Tag: Delhi-Mumbai Expressway

  • ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇ ಸ್ವಚ್ಛಗೊಳಿಸುತ್ತಿದ್ದಾಗ ಪಿಕಪ್ ಡಿಕ್ಕಿ – 6 ಮಂದಿ ಸ್ವಚ್ಛತಾ ಸಿಬ್ಬಂದಿ ಸಾವು

    ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇ ಸ್ವಚ್ಛಗೊಳಿಸುತ್ತಿದ್ದಾಗ ಪಿಕಪ್ ಡಿಕ್ಕಿ – 6 ಮಂದಿ ಸ್ವಚ್ಛತಾ ಸಿಬ್ಬಂದಿ ಸಾವು

    – ಐವರಿಗೆ ಗಂಭೀರ ಗಾಯ

    ನವದೆಹಲಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇಯ (Delhi-Mumbai Expressway) ಒಂದು ಭಾಗವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ವೇಗವಾಗಿ ಬಂದ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ವಚ್ಛತಾ ಸಿಬ್ಬಂದಿ (Sanitation Workers) ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ನುಹ್ ಹರಿಯಾಣದ (Nuh Haryana) ಫಿರೋಜ್‌ಪುರ್ ಝಿರ್ಕಾದ ಇಬ್ರಾಹಿಂ ಬಾಸ್ ಗ್ರಾಮದ ಬಳಿ ನಡೆದಿದೆ.

    ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಪಿಕಪ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಆರು ಮಹಿಳೆಯರು ಸಾವನ್ನಪ್ಪಿದ್ದು, ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಕಾರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿ ಮಹಿಳೆಯ ದರ್ಪ

    ಪ್ರಾಥಮಿಕ ತನಿಖೆಯ ಪ್ರಕಾರ, ಸಾವನ್ನಪ್ಪಿದ ಕಾರ್ಮಿಕರಲ್ಲಿ ಐದು ಮಂದಿ ಖೇರಿ ಕಲಾನ್ ಗ್ರಾಮಕ್ಕೆ ಸೇರಿದವರು ಮತ್ತು ಒಬ್ಬರು ಜಿಮ್ರಾವತ್ ಗ್ರಾಮಕ್ಕೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ: ಸಿದ್ದರಾಮಯ್ಯ

    ದೆಹಲಿಯಿಂದ ಅಲ್ವಾರ್ ಕಡೆಗೆ ವೇಗವಾಗಿ ಹೋಗುತ್ತಿದ್ದ ಪಿಕಪ್ ನಿಯಂತ್ರಣ ತಪ್ಪಿ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: AIಯೇ ಅಂತಿಮ ಅಲ್ಲ: ಹೆಚ್‌.ಆರ್‌.ರಂಗನಾಥ್‌

  • ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ ಸಿಕ್ಕಿಬಿದ್ರೆ 5 ಸಾವಿರ ದಂಡ

    ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ ಸಿಕ್ಕಿಬಿದ್ರೆ 5 ಸಾವಿರ ದಂಡ

    ನವದೆಹಲಿ: ದೇಶದ ಅತಿ ಉದ್ದದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Mumbai Expressway) ದ್ವಿಚಕ್ರ ವಾಹನ ಸವಾರರು ( Two-Wheelers) ಸಿಕ್ಕಿಬಿದ್ದರೆ 5 ಸಾವಿರ ರೂ. ದಂಡವನ್ನು ವಿಧಿಸಲಾಗುತ್ತದೆ.

    ಪ್ರಧಾನಿ ಮೋದಿ (PM Modi) ಫೆ.15 ಎಂದು ಮುಂಬೈ- ದೆಹಲಿ ಎಕ್ಸ್‌ಪ್ರೆಸ್‌ವೇಯ ಮೊದಲ ಹಂತವಾದ 246 ಕಿ.ಮೀ ಉದ್ದದ ರಸ್ತೆಯನ್ನು ಲೋಕಾರ್ಪಣೆ ಮಾಡಿದ್ದರು. ಲೋಕಾರ್ಪಣೆಯಾದ ಬಳಿಕ ಬೈಕ್‌ ಸವಾರರು ಮತ್ತು ಸೈಕಲ್‌ ಸವಾರರು ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ರಸ್ತೆ ಪಿಕ್ನಿಕ್‌ ಸ್ಥಳವಾಗಿ ಬದಲಾಗಿದ್ದು ಗ್ರಾಮಸ್ಥರು ಬೇಲಿಯನ್ನು ಹಾರಿ ಎಕ್ಸ್‌ಪ್ರೆಸ್‌ವೇಗೆ ಇಳಿಯುತ್ತಿದ್ದಾರೆ.

