Tag: Delhi Murder

  • ಇನ್ಶೂರೆನ್ಸ್‌ ಏಜೆಂಟ್‌ ಕೊಲೆ ಮಾಡಿ ಚರಂಡಿಗೆ ಎಸೆದ ಕೇಸ್;‌ ಯುವತಿ, ಆಕೆಗೆ ನಿಶ್ಚಯವಾಗಿದ್ದ ವರ ಬಂಧನ

    ಇನ್ಶೂರೆನ್ಸ್‌ ಏಜೆಂಟ್‌ ಕೊಲೆ ಮಾಡಿ ಚರಂಡಿಗೆ ಎಸೆದ ಕೇಸ್;‌ ಯುವತಿ, ಆಕೆಗೆ ನಿಶ್ಚಯವಾಗಿದ್ದ ವರ ಬಂಧನ

    ನವದೆಹಲಿ: ಫರಿದಾಬಾದ್‌ನಲ್ಲಿ ವಿಮಾ ಏಜೆಂಟ್‌ನನ್ನು ಕೊಲೆ ಮಾಡಿ ಆತನ ದೇಹವನ್ನು ಚರಂಡಿಗೆ ಎಸೆದ ಆರೋಪದಲ್ಲಿ ಯುವತಿ ಮತ್ತು ಆಕೆಯ ನಿಶ್ಚಿತ ವರನನ್ನು ಬಂಧಿಸಲಾಗಿದೆ.

    ಚಂದರ್‌ ಕೊಲೆಯಾದ ವ್ಯಕ್ತಿ. ಪೊಲೀಸರು ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿಸಿದರು. ಈತ ನನಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಕಾರಣ ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಅರೆಸ್ಟ್‌

    ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಅವರ ಶವ ಪತ್ತೆಯಾಗಿತ್ತು. ಸಮೀಪದಲ್ಲಿ ನಿಲ್ಲಿಸಿದ್ದ ಬೈಕ್‌ನ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಶವವನ್ನು ಗುರುತಿಸಲಾಯಿತು. ಫರಿದಾಬಾದ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಚಂದರ್ ವಾಸಿಸುತ್ತಿದ್ದರು ಎಂದು ಪೊಲೀಸರು ಕಂಡುಕೊಂಡರು. ಅವರ ಕುಟುಂಬವನ್ನು ಸಂಪರ್ಕಿಸಿದರು. ಮೃತದೇಹದ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯದ ಗುರುತುಗಳಿದ್ದವು. ಚಂದರ್ ಅವರ ಸಹೋದರ ಮದನ್ ಗೋಪಾಲ್ ನೀಡಿದ ದೂರಿನ ನಂತರ, ಕೊಲೆ ಪ್ರಕರಣ ದಾಖಲಿಸಲಾಯಿತು.

    ಚಂದರ್ ಅವರಿಗೆ ಐದು ವರ್ಷಗಳಿಂದ ಪರಿಚಯವಿರುವುದಾಗಿ ಪೊಲೀಸರ ಬಳಿ ಆರೋಪಿ ಲಕ್ಷ್ಮಿ ಹೇಳಿದ್ದಾಳೆ. ಇತ್ತೀಚೆಗೆ ಕೇಶವ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಇದರಿಂದ ಚಂದರ್ ಬೇಸರಗೊಂಡಿದ್ದ. ಅವನು ಲಕ್ಷ್ಮಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಕೇಶವ್ ಅವರನ್ನು ಮದುವೆಯಾಗಬೇಡಿ ಎಂದು ಹೇಳಿದ್ದ. ಈ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತ ಆಕೆ ಮತ್ತು ಕೇಶವ್ ಇಬ್ಬರೂ ಚಂದರ್‌ನನ್ನು ಕೊಲ್ಲಲು ಯೋಜಿಸಿದ್ದರು ಎಂದು ಪೊಲೀಸ್ ವಕ್ತಾರ ಯಶ್ಪಾಲ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ಅ.25 ರಂದು ಲಕ್ಷ್ಮಿ, ಚಂದರ್‌ನನ್ನು ದೆಹಲಿಯ ಮಿಥಾಪುರಕ್ಕೆ ಕರೆದಳು. ಅಲ್ಲಿಂದ ಆತನ ಜೊತೆ ಬೈಕ್‌ನಲ್ಲಿ ಫರಿದಾಬಾದ್‌ನ ಆತ್ಮದ್‌ಪುರದಲ್ಲಿರುವ ನಿರ್ಜನ ಪ್ರದೇಶಕ್ಕೆ ಹೋದಳು. ಅಲ್ಲಿ, ಕೇಶವ್ ಮತ್ತು ಅವನ ಇಬ್ಬರು ಸ್ನೇಹಿತರು ಚಂದರ್ ಮೇಲೆ ಹಲ್ಲೆ ನಡೆಸಿದರು. ಆತ ಸತ್ತ ನಂತರ ಆರೋಪಿಗಳು ಶವವನ್ನು ಚರಂಡಿಯಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದರು.

  • ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ವ್ಯಕ್ತಿ ಪರಾರಿ

    ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ವ್ಯಕ್ತಿ ಪರಾರಿ

    ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ದೆಹಲಿಯ ಕರವಾಲ್‌ ನಗರದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಕಾರಣ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    ಪತ್ನಿ ಜಯಶ್ರೀ (28), 5 ಮತ್ತು 7 ವರ್ಷದ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಮೃತದೇಹಗಳನ್ನು ಜಿಟಿಬಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಆರೋಪಿ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ದಂಪತಿ ನಿತ್ಯ ಜಗಳವಾಡುತ್ತಿದ್ದರು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

    ಬೆಳಗ್ಗೆ 6 ಗಂಟೆಗೆ ಘಟನೆಯ ಬಗ್ಗೆ ನಮಗೆ ತಿಳಿಯಿತು. ನಾವು ಬಾಗಿಲು ತೆರೆದಾಗ, ತಾಯಿ ಮತ್ತು ಇಬ್ಬರು ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟಿರುವುದು ಕಂಡುಬಂತು. ಪತಿ-ಪತ್ನಿ ನಿತ್ಯ ಜಗಳವಾಡುತ್ತಿದ್ದರೆಂದು ನೆರೆಹೊರೆಯವರು ತಿಳಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಶ್ರದ್ಧಾ ಹತ್ಯೆ ಮಾಡಿದ್ದು ನಾನೇ, ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆ

    ಶ್ರದ್ಧಾ ಹತ್ಯೆ ಮಾಡಿದ್ದು ನಾನೇ, ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆ

    ನವದೆಹಲಿ: ಶ್ರದ್ಧಾ ವಾಕರ್ (Shraddha Walkar) ಹತ್ಯೆ ಮಾಡಿದ್ದು ನಾನೇ. ಆ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ (Aftab Poonawala) ಹೇಳಿದ್ದಾನೆ. ಪಾಲಿಗ್ರಾಫ್ ಪರೀಕ್ಷೆ (Polygraph Test) ವೇಳೆ ಆತ ತಪ್ಪೊಪ್ಪಿಕೊಂಡಿದ್ದು, ಕೊಲೆಯ ಎಲ್ಲಾ ಸಂಗತಿಗಳನ್ನು ವಿವರವಾಗಿ ಹಂಚಿಕೊಂಡಿದ್ದಾನೆ ಎಂದು ಎಫ್‌ಎಸ್‌ಎಲ್ ಅಧಿಕಾರಿಗಳು ತಿಳಿಸಿದ್ದಾರೆ.

    ಶ್ರದ್ಧಾ ಹತ್ಯೆ ಮಾಡಿದ್ದ ಅಫ್ತಾಬ್ ಪೂನವಾಲಾ ವಿಚಾರಣೆ ವೇಳೆ ಪೊಲೀಸರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆ ಕೋರ್ಟ್ ಅನುಮತಿ ಮೇರೆಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಫ್ತಾಬ್ ಹತ್ಯೆಯನ್ನು ಒಪ್ಪಿಕೊಂಡಿದ್ದು, ಕೊಲೆ ಮಾಡಿ ದೇಹವನ್ನು ತುಂಡರಿಸಿದ ಬಗ್ಗೆ ಮಾಹಿತಿ ನೀಡಿದ್ದಾನೆ. ಇದನ್ನೂ ಓದಿ: ಲಿವ್ ಇನ್ ರಿಲೇಶನ್‌ಶಿಪ್‍ನಲ್ಲಿದ್ದ ಪ್ರಿಯತಮೆ ಕೊಲೆಗೈದ ಪ್ರಿಯಕರ

