Tag: Delhi Liquor Scam

  • ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ಬಂಧನ ಮಾಡಿದ್ಯಾಕೆ – ಇಡಿಗೆ ಸುಪ್ರೀಂ ಪ್ರಶ್ನೆ

    ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ಬಂಧನ ಮಾಡಿದ್ಯಾಕೆ – ಇಡಿಗೆ ಸುಪ್ರೀಂ ಪ್ರಶ್ನೆ

    ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi liquor Policy)  ತಮ್ಮ ಬಂಧನದ ಅವಧಿಯನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಮುಂದಿನ ವಿಚಾರಣೆ ವೇಳೆಗೆ ಐದು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಲು ತಯಾರಾಗಿ ಬರುವಂತೆ ಇಡಿ ಪರ ವಕೀಲರಿಗೆ ಸೂಚನೆ ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಪ್ರಕರಣದಲ್ಲಿ ಕೇಜ್ರಿವಾಲ್ ಹೇಗೆ ಸಂಬಂಧ ಹೊಂದಿದ್ದಾರೆ? ಮನೀಶ್ ಸಿಸೋಡಿಯಾ ಪ್ರಕರಣದಲ್ಲಿ ಎರಡು ಭಾಗಗಳಿವೆ. ಆ ಪೈಕಿ ಒಂದು ಅವರ ಪರವಾಗಿ ಮತ್ತೊಂದು ಅವರ ವಿರುದ್ಧವಾಗಿದೆ. ಇದರ ಯಾವ ಭಾಗದಲ್ಲಿ ಕೇಜ್ರಿವಾಲ್ ಇದ್ದಾರೆ ಇದಕ್ಕೆ ಉತ್ತರಿಸಬೇಕು ಎಂದು ಪೀಠ ಸೂಚಿಸಿದೆ. ಇದನ್ನೂ ಓದಿ: ವಿದೇಶದ ಮತದಾರರಿಗೆ ಭಟ್ಕಳ ಜಮಾತ್‍ಗಳಿಂದ ಗಾಳ- ವಿಮಾನ ಟಿಕೆಟ್ ಆಫರ್

    ಜಾಮೀನಿಗೆ ಅರ್ಜಿ ಸಲ್ಲಿಸುವ ಬದಲು ಕೇಜ್ರಿವಾಲ್ ಬಂಧನ ಮತ್ತು ರಿಮಾಂಡ್ ವಿರುದ್ಧ ಬರುತ್ತಿರುವ ಕಾರಣ ಪಿಎಂಎಲ್‍ಎ ಕಾಯ್ದೆಯ ಸೆಕ್ಷನ್ 19 ಅನ್ನು ಹೇಗೆ ಅರ್ಥೈಸಬೇಕು? ವಿಶೇಷವಾಗಿ ಸೆಕ್ಷನ್ 8ರ ತೀರ್ಪು ಪ್ರಕ್ರಿಯೆಗೆ 365 ದಿನಗಳ ಗರಿಷ್ಠ ಸಮಯದ ಮಿತಿಯನ್ನು ಸೂಚಿಸುತ್ತದೆ. ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ. ನಾವು ಅದನ್ನು ನಿರಾಕರಿಸಲು ಸಾಧ್ಯವಿಲ್ಲ ಈ ಬಗ್ಗೆ ನಿಲುವೇನು? ಎಲ್ಲಕ್ಕಿಂತ ಮುಖ್ಯವಾಗಿ ಚುನಾವಣೆ ಮುಂಚಿತವಾಗಿ ಅವರನ್ನು ಬಂಧಿಸಿದ್ದೇಕೆ ಎಂದು ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಪ್ರಶ್ನಿಸಿದೆ.

    ಇಡಿ ಪ್ರಶ್ನೆಗಳಿಗೂ ಮುನ್ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೇಜ್ರಿವಾಲ್ ಪರ ಎರಡು ಗಂಟೆಗೂ ಅಧಿಕ ಕಾಲ ಸುಧೀರ್ಘವಾಗಿ ವಾದ ಮಂಡಿಸಿದರು. ವಾದ ಆಲಿಸಿದ ಬಳಿಕ ನ್ಯಾಯಾಲಯ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ ಕಾಂಗ್ರೆಸ್ ಪತನ; ಮೊದಲ ಕಾಂಗ್ರೆಸ್ಸೇತರ ಸರ್ಕಾರ ತಂದ ಚುನಾವಣೆಯಲ್ಲಿ ಏನಾಯ್ತು?

  • ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್ – ನಾಳೆ ದೆಹಲಿಯಲ್ಲಿ ರೋಡ್ ಶೋ

    ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್ – ನಾಳೆ ದೆಹಲಿಯಲ್ಲಿ ರೋಡ್ ಶೋ

    ನವದೆಹಲಿ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Delhi CM Arvind Kejriwal) ಅವರ ಪತ್ನಿ ಸುನಿತಾ ಕೇಜ್ರಿವಾಲ್‌ (Sunitha Kejriwal) ಅವರನ್ನು ಲೋಕಸಭೆ ಚುನಾವಣಾ (Lok Sabha Election) ಪ್ರಚಾರ ಅಖಾಡಕ್ಕೆ ಇಳಿಸಲು ಆಪ್ (AAP) ನಿರ್ಧರಿಸಿದೆ.

