Tag: Delhi Police

  • ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

    ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

    – ಕನಿಷ್ಠ 3 ವರ್ಷ ಜೈಲು ಶಿಕ್ಷೆ ವಿಧಿಸಬಹುದಾದ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲು

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ದೆಹಲಿ ಪೊಲೀಸರು 2 ಎಫ್‌ಐಆರ್‌ ಮತ್ತು 10 ದೂರುಗಳನ್ನ ದಾಖಲಿಸಿದ್ದಾರೆ.

    ಕುಸ್ತಿಪಟುಗಳ ದೂರುಗಳ ಅನ್ವಯ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಇದೀಗ ಎಫ್‌ಐಆರ್‌ನಲ್ಲಿ ದೂರುಗಳು ಏನೆಂಬುದು ಬಹಿರಂಗಗೊಂಡಿದೆ. ಎರಡು ಎಫ್‌ಐಆರ್‌ ಪ್ರಕಾರ, ಬ್ರಿಜ್‌ ಭೂಷಣ್‌ ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆಯಿಟ್ಟಿದ್ದರು, ಅನುಚಿತವಾಗಿ‌ ದೇಹ ಸ್ಪರ್ಶಿಸುವುದು, ಹುಡುಗಿಯರ ಎದೆ ಮೇಲೆ ಕೈ ಹಾಕುವುದು, ಮೈ-ಕೈ ಮುಟ್ಟುವುದು, ಅವರನ್ನು ಹಿಂಬಾಲಿಸುವುದು ಸೇರಿದಂತೆ 10 ದೂರುಗಳನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್‌ ಪ್ರಶ್ನೆ

    ಕಳೆದ ಏಪ್ರಿಲ್‌ 21 ರಂದೇ ದೂರು ದಾಖಲಾಗಿದ್ದು, ಏಪ್ರಿಲ್‌ 28 ರಂದು ಎರಡು FIR ದಾಖಲಾಗಿದೆ. ಭೂಷಣ್‌ ವಿರುದ್ಧ IPC ಸೆಕ್ಷನ್‌ 354, 354 (ಎ), 354 (ಡಿ) ಹಾಗೂ ಸೆಕ್ಷನ್‌ 34ರ ಅಡಿಯಲ್ಲಿ ಕೇಸ್‌ ದಾಖಲಾಗಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಗೆ ಒಳಪಡಿಸಬಹುದಾಗಿದೆ. ಭೂಷಣ್‌ ತಮ್ಮ ಮೊಣಕಾಲುಗಳು, ಅಂಗೈ ಮೇಲೆ ಮುಟ್ಟುತ್ತಿದ್ದ, ಉಸಿರಾಟ ಅರ್ಥಮಾಡಿಕೊಳ್ಳುವ ನೆಪದಲ್ಲಿ ಎದೆ ಮತ್ತು ಹೊಟ್ಟೆಯ ಮೇಲೂ ಸ್ಪರ್ಶಿಸುತ್ತಿದ್ದ. ತಮ್ಮ ಟೀ ಶರ್ಟ್‌ ಎಳೆದು ಎದೆ ಮೇಲೆ ಕೈ ಹಾಕಿದ್ದ, ತಮ್ಮನ್ನು ತಬ್ಬಿಕೊಳ್ಳುತ್ತಿದ್ದ ಎಂದು ಮಹಿಳಾ ಕುಸ್ತಿಪಟುಗಳು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಯುದ್ಧ ಮುಂದುವರಿಸಲಿ – ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ದಾದಾ

    ಮೊದಲ ಎಫ್‌ಐಆರ್‌ನಲ್ಲಿ 6 ಒಲಿಂಪಿಯನ್‌ಗಳ ಆರೋಪ ಉಲ್ಲೇಖಿಸಿದರೆ, 2ನೇ ಎಫ್‌ಐಆರ್‌ನಲ್ಲಿ ಅಪ್ರಾಪ್ತೆಯರ ಪೋಷಕರ ದೂರುಗಳನ್ನ ದಾಖಲಿಸಲಾಗಿದೆ. ಭೂಷಣ್‌ ತಮ್ಮನ್ನು ಬಿಗಿಯಾಗಿ ಹಿಡಿದುಕೊಳ್ಳುತ್ತಿದ್ದ, ಭುಜವನ್ನು ಬೇಕಂತಲೇ ಒತ್ತಿ ಹಿಡಿಯುತ್ತಿದ್ದ, ಅನುಚಿತವಾಗಿ ದೇಹವನ್ನ ಸ್ಪರ್ಶಿಸುತ್ತಿದ್ದ ಎಂದು ಪೋಷಕರು ದೂರು ದಾಖಲಿಸಿದ್ದಾರೆ.

