Tag: delhi university

  • ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

    ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪದವಿಯ ವಿವರಗಳನ್ನು ಬಹಿರಂಗಪಡಿಸುವ ಅವಶ್ಯಕತೆ ಇಲ್ಲ ಎಂದು ದೆಹಲಿ ಹೈಕೋರ್ಟ್ (Delhi High Court) ತೀರ್ಪು ನೀಡಿದೆ. ಇದೇ ವೇಳೆ ಮಾಹಿತಿ ಬಿಡುಗಡೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದುಗೊಳಿಸಿದೆ.

    2016 ರಲ್ಲಿ ಕೇಂದ್ರ ಮಾಹಿತಿ ಆಯೋಗ (Central Information Commission) 1978 ರಲ್ಲಿ ದೆಹಲಿ ವಿವಿಯಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿತ್ತು. ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಹೇಳಲಾಗಿತ್ತು. ದೆಹಲಿ ವಿಶ್ವವಿದ್ಯಾಲಯವು ಸಿಐಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

    ಸೋಮವಾರ ತನ್ನ ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರಿದ್ದ ಪೀಠ, ವೈಯಕ್ತಿಕ ಮಾಹಿತಿಯ ಬಹಿರಂಗಗೊಳಿಸುವಿಕೆಯು ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಬಹುದು ಎಂದು ಹೇಳಿದೆ. ಈ ಸಂದರ್ಭದಲ್ಲಿ, ಮಾಹಿತಿ ಬಹಿರಂಗಗೊಳಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ ಎಂದು ಕೋರ್ಟ್ ಒತ್ತಿ ಹೇಳಿದೆ. ಇದನ್ನೂ ಓದಿ: ಶ್ರೀಮಂತ ಗಣಪನಿಗೆ ಈ ಬಾರಿ 474 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

    ದೆಹಲಿ ವಿಶ್ವವಿದ್ಯಾಲಯವು, ಪ್ರಧಾನಿ ಮೋದಿಯವರ ಶೈಕ್ಷಣಿಕ ದಾಖಲೆಗಳನ್ನು ಬಹಿರಂಗಪಡಿಸುವುದು ಗೌಪ್ಯತೆಯ ಉಲ್ಲಂಘನೆಯಾಗುತ್ತದೆ ಎಂದು ವಾದಿಸಿತು. ಈ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ, ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿರಬೇಕು ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದಲ್ಲಿ, ಅಂತಹ ಯಾವುದೇ ಹಿತಾಸಕ್ತಿ ಕಂಡುಬಂದಿಲ್ಲ ಎಂದು ಕೋರ್ಟ್ ಹೇಳಿದೆ.

  • ಕಾನೂನು ವಿದ್ಯಾರ್ಥಿಗಳ ಪಠ್ಯದಲ್ಲಿ ಮನಸ್ಮೃತಿ ಇಲ್ಲ: ಕೇಂದ್ರ ಶಿಕ್ಷಣ ಸಚಿವ ಸ್ಪಷ್ಟನೆ

    ಕಾನೂನು ವಿದ್ಯಾರ್ಥಿಗಳ ಪಠ್ಯದಲ್ಲಿ ಮನಸ್ಮೃತಿ ಇಲ್ಲ: ಕೇಂದ್ರ ಶಿಕ್ಷಣ ಸಚಿವ ಸ್ಪಷ್ಟನೆ

    ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಗಳಿಗೆ ಪ್ರಾಚೀನ ಭಾರತೀಯ ಪಠ್ಯ ಮನುಸ್ಮೃತಿಯನ್ನು ಕಲಿಸುವ ಪ್ರಸ್ತಾಪದ ವಿವಾದಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೆರೆ ಎಳೆದಿದ್ದಾರೆ.