    ದೆಹಲಿ ಮದ್ಯ ಹಗರಣ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನಾಳೆಯಿಂದ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಸುನೀತಾ ಕೇಜ್ರಿವಾಲ್ ಪ್ರಚಾರ ಆರಂಭಿಸುವ ಸಾಧ್ಯತೆ ಇದೆ. ಸುನೀತಾ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವುದು ಇದೇ ಮೊದಲು. ಇದಕ್ಕೂ ಮುನ್ನ ಅವರು ರಾಜಕೀಯವಾಗಿ ಗುರುತಿಸಿಕೊಂಡಿರಲಿಲ್ಲ. ಇದನ್ನೂ ಓದಿ: ಕಾರು ಅಪಫಾತ – ಶಾಸಕ ಎ.ಆರ್ ಕೃಷ್ಣಮೂರ್ತಿ ಅಪಾಯದಿಂದ ಪಾರು

    ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಸುನೀತಾ ಕೇಜ್ರಿವಾಲ್ ಅವರು ವೀಡಿಯೊ ಸಂದೇಶಗಳು ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಮುನ್ನಲೆಗೆ ಬಂದಿದ್ದಾರೆ. ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ವಿಪಕ್ಷಗಳು ನಡೆಸಿದ ಸಮಾವೇಶದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಇತ್ತಿಚೇಗೆ ಛತ್ತಿಸ್‌ಘಡದಲ್ಲಿ ನಡೆದ INDIA ಒಕ್ಕೂಟದ ಸಭೆಯಲ್ಲಿ ಅವರು ಪಕ್ಷವನ್ನು ಪ್ರತಿನಿಧಿಸಿದ್ದರು.  ಇದನ್ನೂ ಓದಿ: ಡೇಟಾ ಟ್ರಾಫಿಕ್‌- ಚೀನಾ ಕಂಪನಿ ಹಿಂದಿಕ್ಕಿದ ರಿಲಯನ್ಸ್‌

    ಈ‌ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದು ಇಡಿ (ED) ಈಗ ಅಫಿಡವಿಟ್ ಸಲ್ಲಿಸಿದೆ. 9 ಬಾರಿ ಸಮನ್ಸ್ ನೀಡಿದ್ದರೂ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಸಹಕರಿಸಲಿಲ್ಲ, ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು ಈ ಕಾರಣಕ್ಕೆ ಅವರನ್ನು ಬಂಧಿಸುವ ಅನಿವಾರ್ಯತೆ ಸೃಷ್ಟಿಯಾಯಿತು ಎಂದು ಹೇಳಿದೆ.

    ಅಕ್ರಮ ಹಣ ವರ್ಗಾವಣೆಯ ಅಪರಾಧದಲ್ಲಿ ತಪ್ಪಿತಸ್ಥನೆಂದು ಸಾಬೀತು ಪಡಿಸಲು ಇಡಿ ಬಳಿ ಸಾಕ್ಷ್ಯಗಳಿದೆ. ಕೇಜ್ರಿವಾಲ್ ಅವರನ್ನು ಪ್ರಾಮಾಣಿಕವಾಗಿ ಬಂಧಿಸಲಾಗಿದೆಯೇ ಹೊರತು ಯಾವುದೇ ದುರುದ್ದೇಶ ಅಥವಾ ಬಾಹ್ಯ ಕಾರಣಗಳಿಗಾಗಿ ಅಲ್ಲ ಎಂದ ಇಡಿ ದುರುದ್ದೇಶಪೂರ್ವಕವಾಗಿ ಬಂಧಿಸಿದೆ ಎನ್ನುವ ಆರೋಪ ನಿರಾಕರಿಸಿದೆ. ಈ ಅಂಶಗಳ ಮೇಲೆ ಕೋರ್ಟ್ ಶೀಘ್ರದಲ್ಲಿ ವಿಚಾರಣೆ ನಡೆಸಲಿದೆ.

     

  • ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

    ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

    ನವದೆಹಲಿ: ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಏ.29ಕ್ಕೆ ಮುಂದೂಡಿದೆ.

    ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ (ED) ನೋಟಿಸ್ ನೀಡಿದ್ದು ಏಪ್ರಿಲ್‌ 24 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.

