Tag: Delhi Police

  • ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್

    ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್

    ನವದೆಹಲಿ: ಪಾಕಿಸ್ತಾನ (Pakistan), ಚೀನಾ (China) ಮತ್ತು ಹಾಂಕಾಂಗ್‌ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದು, ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ (NIA) ಮುಂಬೈ ಪೊಲೀಸರಿಗೆ (Mumbai Police) ಇ-ಮೇಲ್ ಸಂದೇಶ ರವಾನಿಸಿದೆ.

    ಈ ಡೇಂಜರಸ್ ವ್ಯಕ್ತಿ ಇಂದೋರ್ ಮೂಲದ ಸರ್ಫರಾಜ್ ಮೆಮನ್ ಎಂದು ಎನ್‌ಐಎ ಗುರುತಿಸಿದೆ. ಈತ ಈಗಾಗಲೇ ಮುಂಬೈ ಪ್ರವೇಶ ಮಾಡಿದ್ದಾನೆ. ಉಗ್ರ ಕೃತ್ಯಗಳನ್ನೂ ಎಸಗುವ ಸಾಧ್ಯತೆಯಿದೆ ಎಂದು ಇ-ಮೇಲ್‌ನಲ್ಲಿ ತಿಳಿಸಿದೆ. ಜೊತೆಗೆ ಆತನ ಆಧಾರ್ ಮಾಹಿತಿ, ವಾಹನ ಚಾಲನಾ ಪರವಾನಗಿ, ಪಾಸ್‌ಪೋರ್ಟ್ ಮೊದಲಾದ ದಾಖಲೆಗಳನ್ನ ಎನ್‌ಐಎ ಮುಂಬೈ ಪೊಲೀಸರೊಂದಿಗೆ ಹಂಚಿಕೊಂಡಿದೆ.

    china flag

    ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದು, ಮಧ್ಯಪ್ರದೇಶದ (Madhya Pradeh) ಇಂದೋರ್ ಪೊಲೀಸರಿಗೂ ಈ ಬಗೆಗಿನ ಮಾಹಿತಿ ರವಾನಿಸಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಕಳೆದ ಶನಿವಾರವಷ್ಟೇ ಮಹಾರಾಷ್ಟ್ರ ಮೂಲದ ಖಾಲಿದ್ ಮುಬಾರಕ್ (21) ಮತ್ತು ತಮಿಳುನಾಡು ಮೂಲದ ಅಬ್ದುಲ್ಲಾ (26) ಎಂಬಿಬ್ಬರು ಶಸ್ತ್ರಾಸ್ತ್ರ ತರಬೇತಿ ಪಡೆಯಲು ಪಾಕಿಸ್ತಾನಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ದೆಹಲಿ ಪೊಲೀಸರ (Delhi Police) ವಿಶೇಷ ಪಡೆ ಬಂಧಿಸಿತ್ತು. ಈ ಬೆನ್ನಲ್ಲೇ ಡೇಂಜರಸ್ ವ್ಯಕ್ತಿಯ ಸುಳಿವು ಆತಂಕ ಮೂಡಿಸಿದೆ. ಇದನ್ನೂ ಓದಿ: ಈ ವರ್ಷದಲ್ಲೇ ಮೋದಿ ಪಾಕಿಸ್ತಾನವನ್ನ ಸಂಕಷ್ಟದಿಂದ ಪಾರು ಮಾಡ್ತಾರೆ – RAW ಮಾಜಿ ನಿರ್ದೇಶಕ

    Pakistan

    ಶನಿವಾರ ದೆಹಲಿಯಲ್ಲಿ ಸಿಕ್ಕಿಬಿದ್ದ ಇಬ್ಬರೂ ವ್ಯಕ್ತಿಗಳು ಅಕ್ರಮವಾಗಿ ಗಡಿದಾಟುವ ಮೂಲಕ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಶಸ್ತ್ರಾಸ್ತ್ರ ಬಳಕೆ ತರಬೇತಿ ಪಡೆಯಲು ನಿರ್ಧರಿಸಿದ್ದರು. ಫೆಬ್ರವರಿ 14ರಂದೇ ಪಾಕ್ ಮೂಲದ ಹ್ಯಾಂಡ್ಲರ್ ಸಹಾಯದಿಂದ ಭಯೋತ್ಪಾದನಾ ಘಟಕದ (Terrorist Group) ಬಗ್ಗೆ ನಿಷ್ಠೆ ಹೊಂದಿರುವ ಕೆಲ ಉಗ್ರಗಾಮಿಗಳು ಪಾಕ್‌ಗೆ ತೆರಳಲು ಸಂಚು ರೂಪಿಸಿದ್ದ ವೇಳೆ ಇಬ್ಬರೂ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರಿಂದ 2 ಪಿಸ್ತೂಲ್, 10 ಸಜೀವ ಗುಂಡು, ಚಾಕು, ವೈರ್ ಕಟರ್ ವಶಪಡಿಸಿಕೊಳ್ಳಲಾಗಿತ್ತು.