    ಮನುಸ್ಮೃತಿಯು ಕಾನೂನು ಫ್ಯಾಕಲ್ಟಿ ಕೋರ್ಸ್‌ನ (ಡಿಯುನಲ್ಲಿ) ಭಾಗವಾಗಲಿದೆ ಎಂದು ಕೆಲವು ಮಾಹಿತಿ ನಮಗೆ ಬಂದಿತು. ನಾನು ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ವಿಚಾರಿಸಿ ಮಾತನಾಡಿದೆ. ಕೆಲವು ಕಾನೂನು ಅಧ್ಯಾಪಕರು ನ್ಯಾಯಶಾಸ್ತ್ರದ ಅಧ್ಯಾಯದಲ್ಲಿ ಕೆಲವು ಬದಲಾವಣೆಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ಅವರು ನನಗೆ ತಿಳಿಸಿದರು. ಅಕಾಡೆಮಿಕ್ ಕೌನ್ಸಿಲ್‌ನಲ್ಲಿ ಅಂತಹ ಯಾವುದೇ ಪ್ರಸ್ತಾವನೆಗೆ ಅನುಮೋದನೆ ಇಲ್ಲ. ನಿನ್ನೆ ಸ್ವತಃ ಉಪಕುಲಪತಿಗಳೇ ಆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು. ನಾವೆಲ್ಲರೂ ನಮ್ಮ ಸಂವಿಧಾನಕ್ಕೆ ಮತ್ತು ಭವಿಷ್ಯದ ವಿಧಾನಕ್ಕೆ ಬದ್ಧರಾಗಿದ್ದೇವೆ. ಸಂವಿಧಾನದ ನಿಜವಾದ ಚೇತನ ಮತ್ತು ಅಕ್ಷರವನ್ನು ಎತ್ತಿ ಹಿಡಿಯಲು ಸರ್ಕಾರ ಬದ್ಧವಾಗಿದೆ. ಯಾವುದೇ ಸ್ಕ್ರಿಪ್ಟ್‌ನ ಯಾವುದೇ ವಿವಾದಾತ್ಮಕ ಭಾಗವನ್ನು ಸೇರಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟನೆ ನೀಡಿದ್ದಾರೆ.

    ಎಲ್‌ಎಲ್‌ಬಿ ವಿದ್ಯಾರ್ಥಿಗಳಿಗೆ ಪ್ರಾಚೀನ ಹಿಂದೂ ಕಾನೂನು ಪಠ್ಯವಾದ ‘ಮನುಸ್ಮೃತಿ’ ಬೋಧಿಸುವುದಿಲ್ಲ ಎಂದು ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ಸಿಂಗ್ ಸ್ಪಷ್ಟಪಡಿಸಿದ್ದರು.

    ಕಾನೂನು ಅಧ್ಯಾಪಕರು ಮನುಸ್ಮೃತಿಯ ಒಂದು ಭಾಗವನ್ನು ‘ನ್ಯಾಯಶಾಸ್ತ್ರ’ ಎಂಬ ಕೋರ್ಸ್‌ನಲ್ಲಿ ಸೇರಿಸಲು ಯೋಚಿಸಿದ್ದಾರೆ. ಈ ಪ್ರಸ್ತಾಪವನ್ನು ಉಪಕುಲಪತಿ ನೇತೃತ್ವದ ಸಮಿತಿಯ ಮುಂದೆ ಮಂಡಿಸಿದಾಗ, ನಾವು ಅದನ್ನು ಸೂಕ್ತವೆಂದು ಪರಿಗಣಿಸಲಿಲ್ಲ ಮತ್ತು ಅದನ್ನು ತಿರಸ್ಕರಿಸಿದ್ದೇವೆ. ಭಾರತೀಯ ಜ್ಞಾನ ಸಂಪ್ರದಾಯಗಳನ್ನು ಕಲಿಸಲು ಇನ್ನೂ ಅನೇಕ ಪಠ್ಯಗಳಿವೆ. ನಾವು ಯಾವುದೇ ಒಂದು ಪಠ್ಯವನ್ನು ಅವಲಂಬಿಸಬಾರದು ಎಂದು ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ಸಿಂಗ್ ಹೇಳಿದ್ದಾರೆ. ಈ ಬೆಳವಣಿಗೆ ವಿವಾದಕ್ಕೆ ಕಾರಣವಾಗಿತ್ತು.

    ವಿವಾದದ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌, ವಿವಾದಾತ್ಮಕ ಭಾಗವನ್ನು ಪಠ್ಯಕ್ರಮದಲ್ಲಿ ಸೇರಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

  • ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ಸಾಮಾನ್ಯನಂತೆ ಮೆಟ್ರೋದಲ್ಲಿ ಬಂದ ಪ್ರಧಾನಿ ಮೋದಿ

    ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ಸಾಮಾನ್ಯನಂತೆ ಮೆಟ್ರೋದಲ್ಲಿ ಬಂದ ಪ್ರಧಾನಿ ಮೋದಿ