    ದೆಹಲಿ ಮದ್ಯ ನೀತಿಯಲ್ಲಿ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಬಂಧಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಡಿ ಬಂಧನ‌ ಕಾನೂನು ವ್ಯಾಪ್ತಿಯಲ್ಲಿದೆ. ಪ್ರಕರಣವನ್ನು ರಾಜಕೀಯಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜ ವಜಾ ಮಾಡಿತ್ತು. ಇದನ್ನೂ ಓದಿ: ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ – ಏಕವಚನದಲ್ಲೇ ಹರಿಹಾಯ್ದ ಡಿಕೆಶಿ

    ಹೈಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಹಿನ್ನಲೆ ಕೇಜ್ರಿವಾಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಲು ನಿರಾಕರಿಸಿತು ಮತ್ತು ಇಡಿಗೆ ನೋಟಿಸ್ ಜಾರಿ ಮಾಡಿ ಸುದೀರ್ಘ ವಿಚಾರಣೆ ನಡೆಸುವುದಾಗಿ ಹೇಳಿತು.

    ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ, ಶುಕ್ರವಾರ ಸಣ್ಣ ದಿನಾಂಕವನ್ನು ಕೋರುತ್ತಿದ್ದೇನೆ ಈ ಪ್ರಕರಣದಲ್ಲಿ ಆಯ್ದ ಸೋರಿಕೆಗಳಿವೆ ಎಂದು ಹೇಳಿದರು. ಇದಕ್ಕೆ ಜಸ್ಟಿಸ್ ಖನ್ನಾ ನಿಮಗೆ ಒಂದು ಸಣ್ಣ ದಿನಾಂಕವನ್ನು ನೀಡುತ್ತೇನೆ ಆದರೆ ನೀವು ಸೂಚಿಸಿದ ದಿನಾಂಕ ಸಾಧ್ಯವಿಲ್ಲ ಎಂದು ಉತ್ತರಿಸಿದರು.

    ಬಳಿಕ ಕೇಜ್ರಿವಾಲ್ ಅವರನ್ನ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿ (ಇಸಿಐಆರ್) ಅಥವಾ ಚಾರ್ಜ್‌ಶೀಟ್‌ನಲ್ಲಿ ಬಂಧಿಸಿಲ್. ಬದಲಿಗೆ ಇತರೆ ಆರೋಪಿಗಳ 15 ಹೇಳಿಕೆಗಳ ಮೇಲೆ ಬಂಧಿಸಿದೆ. ಚುನಾವಣಾ ಪ್ರಚಾರದಿಂದ ತಪ್ಪಿಸಲು ಬಂಧನ ಮಾಡಲಾಗಿದೆ ಎಂದು ಸಿಂಘ್ವಿ ಹೇಳಿದರು.

    ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಏ. 23 ವರೆಗೂ ರೋಸ್ ಅವೆನ್ಯೂ ಕೋರ್ಟ್ ವಿಸ್ತರಿಸಿದೆ.

     

  • ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ

    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ

    ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳ್ಳಪಟ್ಟಿರುವ ಬಿಆರ್‌ಎಸ್ ನಾಯಕಿ, ತೆಲಂಗಾಲ ಪರಿಷತ್ ಸದಸ್ಯೆ ಕೆ.ಕವಿತಾಗೆ (K Kavitha) ಜಾಮೀನು ನೀಡಲು ದೆಹಲಿ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಏಪ್ರಿಲ್‌ 4 ರಂದು ಆದೇಶ ಕಾಯ್ದಿರಿಸಿದ ನ್ಯಾ.ಕಾವೇರಿ ಬವೇಜಾ ಅವರಿಂದು ತೀರ್ಪು ಪ್ರಕಟಿಸಿದ್ದಾರೆ.

    ಕಳೆದ ಮಾರ್ಚ್ 15 ರಂದು ಹೈದರಾಬಾದ್‌ನಲ್ಲಿ ಶೋಧ ನಡೆಸಿದ ಬಳಿಕ ಜಾರಿ ನಿರ್ದೇಶನಾಲಯ (ED) ಕೆ.ಕವಿತಾ ಅವರನ್ನ ಬಂಧಿಸಿತ್ತು. ವಿಚಾರಣೆ ಬಳಿಕ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಕವಿತಾ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಬಂಧನಕ್ಕೊಳ್ಳಪಟ್ಟಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮಾಜಿ ಡಿಸಿಎಂ ಮನೀಶ್ ಸಿಸೋಡಿಯ ಇದೇ ಜೈಲಿ‌ನಲ್ಲಿದ್ದಾರೆ. ಇದನ್ನೂ ಓದಿ: ಸಾಕ್ಷಿಗೆ ಸಂಗ್ರಹಿಸಿದ್ದ 10 ಕೆಜಿ ಗಾಂಜಾ, 9 ಕೆಜಿ ಭಾಂಗ್‌ ಇಲಿಗಳೇ ತಿಂದಿವೆ – ಕೋರ್ಟ್‌ಗೆ ವರದಿ ಸಲ್ಲಿಕೆ!

