Tag: Delhi special court

  • ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಪರಾರಿಯಾದ ಆರ್ಥಿಕ ಅಪರಾಧಿ: ದೆಹಲಿ ವಿಶೇಷ ಕೋರ್ಟ್‌ ಆದೇಶ

    ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಪರಾರಿಯಾದ ಆರ್ಥಿಕ ಅಪರಾಧಿ: ದೆಹಲಿ ವಿಶೇಷ ಕೋರ್ಟ್‌ ಆದೇಶ

    ನವದೆಹಲಿ: ಬ್ರಿಟನ್ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿಯನ್ನು (Sanjay Bhandari) ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲಾಗಿದೆ. ಜಾರಿ ನಿರ್ದೇಶನಾಲಯದ (ED) ಮನವಿಯ ಮೇರೆಗೆ ದೆಹಲಿ ವಿಶೇಷ ನ್ಯಾಯಾಲಯ (Delhi Special Court) ಇಂದು ಆದೇಶ ಹೊರಡಿಸಿದೆ.

    ಸಂಜಯ್ ಭಂಡಾರಿ, ಬ್ರಿಟನ್‌ನಲ್ಲಿ ನೆಲೆಸಿರುವ ಶಸ್ತ್ರಾಸ್ತ್ರ ಸಲಹೆಗಾರ (Arms Consultant), 2016ರಲ್ಲಿ ಭಾರತದಿಂದ ಬ್ರಿಟನ್‌ಗೆ ಪರಾರಿಯಾದವರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. 2015ರ ಕಪ್ಪುಹಣ ತಡೆ ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆ ದಾಖಲಿಸಿದ ಆರೋಪಪಟ್ಟಿಯನ್ನು ಆಧರಿಸಿ, ಇಡಿಯು 2017ರ ಫೆಬ್ರವರಿಯಲ್ಲಿ ಭಂಡಾರಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತು. 2020ರಲ್ಲಿ ಇಡಿ ಆರೋಪಪಟ್ಟಿಯನ್ನು ಸಹ ಸಲ್ಲಿಸಿತು. ಇದನ್ನೂ ಓದಿ: ರಶ್ಮಿಕಾ ಬೈ ಮಿಸ್‌ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

    ಇಡಿಯ ಪ್ರಕಾರ, ಭಂಡಾರಿಯು 100 ಕೋಟಿ ರೂ.ಗಿಂತಲೂ ಹೆಚ್ಚಿನ ಮೌಲ್ಯದ ವಿದೇಶಿ ಆಸ್ತಿಗಳನ್ನು ಹೊಂದಿದ್ದಾನೆ. ಇವುಗಳನ್ನು ಆದಾಯ ತೆರಿಗೆ ಇಲಾಖೆಗೆ ಬಹಿರಂಗಪಡಿಸದೇ ಅಕ್ರಮವಾಗಿ ಸಂಪಾದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಭಂಡಾರಿಯು ಭಾರತದ ಕಾನೂನು ಪ್ರಕ್ರಿಯೆಯಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಂಡಿದ್ದಾನೆ ಎಂದು ಇಡಿ ವಾದಿಸಿತ್ತು. ಇದನ್ನೂ ಓದಿ: ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ ನೀಡುವುದು ಔದಾರ್ಯಕ್ಕಲ್ಲ, ರಾಷ್ಟ್ರಕ್ಕಾಗಿ ಮಾಡಿದ ಸೇವೆಗೆ – ದೆಹಲಿ ಹೈಕೋರ್ಟ್

