬಿಸಿಗೆ ಸಮನ್ಸ್ ಜಾರಿ ಮಾಡಿತ್ತು. ಭಾರತ ಸರ್ಕಾರವು ಸಾಕ್ಷ್ಯಚಿತ್ರವನ್ನು ನಿಷೇಧಿಸಿದೆ. ಆದರೆ ಸಾಕ್ಷ್ಯ ಚಿತ್ರವನ್ನು ವೀಕ್ಷಿಸಲು ವಿಕಿಪೀಡಿಯಾ ಲಿಂಕ್‍ಗಳನ್ನು ಒದಗಿಸುತ್ತಿದೆ. ಇಂಟರ್ನೆಟ್ ಆರ್ಕೈವ್‍ನಲ್ಲಿ ಇನ್ನೂ ಲಭ್ಯವಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು.

    ಆರ್‍ಎಸ್‍ಎಸ್ (RSS) ಮತ್ತು ವಿಎಚ್‍ಪಿ (VHP) ವಿರುದ್ಧ ಸಾಕ್ಷ್ಯಚಿತ್ರ ಅಥವಾ ಇತರ ಯಾವುದೇ ವಿಷಯವನ್ನು ಪ್ರಕಟಿಸದಂತೆ ತಡೆಯಲು ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ವಿರುದ್ಧ ತಡೆಯಾಜ್ಞೆ ನೀಡುವಂತೆ ಸಿಂಗ್ ಕೋರಿದ್ದರು. ಆ ಅರ್ಜಿಯ ವಿಚಾರಣೆ ಮೇ 26ರಂದು ನಡೆಸಲಿದೆ. ಇದನ್ನೂ ಓದಿ: ನೂತನ ಸರ್ಕಾರದಲ್ಲಿ ಸುಪ್ರೀಂಕೋರ್ಟ್ ವಕೀಲ ಸಂಕೇತ್ ಏಣಗಿಗೆ ಒಲಿಯಲಿದ್ಯಾ ಅಡ್ವೊಕೇಟ್ ಜನರಲ್ ಹುದ್ದೆ?