    ದೆಹಲಿಯಲ್ಲಿ ಜಾರಿ ಮಾಡಲು ಹೊರಟಿದ್ದ ಹೊಸ ಮಧ್ಯ ನೀತಿಯಲ್ಲಿ ಕೆಲವು ಮದ್ಯ ಲಾಬಿ ಗುಂಪುಗಳಿಗೆ ಲಾಭದಾಯಕವಾಗುವ ರೀತಿಯಲ್ಲಿ ಯೋಜನೆ ರೂಪಿಸುವ ಪಿತೂರಿಯ ಭಾಗವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮದ್ಯದ ವ್ಯಾಪಾರಿಗಳ ʻದಿ ಸೌತ್ ಗ್ರೂಪ್ʼ ಲಾಬಿಗೆ ಕವಿತಾ ಸಂಪರ್ಕ ಹೊಂದಿದ್ದಾರೆ ಎಂದು ಇಡಿ ಕೋರ್ಟ್ ವಿಚಾರಣೆ ವೇಳೆ ಹೇಳಿದೆ. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ

    ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ವಿಜಯ್ ನಾಯರ್ ಶರತ್ ರೆಡ್ಡಿ, ಕೆ ಕವಿತಾ ಮತ್ತು ಮಾಗುಂಟ ಶ್ರೀನಿವಾಸುಲು ಅವರ ನಿಯಂತ್ರಣದಲ್ಲಿರುವ ʻದಿ ಸೌತ್ ಗ್ರೂಪ್ʼನಿಂದ ಎಎಪಿ ನಾಯಕರ ಪರವಾಗಿ ಕನಿಷ್ಠ 100 ಕೋಟಿ ರೂ.ಗಳಷ್ಟು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೆ. ಕವಿತಾ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದು, ತೆಲಂಗಾಣದಲ್ಲಿ ನೆಲೆ ಸಾಧಿಸಲು ಕೇಂದ್ರ ಸರ್ಕಾರ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನವ್ರೂ ಬೇಕಾದ್ರೆ ಮೋದಿ ಫೋಟೊ ಬಳಸಿ ಪ್ರಚಾರ ಮಾಡ್ಲಿ: ರಾಧಾ ಮೋಹನ್ ದಾಸ್ ಅಗರ್ವಾಲ್

    ಕೆ.ಕವಿತಾ ಅವರ ಮೇಲಿನ ಆರೋಪಗಳೇನು?
    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ AAP ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.

  • ಭಾರತ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ

    ಭಾರತ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಬಂಧನ ವಿಚಾರವಾಗಿ ಟೀಕೆಗಳನ್ನು ವ್ಯಕ್ತಪಡಿಸಿ ಭಾರತದ ಕೆಂಗಣ್ಣಿಗೆ ಗುರಿಯಾಗಿ ಸಮನ್ಸ್‌ ಪಡೆದಿದ್ದ ಅಮೆರಿಕ (US) ಮತ್ತೆ ಪ್ರತಿಕ್ರಿಯೆ ನೀಡಿದೆ.

    ದೆಹಲಿ ಸಿಎಂ ಕೇಜ್ರಿವಾಲ್‌ ಬಂಧನ ಪ್ರಕರಣವನ್ನು ನಾವು ಗಮನಿಸಿದ್ದೇವೆ. ಇಂತಹ ಪ್ರಕರಣಗಳಲ್ಲಿ ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳ ಅಗತ್ಯವಿದೆ ಎಂದು ಯುಎಸ್‌ ಪುನರುಚ್ಚರಿಸಿದೆ. ತೆರಿಗೆ ಅಧಿಕಾರಿಗಳು ತಮ್ಮ ಕೆಲವು ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್‌ ಆರೋಪಗಳ ಬಗ್ಗೆಯೂ ನಮಗೆ ತಿಳಿದಿದೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್‌ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ನಿಧನ

    ಮುಂಬರುವ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಸವಾಲಾಗುವ ರೀತಿಯಲ್ಲಿ ತೆರಿಗೆ ಅಧಿಕಾರಿಗಳು ತಮ್ಮ ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪಗಳ ಬಗ್ಗೆ ನಮಗೆ ತಿಳಿದಿದೆ. ಈ ಪ್ರತಿಯೊಂದು ಸಮಸ್ಯೆಗಳಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ನಾವು ಪ್ರೋತ್ಸಾಹಿಸುತ್ತೇವೆ ಎಂದು ಮಿಲ್ಲರ್‌ ತಿಳಿಸಿದ್ದಾರೆ.