    ಭಾರತ ಸರ್ಕಾರವು ಭಂಡಾರಿಯನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಬ್ರಿಟನ್‌ಗೆ ಮನವಿ ಸಲ್ಲಿಸಿತ್ತು. ಆದರೆ, ಅಲ್ಲಿಯ ನ್ಯಾಯಾಲಯವು ಈ ಮನವಿಯನ್ನು ತಿರಸ್ಕರಿಸಿತು. ಇದರ ಬೆನ್ನಲೆ ದೆಹಲಿ ವಿಶೇಷ ನ್ಯಾಯಲಯ ಪರಾರಿಯಾದ ಆರ್ಥಿಕ ಅಪರಾಧಿ (Economic Offender) ಎಂದು ಘೋಷಿಸಿದ್ದು, ಭಂಡಾರಿಯ ಆಸ್ತಿಗಳನ್ನು ಮುಟ್ಟುಗೋಲಿಗೆ ಒಳಪಡಿಸಲು ಮತ್ತು ಕಾನೂನು ಕ್ರಮಕ್ಕೆ ಒಳಪಡಿಸಲು ಭಾರತ ಸರ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ

  • ಮತದಾನಕ್ಕೆ ಅಡ್ಡಿ ಮಾಡಿದ್ದ ಆಪ್ ಶಾಸಕನಿಗೆ ಜೈಲು ಶಿಕ್ಷೆ

    ಮತದಾನಕ್ಕೆ ಅಡ್ಡಿ ಮಾಡಿದ್ದ ಆಪ್ ಶಾಸಕನಿಗೆ ಜೈಲು ಶಿಕ್ಷೆ

    ನವದೆಹಲಿ: ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿ ಪಡಿಸಿದ ಪ್ರಕರಣ ಸಂಬಂಧ ದೆಹಲಿಯ ವಿಶೇಷ ನ್ಯಾಯಾಲಯವೂ ಆಮ್ ಆದ್ಮಿ ಪಕ್ಷದ ಶಾಸಕ ಮನೋಜ್ ಕುಮಾರ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

    ಮನೋಜ್ ಕುಮಾರ್ ಪೂರ್ವ ದೆಹಲಿಯ ಕೊಂಡ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, 2013 ರಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತದಾನ ಪ್ರಕ್ರಿಯೆಗೆ ಅಡ್ಡಿ ಪಡಿಸಿದ್ದರು. ಮತದಾನ ಕೇಂದ್ರವಾಗಿದ್ದ ಎಂಡಿಸಿ ಶಾಲೆ ಬಳಿ ಸುಮಾರು 50 ಕಾರ್ಯಕರ್ತರ ಜೊತೆ ಗೂಡಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಮತದಾತಕ್ಕೆ ಬಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಹೀಗಾಗಿ ಕಲ್ಯಾಣ್ಪುರಿ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಜೂನ್ 11 ರಂದು ಮನೋಜ್ ಕುಮಾರ್ ಅವರನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಐಪಿಸಿ ಸೆಕ್ಷನ್ 186 ಅಡಿಯಲ್ಲಿ ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸರ್ಕಾರಿ ಅಧಿಕಾರಿಯನ್ನು ತಡೆದಿದ್ದಕ್ಕೆ ಹಾಗೂ ಐಪಿಸಿ ಸೆಕ್ಷನ್ 131ರ ಜನರ ಪ್ರಾತಿನಿಧ್ಯ ಕಾಯ್ದೆಯ ಅಡಿಯಲ್ಲಿ ಮತಗಟ್ಟೆಗಳಲ್ಲಿ ಅಥವಾ ಅದರ ಸುತ್ತಮುತ್ತಲ ಪ್ರದೇಶದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪ ಸಾಬೀತಾಗಿದೆ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿತ್ತು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಮನೋಜ್ ಕುಮಾರ್ ಅವರಿಗೆ 3 ತಿಂಗಳ ಜೈಲು ಶಿಕ್ಷೆ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿದೆ.

    ಶಿಕ್ಷೆ ಘೋಷಿಸಿದ ನಂತರ ಮನೋಜ್ ಕುಮಾರ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿ 10 ಸಾವಿರ ರೂ. ಬಾಂಡ್ ಕಟ್ಟುವಂತೆ ಸೂಚಿಸಿದೆ.