Tag: delivery

  • ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮುದಗಲ್ ಬಳಿ ಕೆಕೆಆರ್‌ಟಿಸಿ ಬಸ್‌ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಯಾದಗಿರಿಯ (Yadagiri) ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ. ಇದನ್ನೂ ಓದಿ: ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

    ಕಾರವಾರಕ್ಕೆ ಕೂಲಿ ಕೆಲಸಕ್ಕಾಗಿ ಗುಳೆ ಹೋಗಿದ್ದ ದಂಪತಿ ವಾಪಾಸ್ ಗ್ರಾಮಕ್ಕೆ ಮರಳುತ್ತಿದ್ದಾಗ ಬಸ್‌ನಲ್ಲೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಮೇರಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

    ಹೆರಿಗೆ ಬಳಿಕ ಅಂಬ್ಯುಲೆನ್ಸ್ ಮೂಲಕ ಬಾಣಂತಿಯನ್ನು ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಕೆಕೆಆರ್‌ಟಿಸಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

  • ಹೆರಿಗೆ ವೇಳೆ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಮಗು ಸಾವು

    ಹೆರಿಗೆ ವೇಳೆ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಮಗು ಸಾವು

    ಉಡುಪಿ: ಹೆರಿಗೆ ವೇಳೆ ಮಗು ಮೃತಪಟ್ಟಿದ್ದು, ಉಡುಪಿ (Udupi) ಜಿಲ್ಲೆ ಕುಂದಾಪುರ ಸರ್ಕಾರಿ ಆಸ್ಪತ್ರೆ ಮುಂದೆ ಕುಟುಂಬಸ್ಥರು ಅಹೋ ರಾತ್ರಿ ಪ್ರತಿಭಟನೆ ಮಾಡಿದರು. ಬೈಂದೂರಿನ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಮತ್ತು ಜ್ಯೋತಿ ದಂಪತಿಯ ಮಗು ಹೆರಿಗೆ ಸಂದರ್ಭದಲ್ಲೇ ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ದೂರು ಕೇಳಿಬಂದಿದೆ.

    ನವೆಂಬರ್ 17 ರಂದು ಹೆರಿಗೆ ನೋವಿನ ಹಿನ್ನೆಲೆ ಕುಂದಾಪುರ ತಾಲೂಕು ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಜ್ಯೋತಿಯವರನ್ನು ದಾಖಲು ಮಾಡಲಾಗಿತ್ತು. ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದು, ಕುಟುಂಬ ನೋವಿನಿಂದ ಆಕ್ರೋಶಗೊಂಡಿದೆ. ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಬೇಕು, ಡಿಸಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರಲು ಆಗ್ರಹಿಸಿದೆ.

    ಡಿಸಿ ಸ್ಥಳಕ್ಕಾಗಮಿಸಿ ಕುಟುಂಬದ ಮತ್ತು ವೈದ್ಯರ ಜೊತೆ ಮಾತಕತೆ ಮಾಡಿದ್ದಾರೆ. ಮಗುವಿನ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಹೆರಿಗೆ ಮಾಡಿಸಲಾಗಿದೆ ಎಂದು ಕುಟುಂಬ ಆರೋಪಿಸಿದ್ದು, ಡಿಸಿ ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದ್ದಾರೆ. ತನಿಖಾ ಸಮಿತಿ ರಚನೆ ಮಾಡುವ ತೀರ್ಮಾನಕ್ಕೆ ಬಂದಿದ್ದು, ಕುಟುಂಬಸ್ಥರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಮ್ಯಾಚ್ ವೇಳೆ ಟಿವಿ ಆಫ್ ಮಾಡಿದ್ದಕ್ಕೆ ಮಗನ ಕೊಲೆಗೈದ ತಂದೆ!

  • ಅಂಬುಲೆನ್ಸ್‌ನಲ್ಲಿಯೇ ಡ್ರೈವರ್, ಸಿಬ್ಬಂದಿಯಿಂದ ಮಹಿಳೆಗೆ ಹೆರಿಗೆ

    ಅಂಬುಲೆನ್ಸ್‌ನಲ್ಲಿಯೇ ಡ್ರೈವರ್, ಸಿಬ್ಬಂದಿಯಿಂದ ಮಹಿಳೆಗೆ ಹೆರಿಗೆ

    ಗದಗ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಆಸ್ಪತ್ರೆ ತೆರಳುವ ವೇಳೆ ಮಾರ್ಗಮಧ್ಯೆಯೇ ಅಂಬುಲೆನ್ಸ್‌ನಲ್ಲಿ (Ambulance) ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಬಳಗಾನೂರ ಬಳಿ ನಡೆದಿದೆ.