    ಭಾರತವು ದೆಹಲಿಯಲ್ಲಿ ಮಿಷನ್‌ನ ಹಂಗಾಮಿ ಡೆಪ್ಯುಟಿ ಚೀಫ್ ಗ್ಲೋರಿಯಾ ಬರ್ಬೆನಾ ಅವರನ್ನು ಕರೆಸಿದ್ದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಆದರೆ ನಾವು ಸಾರ್ವಜನಿಕವಾಗಿ ಹೇಳಿರುವುದನ್ನು ನಾನು ಇಲ್ಲಿ ಹೇಳಿದ್ದೇನೆ. ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ನಾವು ಪ್ರೋತ್ಸಾಹಿಸುತ್ತೇವೆ. ಇದಕ್ಕೆ ಯಾರೂ ವಿರೋಧಿಸಬಾರದು ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ

    ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಹಂಗಾಮಿ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ತನ್ನ ಕಚೇರಿಗೆ ಕರೆಸಿತ್ತು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಸಭೆ ನಡೆಯಿತು. ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ಎಂಇಎ, ಭಾರತದಲ್ಲಿ ಕೆಲವು ಕಾನೂನು ಪ್ರಕ್ರಿಯೆಗಳ ಬಗ್ಗೆ US ಸ್ಟೇಟ್ ಡಿಪಾರ್ಟ್‌ಮೆಂಟ್‌ನ ವಕ್ತಾರರ ಟೀಕೆಗಳಿಗೆ ನಾವು ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದೇವೆ ಎಂದು ತಿಳಿಸಿತ್ತು.

    “ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಈ ಜವಾಬ್ದಾರಿಯು ಸಹ ಪ್ರಜಾಪ್ರಭುತ್ವಗಳ ವಿಷಯದಲ್ಲಿ ಇನ್ನೂ ಹೆಚ್ಚಾಗಿರುತ್ತದೆ. ಇದು ಅನಾರೋಗ್ಯಕರ ಪೂರ್ವನಿದರ್ಶನಗಳನ್ನು ಸ್ಥಾಪಿಸಲು ಕೊನೆಗೊಳ್ಳಬಹುದು,” ಎಂದು ಹೇಳಿಕೆ ತಿಳಿಸಿದೆ.

  • ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ

    ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi Liquor Scam) ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

    ಕಳೆದ ಶುಕ್ರವಾರ ಹೈದರಾಬಾದ್‌ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಬಳಿಕ ಅವರನ್ನು ಬಂಧಿಸಿತ್ತು. ಕವಿತಾ (K Kavitha) ಬಂಧನದ ಬಳಿಕ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರುಪಡಿಸಿ ವಿಚಾರಣೆಗೆ ಹತ್ತು ದಿನಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಲಾಗಿತ್ತು. ಇಡಿ ವಾದ ಪುರಷ್ಕರಿಸಿದ ನ್ಯಾಯಲಯ ಮಾರ್ಚ್ 23ರವರೆಗೆ ಕವಿತಾ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ನೀಡಿತು. ಅಲ್ಲದೇ ಸಹೋದರ ಕೆಟಿಆರ್ ಮತ್ತು ಪತಿ ಅನಿಲ್ ಡಿ ಅವರನ್ನು ರಿಮಾಂಡ್ ಅವಧಿಯಲ್ಲಿ ಪ್ರತಿದಿನ ಸಂಜೆ 6-7ರ ನಡುವೆ ಅರ್ಧ ಗಂಟೆಗಳ ಕಾಲ ಭೇಟಿಯಾಗಲು ಅವಕಾಶ ನೀಡಿದೆ.

    ಈ ಮಧ್ಯೆ ವಿಚಾರಣೆ ವೇಳೆ ಕೆ.ಕವಿತಾ ಅವರು ನ್ಯಾಯಾಲಯದಲ್ಲಿ ತನ್ನ ಬಂಧನವನ್ನು ಅಕ್ರಮ ಎಂದು ಹೇಳಿದ್ದಾರೆ. ಇದು ಕಪೋಲಕಲ್ಪಿತ ಪ್ರಕರಣ, ನನ್ನನ್ನು ಅಕ್ರಮವಾಗಿ ಬಂಧಿಸಲಾಗಿದೆ. ಇದರ ವಿರುದ್ಧ ಹೋರಾಡುತ್ತೇನೆ ಎಂದಿದ್ದಾರೆ. ಈ ಬೆನ್ನಲ್ಲೇ ಅವರು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದು ಈ ಮಾಹಿತಿಯನ್ನು ಅವರ ವಕೀಲರ ತಂಡ ಖಚಿತಪಡಿಸಿದೆ. ಇದನ್ನೂ ಓದಿ: ಚುನಾವಣಾ ಬಾಂಡ್ ಪ್ರಕರಣ – ಅಸಮರ್ಪಕ ಮಾಹಿತಿ ನೀಡಿದ ಎಸ್‌ಬಿಐಗೆ ಮತ್ತೆ ಸುಪ್ರೀಂ ತರಾಟೆ

    ಕೆ.ಕವಿತಾ ಅವರ ಮೇಲಿನ ಆರೋಪಗಳೇನು?
    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ AAP ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ. ಇದನ್ನೂ ಓದಿ: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