    ಎಕ್ಸ್‌ಪ್ರೆಸ್‌ವೇಯಲ್ಲಿ ಗಂಟೆಗೆ ಗರಿಷ್ಠ 120 ಕಿ.ಮೀ ವೇಗದಲ್ಲಿ ಸಂಚಾರಕ್ಕೆ ಅನುಮತಿ ನೀಡಿದ್ದರೂ ವಾಹನಗಳು ಇದಕ್ಕಿಂತಲೂ ವೇಗದಲ್ಲಿ ಸಂಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಗರಿಷ್ಠ ಮಿತಿಗಿಂತಲೂ ಹೆಚ್ಚಿನ ವೇಗದಲ್ಲಿ ಸಂಚರಿಸಿದ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ.

    ಈ ದಂಡದ ಜೊತೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸಿದ ದ್ವಿಚಕ್ರ ವಾಹನಗಳಿಗೆ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಬುಧವಾರದಿಂದ ದಂಡ ವಿಧಿಸುವ ಪ್ರಕ್ರಿಯೆ ಆರಂಭಗೊಂಡಿದ್ದು ಅತಿ ವೇಗದ ಚಾಲನೆ ಸಂಬಂಧ 2 ಚಲನ್‌, ಲೇನ್‌ ಉಲ್ಲಂಘನೆ ಮಾಡಿದ್ದಕ್ಕೆ 2 ಚಲನ್‌ ನೀಡಲಾಗಿದೆ. ಇಬ್ಬರು ದ್ವಿಚಕ್ರ ವಾಹನ ಸವಾರರಿಗೆ 5 ಸಾವಿರ ರೂ. ದಂಡ ವಿಧಿಸಲಾಗಿದೆ.

    ಭಾರತದ ಎಲ್ಲಾ ಎಕ್ಸ್‌ಪ್ರೆಸ್‌ವೇಯಲ್ಲಿ 4 ಚಕ್ರ ಮತ್ತು ಅದಕ್ಕಿಂತ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಪದೇ ಪದೇ ಯೋಗಿ ವಿರುದ್ಧ ಕೇಸ್ ಹಾಕುತ್ತಿದ್ದ ವ್ಯಕ್ತಿಗೆ 1 ಲಕ್ಷ ರೂ. ದಂಡ

    ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 1,386 ಕಿಲೋಮೀಟರ್‌ಗಳ ಎಕ್ಸ್‌ಪ್ರೆಸ್‌ ಹೈವೇಯನ್ನು ಅತ್ಯಂತ ವೇಗವಾಗಿ ಪೂರ್ಣಗೊಳಿಸಲು ಮುಂದಾಗುತ್ತಿದೆ. ಇದರ ಮೊದಲ ಹಂತವಾಗಿ ಸಾಹ್ನಾ – ದೌಸಾ ಮಧ್ಯೆ ನಿರ್ಮಿಸಲಾದ ಹೆದ್ದಾರಿಯನ್ನು ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಇದರಿಂದಾಗಿ ದೆಹಲಿ-ಜೈಪುರ (Delhi-Jaipur) ನಡುವಿನ ಅಂತರ ಎರಡು ಗಂಟೆಗೆ ಇಳಿದಿದೆ. ಸದ್ಯ ದೆಹಲಿಯಿಂದ ಜೈಪುರಕ್ಕೆ ತೆರಳಲು ನಾಲ್ಕರಿಂದ ಐದು ಗಂಟೆ ಹಿಡಿಯುತ್ತಿದೆ. ಈ ಎಂಟು ಲೇನ್‍ಗಳ ಸಾಹ್ನಾ -ದೌಸಾ 246 ಕಿಲೋಮೀಟರ್ ಹೆದ್ದಾರಿಯನ್ನು 10,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

    ರಾಜಸ್ಥಾನ-ಹರಿಯಾಣ-ಮಧ್ಯಪ್ರದೇಶ-ಗುಜರಾತ್-ಮಹಾರಾಷ್ಟ್ರ ರಾಜ್ಯಗಳನ್ನು ಈ ಎಕ್ಸ್‌ಪ್ರೆಸ್‌ವೇ ಸಂಪರ್ಕಿಸುತ್ತದೆ. 2019ರ ಮಾರ್ಚ್ 9ರಂದು ಕಾಮಗಾರಿ ಆರಂಭಗೊಂಡಿದ್ದು ಈ ವರ್ಷಾಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