    1982 ರಲ್ಲಿ ಜನಿಸಿದ ಸರ್ಫರಾಜ್ ಮೆಮನ್ ಚೀನಾಕ್ಕೆ ಪ್ರಯಾಣಿಸಿದ್ದಾನೆ. ಆದರೆ ಪಾಕಿಸ್ತಾನಕ್ಕೆ ಹೋಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ. ಸದ್ಯ ಮುಂಬೈ ಪೊಲೀಸರು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಾಲ ನೀಡಿದ ಚೀನಾ – ಅಮೆರಿಕ ಕಳವಳ

  • Delhi Crimeː ಮಹಿಳೆಯರ ನಗ್ನ ವೀಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡ್ತಿದ್ದ ಕಾಮುಕ ಅರೆಸ್ಟ್

    Delhi Crimeː ಮಹಿಳೆಯರ ನಗ್ನ ವೀಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡ್ತಿದ್ದ ಕಾಮುಕ ಅರೆಸ್ಟ್

    ನವದೆಹಲಿ: ಜಾಲತಾಣದ (Social Media) ಮೂಲಕ ಸುಂದರ ಮಹಿಳೆಯರ ಪರಿಚಯ ಮಾಡ್ಕೊಂಡು ಪುಸಲಾಯಿಸಿ ಆಕೆಯ ನಗ್ನ ವೀಡಿಯೋ ಮಾಡಿ, ಬ್ಲ್ಯಾಕ್‌ಮೇಲ್ (Blackmail) ಮಾಡುತ್ತಿದ್ದ ಕಾಮುಕನನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ಹುಡ್ಗೀರಿಗೆ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ 17ರ ಹುಡುಗ - ಮಗನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ತಂದೆ

    ಹೌದು, ಆರೋಪಿಯು ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರನ್ನ (Women) ಪರಿಚಯ ಮಾಡಿಕೊಂಡು ಸಂಪರ್ಕಿಸಿ, ಅವರ ನಂಬಿಕೆ ಗಳಿಸಿದ ಬಳಿಕ ವೀಡಿಯೋ ಕಾಲ್ ಮಾಡುತ್ತಿದ್ದ. ಈ ವೇಳೆ ತನ್ನ ಬಣ್ಣದ ಮಾತುಗಳಿಂದ ಮರುಳು ಮಾಡಿ ಬಟ್ಟೆಬಿಚ್ಚಲು ಹೇಳುತ್ತಿದ್ದ. ನಂತರ ಅದನ್ನು ವೀಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಶುರು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು – ರಾಗಾ ಟೀಕೆಗೆ ಜೈಶಂಕರ್ ತಿರುಗೇಟು

    ಹುಡ್ಗೀರಿಗೆ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ 17ರ ಹುಡುಗ - ಮಗನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ತಂದೆ

    ಏನಿದು ವೀಡಿಯೋ ಸೀಕ್ರೆಟ್?
    ಇದೇ ತಿಂಗಳ ಜನವರಿ 12ರಂದು ದೆಹಲಿ ಮಹಿಳೆಯೊಬ್ಬರು ಸೈಬರ್ ಕ್ರೈಂ (Cyber Crime) ಆನ್‌ಲೈನ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ರಾಘವ್ ಚೌಹಾಣ್ ಎಂಬ ಹುಡುಗ ಮಹಿಳೆಯನ್ನು ಜಾಲತಾಣದ ಮೂಲಕ ಸಂಪರ್ಕಿಸಿದ್ದಾನೆ. ನಂತರ ನಡೆದ ಸಂಭಾಷಣೆ ಸಮಯದಲ್ಲಿ ಇಬ್ಬರೂ ಸ್ನೇಹಿತರಾಗಿ ವಾಟ್ಸಾಪ್‌ನಲ್ಲಿ ಚಾಟಿಂಗ್ ಶುರು ಮಾಡಿದ್ದಾರೆ. ಆತ ಆಕೆಯೊಂದಿಗೆ ಮಾತನಾಡಲು ಶುರು ಮಾಡಿದ್ದಾನೆ. ಪ್ರತಿದಿನ ಮೆಸೇಜ್ ಮಾಡುತ್ತಾ ವಿಶ್ವಾಸ ಗಳಿಸಿದ್ದಾನೆ. ಇದಾದ ಬಳಿಕ ಒಂದು ದಿನ ಆಕೆಗೆ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚುವಂತೆ ಪ್ರಚೋದಿಸಿದ್ದಾನೆ. ತುಂಬಾ ನಂಬಿಕೆ ಬರುವಂತೆ ನಡೆದುಕೊಂಡಿದ್ದರಿಂದ ಆಕೆ ತನ್ನ ನಗ್ನತೆಯನ್ನ ಪ್ರದರ್ಶಿಸಿದ್ದಾಳೆ. ನಂತರ ಕಾಮುಕ ತನ್ನ ನಿಜರೂಪ ತೋರಿಸಿದ್ದಾನೆ.

    CRIME COURT

    ರಾಘವ್ ಆಕೆಯ ಬೆತ್ತಲೆ ವೀಡಿಯೋ ಚಿತ್ರೀಕರಿಸಿಕೊಂಡು ಹಣಕ್ಕೆ ಬೇಡಿಕೆಯಿಟಿದ್ದಾನೆ. ಮಹಿಳೆ ಭಯದಿಂದ 1.25 ಲಕ್ಷ ರೂ. ನೀಡಿದ್ದಾಳೆ. ಸಾಲದಿದ್ದಕ್ಕೆ ಆಕೆಯ ನಗ್ನ ವೀಡಿಯೋವನ್ನ ಪತಿಗೆ ಕಳುಹಿಸಿ ಅವನಿಂದಲೂ 70 ಸಾವಿರ ರೂ. ಪೀಕಿದ್ದಾನೆ. ನಂತರವೂ ವೀಡಿಯೋ ಜಾಲತಾಣದಲ್ಲಿ ಹರಿಯಬಿಡುವುದಾಗಿ ಹಣಕ್ಕಾಗಿ ಒತ್ತಾಯಿಸಿದ್ದಾನೆ. ಕೊನೆಗೆ ಬೇಸತ್ತ ಮಹಿಳೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ದೆಹಲಿಯಲ್ಲಿ ಖಲಿಸ್ತಾನಿ ಉಗ್ರರ ಸ್ಲೀಪರ್ ಸೆಲ್ – ದಾಳಿಗೆ ಸಂಚು ರೂಪಿಸಿರುವ ಶಂಕೆ