    ಅಲ್ಲದೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಮಿತ್ ಅರೋರಾ 10ಕ್ಕೂ ಹೆಚ್ಚು ಬಾರಿ ಕವಿತಾಗೆ ದೂರವಾಣಿ ಕರೆ ಮಾಡಿದ್ದು, ಒಟ್ಟು 35 ಜನರನ್ನು ಸಂಪರ್ಕಿಸಲು ಅವರು ಪ್ರಯತ್ನಿಸಿದ್ದಾರೆ ಎಂದು ಇಡಿ ಹೇಳಿತ್ತು. ಕವಿತಾ, ಅಮಿತ್ ಅರೋರಾ ಅವರೊಂದಿಗೆ ಸಂವಹನ ನಡೆಸಲು ಫ್ಯಾನ್ಸಿ ನಂಬರ್‌ಗಳನ್ನು ಬಳಸಿದ್ದಾರೆ. ಪೈಕಿ ಎರಡು ಸಿಮ್‌ಗಳನ್ನು ಹೆಚ್ಚು ಬಳಸಿದ್ದು, ಈ ಬಗ್ಗೆ ಸಂಭಾಷಣೆ ನಡೆಸಲು ಅವರು ಹತ್ತಕ್ಕೂ ಹೆಚ್ಚು ಬಾರಿ IMEI ಅನ್ನು ಬದಲಾಯಿಸಿದ್ದಾರೆ. ತನಿಖೆ ವೇಳೆ ಫೋನ್‌ಗಳನ್ನು ಪರಿಶೀಲಿಸಿದಾಗ ಫೋನ್‌ಗಳಲ್ಲಿ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇಡಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಕೆ ಕವಿತಾ ಅವರ ಹೆಸರಿಸಿದೆ. ಅವರು ಮದ್ಯದ ಕಂಪನಿಯಾದ ಇಂಡೋಸ್ಪಿರಿಟ್ಸ್‌ನಲ್ಲಿ ಶೇ.65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಸಹ ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರಿಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

    ಏನಿದು ಮದ್ಯ ಹಗರಣ?
    ಪ್ರಕರಣದ ಆರೋಪಿಯಾಗಿರುವ ಮನೀಶ್ ಸಿಸೋಡಿಯಾ ಹಾಗೂ ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಪ್ರಾಧಿಕಾರದ ಅನುಮೋದನೆಯಿಲ್ಲದೇ ಪರವಾನಗಿದಾರರಿಗೆ ಅನುಕೂಲವಾಗುವಂತಹ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಸಿಸೋಡಿಯಾ ಆಪ್ತ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಕೆ.ಕವಿತಾ ಅವರ ನಿವಾಸ ಮೇಲೆ ಇಡಿ ದಾಳಿ ನಡೆಸಿ, ಬಂಧಿಸಿದೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

  • ದೆಹಲಿ ಮದ್ಯ ನೀತಿ ಹಗರಣ –  ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

    ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

    ಹೈದರಾಬಾದ್‌: ದೆಹಲಿ ಮದ್ಯ ನೀತಿ (Delhi Liquor Scam) ಹಗರಣದಲ್ಲಿ ಜಾರಿ ನಿರ್ದೇಶನಾಲಯ (ED) ಬಿಆರ್‌ಎಸ್‌ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್‌ (K Chandrachekhar Rao) ಅವರ ಪುತ್ರಿ ಕವಿತಾ (K Kavitha) ಅವರನ್ನು ಬಂಧಿಸಿದೆ.

    ಇಂದು ಕವಿತಾ ಅವರ ಹೈದರಾಬಾದ್‌ ನಿವಾಸದ ಮೇಲೆ ಇಡಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿತ್ತು. ಈ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಸಂಜೆ ವೇಳೆ ವಿಧಾನ ಪರಿಷತ್‌ ಸದಸ್ಯೆಯಾಗಿರುವ  ಕವಿತಾ ಅವರನ್ನು ಬಂಧಿಸಿದ್ದಾರೆ.  ಇದನ್ನೂ ಓದಿ: ರಾಜಕೀಯ ಪಕ್ಷಗಳಿಗೆ 1,368 ಕೋಟಿ ನೀಡಿದ ಲಾಟರಿ ಕಿಂಗ್‌ ಪಿನ್‌ ಮಾರ್ಟಿನ್‌ ಯಾರು?

    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎಎಪಿ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.

    ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರ ಆಪ್ತ ಸಹಾಯಕ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಮಿತ್ ಅರೋರಾ 10ಕ್ಕೂ ಹೆಚ್ಚು ಬಾರಿ ಕವಿತಾಗೆ ದೂರವಾಣಿ ಕರೆ ಮಾಡಿದ್ದು, ಒಟ್ಟು 35 ಜನರನ್ನು ಸಂಪರ್ಕಿಸಲು ಅವರು ಪ್ರಯತ್ನಿಸಿದ್ದಾರೆ ಎಂದು ಇಡಿ ಹೇಳಿತ್ತು. ಇದನ್ನೂ ಓದಿ: ಮಂಡ್ಯದಿಂದ ಮತ್ತೆ ನಿಖಿಲ್‌ ಸ್ಪರ್ಧೆ? – ಮಾರ್ಚ್‌ 25ಕ್ಕೆ ಘೋಷಣೆ ಸಾಧ್ಯತೆ