    ಮೂಲಗಳ ಪ್ರಕಾರ, ಅಫ್ತಾಬ್ ಮೇ 18 ರಂದು ಶ್ರದ್ಧಾಳ ಕತ್ತು ಹಿಸುಕಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 3 ವಾರಗಳ ಕಾಲ ಫ್ರಿಡ್ಜ್‌ನಲ್ಲಿ ಇರಿಸಿ ಬಳಿಕ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಕಾಡಿನಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಇದೇ ವೇಳೆ ಆತ ಡೇಟಿಂಗ್ ಆ್ಯಪ್ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾನೆ. ಅಫ್ತಾಬ್ ಹಲವು ಆ್ಯಪ್‌ಗಳನ್ನು ಬಳಸುತ್ತಿದ್ದು, ಅನೇಕ ಯುವತಿಯರ ಜೊತೆಗೆ ಸಂಪರ್ಕದಲ್ಲಿ ಇದ್ದೆ. ಅವರೊಂದಿಗೆ ಸಂಬಂಧವೂ ಹೊಂದಿದ್ದೆ ಎಂದು ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಗೆಳೆಯನ ವಿಚಾರಕ್ಕೆ ಹುಡುಗಿಯನ್ನು ಥಳಿಸಿದ ಯುವತಿಯರ ಗುಂಪು

    Live Tv
    [brid partner=56869869 player=32851 video=960834 autoplay=true]

  • ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಸ್ಟೋರ್ – ಪತಿಯನ್ನು ಹತ್ಯೆ ಮಾಡಿದ್ದು ಯಾಕೆ?

    ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಸ್ಟೋರ್ – ಪತಿಯನ್ನು ಹತ್ಯೆ ಮಾಡಿದ್ದು ಯಾಕೆ?

    ನವದೆಹಲಿ: ಶ್ರದ್ಧಾ ವಾಕರ್ ಕ್ರೂರ ಹತ್ಯೆಯ ಕಾವು ಆರುವ ಮುನ್ನವೇ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ ಬೆಳಕಿಗೆ ಬಂದಿದ್ದು, ಸ್ವತಃ ಪತ್ನಿಯೇ ಮಗನೊಂದಿಗೆ ಸೇರಿ ಗಂಡನನ್ನ ಕೊಂದು, ಫ್ರಿಡ್ಜ್ನಲ್ಲಿ ಸಂಗ್ರಹಿಸಿಟ್ಟಿದ್ದಲ್ಲದೇ ದೆಹಲಿ ನೆರೆಹೊರೆಯ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿದ ಘಟನೆ ನಡೆದಿದೆ. ಯಾವ ಸೀನಿಮಾಗೂ ಕಡಿಮೆಯಿಲ್ಲದಂತೆ ಪಕ್ಕಾ ಪ್ಲ್ಯಾನ್‌ ಮಾಡಿ ಕೊಲೆ ಮಾಡಲಾಗಿದೆ.

    ಹತ್ಯೆ ಮಾಡಿದ್ದು ಹೇಗೆ?
    ಪೂನಂ ಮತ್ತು ಆಕೆಯ ಮಗ ದೀಪಕ್ ಅಕ್ರಮ ಸಂಬಂಧ ಹೊಂದ್ದರಿಂದಾಗಿ ಅಂಜನ್ ದಾಸ್ ಅವರನ್ನ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    2016ರಲ್ಲಿ ಪೂನಂ ಮಾಜಿ ಪತಿ ಕಲ್ಲು ನಿಧನರಾದ ನಂತರ 2017ರಲ್ಲಿ ಅಂಜನ್ ದಾಸ್ ಅವರನ್ನ ಮದುವೆಯಾದ್ರು. ಮೃತ ಅಂಜನ್ ಬಿಹಾರದಲ್ಲಿ ಮದುವೆಯಾಗಿ 8 ಮಕ್ಕಳನ್ನು ಹೊಂದಿದ್ದರು. ಆದರೆ ಸಂಪಾದನೆ ಮಾಡುತ್ತಿರಲಿಲ್ಲ. ಇದರಿಂದ ತಾಯಿ ಮಗ ಬೇಸತ್ತಿದ್ದರು. ಮೊದಲು ಅಂಜನ್ ದಾಸ್‌ಗೆ ಮದ್ಯದಲ್ಲಿ ನಿದ್ರೆ ಮಾತ್ರೆ ಬೆರಸಿ ಕೊಟ್ಟಿದ್ದಾರೆ. ನಿದ್ರೆಗೆ ಜಾರಿದ ನಂತರ ಕತ್ತು ಕೊಯ್ದು ರಕ್ತವನ್ನು ಸಂಪೂರ್ಣವಾಗಿ ಹೊರಹೋಗಲು ಶವವನ್ನು ಮನೆಯಲ್ಲೇ ಬಿಟ್ಟಿದ್ದಾರೆ.