    ಸಂತ್ರಸ್ತೆಯ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಇಂದೋರ್ ನಿವಾಸಿ ಸನ್ನಿ ಚೌಹಾಣ್ ಅಲಿಯಾಸ್ ರಾಘವ್ ಚೌಹಾಣ್ (25) ನನ್ನ ಬಂಧಿಸಿದ್ದಾರೆ. ಬಳಿಕ ಅವನನ್ನ ವಿಚಾರಣೆಗೆ ಒಳಪಡಿಸಿದಾಗ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದೇ ರೀತಿ ಅನೇಕ ಮಹಿಳೆಯರನ್ನ ವಂಚಿಸಿರುವುದಾಗಿ ಬಾಯ್ಬಿಟ್ಟಿದ್ದಾನೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸ್ಪೈಸ್‌ ಜೆಟ್ ಗಗನ ಸಖಿಯೊಂದಿಗೆ ಅಸಭ್ಯ ವರ್ತನೆ – ಪ್ರಯಾಣಿಕ ಅರೆಸ್ಟ್

    ಸ್ಪೈಸ್‌ ಜೆಟ್ ಗಗನ ಸಖಿಯೊಂದಿಗೆ ಅಸಭ್ಯ ವರ್ತನೆ – ಪ್ರಯಾಣಿಕ ಅರೆಸ್ಟ್

    ನವದೆಹಲಿ: ದೆಹಲಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಸ್ಪೈಸ್‌ ಜೆಟ್ (Spice Jet) ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ದೆಹಲಿ- ಹೈದರಾಬಾದ್ ಮಾರ್ಗದ (Delhi to Hyderabad) SG-8133 ವಿಮಾನದಲ್ಲಿ ಈ ಘಟನೆ ನಡೆದಿದೆ. ಸ್ಪೈಸ್‌ ಜೆಟ್ ಭದ್ರತಾ ಅಧಿಕಾರಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಿದ ನಂತರ ಅಬ್ಸರ್ ಆಲಂ ಪ್ರಯಾಣಿಕನನ್ನ ಬಂಧಿಸಲಾಗಿದೆ. ಪ್ರಯಾಣಿಕನ ವಿರುದ್ಧ ಸೆಕ್ಷನ್ 354A ಅಡಿಯಲ್ಲಿ ಪ್ರಕರಣ (FIR) ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಸ್ಪೈಸ್‌ ಜೆಟ್‌ನಲ್ಲಿ ಪ್ರಯಾಣಿಕರಿಬ್ಬರು ಅಶಿಸ್ತಿನ ವರ್ತನೆ ತೋರಿದ ನಂತರ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಈ ವೀಡಿಯೋ ಸದ್ಯ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ಪ್ರಯಾಣಿಕರು ಕ್ಯಾಬಿನ್ ಸಿಬ್ಬಂದಿಯ ಮೇಲೆ ಕೂಗಾಡುತ್ತಿರುವುದನ್ನು ಕಾಣಬಹುದು. ಇದನ್ನೂ ಓದಿ: ಮಾನಸಿಕ ಖಿನ್ನತೆಯೇ ನಟ ಸುಧೀರ್ ಆತ್ಮಹತ್ಯೆಗೆ ಕಾರಣ

    ಅಧಿಕಾರಿಗಳ ದೂರಿನ ಪ್ರಕಾರ ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಕಿರಕುಳ ನೀಡಿದ್ದರು. ಇದರಿಂದ ವಿಮಾನದಿಂದ ಕೆಳಗಿಳಿಸಿ ಭದ್ರತಾ ಸಿಬ್ಬಂದಿಗೆ ಒಪ್ಪಿಸಲಾಯಿತು ಎನ್ನಲಾಗಿದೆ. ಇದನ್ನೂ ಓದಿ: ‘ಲವ್ ಬರ್ಡ್ಸ್’ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ಇತ್ತೀಚೆಗೆ ವಿಮಾನಗಳಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಪ್ರಕರಣಗಳು ಒಂದಿಲ್ಲೊಂದು ಬೆಳಕಿಗೆ ಬರುತ್ತಲೇ ಇವೆ. ಇತ್ತೀಚೆಗಷ್ಟೇ ಏರ್‌ಇಂಡಿಯಾ (Air India) ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ಗೋ ಫಸ್ಟ್ ವಿಮಾನದಲ್ಲಿ, ಇದೀಗ ಸ್ಪೈಸ್‌ ಜೆಟ್‌ನಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • UAE ಸುಲ್ತಾನ್ ಅಂತಾ ಹೇಳ್ಕೊಂಡು ಹೋಟೆಲ್‌ಗೆ 23 ಲಕ್ಷ ವಂಚನೆ – ಖತರ್ನಾಕ್ ಅಂದರ್

