ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ (Land For Job Case) ಆರ್‌ಜೆಡಿ (RJD) ಮುಖ್ಯಸ್ಥ ಮತ್ತು ಬಿಹಾರದ (Bihar) ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (Lalu Prasad Yadav) ಮತ್ತು ಅವರ ಪುತ್ರರಾದ ತೇಜಸ್ವಿ ಯಾದವ್ (Tejashwi Yadav), ತೇಜ್ ಪ್ರತಾಪ್ ಯಾದವ್ (Tej Pratap Yadav) ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಜಾಮೀನು (Bail) ನೀಡಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ತಲಾ 1 ಲಕ್ಷ ರೂ. ಬಾಂಡ್‌ಗಳ ಮೇಲೆ ಜಾಮೀನು ಮಂಜೂರು ಮಾಡಿದರು. ಎಲ್ಲಾ ಮೂವರು ಆರೋಪಿಗಳು ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ. ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರವಾಸಿಗರ ಮಿನಿ ಬಸ್ ಏರಿದ ಚಿರತೆ
ಪ್ರಕರಣದ ವಿಚಾರಣೆ ಹಿನ್ನೆಲೆ ಆರೋಪಿಗಳು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರಾಗಿದ್ದರು. ಇದಕ್ಕೂ ಮುನ್ನ ಅವರ ವಿರುದ್ಧದ ಪೂರಕ ಆರೋಪಪಟ್ಟಿಯನ್ನು ಆಧರಿಸಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಅಂತಿಮ ವರದಿಯನ್ನು ಆಗಸ್ಟ್ 6 ರಂದು ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದನ್ನೂ ಓದಿ: ಕುರ್ಚಿ ಕಾದಾಟ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಭೇಟಿಯಾದ ವಿಜಯೇಂದ್ರ
2004ರಿಂದ 2009ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಮಧ್ಯಪ್ರದೇಶದ ಜಬಲ್‌ಪುರ ಮೂಲದ ರೈಲ್ವೆಯ ಪಶ್ಚಿಮ ಮಧ್ಯವಲಯದಲ್ಲಿ ಗ್ರೂಪ್-ಡಿ ಉದ್ಯೋಗಗಳಿಗೆ ಜನರನ್ನು ನೇಮಿಸಿದರು. ಇದಕ್ಕೆ ಬದಲಾಗಿ ಉಡುಗೊರೆ ರೂಪದಲ್ಲಿ ಅವರಿಂದ ಭೂಮಿ ಪಡೆದು ಲಾಲು ಪ್ರಸಾದ್ ತನ್ನ ಕುಟುಂಬದ ಮತ್ತು ಸಹಚರರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ಇದನ್ನೂ ಓದಿ: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ
ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ (Delhi Excise Policy) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಾಮಾನ್ಯ ಜಾಮೀನು (Bail) ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಧೀಶರಾದ ನಿಯಯ್ ಬಿಂದು ಎರಡು ದಿನಗಳ ಕಾಲ ಈ ಪ್ರಕರಣದ ಸುದೀರ್ಘ ವಿಚಾರಣೆ ಆಲಿಸಿ ಇಂದು ಈ ಪ್ರಕರಣದ ಆದೇಶಗಳನ್ನು ಕಾಯ್ದಿರಿಸಿದರು.