    ದೇಹದಿಂದ ರಕ್ತ ಸಂಪೂರ್ಣವಾಗಿ ಹರಿದುಹೋದ ನಂತರ 10 ತುಂಡುಗಳಾಗಿ ಕತ್ತರಿಸಿ, ಪ್ರಿಡ್ಜ್‌ನಲ್ಲಿ ಶೇಖರಿಸಿಟ್ಟು ಪಾಂಡವ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಎಸೆದಿದ್ದಾರೆ. ಇದನ್ನೂ ಓದಿ: ಕುಂಬಳಕಾಯಿ ಕೇಳುವ ಧೈರ್ಯ ಬೆಳೆಸಿಕೊಳ್ಳಿ: ಸತೀಶ್ ಜಾರಕಿಹೊಳಿ

    ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ತಾಯಿ ಮಗ ಇಬ್ಬರನ್ನು ಬಂಧಿಸಲಾಗಿದೆ. ಈಗಾಗಲೇ ಹೂತಿಟ್ಟಿದ್ದ 6 ತುಂಡುಗಳನ್ನು ವಶಪಡಿಸಿಕೊಂಡಿದ್ದು, ಇನ್ನೂ ದೇಹದ ಮುಂಡ ಸಿಕ್ಕಿಲ್ಲ. ಅಲ್ಲದೇ ಕೊಲೆಗೆ ಬಳಸಿದ ಆಯುಧಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    ನವದೆಹಲಿ: ಇಡೀ ದೇಶವನ್ನೇ ನಡುಗಿಸಿದ ದೆಹಲಿಯ (Delhi) ಶ್ರದ್ಧಾ ವಾಕರ್ (Shraddha Walkar) ಕ್ರೂರ ಹತ್ಯೆಯ ಬೆನ್ನಲ್ಲೇ ಇನ್ನೊಂದು ಅಂತಹುದೇ ಭೀಕರ ಹತ್ಯೆ (Murder) ನಡೆದಿದೆ. ಪತಿಯನ್ನು (Husband) ಕೊಂದು, ಆತನ ದೇಹವನ್ನು ಕತ್ತರಿಸಿ, ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದು ಮಾತ್ರವಲ್ಲದೇ ದೆಹಲಿ ನೆರೆಹೊರೆಯ ಪ್ರದೇಶಗಳಲ್ಲಿ ಹೂತು ಹಾಕಿದ ಆರೋಪದ ಮೇಲೆ ಮಹಿಳೆ (Wife) ಹಾಗೂ ಆಕೆಯ ಮಗನನ್ನು (Son) ಪೊಲೀಸರು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ, ಜೂನ್‌ನಲ್ಲಿ ಪಾಂಡವ ನಗರದಲ್ಲಿ ಪೊಲೀಸರಿಗೆ ಮೊದಲ ಬಾರಿಗೆ ಮನುಷ್ಯನ ಕೆಲ ದೇಹದ ಭಾಗಗಳು ಸಿಕ್ಕಿದ್ದವು. ಅವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಭೀಕರ ವಿವರಗಳು ಬೆಳಕಿಗೆ ಬರುತ್ತಲೇ ಈ ಅಪರಿಚಿತ ದೇಹದ ಭಾಗಗಳು ಆಕೆಯದೇ ಎಂಬ ಬಗ್ಗೆ ತನಿಖೆ ನಡೆಸಲಾಗಿದೆ. ಆದರೆ ಆ ದೇಹದ ಭಾಗಗಳು ಶ್ರದ್ಧಾ ವಾಕರ್‌ಗೆ ಸೇರಿದ್ದಲ್ಲ, ಬದಲಿಗೆ ಅವು ಪಾಂಡವ ನಗರ ನಿವಾಸಿ ಅಂಜನ್ ದಾಸ್ ಎಂಬವರದ್ದು ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