    – ಮೋದಿ ಸಮಾರಂಭಕ್ಕೆ ವಿದ್ಯಾರ್ಥಿಗಳು ಕಪ್ಪು ಉಡುಗೆ ಧರಿಸಲು ನಿಷೇಧ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ದೆಹಲಿ ವಿಶ್ವವಿದ್ಯಾನಿಲಯದ (Delhi University) ಕಾರ್ಯಕ್ರಮಕ್ಕೆ ತೆರಳಲು ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋ ರೈಲಿನಲ್ಲಿ (Metro) ತೆರಳಿದ್ದಾರೆ. ಈ ವೇಳೆ ಮೆಟ್ರೋದಲ್ಲಿದ್ದ ಪ್ರಯಾಣಿಕರೊಂದಿಗೆ ಮೋದಿ ಸಂವಾದ ನಡೆಸಿದ್ದಾರೆ.

    ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಶುಕ್ರವಾರ (ಇಂದು) ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನದ ಶತಮಾನೋತ್ಸವ ಸಮಾರೋಪ ಸಮಾರಂಭಕ್ಕೆ ಮೋದಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ತೆರಳಲು ಮೋದಿ, ಟಿಕೆಟ್ ಕೌಂಟರ್‍ಗೆ ತೆರಳಿ ಟಿಕೆಟ್ ಪಡೆದಿದ್ದಾರೆ. ಬಳಿಕ ಮೆಟ್ರೋದಲ್ಲಿ ಜನರ ಪಕ್ಕದಲ್ಲೇ ಕುಳಿತಿದ್ದಾರೆ. ಈ ವೇಳೆ ಜನರೊಂದಿಗೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್‍ಗಳ ವಿಲೀನ ಪರಿಣಾಮ – ವಿಶ್ವದ ಮೌಲ್ಯಯುತ ಬ್ಯಾಂಕ್ ಆಗಿ ಹೊರಹೊಮ್ಮಿದ HDFC

    ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಪ್ಪು ಉಡುಪುಗಳನ್ನು ಧರಿಸಲು ನಿಷೇಧ ಹೇರಲಾಗಿದೆ. ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ.

    ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಹಂಸರಾಜ್ ಕಾಲೇಜು, ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜು ಮತ್ತು ಜಾಕಿರ್ ಹುಸೇನ್ ದೆಹಲಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಡ್ಡಾಯವಾಗಿ ಹಾಜರಿರುವಂತೆ ಆದೇಶಿಸಲಾಗಿದೆ. ಇದನ್ನೂ ಓದಿ: ಮೋದಿಯವರ `ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ: ಪುಟಿನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೆಎನ್‌ಯು, ಜಾಮಿಯಾ ಬಳಿಕ ದೆಹಲಿ ವಿವಿಗೆ ಕಾಲಿಟ್ಟ ಮೋದಿ ಸಾಕ್ಷ್ಯಚಿತ್ರ ವಿವಾದ

    ಜೆಎನ್‌ಯು, ಜಾಮಿಯಾ ಬಳಿಕ ದೆಹಲಿ ವಿವಿಗೆ ಕಾಲಿಟ್ಟ ಮೋದಿ ಸಾಕ್ಷ್ಯಚಿತ್ರ ವಿವಾದ

    ನವದೆಹಲಿ: ತೀವ್ರ ವಿರೋಧದ ನಡುವೆಯೂ ದೆಹಲಿ ವಿಶ್ವ ವಿದ್ಯಾಲಯದಲ್ಲಿ ಬಿಬಿಸಿ ಸಿದ್ಧಪಡಿಸಿದ `ಮೋದಿ ಎ ಕ್ವಶನ್’ ಸಾಕ್ಷ್ಯಚಿತ್ರವನ್ನು (BBC Documentary) ವೀಕ್ಷಿಸಲಾಗಿದೆ. ವಿದ್ಯಾರ್ಥಿಗಳು ಲ್ಯಾಪ್‌ಟ್ಯಾಪ್, ಮೂಬೈಲ್‌ಗಳಲ್ಲಿ ಚಿತ್ರ ವೀಕ್ಷಿಸಿ ಆಜಾದಿ ಘೋಷಣೆ ಕೂಗಿದ್ದಾರೆ.

