Tag: Delhi Police

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್‌ – ಪತಿ, ಪತ್ನಿ ಅರೆಸ್ಟ್‌

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯಿಂದ್ಲೇ 14ರ ಬಾಲಕಿ ಮೇಲೆ ರೇಪ್‌ – ಪತಿ, ಪತ್ನಿ ಅರೆಸ್ಟ್‌

    – ಬಾಲಕಿಗೆ ಗರ್ಭಪಾತ ಮಾತ್ರೆ ನೀಡಿದ್ದ ಪತ್ನಿ

    ನವದೆಹಲಿ: ದೆಹಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬ ತನ್ನ ಸ್ನೇಹಿತನ 14 ವರ್ಷದ ಮಗಳ ಮೇಲೆ (ಈಗ 17) ತಿಂಗಳುಗಳ ಕಾಲ ಅತ್ಯಾಚಾರವೆಸಗಿ ಆಕೆಯನ್ನ ಗರ್ಭ ಧರಿಸುವಂತೆ ಮಾಡಿದ ಆರೋಪದ ಮೇಲೆ ಸೋಮವಾರ ಪೊಲೀಸರು (Delhi Police) ಬಂಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಗರ್ಭಪಾತ ಮಾತ್ರೆಗಳನ್ನ ನೀಡಿದ ಆರೋಪದ ಮೇಲೆ ಅಧಿಕಾರಿಯ ಪತ್ನಿಯನ್ನೂ ಬಂಧಿಸಲಾಗಿದೆ. ಬಂಧನದ ಬಳಿಕ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಆದೇಶದ ಮೇರೆಗೆ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ.

    ಪ್ರೇಮೋದಯ್ ಖಾಖಾ (Premoday Khakha) ಮತ್ತು ಪತ್ನಿ ಸೀಮಾ ರಾಣಿ ಬಂಧಿತ ಆರೋಪಿಗಳು. ಸಂತ್ರಸ್ತ ಬಾಲಕಿ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, 2020ರಲ್ಲಿ ತನ್ನ ಮರಣದ ನಂತರ ಆರೋಪಿ ಪ್ರಮೋದಯ್‌ ಖಾಖಾ ಮತ್ತು ಅವನ ಕುಟುಂಬದೊಂದಿಗೆ ವಾಸಿಸುತ್ತಿದ್ದಳು. ಪ್ರಮೋದಯ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ. ಬಾಲಕಿಯನ್ನ ತನ್ನ ಮನೆಯಲ್ಲಿರಿಸಿಕೊಂಡೇ ನೋಡಿಕೊಳ್ಳುತ್ತಿದ್ದ. ಆಕೆ 2020ರ ಅವಧಿಯಲ್ಲಿ 12ನೇ ತರಗತಿ ಓದುತ್ತಿದ್ದಾಗ 2020-21ರ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಅತ್ಯಾಚಾರ ಆರೋಪದ ಮೇಲೆ ಕೇಸ್‌ ದಾಖಲಿಸಲಾಗಿದೆ. ಇದನ್ನೂ ಓದಿ: Welcome, buddy.. ಚಂದ್ರಯಾನ-3ಗೆ ಸ್ವಾಗತ ಕೋರಿದ ಚಂದ್ರಯಾನ-2 ಆರ್ಬಿಟರ್‌; ಇಸ್ರೋಗೆ ಇನ್ನಷ್ಟು ತಾಂತ್ರಿಕ ಬಲ

    ಈ ಕುರಿತು ಮಾಹಿತಿ ನೀಡಿರುವ ದೆಹಲಿ ಉತ್ತರ ವಿಭಾಗದ ಡಿಸಿಪಿ ಸಾಗರ್ ಸಿಂಗ್, 2020ರ ಅವಧಿಯಲ್ಲಿ ಸಂತ್ರಸ್ತ ಬಾಲಕಿಯ ತಂದೆ ತೀರಿಕೊಂಡ ನಂತರ ಆರೋಪಿ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಳು. ಆಗ ಪದೇ ಪದೇ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ, ಪ್ರೇಮೋದಯ್ ಖಾಖಾ ಅತ್ಯಾಚಾರ ಎಸಗಿದ ಮೇಲೆ ಪತ್ನಿ ಸೀಮಾ ರಾಣಿ ಬಾಲಕಿಗೆ ಗರ್ಭಪಾತ ಮಾತ್ರೆ ನೀಡಿ, ಪ್ರಕರಣವನ್ನ ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾಳೆ. ಇದರಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ಬಾಲಕಿ ಕೊನೆಗೆ ಪೊಲೀಸರಿಗೆ ವಿಷಯ ತಿಳಿಸಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸದ್ಯ ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರ ಆರೈಕೆಯಲಿದ್ದಾಳೆ. ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಂತರ ವಿವರಗಳನ್ನ ಬಹಿರಂಗಪಡಿಸಲಾಗುತ್ತದೆ ಎಂದು ಸಾಗರ್‌ ಸಿಂಗ್‌ ಹೇಳಿದ್ದಾರೆ, ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಕಾಫಿ ಶಾಪ್‌ನಲ್ಲಿ ಶುರುವಾದ ಪ್ರೀತಿ – ಭಾರತದ ಪ್ರೇಮಿಗಾಗಿ ದಕ್ಷಿಣ ಕೊರಿಯಾದಿಂದ ಹಾರಿ ಬಂದ ಮಹಿಳೆ!

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳೆಯನ್ನು ಅಪ್ಪಿಕೊಳ್ಳುವುದು, ಸ್ಪರ್ಶಿಸುವುದು ಅಪರಾಧವಲ್ಲ – ಬ್ರಿಜ್ ಭೂಷಣ್‌ ಸಮರ್ಥನೆ

    ಮಹಿಳೆಯನ್ನು ಅಪ್ಪಿಕೊಳ್ಳುವುದು, ಸ್ಪರ್ಶಿಸುವುದು ಅಪರಾಧವಲ್ಲ – ಬ್ರಿಜ್ ಭೂಷಣ್‌ ಸಮರ್ಥನೆ

    ನವದೆಹಲಿ: ಒಲಿಂಪಿಕ್ಸ್‌ ವಿಜೇತ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ನ್ಯಾಯಾಲಯದಲ್ಲಿ ತಮ್ಮನ್ನ ಸಮರ್ಥಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಯಾವುದೇ ರೀತಿಯ ಲೈಂಗಿಕ ಉದ್ದೇಶವಿಲ್ಲದೇ ಮಹಿಳೆಯನ್ನ ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.

    ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ (Delhi Court) ಬಿಜೆಪಿ ಸಂಸದನ ಪರ ಹಾಜರಾದ ವಕೀಲ ರಾಜೀವ್ ಮೋಹನ್, ಮಹಿಳಾ ಕುಸ್ತಿಪಟುಗಳು ಮಾಡಿರುವ ಆರೋಪಗಳು ಕಾಲಮಿತಿಯನ್ನು ಮೀರಿ ಹೋಗಿವೆ. ಕುಸ್ತಿಪಟುಗಳು 5 ವರ್ಷಗಳವರೆಗೂ ಈ ಬಗ್ಗೆ ದೂರು ಸಲ್ಲಿಸಿರಲಿಲ್ಲ. ಏಕೆಂದರೆ ತಮಗೆ ತಮ್ಮ ವೃತ್ತಿ ಜೀವನದ ಬಗ್ಗೆ ಚಿಂತೆ ಇತ್ತು ಅಂತಾ ಹೇಳಿದ್ದಾರೆ. ಆದ್ರೆ ಇದು ಸೂಕ್ತ ವಿವರಣೆ ಅಲ್ಲ. ಅವರ ನಿರೀಕ್ಷಿತ ಯೋಜನೆಗಳು ಈಗ ಬಯಲಾಗುತ್ತಿವೆ ಎಂದು ಭೂಷಣ್ ಪರ ವಕೀಲರು ತಿಳಿಸಿದ್ದಾರೆ. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

    ಕುಸ್ತಿ ಸ್ಪರ್ಧೆಯಂತಹ ಕಾರ್ಯಕ್ರಮಗಳ ವೇಳೆ ಪುರುಷ ಕೋಚ್‌ಗಳು ಮಹಿಳಾ ಕುಸ್ತಿಪಟುಗಳನ್ನ (Wrestlers) ಅಪ್ಪಿಕೊಳ್ಳುವುದು ತೀರಾ ಸಾಮಾನ್ಯ. ಬಹುತೇಕ ಕೋಚ್‌ಗಳು ಪುರುಷರೇ ಆಗಿರುತ್ತಾರೆ. ಮಹಿಳಾ ಕೋಚ್‌ಗಳು ಇರುವುದು ತೀರಾ ವಿರಳ. ಮಹಿಳಾ ಆಟಗಾರ್ತಿಯರಿಗೆ ಮಹಿಳಾ ಕೋಚ್‌ಗಳೇ ಇರಬೇಕು ಎಂಬ ನಿರ್ಬಂಧ ಕೂಡ ಇಲ್ಲ. ಉತ್ತಮ ಸಾಧನೆಗಾಗಿ ಆಟಗಾರ್ತಿಯನ್ನ ಪುರುಷ ಕೋಚ್ ಅಪ್ಪಿಕೊಂಡರೆ ಅದು ಸಹಜ. ನಾವು ಟಿವಿಗಳಲ್ಲಿ ನೋಡಿದ್ದೇವೆ. ಮಹಿಳಾ ಆಟಗಾರರನ್ನು ಮಹಿಳಾ ಕೋಚ್‌ಗಳು ಮಾತ್ರವೇ ಅಪ್ಪಿಕೊಳ್ಳುವುದಿಲ್ಲ ಎಂದು ವಕೀಲ ರಾಜೀವ್ ಮೋಹನ್ ವಾದ ಮಂಡಿಸಿದ್ದಾರೆ.

    ಬ್ರಿಜ್ ಭೂಷಣ್ ಅವರು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಆರೋಪಗಳನ್ನ ತಳ್ಳಿಹಾಕಿದ ವಕೀಲರು, ಭೂಷಣ್‌ ಅಪರಾಧ ಮಾಡಿಲ್ಲ. ಮಹಿಳೆಯ ಘನತೆಗೆ ಕುಂದು ಉಂಟುಮಾಡುವಂತಹ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ ಪ್ರಯೋಗದ ಅಪರಾಧವನ್ನ ಮಂಡಿಸಲು ಅಲ್ಲಿ ದೌರ್ಜನ್ಯ ಅಥವಾ ಕ್ರಿಮಿನಲ್ ಬಲಾತ್ಕಾರ ನಡೆದಿರಬೇಕು. ಆದ್ರೆ ಮುಟ್ಟುವುದು ಖಂಡಿತಾ ಅಪರಾಧ ಬಲ ಪ್ರಯೋಗ ಅಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬ್ರಿಜ್‌ಭೂಷಣ್‌ ಬಂಧನಕ್ಕೆ ಜೂನ್‌ 9 ಗಡುವು – ಕುಸ್ತಿಪಟುಗಳ ಪ್ರತಿಭಟನೆಗೆ ರೈತಸಂಘ ಬೆಂಬಲ

    ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಎದುರು ವಾದ ಮಂಡಿಸಿದ ವಕೀಲ ರಾಜೀವ್ ಮೋಹನ್, ಆರೋಪಿಸಲಾಗಿರುವ ಘಟನೆಗಳು ಮಂಗೋಲಿಯಾ ಮತ್ತು ಜಕಾರ್ತಾಗಳಲ್ಲಿ ನಡೆದಿವೆ ಎನ್ನಲಾಗಿದೆ. ಹೀಗಿರುವಾಗ ವಿಚಾರಣೆಯು ಭಾರತದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ.

    ಕಳೆದ ಏಪ್ರಿಲ್‌ 21 ರಂದೇ ಬ್ರಿಜ್‌ ಭೂಷಣ್‌ ವಿರುದ್ಧ ದೂರು ದಾಖಲಾಗಿದ್ದು, ಏಪ್ರಿಲ್‌ 28 ರಂದು ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. IPC ಸೆಕ್ಷನ್‌ 354, 354 (ಎ), 354 (ಡಿ) ಹಾಗೂ ಸೆಕ್ಷನ್‌ 34ರ ಅಡಿಯಲ್ಲಿ ಕೇಸ್‌ ದಾಖಲಾಗಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಗೆ ಒಳಪಡಿಸಬಹುದಾಗಿದೆ. ಭೂಷಣ್‌ ತಮ್ಮ ಮೊಣಕಾಲುಗಳು, ಅಂಗೈ ಮೇಲೆ ಮುಟ್ಟುತ್ತಿದ್ದ, ಉಸಿರಾಟ ಅರ್ಥಮಾಡಿಕೊಳ್ಳುವ ನೆಪದಲ್ಲಿ ಎದೆ ಮತ್ತು ಹೊಟ್ಟೆಯ ಮೇಲೂ ಸ್ಪರ್ಶಿಸುತ್ತಿದ್ದ. ತಮ್ಮ ಟೀ ಶರ್ಟ್‌ ಎಳೆದು ಎದೆ ಮೇಲೆ ಕೈ ಹಾಕಿದ್ದ, ತಮ್ಮನ್ನು ತಬ್ಬಿಕೊಳ್ಳುತ್ತಿದ್ದ ಎಂದು ಮಹಿಳಾ ಕುಸ್ತಿಪಟುಗಳು ದೂರಿನಲ್ಲಿ ಉಲ್ಲೇಖಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ರಕ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು – 22ರ ಯುವತಿ ದುರ್ಮರಣ