    ಆರೋಪಿಗಳಾದ ಪೂನಂ ಮತ್ತು ಆಕೆಯ ಮಗ ದೀಪಕ್ ಜೂನ್‌ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದಾಸ್ ಅವರನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಸ್‌ಗೆ ಮೊದಲು ನಿದ್ರೆ ಮಾತ್ರೆಗಳನ್ನು ನೀಡಿ ನಂತರ ಕೊಲೆ ಮಾಡಲಾಗಿದೆ. ಬಳಿಕ ಅವರ ದೇಹವನ್ನು ಕತ್ತರಿಸಿ, ತುಂಡುಗಳನ್ನು ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿಟ್ಟಿದ್ದು, ಪಾಂಡವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೂತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಭೀಕರ ಹತ್ಯೆ ಪ್ರಕರಣ – ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟ ಕಿರಾತಕ

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನೂ ಹುಡುಕಿದ್ದಾರೆ. ವೀಡಿಯೋದಲ್ಲಿ ದೀಪಕ್ ತಡರಾತ್ರಿ ಕೈಯಲ್ಲಿ ಚೀಲವೊಂದನ್ನು ಹಿಡಿದುಕೊಂಡು ಹೋಗಿದ್ದು, ಆತನ ತಾಯಿ ಪೂನಂ ದೀಪಕ್‌ನನ್ನು ಹಿಂಬಾಲಿಸುವುದು ಕಂಡುಬಂದಿದೆ. ಆರೋಪಿಗಳು ದಾಸ್ ಅವರ ತುಂಡರಿಸಿದ ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಚೀಲದಲ್ಲಿ ಕೊಂಡೊಯ್ದಿದ್ದಾರೆ ಎಂದು ಶಂಕಿಸಲಾಗಿದೆ.

    6 ತಿಂಗಳ ಹಿಂದೆ ದೆಹಲಿಯಲ್ಲಿ ಅಫ್ತಾಬ್ ಪೂನಾವಾಲಾ ತನ್ನ ಲಿವ್‌ಇನ್ ಪಾರ್ಟ್‌ನರ್ ಶ್ರದ್ಧಾ ವಾಕರ್ ಕತ್ತು ಹಿಸುಕಿ ಹತ್ಯೆ ನಡೆಸಿದ್ದು, ಬಳಿಕ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ, ದಕ್ಷಿಣ ಮೆಹ್ರೌಲಿ ಅರಣ್ಯದಲ್ಲಿ ಹೂತಿದ್ದ. ಈ ಭೀಕರ ಹತ್ಯೆ ಕೆಲ ದಿನಗಳ ಹಿಂದೆಯಷ್ಟೇ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

    Live Tv
    [brid partner=56869869 player=32851 video=960834 autoplay=true]

  • ಅಫ್ತಾಬ್ ನನ್ನನ್ನು ಕೊಂದು ಪೀಸ್ ಪೀಸ್ ಮಾಡ್ತಾನೆ – 2 ವರ್ಷದ ಹಿಂದೆಯೇ ಪೊಲೀಸರಿಗೆ ಪತ್ರ ಬರೆದಿದ್ದ ಶ್ರದ್ಧಾ

    ಅಫ್ತಾಬ್ ನನ್ನನ್ನು ಕೊಂದು ಪೀಸ್ ಪೀಸ್ ಮಾಡ್ತಾನೆ – 2 ವರ್ಷದ ಹಿಂದೆಯೇ ಪೊಲೀಸರಿಗೆ ಪತ್ರ ಬರೆದಿದ್ದ ಶ್ರದ್ಧಾ

    ಮುಂಬೈ: ಲಿವ್‌ಇನ್ ರಿಲೇಶನ್‌ನಲ್ಲಿದ್ದು ತನ್ನ ಬಾಯ್‌ಫ್ರೆಂಡ್ ಕೈಯಲ್ಲೇ ಕೊಲೆಯಾಗಿ, ತುಂಡು ತುಂಡಾಗಿ ಕತ್ತರಿಸಿ ದೆಹಲಿಯಾದ್ಯಂತ (Delhi) ಕಾಡುಗಳಲ್ಲಿ ಹೂತು ಹೋದ ಯುವತಿ ಶ್ರದ್ಧಾ (Shraddha Walkar) 2 ವರ್ಷಗಳ ಹಿಂದೆಯೇ ಈ ರೀತಿ ಆಗಬಹುದು ಎಂದು ಪೊಲೀಸರಿಗೆ (Cops) ತನಗಾದ ಭೀತಿಯನ್ನು ಪತ್ರದ (Letter) ಮೂಲಕ ತಿಳಿಸಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