    ಜೆಎನ್‌ಯು (JNU) ಮತ್ತು ಜಾಮಿಯಾ ಮೀಲಿಯ ಇಸ್ಲಾಮಿಯಾ ವಿವಿ ಬಳಿಕ ದೆಹಲಿ ವಿಶ್ವ ವಿದ್ಯಾಲಯದಲ್ಲಿರುವ (Delhi University) ಎಡಪಂಥೀಯ ಚಿಂತನೆಯ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ಘೋಷಣೆ ಮಾಡಿದ್ದರು. ಇದಕ್ಕೆ ವಿವಿ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು. ಇದನ್ನೂ ಓದಿ: BBC Modi V/s The Kashmir Filesː ಎಸ್‌ಎಫ್‌ಐ, ಎಬಿವಿಪಿ ವಿದ್ಯಾರ್ಥಿಗಳ ನಡುವೆ ತಾರಕಕ್ಕೇರಿದ ಸಂಘರ್ಷ

    BBC Modi V/s The Kashmir Filesː ಎಸ್‌ಎಫ್‌ಐ, ಎಬಿವಿಪಿ ವಿದ್ಯಾರ್ಥಿಗಳ ನಡುವೆ ತಾರಕಕ್ಕೇರಿದ ಸಂಘರ್ಷ

    ವಿದ್ಯುತ್ ಕಡಿತಗೊಳಿಸಿದ ಬಳಿಕವೂ ಎಸ್‌ಎಫ್‌ಐ (SFI) ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿಗಳು ಬದಲಿ ಮಾರ್ಗಗಳನ್ನು ಬಳಸಿ ಮೊಬೈಲ್, ಲ್ಯಾಪ್‌ಟಾಪ್‌ಗಳ ಮೂಲಕ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡಿದರು. ಚಿತ್ರ ವೀಕ್ಷಣೆ ಪಟ್ಟು ಹೆಚ್ಚುತ್ತಿದ್ದಂತೆ ದೆಹಲಿ ಪೊಲೀಸರು ಕ್ಯಾಂಪಸ್‌ಗೆ ಬಿಗಿ ಭದ್ರತೆ ಒದಗಿಸಿದರು. ಗುರುತಿನ ಚೀಟಿ ಇಲ್ಲದವರನ್ನ ಕ್ಯಾಂಪಸ್‌ನೊಳಗೆಯೇ ನಿರ್ಬಂಧಿಸಲಾಯಿತು.

    ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ಎಸ್‌ಎಫ್‌ಐ (SFI) ಸೇರಿ ಎಡಪಂಥೀಯ ವಿದ್ಯಾರ್ಥಿಗಳು ಸಾಕ್ಷ್ಯ ಚಿತ್ರ ವೀಕ್ಷಣೆ ಮಾಡುತ್ತಿದ್ದಂತೆ ಬಲ ಪಂಥೀಯ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು. ಆಜಾದಿ ಘೋಷಣೆಗೆ ಪ್ರತಿಯಾಗಿ ಜೈ ಶ್ರೀರಾಮ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ‌ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೆಹಲಿ ವಿಶ್ವವಿದ್ಯಾಲಯದ ಹಂಸರಾಜ್ ಕಾಲೇಜ್‌ ಹಾಸ್ಟೆಲ್‍ನಲ್ಲಿ ಮಾಂಸಾಹಾರ ಸೇವನೆ ನಿಷೇಧ

    ದೆಹಲಿ ವಿಶ್ವವಿದ್ಯಾಲಯದ ಹಂಸರಾಜ್ ಕಾಲೇಜ್‌ ಹಾಸ್ಟೆಲ್‍ನಲ್ಲಿ ಮಾಂಸಾಹಾರ ಸೇವನೆ ನಿಷೇಧ

    ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಹಂಸರಾಜ್ ಕಾಲೇಜಿನ (Delhi Universitys Hansraj College) ಹಾಸ್ಟೆಲ್ (Hostel) ಮತ್ತು ಕ್ಯಾಟಿಂನ್‍ನಲ್ಲಿ (Canteen) ಮಾಂಸಾಹಾರ (Non-veg) ಸೇವಿಸುವುದನ್ನು ನಿಷೇಧ ಮಾಡಿ ಪ್ರಾಂಶುಪಾಲರು ಆದೇಶಿಸಿದ್ದಾರೆ.