    ಕಳೆದವಾರ ನೂತನ ಸಂಸತ್‌ ಭವನದ ಎದುರು ಪ್ರತಿಭಟನೆ ನಡೆಸಲು ಕುಸ್ತಿಪಟುಗಳು ಮುಂದಾದ ನಂತರ ಕುಸ್ತಿಪಟುಗಳ ವಿರುದ್ಧವೂ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

  • ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್‌ ಪ್ರಶ್ನೆ

    ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್‌ ಪ್ರಶ್ನೆ

    ನವದೆಹಲಿ: ಭಾರತೀಯ ಕುಸ್ತಿ ಫಡೆರೇಶನ್‌ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಲೈಂಗಿಕ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರು (Delhi Police) ಕೇಸ್‌ ದಾಖಲಿಸಿದ್ದಾರೆ.

    ಒಲಿಂಪಿಕ್‌ ಪದಕ ವಿಜೇತರಾದ ಬಜರಂಗ್‌ ಪೂನಿಯಾ (Bajrang Punia), ವಿನೇಶ್‌ ಫೋಗಟ್‌, ಸಂಗೀತಾ ಫೋಗಟ್‌ ಹಾಗೂ ಸಾಕ್ಷಿ ಮಲಿಕ್‌ (Sakshi Malik) ಸೇರಿದಂತೆ ಹಲವರ ವಿರುದ್ಧ IPC ಸೆಕ್ಷನ್ 147, 149, 186, 188, 332, 353 PDPP ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!

    ಕ್ರೀಡಾಪಟುಗಳ ವಿರುದ್ಧ ಎಫ್‌ಐಆರ್‌ ದಾಖಲಾದ ನಂತರ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬ್ರಿಜ್‌ ಭೂಷಣ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ದೆಹಲಿ ಪೊಲೀಸರಿಗೆ 7 ದಿನಗಳ ಬೇಕಾಯಿತು. ಆದ್ರೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಮ್ಮ ವಿರುದ್ಧ ಕೇಸ್‌ ದಾಖಲಿಸಲು 7 ಗಂಟೆಯೂ ಬೇಕಾಗಲಿಲ್ಲ. ಈ ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ? ತನ್ನ ದೇಶದ ಕ್ರೀಡಾಪಟುಗಳನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದನ್ನ ಕ್ರೀಡಾ ಜಗತ್ತೇ ನೋಡುತ್ತಿದೆ ಎಂದು ಸಾಕ್ಷಿ ಮಲಿಕ್‌ ಟ್ವೀಟ್‌ ಮೂಲಕ ಕಿಡಿ ಕಾರಿದ್ದಾರೆ.

    ಭಾನುವಾರ ಹೊಸ ಸಂಸತ್‌ ಭವನದ ಎದುರು ಪ್ರತಿಭಟನೆ ನಡೆಸಲು ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೆ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದರು. ಬಳಿಕ ಸಂಜೆ ವೇಳೆಗೆ ಅವರನ್ನು ಬಿಡುಗಡೆಗೊಳಿಸಲಾಯಿತು. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೌರ್ಜನ್ಯ – ದೆಹಲಿ ಪೊಲೀಸರ ನಡೆಗೆ ವ್ಯಾಪಕ ಖಂಡನೆ

    ವ್ಯಾಪಕ ಖಂಡನೆ:
    ಕುಸ್ತಿಪಟುಗಳ ಮೇಲೆ ಪೊಲೀಸರ ದೌರ್ಜನ್ಯವನ್ನು ರಾಷ್ಟ್ರೀಯ ನಾಯಕರು ಖಂಡಿಸಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ನಾಯಕರು ಖಂಡಿಸಿದ್ದು, ಬ್ರಿಜ್‌ ಭೂಷಣ್‌ ಬಂಧಿಸುವಂತೆ ಆಗ್ರಹಿಸಿದ್ದಾರೆ.

