ನವದೆಹಲಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ (Delhi Railway Station Stampede) ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.ಇದನ್ನೂ ಓದಿ: ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ
ಈ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ 200 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಮತ್ತು ನಿರ್ದೇಶನ ನೀಡುವಂತೆ ಆನಂದ್ ಕಾನೂನು ನೆರವು ವೇದಿಕೆ ಮನವಿ ಮಾಡಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರ ವಾದ ಪುರಸ್ಕರಿಸಲಿಲ್ಲ, 200 ಸಾವುಗಳು ಸಂಭವಿಸಿವೆ ಎಂಬ ಆರೋಪಕ್ಕೆ ಪುರಾವೆ ಏನಿದೆ ಎಂದು ಪ್ರಶ್ನಿಸಿತು. ಅರ್ಜಿದಾರರ ಪರ ವಕೀಲರ ಸಂಕ್ಷಿಪ್ತ ವಿಚಾರಣೆಯ ನಂತರ ಅರ್ಜಿಯನ್ನು ವಜಾಗೊಳಿಸಿತು. ಬಾಧಿತ ಜನರು ನ್ಯಾಯಾಲಯಕ್ಕೆ ಬರಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.ಇದನ್ನೂ ಓದಿ: ಮಾ.22 ರಂದು ಕರ್ನಾಟಕ ಬಂದ್
ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಕಾಲ್ತುಳಿತ (Delhi Railway Station Stampede) ಸಂಭವಿಸಿದ ಬಳಿಕ ರೈಲ್ವೇ ಆಡಳಿತವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೌಂಟರ್‌ನಿಂದ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟವನ್ನು ನಿಲ್ಲಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಿದೆ.
ಎರಡು ದಿನಗಳ ಹಿಂದೆ ದೆಹಲಿ ರೈಲು ನಿಲ್ದಾಣದಲ್ಲಿ ಜನಸಂದಣಿಯಿಂದಾಗಿ ಉಂಟಾದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದರು. ಘಟನೆಯ ನಂತರ ರೈಲು ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಿಲ್ದಾಣದ ಆವರಣದಲ್ಲಿ ಭದ್ರತಾ ಪಡೆಗಳ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಮೆಟ್ರೋ ಭದ್ರತೆಯಲ್ಲಿ ತೊಡಗಿರುವ ಸಿಐಎಸ್‌ಎಫ್ ಕಂಪನಿಯನ್ನು ರೈಲ್ವೇ ಭದ್ರತೆಗಾಗಿ ನಿಯೋಜಿಸಲಾಗಿದೆ.ಇದನ್ನೂ ಓದಿ: ಅನ್ನಭಾಗ್ಯ ದುಡ್ಡು ಇಲ್ಲ, ಗೃಹಲಕ್ಷ್ಮಿಯೂ ಇಲ್ಲ – ಗ್ಯಾರಂಟಿಗೆ ʼಗ್ಯಾರಂಟಿʼ ಇಲ್ಲ!
ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮಾತನಾಡಿ, ದೆಹಲಿ ರೈಲು ನಿಲ್ದಾಣದ ಭದ್ರತೆಗಾಗಿ ಎಂಟು ಕಂಪನಿಗಳ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಜೊತೆಗೆ 80 ಸಿಬ್ಬಂದಿಯನ್ನು ಒಳಗೊಂಡ ಮೆಟ್ರೋ ಪೊಲೀಸ್ ಕಂಪನಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೆಟ್ರೋದಿಂದ ಮೂವರು ಇನ್ಸ್ಪೆಕ್ಟರ್‌ಗಳು ಮತ್ತು ಒಬ್ಬ ಎಸಿಪಿಯನ್ನು ನಿಯೋಜಿಸಲಾಗಿದೆ. ರೈಲ್ವೇ ಪೊಲೀಸ್ ಮತ್ತು ಜಿಆರ್‌ಪಿಯ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಂಟರಿಂದ ಹತ್ತು ರೈಲ್ವೇ ಪೊಲೀಸ್ ಠಾಣೆಗಳ ಮುಖ್ಯಸ್ಥರನ್ನು ನಿಯೋಜಿಸಲಾಗಿದೆ. ದೆಹಲಿ ಪೊಲೀಸ್ ಠಾಣೆ ಮುಖ್ಯಸ್ಥರನ್ನು ಸಹ ಹತ್ತಿರದಲ್ಲೇ ನಿಯೋಜಿಸಲಾಗಿದೆ ಎಂದರು.