    ಟ್ರಕ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು – 22ರ ಯುವತಿ ದುರ್ಮರಣ

    ನವದೆಹಲಿ: ಉತ್ತರ ದೆಹಲಿಯ ಸಿವಿಲ್‌ ಲೈನ್ಸ್‌ ಪ್ರದೇಶದಲ್ಲಿ (Delhi’s Civil Lines Area) ಟ್ರಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವತಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಗಾಯಗೊಂಡಿದ್ದಾರೆ.

    ಚಂದಗಿರಾಮ್‌ ಅಖಾರ ಸಿಗ್ನಲ್‌ನಲ್ಲಿ ಚಾಲಕ ಟ್ರಕ್‌ವೊಂದರ ಹಿಂದೆ ಕಾರು ನಿಲ್ಲಿಸಿದ್ದಾನೆ. ಅದೇ ಸಮಯಕ್ಕೆ ವೇಗವಾಗಿ ಬಂದ ಮತ್ತೊಂದು ಟ್ರಕ್‌ (Truck) ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಎರಡು ಟ್ರಕ್‌ಗಳ ಮಧ್ಯೆ ಸಿಲುಕಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಯುವತಿ ಸಾವನ್ನಪ್ಪಿದ್ದಾಳೆ. ಮೃತ ಯುವತಿಯನ್ನು ಅಮನ್‌ದೀಪ್‌ ಕೌರ್‌, ಕಾರು ಚಾಲಕನನ್ನು ಹರ್ಮಿಂದರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೊಡಗಿಗೂ ವಿಸ್ತರಿಸಿದ ಮದ್ರಾಸ್ ಐ – ಕಳೆದ 20 ದಿನಗಳಲ್ಲಿ 136 ಪ್ರಕರಣಗಳು ಪತ್ತೆ

    ಅಮನ್‌ದೀಪ್‌ ಕೌರ್‌ ತನ್ನ ಚಿಕ್ಕಮ್ಮ ಮತ್ತು ಅವರ ಸೋದರಸಂಬಂಧಿಗಳೊಂದಿಗೆ ಶಿಶ್‌ಗಂಜ್ ಗುರುದ್ವಾರದಿಂದ ತಿಮಾರ್‌ಪುರದ ನೆಹರು ವಿಹಾರ್‌ಗೆ ಪ್ರಯಾಣಿಸುತ್ತಿದ್ದಳು. ತನ್ನ ಚಿಕ್ಕಮ್ಮ ಪುಷ್ಪಾ ಮತ್ತು ಅವರ ಮಗಳು ಅಮನದೀಪ್ ಕೌರ್ ಹಿಂದಿನ ಸೀಟಿನಲ್ಲಿ ಕುಳಿತಿದ್ದರು. ಅಪಘಾತದಲ್ಲಿ ಅಮನ್‌ದೀಪ್ ಕೌರ್ ಮತ್ತು ಬಂಟಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಟ್ರಾಮಾ ಕೇರ್‌ ಸೆಂಟರ್‌ಗೆ ಕರೆತರಲಾಯಿತು. ಆದ್ರೆ ಅಮನ್‌ದೀಪ್‌ ಕೌರ್‌ ಅಷ್ಟರಲ್ಲಾಗಲೇ ಮೃತಪಟ್ಟಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

    ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದೆಹಲಿ ಪೊಲೀಸರು (Delhi Police) ಐಪಿಸಿ ಸೆಕ್ಷನ್‌ 279, 337 ಮತ್ತು 304A ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಟ್ರಕ್‌ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಜನಾಂಗೀಯ ಸಂಘರ್ಷ – ತನಿಖೆಯ ಮೇಲ್ವಿಚಾರಣೆಗೆ ನ್ಯಾಯಾಂಗ ಸಮಿತಿ ರಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ -‌ ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ!

    ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ -‌ ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ!

    ನವದೆಹಲಿ: ಮಾಳವೀಯಾ ನಗರದಲ್ಲಿ (Malviya City) ಶುಕ್ರವಾರ ಯುವತಿಯ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ತನಿಖೆಯಲ್ಲಿ (Police Investigation) ಅನೇಕ ಸಂಗತಿಗಳು ಹೊರಬಿದ್ದಿವೆ.

    ಕಮಲಾ ನೆಹರೂ ವಿಶ್ವವಿದ್ಯಾಲಯದಲ್ಲಿ (Kamala Nehru College) ವಿದ್ಯಾಭ್ಯಾಸ ಮುಗಿಸಿದ್ದ ‌ಮೃತ ಯುವತಿ ನರ್ಗೀಸ್‌ ಮಾಳವೀಯಾ ನಗರದಲ್ಲಿ ಸ್ಟೆನೋಗ್ರಾಫರ್‌ ಕೋರ್ಸ್‌ ಮಾಡುತ್ತಿದ್ದಳು. ಆರ್ಥಿಕವಾಗಿ ಸ್ವಾವಲಂಭಿಯಾಗಲು ಬಯಸಿದ್ದ ಈಕೆ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ರಾಡ್‌ನಿಂದ ಹೊಡೆದು ಪ್ರೇಯಸಿಯನ್ನು ಕೊಂದ ಪ್ರಿಯಕರ

    ಕಳೆದ 5-6 ವರ್ಷಗಳ ಹಿಂದೆ ಆರೋಪಿ ಇರ್ಫಾನ್‌ ಕುಟುಂಬದೊಂದಿಗೆ ನರ್ಗೀಸ್‌ ಕುಟುಂಬದವರು ವಾಸಿಸುತ್ತಿದ್ದರು. ಆದ್ರೆ ಇರ್ಫಾನ್‌ ನರ್ಗೀಸ್‌ಗೆ ಕಿರುಕುಳ ನೀಡಲು ಪ್ರಾರಂಭಿಸಿದ ನಂತರ ಮನೆ ತೊರೆಯಬೇಕಾಯಿತು.