ವಿಚಾರಣೆ ವೇಳೆ ವಾದ ಮಂಡಿಸಿದ ಇ.ಡಿ ಪರ ವಕೀಲ ಎಎಸ್‌ಜಿ ಎಸ್‌ವಿ ರಾಜು, 2021-22ರ ದೆಹಲಿ ಮದ್ಯ ನೀತಿಯಲ್ಲಿ ಉದ್ದೇಶಪೂರ್ವಕವಾಗಿ ಲೋಪದೋಷಗಳನ್ನು ಮಾಡಲು ಕಿಕ್‌ಬ್ಯಾಕ್ ಪಡೆಯಲಾಗಿದೆ. ಈ ಹಣವನ್ನು ಗೋವಾ ಚುನಾವಣೆಗೆ ಬಳಸಿದೆ. ಇದಕ್ಕೆ ಪೂರಕವಾದ ಎಲ್ಲಾ ಸಾಕ್ಷಿಗಳು ಇ.ಡಿ ಬಳಿ ಇದೆ. ಗೋವಾದಲ್ಲಿ ಅರವಿಂದ್ ಕೇಜ್ರಿವಾಲ್ ತಂಗಿದ್ದ ಹೋಟೆಲ್ ಬಾಡಿಗೆ ಒಂದು ಲಕ್ಷ ರೂಪಾಯಿಯನ್ನು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬರು ಪಾವತಿಸಿದ್ದಾರೆ. ಅವರು ಕಿಕ್‌ಬ್ಯಾಕ್ ರೂಪದಲ್ಲಿ ಬಂದ ಸುಮಾರು 40 ಕೋಟಿಯನ್ನು ಪಡೆದುಕೊಂಡಿದ್ದಾರೆ. ಇದನ್ನು ಹೊರತುಪಡಿಸಿ ಇನ್ನಷ್ಟು ಸಾಕ್ಷಿಗಳಿದೆ ಎಂದರು. ಇದನ್ನೂ ಓದಿ: 3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ – ಟಿಬಿ ಜಯಚಂದ್ರ
ಇ.ಡಿ ಗಾಳಿಯಲ್ಲಿ ಗುಂಡು ಹಾರಿಸುತ್ತಿಲ್ಲ. ತಮ್ಮ ತನಿಖೆಯಲ್ಲಿ ಅಸಮರ್ಪಕ ದಾಖಲೆಗಳನ್ನು ಇಟ್ಟುಕೊಂಡಿದೆ. ಕಿಕ್‌ಬ್ಯಾಕ್ ರೂಪದಲ್ಲಿ ಪಡೆದ ಹಣ ಫೋಟೋಗಳು ಲಭ್ಯವಿದೆ. ಇದೇ ಹಣವನ್ನು ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿದೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊಬೈಲ್ ಪಾಸ್‌ವರ್ಡ್ ನೀಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ಪ್ರತಿಕೂಲವಾದ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಅವರು ತಮ್ಮ ಫೋನ್ ಪಾಸ್‌ವರ್ಡ್ ಹೇಳಿದರೆ ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್
ಕೇಜ್ರಿವಾಲ್ ಅವರು ವೈಯಕ್ತಿಕವಾಗಿ ಯಾವುದೇ ಅಪರಾಧದಲ್ಲಿ ಭಾಗಿಯಾಗದಿದ್ದರೂ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ವಿಚಾರಣೆ ನಡೆಸಬಹುದು. ಅವರು ನೇರವಾಗಿ ಅಪರಾಧ ಮಾಡದೇ ಇರಬಹುದು. ಆದರೆ ಎಎಪಿ ಪಕ್ಷದ ವ್ಯವಹಾರಗಳಿಗೆ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಎಎಪಿ ಅಪರಾಧದಲ್ಲಿ ತಪ್ಪಿತಸ್ಥರಾಗಿದ್ದರೆ ಸೆಕ್ಷನ್ 70 ಪಿಎಂಎಲ್‌ಎ ಪ್ರಕಾರ ಅವರು ತಪ್ಪಿತಸ್ಥರಾಗುತ್ತಾರೆ ಎಂದು ಎಸ್‌ವಿ ರಾಜು ವಾದಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿದ್ದರಾಮಯ್ಯ
