Tag: Delhi Liquor Policy Case

  • ಕೇಜ್ರಿವಾಲ್ ಜೈಲಿನಲ್ಲಿ ಕಡಿಮೆ ಕ್ಯಾಲರಿ ಆಹಾರ ಸೇವಿಸುತ್ತಿದ್ದಾರೆ: ದೆಹಲಿ ಸಿಎಸ್‌ಗೆ ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ ಪತ್ರ

    ಕೇಜ್ರಿವಾಲ್ ಜೈಲಿನಲ್ಲಿ ಕಡಿಮೆ ಕ್ಯಾಲರಿ ಆಹಾರ ಸೇವಿಸುತ್ತಿದ್ದಾರೆ: ದೆಹಲಿ ಸಿಎಸ್‌ಗೆ ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ ಪತ್ರ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಉದ್ದೇಶಪೂರ್ವಕವಾಗಿ ಜೈಲಿನಲ್ಲಿ ಕಡಿಮೆ ಕ್ಯಾಲರಿ ಇರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ (V.K.Saxena) ಹೇಳಿದ್ದಾರೆ.

    ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರ ಪ್ರಧಾನ ಕಾರ್ಯದರ್ಶಿ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇದರಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ತೂಕ ಕಳೆದುಕೊಳ್ಳಲು ಕಾರಣಗಳೇನು ಎಂದು ವಿವರಿಸಲಾಗಿದೆ. ಕಡಿಮೆ ಕ್ಯಾಲರಿಗಳ ಕಾರಣದಿಂದಾಗಿ ಕೇಜ್ರಿವಾಲ್ ಅವರು ತೂಕವನ್ನು ಕಳೆದುಕೊಳ್ಳುತ್ತಾರೆ. ಜೂನ್ 6 ರಿಂದ ಜುಲೈ 13 ರ ನಡುವೆ ಅವರು ಸರಿಯಾದ ಆಹಾರ ಸೇವಿಸಿಲ್ಲ. ಇದರಿಂದಾಗಿ ತೂಕ ಕಳೆದುಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು – ಆದರೂ ಇಲ್ಲ ಬಿಡುಗಡೆ ಭಾಗ್ಯ

    ಪತ್ರದಲ್ಲಿ ಜೈಲು ಅಧೀಕ್ಷಕರ ವರದಿಯನ್ನು ಉಲ್ಲೇಖಿಸಿದ್ದು, ಮುಖ್ಯಮಂತ್ರಿಗಳು ವೈದ್ಯರು ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ಸೇವಿಸದಿರುವ ಬಗ್ಗೆ ಎಲ್‌ಜಿ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಬರೆಯಲಾಗಿದೆ. ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲರಿ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ವರದಿ ಹೇಳುತ್ತದೆ. ವೈದ್ಯರು ನೀಡುವ ಡಯಟ್ ಚಾರ್ಟ್ ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.

    ಎಲ್‌ಜಿ ಕಚೇರಿ ಬರೆದಿರುವ ಪತ್ರಕ್ಕೆ ಆಮ್ ಆದ್ಮಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಇದೇನು ತಮಾಷೆ ಎಲ್‌ಜಿ ಸಾಹೇಬರೇ! ಯಾರಾದರೂ ರಾತ್ರಿಯಲ್ಲಿ ಸಕ್ಕರೆಯನ್ನು ಕಡಿಮೆ ಮಾಡುತ್ತಾರೆಯೇ? ಯಾವುದು ತುಂಬಾ ಅಪಾಯಕಾರಿ. ಎಲ್ಜಿ ಸರ್, ನಿಮಗೆ ಕಾಯಿಲೆಯ ಬಗ್ಗೆ ತಿಳಿದಿಲ್ಲದಿದ್ದರೆ. ನೀವು ಅಂತಹ ಪತ್ರವನ್ನು ಬರೆಯಬಾರದು ಎಂದು ಕುಟುಕಿದ್ದಾರೆ.