    ಈ ಕುರಿತು ಮಾತನಾಡಿರುವ ಮೃತಳ ತಂದೆ ಸುಲ್‌ಜಾತ್‌, ಇರ್ಫಾನ್‌ ಪೋಷಕರಿಗೆ ಇಬ್ಬರು ಮಕ್ಕಳಿದ್ದಾರೆ. ಆದ್ರೆ ನನಗೆ ಇದ್ದಿದ್ದು ಒಬ್ಬಳೇ ಮಗಳು. ನನ್ನ ಮಗಳ ಸಾವಿಗೆ ನ್ಯಾಯ ಸಿಗಬೇಕು. ಇರ್ಫಾನ್‌ಗೆ ಕ್ಷಮೆ ಎಂಬುದೇ ಇಲ್ಲ, ಕಠಿಣ ಶಿಕ್ಷೆ ನೀಡಬೇಕು ಅಂತಾ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮುಖ ತೊಳೆಯಲು, ಬಟ್ಟೆ ಬದಲಿಸಲೂ ಅವಕಾಶ ಕೊಡಲಿಲ್ಲ: ಪೊಲೀಸರ ನಡೆಗೆ ಬಿಜೆಪಿ ಕಾರ್ಯಕರ್ತೆ ಆಕ್ರೋಶ

    ಫುಡ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಇರ್ಫಾನ್‌ಗೆ ಖಾಯಂ ಕೆಲಸ ಇಲ್ಲ ಎಂಬ ಕಾರಣಕ್ಕೆ ನರ್ಗೀಸ್‌ ಕುಟುಂಬಸ್ಥರು ಮದುವೆಗೆ ನಿರಾಕರಿಸಿದ್ದರು. ಅದಾದ ಮೇಲೆ ನರ್ಗೀಸ್‌ ಸಹ ಇರ್ಫಾನ್‌ನಿಂದ ಯಾವುದೇ ಫೋನ್‌ಕರೆಗಳನ್ನೂ ಸ್ವೀಕರಿಸದೇ ಮಾತನಾಡುವುದನ್ನ ನಿಲ್ಲಿಸಿದ್ದಳು. ಇದರಿಂದ ಕೋಪಗೊಂಡ ಇರ್ಫಾನ್‌ ಆಕೆಯನ್ನ ಮುಗಿಸಲು ಸ್ಕೆಚ್‌ ಹಾಕಿದ್ದಾನೆ.

    3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ:
    ಮೂರು ದಿನಗಳ ಹಿಂದೆಯೇ ಕೊಲೆಗೆ ಸ್ಕೆಚ್‌ ಹಾಕಿದ್ದ ಆರೋಪಿ ಇರ್ಫಾನ್‌ ನರ್ಗೀಸ್‌ನ ಪ್ರತಿದಿನದ ಕೆಲಸಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದ. ಅಲ್ಲದೇ ಅವಳು ಸ್ಟೆನೋಗ್ರಫಿ ತರಗತಿ ಮುಗಿಸಿದ ಬಳಿಕ ಸಮೀಪದ ಪಾರ್ಕ್‌ ಹಾದು ಹೋಗುತ್ತಾಳೆ ಅನ್ನೋದೂ ಅವನಿಗೆ ಗೊತ್ತಿತ್ತು. ಹಾಗೆಯೇ ಶುಕ್ರವಾರ ಪಾರ್ಕ್‌ ದಾಟಿ ನರ್ಗೀಸ್‌ ಹೋಗುತ್ತಿದ್ದಾಗ ಮಾತನಾಡಬೇಕು ಬಾ ಅಂತಾ ಕರೆದು ರಾಡ್‌ನಿಂದ ಹೊಡೆದು ಕೊಂದೇಬಿಟ್ಟಿದ್ದಾನೆ. ಪೊಲೀಸ್‌ ತನಿಖೆಯಲ್ಲಿ ಆರೋಪಿ ಸತ್ಯ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೃತ್ಯ ಎಸಗಿದ್ದ ಕೆಲವೇ ಗಂಟೆಗಳಲ್ಲಿ ಆರೋಪಿ ಇರ್ಫಾನ್‌ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ಕೇಸ್‌ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೋರ್ನ್‌ ವೀಡಿಯೋ ಕಾಲ್‌ ಮೂಲಕ ಕೇಂದ್ರ ಸಚಿವರ ಬ್ಲ್ಯಾಕ್‌ಮೇಲ್‌ಗೆ ಯತ್ನ – ಇಬ್ಬರು ಅರೆಸ್ಟ್‌

    ಪೋರ್ನ್‌ ವೀಡಿಯೋ ಕಾಲ್‌ ಮೂಲಕ ಕೇಂದ್ರ ಸಚಿವರ ಬ್ಲ್ಯಾಕ್‌ಮೇಲ್‌ಗೆ ಯತ್ನ – ಇಬ್ಬರು ಅರೆಸ್ಟ್‌

    ಜೈಪುರ: ವೀಡಿಯೋ ಕಾಲ್‌ನಲ್ಲಿ ಪೋರ್ನ್‌ ವೀಡಿಯೋ ಪ್ಲೇ ಮಾಡುವ ಮೂಲಕ ಕೇಂದ್ರ ಸಚಿವರನ್ನ (Union Minister) ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ್ದ ರಾಜಸ್ಥಾನದ ಇಬ್ಬರು ವ್ಯಕ್ತಿಗಳನ್ನ ದೆಹಲಿ ಪೊಲೀಸರು (Delhi Police) ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ವೀಡಿಯೋ ಕಾಲ್‌ನಲ್ಲಿ ಪೋರ್ನ್‌ ಪ್ಲೇ ಮಾಡಿ, ರೆಕಾರ್ಡ್‌ ಮಾಡಿಕೊಂಡ ಬಳಿಕ ಈ ವೀಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿಬಿಡುವುದಾಗಿ ಸಚಿವರಿಗೆ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ನನ್ನ 3ನೇ ಅವಧಿಯಲ್ಲಿ ಭಾರತ ವಿಶ್ವದ ಟಾಪ್ 3 ಆರ್ಥಿಕತೆಯಲ್ಲಿ ಒಂದಾಗಲಿದೆ: ಮೋದಿ ಭರವಸೆ