    ಕೊರೊನಾ (Corona) ಸೋಂಕಿನ ಬಳಿಕ ಆನ್‍ಲೈನ್‍ನಲ್ಲಿ ನಡೆಯುತ್ತಿದ್ದ ತರಗತಿಗಳು ಇದೀಗ ಆಫ್‍ಲೈನ್‍ನಲ್ಲಿ ನಡೆಯುತ್ತಿದೆ. ಹಾಗಾಗಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಕಾಲೇಜಿನ ಹಾಸ್ಟೆಲ್ ಮತ್ತು ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಸೇವನೆಯನ್ನು ನಿಷೇಧಿಸಲು ಮುಂದಾಗಿದೆ. ಇದನ್ನೂ ಓದಿ: Nepal Plane Crashː 32 ಮೃತದೇಹ ಹೊರಕ್ಕೆ – ತುರ್ತು ಸಭೆ ಕರೆದ ನೇಪಾಳ ಸರ್ಕಾರ

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಾಂಶುಪಾಲರಾದ ಪ್ರೋ. ರಾಮ, ಕಾಲೇಜಿನ ಕ್ಯಾಂಟೀನ್‌ ಮತ್ತು ಹಾಸ್ಟೆಲ್‍ನಲ್ಲಿ ಮಾಂಸಾಹಾರ ಸೇವನೆ ನಿಷೇಧದ ಕುರಿತು ಮೂರ್ನಾಲ್ಕು ವರ್ಷಗಳ ಹಿಂದೆ ಚಿಂತಿಸಲಾಗಿತ್ತು. ಇದೀಗ ಮಾಂಸಾಹಾರ ನಿಷೇಧದ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳ ಆರೋಗ್ಯ, ಕ್ಷೇಮದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

    ಕಳೆದ ವರ್ಷ ಜವಾಹರ‌ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರಾಮನವಮಿಯಂದು ಎಡಪಂಥೀಯ ವಿದ್ಯಾರ್ಥಿಗಳು ಮಾಂಸಾಹಾರ ಸೇವಿಸಿದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ABVP) ವಿದ್ಯಾರ್ಥಿಗಳು ತಡೆದಿದ್ದರು. ಆ ಬಳಿಕ ಜೆಎನ್‍ಯುನಲ್ಲಿ (JNU) ಹಲವು ಘರ್ಷಣೆಗಳು ವರದಿಯಾಗಿತ್ತು. ಇದನ್ನೂ ಓದಿ: ಕನ್ನಡಿಗರಿಗೆ ಕನ್ನಡದಲ್ಲಿ ಸಂಕ್ರಾಂತಿ ಶುಭ ಕೋರಿದ ಮೋದಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

    ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

    ನವದೆಹಲಿ: ಅನಾರೋಗ್ಯದ ಕಾರಣ ಹೆಚ್ಚಿನ ಸಮಯ ಹಾಸಿಗೆಯಲ್ಲೇ ಕಳೆಯುವಂತಾಗಿದೆ ಎಂದು ಬೇಸರಗೊಂಡು ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ನೇಯ ದೆಹಲಿ ಗೋವಿಂದಪುರಿ ಪ್ರದೇಶದಲ್ಲಿ ಬುಧವಾರ ನಡೆದಿದೆ.

    ರಾಕೇಶ್ ಕುಮಾರ್ ಜೈನ್ (74) ಮತ್ತು ಅವರ ಪತ್ನಿ ಉಷಾ ರಾಕೇಶ್ ಕುಮಾರ್ ಜೈನ್ (69) ಮೃತರು. ಗೋವಿಂದಪುರಿ ಬಳಿಯ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಯೂಟ್ಯೂಬ್ ವೀಡಿಯೋ ನೋಡಿ ಮಗುವಿಗೆ ಜನ್ಮ ನೀಡಿದ ಹುಡುಗಿ – ಪ್ರಿಯಕರ ಅರೆಸ್ಟ್

    SUICIDE

    ಮನೆಯ ಟೇಬಲ್‍ನಲ್ಲಿ ಪುಸ್ತಕವೊಂದು ಸಿಕ್ಕಿದೆ. “ಅಪಘಾತದಿಂದಾಗಿ ಇಬ್ಬರೂ ಹಾಸಿಗೆ ಹಿಡಿಯುವಂತಹ ಪರಿಸ್ಥಿತಿ ಎದುರಾಯಿತು. ಇದರಿಂದ ತುಂಬಾ ಬೇಸರವಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ. ಇದು ಅವರ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಗ್ರೇಟರ್ ಕೈಲಾಸ್ ಅವರ ಪೋಷಕರ ಆರೈಕೆ ಮಾಡುತ್ತಿದ್ದ ಅಂಕಿತಾ ಪೊಲೀಸ್ ಠಾಣೆಗೆ ಕರೆ ಮಾಡಿ ಪ್ರಾಧ್ಯಾಪಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಲ್ಲಿನಿಂದ ಹೊಡೆದು, ಉಸಿರುಗಟ್ಟಿಸಿ ಅತ್ಯಾಚಾರಕ್ಕೆ ಯತ್ನಿಸಿದ 15ರ ಬಾಲಕ!