    ದೆಹಲಿ ಸರ್ಕಾರದ ಸಚಿವೆ ಅತಿಶಿ ಮಾತನಾಡಿ, ಬಿಜೆಪಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟ ಎಂಟು ಬಾರಿ 50ಕ್ಕಿಂತ ಕಡಿಮೆಯಾಗಿದೆ. ಕೋಮಾಕ್ಕೆ ಹೋಗಬಹುದು ಅಂತಹ ಪರಿಸ್ಥಿತಿಯಲ್ಲಿ, ಮಿದುಳಿನ ಸ್ಟ್ರೋಕ್ ಅಪಾಯವೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ – ಅರವಿಂದ್ ಕೇಜ್ರಿವಾಲ್‍ಗೆ ಮಧ್ಯಂತರ ಜಾಮೀನು

    ಈ ಬಗ್ಗೆ ಬಿಜೆಪಿ ನಾಯಕ ವೀರೇಂದ್ರ ಸಚ್‌ದೇವ್ ಪ್ರತಿಕ್ರಿಯಿಸಿ, ತಿಹಾರ್ ಜೈಲಿನ ಅಧೀಕ್ಷಕರ ಪತ್ರ ಸಾರ್ವಜನಿಕವಾಗಿದೆ. ನ್ಯಾಯಾಲಯದ ಆದೇಶದ ನಂತರ ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆಯಲ್ಲೇ ತಯಾರಿಸಿದ ಆಹಾರವನ್ನು ನೀಡಲಾಗುತ್ತದೆ. ಜೂನ್ 6 ಮತ್ತು ಜುಲೈ 13 ರ ನಡುವೆ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲರಿ ಆಹಾರ ಸೇವಿಸಿದ್ದಾರೆ. ಇದರಿಂದ ಅವರ ತೂಕ ಕಡಿಮೆಯಾಗುತ್ತದೆ. ಸಹಾನುಭೂತಿಗಾಗಿ ಅವರು ಜೈಲಿನಲ್ಲಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

  • ದೆಹಲಿ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು – ಆದರೂ ಇಲ್ಲ ಬಿಡುಗಡೆ ಭಾಗ್ಯ

    ದೆಹಲಿ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು – ಆದರೂ ಇಲ್ಲ ಬಿಡುಗಡೆ ಭಾಗ್ಯ

    ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi Liquor Policy Case) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇಡಿ ದಾಖಲಿಸಿದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ದೊರಕಿದ್ದು, ಸಿಬಿಐ ಪ್ರಕರಣ ಬಾಕಿ ಇರುವ ಹಿನ್ನೆಲೆ ಕೇಜ್ರಿವಾಲ್‌ಗೆ ಸದ್ಯ ಬಿಡುಗಡೆ ಭಾಗ್ಯವಿಲ್ಲ.

    ಇಡಿ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ಶುಕ್ರವಾರ ಆದೇಶ ನೀಡಿತು. ಮಧ್ಯಂತರ ಜಾಮೀನು ನೀಡಿದ ಪೀಠ, ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ ಪಿಎಂಎಲ್‌ಎ ಸೆಕ್ಷನ್ 19 ರ ಅಡಿಯಲ್ಲಿ ‘ಬಂಧನದ ಅಗತ್ಯತೆ’ ಕುರಿತ ಕಾನೂನು ಪ್ರಶ್ನೆಯನ್ನು ಎತ್ತಿರುವ ಹಿನ್ನೆಲೆ ಇದನ್ನು ವಿಸ್ತೃತ ಪೀಠವು ಪರಿಗಣಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತು. ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ – ಅರವಿಂದ್ ಕೇಜ್ರಿವಾಲ್‍ಗೆ ಮಧ್ಯಂತರ ಜಾಮೀನು

    ಬಂಧನ ಪ್ರಶ್ನಿಸಿರುವುದು ಜೀವನದ ಹಕ್ಕಿಗೆ ಸಂಬಂಧಿಸಿದೆ. ಇದನ್ನು ನಾವು ದೊಡ್ಡ ಪೀಠಕ್ಕೆ ವರ್ಗಾಯಿಸುತ್ತೇವೆ. ಮಧ್ಯಂತರ ಜಾಮೀನಿನ ಮೇಲೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಲು ನಾವು ನಿರ್ದೇಶಿಸುತ್ತೇವೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿತು.