    UAE ಸುಲ್ತಾನ್ ಅಂತಾ ಹೇಳ್ಕೊಂಡು ಹೋಟೆಲ್‌ಗೆ 23 ಲಕ್ಷ ವಂಚನೆ – ಖತರ್ನಾಕ್ ಅಂದರ್

    ನವದೆಹಲಿ: ಯುಎಇ ರಾಜಮನೆತನದ (UAE Royal Family)  ಕಚೇರಿ ಉದ್ಯೋಗಿ ಎಂದು ಹೇಳ್ಕೊಂಡು ದೆಹಲಿಯ ಲೀಲಾ ಪ್ಯಾಲೇಸ್‌ಗೆ (Leela Hotel) 23 ಲಕ್ಷ ವಂಚಿಸಿದ್ದ ಖತರ್ನಾಕ್ ವ್ಯಕ್ತಿಯನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ದೆಹಲಿ ಪೊಲೀಸರು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರಿನ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಧರ್ಮ, ಜಾತಿ ಆಧಾರದ ಮೇಲೆ ವೋಟ್ ಕೇಳಲ್ಲ – ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಪ್ರಚಾರ: HDK

    ಈತ ಲೀಲಾ ಪ್ಯಾಲೇಸ್‌ನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಗಸ್ಟ್ 1 ರಿಂದ ನವೆಂಬರ್ 20ರ ವರೆಗೆ ತಂಗಿದ್ದ. ನಂತರ 23 ಲಕ್ಷ ಬಿಲ್ ಕಟ್ಟದೇ ಸದ್ದಿಲ್ಲದೇ ಎಸ್ಕೇಪ್ ಆಗಿದ್ದ. ಈ ಬಗ್ಗೆ ಲೀಲಾ ಪ್ಯಾಲೇಸ್ ಹೋಟೆಲ್ ಮ್ಯಾನೇಜರ್ ದೂರು ನೀಡಿದ್ದರು. ಇದನ್ನೂ ಓದಿ: ಸುಮ್ಮನಿರದಿದ್ದರೇ ಸಿದ್ಧವನದಲ್ಲಿ ನಡೆಸಿದ ಷಡ್ಯಂತ್ರ ಬಿಚ್ಚಿಡುತ್ತೇನೆ – ಸಿದ್ದುಗೆ HDK ಎಚ್ಚರಿಕೆ

    ದೂರಿನಲ್ಲಿ, ಮಹಮ್ಮದ್ ಶರೀಫ್ ತನ್ನನ್ನು ತಾನು ಯುಎಇ ಸುಲ್ತಾನ್ ಶೇಖ್ ಫಲ್ಹಾ ಬಿನ್ ಜಾಯೇದ್ ಅಲ್ ನಹ್ಯಾನ್ ಕಚೇರಿಯ ಅಧಿಕಾರಿ ಎಂದು ಬಿಂಬಿಸಿಕೊಂಡಿದ್ದ ಎಂಬುದು ತಿಳಿದುಬಂದಿದೆ.

    ದೂರಿನ ಅನ್ವಯ ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 149, 420 ಹಾಗೂ 380ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನ ಬಂಧಿಸಲಾಯಿತು. ನಂತರ ದೆಹಲಿ ನ್ಯಾಯಾಲಯದ (Delhi Court) ಎದುರು ಹಾಜರುಪಡಿಸಲಾಯಿತು. ವಾದ-ವಿವಾದಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಆರೋಪಿಯನ್ನ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 100 ಸಾಕ್ಷ್ಯಗಳೊಂದಿಗೆ 3 ಸಾವಿರ ಪುಟಗಳ ಚಾರ್ಜ್‌ಶೀಟ್‌ ಸಿದ್ಧಪಡಿಸಿದ ದೆಹಲಿ ಪೊಲೀಸರು

    100 ಸಾಕ್ಷ್ಯಗಳೊಂದಿಗೆ 3 ಸಾವಿರ ಪುಟಗಳ ಚಾರ್ಜ್‌ಶೀಟ್‌ ಸಿದ್ಧಪಡಿಸಿದ ದೆಹಲಿ ಪೊಲೀಸರು

    ನವದೆಹಲಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣಕ್ಕೆ (Shraddha Walkar Murder Case) ಸಂಬಂಧಿಸಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿರುವ ದೆಹಲಿ ಪೊಲೀಸರು (Delhi Police) 100 ಸಾಕ್ಷ್ಯಗಳೊಂದಿಗೆ 3 ಸಾವಿರ ಪುಟಗಳ ಚಾರ್ಜ್‌ಶೀಟ್ ಕರಡನ್ನು ಸಿದ್ಧಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    3000 ಸಾವಿರ ಪುಟಗಳ ಚಾರ್ಜ್‌ಶೀಟ್ ಕರಡಿನೊಂದಿಗೆ ವಿಧಿವಿಜ್ಞಾನ (Forensic) ಹಾಗೂ ತಾಂತ್ರಿಕ 100 ಸಾಕ್ಷ್ಯಗಳನ್ನು ಒಳಗೊಂಡ ಅಂತಿಮ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದೆ. ಅದನ್ನು ಕಾನೂನು ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಶ್ರದ್ಧಾಳನ್ನ ಕೊಂದು ಗೆಳತಿಯೊಂದಿಗೆ ಸೆಕ್ಸ್- ಡಾಕ್ಟರ್ ಜೊತೆ ಡೇಟಿಂಗ್ ಮಾಡ್ತಿದ್ದ ಅಫ್ತಾಬ್

    ಏನಿದು ಘಟನೆ?
    ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ (Live In Relationship) ಗೆಳತಿ ಶ್ರದ್ಧಾವಾಕರ್ ಹತ್ಯೆ ನಡೆಸಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ. ಆನಂತರ ಬೇರೆ ಬೇರೆ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿದ್ದ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿತ್ತು. ಈ ಅಮಾನುಷ ಕೃತ್ಯ ಎಸಗಿದ 5 ತಿಂಗಳ ಬಳಿಕ (2022ರ ನವೆಂಬರ್ 12ರಂದು) ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನನ್ನ (Aftab Amin Poonawala) ಪೊಲೀಸರು ಬಂಧಿಸಿದ್ದರು.