    DELHI POLICE JEEP

    ಎಂದಿನಂತೆ ಮನೆಗೆ ಬಂದು ಬಾಗಿಲು ಬೆಲ್ ಮಾಡಿದ್ದಾರೆ. ಆದರೆ ಯಾರೂ ಬಾಗಿಲು ತೆಗಿದಿಲ್ಲ. ಕೊನೆಗೆ ಅನುಮಾನಗೊಂಡು ಅಂಕಿತ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

  • ಎಬಿವಿಪಿ ವಿರುದ್ಧದ ಪ್ರತಿಭಟನೆಯಿಂದ ಹಿಂದೆ ಸರಿದ ದೆಹಲಿ ವಿವಿ ವಿದ್ಯಾರ್ಥಿನಿ ಗುರ್‍ಮೆಹರ್

    ಎಬಿವಿಪಿ ವಿರುದ್ಧದ ಪ್ರತಿಭಟನೆಯಿಂದ ಹಿಂದೆ ಸರಿದ ದೆಹಲಿ ವಿವಿ ವಿದ್ಯಾರ್ಥಿನಿ ಗುರ್‍ಮೆಹರ್

    ನವದೆಹಲಿ: ಎಬಿವಿಪಿ ವಿರುದ್ಧ ಮಾತನಾಡಿದ್ದಕ್ಕೆ ಅತ್ಯಾಚಾರದ ಬೆದರಿಕೆಗಳು ಬಂದಿವೆ ಎಂದು ಹೇಳಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಹಾಗೂ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗುರ್‍ಮೆಹರ್ ಕೌರ್ ಕ್ಯಾಂಪಸ್‍ನ ಹಿಂಸಾಚಾರದ ವಿರುದ್ಧ ಕರೆ ನೀಡಲಾಗಿದ್ದ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.

    ಇದನ್ನೂ ಓದಿ : ಎಬಿವಿಪಿ ವಿರುದ್ಧ ಮಾತಾಡಿದ್ದಕ್ಕೆ ಕಾರ್ಗಿಲ್ ಹುತಾತ್ಮ ಯೋಧನ ಮಗಳಿಗೆ ಅತ್ಯಾಚಾರದ ಬೆದರಿಕೆ

    ಈ ಬಗ್ಗೆ ಟ್ವೀಟ್ ಮಾಡಿರುವ ಗುರ್‍ಮೆಹರ್, ನಾನು ಸಾಕಷ್ಟು ಅನುಭವಿಸಿದ್ದೇನೆ. 20 ವರ್ಷ ವಯಸ್ಸಿನ ನನಗೆ ಸಹಿಸಿಕೊಳ್ಳಲಾಗುವುದು ಇಷ್ಟೆ. ನಾನು ಅಭಿಯಾನದಿಂದ ಹಿಂದೆ ಸರಿಯುತ್ತಿದ್ದೇನೆ. ಎಲ್ಲರಿಗೂ ಅಭಿನಂದನೆ. ನನ್ನನ್ನು ಒಂಟಿಯಾಗಿ ಬಿಡಲು ಮನವಿ ಮಾಡುತ್ತೇನೆ. ನನಗೆ ಏನು ಹೇಳಬೇಕಿತ್ತೋ ಅದನ್ನು ಹೇಳಿದ್ದೇನೆ. ನನ್ನ ಧೈರ್ಯವನ್ನು ಪ್ರಶ್ನಿಸುವವರಿಗೆ ನಾನೀಗಾಗಲೇ ಅಗತ್ಯಕ್ಕಿಂತ ಹೆಚ್ಚಿನ ಧೈರ್ಯ ತೋರಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ನಡೆಯುತ್ತಿರುವ ದೆಹಲಿ ವಿಶ್ವವಿದ್ಯಾಲಯ ಉಳಿಸಿ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಇತರರಿಗೆ ಮನವಿ ಮಾಡಿದ್ದಾರೆ.