    ಕೆ.ಕವಿತಾ ಅಮಿತ್ ಅರೋರಾ ಅವರೊಂದಿಗೆ ಸಂವಹನ ನಡೆಸಲು ಫ್ಯಾನ್ಸಿ ನಂಬರ್‌ಗಳನ್ನು ಬಳಸಿದ್ದಾರೆ. ಪೈಕಿ ಎರಡು ಸಿಮ್‌ಗಳನ್ನು ಹೆಚ್ಚು ಬಳಸಿದ್ದು, ಈ ಬಗ್ಗೆ ಸಂಭಾಷಣೆ ನಡೆಸಲು ಅವರು ಹತ್ತಕ್ಕೂ ಹೆಚ್ಚು ಬಾರಿ IMEI ಅನ್ನು ಬದಲಾಯಿಸಿದ್ದಾರೆ. ತನಿಖೆ ವೇಳೆ ಫೋನ್‌ಗಳನ್ನು ಪರಿಶೀಲಿಸಿದಾಗ ಫೋನ್‌ಗಳಲ್ಲಿ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

    ಇಡಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಕೆ ಕವಿತಾ ಅವರ ಹೆಸರಿಸಿದೆ. ಅವರು ಮದ್ಯದ ಕಂಪನಿಯಾದ ಇಂಡೋಸ್ಪಿರಿಟ್ಸ್‌ನಲ್ಲಿ ಶೇ.65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.

    ಏನಿದು ಮದ್ಯ ಹಗರಣ?
    ಪ್ರಕರಣದ ಆರೋಪಿಯಾಗಿರುವ ಮನೀಶ್ ಸಿಸೋಡಿಯಾ ಹಾಗೂ ಇತರರು 2021-22 ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಪ್ರಾಧಿಕಾರದ ಅನುಮೋದನೆಯಿಲ್ಲದೇ ಪರವಾನಗಿದಾರರಿಗೆ ಅನುಕೂಲವಾಗುವಂತಹ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಸಿಸೋಡಿಯಾ ಆಪ್ತ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ ಎಂಬ ಆರೋಪ ಬಂದಿದೆ.

  • ದೆಹಲಿ ಮದ್ಯನೀತಿ ಹಗರಣ – KCR ಪುತ್ರಿ ಕವಿತಾಗೆ ED ಸಮನ್ಸ್

    ದೆಹಲಿ ಮದ್ಯನೀತಿ ಹಗರಣ – KCR ಪುತ್ರಿ ಕವಿತಾಗೆ ED ಸಮನ್ಸ್

    ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ (Telangana CM) ಕೆ ಚಂದ್ರಶೇಖರ್ ರಾವ್ (K Chandrashekar Rao) ಅವರ ಪುತ್ರಿ ಹಾಗೂ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ ಕವಿತಾ (K Kavitha) ಅವರಿಗೆ ದೆಹಲಿಯ ಅಬಕಾರಿ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ (ED) ಗುರುವಾರ ಹಾಜರಾಗುವಂತೆ ಸಮನ್ಸ್ ನೀಡಿದೆ.

    ಇದೀಗ ರದ್ದಾಗಿರುವ ದೆಹಲಿಯ ಮದ್ಯನೀತಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿರುವುದಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಇಡಿ ಸೋಮವಾರ ವಿಚಾರಣೆ ನಡೆಸಿ, ಮಂಗಳವಾರ ಬಂಧಿಸಿತ್ತು. ಪಿಳ್ಳೈ ಮದ್ಯನೀತಿ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕವಿತಾಗೆ ಕಂಪನಿಯೊಂದರಲ್ಲಿ ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

    ಇಡಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಕೆ ಕವಿತಾ ಅವರನ್ನು ಹೆಸರಿಸಿದೆ. ಅವರು ಮದ್ಯದ ಕಂಪನಿಯಾದ ಇಂಡೋಸ್ಪಿರಿಟ್ಸ್‌ನಲ್ಲಿ ಶೇ.65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ವರ್ಷ ಡಿಸೆಂಬರ್ 11ರಂದು ಇಡಿ ಕವಿತಾ ಅವರನ್ನು ಪ್ರಶ್ನಿಸಿತ್ತು.