ಇದಲ್ಲದೆ ಪ್ರತಿ ಪ್ಲಾಟ್‌ಫಾರ್ಮ್, ಪಾದಚಾರಿ ಸೇತುವೆ ಮತ್ತು ಹೊರಗೆ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಒಂದು ಕಂಪನಿಯಲ್ಲಿ 80 ರಿಂದ 85 ಭದ್ರತಾ ಸಿಬ್ಬಂದಿಗಳಿದ್ದಾರೆ. ಅಲ್ಲದೆ, ರೈಲ್ವೇ ನಿಲ್ದಾಣದ ಹೊರಗೆ ಮತ್ತು ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ರೈಲು ನಿಲ್ದಾಣದ ಬಳಿ ವಾಹನಗಳನ್ನು ಅನುಮತಿಸಲಾಗುವುದಿಲ್ಲ. ಕುಂಭಮೇಳಕ್ಕೆ ಹೋಗುವ ರೈಲುಗಳು 12, 13 ಮತ್ತು 14ನೇ ಪ್ಲಾಟ್‌ಫಾರ್ಮ್ಗಳಿಂದ ಹೊರಡುತ್ತಿವೆ. ಇಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಯಾಗ್‌ರಾಜ್‌ಗೆ ಹೋಗುವ ರೈಲುಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಯಾಗ್‌ರಾಜ್‌ನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಜನಸಂದಣಿ ಸೇರುತ್ತಿರುವ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ರೈಲ್ವೆ ಎಲ್ಲಾ ವಿಐಪಿ ಶಿಷ್ಟಾಚಾರ ರದ್ದು ಮಾಡಿದೆ. ಪ್ರಯಾಗ್‌ರಾಜ್‌ನಲ್ಲಿರುವ ರೈಲ್ವೆ ವಿಶ್ರಾಂತಿ ಗೃಹದ ಎಲ್ಲಾ ಮುಂಗಡ ಬುಕಿಂಗ್ ಬಂದ್ ಮಾಡಿದ್ದು, ರೈಲ್ವೆ ಅಧಿಕಾರಿಗಳು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ. ವಿಐಪಿಗಳ ಶಿಷ್ಟಾಚಾರದಲ್ಲಿ ಕರ್ತವ್ಯ ನಿರ್ವಹಿಸುವ ರೈಲ್ವೆ ನೌಕರರು ಮತ್ತು ಭದ್ರತಾ ಸಿಬ್ಬಂದಿಯನ್ನು ಜವಬ್ದಾರಿಯಿಂದ ವಿಮುಕ್ತಗೊಳಿಸಲಾಗುತ್ತಿದೆ.
ಕಾಲ್ತುಳಿತ ಸಂಭವಿಸಿದ್ದು ಹೇಗೆ?
ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ನವದೆಹಲಿ ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಅದಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ನಿಲ್ದಾಣವನ್ನು ತಲುಪಿದವು. ಹೀಗಾಗಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು. ಇದೇ ಸಮಯಕ್ಕೆ ಪ್ಲಾಟ್‌ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ ರಾಜ್‌ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಹೀಗಾಗಿ ರೈಲಿನ ಒಳಗೆ ಮತ್ತು ಹೊರಗೆ ಕಾಲ್ತುಳಿತ ಸಂಭವಿಸಿದ್ದು, ಈ ಅವಘಡದಲ್ಲಿ 18 ಮಂದಿ ಸಾವಿಗೀಡಾಗಿದ್ದರು.ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್ ಮಾಡಿ ಹೇಳಿದ್ದ ಚೇತನ್
ನವದೆಹಲಿ: ಕೊನೇ ಕ್ಷಣದಲ್ಲಿ ಪ್ಲಾಟ್‌ಫಾರ್ಮ್ ಹಾಗೂ ರೈಲು ಹೆಸರಿನಲ್ಲಿ ಉಂಟಾದ ಗೊಂದಲವೇ ಕಾಲ್ತುಳಿತಕ್ಕೆ ಕಾರಣವಾಗಿರಬಹುದು ಎಂದು ಹಿರಿಯ ದೆಹಲಿ ಪೊಲೀಸ್ (Delhi Police) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವದೆಹಲಿ ರೈಲು ನಿಲ್ದಾಣದ (Delhi Railway Station) ಪ್ಲಾಟ್‌ಫಾರ್ಮ್ ಸಂಖ್ಯೆ 13 ಮತ್ತು 14 ಜನದಟ್ಟಣೆಯಿಂದ ಕೂಡಿತ್ತು. ಅನೇಕ ಜನರು ಎರಡು ರೈಲುಗಳನ್ನು ಹತ್ತಲು ಕಾಯುತ್ತಿದ್ದರು. ಮಾಗ್ಧ್ ಎಕ್ಸ್‌ಪ್ರೆಸ್ ಮತ್ತು ಜಮ್ಮು ಕಡೆಗೆ ಹೋಗುವ ಇನ್ನೊಂದು ರೈಲು ವಿಳಂಬವಾಯಿತು. ಈ ಮಧ್ಯೆ, ಮಹಾ ಕುಂಭಕ್ಕಾಗಿ ವಿಶೇಷ ರೈಲು, ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್, ರಾತ್ರಿ 10:10ಕ್ಕೆ ಪ್ಲಾಟ್‌ಫಾರ್ಮ್ ಸಂಖ್ಯೆ 14 ರಿಂದ ಹೊರಡಬೇಕಿತ್ತು. ಪ್ರಯಾಗ್‌ರಾಜ್‌ಗೆ ರೈಲು (Prayagraj Express Train) ಹೋಗುವ ಸಮಯ ಹತ್ತಿರವಾಗುತ್ತಿದ್ದಂತೆ, ಹೆಚ್ಚು ಹೆಚ್ಚು ಜನರು ಪ್ಲಾಟ್‌ಫಾರ್ಮ್‌ಗೆ ಧಾವಿಸಲು ಪ್ರಾರಂಭಿಸಿದರು. ಇದು ಜನದಟ್ಟಣೆಯನ್ನು ಹೆಚ್ಚಿಸಿತು ಎಂದು ಅಧಿಕಾರಿ ಹೇಳಿದ್ದಾರೆ.