    ಪೊಲೀಸರ ಮಾಹಿತಿ ಪ್ರಕಾರ, ಕಳೆದ ಜೂನ್‌ನಲ್ಲಿ ಸಚಿವರಿಗೆ ವಾಟ್ಸಪ್‌ನಲ್ಲಿ (WhatsApp) ವೀಡಿಯೋ ಕರೆ ಬಂದಿತ್ತು. ಅವರು ಕರೆ ಸ್ವೀಕರಿಸಿದ ತಕ್ಷಣ ಪೋರ್ನ್‌ ವೀಡಿಯೋ ಪ್ಲೇ ಆಗಲು ಪ್ರಾರಂಭವಾಯಿತು. ಅವರ ಮುಖವೂ ಅದರಲ್ಲಿ ಸೆರೆಯಾಗಿತ್ತು. ಬಳಿಕ ವೀಡಿಯೋ ಕರೆ ಸ್ಥಗಿತಗೊಳಿಸಿದ ವ್ಯಕ್ತಿ ಸಚಿವರಿಗೆ ಮತ್ತೆ ಕರೆ ಮಾಡಿ ವೀಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ದೆಹಲಿ ಮೆಟ್ರೋದಲ್ಲಿ 2 ಮದ್ಯದ ಬಾಟಲಿ ಕೊಂಡ್ಯೊಯಲು ಅಬಕಾರಿ ಇಲಾಖೆಯ ಆಕ್ಷೇಪ

    ಈ ಬಗ್ಗೆ ದೂರು ದಾಖಲಾದ ನಂತರ ಆರೋಪಿ ಮೊಹಮ್ಮದ್ ವಕೀಲ್ ಮತ್ತು ಮೊಹಮ್ಮದ್ ಸಾಹಿಬ್ ಆರೋಪಿಗಳನ್ನ ಜುಲೈನಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಇನ್ನಷ್ಟು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದೇಶಿ ಪ್ರಜೆಯಿಂದ 5,000 ರೂ. ಪಡೆದು ರಶೀದಿ ಕೊಡದೇ ಯಾಮಾರಿಸಿದ್ದ ಟ್ರಾಫಿಕ್‌ ಪೊಲೀಸ್‌ ಅಮಾನತು

    ವಿದೇಶಿ ಪ್ರಜೆಯಿಂದ 5,000 ರೂ. ಪಡೆದು ರಶೀದಿ ಕೊಡದೇ ಯಾಮಾರಿಸಿದ್ದ ಟ್ರಾಫಿಕ್‌ ಪೊಲೀಸ್‌ ಅಮಾನತು

    ನವದೆಹಲಿ: ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿದೇಶಿ ಪ್ರಜೆಯೊಬ್ಬರಿಂದ ದಂಡದ ರೂಪದಲ್ಲಿ 5,000 ರೂ. ಹಣ ಪಡೆದು ರಶೀದಿ ನೀಡದೇ ಭ್ರಷ್ಟಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

    ತಿಂಗಳ ಹಿಂದಿನ ಘಟನೆಯ ವೀಡಿಯೋ ಇದೀಗ ವ್ಯಾಪಕ ವೈರಲ್‌ ಆಗಿದೆ. ವೀಡಿಯೋದಲ್ಲಿ ಮಹೇಶ್ ಚಂದ್ ಎಂದು ಗುರುತಿಸಲಾದ ಪೊಲೀಸ್, ಸಂಚಾರ ಉಲ್ಲಂಘನೆಗಾಗಿ 5,000 ರೂ. ಪಾವತಿಸುವಂತೆ ಕೊರಿಯನ್ ವ್ಯಕ್ತಿಗೆ (Korean Man) ಹೇಳಿದ್ದಾರೆ. ವ್ಯಕ್ತಿ ಪೊಲೀಸರಿಗೆ 500 ರೂ. ನೀಡಲು ಮುಂದಾಗುತ್ತಾರೆ. ನಾನು ಕೇಳಿದ್ದು 500 ರೂ. ಅಲ್ಲ, 5,000 ರೂ. ಎಂದು ಪೊಲೀಸ್‌ (Delhi Police) ವಿವರಿಸುತ್ತಾರೆ. ಆ ವ್ಯಕ್ತಿ ತಕ್ಷಣವೇ ಪೊಲೀಸ್‌ಗೆ ಅಗತ್ಯವಿರುವ ಮೊತ್ತವನ್ನು ಹಸ್ತಾಂತರಿಸುತ್ತಾನೆ. ಕೊನೆಗೆ ಪೊಲೀಸ್‌ಗೆ ಹಸ್ತಲಾಘವ ಕೂಡ ಮಾಡ್ತಾನೆ. ಇದನ್ನೂ ಓದಿ: ಮುದ್ದಿನ ನಾಯಿ ನಾಪತ್ತೆ – ಭದ್ರತಾ ಸಿಬ್ಬಂದಿ ಅಮಾನತು ಮಾಡುವಂತೆ ಪೊಲೀಸ್ ಅಧಿಕಾರಿಗೆ ಪತ್ರ ಬರೆದ ನ್ಯಾಯಾಧೀಶ

    ವಿದೇಶಿ ಪ್ರಜೆಯಿಂದ ಹಣ ಪಡೆದ ಪೊಲೀಸ್‌ ಯಾವುದೇ ರಶೀದಿ ನೀಡದೇ ಹೊರಟು ಹೋಗುತ್ತಾರೆ. ಈ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು, ಭ್ರಷ್ಟಾಚಾರ ಎಸಗಿದ ಪೊಲೀಸ್‌ನನ್ನು ಅಮಾನತು ಮಾಡಿದ್ದಾರೆ.

    ಸಾಮಾಜಿಕ ಮಾಧ್ಯಮದ ಪೋಸ್ಟ್ ಅನ್ನು ಗಮನದಲ್ಲಿಟ್ಟುಕೊಂಡು, ವೀಡಿಯೋದಲ್ಲಿ ಕಂಡುಬಂದಿರುವ ಸಂಬಂಧಿತ ಅಧಿಕಾರಿಯನ್ನು ವಿಚಾರಣೆಗೆ ಬಾಕಿಯಿರುವಂತೆ ಅಮಾನತುಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮಾನತುಗೊಂಡಿರುವ ಪೊಲೀಸ್‌, ನಾನು ರಶೀದಿ ನೀಡುವಷ್ಟರಲ್ಲಿ ಆ ವಿದೇಶಿ ಪ್ರಜೆ ಹೊರಟು ಹೋದ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಭೇಟಿಯಾಗಲು ಗ್ರಾಮದ ವಿದ್ಯುತ್ ಅನ್ನೇ ಕಡಿತಗೊಳಿಸ್ತಿದ್ದ ಯುವತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಬ್ರಿಜ್ ಭೂಷಣ್‌ಗೆ ಬಿಗ್ ರಿಲೀಫ್

    ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಬ್ರಿಜ್ ಭೂಷಣ್‌ಗೆ ಬಿಗ್ ರಿಲೀಫ್

    ನವದೆಹಲಿ: ಕುಸ್ತಿಪಟುಗಳ (Wrestlers) ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ (Brij Bhushan Singh) ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Delhi’s Rouse Avenue court) ಗುರುವಾರ ಜಾಮೀನು ನೀಡಿದೆ.