    ಮಾರ್ಚ್ 10ರಂದು ಮಹಿಳಾ ಮೀಸಲಾತಿ ಮಸೂದೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕವಿತಾ ಕರೆ ನೀಡಿದ್ದಾರೆ ಹಾಗೂ ಪ್ರತಿಪಕ್ಷದ ಪಾಳೆಯದ ಎಲ್ಲಾ ನಾಯಕರು ಭಾಗವಹಿಸಲು ವಿನಂತಿಸಿದ್ದಾರೆ. ಆದರೆ ಈ ನಡುವೆ ಇಡಿ ಕವಿತಾ ಅವರಿಗೆ ಸಮನ್ಸ್ ನೀಡಿದ್ದು, ಮಾರ್ಚ್ 9ರಂದು ಇಡಿ ಕಚೇರಿಗೆ ಅವರು ಹಾಜರಾಗಬೇಕಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಡಳಿತ ಸಿದ್ಧತೆ

  • ಸಿಬಿಐ ಬೆನ್ನಲ್ಲೇ ಇಡಿ ಸಂಕಷ್ಟ – ತಿಹಾರ್ ಜೈಲಿನಲ್ಲಿ Manish Sisodia ವಿಚಾರಣೆ

    ಸಿಬಿಐ ಬೆನ್ನಲ್ಲೇ ಇಡಿ ಸಂಕಷ್ಟ – ತಿಹಾರ್ ಜೈಲಿನಲ್ಲಿ Manish Sisodia ವಿಚಾರಣೆ

    ನವದೆಹಲಿ: ಅಬಕಾರಿ ನೀತಿ ಹಗರಣ (Delhi Excise Policy Scam) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸಿಬಿಐ (CBI) ವಿಚಾರಣೆ ಬೆನ್ನಲ್ಲೇ ಇಡಿ ಅಧಿಕಾರಗಳು ಸಿಸೋಡಿಯಾರಿಂದ ಮಾಹಿತಿ ಪಡೆಯುತ್ತಿದ್ದಾರೆ.

    ಇಂದು ಬೆಳಗ್ಗೆ ತಿಹಾರ್ ಜೈಲು (Tihar Jail) ತಲುಪಿದ ಇಡಿ ಅಧಿಕಾರಿಗಳ ತಂಡ, ಮನೀಶ್ ಸಿಸೋಡಿಯಾ ವಿಚಾರಣೆ ಆರಂಭಿಸಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧಿಸಿ ವಿಚಾರಣೆ ನಡೆಸಿರುವ ಇಡಿ ಈಗ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಇದನ್ನೂ ಓದಿ: ಆಪ್ ನಾಯಕ ಮನೀಶ್ ಸಿಸೋಡಿಯಾ ಜೈಲುಪಾಲು

    ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾದ ಮನೀಶ್ ಸಿಸೋಡಿಯಾ ಅವರನ್ನು ಏಳು ದಿನಗಳ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸೋಮವಾರ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ಅವರನ್ನು ಮಾರ್ಚ್ 20 ರವರೆಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಅರುಣ್ ಯುಕೆ ಟ್ರೇಡ್ ಹೈಕಮಿಷನ್ ಹೈದರಾಬಾದ್ ಜೊತೆಗಿದ್ದರು. ಮತ್ತು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರಿ, ಸಂಸದೆ ಕೆ. ಕವಿತಾ ಆಪ್ತರೂ ಎನ್ನಲಾಗುತ್ತಿದೆ. ಇದನ್ನೂ ಓದಿ: ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ಇಡೀ ಬೆಳವಣಿಗೆಗಳ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಬಡವರ ಮಕ್ಕಳು ಶ್ರೀಮಂತರ ಮಕ್ಕಳ ಸರಿಸಮವಾಗಿ ಓದಲು ಶುರು ಮಾಡಿದ್ದಾರೆ. ಅದಕ್ಕೆ ಮನೀಶ್ ಸಿಸೋಡಿಯಾ ಕಾರಣ. ದೇಶದಲ್ಲಿ ಆಸ್ಪತ್ರೆಗಳ ವ್ಯವಸ್ಥೆ ಸರಿ ಇಲ್ಲ. ಆದರೆ ದೆಹಲಿಯಲ್ಲಿ ಮೊಹಲ್ಲಾ‌ ಕ್ಲಿನಿಕ್ ಸ್ಥಾಪಿಸುವ ಬಗ್ಗೆ ವ್ಯವಸ್ಥೆಯನ್ನು ಸತ್ಯೇಂದ್ರ ಜೈನ್ ಬದಲಾಯಿಸಿದರು.

    ಸತ್ಯೇಂದ್ರ ಜೈನ್,‌ ಮನೀಶ್ ಸಿಸೋಡಿಯಾ ಮಹಾನ್ ದೇಶ ಭಕ್ತರು, ಅವರು ದೇಶಕ್ಕಾಗಿ ಜೀವ ಕೊಡಲು ಸಿದ್ದವಿದ್ದಾರೆ.‌ ಆದರೆ ಜನಪರ ಕೆಲಸ ಮಾಡುವ ನಾಯಕರನ್ನು ಮೋದಿ ಸರ್ಕಾರ ಜೈಲಿಗೆ ಕಳುಹಿಸಿದೆ. ಇದನ್ನೂ ಖಂಡಿಸಿ, ದೇಶದ ಒಳಿತಿಗಾಗಿ ಹೋಳಿಯ ದಿನದಂದು ಇಡೀ ದಿನ ಪೂಜೆ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮನೀಶ್ ಸಿಸೋಡಿಯಾ