    ತಾಲೂಕಿನ ಬಳಗಾನೂರು ಗ್ರಾಮದ ಸಲೀಮಾ ಮೆಹಬೂಬಸಾಬ್ ಮುದೆಪ್ಪನವರ್ 108 ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬೆಳಗ್ಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆ ತರುವ ವೇಳೆ ಮಾರ್ಗಮಧ್ಯದಲ್ಲಿ ಹೆರಿಗೆಯಾಗಿದೆ.

    ರಕ್ಷಾಬಂಧನ ದಿನದಂದು ಈ ಹಣ್ಣು ಮಗುವಿಗೆ 108 ಸಿಬ್ಬಂದಿ ರವಿ ಬಡಿಗೇರ್ ಹಾಗೂ ಚಾಲಕ ದಸ್ತಗೀರ್ ಸಾಬ್ ಸುಲಭ ಹೆರಿಗೆ (Delivery) ಮಾಡಿಸಿದ್ದಾರೆ. ಈ ಮೂಲಕ ರಕ್ಷಾ ಬಂಧನದ ದಿನ ಮಹಿಳೆಗೆ ಅಣ್ಣಂದಿರಾಗಿ ರಕ್ಷಣೆಯಾಗಿದ್ದಾರೆ. ತಂಗಿಯಂಥಾ ಸಲೀಮಾಗೆ ನೋವಿನಿಂದ ಮುಕ್ತಿ ನೀಡಿದ್ದಾರೆ. ಇದನ್ನೂ ಓದಿ: ಹೆಚ್‌ಡಿ ಕುಮಾರಸ್ವಾಮಿ ತಡರಾತ್ರಿ ಆಸ್ಪತ್ರೆಗೆ ದಾಖಲು

    ಇದೀಗ ಸಲೀಮಾ ಹಾಗೂ ಮಗುವನ್ನು ನಗರದ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಸ್ತೆಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಡೆಲಿವರಿ ಮಾಡಿಸಿದ ಸರ್ಕಾರಿ ವೈದ್ಯ

    ರಸ್ತೆಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಡೆಲಿವರಿ ಮಾಡಿಸಿದ ಸರ್ಕಾರಿ ವೈದ್ಯ

    ಚಿಕ್ಕಮಗಳೂರು: ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

    ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋದಾಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರುವ ಯಶೋದಾ ಚಿಕಿತ್ಸೆಗೆಂದು ಶಿವಮೊಗ್ಗ (Shivamogga) ದ ಮೆಗ್ಗಾನ್ ಆಸ್ಪತ್ರೆಗೆ ಹೊರಟಿದ್ದರು. ಆಕೆ ಜೊತೆ ಬೇರೊಬ್ಬ ಮಹಿಳೆ ಕೂಡ ಇದ್ದರು. ಅಜ್ಜಂಪುರದಿಂದ ತರೀಕೆರೆಗೆ ಬಂದು ಶಿವಮೊಗ್ಗ ತೆರಳಲು ಬಸ್ ಕಾಯುವಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಸ್ಥಳದಲ್ಲಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ.

    ಮಹಿಳೆ ಆಸ್ಪತ್ರೆ ಮುಟ್ಟುವ ಮುನ್ನವೇ ಆಸ್ಪತ್ರೆಯ ತುಸು ದೂರದಲ್ಲಿ ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಹಾಗೂ ಮೂಳೆ ತಜ್ಞ ಆರ್. ದೇವರಾಜ್ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯ ನಟರಾಜ್ (Doctor Nataraj) ಅವರನ್ನ ಕರೆಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಹಾಗೂ ಹೆಣ್ಣು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.  ಇದನ್ನೂ ಓದಿ: ನನ್ನನ್ನು ಎದುರು ಹಾಕೊಂಡು ಯಾರೂ ಗೆಲ್ಲೋಕ್ಕಾಗಲ್ಲ- ಕೆ.ಎನ್.ರಾಜಣ್ಣ ದರ್ಪದ ಮಾತು ವೈರಲ್