    ಎಂಪಿ, ಎಂಎಲ್‌ಎ ವಿಶೇಷ ನ್ಯಾಯಾಧೀಶರಾದ ಹರ್ಜೀತ್ ಸಿಂಗ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಅನುಮತಿಯಿಲ್ಲದೇ ಬ್ರಿಜ್ ಭೂಷಣ್ ದೇಶ ತೊರೆಯುವಂತಿಲ್ಲ ಹಾಗೂ ತನ್ನ ವಿರುದ್ಧ ಪ್ರಕರಣ ದಾಖಲಿಸಿದವರ ವಿರುದ್ಧ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕುವಂತಿಲ್ಲ ಎಂದು ಕೋರ್ಟ್ ಎಚ್ಚರಿಕೆ ಕೊಟ್ಟಿದೆ. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

    ಡಬ್ಲ್ಯುಎಫ್‌ಐನ ಮಾಜಿ ಹೆಚ್ಚುವರಿ ಕಾರ್ಯದರ್ಶಿ ವಿನೋದ್ ತೋಮರ್ ಅವರಿಗೂ ನ್ಯಾಯಾಲಯ ಜಾಮೀನು ನೀಡಿದೆ. ಬ್ರಿಜ್ ಭೂಷಣ್ ಹಾಗೂ ವಿನೋದ್ ತೋಮರ್ ಅವರಿಗೆ ತಲಾ 25,000 ರೂ. ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ತೋಮರ್, ಬ್ರಿಜ್ ಭೂಷಣ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದರು ಹಾಗೂ ಕುಸ್ತಿ ಸಂಸ್ಥೆಯ ದೈನಂದಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಈ ವರ್ಷದ ಜನವರಿಯಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ ವಿನೋದ್ ತೋಮರ್ ಅವರನ್ನ ಅಮಾನತುಗೊಳಿಸಿತ್ತು.

    ಒಲಿಂಪಿಕ್ಸ್ ಪದಕ ವಿಜೇತರಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಅನೇಕ ಅಪ್ರಾಪ್ತೆಯರು ಸೇರಿ 7 ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಆರೋಪ ಹೊರಿಸಿದ್ದರು. ಅಲ್ಲದೇ ಅವರನ್ನು ಬಂಧಿಸಬೇಕು ಹಾಗೂ ಡಬ್ಲ್ಯೂಎಫ್‌ಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದರು. ಕಳೆದ ಜೂನ್ ತಿಂಗಳಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು. ಇದನ್ನೂ ಓದಿ: ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್‌ ಪ್ರಶ್ನೆ

    ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ದೆಹಲಿ ಪೊಲೀಸರು 2 ಎಫ್‌ಐಆರ್ ಮತ್ತು 10 ದೂರುಗಳನ್ನ ದಾಖಲಿಸಿದ್ದರು. ಬ್ರಿಜ್ ಭೂಷಣ್ ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆಯಿಟ್ಟಿದ್ದರು, ಅನುಚಿತವಾಗಿ ದೇಹ ಸ್ಪರ್ಶಿಸುವುದು, ಹುಡುಗಿಯರ ಎದೆ ಮೇಲೆ ಕೈ ಹಾಕುವುದು, ಮೈ-ಕೈ ಮುಟ್ಟುವುದು, ಅವರನ್ನು ಹಿಂಬಾಲಿಸುವುದು ಆರೋಪ ಸೇರಿದಂತೆ 10 ದೂರುಗಳನ್ನ ದಾಖಲಿಸಿಕೊಂಡಿದ್ದರು. ಕಳೆದ ಏಪ್ರಿಲ್ 21 ರಂದೇ ದೂರು ದಾಖಲಾಗಿದ್ದು, ಏಪ್ರಿಲ್ 28 ರಂದು ಎರಡು ಈIಖ ದಾಖಲಾಗಿದೆ. ಭೂಷಣ್ ವಿರುದ್ಧ IPC ಸೆಕ್ಷನ್ 354, 354 (ಎ), 354 (ಡಿ) ಹಾಗೂ ಸೆಕ್ಷನ್ 34ರ ಅಡಿಯಲ್ಲಿ ಕೇಸ್ ದಾಖಲಾಗಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಗೆ ಒಳಪಡಿಸಬಹುದಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ದರೋಡೆ ಕೇಸ್‌ – ಶಾ ವಿರುದ್ಧ ಕೇಜ್ರಿವಾಲ್ ಆಕ್ರೋಶ

    ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ದರೋಡೆ ಕೇಸ್‌ – ಶಾ ವಿರುದ್ಧ ಕೇಜ್ರಿವಾಲ್ ಆಕ್ರೋಶ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಭದ್ರತೆ ವಿಚಾರ ತೀವ್ರ ಚರ್ಚೆಯಾಗುತ್ತಿರುವ ಹೊತ್ತಲ್ಲೇ ಸರಣಿ ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ಇಂಡಿಯಾ ಗೇಟ್ ಕೂಗಳತೆ ದೂರದಲ್ಲಿರುವ ಪ್ರಗತಿ ಮೈದಾನ ಟನಲ್ ನಲ್ಲಿ (Pragati Maidan Tunnel) ನಡೆದ ದರೋಡೆ ಬಳಿಕ ಹಲವು ಲೂಟಿ ಪ್ರಕರಣಗಳು (Crime Case) ವರದಿಯಾಗುತ್ತಿವೆ.

    ಮಂಗಳವಾರ ಸಂಜೆ ಉದ್ಯಮಿಯೊಬ್ಬರಿಂದ ಸುಮಾರು 4 ಲಕ್ಷ ರೂ. ಲೂಟಿ ಮಾಡಿರುವ ಘಟನೆ ಕಾಶ್ಮೀರ್ ಗೇಟ್ ಪ್ರದೇಶದಲ್ಲಿ ನಡೆದಿದೆ‌. ಈ ನಡುವೆ ಲಾಹೋರಿ ಗೇಟ್ ಪ್ರದೇಶದ ಟೆಲಿಯಾನ್ ಮಾರುಕಟ್ಟೆಯಲ್ಲಿ ಮೂವರು ವ್ಯಕ್ತಿಗಳು 5 ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: ಹಾಡಹಗಲೇ ದರೋಡೆ – ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿ, ಗನ್ ತೋರ್ಸಿ ಹಣ ದೋಚಿದ ದುಷ್ಕರ್ಮಿಗಳು