  • ಕುಸ್ತಿಪಟುಗಳ ಮೇಲೆ ದೌರ್ಜನ್ಯ – ದೆಹಲಿ ಪೊಲೀಸರ ನಡೆಗೆ ವ್ಯಾಪಕ ಖಂಡನೆ

    ಕುಸ್ತಿಪಟುಗಳ ಮೇಲೆ ದೌರ್ಜನ್ಯ – ದೆಹಲಿ ಪೊಲೀಸರ ನಡೆಗೆ ವ್ಯಾಪಕ ಖಂಡನೆ

    ನವದೆಹಲಿ: ಭಾನುವಾರ ಉದ್ಘಾಟನೆಗೊಂಡ ನೂತನ ಸಂಸತ್ ಭವನದ (New Parliament Building) ಹೊರಗೆ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕುಸ್ತಿಪಟುಗಳನ್ನು (Wrestlers) ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಆರೋಪ ಹೊರಿಸಿ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಭಾನುವಾರ ‘ಮಹಿಳಾ ಸಮ್ಮಾನ್ ಮಹಾಪಂಚಾಯತ್’ (Mahapanchayat) ಕರೆ ನೀಡಿದ್ದರು. ಇದರ ಭಾಗವಾಗಿ ಹೊಸ ಸಂಸತ್ ಭವನದ ಮುಂದೆ ಪ್ರತಿಭಟಿಸಲು ಯೋಜಿಸಿದ್ದರು. ಅದಕ್ಕಾಗಿ ಮೆರವಣಿಗೆ ಹೊರಟಿದ್ದರು. ಇದನ್ನೂ ಓದಿ: ಕುಸ್ತಿಪಟುಗಳ ಹೋರಾಟಕ್ಕೆ ದಾವಣಗೆರೆ ವಿದ್ಯಾರ್ಥಿಗಳ ಬೆಂಬಲ

    ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಈ ವೇಳೆ ಬ್ಯಾರಿಕೇಡ್ ಹಾಕಿ ಕುಸ್ತಿಪಟುಗಳನ್ನು ತಡೆಯಲು ಪೊಲೀಸರು (Delhi Police) ಮುಂದಾದಾಗ, ಬ್ಯಾರಿಕೇಡ್‌ಗಳನ್ನ ಭೇದಿಸಲು ಮುಂದಾದರು. ಈ ವೇಳೆ ಕೆಲ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರು, ಪ್ರತಿಭಟನಾ ನಿರತರನ್ನ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು

    ತಮ್ಮ ಮೇಲೆ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿರುವ ಕುಸ್ತಿಪಟು ಸಾಕ್ಷಿ ಮಲಿಕ್ ಕೆಲವು ಚಿತ್ರಗಳನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಯಾವುದೇ ಸರ್ಕಾರ ತಮ್ಮ ದೇಶದ ಚಾಂಪಿಯನ್‌ಗಳನ್ನ ಈ ರೀತಿ ನಡೆಸಿಕೊಳ್ಳುತ್ತದೆಯೇ? ನಾವು ಏನು ಅಪರಾಧ ಮಾಡಿದ್ದೀವಿ? ಎಂದು ಪ್ರಶ್ನಿಸಿದ್ದಾರೆ. ಕೆಲ ದಿನಗಳ ಹಿಂದೆಯೂ ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು.

    ಈ ಕುರಿತು ಪ್ರತಿಕ್ರಿಯಿಸಿರುವ ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್, ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘಿಸಿದ್ದಕ್ಕಾಗಿ ಕುಸ್ತಿಪಟುಗಳನ್ನ ವಶಕ್ಕೆ ಪಡೆದಿದ್ದೇವೆ. ಸೂಕ್ತ ಸಮಯದಲ್ಲಿ ವಿಚಾರಣೆ ನಡೆಸಿ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ವ್ಯಾಪಕ ಖಂಡನೆ: ಸದ್ಯ ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ದೆಹಲಿ ಪೊಲೀಸರ ನಡೆಯನ್ನ ಖಂಡಿಸಿದ್ದಾರೆ.

    ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸರು ಈ ರೀತಿ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ. ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

  • ಬ್ರಿಜ್ ಭೂಷಣ್ ವಿರುದ್ಧದ ಕಿರುಕುಳ ಆರೋಪ – ತನಿಖೆಗೆ ಎಸ್‍ಐಟಿ ರಚನೆ

    ಬ್ರಿಜ್ ಭೂಷಣ್ ವಿರುದ್ಧದ ಕಿರುಕುಳ ಆರೋಪ – ತನಿಖೆಗೆ ಎಸ್‍ಐಟಿ ರಚನೆ

    ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ (WFI) ಬ್ರಿಜ್ ಭೂಷಣ್ ಸಿಂಗ್ (Brij Bhushan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ ಎಂದು ದೆಹಲಿ ಪೊಲೀಸರು (Delhi Police) ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ (Special Court) ಮಾಹಿತಿ ನೀಡಿದ್ದಾರೆ.

    ನ್ಯಾಯಾಲಯ ನೀಡಿದ್ದ ಆದೇಶದ ಅನ್ವಯ ಎಸ್‍ಐಟಿ ರಚಿಸಲಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನಾವು ಎಸ್‍ಐಟಿ ರಚಿಸಿದ್ದೇವೆ. ಎಸ್‍ಐಟಿ ಪ್ರಕರಣದ ತನಿಖೆ ನಡೆಸಲಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ್ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನ ನೇಣಿಗಾದ್ರೂ ಹಾಕಿ, ಆದ್ರೆ ಕುಸ್ತಿ ನಿಲ್ಲಿಸಿದ್ರೆ ನಿಮ್ಮ ಭವಿಷ್ಯಕ್ಕೆ ಹಾನಿ – ಬ್ರಿಜ್‌ಭೂಷಣ್ ಭಾವುಕ ಹೇಳಿಕೆ

    ವರದಿಯನ್ನು ದೆಹಲಿ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ, ಪ್ರಕರಣದ ಸ್ವರೂಪವನ್ನು ಪರಿಗಣಿಸಿ ವರದಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ವಿನಂತಿಸಿದ್ದಾರೆ. ಬಳಿಕ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿತು.