    ಯಶೋದಾ ಬಿ ನೆಗೆಟಿವ್ ಸಿಗುವುದು ತುಂಬಾ ಕಡಿಮೆ ಎಂದು ರಕ್ತಕ್ಕಾಗಿಯೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ವೈದ್ಯರು ನಿನಗೆ ಯಾವುದೇ ಸಮಸ್ಯೆ ಆಗುವುದಿಲ್ಲ, ನಾವಿದ್ದೇವೆ ಎಂದು ಧೈರ್ಯ ತುಂಬಿ ಹೆರಿಗೆ ಮಾಡಿಸಿದ್ದಾರೆ. ಆರಂಭದ ಮೂರು ತಿಂಗಳು ಖಾಸಗಿ ಆಸ್ಪತ್ರೆಗೆ ತೋರಿಸಿದ್ದ ಯಶೋದಾ ಅಲ್ಲಿ ಹೆರಿಗೆಗೆ 30,000 ಹಣ ಕೇಳಿದರು ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯರ ಕೆಲಸಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಶೋದಾ ಕೂಡ ತರೀಕೆರೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಮಾರ್ಗ ಮಧ್ಯೆಯೇ ಅಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಿಳೆ

    ಮಾರ್ಗ ಮಧ್ಯೆಯೇ ಅಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಿಳೆ

    ರಾಯಚೂರು: ಅಂಬುಲೆನ್ಸ್‌ನಲ್ಲಿ (Ambulence) ಮಧ್ಯರಾತ್ರಿ ಮಾರ್ಗ ಮಧ್ಯೆಯೇ ಮಹಿಳೆಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ರಾಯಚೂರಿನ (Raichur) ಸಿರವಾರ (Siravara) ತಾಲೂಕಿನ ಕುರಕುಂದ ಗ್ರಾಮದಲ್ಲಿ ನಡೆದಿದೆ.

    ಕುರಕುಂದ ಗ್ರಾಮದ ರೇಣುಕಾ ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮವಿತ್ತ ಮಹಿಳೆ. ಈಕೆ ಮಧ್ಯರಾತ್ರಿ ಹೆರಿಗೆ (Delivery) ನೋವಿನಿಂದ ಬಳಲುತ್ತಿದ್ದರು. ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಸಲುವಾಗಿ ಆರೋಗ್ಯ ಕವಚ 108 ಅಂಬುಲೆನ್ಸ್ ಬಂದಿತ್ತು. ಈಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆಯೇ ಹೆರಿಗೆಯಾಗಿದೆ. ಇದನ್ನೂ ಓದಿ: ಕರ್ತವ್ಯ ಸಮಯದಲ್ಲಿ ಲಂಚ ಪಡೆದ ಮಹಿಳಾಧಿಕಾರಿ – ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

    ಹೆರಿಗೆ ನೋವು ಹೆಚ್ಚಾದ ಹಿನ್ನೆಲೆ ಶುಶ್ರೂಷಕಿ ಲಕ್ಷ್ಮೀ ಅಂಬುಲೆನ್ಸ್‌ನಲ್ಲಿಯೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ ಮಗುವನ್ನು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. 108 ಅಂಬುಲೆನ್ಸ್ ಸಿಬ್ಬಂದಿಯಾದ ಚಾಲಕ ಯಾಸಿನ್ ಬಿ. ಗಣೇಕಲ್ ಮತ್ತು ಶುಶ್ರೂಷಕಿ ಲಕ್ಷ್ಮೀ ಅವರಿಗೆ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಒಂದು ಸಣ್ಣ ಆ್ಯಕ್ಸಿಡೆಂಟ್‌.. ರಕ್ತನೂ ಬರಲಿಲ್ಲ, ಆದ್ರೆ ಬ್ರೈನ್ ಡೆಡ್!

  • ಅಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಅಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಧಾರವಾಡ: ಹೆರಿಗೆಗೆಂದು (Delivery) ಗರ್ಭಿಣಿಯನ್ನು (Pregnant) ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಂಬುಲೆನ್ಸ್‌ನಲ್ಲೇ (Ambulance) ಮಗುವಿಗೆ ಜನ್ಮ ನೀಡಿದ ಪ್ರಸಂಗ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.

    ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೆನಕುಂಠಿ ಗ್ರಾಮದ ಆಫ್ರೀನ್ ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮವಿತ್ತ ತಾಯಿ. ಗುರುವಾರ ಆಫ್ರೀನ್‌ಗೆ ಹೆರಿಗೆ ನೋವು ಆರಂಭವಾಗಿತ್ತು. ತಕ್ಷಣವೇ ಕುಟುಂಬದವರು 108 ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಅಂಬುಲೆನ್ಸ್ ಸಿಬ್ಬಂದಿ ಕುಂದಗೋಳ ತಾಲೂಕು ಆಸ್ಪತ್ರೆಗೆ ಆಕೆಯನ್ನು ಸಾಗಿಸುತ್ತಿದ್ದ ಸಂದರ್ಭ ಹೆರಿಗೆ ನೋವು ಜೋರಾಗಿದೆ. ಇದನ್ನೂ ಓದಿ: ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ತಕ್ಷಣವೇ ಎಚ್ಚೆತ್ತುಕೊಂಡ ಅಶೋಕ್ ಪೂಜಾರ, ಬಸವರಾಜ ರಾಠೋಡ್ ಎಂಬ ಸಿಬ್ಬಂದಿ ಅಂಬುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕರ್ತವ್ಯ ಲೋಪ ಎಸಗಿದ್ರೆ ವರ್ಗಾವಣೆ ಇಲ್ಲ ನೇರವಾಗಿ ಸಸ್ಪೆಂಡ್- ಅಧಿಕಾರಿಗಳಿಗೆ ವಾರ್ನಿಂಗ್

  • ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

    ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

    ಹಾಸನ: ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ (Bus) ಮಹಿಳೆಯೊಬ್ಬರು ಹೆಣ್ಣು ಮಗುವಿಗೆ (Baby) ಜನ್ಮ ನೀಡಿರುವ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ನಡೆದಿದೆ.

    ಕೂಲಿ ಕೆಲಸಕ್ಕೆ ಮೂಡುಗೆರೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್ ಅನ್ನು ನಿಲ್ಲಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ಗರ್ಭಿಣಿಗೆ ಹೆರಿಗೆ (Delivery) ಮಾಡಿಸಲು ಸಹಾಯ ಮಾಡಿದ್ದಾರೆ.

    ಮಹಿಳೆ ಬಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಬಳಿಕ ಅಂಬುಲೆನ್ಸ್‌ಗೆ ಕರೆ ಮಾಡಿ ತಾಯಿ ಹಾಗೂ ಮಗುವನ್ನು ಶಾಂತಿಗ್ರಾಮದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ತೆರಳಿ ಮಹಿಳೆಗೆ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಡ್ರ್ಯಾಗರ್ ಹಿಡಿದು ಯುವತಿಗೆ ಕಿರುಕುಳ ನೀಡಿದ ದುಷ್ಕರ್ಮಿ – ಮತ್ತೊಬ್ಬ ಮಹಿಳೆಯಿಂದ ರಕ್ಷಣೆ

    ಸರಿಯಾದ ಸಮಯದಲ್ಲಿ ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ಮಾಡಿಸಿ, ಆಸ್ಪತ್ರೆಗೆ ದಾಖಲಿಸಿ, ಆಕೆಗೆ ಹಣದ ಸಹಾಯ ಮಾಡಿರುವ ಬಸ್ ಚಾಲಕ, ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

  • ಮತದಾನ ಕೇಂದ್ರದ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಮತದಾನ ಕೇಂದ್ರದ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಬಳ್ಳಾರಿ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ರಾಜ್ಯಾದ್ಯಂತ ಮತದಾನಕ್ಕೆ (Voting) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯುವ ಮತದಾರರು, ಶತಾಯುಷಿಗಳು, ನವ ವಧು-ವರರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇದೇ ರೀತಿ ಮತದಾನಕ್ಕೆಂದು ಬಂದಿದ್ದ ಮಹಿಳೆಗೆ ಮತದಾನ ಕೇಂದ್ರದಲ್ಲೇ ಹೆರಿಗೆ ಮಾಡಿಸಿರುವ ಘಟನೆ ಬಳ್ಳಾರಿಯಲ್ಲಿ (Ballary) ನಡೆದಿದೆ.

    ಜಿಲ್ಲೆಯ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಂಬು ಗರ್ಭಿಣಿಯಾಗಿದ್ದ ಮಣಿಲಾಗೆ ಮತದಾನ ಕೇಂದ್ರದಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ವಿಶೇಷ ಚೇತನನಿಂದ ಮತದಾನ – ಕಾಲು ಬೆರಳಿಗೆ ಶಾಯಿ ಹಾಕಿದ ಅಧಿಕಾರಿಗಳು

    ತಕ್ಷಣ ಆಕೆಯನ್ನು ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದೆ. ಅಷ್ಟರಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ

    ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ

    ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಪತ್ನಿ ಉಪಾಸನಾ (Upasana) ಹೆರಿಗೆ ವಿಚಾರ ಹಲವು ದಿನಗಳಿಂದ ಚರ್ಚೆ ಆಗುತ್ತಲೇ ಇದೆ. ರಾಮ್ ಚರಣ್ ಕುಟುಂಬಕ್ಕೆ ಯಾವ ಮಗು ಬರಲಿದೆ ಎನ್ನುವ ಪ್ರಶ್ನೆಯನ್ನು ಕೂಡ ಅಭಿಮಾನಿಗಳು ಕೇಳಿದ್ದರು. ಇದೀಗ ಆ ಕುರಿತು ಸ್ವತಃ ಉಪಾಸನಾ ಅವರೇ ಉತ್ತರಿಸಿದ್ದಾರೆ. ಜುಲೈನಲ್ಲಿ (July) ಹೆರಿಗೆ (Delivery) ಆಗಲಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

    ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದಾರೆ.

    ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ಹಾಲಿವುಡ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ರಾಮ್ ಚರಣ್ ಅಮೆರಿಕಾಗೆ ಹೋಗಿದ್ದರು. ಅಲ್ಲಿ ವಾಹಿನಿಯೊಂದರ ಸಂದರ್ಶನದಲ್ಲಿ ಮೊದಲ ಮಗುವಿನ ಜನನದ ಕುರಿತು ಮಾತನಾಡಿದ್ದಾರೆ. ಪತ್ನಿಯ ಹೆರಿಗೆಗಾಗಿ ಸಿದ್ಧರಾಗಿ ಎಂದು ವೈದ್ಯರೊಬ್ಬರಿಗೆ ಹೇಳಿದ್ದರು. ಈ ಕಾರಣದಿಂದಾಗಿಯೇ ಗೊಂದಲ ಮೂಡಿತ್ತು. ಅಮೆರಿಕಾದಲ್ಲೇ ಉಪಾಸನ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು.

    ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ.

  • ಭೂಕಂಪನದ ಮಧ್ಯೆಯೇ ವೈದ್ಯರು ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ್ರು!

    ಭೂಕಂಪನದ ಮಧ್ಯೆಯೇ ವೈದ್ಯರು ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ್ರು!

    ಶ್ರೀನಗರ: ಭೂಕಂಪನ (Erathquake) ನಡೆಯುತ್ತಿದ್ದಂತೆ ಹೆರಿಗೆ ಮಾಡಿಸಿ ವೈದ್ಯರು ತಾಯಿ-ಮಗುವಿನ ಜೀವವನ್ನು ಉಳಿಸಿದ ಘಟನೆ ಅನಂತ್‍ನಾಗ್ ಆಸ್ಪತ್ರೆಯಲ್ಲಿ ನಡೆದಿದೆ.

    ಮಂಗಳವಾರ ಮಹಿಳೆ ಹೆರಿಗೆಗೆಂದು (Delivery) ಬಿಜ್‍ಬೆಹರಾದ ಎಸ್‍ಡಿಹೆಚ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅದರಂತೆ ವೈದ್ಯರು ಹೆರಿಗೆ ಕಾರ್ಯಕ್ಕೆ ಮುಂದಾದ ಸಮಯದಲ್ಲಿ ಭೂಮಿ ಕಂಪಿಸಿದೆ. ಈ ವೇಳೆ ಧೃತಿಗೆಡದ ವೈದ್ಯರು ಲೋವರ್ ಸೆಗ್ಮೆಂಟ್ ಸಿಸೇರಿಯನ್ (Lower Segment Caesarean) ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿ ತಾಯಿ ಹಾಗೂ ಮಗುವಿನ ಜೀವ ಉಳಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ, ಲೋವರ್ ಸೆಗ್ಮೆಂಟ್ ಸಿಸೇಯರಿನ್ ಮಾಡಿದ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಸಿಬ್ಬಂದಿ ಶಸ್ತ್ರಚಿಕಿತ್ಸೆಯ ದೃಶ್ಯವನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದರು.

    ವೀಡಿಯೋದಲ್ಲಿ ವೈದ್ಯರು ಹೆರಿಗೆ ಮಾಡಿಸುತ್ತಿದ್ದ ಸಂದರ್ಭದಲ್ಲಿ ಭೂಮಿ ಕಂಪಿಸುವುದನ್ನು ನೋಡಬಹುದು. ಅಫ್ಘಾನಿಸ್ತಾನದ ಹಿಂಡು ಕುಶ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಪರಿಣಾಮ ಅನಂತ್‍ನಾಗ್ ಕಣಿವೆಯಲ್ಲಿಯೂ ಭೂಮಿ ಕಂಪಿಸಿದೆ. ಭೂಕಂಪನದಿಂದ ಬೆಚ್ಚಿಬಿದ್ದ ಜನ ಮನೆಯಿಂದಾಚೆ ಓಡಿ ಬಂದಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.