    ಇದಕ್ಕೂ ಮೊದಲು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Indira Gandhi International Airport) ಹೊರಗಡೆ ಕಸ್ಟಮ್ ಅಧಿಕಾರಿಗಳಂತೆ ನಟಿಸಿ ಇಬ್ಬರು ವ್ಯಕ್ತಿಗಳು ಸೌದಿ ಅರೇಬಿಯಾದಿಂದ ವಾಪಸ್ಸಾದ ಪ್ರಯಾಣಿಕನಿಂದ 4 ಲಕ್ಷ ಮೌಲ್ಯದ ವಿದೇಶಿ ನೋಟುಗಳನ್ನ ಪಡೆದು ವಂಚಿಸಿದ್ದರು. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ – ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ

    ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಗೋಲ್ಡಿ ಬ್ರಾರ್ ಹೆಸರಿನಲ್ಲಿ ಬೆದರಿಕೆ ಹಾಕಿ ಉದ್ಯಮಿಯಿಂದ 5 ಕೋಟಿ ಪಡೆದು ವಂಚಿಸಲಾಗಿದೆ. ಎಲ್ಲ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು ಸದ್ಯ ಪ್ರಗತಿ ಮೈದಾನ ಟನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸಿದ್ದಾರೆ.

    ಇದೇ ವಿಚಾರದಲ್ಲಿ ರಾಜಕಾರಣವೂ ಆರಂಭವಾಗಿದ್ದು ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವ ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಕೈಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ ನಮಗೆ ಕೊಡಿ ನಾವು ಮಾಡಿ ತೋರಿಸುತ್ತೇವೆ ಎಂದು ಸವಾಲ್‌ ಹಾಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ – ಕುಸ್ತಿಪಟುಗಳ ಸ್ಪಷ್ಟನೆ

    ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ – ಕುಸ್ತಿಪಟುಗಳ ಸ್ಪಷ್ಟನೆ

    ನವದೆಹಲಿ: ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧವೂ ಅಲ್ಲ, ಬ್ರಿಜ್‌ ಭೂಷಣ್‌ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ (Wrestler Protest) ಎಂದು ಒಲಿಂಪಿಕ್ಸ್‌ (Olympic) ಪದಕ ವಿಜೇತೆ ಸಾಕ್ಷಿ ಮಲಿಕ್‌ ಹಾಗೂ ಪತಿ ಸತ್ಯವರ್ತ್‌ ಕಡಿಯಾನ್‌ ಹೇಳಿದ್ದಾರೆ.

    ರಾಜಕೀಯ ಪ್ರೇರಿತವೆಂಬ (Politically Motivated) ಟೀಕೆಗಳಿಗೆ ಗುರಿಯಾಗಿದ್ದ ತಮ್ಮ ಹೋರಾಟದ ಬಗ್ಗೆ ಕುಸ್ತಿಪಟುಗಳು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

    WFI ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಲೈಂಗಿಕ ಆರೋಪ ಹೊರಿಸಿ ಹಲವು ದಿನಗಳಿಂದ ಕುಸ್ತಿಪಟುಗಳು ಹೋರಾಟ ನಡೆಸುತ್ತಿದ್ದರು. ದೆಹಲಿ ಜಂತರ್‌ ಮಂತರ್‌ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಸೇರಿದಂತೆ ಹಲವು ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಆರೋಪಿಸಲಾಗಿತ್ತು. ಈ ಕುರಿತು 11 ನಿಮಿಷಗಳ ಸುದೀರ್ಘ ವೀಡಿಯೋ ಹಂಚಿಕೊಂಡಿರುವ ಸಾಕ್ಷಿ ಮಲಿಕ್‌ ತಮ್ಮ ಹೋರಾಟದ ಕುರಿತು ಸ್ಪಷ್ಟನೆ ನೀಡಿದ್ದಾರೆ.

    ನಮ್ಮ ಹೋರಾಟದ ಬಗ್ಗೆ ವದಂತಿಗಳನ್ನ ಹರಡಲಾಗುತ್ತಿದೆ, ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಕಳೆದ ಜನವರಿಯಲ್ಲಿ ನಾವು ಜಂತರ್‌ ಮಂತರ್‌ ನಲ್ಲಿ ಪ್ರತಿಭಟನೆಗೆ ಇಳಿದಾಗಿ ಇಬ್ಬರು ಬಿಜೆಪಿ ನಾಯಕರನ್ನೇ ಕೋರಿ ಪೊಲೀಸರಿಂದ ಅನುಮತಿ ಪಡೆದುಕೊಂಡಿದ್ದೆವು. ಕಳೆದ 10-12 ವರ್ಷಗಳಿಂದ ಕುಸ್ತಿಪಟುಗಳ ಮೇಲೆ ಕಿರುಕುಳ ನಡೆಯುತ್ತಲೇ ಬಂದಿದೆ. 90 ಪ್ರತಿಶಕ್ಕೂ ಹೆಚ್ಚು ಕುಸ್ತಿಪಟುಗಳಿಗೆ ತೊಂದರೆ ಅನುಭವಿಸುತ್ತಿರುವುದು ತಿಳಿದಿತ್ತು. ಆದರೆ ಒಗ್ಗಟ್ಟಿನ ಕೊರತೆಯಿಂದಾಗಿ ಸುಮ್ಮನಿದ್ದೆವು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ಸಂಸತ್‌ ಮುತ್ತಿಗೆ ನಿರ್ಧಾರ ನಮ್ಮದಲ್ಲ:
    ನೂತನ ಸಂಸತ್‌ ಭವನಕ್ಕೆ ಮುತ್ತಿಗೆ ಹಾಕುವ ನಿರ್ಧಾರ ನಮ್ಮದಾಗಿರಲಿಲ್ಲ. ʻಮಹಿಳಾ ಪಂಚಾಯತ್‌ʼನಡೆಸಲು ಉದ್ದೇಶಿಸಿದ್ದು ನಾವಲ್ಲ ಎಂದು ಸ್ಪಷ್ಟಪಡಿಸಿದ ಸತ್ಯವರ್ತ್‌, ಮಹಿಳಾ ಸಮ್ಮಾನ್‌ ಪಂಚಾಯತ್‌ ನಡೆಸಲು ಕೆಲ ಪಂಚಾಯುತ್‌ ಸದಸ್ಯರು ನಿರ್ಧರಿಸಿದ್ದರು. ನಾವು ಅವರ ನಿರ್ಧಾರದಂತೆ ನಡೆದುಕೊಂಡೆವು, ಆದ್ರೆ ಅದು ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿತು, ಹೋರಾಟದಲ್ಲಿ ನಮ್ಮನ್ನ ಸಂಪೂರ್ಣ ಕುಗ್ಗುವಂತೆ ಮಾಡಿತು. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