    ಅಪ್ರಾಪ್ತೆ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲ್ಲಿಕ್, ಬಜರಂಗ್ ಪೂನಿಯಾ ಸೇರಿದಂತೆ ಹಲವರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತನಿಖೆಯ ವಿಚಾರಣೆ ಕೋರಿ ಕುಸ್ತಿಪಟುಗಳು ಸಲ್ಲಿಸಿದ ಮನವಿಯ ಮೇರೆಗೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿತ್ತು.

    ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪೊಲೀಸರು ಪೋಕ್ಸೋ (POCSO) ಸೇರಿದಂತೆ ಎರಡು ಎಫ್‍ಐಆರ್‌ಗಳನ್ನು (FIR) ದಾಖಲಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ, ಅದ್ಕೆ ಬೇರೆ ಪಕ್ಷದ ಜೊತೆ ಮಾತಾಡುವ ಪ್ರಯತ್ನ ಮಾಡ್ತಿದ್ದಾರೆ – ಸಿಎಂ

  • ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

    ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

    ನವದೆಹಲಿ: ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು (Delhi Police) ಓರ್ವನನ್ನು ಬಂಧಿಸಿದ್ದಾರೆ.

    KILLING CRIME

    ರಾಣಾ ಅವರ ಪತ್ನಿ ಸಾಚಿ ಮಾರ್ವಾ (Saachi Marwah) ಅವರು ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸಿದ್ದಾರೆ. ಕೃತ್ಯವನ್ನು ಮುರ್ವಾ ಅವರು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ನಾನು ಪೊಲೀಸರಿಗೆ ಫೋನ್‍ನಲ್ಲಿ ಮಾಹಿತಿ ನೀಡಿದಾಗ, ಸುರಕ್ಷಿತವಾಗಿ ಮನೆ ತಲುಪಿದ್ದೀರಾ? ಹೋಗಲಿ ಬಿಡಿ, ಮುಂದಿನ ಬಾರಿ ಇದೇ ರೀತಿ ನಡೆದರೆ ನಂಬರ್ ನೋಟ್ ಮಾಡಿಕೊಳ್ಳುವಂತೆ ಹೇಳಿದರು. ಅದಕ್ಕೆ ಪ್ರತಿಯಾಗಿ ಮಾರ್ವಾ ಅವರು ಮುಂದಿನ ಬಾರಿ ಅವರ ಫೋನ್ ನಂಬರ್‌ಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಆಕ್ರೋಶದಿಂದ ಬರೆದುಕೊಂಡಿದ್ದಾರೆ.

    ಮಾರ್ವಾ ಅವರು ಆರ್ಕಿಟೆಕ್ಚರಲ್ ಡಿಸೈನರ್ ಆಗಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟಿಗ ನಿತೀಶ್ ರಾಣಾ ಅವರ ಪತ್ನಿಯಾಗಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

  • ಬಿಜೆಪಿ ಸಂಸದನ ವಿರುದ್ಧ ಪ್ರತಿಭಟನೆ – ಕುಸ್ತಿಪಟುಗಳ ಭೇಟಿಯಾದ ಪ್ರಿಯಾಂಕಾ ಗಾಂಧಿ

    ಬಿಜೆಪಿ ಸಂಸದನ ವಿರುದ್ಧ ಪ್ರತಿಭಟನೆ – ಕುಸ್ತಿಪಟುಗಳ ಭೇಟಿಯಾದ ಪ್ರಿಯಾಂಕಾ ಗಾಂಧಿ

    ನವದೆಹಲಿ: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಧರಣಿ ನಡೆಸುತ್ತಿದ್ದ ಮಹಿಳಾ ಕುಸ್ತಿಪಟುಗಳನ್ನು ಶನಿವಾರ ಮುಂಜಾನೆ ಭೇಟಿಯಾಗಿದ್ದು, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ದೌರ್ಜನ್ಯ (Sexual Harassment) ಆರೋಪದ ಮೇಲೆ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ಮಹಿಳಾ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ (Sakshi Malik), ವಿನೇಶ್ ಫೋಗಟ್ (Vinesh Phogat) ಅವರನ್ನು ಪ್ರಿಯಾಂಕಾ ಭೇಟಿಯಾಗಿದ್ದಾರೆ. ಇದನ್ನೂ ಓದಿ: ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

    ಬ್ರಿಜ್‍ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗೆ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಭಾರತದ ಮಾಜಿ ಕ್ರಿಕೆಟ್ ತಾರೆ ಕಪಿಲ್ ದೇವ್ ಸಹ ಬೆಂಬಲ ಘೋಷಿಸಿದ್ದರು.