    ಈ ತನಿಖೆಯಲ್ಲಿ ಛತ್ತರ್‌ಪುರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಮೂಳೆಗಳು ಶ್ರದ್ಧಾವಾಕರ್ ದೇಹದ್ದೇ ಎಂದು ಡಿಎನ್‌ಎ ವರದಿಗಳು ದೃಢಪಡಿಸಿದೆ. ಅಫ್ತಾಬ್‌ಗೆ ಮಂಪರು ಪರೀಕ್ಷೆ ಸಹ ನಡೆಸಲಾಗಿತ್ತು. ಈ ವೇಳೆ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದನು. ಆದ್ರೆ ಪ್ರಾಸಿಕ್ಯೂಷನ್ ದೃಷ್ಟಿಕೋನದಿಂದ ತಪ್ಪೊಪ್ಪಿಗೆಯೊಂದೆ ಅಪರಾಧ ನಿರ್ಣಯಕ್ಕೆ ಸಾಕಾಗಲ್ಲ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಶ್ರದ್ಧಾ ಹತ್ಯೆ ಕೇಸ್ – ಕಾಡಿನಲ್ಲಿ ದೊರೆತ ಮೂಳೆಗಳು ತಂದೆಯ ಡಿಎನ್‌ಎಗೆ ಮ್ಯಾಚ್

    2022ರಲ್ಲಿ ಘಟನೆ ನಡೆದ ಬಳಿಕ ತನಿಖೆ ಚುರುಕುಗೊಳಿಸಿದ ದೆಹಲಿ ಪೊಲೀಸರು ಕೊಲೆಗೆ ಬಳಸಿದ್ದ ಗರಗಸ, ಚಾಕುಗಳು ಮತ್ತು ಇತರ ಸಾಧನಗಳನ್ನ ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲ ಅಂಶಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾನಲ್ಲ, ಅವರೇ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು – ನ್ಯಾಯಾಲಯಕ್ಕೆ ಶಂಕರ್ ಮಿಶ್ರಾ ಹೇಳಿಕೆ

    ನಾನಲ್ಲ, ಅವರೇ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು – ನ್ಯಾಯಾಲಯಕ್ಕೆ ಶಂಕರ್ ಮಿಶ್ರಾ ಹೇಳಿಕೆ

    ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ (Shankar Mishra) ದೆಹಲಿ ನ್ಯಾಯಾಲಯದ (Delhi Sessions Court) ಮುಂದೆ ಹಾಜರಾಗಿದ್ದು, ವಿಚಾರಣೆ ವೇಳೆ ತಮ್ಮ ಮೇಲಿನ ಆರೋಪ ನಿರಾಕರಿಸಿದ್ದಾರೆ.

    `ನಾನಲ್ಲ ಬದಲಿಗೆ ಮಹಿಳೆಯೇ (Women Passenger) ತನ್ನ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ್ದಾಳೆ’ ಎಂದು ಶಂಕರ್ ಮಿಶ್ರಾ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿರುವ ಶಂಕರ್ ಮಿಶ್ರಾ, ದೂರುದಾರರ ಮೇಲೆ ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಳೆ. ದೂರುದಾರ ಮಹಿಳೆಯ ಸೀಟು ನಿರ್ಬಂಧಿಸಲಾಗಿತ್ತು ನಾನು ಅಲ್ಲಿಗೆ ತೆರಳಲು ಸಾಧ್ಯವಿರಲಿಲ್ಲ. ಮೂತ್ರ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೇ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಳೆ ಎಂದು ದೂರಿದ್ದಾರೆ.

    ದೂರುದಾರ ಮಹಿಳೆ ಕಥಕ್ ನೃತ್ಯಗಾರ್ತಿ, ಶೇ.80 ಕಥಕ್ ನೃತ್ಯಗಾರರಿಗೆ ಈ ಸಮಸ್ಯೆ ಇದೆ ಎಂದು ಶಂಕರ್ ಮಿಶ್ರಾ ಅವರ ವಕೀಲರು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ಮಹಿಳೆಯ ಆಸನವನ್ನ ಹಿಂದಿನಿಂದ ಮಾತ್ರ ಸಂಪರ್ಕಿಸಬಹುದು, ಮುಂದಿನ ಸೀಟಿನಿಂದ ಸಂಪರ್ಕಿಸಲು ಸಾಧ್ಯವಿಲ್ಲ. ಹಿಂದಿನಿಂದ ಮೂತ್ರ ಮಾಡಿದರು ಅದು ಸೀಟಿನ ಮುಂಭಾಗದ ಪ್ರದೇಶಕ್ಕೆ ತಲುಪಲು ಸಾಧ್ಯವಿಲ್ಲ ಎಂದು ವಕೀಲರು ವಾದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದ್ವೆಗೆ ಮುಂಚೆನೇ ಮಗು- ಬಾತ್‌ರೂಂ ಕಿಟಕಿಯಿಂದ ಶಿಶು ಎಸೆದ 20ರ ಯುವತಿ!

    ಮದ್ವೆಗೆ ಮುಂಚೆನೇ ಮಗು- ಬಾತ್‌ರೂಂ ಕಿಟಕಿಯಿಂದ ಶಿಶು ಎಸೆದ 20ರ ಯುವತಿ!