    2021-22ರ ದೆಹಲಿ ಅಬಕಾರಿ ನೀತಿಯಲ್ಲಿ ಲೋಪದೋಷಗಳನ್ನು ಸೃಷ್ಟಿಸಲು ಮನೀಶ್ ಸಿಸೋಡಿಯಾ ಮತ್ತು ಇತರರು ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿತ್ತು. ಇದಕ್ಕಾಗಿ ನೂರು ಕೋಟಿ ಕಿಕ್ ಬ್ಯಾಕ್ ಪಡೆದಿದ್ದು, ಇದರಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಇಡಿ ಆರೋಪಿಸಿತ್ತು. ಇದನ್ನೂ ಓದಿ: ನೇಪಾಳದ ಹೆದ್ದಾರಿಯಲ್ಲಿ ಭೂಕುಸಿತ – ಬಸ್‍ಗಳಲ್ಲಿದ್ದ 6 ಮಂದಿ ಭಾರತೀಯರು ಸೇರಿ 65 ಪ್ರಯಾಣಿಕರು ಕಣ್ಮರೆ

    ಕೇಜ್ರಿವಾಲ್ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಲು ಇಡಿ ಈಗ ಉಲ್ಲೇಖಿಸಿರುವ ಮಾಹಿತಿ ಅವರ ಬಂಧನದ ಸಮಯದಲ್ಲಿ ಇರಲಿಲ್ಲ ಮತ್ತು ನಂತರ ಹಾಜರುಪಡಿಸಲಾಗಿದೆ ಎಂದು ವಾದಿಸಿದರು. ಇಡಿ ಪರ ವಾದಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಬಂಧನದ ಸಮಯದಲ್ಲಿ ಆರೋಪಿಯ ವಿರುದ್ಧ ಇಡಿ ಹೊಂದಿರುವ ದೋಷಾರೋಪಣೆ ವಸ್ತುಗಳನ್ನು ಪೂರೈಸುವ ಅಗತ್ಯವಿಲ್ಲ ಎಂದಿದ್ದರು‌.

  • ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್‌ ಜೈಲಿಗೆ ವಾಪಸ್

    ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್‌ ಜೈಲಿಗೆ ವಾಪಸ್

    ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಇಂದು ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ.

    ದೆಹಲಿ ಮದ್ಯ ನೀತಿ ಹಗರಣದಲ್ಲಿ (Delhi Liquor Scam Case) ಕೇಜ್ರಿವಾಲ್‌ ಜೈಲು ಪಾಲಾಗಿದ್ದಾರೆ. ಚುನಾವಣೆ ಪ್ರಚಾರ ಕಾರಣಕ್ಕೆ ಮಧ್ಯಂತರ ಜಾಮೀನು ಮೇರೆಗೆ ಹೊರ ಬಂದಿದ್ದರು. ಚುನಾವಣಾ ಪ್ರಚಾರಕ್ಕಾಗಿ ಕೋರ್ಟ್‌ ಜಾಮೀನು ನೀಡಿತ್ತು. ನಿನ್ನೆಗೆ ಜಾಮೀನು ಅವಧಿ ಅಂತ್ಯಗೊಂಡಿದೆ. ಈ ಹಿನ್ನೆಲೆ ಇಂದು ತಿಹಾರ್ ಜೈಲಿಗೆ ದೆಹಲಿ ಸಿಎಂ ಮರಳಲಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ

    ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್‌ ಈಚೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.

    ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿಯ ವಿಚಾರಣೆ ಜೂನ್ 5 ರಂದು ನಡೆಯಲಿದೆ. ಎಎಪಿ ನಾಯಕ ಶರಣಾಗಲು ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಡುಗಳ್ಳ ವೀರಪ್ಪನ್ ಕೊಂದಿದ್ದ ಪೊಲೀಸ್ ಅಧಿಕಾರಿ ನಿವೃತ್ತಿ ಹಿಂದಿನ ದಿನವೇ ಸಸ್ಪೆಂಡ್

    ಮರುದಿನ, ಶರಣಾಗಲು ನಾನು ಮಧ್ಯಾಹ್ನ 3 ಗಂಟೆಗೆ ನನ್ನ ಮನೆಯಿಂದ ಹೊರಡುತ್ತೇನೆ. ನಾವು ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದೇವೆ. ನಾನು ದೇಶಕ್ಕಾಗಿ ನನ್ನ ಪ್ರಾಣವನ್ನು ತ್ಯಾಗ ಮಾಡಬೇಕಾದರೆ, ಶೋಕಿಸಬೇಡಿ ಎಂದು ಕೇಜ್ರಿವಾಲ್ ಸಾರ್ವಜನಿಕ ಭಾಷಣದಲ್ಲಿ ಮಾತನಾಡಿದ್ದರು.

  • ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

    ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಜಾಮೀನು ವಿಸ್ತರಣೆ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್‌ನ (Supreme Court) ರಜಾಕಾಲದ ಪೀಠವು ಮಂಗಳವಾರ ನಿರಾಕರಿಸಿತು. ಅರ್ಜಿಯ ಪಟ್ಟಿಯನ್ನು ವಿಚಾರಣೆಗೆ ಹೆಚ್ಚಿನ ನಿರ್ದೇಶನಕ್ಕಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಕಳುಹಿಸಿದೆ ಎಂದು ತಿಳಿಸಿದೆ.

    ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ವೈದ್ಯಕೀಯ ಕಾರಣಗಳಿಗಾಗಿ ಜೂನ್ 1 ರಂದು ಮುಕ್ತಾಯಗೊಳ್ಳಲಿರುವ ಅವರ ಮಧ್ಯಂತರ ಜಾಮೀನಿಗೆ ಏಳು ದಿನಗಳ ವಿಸ್ತರಣೆಯನ್ನು ಕೋರಿದ್ದರು. ಇದರ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದನ್ನೂ ಓದಿ: ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?

    ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಜೆ.ಕೆ.ಮಹೇಶ್ವರಿ ಮತ್ತು ಕೆ.ವಿ.ವಿಶ್ವನಾಥನ್ ಅವರ ರಜಾಕಾಲದ ಪೀಠ ತುರ್ತು ವಿಚಾರಣೆಗೆ ನಿರಾಕರಿಸಿತು. ಪ್ರಕರಣವನ್ನು ನಾವು ಆಲಿಸಿದ್ದೇವೆ. ಆದರೆ ಇದನ್ನು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತರಬೇಕಾಗಿದೆ. ಈ ಹಿನ್ನೆಲೆ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಪೀಠ ತಿಳಿಸಿತು.

    ಇದೇ ವೇಳೆ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದಾಗ, ಇದನ್ನು ಏಕೆ ಉಲ್ಲೇಖಿಸಲಿಲ್ಲ ಎಂದು ಪೀಠವು ಕೇಳಿತು. ಇದಕ್ಕೆ ಉತ್ತರಿಸಿದ ವಕೀಲ ಸಿಂಘ್ವಿ, ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ವರದಿಯನ್ನು ಪಡೆದ ಬಳಿಕ ಜಾಮೀನು ವಿಸ್ತರಣೆ ಅರ್ಜಿಯನ್ನು ಏಳು ದಿನಗಳ ವರೆಗೆ ವಿಸ್ತರಿಸಲು ನಿರ್ಧರಿಸಿ ಅರ್ಜಿ ಸಲ್ಲಿಸಲಿದೆ. ಹೀಗಾಗಿ ಸ್ವಲ್ಪ ಸಮಯ ತೆಗೆದುಕೊಂಡಿತು ಎಂದು ಹೇಳಿದರು. ಅದಾಗ್ಯೂ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆಗೊಂಡಿದೆ. ಇದನ್ನೂ ಓದಿ: ಪಾಕ್‌ ಪರಿಸ್ಥಿತಿ ಕೆಟ್ಟದ್ದಾಗಿದೆ, ಮೊದಲು ನಿಮ್ಮದನ್ನು ನೋಡಿಕೊಳ್ಳಿ – ಪಾಕ್‌ ಮಾಜಿ ಸಚಿವರ ಟ್ವೀಟ್‌ಗೆ ಕೇಜ್ರಿವಾಲ್‌ ತಿರುಗೇಟು

  • ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

    ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

    ನವದೆಹಲಿ: ಮದ್ಯ ನೀತಿ ಹಗರಣದಲ್ಲಿ ಬಂಧನಕೊಳ್ಳಗಾಗಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) 50 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ಕೇಂದ್ರದ ವಿರುದ್ಧ ಗುಡುಗಿದ್ದಾರೆ. ಸರ್ವಾಧಿಕಾರದ ವಿರುದ್ಧ ಹೋರಾಡಬೇಕಿದೆ ಎಂದು ಹೇಳಿದ್ದಾರೆ.

    ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ನನಗೆ ನಿಮ್ಮ ಆಶೀರ್ವಾದವನ್ನು ನೀಡಿದ್ದೀರಿ. ನಾನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರಿಂದಲೇ ನಾನು ನಿಮ್ಮ ಮುಂದೆ ಇದ್ದೇನೆ. ನಾವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

    ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಮೇಲೆ ಶುಕ್ರವಾರ ಸಂಜೆ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿನಲ್ಲಿದ್ದ 50 ದಿನಗಳ ನಂತರ ಹೊರಬಂದಿದ್ದಾರೆ.

    ಜೂ.1 ರ ವರೆಗೆ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಮೇ 25 ರಂದು ದೆಹಲಿಯ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್‌ ಪರ ಕೇಜ್ರಿವಾಲ್‌ ಪ್ರಚಾರ ಮಾಡಲಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು- ಸುಪ್ರೀಂ ವಿಧಿಸಿದ ಷರತ್ತುಗಳೇನು..?

  • ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ- ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಯಾವುದೇ ನಿರ್ಣಯಗಳನ್ನು ಕೈಗೊಳ್ಳುವಂತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡುವಂತಿಲ್ಲ ಎಂದು ಷರತ್ತು ವಿಧಿಸಿರುವ ಕೋರ್ಟ್ ಕೇವಲ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು ಎಂದು ಹೇಳಿದೆ.

    ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ. ಅಲ್ಲಿವರೆಗೂ ಜಾಮೀನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಕೋರ್ಟ್ ಕಡೆಯ ಹಂತದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಜೂನ್ 31 ರ ಪ್ರಚಾರಕ್ಕೆ ಕಡೆಯ ದಿನವಾಗಿದ್ದು, ಈ ಹಿನ್ನೆಲೆ ಜೂನ್ 1 ರ ವರೆಗೂ ಜಾಮೀನು ಮಂಜೂರು ಮಾಡಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಇದನ್ನೂ ಓದಿ: ಪಾಕ್‌ ಸಹ ಅಣುಬಾಂಬ್‌ ಹೊಂದಿದೆ, ಕೆರಳಿಸಿದ್ರೆ ಭಾರತದ ಮೇಲೆ ಎಸೆಯುತ್ತಾರೆ: ಕಾಂಗ್ರೆಸ್‌ ಮಾಜಿ ಸಚಿವ ಪ್ರಚೋದನಕಾರಿ ಹೇಳಿಕೆ!

    ಕೇಜ್ರಿವಾಲ್ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ ಇಡಿ
    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿತ್ತು. ಅಫಿಡೆವಿಟ್‌ನಲ್ಲಿ ಚುನಾವಣಾ ಪ್ರಚಾರದ ಹಕ್ಕು ‘ಮೂಲಭೂತ ಹಕ್ಕಲ್ಲ’ ಎಂದು ಹೇಳಿತ್ತು.

    ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

    ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡೆವಿಟ್‌ನಲ್ಲಿ ಹೇಳಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ಅಸಹ್ಯಕರವಾಗಿದೆ ಎಂದು ಹೇಳಿತ್ತು.

  • ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹಾಗೂ ಬಿಆರ್‌ಎಸ್‌ ನಾಯಕಿ ಕೆ.ಕವಿತಾ (K.Kavitha) ಅವರಿಗೆ ಜೈಲೇ ಗತಿಯಾಗಿದೆ. ಇಬ್ಬರ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ವರೆಗೆ ವಿಸ್ತರಣೆಯಾಗಿದೆ.

    ಹೊಸ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧಿಸಲಾದ ವಿಪಕ್ಷಗಳ ನಾಯಕರಿಗೆ 14 ದಿನಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಿಸಲಾಗಿದೆ. ದೆಹಲಿಯ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್‌ ಮತ್ತು ಕವಿತಾರನ್ನು ಮುಂದಿನ ಮೇ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    ದೆಹಲಿ ಸಿಎಂ ಅವರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಮಾ.21 ಇಡಿ ತಮ್ಮನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಏ.15 ರಂದು ಅರ್ಜಿ ವಿಚಾರಣೆ ನಡೆಸಿತ್ತು. ಆದರೆ ಕೇಜ್ರಿವಾಲ್‌ಗೆ ತಕ್ಷಣ ಜೈಲಿನಿಂದ ಮುಕ್ತಿ ನೀಡಲು ನಿರಾಕರಿಸಿತು.

    ಆದರೆ ಕೇಜ್ರಿವಾಲ್‌ ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮೊದಲು ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟದ ಸದಸ್ಯನ ವಿರುದ್ಧ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ – ʻಮ್ಯಾಚ್‌ ಫಿಕ್ಸಿಂಗ್‌ʼ ಎಂದ ಕಾಂಗ್ರೆಸ್‌

    ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಕವಿತಾ ಅವರ ಜಾಮೀನು ಅರ್ಜಿ ವಿಚಾರಣೆಯು ಮೇ 2 ರಂದು ರೋಸ್‌ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವಾಜಾ ಅವರು ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ. ಇಡಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಾಗಲೇ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು.

  • ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

    ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

    ನವದೆಹಲಿ: ಹೊಸ ಮದ್ಯ ನೀತಿಯಲ್ಲಿ (Delhi Liquor Policy Case) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕೊಳ್ಳಪಟ್ಟಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ನ್ಯಾಯಾಂಗ ಬಂಧನವನ್ನು ಏ.26 ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ಹೊರಡಿಸಿದೆ.

    ಸಿಸೋಡಿಯಾ ಪರ ವಾದ ಮಂಡಿಸಿದ ವಕೀಲ ಮೋಹಿತ್ ಮಾಥುರ್, ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ವಿಳಂಬವಾಗಿದೆ. ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬೆನೊಯ್ ಬಾಬುಗೆ ಜಾಮೀನು ನೀಡಿರುವುದನ್ನು ಉಲ್ಲೇಖಿಸಿ, ಸಿಸೋಡಿಯಾ ಕೂಡಾ ಪ್ರಭಾವಿ ಸ್ಥಾನದಲ್ಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಣಕು ಮತದಾನದಲ್ಲಿ ಬಿಜೆಪಿಗೆ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆಗೆ ಹಲವು ಎಎಪಿ ನಾಯಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಪ್ರಕರಣದ ಪೂರ್ಣ ತನಿಖೆವರೆಗೂ ಜಾಮೀನು ನೀಡಬಾರದು ಎಂದು ವಾದಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಏಪ್ರಿಲ್ 26 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿತು.

  • ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

    ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

    ನವದೆಹಲಿ: ಇಡಿ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

    ನ್ಯಾ. ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠದ ಮುಂದೆ ಈ ಅರ್ಜಿಯನ್ನು ಪಟ್ಟಿ ಮಾಡಲಾಗಿದೆ. ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿ ವಿಚಾರಣೆ ಬಳಿಕ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ.