    ಸುಪ್ರೀಂ ಕೋರ್ಟ್ (Supreme Court) ಆದೇಶದ ನಂತರ ದೆಹಲಿ ಪೊಲೀಸರು (Delhi Police) ಶುಕ್ರವಾರ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಕ್ರಮದ ಭರವಸೆಯ ನಂತರವೂ ಕುಸ್ತಿಪಟುಗಳು ತಕ್ಷಣ ಬಂಧನಕ್ಕೆ ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.

    ನಾವು ಸುಪ್ರೀಂ ಕೋರ್ಟ್‍ನ ಆದೇಶವನ್ನು ಗೌರವಿಸುತ್ತೇವೆ. ಆದರೆ ನಮಗೆ ದೆಹಲಿ ಪೊಲೀಸರ ಮೇಲೆ ನಂಬಿಕೆ ಇಲ್ಲ. ಈ ಹೋರಾಟ ಕೇವಲ ಎಫ್‌ಐಆರ್‌ಗಾಗಿ ಅಲ್ಲ. ಈ ಹೋರಾಟ ಅವರಂತಹವರನ್ನು ಶಿಕ್ಷಿಸಲು. ಅವರು ಜೈಲಿನಲ್ಲಿರಬೇಕು ಮತ್ತು ಅವರ ಅಧಿಕಾರವನ್ನು ಕಸಿದುಕೊಳ್ಳಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ

  • ಮದುವೆಯಾಗುವಂತೆ ಕೇಳಿದ್ದಕ್ಕೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಕೊಂದೇಬಿಟ್ಟ – ಮುಂದೇನಾಯ್ತು?

    ಮದುವೆಯಾಗುವಂತೆ ಕೇಳಿದ್ದಕ್ಕೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಕೊಂದೇಬಿಟ್ಟ – ಮುಂದೇನಾಯ್ತು?

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ (Live In Relationship) 25ರ ಮಹಿಳೆಯನ್ನ ಕತ್ತು ಹಿಸುಕಿ ಕೊಲೆಗೈದು, ಆಕೆಯ ಮೃತದೇಹವನ್ನು ಮನೆಯಿಂದ 12 ಕಿಮೀ ದೂರದಲ್ಲಿ ಎಸೆದಿರುವ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದೆ.

    ಇದೇ ಏಪ್ರಿಲ್‌ 12ರ ತಡರಾತ್ರಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ (Women) ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿರಲಿಲ್ಲ, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬಂದಿದೆ ಎಂದು ಉಪಪೊಲೀಸ್‌ ಆಯುಕ್ತ ಜಾರ್ಜ್‌ ಟರ್ಕಿ ತಿಳಿಸಿದ್ದಾರೆ. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

    ಏನಿದು ಘಟನೆ?
    ರೋಹಿತಾ (25) ಎಂಬ ಮಹಿಳೆ, ವಿನೀತ್‌ ಎಂಬವನ ಜೊತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದಳು. ಕಳೆದ 4 ವರ್ಷಗಳ ಹಿಂದೆ ಇವರಿಬ್ಬರು ಮನೆ ಬಿಟ್ಟು ಓಡಿಹೋಗಿದ್ದರು. ನಂತರ ರೋಹಿತಾ, ವಿನೀತ್‌ಗೆ ಮದುವೆಯಾಗುವಂತೆ (Marriage) ಒತ್ತಾಯಿಸುತ್ತಿದ್ದಳು. ಇದೇ ವಿಷಯಕ್ಕಾಗಿ ಇವರಿಬ್ಬರ ನಡುವೆ ಜಗಳ ನಡೆದಿತ್ತು. ಏಪ್ರಿಲ್‌ 12 ರಂದು ಸಹ ಜಗಳವಾಡಿದ್ದರು, ಈ ವೇಳೆ ಮಾತಿಗೆ ಮಾತು ಬೆಳೆದು, ವಿನೀತ್‌, ರೋಹಿತಾಳನ್ನ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ನಂತರ ತನ್ನ ಸ್ನೇಹಿತನ ಸಹಾಯದಿಂದ ಶವ ಎಸೆದು ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣ – 8 ದೋಷಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