    ನವದೆಹಲಿ: ಮದುವೆಯಾಗದೇ (Marriage) ಮಗುವಿಗೆ ಜನ್ಮ ನೀಡಿದ 20 ವರ್ಷದ ಯುವತಿ ಸಾಮಾಜಿಕ ಕಳಂಕಕ್ಕೆ ಹೆದರಿ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಮಗುವನ್ನು ಎಸೆದು ಕೊಂದಿರುವ ಘಟನೆ ಪೂರ್ವ ದೆಹಲಿಯ ನ್ಯೂಅಶೋಕ್ ವಿಹಾರದಲ್ಲಿ ನಡೆದಿದೆ.

    ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ, ಸೋಮವಾರ ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ ಸಾಮಾಜಿಕ ಕಳಂಕಕ್ಕೆ (Social Stigma) ಹೆದರಿ ಮಗುವನ್ನು ತಾನು ವಾಸಿಸುತ್ತಿದ್ದ ಜೈ ಅಂಬೆ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಎಸೆದು ಕೊಂದಿದ್ದಾಳೆ. ಇದೀಗ ಪೊಲೀಸರಿಗೆ (Police) ಸಿಕ್ಕಿಬಿದ್ದಿದ್ದಾಳೆ. ಇದನ್ನೂ ಓದಿ: ಮುದ್ದಿನ ಶ್ವಾನ ಹುಡುಕಿಕೊಡಿ- 10 ಸಾವಿರ ಬಹುಮಾನ ಘೋಷಿಸಿದ ಕುಟುಂಬ!

    ಮಗು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಸ್ಥಳೀಯರು ನೋಯ್ಡಾದ ಮೆಟ್ರೋ ಆಸ್ಪತ್ರೆಗೆ (Metro Hospital) ಕರೆದೊಯ್ದರು, ಹೆಚ್ಚಿನ ಚಿಕಿತ್ಸೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಷ್ಟರಲ್ಲಿ ಮಗು ಮೃತಪಟ್ಟಿದ್ದು. ನಂತರ ಶಿಶು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸ್ ಉಪ ಆಯುಕ್ತ (ಪೂರ್ವ) ಅಮೃತ ಗುಗುಲೋತ್, ರಕ್ತದ ಕಲೆಗಳ ಜಾಡು ಹಿಡಿದು ಆರೋಪಿ ಯುವತಿಯನ್ನ ಬಂಧಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ದಿಢೀರ್‌ ಉರುಳಿದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ – ತಾಯಿ, ಮಗು ದುರ್ಮರಣ

    ಬಳಿಕ ತನಿಖೆಯಲ್ಲಿ ತಾನು ಅವಿವಾಹಿತೆ, ಸಾಮಾಜಿಕ ಕಳಂಕಕ್ಕೆ ಹೆದರಿ ಮಗುವನ್ನು ಬಾತ್‌ರೂಮಿನ ಕಿಟಕಿಯಿಂದ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾಳೆ. ಆರೋಪಿ ಯುವತಿ ವಿರುದ್ಧ ಐಪಿಸಿ (IPC) ಸೆಕ್ಷನ್ 302 (ಕೊಲೆ), 201 ಅಪರಾಧದ ಸಾಕ್ಷಿಗಳನ್ನು ಮರೆಮಾಚುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪೊಲೀಸರು ಕಣ್ಗಾವಲು ಇರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ನವದೆಹಲಿ/ಬೆಂಗಳೂರು: ನ್ಯೂಯಾರ್ಕ್‌ನಿಂದ  (New York) ದೆಹಲಿಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿ ಸಹಪ್ರಯಾಣಿಕ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ (Bengaluru) ದೆಹಲಿ ಪೊಲೀಸರು (Delhi Police) ಬಂಧಿಸಿದ್ದರು. ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ದೆಹಲಿ ಪಟಿಯಾಲ ಹೌಸ್ ಕೋರ್ಟ್ (Delhi’s Patiala House court) ಮಿಶ್ರಾನನ್ನ ಜನವರಿ 21ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶಿಸಿದೆ. ಜನವರಿ 11 ರಂದು ಮಹೇಶ್ ಮಿಶ್ರಾ ಕೇಸ್‌ಗೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: 22 ರಾಜ್ಯಗಳಲ್ಲಿ ಬಿಸಿನೆಸ್‌ ಮಾಡ್ತಿದ್ದೇವೆ; ಎಲ್ಲವನ್ನೂ ಬಿಜೆಪಿ ಜೊತೆ ಮಾಡ್ತಿಲ್ಲ – ಗೌತಮ್‌ ಅದಾನಿ

    ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇಲ್ಲಿನ ಪಟಿಯಾಲ ಹೌಸ್ ಕೋರ್ಟ್ಗೆ ಹಾಜರುಪಡಿಸಿದ್ದರು. ಪೊಲೀಸರು ಆರೋಪಿಯನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದಾಗ್ಯೂ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಮಿಶ್ರಾ ಏರ್ ಇಂಡಿಯಾದ ಇಬ್ಬರು ಕ್ಯಾಪ್ಟನ್‌ಗಳು ಹಾಗೂ ಮೂವರು ಕ್ಯಾಬಿನ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಹಾಗಾಗಿ ಅವರನ್ನೂ ವಿಚಾರಿಸಬೇಕಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಏನಿದು ಘಟನೆ?
    ನ್ಯೂಯಾರ್ಕ್ ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ ಎಐ-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬಿಸಿನೆಸ್ ಕ್ಲಾಸ್‌ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದರು. ಮೂತ್ರದಿಂದ ಮಹಿಳೆಯ ಬಟ್ಟೆ, ಶೂ, ಬ್ಯಾಗ್ ಒದ್ದೆಯಾಗಿತ್ತು. ಬ್ಯಾಗ್‌ನಲ್ಲಿ ಅಮೆರಿಕನ್ ಕರೆನ್ಸಿ, ಪಾಸ್‌ಪೋರ್ಟ್ ಸೇರಿ ಮುಖ್ಯವಾದ ದಾಖಲೆಗಳಿದ್ದವು. ಏರ್ ಹೋಸ್ಟೆಸ್ ಕೂಡಾ ಇದನ್ನು ಮುಟ್ಟಲು ನಿರಾಕರಿಸಿದ್ರು. ಬಳಿಕ ಮಹಿಳೆಯನ್ನು ಬಾತ್ ರೂಂಗೆ ಕರೆದುಕೊಂಡು ಹೋಗಿ ಬೇರೆ ಬಟ್ಟೆ ನೀಡಿದ್ರು. ನಂತರ ಬೇರೆ ಸೀಟ್ ಕೊಡುವಂತೆ ಮಹಿಳೆ ಕೇಳಿಕೊಂಡಿದ್ದರು. ಈ ವೇಳೆ ಸೀಟ್‌ಗಳೆಲ್ಲಾ ಭರ್ತಿಯಾಗಿದೆ ಎಂದು ಸಿಬ್ಬಂದಿ ಏರ್ ಹೋಸ್ಟೆಸ್ ಪ್ರಯಾಣ ಮಾಡುವ ಸೀಟ್ ನೀಡಿ ದೆಹಲಿಗೆ ಕರೆದುಕೊಂಡು ಬಂದಿದ್ದರು.

    ಈ ಘಟನೆಯ ಬಳಿಕ ಮಹಿಳೆ ಬಳಿ ಶಂಕರ್ ಮಿಶ್ರಾ ಕ್ಷಮೆಯಾಚಿಸಿದ್ದ. ಆದರೆ ಏರ್ ಇಂಡಿಯಾ ಮಾತ್ರ ಮಿಶ್ರಾ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಜೊತೆಗೆ ಮಹಿಳೆಯೊಂದಿಗೆ ಏರ್ ಇಂಡಿಯಾ ಸಿಬ್ಬಂದಿ ನಡೆದುಕೊಂಡ ರೀತಿಯಿಂದ ಮನನೊಂದು ಮಹಿಳೆ ಈ ಬಗ್ಗೆ ಟಾಟಾ ಸನ್ಸ್ ಗ್ರೂಪ್‌ನ ಮುಖ್ಯಸ್ಥರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದರು. ಶನಿವಾರ (ಜ.7) ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಲಿಸುತ್ತಿದ್ದ ಬಸ್‌ನಲ್ಲೇ ಹುಡುಗಿ ಮುಂದೆ ಹಸ್ತಮೈಥುನ – ದೂರು ನೀಡಲು ಸಂತ್ರಸ್ತೆ ಹಿಂದೇಟು

    ಚಲಿಸುತ್ತಿದ್ದ ಬಸ್‌ನಲ್ಲೇ ಹುಡುಗಿ ಮುಂದೆ ಹಸ್ತಮೈಥುನ – ದೂರು ನೀಡಲು ಸಂತ್ರಸ್ತೆ ಹಿಂದೇಟು

    ನವದೆಹಲಿ: ರಾಷ್ಟ್ರ ರಾಜಧಾನಿಯ ರೋಹಿಣಿ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ ಕಾಮುಕನೊಬ್ಬ ಹುಡುಗಿಯ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಡಿಟಿಸಿ ಮಾರ್ಷಲ್ (DTC marshal) ಆರೋಪಿಸಿದ್ದಾರೆ.

    ಸದ್ಯ ಡಿಟಿಸಿ ಆರೋಪಿಸಿದ ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಆದ್ರೆ ಇನ್ನೂ ದೂರು ದಾಖಲಾಗದೇ ಇರುವುದರಿಂದ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್ ಸ್ಫೋಟ ಕೇಸ್ – ಮಂಗಳೂರಿನ ಎಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ, ಓರ್ವ ವಶ

    ಏನಿದು ಘಟನೆ?
    ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ (Bus) ಹುಡುಗಿಯ ಮುಂದೆಯೇ ಕಾಮುಕನೊಬ್ಬ ಹಸ್ತ ಮೈಥುನ ಮಾಡಿಕೊಂಡಿದ್ದಾನೆ. ಹುಡುಗಿ ಕಿರುಚಿಕೊಂಡಾಗ ಮಾರ್ಷಲ್ ಸಂದೀಪ್ ಚಕಾರ ಆತನನ್ನ ಹಿಡಿದಿದ್ದಾರೆ. ಇದನ್ನೂ ಓದಿ: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ

    ಆರೋಪಿ ಬಿಹಾರದ ನಿವಾಸಿಯಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಆದ್ರೆ ಯಾರೊಬ್ಬರು ದೂರು ನೀಡದ ಕಾರಣ ಆತನನ್ನು ಬಂಧಿಸಿಲ್ಲ. ಬುಧವಾರ ರೋಹಿಣಿ ಠಾಣೆಯ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಸುಮನ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಆದ್ರೆ ಸಂತ್ರಸ್ತೆ ದೂರು ನೀಡಲು ನಿರಾಕರಿಸಿದ್ದಾಳೆ. ಭವಿಷ್ಯದಲ್ಲಿ ಆಪಾಧಿತನ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದಲ್ಲಿ, ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೆಹಲಿ ಯುವತಿ ಹತ್ಯೆ ಕೇಸ್ – ಬಂಧಿತ ಐವರಲ್ಲಿ ಓರ್ವ ಬಿಜೆಪಿ ಸದಸ್ಯ: ಎಎಪಿ ಆರೋಪ