    ಶ್ರದ್ಧಾ 2 ವರ್ಷಗಳ ಹಿಂದೆ ತಮ್ಮ ಹುಟ್ಟೂರಾದ ವಸಾಯಿಯ ತಿಲುಂಜ್‌ನಲ್ಲಿ ಪೊಲೀಸರಿಗೆ ಈ ಬಗ್ಗೆ ತಿಳಿಸಿದ್ದರು. ಆಕೆ ಅಫ್ತಾಬ್‌ನೊಂದಿಗೆ (Aftab Poonawala) ಒಂದೇ ಫ್ಲಾಟ್‌ನಲ್ಲಿ ವಾಸವಿದ್ದು, ಅಫ್ತಾಬ್ ಆಕೆಗೆ ಥಳಿಸಿದ ಕಾರಣಕ್ಕೆ ಪೊಲೀಸರಿಗೆ ಪತ್ರ ಬರೆದಿದ್ದಾಗಿ ಮಹಾರಾಷ್ಟ್ರದ ತನಿಖಾಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

    2022ರ ನವೆಂಬರ್ 23ರಂದು ಶ್ರದ್ಧಾ ಬರೆದಿರುವ ಪತ್ರದಲ್ಲಿ, ಅಫ್ತಾಬ್ ಇಂದು ನನ್ನನ್ನು ಉಸಿರುಗಟ್ಟಿಸಿ ಕೊಲ್ಲಲು ಪ್ರಯತ್ನಿಸಿದ್ದಾನೆ. ಆತ ನನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದು, ನನ್ನನ್ನು ಕೊಂದು, ತುಂಡು ತುಂಡು ಮಾಡಿ ಎಸೆದು ಹೋಗುತ್ತೇನೆ ಎಂದು ಹೆದರಿಸುತ್ತಿದ್ದಾನೆ. ಕಳೆದ 6 ತಿಂಗಳಿನಿಂದ ಆತ ನನಗೆ ನಿರಂತರವಾಗಿ ಹೊಡೆಯುತ್ತಿದ್ದಾನೆ. ಆದರೆ ನನಗೆ ಈ ಬಗ್ಗೆ ಪೊಲೀಸರ ಬಳಿ ಹೋಗಿ ಹೇಳುವಷ್ಟು ಧೈರ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತನ್ನೆದುರೇ ಸೆಕ್ಸ್ ಮಾಡಲು ಜೋಡಿಯನ್ನು ಒತ್ತಾಯಿಸಿದ ಪೂಜಾರಿ – ಫಾಸ್ಟ್ ಗಂ ಸುರಿದು ಇಬ್ಬರ ಹತ್ಯೆ

    ವರದಿಗಳ ಪ್ರಕಾರ ಡೇಟಿಂಗ್ ಅಪ್ಲಿಕೇಶನ್ ಮೂಲಕ ಪರಿಚಯವಾದ ಶ್ರದ್ಧಾ ಹಾಗೂ ಅಫ್ತಾಬ್ 2019ರಲ್ಲಿ ಸಂಬಂಧ ಬೆಳೆಸಿದ್ದರು. ಪತ್ರದಲ್ಲಿ ಆಕೆ 6 ತಿಂಗಳಿನಿಂದ ಹಿಂಸೆಯನ್ನು ಅನುಭವಿಸುತ್ತಿರುವುದಾಗಿ ತಿಳಿಸಿದರೂ ಅವರಿಬ್ಬರ ಸಂಬಂಧ ಮತ್ತೆರಡು ವರ್ಷಗಳ ವರೆಗೂ ಮುರಿದು ಹೋಗಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ಅವರಿಬ್ಬರೂ ದೆಹಲಿಗೆ ಸ್ಥಳಾಂತರಗೊಂಡಿದ್ದರು.