    ಮೃತದೇಹ ಪತ್ತೆಯಾದ ನಂತರ ಅರೋಪಿಗಳನ್ನ ಪತ್ತೆಹಚ್ಚಲು 50ಕ್ಕೂ ಹೆಚ್ಚು ಪೊಲೀಸರನ್ನೊಳಗೊಂಡ ವಿಶೇಷ ತಂಡವನ್ನ ರಚಿಸಲಾಗಿತ್ತು. ಶವ ಪತ್ತೆಯಾದ ಸ್ಥಳದಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದಾಗ ಬೈಕ್‌ನಲ್ಲಿ ಇಬ್ಬರು ಪುರುಷರು ಮೃತದೇಹ ಎಸೆದು ಹೋಗಿರುವುದು ಕಂಡುಬಂದಿತ್ತು. ವೀಡಿಯೋದಲ್ಲಿ ಒಬ್ಬ ವ್ಯಕ್ತಿ ತನ್ನ ಭುಜದ ಮೇಲೆ ಮೃತದೇಹ ಹೊತ್ತುಕೊಂಡು ಹೋಗುತ್ತಿದ್ದನು, ಈ ವೇಳೆ ಆರೋಪಿಯ ಸಹೋದರಿ ಪಾರುಲ್‌, ಅವನ ಹಿಂದೆ ಹೋಗುತ್ತಿದ್ದಳು. ಅಲ್ಲದೇ ತನ್ನ ಸ್ಕಾಫ್‌ನಿಂದ ಶವವನ್ನ ಮರೆಮಾಚಲು ಸಹಾಯ ಮಾಡಿದ್ದಳು ಎಂಬುದು ಗೊತ್ತಾಯಿತು. ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಒಪ್ಪಿಕೊಂಡಳು.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವ ಸಾಗಿಸಿದ್ದ ಬೈಕ್‌ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಆರೋಪಿಗಳಿಗೆ ಸಹಕರಿಸಿದ್ದ ಎರಡು ಮಕ್ಕಳ ತಾಯಿ ಪಾರುಲ್‌ ಎಂಬಾಕೆಯನ್ನ ಬಂಧಿಸಲಾಗಿದೆ. ವಿನೀತ್‌ ಹಾಗೂ ಸ್ನೇಹಿತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ವಿನೀತ್ ಮತ್ತು ಅವನ ತಂದೆ 2019 ರಲ್ಲಿ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಆದ್ರೆ ಆರೋಪಿ ವಿನೀತ್‌ ಕಳೆದ ವರ್ಷ ನವೆಂಬರ್‌ನಿಂದ ಜಾಮೀನಿನ ಮೇಲೆ ಹೊರಗಿದ್ದ.

  • ಲಂಡನ್‌ನ ಭಾರತೀಯ ಹೈಕಮಿಷನ್ ಮೇಲೆ ದಾಳಿ – ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು

    ಲಂಡನ್‌ನ ಭಾರತೀಯ ಹೈಕಮಿಷನ್ ಮೇಲೆ ದಾಳಿ – ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು

    ನವದೆಹಲಿ: ಮಾರ್ಚ್ 19 ರಂದು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ (Indian High Commission in London) ಎದುರು ಖಲಿಸ್ತಾನಿ (Khalistan) ಬೆಂಬಲಿಗರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು (Delhi Police) ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಐಪಿಸಿ, ಯುಎಪಿಎ ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ದೆಹಲಿ ಪೊಲೀಸರಿಗೆ ಸೂಚಿಸಿದ್ದು, ಈ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

    ದೆಹಲಿ ಪೊಲೀಸರ ವಿಶೇಷ ತಂಡ ಈ ಪ್ರಕರಣದ ತನಿಖೆಯನ್ನು ಆರಂಭಿಸಿದೆ. ವಿದೇಶದಲ್ಲಿ ಭಾರತೀಯ ರಾಷ್ಟ್ರೀಯತೆಯನ್ನು ಹೊಂದಿರುವ ಕೆಲ ವ್ಯಕ್ತಿಗಳೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿರುವ ಕಾರಣ ವಿಶೇಷ ತಂಡ ತನಿಖೆಯನ್ನು ಪ್ರಾರಂಭಿಸಿದೆ.

    ಮಾರ್ಚ್ 19ರಂದು ಖಲಿಸ್ತಾನಿ ಬೆಂಬಲಿಗರ ಗುಂಪು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಬಳಿ ಪ್ರತ್ಯೇಕತಾವಾದಿ ನಾಯಕ ಅಮೃತ್‌ಪಾಲ್ ಸಿಂಗ್‌ನ ಪರ ಪೋಸ್ಟರ್ ಹಾಗೂ ಧ್ವಜಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ವೀಡಿಯೋವೊಂದರಲ್ಲಿ ಕಿಡಿಗೇಡಿಗಳು ಹೈಕಮಿಷನ್‌ನ ಗೋಡೆಯನ್ನು ಹತ್ತಿ ಭಾರತದ ಧ್ವಜವನ್ನು ಉರುಳಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: 12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್

    ಭಾರತಕ್ಕೆ ವಿರೋಧವಾಗಿ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹತೋಟಿಗೆ ತರಲು ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆದರೂ ಖಲಿಸ್ತಾನಿ ಬೆಂಬಲಿಗರು ಖಲಿಸ್ತಾನ ಜಿಂದಾಬಾದ್, ಭಾರತ ಸರ್ಕಾರ ನಾಚಿಕೆಗೇಡು ಎಂದು ಘೋಷಣೆ ಕೂಗಿದ್ದಾರೆ.