ಇ.ಡಿ ಆರೋಪಕ್ಕೆ ಅರವಿಂದ್ ಕೇಜ್ರಿವಾಲ್ ಪರ ವಕೀಲ ವಿಕ್ರಮ್ ಚೌಧರಿ ಆಕ್ಷೇಪ ವ್ಯಕ್ತಪಡಿಸಿದರು. ಇ.ಡಿ ಒಂದು ಸ್ವತಂತ್ರ ಸಂಸ್ಥೆಯೇ ಅಥವಾ ಕೆಲವು ರಾಜಕೀಯ ಯಜಮಾನರ ಕೈಯಲ್ಲಿ ಆಟವಾಡುತ್ತಿದೆಯೇ? ಇ.ಡಿ ಊಹೆಯ ಆಧಾರದ ಮೇಲೆ ತನ್ನ ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳುತ್ತದೆ. ಅವರು ಇನ್ನೂ ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ ಅದು ಅಂತ್ಯವಿಲ್ಲದ ತನಿಖೆಯಾಗುತ್ತದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಹೃದಯಾಘಾತದಿಂದ ಸಾವು
ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ಅದಕ್ಕಾಗಿಯೇ ಪಕ್ಷವು ಮಾಡಿದ ಪ್ರತಿಯೊಂದಕ್ಕೂ ಜವಾಬ್ದಾರಾಗುತ್ತಾರೆ ಎಂದು ಅವರು ಹೇಳುತ್ತಾರೆ. ಇದು ಊಹಾಪೋಹಗಳು, ಪೂರ್ವಾಗ್ರಹ. ಸಾಕ್ಷಿ ಇಲ್ಲದೇ 100 ಕೋಟಿ ಲಂಚ ಸ್ವೀಕರಿಸಲಾಗಿದೆ ಎಂದು ಹೇಳಿಕೆ ನೀಡುತ್ತಲೇ ಇದ್ದಾರೆ ಎಂದು ಚೌಧರಿ ವಾದಿಸಿದರು. ಕೇಜ್ರಿವಾಲ್ ಅವರನ್ನು ವಿಶೇಷ ವ್ಯಕ್ತಿ ಎಂದು ಪರಿಗಣಿಸಬೇಡಿ. ಅವರು ವಿಶೇಷ ವ್ಯಕ್ತಿ ಎಂದು ಪರಿಗಣಿಸಲು ಬಯಸುವುದಿಲ್ಲ. ಆದರೆ ದಯವಿಟ್ಟು ಸಾಮಾನ್ಯ ವ್ಯಕ್ತಿಯಂತೆ ಪರಿಗಣಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಪಾರ್ಟ್ಮೆಂಟ್‌ನಿಂದ ಬಿದ್ದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಆತ್ಮಹತ್ಯೆ!
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ (Wrestling Federation Of India) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Delhi’s Rose Avenue court) ಸಮನ್ಸ್ ಜಾರಿ ಮಾಡಿದೆ.
ಸಿಂಗ್ ಮತ್ತು ಡಬ್ಲ್ಯುಎಫ್‍ಐನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ತೋಮರ್ ಅವರನ್ನು ಜುಲೈ 18 ರಂದು ಕೋರ್ಟ್‍ಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ಸಿಂಗ್ ವಿರುದ್ಧ ಮುಂದುವರಿಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರಿದ್ದ ಪೀಠ ಈ ಸಮನ್ಸ್ ಜಾರಿಗೊಳಿಸಿದೆ. ಇದನ್ನೂ ಓದಿ: ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ
ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಜೂನ್ 15 ರಂದು ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಚಾರ್ಜ್‍ಶೀಟ್ ಸಲ್ಲಿಸಿದ್ದರು. ಈ ಬಗ್ಗೆ ಹಲವಾರು ಮಹಿಳಾ ಕುಸ್ತಿಪಟುಗಳಿಂದ (wrestlers) ಕಿರುಕುಳದ ದೂರುಗಳ ಬಂದಿದ್ದವು. ಅಪ್ರಾಪ್ತರ ಮೇಲೂ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದ ಮೇಲೆ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.