    ಅಂತರ್ ಧರ್ಮೀಯ ಎಂಬ ಕಾರಣಕ್ಕೆ ಶ್ರದ್ಧಾ ಪೋಷಕರು ಇಬ್ಬರ ಸಂಬಂಧವನ್ನು ಒಪ್ಪದ ಕಾರಣ ಸಂಪರ್ಕವನ್ನು ಕಡಿತಗೊಳಿಸಿದ್ದರು. ದೆಹಲಿಯ ಮೆಹ್ರೌಲಿಯಲ್ಲಿ ಫ್ಲಾಟ್‌ಗೆ ಸ್ಥಳಾಂತರಗೊಂಡ ಕೆಲ ದಿನಗಳ ಬಳಿಕ ನಡೆದ ಭೀಕರ ಹತ್ಯೆ 6 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೆ ಬರ್ಬರ ಕೊಲೆ- ನಾಲ್ವರು ಕುಟುಂಬಸ್ಥರನ್ನು ಕತ್ತು ಸೀಳಿ ಕೊಲೆಗೈದ ಮಾದಕ ವ್ಯಸನಿ

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್

    ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್

    ನವದೆಹಲಿ: ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha) ಹತ್ಯೆ ಪ್ರಕರಣ (Delhi Murder) ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದ್ದು, ಸಾಕ್ಷ್ಯಗಳ ನಾಶಕ್ಕೆ ನಿರ್ಧರಿಸಿದ್ದ ಆರೋಪಿ ಅಫ್ತಾಬ್ (Aftab) ಯುವತಿಯ ಮುಖ ಸುಟ್ಟು ಹಾಕಿದ್ದ ಎಂದು ತಿಳಿದು ಬಂದಿದೆ.

    ಭೌತಿಕ ಸಾಕ್ಷ್ಯಗಳ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ತಲೆ ಬುರುಡೆ ಮತ್ತು ತುಂಡರಿಸಿದ ಕೈ ಸಿಕ್ಕಿದ್ದು, ತಲೆ ಸುಟ್ಟ ಸ್ಥಿತಿಯಲ್ಲಿತ್ತು ಎಂದು ತಿಳಿದು ಬಂದಿದೆ. ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ ಅಫ್ತಾಬ್ ನಿತ್ಯ 2 ತುಂಡುಗಳನ್ನು ಎಸೆದು ಬರುತ್ತಿದ್ದ. ಕೊನೆಯವರೆಗೂ ತಲೆ ಬುರುಡೆ ಉಳಿಸಿಕೊಂಡಿದ್ದ ಅಫ್ತಾಬ್ ಅದರ ಗುರುತು ಸಿಗದಂತೆ ಸುಟ್ಟು ಎಸೆದಿದ್ದ ಎಂದು ಮೂಲಗಳು ಹೇಳಿವೆ.

    ಸಾಕ್ಷಿ ಮತ್ತು ಮುಖದ ಗುರುತು ಅಳಿಸುವ ಬಗ್ಗೆ ಗೂಗಲ್‌ನಿಂದ ಮಾಹಿತಿ ಹುಡುಕಿ, ಅದರಂತೆ ತಲೆ ಸುಟ್ಟ ಹಾಕಿ, ಬಳಿಕ ಅದನ್ನು ಕೈ ಭಾಗದೊಂದಿಗೆ ಎಸೆದು ಬಂದಿರುವುದಾಗಿ ಅಫ್ತಾಬ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    ಸದ್ಯ ಪತ್ತೆಯಾಗಿರುವ ತಲೆ ಬರುಡೆಯನ್ನು ಡಿಎನ್‌ಎ ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದು, ಈವರೆಗೂ ಸಿಕ್ಕಿರುವ ಸಾಕ್ಷ್ಯಗಳನ್ನು ಏಮ್ಸ್‌ನಲ್ಲಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಸ್ಯಾಂಪಲ್ ಪಡೆದಿದ್ದು ಅದನ್ನು ಮ್ಯಾಚ್ ಮಾಡುವ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಶ್ರದ್ಧಾ ದೇಹ ತುಂಡರಿಸಿದ್ರೂ ತಲೆಬುರುಡೆಗೆ ಹಾನಿ ಮಾಡಿಲ್ಲ- ಫ್ರಿಡ್ಜ್‌ನಲ್ಲಿಟ್ಟು ಆಗಾಗ ನೋಡ್ತಿದ್ದ ಅಫ್ತಾಬ್

    Live Tv
    [brid partner=56869869 player=32851 video=960834 autoplay=true]