ಏಕೆಂದರೆ ಪ್ರಯಾಗರಾಜ್ ಎಕ್ಸ್‌ಪ್ರೆಸ್ ವಿಶೇಷ ರೈಲು ಆಗಲೇ ಪ್ಲಾಟ್‌ಫಾರ್ಮ್ 14 ರಲ್ಲಿತ್ತು. ಈ ವೇಳೆ 16ನೇ ಪ್ಲಾಟ್‌ಫಾರ್ಮ್‌ಗೆ ತಲುಪಲಿದೆ ಎಂಬ ಘೋಷಣೆಯೊಂದು ಹೊರಬಿದ್ದಿತು. ಪ್ಲಾಟ್‌ಫಾರ್ಮ್ 14 ರಲ್ಲಿ ತಮ್ಮ ರೈಲನ್ನು ತಲುಪಲು ಸಾಧ್ಯವಾಗದ ಜನರು 16ಕ್ಕೆ ಆಗಮಿಸುತ್ತಿದೆ ಎಂದು ಭಾವಿಸಿ ಅತ್ತ ನುಗ್ಗಲು ಪ್ರಾರಂಭಿಸಿದ್ರು. ಇದರಿಂದಾಗಿ ಕಾಲ್ತುಳಿತ ಸಂಭವಿಸಿರಬಹುದು ಎಂದು ಹೇಳಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಸಲು ರೈಲ್ವೆಯು ಇಬ್ಬರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ಕೂಡ ರಚಿಸಿದೆ. ಉತ್ತರ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ನರಸಿಂಗ್ ದೇವು ಮತ್ತು ಉತ್ತರ ರೈಲ್ವೆಯ ಪ್ರಧಾನ ಮುಖ್ಯ ಭದ್ರತಾ ಆಯುಕ್ತ ಪಂಕಜ್ ಗಂಗ್ವಾರ್ ಸಮಿತಿಯ ಭಾಗವಾಗಿದ್ದಾರೆ. ತನಿಖೆ ಆರಂಭಿಸಿರುವ ಸಮಿತಿಯು, ನವದೆಹಲಿ ರೈಲು ನಿಲ್ದಾಣದ ಎಲ್ಲಾ ವಿಡಿಯೋ ತುಣುಕನ್ನು ಪಡೆದುಕೊಳ್ಳಲು ಆದೇಶ ನೀಡಿದೆ. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ
ನಿನ್ನೆ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಎರಡು ರೈಲುಗಳು ವಿಳಂಬವಾಗಿ ಬಂದ ಕಾರಣ ಮತ್ತು ಮಹಾ ಕುಂಭಮೇಳಕ್ಕೆ ತೆರಳಲು ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ವಿಳಂಬವಾದ ಪರಿಣಾಮ ಕಾಲ್ತುಳಿತ ಉಂಟಾಯಿತು. ಪರಿಣಾಮ 11 ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ
ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Delhi Railway Station Stampede) 18 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು (Narendra Modi) ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ಸಂತಾಪವಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಕೇಸ್; ಸುಲಿಗೆ, ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು
Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.
ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸಹ ಸಂತಾಪ ಸೂಚಿಸಿದ್ದಾರೆ. ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಮನದಾಳದಿಂದ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Deeply anguished to know about the loss of lives in a stampede at New Delhi Railway station. I extend my heartfelt condolences to the bereaved families and pray for speedy recovery of those injured.
ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಅನೇಕರು ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : ಡಾಲಿ ಧನಂಜಯ್ ಕಲ್ಯಾಣ ವೈಭೋಗ
ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕುಂಭಮೇಳಕ್ಕೆ ಹೊರಟಿದ್ದ 18 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ 11 ಮಹಿಳೆಯರು ಹಾಗೂ 4 ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ (Delhi Railway Station Stampede) ಕುಂಭಮೇಳಕ್ಕೆ (Maha Kumbh Mela) ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.
ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ನವದೆಹಲಿ (Delhi) ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಅದಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ನಿಲ್ದಾಣವನ್ನು ತಲುಪಿದವು. ಹೀಗಾಗಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು.
ಇದೇ ಸಮಯಕ್ಕೆ ಪ್ಲಾಟ್ ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ ರಾಜ್‌ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಹೀಗಾಗಿ ರೈಲಿನ ಒಳಗೆ ಮತ್ತು ಹೊರಗೆ ಕಾಲ್ತುಳಿತ ಸಂಭವಿಸಿದೆ. ಈ ಅವಘಡದಲ್ಲಿ 18 ಮಂದಿ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದಾರೆ. ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಕಳೆದ ಜ.29ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್‌ರಾಜ್‌ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.