    ಫೇಸ್‍ಬುಕ್‍ನಲ್ಲಿ ಎಬಿವಿಪಿ ವಿರುದ್ಧ ಪೋಸ್ಟ್ ಹಾಕಿದ ನಂತರ ಅತ್ಯಾಚಾರದ ಬೆದರಿಕೆ ಬಂದಿದೆ ಎಂದು ಆರೋಪಿಸಿದ್ದ ಗುರ್‍ಮೆಹರ್‍ಗೆ ಸೋಮವಾರದಂದು ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಗುರ್‍ಮೆಹರ್ ಲೇಡಿ ಶ್ರೀರಮ್ ಕಾಲೇಜಿನ ಮೊದಲನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜು ಸಿಬ್ಬಂದಿ ಕೂಡ ಆಕೆಗೆ ಬೆಂಬಲಿಸಿದ್ದಾರೆ.

    ಇದನ್ನೂ ಓದಿ : ಕಾರ್ಗಿಲ್ ಹುತಾತ್ಮ ಯೋಧನ ಮಗಳ ಈ ಹಳೇ ಪೋಸ್ಟ್ ಗೆ ಸೆಹ್ವಾಗ್ ಪ್ರತಿಕ್ರಿಯಿಸಿದ್ದು ಹೀಗೆ

    ಏನಿದು ಪ್ರಕರಣ: ಕಳೆದ ಬುಧವಾರ ದೆಹಲಿಯ ರಾಮ್‍ಜಸ್ ಕಾಲೇಜಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘ(ಎಐಎಸ್‍ಎ) ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಜೆಎನ್‍ಯು ವಿದ್ಯಾರ್ಥಿಗಳಾದ ಉಮರ್ ಖಲೀದ್ ಹಾಗೂ ಶೆಹ್ಲಾ ರಷೀದ್‍ರನ್ನು ಕಲ್ಚರ್ ಆಫ್ ಪ್ರೊಟೆಸ್ಟ್ಸ್ ಎಂಬ ಸೆಮಿನಾರ್ ನೀಡಲು ಆಹ್ವಾಸಲಾಗಿತ್ತು. ಇದಕ್ಕೆ ಅಬಿವಿಪಿ ವಿರೋಧ ವ್ಯಕ್ತಪಡಿಸಿದ್ದೇ ಈ ಗಲಾಟೆಗೆ ಕಾರಣವಾಗಿದೆ. ಇದಾದ ಬಳಿಕ ಗುರ್‍ಮೆಹರ್ ಕೌರ್, ನಾನು ಎಬಿವಿಪಿಗೆ ಹೆದರುವುದಿಲ್ಲ. ನಾನು ಒಂಟಿಯಲ್ಲ, ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ನನ್ನ ಜೊತೆಗಿದ್ದಾರೆ ಎಂಬ ಭಿತ್ತಿಪತ್ರ ಹಿಡಿದಿರುವ ಫೋಟೋವನ್ನ ಫೇಸ್‍ಬುಕ್ ಪ್ರೊಫೈಲ್ ಪಿಕ್ಚರ್ ಮಾಡಿದ್ದರು. ನಂತರ ಈ ಫೋಟೋ ವೈರಲ್ ಆಗಿತ್ತು. ಗುರ್‍ಮೆಹರ್ ಅವರ ಹಳೆಯ ಪೋಸ್ಟ್‍ವೊಂದರ ಬಗ್ಗೆ ಕ್ರಿಕೆಟರ್ ಸೆಹ್ವಾಗ್ ಟ್ವೀಟ್ ಮಡುವ ಮೂಲಕ ಪ್ರತಿಕ್ರಿಯಿಸಿದ್ದರು. ಸಂಸದ ಪ್ರತಾಪ್ ಸಿಂಹ, ಗುರ್‍ಮೆಹರ್ ಅವರನ್ನು ದಾವೂದ್ ಇಬ್ರಾಹಿಂಗೆ ಹೋಲಿಕೆ ಮಾಡಲಾದ ಪೋಸ್ಟ್‍ವೊಂದನ್ನು ಹಂಚಿಕೊಳ್ಳುವ ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿದ್ದರು.

    ಇದನ್ನೂ ಓದಿ : ಮಾಧ್ಯಮಗಳೇ, ನನ್ನ ಮಾತಿಗೆ ನಾನು ಬದ್ಧ: ಪ್ರತಾಪ್ ಸಿಂಹ