    ಈ ಯೋಜನೆಗೆ 5 ಸಾವಿರ ಹೆಕ್ಟೇರ್ ಭೂ ಸ್ವಾಧೀನ ಮಾಡಲಾಗಿದ್ದು 1 ಲಕ್ಷ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಪ್ರಯಾಣದ ಅವಧಿ 24 ಗಂಟೆಯಿಂದ 12 ಗಂಟೆಗೆ ಇಳಿಕೆಯಾಗಲಿದ್ದು ಈಗ ಇರುವುದಕ್ಕಿಂತ 180 ಕಿ.ಮೀ ಕಡಿಮೆಯಾಗಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೇಶದ ಅತಿದೊಡ್ಡ ಮುಂಬೈ- ದೆಹಲಿ ಎಕ್ಸ್‌ಪ್ರೆಸ್‌ವೇಗೆ ಮೋದಿ ಚಾಲನೆ

    ದೇಶದ ಅತಿದೊಡ್ಡ ಮುಂಬೈ- ದೆಹಲಿ ಎಕ್ಸ್‌ಪ್ರೆಸ್‌ವೇಗೆ ಮೋದಿ ಚಾಲನೆ

    ಜೈಪುರ: ರಾಜಸ್ಥಾನ  ಚುನಾವಣೆಯ ಸನಿಹದಲ್ಲಿ ದೇಶದ ಅತಿದೊಡ್ಡ ಮುಂಬೈ-ದೆಹಲಿ ಎಕ್ಸ್‌ಪ್ರೆಸ್‌ವೇಯ (Delhi-Mumbai Expressway) ಮೊದಲ ಹಂತವನ್ನು ಪ್ರಧಾನಿ ಮೋದಿ (PM Narendra Modi) ಲೋಕಾರ್ಪಣೆ ಮಾಡಿದ್ದಾರೆ.

    ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 1,386 ಕಿಲೋಮೀಟರ್‌ಗಳ ಎಕ್ಸ್‌ಪ್ರೆಸ್‌ ಹೈವೇಯನ್ನು ಅತ್ಯಂತ  ವೇಗವಾಗಿ ಪೂರ್ಣಗೊಳಿಸುತ್ತಿದೆ. ಇದರ ಮೊದಲ ಹಂತವಾಗಿ ಸಾಹ್ನಾ – ದೌಸಾ ಮಧ್ಯೆ ನಿರ್ಮಿಸಲಾದ ಹೆದ್ದಾರಿಯನ್ನು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

    ಇದರಿಂದಾಗಿ ದೆಹಲಿ-ಜೈಪುರ (Delhi-Jaipur) ನಡುವಿನ ಅಂತರ ಎರಡು ಗಂಟೆಗೆ ಇಳಿದಿದೆ. ಸದ್ಯ ದೆಹಲಿಯಿಂದ ಜೈಪುರಕ್ಕೆ ತೆರಳಲು ನಾಲ್ಕರಿಂದ ಐದು ಗಂಟೆ ಹಿಡಿಯುತ್ತಿದೆ. ಈ ಎಂಟು ಲೇನ್‍ಗಳ ಸಾಹ್ನಾ -ದೌಸಾ 246 ಕಿಲೋಮೀಟರ್ ಹೆದ್ದಾರಿಯನ್ನು 10,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

    ರಾಜಸ್ಥಾನ-ಹರಿಯಾಣ-ಮಧ್ಯಪ್ರದೇಶ-ಗುಜರಾತ್-ಮಹಾರಾಷ್ಟ್ರ ರಾಜ್ಯಗಳನ್ನು ಈ ಎಕ್ಸ್‌ಪ್ರೆಸ್‌ವೇ ಸಂಪರ್ಕಿಸುತ್ತದೆ. 2019ರ ಮಾರ್ಚ್ 9ರಂದು ಆರಂಭಗೊಂಡಿದ್ದು ಈ ವರ್ಷಾಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

    ಈ ಯೋಜನೆಗೆ 5 ಸಾವಿರ ಹೆಕ್ಟೇರ್ ಭೂ ಸ್ವಾಧೀನ ಮಾಡಲಾಗಿದ್ದು 1 ಲಕ್ಷ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಪ್ರಯಾಣದ ಅವಧಿ 24 ಗಂಟೆಯಿಂದ 12 ಗಂಟೆಗೆ ಇಳಿಕೆಯಾಗಲಿದ್ದು ಈಗ ಇರುವುದಕ್ಕಿಂತ 180 ಕಿ.ಮೀ ಕಡಿಮೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k