    ಕುತಂತ್ರ ಅರ್ಥ ಮಾಡಿಕೊಳ್ಳಲಿಲ್ಲ:
    ಗಂಗಾ ನದಿಗೆ ಪದಕಗಳನ್ನ ಎಸೆಯಲು ಮುಂದಾದಾಗ ನಮ್ಮನ್ನ ತಡೆದರು. ಒಂದು ವೇಳೆ ಪದಕ ಎಸೆದಿದ್ದರೆ ಅದು ಹಿಂಸಾಚಾರಕ್ಕೆ ಕಾರಣವಾಗುತ್ತಿತ್ತು. ಅದಕ್ಕಾಗಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿದೆವು. ನಾವು ಯಾರದ್ದೋ ಕುತಂತ್ರಕ್ಕೆ ಬಲಿಯಾಗುತ್ತಿದ್ದೇವೆ ಎಂಬುದನ್ನ ಅರ್ಥಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಒತ್ತಡದಿಂದಲೇ ತೀರ್ಮಾನ ಕೈಗೊಳ್ಳುತ್ತಿದ್ದೆವು. ಜೀವನಪೂರ್ತಿ ಕುಸ್ತಿ ಆಡಿದರೂ, ಕೆಲ ಸಂದರ್ಭಗಳನ್ನ ನಿಭಾಯಿಸಲು ಸಾಧ್ಯವಾಗಲಿಲ್ಲ. ಹರಿಧ್ವಾರದ ಘಟನೆಯ ಬಳಿಕ ನಮ್ಮ ಬೆಂಬಲಕ್ಕೆ ಇರುವವರು ಯಾರು, ಸರ್ಕಾರದ ಪರವಾಗಿ ಇರುವವರು ಯಾರು ಅನ್ನೋದು ತಿಳಿಯಿತು ಎಂದು ಹೇಳಿಕೊಂಡಿದ್ದಾರೆ.

    ನಾವು ಏನಾದರೂ ತಪ್ಪು ಮಾಡಿದ್ರೆ ಕ್ಷಮೆ ಯಾಚಿಸುತ್ತೇವೆ. ನಮ್ಮ ಪ್ರತಿಭಟನೆಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ ಸತ್ಯವರ್ತ್‌, ಕೊನೆಯಲ್ಲಿ ಯಾವುದೇ ಸಂದರ್ಭದಲ್ಲಿ ನಾವು ಒಗ್ಗಟ್ಟಾಗಿ ಇಲ್ಲದಿದ್ದಾಗ ವ್ಯವಸ್ಥೆಯು ಅದರ ಪ್ರಯೋಜನ ಪಡೆದುಕೊಳ್ಳುತ್ತದೆ. ಆದ್ದರಿಂದ ಯಾವುದೇ ವ್ಯವಸ್ಥೆಯ ವಿರುದ್ಧ ಅನ್ಯಾಯ ಮೆಟ್ಟಿ ನಿಲ್ಲಬೇಕಾದರೆ ಮೊದಲು ಒಗ್ಗಟ್ಟಾಗಿರಿ ಎಂದು ಸಲಹೆ ನೀಡಿದ್ದಾರೆ.

  • ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

    ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

    ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Bhushan Sharan Singh) ವಿರುದ್ಧ ದೆಹಲಿ ಪೊಲೀಸರು ಗುರುವಾರ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ರೋಸ್ ಅವೆನ್ಯೂ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು ಜುಲೈ 4 ರಂದು ವಿಚಾರಣೆ ನಡೆಯಲಿದೆ.

    ಚಾರ್ಜ್‌ಶೀಟ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಫೋಕ್ಸೊ ಪ್ರಕರಣ ರದ್ದು ಮಾಡುವಂತೆ ಪೋಲೀಸರು ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ 500 ಪುಟಗಳ ವರದಿ ನೀಡಿರುವ ಪೊಲೀಸರು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಕ್ಕೆ ಯಾವುದೇ ಸಾಕ್ಷ್ಯ – ಪುರಾವೆಗಳು ಲಭ್ಯವಾಗಿಲ್ಲ ಎಂದು ನ್ಯಾಯಾಲಯಕ್ಕೆ (Court) ತಿಳಿಸಿದ್ದಾರೆ. ಇದನ್ನೂ ಓದಿ: ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ಕುಸ್ತಿಪಟುಗಳ ದೂರಿನ ಮೇರೆಗೆ ದಾಖಲಿಸಿದ FIR ಆಧರಿಸಿ ನಡೆಸಿದ ತನಿಖೆ ಬಳಿಕ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354, 354 A, 354 D ಮತ್ತು IPC ಸೆಕ್ಷನ್ 109/ 354/354 A/506ರ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸಂತ್ರಸ್ತೆಯ ಮತ್ತು ಆಕೆಯ ತಂದೆಯ ಹೇಳಿಕೆ ಆಧಾರದ ಮೇಲೆ ನಾವು ಪೋಕ್ಸೊ (POCSO) ರದ್ದತಿ ವರದಿ ಸಲ್ಲಿಸಿದ್ದೇವೆ ಎಂದು ದೆಹಲಿ ಪೊಲೀಸ್ ವಕ್ತಾರೆ ಸುಮನ್ ನಲ್ವಾ ಹೇಳಿದ್ದಾರೆ. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

    ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ನೂತನ ಸಂಸತ್‌ ಭವನದ ಎದುರು ಪ್ರತಿಭಟನೆ ನಡೆಸಲು ತೆರಳುತ್ತಿದ್ದಾಗ ಪೊಲೀಸರಿಂದ ಹಲ್ಲೆಗೊಳಗಾಗಿದ್ದರು. ಮಾತ್ರವಲ್ಲದೇ ದೆಹಲಿ ಪೊಲೀಸರು ಕುಸ್ತಿಪಟುಗಳ ವಿರುದ್ಧವೂ ಪ್ರಕರಣ ದಾಖಲಿಸಿದ್ದರು. ಇದರಿಂದ ಮನನೊಂದ ಕುಸ್ತಿಪಟುಗಳು ತಮ್ಮ ಒಲಿಂಪಿಕ್ಸ್‌ ಪದಕಗಳನ್ನ ಹರಿದ್ವಾರದಲ್ಲಿರುವ ಗಂಗಾನದಿಯಲ್ಲಿ ವಿರ್ಸಜನೆಗೆ ಮುಂದಾಗಿದ್ದರು.

    ಈ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಸಹೋದರ ಕುಸ್ತಿಪಟುಗಳನ್ನು ತಡೆದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ಚರ್ಚೆ ನಡೆಸಿದ್ದರು.