Tag: Delhi’s Patiala House Court

  • ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ನವದೆಹಲಿ/ಬೆಂಗಳೂರು: ನ್ಯೂಯಾರ್ಕ್‌ನಿಂದ  (New York) ದೆಹಲಿಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿ ಸಹಪ್ರಯಾಣಿಕ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ (Bengaluru) ದೆಹಲಿ ಪೊಲೀಸರು (Delhi Police) ಬಂಧಿಸಿದ್ದರು. ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ದೆಹಲಿ ಪಟಿಯಾಲ ಹೌಸ್ ಕೋರ್ಟ್ (Delhi’s Patiala House court) ಮಿಶ್ರಾನನ್ನ ಜನವರಿ 21ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶಿಸಿದೆ. ಜನವರಿ 11 ರಂದು ಮಹೇಶ್ ಮಿಶ್ರಾ ಕೇಸ್‌ಗೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: 22 ರಾಜ್ಯಗಳಲ್ಲಿ ಬಿಸಿನೆಸ್‌ ಮಾಡ್ತಿದ್ದೇವೆ; ಎಲ್ಲವನ್ನೂ ಬಿಜೆಪಿ ಜೊತೆ ಮಾಡ್ತಿಲ್ಲ – ಗೌತಮ್‌ ಅದಾನಿ

    ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇಲ್ಲಿನ ಪಟಿಯಾಲ ಹೌಸ್ ಕೋರ್ಟ್ಗೆ ಹಾಜರುಪಡಿಸಿದ್ದರು. ಪೊಲೀಸರು ಆರೋಪಿಯನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದಾಗ್ಯೂ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಮಿಶ್ರಾ ಏರ್ ಇಂಡಿಯಾದ ಇಬ್ಬರು ಕ್ಯಾಪ್ಟನ್‌ಗಳು ಹಾಗೂ ಮೂವರು ಕ್ಯಾಬಿನ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಹಾಗಾಗಿ ಅವರನ್ನೂ ವಿಚಾರಿಸಬೇಕಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಏನಿದು ಘಟನೆ?
    ನ್ಯೂಯಾರ್ಕ್ ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ ಎಐ-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬಿಸಿನೆಸ್ ಕ್ಲಾಸ್‌ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದರು. ಮೂತ್ರದಿಂದ ಮಹಿಳೆಯ ಬಟ್ಟೆ, ಶೂ, ಬ್ಯಾಗ್ ಒದ್ದೆಯಾಗಿತ್ತು. ಬ್ಯಾಗ್‌ನಲ್ಲಿ ಅಮೆರಿಕನ್ ಕರೆನ್ಸಿ, ಪಾಸ್‌ಪೋರ್ಟ್ ಸೇರಿ ಮುಖ್ಯವಾದ ದಾಖಲೆಗಳಿದ್ದವು. ಏರ್ ಹೋಸ್ಟೆಸ್ ಕೂಡಾ ಇದನ್ನು ಮುಟ್ಟಲು ನಿರಾಕರಿಸಿದ್ರು. ಬಳಿಕ ಮಹಿಳೆಯನ್ನು ಬಾತ್ ರೂಂಗೆ ಕರೆದುಕೊಂಡು ಹೋಗಿ ಬೇರೆ ಬಟ್ಟೆ ನೀಡಿದ್ರು. ನಂತರ ಬೇರೆ ಸೀಟ್ ಕೊಡುವಂತೆ ಮಹಿಳೆ ಕೇಳಿಕೊಂಡಿದ್ದರು. ಈ ವೇಳೆ ಸೀಟ್‌ಗಳೆಲ್ಲಾ ಭರ್ತಿಯಾಗಿದೆ ಎಂದು ಸಿಬ್ಬಂದಿ ಏರ್ ಹೋಸ್ಟೆಸ್ ಪ್ರಯಾಣ ಮಾಡುವ ಸೀಟ್ ನೀಡಿ ದೆಹಲಿಗೆ ಕರೆದುಕೊಂಡು ಬಂದಿದ್ದರು.

    ಈ ಘಟನೆಯ ಬಳಿಕ ಮಹಿಳೆ ಬಳಿ ಶಂಕರ್ ಮಿಶ್ರಾ ಕ್ಷಮೆಯಾಚಿಸಿದ್ದ. ಆದರೆ ಏರ್ ಇಂಡಿಯಾ ಮಾತ್ರ ಮಿಶ್ರಾ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಜೊತೆಗೆ ಮಹಿಳೆಯೊಂದಿಗೆ ಏರ್ ಇಂಡಿಯಾ ಸಿಬ್ಬಂದಿ ನಡೆದುಕೊಂಡ ರೀತಿಯಿಂದ ಮನನೊಂದು ಮಹಿಳೆ ಈ ಬಗ್ಗೆ ಟಾಟಾ ಸನ್ಸ್ ಗ್ರೂಪ್‌ನ ಮುಖ್ಯಸ್ಥರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದರು. ಶನಿವಾರ (ಜ.7) ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k