    ಭಾರತೀಯ ಹೈಕಮಿಷನ್‌ನಲ್ಲಿ ನಡೆದ ವಿಧ್ವಂಸಕ ಕೃತ್ಯದ ಬಳಿಕ ಭಾರತದಲ್ಲಿನ ಬ್ರಿಟನ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಘಟನೆಗಳನ್ನು ಖಂಡಿಸಿದ್ದಾರೆ. ಭಾರತೀಯ ಹೈಕಮಿಷನ್‌ನ ಆವರಣದಲ್ಲಿ ಅವಮಾನಕರ ಕೃತ್ಯಗಳನ್ನು ಎಸಗಿರುವುದನ್ನು ನಾನು ಖಂಡಿಸುತ್ತೇನೆ. ಇದು ಸಂಪೂರ್ಣ ಸ್ವೀಕಾರಾರ್ಹವಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ

  • ರಾಹುಲ್ ಗಾಂಧಿಗೆ ನೋಟಿಸ್ ನೀಡಲು 3 ಗಂಟೆ ಕಾದ ಪೊಲೀಸರು

    ರಾಹುಲ್ ಗಾಂಧಿಗೆ ನೋಟಿಸ್ ನೀಡಲು 3 ಗಂಟೆ ಕಾದ ಪೊಲೀಸರು

    ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಪ್ರಸ್ತಾಪಿಸಿದ್ದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಕೋರಿ ಕಾಂಗ್ರೆಸ್ (Congress) ಸಂಸದ ರಾಹುಲ್ ಗಾಂಧಿ (Rahul Gandhi) ನೋಟಿಸ್ ನೀಡಲು ಹೋದಾಗ ದೆಹಲಿ ಪೊಲೀಸರು 3 ಗಂಟೆಗಳ ಕಾಲ ಕಾದ ಘಟನೆ ನಡೆದಿದೆ.

    ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವೇಳೆ ಲೈಂಗಿಕ ಕಿರುಕುಳದ ಸಂತ್ರಸ್ತರ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು (Delhi Police), ನಿಮ್ಮನ್ನು ಸಂಪರ್ಕಿಸಿದ ಸಂತ್ರಸ್ತರ ಬಗ್ಗೆ ಮಾಹಿತಿ ನೀಡಿ, ನಾವು ಅವರಿಗೆ ಭದ್ರತೆಯನ್ನು ನೀಡುತ್ತೇವೆ ಎನ್ನುವ ನೋಟಿಸ್ ನೀಡಲು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. 3 ಗಂಟೆಗಳ ಕಾಲ ಕಾಯುತ್ತಿದ್ದರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿದೆ.

    ಇದಾದ ಬಳಿಕ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ನೋಟಿಸ್ ನೀಡಿದ್ದರು. ಆ ವೇಳೆಯೂ ಒಂದೂವರೆ ಗಂಟೆಗಳ ನಂತರ ಸ್ವತಃ ರಾಹುಲ್ ಗಾಂಧಿ ಅವರೇ ನೋಟಿಸ್ ಅನ್ನು ಪಡೆದರು.

    ಘಟನೆಯೇನು?: ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು. ಈ ವೇಳೆ ಹುಡುಗಿಯೊಬ್ಬಳು ಬಂದು ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು ತಿಳಿಸಿದ್ದಳು. ಈ ವೇಳೆ ಪೊಲೀಸರಿಗೆ ಕರೆ ಮಾಡಲೇ ಎಂದು ಕೇಳಿದ್ದಕ್ಕೆ, ಪೊಲೀಸರಿಗೆ ಕರೆ ಮಾಡಬೇಡಿ, ಆಗ ನನಗೆ ಅವಮಾನವಾಗುತ್ತದೆ ಎಂದು ಹೇಳಿದ್ದಳು ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಹಿತಿ ಕೋರಿ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಉರಿಗೌಡ, ನಂಜೇಗೌಡ ಟಿಪ್ಪುವನ್ನ ಕೊಂದಿರೋದು ಸತ್ಯ – ಸಿ.ಟಿ ರವಿ

    ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಅದಾನಿ – ಹಿಂಡೆನ್ ಬರ್ಗ್‌ ಕುರಿತು ರಾಹುಲ್ ಗಾಂಧಿ ಅವರು ಕೇಳುವ ಪ್ರಶ್ನೆಯಿಂದ ಸರ್ಕಾರ ತಲ್ಲಣಗೊಂಡಿದೆ. ಅದಕ್ಕಾಗಿ ಭಾರತ್ ಜೋಡೋ ಯಾತ್ರೆ ಮುಗಿದ 45 ದಿನಗಳ ನಂತರ ದೆಹಲಿ ಪೊಲೀಸರು ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿ ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ಹಿಂಸಾಚಾರದ ಬಗ್ಗೆ ಮಾತನಾಡಿ, ಮಹಿಳೆಯ ವಿವರವನ್ನು ಕೇಳಿದ್ದಾರೆ ಎಂದು ಕಿಡಿಕಾರಿದ್ದಾರೆ. ನೋಟಿಸ್‍ಗೆ ಕಾನೂನು ಪ್ರಕಾರ ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುವುದಾಗಿ ಕಾಂಗ್ರೆಸ್ ತಿಳಿಸಿದೆ. ಇದನ್ನೂ ಓದಿ: ನಾನು ಪೂಜಾರಿ ಅಷ್ಟೇ, ಜನ ಹೇಳಿದ್ದು ದೇವರಿಗೆ ತಲುಪಿಸುತ್ತೇನೆ: ಡಿಕೆಶಿ

  • IAF ಮಾಜಿ ಅಧಿಕಾರಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ- ಕಾರಣ ನಿಗೂಢ

    IAF ಮಾಜಿ ಅಧಿಕಾರಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ- ಕಾರಣ ನಿಗೂಢ

    ನವದೆಹಲಿ: ಭಾರತೀಯ ವಾಯುಪಡೆಯ (IAF) ಮಾಜಿ ಅಧಿಕಾರಿ ಹಾಗೂ ಅವರ ಪತ್ನಿ ಇಬ್ಬರೂ ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

    ದಕ್ಷಿಣ ದೆಹಲಿಯಲ್ಲಿರುವ (South Delhi) ತಮ್ಮ ನಿವಾಸದಲ್ಲಿ ಅಜಯ್ ಪಾಲ್ (37), ಪತ್ನಿ ಮೋನಿಕಾ (32) ಪ್ರತ್ಯೇಕ ಸಂದರ್ಭಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರ್ಕೊಂಡು ಬರಬೇಕು- ಸಿದ್ದರಾಮಯ್ಯ ಮಾತು ವೈರಲ್

    ಮೋನಿಕಾ ಪಾಲ್ ತನ್ನ ಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿ, ಬಾಯಿಯಿಂದ ನೊರೆ ಹೊರಬರುತ್ತಿರುವುದನ್ನು ಕಂಡು ಆತಂಕಗೊಂಡಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅಜಯ್ ಪಾಲ್ ಮೃತಪಟ್ಟಿದ್ದರು. ಇದನ್ನೂ ಓದಿ: ತ್ರಿಪುರಾದಲ್ಲಿ ಬಿಜೆಪಿ, ನಾಗಾಲ್ಯಾಂಡ್‌ ಎನ್‌ಡಿಪಿಪಿ, ಮೇಘಾಲಯದಲ್ಲಿ ಎನ್‌ಪಿಪಿ ಮುನ್ನಡೆ

    ನಂತರ ಮನೆಗೆ ಮರಳಿದ ಮೋನಿಕಾ ಪಾಲ್ ಮಧ್ಯಾಹ್ನದ ವೇಳೆಗೆ ತಾನೂ ವಿಷ ಸೇವಿಸಿದ್ದಾರೆ. ಅಜಯ್ ಪಾಲ್ ಆತ್ಮಹತ್ಯೆ ಬಗ್ಗೆ ಪೊಲೀಸರು ಮಾಹಿತಿ ಪಡೆಯಲು ಮನೆಗೆ ಬಂದಾಗ ಯಾರೂ ಇಲ್ಲದನ್ನ ಕಂಡು ಸಂಶಯಗೊಂಡಿದ್ದಾರೆ. ನಂತರ ಬಾಗಿಲು ಒಡೆದು ನೋಡಿದಾಗ ಆಕೆಯೂ ಮೃತಪಟ್ಟಿರುವುದು ತಿಳಿದುಬಂದಿದೆ.

    ಅಜಯ್ ಪಾಲ್ ಇತ್ತೀಚೆಗಷ್ಟೇ ವಾಯುಸೇನೆ ತೊರೆದಿದ್ದರು. ವರ್ಷದ ಹಿಂದೆ ಇಬ್ಬರು ಮದುವೆಯಾಗಿದ್ದರು. ಆತ್ಮಹತ್ಯೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು (Delhi Police) ತನಿಖೆ ನಡೆಸುತ್ತಿದ್ದಾರೆ.