    ದೆಹಲಿ ಯುವತಿ ಹತ್ಯೆ ಕೇಸ್ – ಬಂಧಿತ ಐವರಲ್ಲಿ ಓರ್ವ ಬಿಜೆಪಿ ಸದಸ್ಯ: ಎಎಪಿ ಆರೋಪ

    ನವದೆಹಲಿ: ಹೊಸ ವರ್ಷದ ದಿನದಂದೇ ದೆಹಲಿಯಲ್ಲಿ (Newdelhi) ನಡೆದ ಯುವತಿಯ ಭೀಕರ ಹತ್ಯೆ ಪ್ರಕರಣದಲ್ಲಿ ಸಿಕ್ಕ ಐವರು ಆರೋಪಿಗಳಲ್ಲಿ ಒಬ್ಬರು ಬಿಜೆಪಿ (BJP) ಸದಸ್ಯ ಎಂದು ಆಮ್ ಆದ್ಮಿ ಪಕ್ಷ (AAP) ಆರೋಪಿಸಿದೆ.

    ಸುಲ್ತಾನ್‌ಪುರಿಯಲ್ಲಿ ಯುವತಿ ಅಂಜಲಿ ಚಲಿಸುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಸುಮಾರು 12 ಕಿಮೀ ಎಳೆದೊಯ್ದು ಆಕೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ (Saurabh Bhardwaj) ಮಾತನಾಡಿದ್ದಾರೆ. ಇದನ್ನೂ ಓದಿ: ನಾಟಕದಲ್ಲಿ ಸಿದ್ದರಾಮಯ್ಯಗೆ ಅವಮಾನ- ರಂಗಾಯಣದ ವಿರುದ್ಧ ಅಭಿಮಾನಿಗಳ ಆಕ್ರೋಶ

    ಪ್ರಕರಣದಲ್ಲಿ ಬಂಧಿರಾಗಿರುವ ಐವರು ಆರೋಪಿಗಳಲ್ಲಿ ಒಬ್ಬರಾದ ಮನೋಜ್ ಮಿತ್ತಲ್ ಬಿಜೆಪಿ (BJP) ಸದಸ್ಯನಾಗಿದ್ದಾನೆ. ಆದ್ರೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinai Kumar Saxena) ಹಾಗೂ ಪೊಲೀಸ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಈ ಮಾಹಿತಿಯನ್ನ ಮರೆಮಾಚಿದ್ದಾರೆ. ಪೊಲೀಸ್ ಠಾಣೆಯ (Police Station) ಪಕ್ಕದಲ್ಲೇ ಇರುವ ಭಾವಚಿತ್ರದ ಬೋರ್ಡಿಂಗ್ ಸಹ ಮಿತ್ತಲ್ ಬಿಜೆಪಿ ಸದಸ್ಯ ಎಂಬುದನ್ನ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.

    ಕಾರಿನಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಬೀದಿಯಲ್ಲಿ ಎಳೆದೊಯ್ಯುತ್ತಿರುವ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು 22 ಬಾರಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಆದರೂ ಪೊಲೀಸರು ಆರೋಪಿಯನ್ನ ರೆಡ್‌ಹ್ಯಾಂಡಾಗಿ ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ಅವರು ತಮ್ಮ ಕಾರು ಅಪಘಾತಕ್ಕೀಡಾಗಿದೆ ಎಂದು ಆರೋಪಿಗಳು ಹೇಳಿದ್ದರು. ಆದ್ರೆ ಮಹಿಳೆಯನ್ನು ಎಳೆದೊಯ್ದಿರುವುದು ತಿಳಿದಿರಲಿಲ್ಲವೆಂಬುದಾಗಿ ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ಹರೀಶ್ ಖುರಾನಾ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಪ್ಪಿತಸ್ಥರು ಯಾವುದೇ ಪಕ್ಷಕ್ಕೆ ಸೇರಿದ್ದರೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೋಟು ನಿಷೇಧದ ಅಧಿಸೂಚನೆಯೇ ಕಾನೂನುಬಾಹಿರ: ನ್ಯಾ.ನಾಗರತ್ನ

    ಏನಿದು ಘಟನೆ?
    ದೆಹಲಿಯಲ್ಲಿ ಯುವತಿ ಅಮನ್ ವಿಹಾರ್ ನಿವಾಸಿ ಅಂಜಲಿ (20) ಚಲಿಸುತ್ತಿದ್ದ ಸ್ಕೂಟಿಯು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಯುವತಿಯನ್ನ 12 ಕಿಮೀ ಎಳೆದೊಯ್ದು ಆಕೆ ಸಾವನ್ನಪ್ಪಿದ್ದಳು. ಬಳಿ ನೋಂದಾಯಿತ ಕಾರಿನ ಸಂಖ್ಯೆಯ ಆಧಾರದ ಮೇಳೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ, ಘಟನೆಗೆ ಸಂಬಂಧಿಸಿ ಮಾರುತಿ ಸುಜಕಿ ಬಲೆನೊ ಕಾರಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಕ್ರೆಡಿಟ್ ಕಾರ್ಡ್ ಸಂಗ್ರಹ ಏಜೆಂಟ್, ಚಾಲಕ ಹಾಗೂ ಪಡಿತರ ಅಂಗಡಿ ಮಾಲೀಕರಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]