    ಈ ಮೊದಲು ತಮ್ಮ ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸ್ವರಣಾ ಕಾಂತ ಶರ್ಮಾ, ಇಡಿ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದ್ದರು. ಇದಾದ ಒಂದು ದಿನದ ನಂತರ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ ತಮ್ಮ ಮೇಲ್ಮನವಿಯನ್ನು ಆದಷ್ಟು ಬೇಗ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾರ್ಚ್ 21 ರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ನೀಡಿತು. ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

  • ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿ ಮೂರನೇ ಅರ್ಜಿ – ಅರ್ಜಿದಾರರನ್ನು ತರಾಟೆ ತೆಗೆದುಕೊಂಡ ಕೋರ್ಟ್; ದಂಡದ ಎಚ್ಚರಿಕೆ

    ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿ ಮೂರನೇ ಅರ್ಜಿ – ಅರ್ಜಿದಾರರನ್ನು ತರಾಟೆ ತೆಗೆದುಕೊಂಡ ಕೋರ್ಟ್; ದಂಡದ ಎಚ್ಚರಿಕೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲದಿಂದ ಬಂಧನಕ್ಕೊಳ್ಳಪಟ್ಟಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ದೆಹಲಿಯ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ನಿರ್ದೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದ ಆಮ್ ಆದ್ಮಿ ಪಕ್ಷದ (AAP) ಮಾಜಿ ಶಾಸಕರನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ಟೀಕಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸುಬ್ರಮೋನಿಯಂ ಪ್ರಸಾದ್ ನೇತೃತ್ವದ ಪೀಠ ಅರ್ಜಿದಾರರಾದ ಸಂದೀಪ್ ಕುಮಾರ್ ಅವರನ್ನ ತರಾಟೆಗೆ ತೆಗೆದುಕೊಂಡಿತು. ಈ ಹಿಂದೆ ಇಂತಹ ಎರಡು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಅದಾಗ್ಯೂ ನೀವು ಅರ್ಜಿ ಸಲ್ಲಿಸಿದ್ದೀರಿ. ಹೀಗಾಗಿ ನಿಮ್ಮ ಮೇಲೆ ಭಾರೀ ವೆಚ್ಚವನ್ನು ವಿಧಿಸಬೇಕು ಎಂದು ಕೋರ್ಟ್ ಹೇಳಿತು. ಇದನ್ನೂ ಓದಿ: ಕೇಂದ್ರ, ರಾಜ್ಯದ ನಡುವೆ ಸ್ಪರ್ಧೆ ಬೇಡ – ಬರ ಪರಿಹಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಸಲಹೆ

    Delhi High Court

    ಪ್ರಚಾರ ಹಿತಾಸಕ್ತಿ ಅರ್ಜಿಯಲ್ಲದೆ ಬೇರೇನೂ ಅಲ್ಲ ಎಂದ ಪೀಠ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು ಇದೇ ರೀತಿಯ ವಿಷಯಗಳನ್ನು ಆಲಿಸಿದೆ ಮತ್ತು ತಿರಸ್ಕರಿಸಿದೆ‌. ಇದೇ ರೀತಿಯ ಅರ್ಜಿಗಳನ್ನು ಆಲಿಸಿದ್ದರಿಂದ ಅಂತಿಮವಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಈ ಅರ್ಜಿಯನ್ನು ವರ್ಗಾಯಿಸಲಾಯಿತು.

    ಮಾರ್ಚ್ 28 ರಂದು, ಸುರ್ಜಿತ್ ಸಿಂಗ್ ಯಾದವ್ ಎಂಬಾತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ತಿರಸ್ಕರಿಸಿತ್ತು. ಕಾರ್ಯಾಂಗ ಮತ್ತು ಅಧ್ಯಕ್ಷರು ಸಮಸ್ಯೆಯನ್ನು ಪರಿಶೀಲಿಸಬೇಕು ಮತ್ತು ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆಗ ಹೇಳಿತ್ತು. ಏಪ್ರಿಲ್ 4 ರಂದು, ಹಿಂದೂ ಸೇನೆಯ ಅಧ್ಯಕ್ಷರಾದ ವಿಷ್ಣು ಗುಪ್ತಾ ಅವರ ಮತ್ತೊಂದು ಪಿಐಎಲ್ ಅನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು. ಸಿಎಂ ಆಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಕರೆ ಎಂದು ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